ಕುಂದಾಪ್ರ ಡಾಟ್ ಕಾಂ ವರದಿ. ಕುಂದಾಪುರ: ಮಳೆಗಾಲದಲ್ಲಿ ಪ್ರತಿಯೊಂದಕ್ಕೂ ಆ ತೊರೆಯನ್ನು ದಾಟಿಯೇ ನಡೆಯಬೇಕು. ಶಾಲೆಗೆ ಹೋಗುವ ಪುಟಾಣಿಗಳು ಹೊಂಡಾಗುಂಡಿ ದಾರಿ ಸವೇಸಿ ಹಳ್ಳ ದಾಟುವುದು ಅನಿವಾರ್ಯ. ಇತಿಹಾಸ ಪ್ರಸಿದ್ಧ ದೇವಾಲಯವೊಂದಕ್ಕೆ ತೆರಳಲೂ ಭಕ್ತರು ಇದೇ ಮಾರ್ಗವನ್ನು ಹಾದುಹೋಗಬೇಕು. ಇದು ವಂಡ್ಸೆ ಗ್ರಾಮದ ಅತ್ರಾಡಿ ಬಳಿಯ ತೊರೆಯಿಂದಾದ ದುಸ್ಥಿತಿ. ಬೈಂದೂರು ವಿಧಾನ ಸಭಾ ಕ್ಷೇತ್ರ ವಂಡ್ಸೆ ಗ್ರಾಮ ಅಡಿಕೆಕೊಡ್ಲುವಿಗೆ ತೆರಳುವಲ್ಲಿ ಇರುವ ತೊರೆ ಮಳೆಗಾದಲ್ಲಿ ಅಗ್ನಿ ಪರೀಕ್ಷೆ ನಡೆಸುತ್ತಿದ್ದರೆ, ಬೇಸಿಗೆಯಲ್ಲಿ ಸತ್ತು ಮಲಗುತ್ತದೆ. ವಂಡ್ಸೆ ಮೂಲಕ ಆತ್ರಾಡಿ ಹೋಗುವ ದಾರಿಗೆ ಅಡ್ಡವಾಗಿ ತೊರೆಯ ಹೋರಿದೆ. ದಿನ ನಿತ್ಯ ಸಾರ್ವಜನಿಕರು, ಶಾಲಾ ಮಕ್ಕಳು ತೊರೆಯಲ್ಲಿ ಸರ್ಕಸ್ ಮಾಡಿ ದಾಟಿಬೇಕು. ಬೇಸಿಗೆಯಲ್ಲಿ ಅಡ್ಡಿಯಿಲ್ಲ. ಮಳೆಗಾದಲ್ಲಿ ಎಚ್ಚರ ತಪ್ಪಿದರೆ ದೇವರೇ ಕಾಪಾಡಬೇಕು. ಈ ದಾರಿ ಇತಿಹಾಸ ಪ್ರಸಿದ್ಧ ಶ್ರೀ ವನದುರ್ಗಾ ಪರಮೇಶ್ವರಿ ಕಾನಮ್ಮ ದೇವಸ್ಥಾನಕ್ಕೂ ಸಂಪರ್ಕ ಕಲ್ಪಸುತ್ತದೆ. ನಿತ್ಯ ಶಾಲಾ ಮಕ್ಕಳು ಇದೇ ಮಾರ್ಗದಲ್ಲಿ ಸಂಚರಿಸುತ್ತಿದ್ದಾರೆ. ವಂಡ್ಸೆ, ಅಡಿಕೆಕೊಡ್ಲು ಆತ್ರಾಡಿ ಸಮೀಪ ಬೆಸೆಯುವ ದಾರಿಯೂ ಹೌದು.…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಅನ್ನದಾತ ರೈತ ತಾಯಿಯ ಸಮಾನವಾಗಿದ್ದು, ರೈತರನ್ನು ಗೌರವಿಸಿ, ಬೆಂಬಲಿಸಿ ಸಹಾಯ ಮಾಡುವುದರ ಮೂಲಕ ರೋಟರಿ ಜಿಲ್ಲಾ ರೈತಮಿತ್ರ ಯೋಜನೆ ಯಶಸ್ವಿಯೊಳಿಸೋಣ ಎಂದು ರೋಟರಿ ಸನ್‌ರೈಸ್ ಸ್ಥಾಪಕಾಧ್ಯಕ್ಷ ದಿನಕರ ಆರ್. ಶೆಟ್ಟಿ ಹೇಳಿದರು. ರೋಟರಿ ಕ್ಲಬ್ ಕುಂದಾಪುರ ಸನ್‌ರೈಸ್ ಆಶ್ರಯದಲ್ಲಿ ರೈತಮಿತ್ರ ಕಾರ್ಯಕ್ರಮದ ಅಂಗವಾಗಿ ರೈತರಾದ ಕೋಟಿ ಪೂಜಾರಿ ಮತ್ತು ನಾರಾಯಣ ಆಚಾರ್ ಅವರನ್ನು ಸನ್ಮಾನಿಸಿ ಮಾತನಾಡಿದರು. ರೋಟರಿ ಸನ್‌ರೈಸ್ ಅಧ್ಯಕ್ಷ ಕೆ. ನರಸಿಂಹ ಹೊಳ್ಳ ಕ್ಲಬ್ ಪರವಾಗಿ ಉಚಿತ ಗೊಬ್ಬರ ರೈತರಿಗೆ ಹಂಚಿದರು. ರೈತರೊಂದಿಗೆ ಸಂವಾದದಲ್ಲಿ ಮತ್ತು ಕೃಷಿ ಕಾರ್ಯದಲ್ಲಿ ರೋಟರಿ ಸದಸ್ಯರು ಪಾಲ್ಗೊಂಡರು. ರೋಟರಿ ಸನ್‌ರೈಸ್ ನಿಕಟ ಪೂರ್ವಾಧ್ಯಕ್ಷ ದಿನಕರ ಪಟೇಲ್, ಸದಸ್ಯರಾದ ಕೆ.ಹೆಚ್. ಚಂದ್ರಶೇಖರ್, ರಾಜಶೇಖರ್ ಹೆಗ್ಡೆ, ಬಿ.ಎಂ. ಚಂದ್ರಶೇಖರ್, ಗಜಾನನ ಭಟ್, ರಾಮಕೃಷ್ಣ ಐತಾಳ್, ಉಲ್ಲಾಸ್, ಸುಬ್ಬರಾವ್, ಶಿವಾನಂದ, ದಿನೇಶ್ ಗೋಡೆ, ಸದಾನಂದ ಉಡುಪ, ರಾಜು ಪೂಜಾರಿ, ಮಂಜುನಾಥ ಕೆ.ಎಸ್., ಡುಂಡಿರಾಜ್, ಕಾರ್ಯದರ್ಶಿ ನಾಗೇಶ್ ನಾವಡ ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಕೆರಿಯರ್ಸ್ ಕೋಚಿಂಗ್ ಸಂಸ್ಥೆಯಲ್ಲಿ ತರಬೇತಿ ಪಡೆದ ಮೂವರು ವಿದ್ಯಾರ್ಥಿಗಳು ಚಾರ್ಟಡ್ ಅಕೌಂಟೆಂಟ್ ಅರ್ಹತಾ ಪರೀಕ್ಷೆಯಲ್ಲಿ ಉತ್ತಮ ಅಂಕಗಳೊಂದಿಗೆ ಉತ್ತೀಣರಾಗಿ ವಿಶಿಷ್ಟ ಸಾಧನೆ ಮಾಡಿದ್ದಾರೆ. ವಿದ್ಯಾರ್ಥಿಗಳಾದ ಎಂ. ನಂದೀಶ್ ರಾಮ ಶೆಟ್ಟಿ 123, ಕಾರ್ತಿಕ್ 116, ವಿಶ್ವನ್ 111 ಅಂಕಗಳನ್ನು ಪಡೆದು ಮುಂದಿನ ಹಂತಕ್ಕೆ ಆಯ್ಕೆಯಾಗಿದ್ದಾರೆ. ಉತ್ತಿರ್ಣ ವಿದ್ಯಾರ್ಥಿಗಳಿಗೆ ಕೆರಿಯರ್ಸ್ ಕೋಚಿಂಗ್ ಸಂಸ್ಥಾಪಕರಾದ ಸಿ.ಎ ರಾಜೇಶ್ ಶೆಟ್ಟಿ ಹಾಗೂ ಸಹ ಸಂಸ್ಥಾಪಕರಾದ ಪ್ರತಾಪಚಂದ್ರ ಶೆಟ್ಟಿ ಅಭಿನಂದಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇರುವ ಶಿಕ್ಷಕರನ್ನು ಹೆಚ್ಚುವರಿ ಶಿಕ್ಷಕರ ವರ್ಗಾವಣೆ ನೆವದಲ್ಲಿ ವರ್ಗಾವಣೆ ಮಾಡಿದ್ದನ್ನು ಖಂಡಿಸಿ ಹೊಸಮಠ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳು ಪೋಷಕರು ಶಾಲೆಗೆ ಬೀಗ ಜಡಿದು ಸರ್ಕಾರದ ವಿರುದ್ದ ಪ್ರತಿಭಟನೆ ನಡೆಸಿದರು. ಶಾಲಾ ಮಕ್ಕಳು ತರಗತಿ ಬಹಿಷ್ಕರಿಸಿ ರಾಜ್ಯ ಸರ್ಕಾರದ ವಿದ್ಯಾರ್ಥಿ ವಿರೋಧಿ ನೀತಿ ಖಂಡಿಸಿ ತಮ್ಮ ಪೋಷಕರೊಂದಿಗೆ ಪ್ರತಿಭಟನೆ ನಡೆಸಿದರು. ಶಿಕ್ಷಕಿರನ್ನು ಹೆಚ್ಚುವರಿ ಶಿಕ್ಷಕರ ನೆವದಲ್ಲಿ ವರ್ಗಾವಣೆ ಮಾಡಿ, ಮಕ್ಕಳ ವಿದ್ಯಭ್ಯಾಸಕ್ಕೆ ತೊಂದರೆಯಾಗುತ್ತಿದ್ದು, ಇಲ್ಲಿರುವ ಶಿಕ್ಷಕರನ್ನು ಇಲ್ಲಿಯೇ ಉಳಿಸಿ ಮಕ್ಕಳ ವಿದ್ಯಭ್ಯಾಸಕ್ಕೆ ಅನುವು ಮಾಡಿಕೊಡಬೇಕೆಂದು ಪೋಷಕರು ಆಗ್ರಹಿಸಿದರು. ಸರಕಾರಿ ಶಾಲೆ ಉಳಿಸಿಕೊಳ್ಳಬೇಕು ಎಂದು ಸರ್ಕಾರ ಹಲವಾರು ಯೋಜನೆ ರೂಪಿಸುತ್ತಿದೆ. ಆದರೆ ಹೆಚ್ಚುವರಿ ಶಿಕ್ಷಕರ ನೆವದಲ್ಲಿ ಶಿಕ್ಷಕರನ್ನು ವರ್ಗಾವಣೆ ಮಾಡಿ ಮಕ್ಕಳ ವಿದ್ಯಭ್ಯಾಸದ ಮೇಲೆ ಶಿಕ್ಷಣ ಇಲಾಖೆ ಚೆಲ್ಲಾಟವಾಡುತ್ತಿದೆ ಎಂದು ಪೋಷಕರು ಆರೋಪಿಸಿದ್ದಾರೆ. ವರ್ಗಾವಣೆ ಆದೇಶ ಹಿಂಪಡೆಯಬೇಕು ಇಲ್ಲವಾದಲ್ಲಿ ತಮ್ಮ ಮಕ್ಕಳನ್ನು ಶಾಲೆಗಳಿಗೆ ಕಳುಹಿಸುವುದಿಲ್ಲವೆಂದು ಪ್ರತಿಭಟನಾಕಾರರು ಎಚ್ಚರಿಸಿದರು. ಮಧ್ಯಾಹ್ನದವರೆಗೂ ಶಿಕ್ಷಣಾಧಿಕಾರಿ ಸ್ಥಳಕ್ಕೆ ಬಾರದ ಹಿನ್ನೆಲೆಯಲ್ಲಿ ಮಕ್ಕಳ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕ್ಷೇತ್ರದ ಪ್ರತಿಯೊಂದು ಗ್ರಾಮ ಪಂಚಾಯತ್‌ನಲ್ಲಿ ಆ ಭಾಗದ ಗ್ರಾಮಸ್ಥರ ಅನುಕೂಲಕ್ಕಾಗಿ ಸರಕಾರ ಬಾಪೂಜಿ ಸೇವಾ ಕೇಂದ್ರ ಆರಂಭಿಸಿದೆ. ನಾಡ ಗ್ರಾಮದಲ್ಲಿ ಶುಕ್ರವಾರ ಚಾಲನೆ ನೀಡಿದ್ದು, ಈ ಬಗ್ಗೆ ಇನ್ನು ಮುಂದೆ ಪ್ರತೀ ಶುಕ್ರವಾರ ಜನಸಾಮಾನ್ಯರ ಸಮಸ್ಯೆಗಳನ್ನು ಪರಿಹರಿಸಲು ಆಂದೋಲನದ ರೀತಿಯಲ್ಲಿ ೨೬ ಪಂಚಾಯತ್ ವ್ಯಾಪ್ತಿಯಲ್ಲಿ ಕೆಲಸ ಮಾಡಲಾಗುವುದು ಎಂದು ಶಾಸಕ ಕೆ. ಗೋಪಾಲ ಪೂಜಾರಿ ಹೇಳಿದರು. ಬೈಂದೂರು ಶಾಸಕರ ಕಚೇರಿಯಲ್ಲಿ ರಾಷ್ಟ್ರೀಯ ಕುಟುಂಬ ನೆರವು ಯೋಜನೆಯಡಿಯಲ್ಲಿ 21 ಫಲಾನುಭವಿಗಳಿಗೆ ತಲಾ 20 ಸಾವಿರ ಚೆಕ್ ವಿತರಿಸಿ ಮಾತನಾಡಿದರು. ಸರಕಾರದ ಯೋಜನೆಗಳನ್ನು ಜನರಿಗೆ ಮುಟ್ಟಿಸುವ ನಿಟ್ಟಿನಲ್ಲಿ ಒಂದೇ ಸೂರಿನಡಿ ೧೦೦ ಸೌಲಭ್ಯ ಒದಗಿಸುವ ವ್ಯವಸ್ಥೆ ಈ ಯೋಜನೆಯಲ್ಲಿದೆ. ಕ್ಷೇತ್ರವನ್ನು ಪೋಡಿಮುಕ್ತ ಮಾಡುವುದೇ ಮುಂದಿನ ಗುರಿಯಾಗಿದೆ ಎಂದರು. ಫಲಾನುಭವಿಗಳಿಗೆ ಪಹಣಿ ಪತ್ರ, ಸ್ಥಳನಕ್ಷೆ ಪಂಚಾಯತ್‌ನಲ್ಲಿಯೇ ನೀಡಲಾಗುತ್ತದೆ. ಇದರಿಂದ ದೂರದವರಿಗೆ ತಾಲೂಕು ಕೇಂದ್ರದಲ್ಲಿರುವ ತಹಶೀಲ್ದಾರರ ಕಚೇರಿ ಅಲೆದಾಟ ತಪ್ಪಿದಂತಾಗುತ್ತದೆ. ಇದರಿಂದ ಸಮಯದ ಜತೆಗೆ ಹಣವೂ ಉಳಿತಾಯವಾಗುತ್ತದೆ. ಗ್ರಾಪಂ ಆಸ್ಥಿಗಳ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇರುವ ಶಿಕ್ಷಕರನ್ನು ಹೆಚ್ಚುವರಿ ಶಿಕ್ಷಕರ ವರ್ಗಾವಣೆ ನೆವದಲ್ಲಿ ವರ್ಗಾವಣೆ ಮಾಡಿದ್ದನ್ನು ಖಂಡಿಸಿ ಆನಗಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳು ಪೋಷಕರು ಶಾಲೆಗೆ ಬೀಗ ಹಾಕಿ ಸರ್ಕಾರದ ವಿರುದ್ದ ಪ್ರತಿಭಟನೆ ನಡೆಸಿದರು. ಶಾಲಾ ಮಕ್ಕಳು ತರಗತಿ ಬಹಿಷ್ಕರಿಸಿ ರಾಜ್ಯ ಸರ್ಕಾರದ ವಿದ್ಯಾರ್ಥಿ ವಿರೋಧಿ ನೀತಿ ಖಂಡಿಸಿ ತಮ್ಮ ಪೋಷಕರೊಂದಿಗೆ ಪ್ರತಿಭಟನೆ ನಡೆಸಿದರು. ಶಿಕ್ಷಕಿರನ್ನು ಹೆಚ್ಚುವರಿ ಶಿಕ್ಷಕರ ನೆವದಲ್ಲಿ ವರ್ಗಾವಣೆ ಮಾಡಿ, ಮಕ್ಕಳ ವಿದ್ಯಭ್ಯಾಸಕ್ಕೆ ತೊಂದರೆಯಾಗುತ್ತಿದ್ದು, ಇಲ್ಲಿರುವ ಶಿಕ್ಷಕರನ್ನು ಇಲ್ಲಿಯೇ ಉಳಿಸಿ ಮಕ್ಕಳ ವಿದ್ಯಭ್ಯಾಸಕ್ಕೆ ಅನುವು ಮಾಡಿಕೊಡಬೇಕೆಂದು ಪೋಷಕರು ಆಗ್ರಹಿಸಿದರು. ಸರಕಾರಿ ಶಾಲೆ ಉಳಿಸಿಕೊಳ್ಳಬೇಕು ಎಂದು ಸರ್ಕಾರ ಹಲವಾರು ಯೋಜನೆ ರೂಪಿಸುತ್ತಿದೆ. ಆದರೆ ಹೆಚ್ಚುವರಿ ಶಿಕ್ಷಕರ ನೆವದಲ್ಲಿ ಶಿಕ್ಷಕರನ್ನು ವರ್ಗಾವಣೆ ಮಾಡಿ ಮಕ್ಕಳ ವಿದ್ಯಭ್ಯಾಸದ ಮೇಲೆ ಶಿಕ್ಷಣ ಇಲಾಖೆ ಚೆಲ್ಲಾಟವಾಡುತ್ತಿದೆ ಎಂದು ಪೋಷಕರು ಆರೋಪಿಸಿದ್ದಾರೆ. ವರ್ಗಾವಣೆ ಆದೇಶ ಹಿಂಪಡೆಯಬೇಕು ಇಲ್ಲವಾದಲ್ಲಿ ತಮ್ಮ ಮಕ್ಕಳನ್ನು ಶಾಲೆಗಳಿಗೆ ಕಳುಹಿಸುವುದಿಲ್ಲವೆಂದು ಪ್ರತಿಭಟನಾಕಾರರು ಎಚ್ಚರಿಸಿದರು. ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳು, ಪೋಷಕರು, ಸಾರ್ವಜನಿಕರು ಪಾಲ್ಗೊಂಡಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ರೋಟರ‍್ಯಾಕ್ಟ್ ಕ್ಲಬ್ ಕುಂದಾಪುರದ ಮಾಜಿ ಅಧ್ಯಕ್ಷ ರಾಘವೇಂದ್ರ ಕೆ.ಸಿ. ಅವರು ನೂತನ ರೋಟರಿ ಜಿಲ್ಲೆ ೩೧೮೨ ಇದರ ವಲಯ ರೋಟರ‍್ಯಾಕ್ಟ್ ಪ್ರತಿನಿಧಿಯಾಗಿ ಆಯ್ಕೆಗೊಂಡಿದ್ದಾರೆ. ಇತ್ತಿಚಿಗೆ ಕಾರ್ಕಳದಲ್ಲಿ ನಡೆದ ರೋಟರ‍್ಯಾಕ್ಟ್ ಜಿಲ್ಲಾ ಅಧಿವೇಶನದಲ್ಲಿ ಅವರು ಅಧಿಕಾರ ಸ್ವೀಕರಿಸಿದರು. ನೂತನ ರೋಟರ‍್ಯಾಕ್ಟ್ ಪ್ರತಿನಿಧಿಯಾಗಿ ಆಯ್ಕೆಗೊಂಡ ರಾಘವೇಂದ್ರ ಕೆ.ಸಿ ಅವರನ್ನು ಕುಂದಾಪುರ ರೋಟರ‍್ಯಾಕ್ಟ್ ಕ್ಲಬ್‌ನ ಸದಸ್ಯರು ಅಭಿನಂದಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಬರೆಯುವ ಪ್ರತಿಭೆ ಎಲ್ಲರಲ್ಲೂ ಇರುವುದಿಲ್ಲ. ಅದರಲ್ಲೂ ಸರಾಗವಾಗಿ ಓದಿಸಿಕೊಂಡು ಹೋಗುವ ಬರವಣಿಗೆ ಕೆಲವರಿಗೆ ಮಾತ್ರ ಸಿದ್ಧಿಸಿರುತ್ತದೆ. ಆದರೆ ಒಳ್ಳೆಯ ಪುಸ್ತಕ ಓದುವ ಹವ್ಯಾಸ ಯಾರು ಬೇಕಾದರೂ ರೂಢಿಸಿಕೊಳ್ಳಬಹುದು ಎಂದು ಭಂಡಾರ್‌ಕಾರ‍್ಸ್ ಕಾಲೇಜಿನ ಇಂಗ್ಲೀಷ್ ಪ್ರಾಧ್ಯಾಪಕ ಡಾ. ಹಯವದನ ಮೂಡುಸಗ್ರಿ ಹೇಳಿದರು. ಜನಪ್ರತಿನಿಧಿ ವಾರ ಪತ್ರಿಕೆ ಆಶ್ರಯದಲ್ಲಿ ನಡೆದ ಲೇಖಕಿ ಡಾ. ಪಾರ್ವತಿ ಜಿ. ಐತಾಳ್ ಬರೆದ ಲೇಖನಗಳ ಸಂಕಲನ ‘ಸಮಕ್ಷಮ’ ಕೃತಿಯನ್ನು ಬಿಡುಗಡೆಗೊಳಿಸಿ ಮಾತನಾಡಿದರು. ಪತ್ರಕರ್ತ ಸುಬ್ರಹ್ಮಣ್ಯ ಪಡುಕೋಣೆ, ಗಂಗಾಧರ ಐತಾಳ್, ಪ್ರವೀಣ ವಿ.ಜಿ. ಉಪಸ್ಥಿತರಿದ್ದರು. ವರದರಾಜ್ ಸ್ವಾಗತಿಸಿ, ನಾಗರಾಜ್ ವಂಡ್ಸೆ ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಹಟ್ಟಿಯ೦ಗಡಿ, ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ, ಎಫ಼್. ಎಸ್. ಎಲ್ ಇ೦ಡಿಯಾ ವತಿಯಿ೦ದ ಸ್ಪೇನ್ ದೇಶದ ವಿದ್ಯಾರ್ಥಿಗಳಿಗೆ ‘ಸ೦ಸ್ಕೃತಿ ವಿನಿಮಯ’ ಎ೦ಬ ಭಾರತೀಯ ಶಿಕ್ಷಣ, ಸ೦ಸ್ಕೃತಿ, ಆಚಾರ-ವಿಚಾರಗಳ ಪರಿಚಯಾತ್ಮಕ ಕಾರ್ಯಾಗಾರವನ್ನು ಐದು ದಿನಗಳ ಕಾಲ ಹಮ್ಮಿಕೊಳ್ಳಲಾಯಿತು. ಭಾರತೀಯ ಸ೦ಪ್ರದಾಯದ೦ತೆ ಪೂರ್ಣಕು೦ಭ ಸ್ವಾಗತದೊ೦ದಿಗೆ, ತಿಲಕವಿಟ್ಟು, ಆರತಿ ಬೆಳಗಿ ಸ್ಪೇನ್ ದೇಶದ ಹದಿನೈದು ವಿದ್ಯಾರ್ಥಿಗಳ ತ೦ಡ ಬರಮಾಡಿಕೊಳ್ಳಲಾಯಿತು. ಮೊದಲ ದಿನವೇ ಭಾರತೀಯ ವಿಶಿಷ್ಠ ಕಲಾ ಪ್ರಕಾರಗಳಾದ ಕೀರ್ತನೆಗಳು, ಭಜನೆಗಳು, ಯಕ್ಷಗಾನ, ಭರತನಾಟ್ಯ, ಕಥಕ್, ಹಾಗೂ ಜಾನಪದ ಹಾಡುಗಳನ್ನು ಪರಿಚಯಿಸಲಾಯಿತು. ದಕ್ಷಿಣ ಭಾರತದ ಶೈಲಿಯ ಊಟ, ಉಪಹಾರ ನೀಡಿ ಸತ್ಕರಿಸಲಾಯಿತು. ವಿವಿಧ ಬಗೆಯ ಭಾರತದ ಗ್ರಾಮೀಣ ಆಟಗಳು ಹಾಗೂ ಪ್ರಕೃತಿ ವೈವಿಧ್ಯತೆಗಳನ್ನು ಅವರಿಗೆ ತಿಳಿಸಿಕೊಡಲಾಯಿತು. ಸ್ಪೇನ್ ವಿದ್ಯಾರ್ಥಿಗಳೂ ಕೂಡ ಆ ದೇಶದ ಸ೦ಸ್ಕೃತಿ, ಭಾಷೆ, ಸಾ೦ಪ್ರದಾಯಿಕ ಆಟಗಳು, ಹಾಗೂ ಪರಿಸರ ಸ್ವಚ್ಛತೆಯ ಬಗ್ಗೆ ತಿಳಿಸಿಕೊಟ್ಟರು. ನಾಲ್ಕನೆಯ ದಿನ ನಡೆದ ಪರಿಸರ ಜಾಗೃತಿ ಜಾಥವ೦ತೂ ಎರಡೂ ದೇಶದ ವಿದ್ಯಾರ್ಥಿಗಳಿಗೆ ವಿಭಿನ್ನ…
ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ರೋಟರ‍್ಯಾಕ್ಟ್ ಕ್ಲಬ್ ಕೋಟೇಶ್ವರ ಇದರ 2016:17ನೇ ಸಾಲಿನ ಅಧ್ಯಕ್ಷರಾಗಿ ಅರುಣ್ ದೇವಾಡಿಗ ವಕ್ವಾಡಿ ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿ- ಸುಬ್ರಹ್ಮಣ್ಯ ಮೊಗವೀರ ಆಯ್ಕೆಯಾಗಿದ್ದು, ಸಂಸ್ಥೆಯ ಸಭಾಪತಿ ಸುಧೀರ್ ಕೆ. ಶೆಟ್ಟಿ ನೂಜಿ, ನಿಕಟಪೂರ್ವ ಅಧಕ್ಷ ರಾಘವೇಂದ್ರ ಎಸ್. ಬೀಜಾಡಿ ಕಾರ್ಯ ನಿರ್ವಹಿಸುತ್ತಾರೆ. ಉಪಾಧ್ಯಕ್ಷ: ರವಿ ಕಟ್ಕೆರೆ, ಕೋಶಾಧಿಕಾರಿ: ಪ್ರದೀಪ ದೇವಾಡಿಗ, ಜತೆ ಕಾರ್ಯದರ್ಶಿ: ಶಿವಾನಂದ.ಕೆ, ಜತೆ ಕೋಶಾಧಿಕಾರಿ: ಯೋಗೀಶ್ ಎಸ್.ಕುಂದರ್, ದಂಡಪಾಣಿ: ರಾಮಚಂದ್ರ ಆಚಾರ್ಯ, ಬುಲೆಟಿನ್ ಎಡಿಟರ್: ಗಿರೀಶ್ ವಿ. ಆಚಾರ್ಯ. ಸಂಘ ಸೇವೆ: ಕೆ. ಗಣೇಶ ಮಂಜ, ವೃತ್ತಿ ಸೇವೆ: ಪ್ರಶಾಂತ್ ಆಚಾರ್ಯ, ಸಮುದಾಯ ಸೇವೆ: ಎಸ್. ಶ್ರೇಯಸ್, ಅಂತರ್‌ರಾಷ್ಟ್ರೀಯ ಸೇವೆ: ಸಂದೀಪ ಶ್ರೀಯಾನ್. ಸಾಂಸ್ಕೃತಿಕ ಕಾರ್ಯದರ್ಶಿ: ಶಿವಾನಂದ ದೊಡ್ಡೋಣಿ, ಶಾಶಾಂಕ ಮಂಜ, ಮನೋಜ್ ಭಾಗವತ. ಕ್ರೀಡಾ ಕಾರ್ಯದರ್ಶಿ: ರಾಜೇಶ್ ಪೈ, ಪ್ರಸಾದ ಆಚಾರ್ಯ, ಎಚ್.ಎನ್. ಧನುಷ್‌ಕುಮಾರ್. ಸಲಹಾ ಸಮತಿ ಸದಸ್ಯರು: ಗಜೇಂದ್ರ ಬೀಜಾಡಿ, ಪವನ, ರಾಘವೇಂದ್ರ ಅಮೀನ್, ಸಂತೋಷ್ ಬಳ್ಕೂರ್, ಶಿವಪ್ರಸಾದ ಆಚಾರ್ಯ, ಯೋಗೀಶ್.ಬಿ, ರಾಧಕೃಷ್ಣ…
