Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ. ಕೋಟ: ಹಬ್ಬಹರಿದಿನಗಳು ಜನರ ಧಾರ್ಮಿಕ ಭಾವನೆಗಳನ್ನು ಗಟ್ಟಿಗೊಳಿಸುವ ಆಚರಣೆಯಾಗಿದೆ ಅದರಂತೆ ಶಾರದೋತ್ಸವ ಕಾರ್ಯಕ್ರಮಗಳು ಜನಮಾನಸದಲ್ಲಿ ನೆಲೆಯೂರಿ ಒಗ್ಗಟ್ಟು ಪ್ರದರ್ಶಿಸುವ ಸಂಭ್ರಮವಾಗಲಿ ಎಂದು ಸಾಲಿಗ್ರಾಮ ಶ್ರೀ ಗುರುನರಸಿಂಹ ದೇಗುಲದ ಆಡಳಿತ ಮಂಡಳಿಯ ಅಧ್ಯಕ್ಷ ಡಾ. ಕೆ.ಎಸ್ ಕಾರಂತ್ ಹೇಳಿದರು. ಅವರು ಗುರುವಾರ ಸಾಲಿಗ್ರಾಮ ದೇಗುಲದಲ್ಲಿ ಪಾಂಡೇಶ್ವರ ಶಾರದೋತ್ಸವ ಸಮಿತಿ ವತಿಯಿಂದ ನಡೆಸಲ್ಪಡುವ ಇದರ 32ನೇ ವರ್ಷದ ಶಾರದೋತ್ಸವ ಸಂಭ್ರಮ ಇದರ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಮಾತನಾಡಿ ಧಾರ್ಮಿಕ ಆಚರಣೆಗಳು ಗ್ರಾಮದಲ್ಲಿ ಸಹಬಾಳ್ವೆ ಹಾಗೂ ಸಾಮರಸ್ಯ ಬೆಸೆಯುವ ಉತ್ಸವಗಳಾಗಿ ಮೂಡಿಬರಲಿ ಎಂದು ಆಶಿಸಿದರು. ಈ ಸಂದರ್ಭದಲ್ಲಿ ಸಾಲಿಗ್ರಾಮ ಶ್ರೀ ಗುರುನರಸಿಂಹ ದೇವಸ್ಥಾನದ ಆಡಳಿತ ಮಂಡಳಿಯ ಕಾರ್ಯದರ್ಶಿ ಲಕ್ಷ್ಮೀನಾರಾಯಣ ತುಂಗ, ದೇಗುಲದ ಮ್ಯಾನೇಜರ್ ಗಣೇಶ್ ಭಟ್ಟ ಪಾಂಡೇಶ್ವರ, ಕೂಟಮಹಾಜಗತ್ತು ಅಂಗ ಸಂಸ್ಥೆಯ ಅಧ್ಯಕ್ಷ ಚಂದ್ರಶೇಖರ ಹೊಳ್ಳ, ಶಾರದೋತ್ಸವ ಸಮಿತಿಯ ಅಧ್ಯಕ್ಷ ಚಂದ್ರಮೋಹನ್ ಪೂಜಾರಿ ,ಪಾಂಡೇಶ್ವರ ರಕ್ತೇಶ್ವರಿ ದೇಗುಲದ ಧರ್ಮದರ್ಶಿ ಕೆ.ವಿ ರಮೇಶ್ ರಾವ್, ಸಮಿತಿಯ ಉಪಾಧ್ಯಕ್ಷ ದೇವದಾಸ್ ಸಾಲ್ಯಾನ್, ಪಿ.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ. ಉಡುಪಿ: ಪ್ರಸಕ್ತ ಸಾಲಿನ ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟದ ಫುಟ್‌ಬಾಲ್, ಕಬಡ್ಡಿ, ಬಾಲ್ ಬ್ಯಾಡ್ಮಿಂಟನ್, ಖೋ-ಖೋ, ಹ್ಯಾಂಡ್‌ಬಾಲ್ ಮತ್ತು ಈಜು ಸ್ಪರ್ಧೆಗಳು ಸೆಪ್ಟಂಬರ್ 13 ಮತ್ತು 14 ರಂದು ಹಾಸನದ ಜಿಲ್ಲಾ ಕ್ರೀಡಾಂಗಣ ಹಾಗೂ ಹಾಕಿ, ಯೋಗ ಮತ್ತು ಜಿಮ್ನಾಸ್ಟಿಕ್ಸ್ (ಆಯ್ಕೆ) ಸ್ಪರ್ಧೆಗಳು ಸೆಪ್ಟಂಬರ್ 15 ರಂದು ಕೊಡಗು ಜಿಲ್ಲೆ ಕೂಡಿಗೆ ಕ್ರೀಡಾಶಾಲೆಯಲ್ಲಿ ನಡೆಯಲಿವೆ. ಸದರಿ ಕ್ರೀಡಾಕೂಟದಲ್ಲಿ ಜಿಲ್ಲೆಯಿಂದ ಭಾಗವಹಿಸುವ ಕ್ರೀಡಾಪಟುಗಳು ಆನ್‌ಲೈನ್ ಮೂಲಕ ನೋಂದಾವಣೆ ಮಾಡಿದ ಗುರುತಿನ ಚೀಟಿ ಹಾಗೂ ಇತರ ದಾಖಲೆಗಳೊಂದಿಗೆ ನಿಗಧಿತ ದಿನದಂದು ಸಂಘಟಕರಲ್ಲಿ ವರದಿ ಮಾಡಿಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉಡುಪಿ ದೂ.ಸಂ: 0820-2521324 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ. ಬೈಂದೂರು: ಬೈಂದೂರು ಪಟ್ಟಣ ಪಂಚಾಯತ್‌ಗೆ ಕರ್ನಾಟಕ ಪುರಸಭೆ ಕಾಯ್ದೆ 1964 ರ ಕಲಂ -11 ರನ್ವಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, 2011ರ ಜನಗಣತಿಯನ್ನಾಧರಿಸಿ, ವಾರ್ಡುವಾರು ಮೀಸಲಾತಿಯನ್ನು ನಿಗಧಿಪಡಿಸಿ, ಅಂತಿಮ ಅಧಿಸೂಚನೆಯನ್ನು ಕರ್ನಾಟಕ ವಿಶೇಷ ರಾಜ್ಯ ಪತ್ರದಲ್ಲಿ ಪ್ರಕಟಿಸಲಾಗಿದೆ. ವಾರ್ಡುವಾರು ಮೀಸಲಾತಿ ವಿವರ: ತಾರಾಪತಿ – ಹಿಂದುಳಿದ ವರ್ಗ-ಎ (ಮಹಿಳೆ), ವಿರೂಪಾಕ್ಷಿ – ಸಾಮಾನ್ಯ, ಸೋಮೇಶ್ವರ – ಹಿಂದುಳಿದ ವರ್ಗ -ಬಿ (ಮಹಿಳೆ), ದೊಂಬೆ – ಸಾಮಾನ್ಯ, ಪಂಚಲಿಂಗೇಶ್ವರಿ – ಹಿಂದುಳಿದ ವರ್ಗ ಎ, ಆಲಂದೂರು-ತೂದಳ್ಳಿ – ಸಾಮಾನ್ಯ (ಮಹಿಳೆ), ಕಡ್ಕೆ-ಮದ್ದೋಡಿ – ಹಿಂದುಳಿದ ವರ್ಗ-ಬಿ, ಯೋಜನಾ ನಗರ -ಪರಿಶಿಷ್ಟ ಜಾತಿ, ಬಂಕೇಶ್ವರ- ಹಿಂದುಳಿದ ವರ್ಗ-ಎ (ಮಹಿಳೆ), ಬೈಂದೂರು ಪೇಟೆ- ಸಾಮಾನ್ಯ, ವೆಂಕಟ್ರಮಣ- ಸಾಮಾನ್ಯ, ಪಾಣ್ತಿಗರಡಿ – ಹಿಂದುಳಿದ ವರ್ಗ-ಎ, ಯಡ್ತರೆ- ಸಾಮಾನ್ಯ (ಮಹಿಳೆ), ಮಯ್ಯಾಡಿ ಕಳವಾಡಿ – ಹಿಂದುಳಿದ ವರ್ಗ-ಎ (ಮಹಿಳೆ), ಬಾಡಾ, ಬಿಯಾರ- ಸಾಮಾನ್ಯ, ಸೂರ್ಕುಂದ – ಹಿಂದುಳಿದ ವರ್ಗ ಎ, ಗಂಗನಾಡು –…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ. ಶಂಕರನಾರಾಯಣ: ಇಲ್ಲಿನ ಮದರ್ ತೆರೇಸಾ ಮೆಮೋರಿಯಲ್ ಸ್ಕೂಲ್‌ನಲ್ಲಿ, ‘ಗ್ರಾಂಡ್ ಪೇರೆಂಟ್ಸ್ ಡೇ ‘ಯನ್ನು ವಿಶೇಷ ರೀತಿಯಲ್ಲಿ ಆಚರಿಸಲಾಯಿತು. ಈ ದಿನವನ್ನು ಆಚರಿಸುವ ಉದ್ದೇಶ, ಮಕ್ಕಳಿಗೆ ಹಿರಿಯರ ಮಹತ್ವವನ್ನು ಮನವರಿಕೆ ಮಾಡಿಸುವುದೂ ಹೌದು, ಜೊತೆಗೆ ಪೀಳಿಗೆಗಳ ನಡುವಿನ ಸಂಬಂಧವನ್ನು ಬಲಪಡಿಸುವುದೂ ಆಗಿತ್ತು. ಇಂತಹ ಕಾರ್ಯಕ್ರಮಗಳು ಹಿರಿಯರ ಅನುಭವ, ಬೆಳೆವಣಿಗೆ ಹಾಗೂ ಮೌಲ್ಯಗಳ ಬಗ್ಗೆ ಮಕ್ಕಳಿಗೆ ಅರಿವು ಮೂಡಿಸಲು ಸಹಾಯಕವಾಗುತ್ತವೆ. ಒಂದರಿಂದ ಎಂಟನೇ ತರಗತಿ ವರೆಗಿನ ವಿದ್ಯಾರ್ಥಿಗಳು ತಮ್ಮ ಅಜ್ಜ-ಅಜ್ಜಿಯೊಂದಿಗೆ ಕಳೆದ ಸವಿ ಕ್ಷಣಗಳನ್ನು ಮೆಲುಕು ಹಾಕುತ್ತಾ, ಅದನ್ನು ಕಿರು ವಿಡಿಯೋ ರೂಪದಲ್ಲಿ ದಾಖಲಿಸಿ ಕಳುಹಿಸುವ ಸ್ಪರ್ಧೆಯನ್ನು ನಡೆಸಲಾಯಿತು. ಈ ವಿಡಿಯೋ ತುಣುಕುಗಳಲ್ಲಿ ಮಕ್ಕಳು ತಮ್ಮ ಹೆಮ್ಮೆಯ ಕ್ಷಣಗಳು, ಆಟವಾಡಿದ ಸಂದರ್ಭಗಳು, ಅವರಿಂದ ಕಲಿತ ಪಾಠಗಳು ಮತ್ತು ಕಥೆಗಳು ಮುಂತಾದವುಗಳನ್ನು ಹಂಚಿಕೊಂಡರು. ಈ ಕಿರುಚಿತ್ರಗಳು ಕೇವಲ ನೆನಪಿನ ಸಂಗ್ರಹವಷ್ಟೇ ಅಲ್ಲದೇ, ಮೌಲ್ಯಮಯ ಸಂಬಂಧಗಳ ಪ್ರತಿಬಿಂಬವಾಗಿಯೂ ಸಹ ಜನರಿಗೆ ಅನುಭವವಾಯಿತು. ಹಿರಿಯರ ಜೀವಿತಾನುಭವ ಮತ್ತು ಪ್ರೀತಿ ಎಂಬ ಅಪಾರ ಸಂಪತ್ತನ್ನು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ. ಮೂಡುಬಿದಿರೆ: ಶಾಲಾಶಿಕ್ಷಣ ಇಲಾಖೆ (ಪದವಿಪೂರ್ವ) ಹಾಗೂ ಎಸ್‌ಡಿಪಿಟಿ ಪಿಯು ಕಾಲೇಜು ಕಟೀಲು ಇವರ ಜಂಟಿ ಆಶ್ರಯದಲ್ಲಿ ನಡೆದ ನಡೆದ ಬಾಲಕರ ಹಾಗೂ ಬಾಲಕಿಯರ ಜಿಲ್ಲಾ ಮಟ್ಟದ ಖೋ-ಖೋ ಪಂದ್ಯಾವಳಿಯಲ್ಲಿ ಆಳ್ವಾಸ್ ಪದವಿ ಪೂರ್ವ ಕಾಲೇಜಿನ ತಂಡವು ಕ್ರಮವಾಗಿ 18ನೇ ಬಾರಿಗೆ ಹಾಗೂ 16ನೇ ಬಾರಿಗೆ ಸಮಗ್ರ ಚಾಂಪಿಯನ್ಸ್ ಪಟ್ಟ ಆಲಂಕರಿಸಿತು. ಬಾಲಕರ ವಿಭಾಗದ ಫೈನಲ್ ಪಂದ್ಯಾಟದಲ್ಲಿ ಆಳ್ವಾಸ್ ಪದವಿ ಪೂರ್ವ ಕಾಲೇಜಿನ ತಂಡವು ವಿವೇಕಾನಂದ ಕಾಲೇಜು ಪುತ್ತೂರು ತಂಡವನ್ನು 5 ಅಂಕಗಳು ಹಾಗೂ ಇನ್ನಿಂಗ್ಸ್ನೊಂದಿಗೆ ಮಣಿಸಿ 18ನೇ ಬಾರಿ ಚಾಂಪಿಯನ್ಸ್ ಪ್ರಶಸ್ತಿ ಪಡೆಯಿತು. ಬಾಲಕರ ವೈಯಕ್ತಿಕ ವಿಭಾಗದಲ್ಲಿ ಉತ್ತಮ ಹಿಡಿತಗಾರ ಪ್ರಶಸ್ತಿಯನ್ನು ಆಳ್ವಾಸ್‌ನ ಅಮರೇಶ್ ಹಾಗೂ ಉತ್ತಮ ಸವ್ಯಸಾಚಿ ಪ್ರಶಸ್ತಿಯನ್ನು ಆಳ್ವಾಸ್‌ನ ಅಶ್ವಿನ್ ಪಡೆದರು. ಬಾಲಕಿಯರ ವಿಭಾಗದ ಫೈನಲ್ ಪಂದ್ಯಾಟದಲ್ಲಿ ಆಳ್ವಾಸ್ ಪದವಿ ಪೂರ್ವ ಕಾಲೇಜಿನ ತಂಡವು ಎಸ್‌ಡಿಪಿಟಿ ಪಿಯು ಕಾಲೇಜು ಕಟೀಲು ತಂಡವನ್ನು 8 ಅಂಕಗಳು ಹಾಗೂ ಇನ್ನಿಂಗ್ಸ್ನೊಂದಿಗೆ ಮಣಿಸಿ 16ನೇ ಬಾರಿ ಜಯಶಾಲಿಯಾಯಿತು. ಬಾಲಕಿಯರ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ. ಗಂಗೊಳ್ಳಿ: ಕಳೆದ ಕೆಲವು ವರ್ಷಗಳ ಹಿಂದೆ ಕ್ರೀಡಾ ಪ್ರತಿಭೆಗಳಿದ್ದರೂ ಅವರಿಗೆ ಸರಿಯಾದ ಅವಕಾಶಗಳು ಸಿಗುತ್ತಿರಲಿಲ್ಲ. ಆದರೆ ಇತ್ತೀಚಿನ ದಿನಗಳಲ್ಲಿ ಇಲಾಖೆಯಿಂದ ಹಾಗೂ ಶಾಲೆಯಿಂದ ಸ್ಪರ್ಧೆಗಳು ನಿರಂತರವಾಗಿ ನಡೆಯುತ್ತಿರುವುದರಿಂದ ಹಲವು ಪ್ರತಿಭೆಗಳು ರಾಷ್ಟ್ರ ಮಟ್ಟದಲ್ಲಿ ಪ್ರತಿನಿಧಿಸಲು ಸಾಧ್ಯವಾಗುತ್ತಿದೆ. ಕ್ರೀಡೆಯಲ್ಲಿ ಸೋಲು ಗೆಲವು ಸಾಮಾನ್ಯವಾಗಿದ್ದು, ಎಲ್ಲರೂ ಕ್ರೀಡಾಸ್ಫೂರ್ತಿಯಿಂದ ಕ್ರೀಡೆಯಲ್ಲಿ ಭಾಗವಹಿಸುವಂತಾಗಬೇಕು ಎಂದು ಗಂಗೊಳ್ಳಿ ಶ್ರೀ ರಾಘವೇಂದ್ರ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷ ಜಿ. ವೆಂಕಟೇಶ ಶೆಣೈ ಹೇಳಿದರು. ಅವರು ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಡುಪಿ ಜಿಲ್ಲೆ, ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜು ಗಂಗೊಳ್ಳಿ, ಶ್ರೀ ರಾಘವೇಂದ್ರ ಸ್ಪೋರ್ಟ್ಸ್ ಕ್ಲಬ್ ಗಂಗೊಳ್ಳಿ, ಗಂಗೊಳ್ಳಿ ಟೌನ್ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಗಂಗೊಳ್ಳಿ, ರೋಟರಿ ಕ್ಲಬ್ ಗಂಗೊಳ್ಳಿ ಮತ್ತು ಎಸ್.ವಿ. ಶಾಲೆಗಳ ಹಳೆ ವಿದ್ಯಾರ್ಥಿ ಸಂಘ ಇವರ ಜಂಟಿ ಆಶ್ರಯದಲ್ಲಿ ಗಂಗೊಳ್ಳಿಯ ಎಸ್.ವಿ. ಪದವಿ ಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ಉಡುಪಿ ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಮತ್ತು ಟೆನ್ನಿಕಾಯ್ಟ್ ಪಂದ್ಯಾಟ 2025-26ನ್ನು ಗುರುವಾರ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಅಜ್ಜರ ಕಾಡಿನಲ್ಲಿ ನಡೆದ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಮನು ಪೂಜಾರಿ 110 ಮೀಟರ್ ಹರ್ಡಲ್ಸ್ ನಲ್ಲಿ ಪ್ರಥಮ  ಸ್ಥಾನವನ್ನು ಪಡೆದುಕೊಂಡು ವಿಭಾಗೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ವಿದ್ಯಾರ್ಥಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ. ಉಡುಪಿ: ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಾತಿಗಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪರಿಶಿಷ್ಟ ಜಾತಿ/  ಪರಿಶಿಷ್ಟ ವರ್ಗದ ವೃತ್ತಿಪರ ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸುಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳಿಂದ ವೆಬ್‌ಸೈಟ್ https://shp.karnataka.gov.in/bcwd ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 4 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 8050770004 ಅಥವಾ 8050770005 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಸ್ಪರ್ಧಾ ಜಗತ್ತಿನ ಅನೇಕ ಸವಾಲುಗಳು ಹಾಗೂ ಸಫಲತೆಯ ಹಿಂದಿರುವ ಪ್ರೇರಣಾದಾಯಕ ಅಂಶಗಳ ಕುರಿತು ಅರಿವು ಮೂಡಿಸುವ ದೃಷ್ಟಿಯಿಂದ ಡಾ| ಬಿ. ಬಿ. ಹೆಗ್ಡೆ ಕಾಲೇಜಿನ ವಾಣಿಜ್ಯ ವಿಭಾಗ ಹಾಗೂ ಇನ್ನೋವೇಶನ್ ಆ್ಯಂಡ್ ಎಂಟ್ರಪ್ರಿನ್ಯುರ್‌ಶಿಪ್ ಡೆವಲಪ್ಮೆಂಟ್ ಸೆಲ್ ಇದರ ಆಶ್ರಯದಲ್ಲಿ ರಾಷ್ಟç ಪ್ರಶಸ್ತಿ ವಿಜೇತ ‘12th ಫೇಲ್’ಸಿನಿಮಾ ಪ್ರದರ್ಶನ ಹಾಗೂ ವಿಮರ್ಶೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಪದವಿ ಶಿಕ್ಷಣಾರ್ಹತೆಯ ಜೊತೆಗೆ ರಾಜ್ಯ ಸರ್ಕಾರ ಆಯೋಜಿಸುವ ಅನೇಕ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಕಾಲೇಜಿನ ಆವರಣದಲ್ಲಿಯೇ ತರಬೇತಿ ನೀಡುವ ಉದ್ದೇಶದಿಂದ ಪ್ರಸ್ತುತ 2025-26 ರಿಂದ ಆರಂಭಗೊAಡ ಬಿ.ಕಾಂ. ಜೊತೆಗೆ ಎಸ್.ಎಸ್.ಸಿ. ವಿದ್ಯಾರ್ಥಿಗಳು ಕಾರ್ಯಕ್ರಮದ ಫಲಾನುಭವಿಗಳಾಗಿದ್ದಷ್ಟೇ ಅಲ್ಲದೆ ಸಿನಿಮಾದ ಕುರಿತು ರಚನಾತ್ಮಕವಾಗಿ ವಿಮರ್ಶೆ ನೀಡಿರುವುದು ವಿಶೇಷ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ ಉಮೇಶ್ ಶೆಟ್ಟಿ ಇವರು ಮಾತನಾಡಿ, ಎಸ್.ಎಸ್.ಸಿ. ವಿದ್ಯಾರ್ಥಿಗಳು ಸರ್ಕಾರಿ ನೌಕರಿಯ ಗುರಿ ಹೊಂದಿರುವ ಹಿನ್ನೆಲೆಯಲ್ಲಿ ಕಠಿಣ ಪರಿಶ್ರಮ ಹಾಗೂ ದೃಢ ಸಂಕಲ್ಪದ ಜೊತೆಗೆ ಗುರಿಯನ್ನು ತಲುಪುವಲ್ಲಿ ಅವಿರತ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ ವಿಭಾಗ) ಉಡುಪಿ ಯಡಾಡಿ ಮತ್ಯಾಡಿಯಲ್ಲಿ ಆಯೋಜಿಸಿದ್ದ ತಾಲ್ಲೂಕು ಮಟ್ಟದ ಬಾಲಕ, ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ಜನತಾ ಪದವಿ ಪೂರ್ವ ಕಾಲೇಜಿನ ಬಾಲಕ ಮತ್ತು ಬಾಲಕಿಯರ ತಂಡಗಳು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಬಾಲಕರ ತಂಡದ ವಿದ್ಯಾರ್ಥಿಗಳಾದ ನಿಹಾಲ್, ಸಾಯಿಮ್ (ಉತ್ತಮ ದಾಳಿಗಾರ) ಓಂಕಾರ್, ಯೂನಸ್, ಶಶಾಂಕ್, ಸಾಗರ್ (ಉತ್ತಮ ಹಿಡಿತಗಾರ) ಅಯಾನ್, ಹಾಗೂ ಬಾಲಕಿಯರ ತಂಡದ ನವ್ಯ (ಉತ್ತಮ ದಾಳಿಗಾರ್ತಿ), ರಕ್ಷಾ,ಸಿಂಚನ, ಸಂಜನಾ, ಅನುಷಾ, ಮೋನಿಷಾ (ಉತ್ತಮ ಹಿಡಿತಗಾರ್ತಿ)ಶ್ರಾವ್ಯ ಕ್ರೀಡಾ ಸ್ಫೂರ್ತಿಯಿಂದ ಆಟವಾಡಿ ಕಾಲೇಜಿಗೆ ಕೀರ್ತಿ ತಂದಿರುತ್ತಾರೆ. ಸಾಧಕ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ,ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

Read More