ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಿದ್ದಾಪುರದ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ಕ್ಲಸ್ಟರ್ ಮಟ್ಟದ ಕ್ರೀಡಾಕೂಟದಲ್ಲಿ ಮದರ್ ತೆರೇಸಾ ಮೆಮೋರಿಯಲ್ ಸ್ಕೂಲ್ನ ವಿದ್ಯಾರ್ಥಿಗಳು ಅದ್ಭುತ ಸಾಧನೆ ಮಾಡುವ ಮೂಲಕ ಶಾಲೆಗೆ ಕೀರ್ತಿ ತಂದಿದ್ದಾರೆ. 17ರ ವಯೋಮಾನದ ಪ್ರೌಢಶಾಲಾ ವಿಭಾಗದಲ್ಲಿ ಮುತ್ತು ಸಿದ್ದಪ್ಪ ನಾವಿ ಹಾಗೂ ಸಾಹಿತ್ಯ ಅಡಿಗ ಅವರು 1500 ಮೀಟರ್ ಓಟದಲ್ಲಿ ಪ್ರಥಮ ಸ್ಥಾನ ಪಡೆದರೆ, ಸೃಷ್ಟಿ. ಎಚ್. ತೋಳಾರ್ 100 ಮೀಟರ್ ಓಟದಲ್ಲಿ ಹಾಗೂ ಸಂಪ್ರೀತ್ ಉದ್ದ ಜಿಗಿತದಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾರೆ. ಅದೇ ವಿಭಾಗದಲ್ಲಿ ಆಕಾಶ್ ಪೂಜಾರಿ ಅವರು 100 ಮೀಟರ್ ಓಟ, 200 ಮೀಟರ್ ಓಟ ಹಾಗೂ ಗುಂಡು ಎಸೆತದಲ್ಲಿ ಪ್ರಥಮ ಸ್ಥಾನ ಪಡೆಯುವ ಮೂಲಕ ವೈಯಕ್ತಿಕ ಚಾಂಪಿಯನ್ಶಿಪ್ ಮುಡಿಗೇರಿಸಿಕೊಂಡಿದ್ದಾರೆ. ಅವರ ಈ ಸಾಧನೆ ಶಾಲೆಯ ಕ್ರೀಡಾ ಪ್ರತಿಭೆಗೆ ಮತ್ತೊಂದು ಗರಿಮೆ ತಂದಿದೆ. ಇದೇ ವಿಭಾಗದಲ್ಲಿ ಸಮಿತ್ ಶೆಟ್ಟಿ ಗುಂಡು ಎಸೆತದಲ್ಲಿ ದ್ವಿತೀಯ ಸ್ಥಾನ, ಸಾಯಿಪ್ರಸಾದ್ ಎಸ್. ಮೊಗವೀರ 800 ಮೀಟರ್…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಗೋಕರ್ಣ: ಸೂರ್ಯೋದಯಕ್ಕೂ ಪೂರ್ವದಲ್ಲಿ ಪ್ರತಿದಿನವೂ ನಿಯಮಿತವಾಗಿ ನೀರನ್ನು ಸೇವಿಸುವ ‘ಉಷಃಪಾನ’ ಹಾಗೂ ‘ನಾಸಾಪಾನ’ ಪದ್ಧತಿಗಳನ್ನು ಅಳವಡಿಸಿಕೊಂಡರೆ ಮನುಷ್ಯನು ಮುಪ್ಪು ಹಾಗೂ ರೋಗಗಳಿಲ್ಲದ ನೂರು ವರ್ಷಗಳ ಕಾಲದ ಆರೋಗ್ಯಯುತ ಜೀವನವನ್ನು ನಡೆಸಲು ಸಾಧ್ಯ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಅವರು ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ ‘ಅನ್ನಬ್ರಹ್ಮ ಚಾತುರ್ಮಾಸ್ಯ’ದ ಧರ್ಮಸಭೆಯಲ್ಲಿ ‘ಅನ್ನಂ ಬ್ರಹ್ಮ’ ಮಾಲಿಕೆಯಲ್ಲಿ ‘ಉಷಃಪಾನ – ನಾಸಾಪಾನ’ ಕುರಿತಾಗಿ ಪ್ರವಚನ ಅನುಗ್ರಹಿಸಿದ ಶ್ರೀಗಳು, ಸೂರ್ಯೋದಯಕ್ಕೂ ಪೂರ್ವದಲ್ಲಿ ಪ್ರತಿದಿನ ಎಂಟು ಬೊಗಸೆ ನೀರನ್ನು ಸೇವಿಸುವುದನ್ನು ‘ಉಷಃಪಾನ’ ಎಂದು ಕರೆಯಲಾಗಿದ್ದು, ಆಯುರ್ವೇದ ಹಾಗೂ ಯೋಗಶಾಸ್ತ್ರದಲ್ಲಿ ಈ ಕುರಿತಾಗಿ ಉಲ್ಲೇಖಗಳಿದ್ದು, ಪ್ರತಿದಿನ ಇದನ್ನು ಆಚರಿಸುವಂತೆ ಸೂಚಿಸಲಾಗಿದೆ. ಉಷಃಪಾನದಿಂದ ಎಲ್ಲಾ ರೋಗಗಳ ನಿವಾರಣೆಯ ಜೊತೆಗೆ ಮುಪ್ಪನ್ನು ಇದು ನಿವಾರಿಸುತ್ತದೆ ಮತ್ತು ಮನುಷ್ಯನು ಶತಾಯುಷಿಯಾಗುತ್ತಾನೆ ಎಂದು ಇದರ ಉಪಯೋಗವನ್ನು ಹೇಳಿದ್ದು, ಬೆಳಗ್ಗೆ ಎದ್ದು ಶೌಚಕ್ರಿಯೆಯನ್ನು ಮಾಡುವುದಕ್ಕೂ ಮೊದಲೇ ಇದನ್ನು ಆಚರಿಸಬೇಕು ಎಂದರು. ಉಷಃಪಾನವನ್ನು ಒಂದನೇ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಐಎಂಜೆ ಶಿಕ್ಷಣ ಸಂಸ್ಥೆಗಳು,1ಎಂ1ಬಿ ಹಾಗೂ ರಾಜ್ಯ ಸರ್ಕಾರದ ಮೈಕ್ರೋಸಾಫ್ಟ್ ಮತ್ತು ಮೈಟಿ ಸಹಯೋಗದಲ್ಲಿ, “ಉದ್ಯೋಗ ಎಕ್ಸ್ಪ್ರೆಸ್ 2026” ಬೃಹತ್ ಉದ್ಯೋಗ ಮೇಳದ ಉದ್ಘಾಟನಾ ಸಭಾ ಕಾರ್ಯಕ್ರಮವು ಸೆಪ್ಟೆಂಬರ್ 18, 2026ರಂದು ಕುಂದಾಪುರದ ಮೂಡ್ಲಕಟ್ಟೆ ತಾಂತ್ರಿಕ ವಿದ್ಯಾಲಯ (ಎಂಐಟಿ) ಆವರಣದಲ್ಲಿ ಬೆಳಿಗ್ಗೆ 9.30ಗೆ ನಡೆಯಲಿದೆ. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಡಾ. ಸ್ಯಾಮುಯೆಲ್ ಅಗಸ್ಟಸ್ ನಾರ್ಟನ್ ಸ್ಟ್ಯಾನ್ಲಿ , ಆರ್ಕಿಟೆಕ್ಟ್, ಐಬಿಎಂ ಇಂಡಿಯಾ ಕ್ಲೌಡ್ ಲ್ಯಾಬ್ಸ್ ಅವರು ಭಾಗವಹಿಸಲಿದ್ದಾರೆ.ಗೌರವಾನ್ವಿತ ಅತಿಥಿಗಳಾಗಿ ಅಭಿರಾಮ್ ನಟರಾಜನ್ , ಕಾರ್ಯಕ್ರಮ ನಿರ್ದೇಶಕರು, ಗ್ರಾಸ್ರೂಟ್ ಇನಿಶಿಯೇಟಿವ್ಸ್, 1ಎಂ1ಬಿ ಅವರು ಆಗಮಿಸಲಿದ್ದಾರೆ.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಐಎಂಜೆ ಶಿಕ್ಷಣ ಸಂಸ್ಥೆಗಳ ಗೌರವಾನ್ವಿತ ಅಧ್ಯಕ್ಷರಾದ ಸಿದ್ಧಾರ್ಥ ಜೆ. ಶೆಟ್ಟಿ ಅವರು ವಹಿಸಲಿದ್ದಾರೆ.ಐಎಂಜೆ ಶಿಕ್ಷಣ ಸಂಸ್ಥೆಗಳ ಶೈಕ್ಷಣಿಕ ನಿರ್ದೇಶಕರಾದ ಡಾ. ಎಸ್. ಎನ್. ಭಟ್ ಅವರು ಸಭಾ ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು. ಉದ್ಯೋಗ ಮೇಳಕ್ಕೆ ಈಗಾಗಲೇ 1,500ಕ್ಕೂ ಅಧಿಕ ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದು, 30ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು ಭಾಗವಹಿಸಲಿವೆ.ಪ್ರಮುಖವಾಗಿ ನುವಿನ್ ಗ್ಲೋಬಲ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಜೆಸಿಐ ಬೈಂದೂರು ಸಿಟಿ ವತಿಯಿಂದ ಜೆಸಿ ಸಪ್ತಾಹದ ಅಂಗವಾಗಿ, ಸದ್ದಿಲ್ಲದೆ ಸಮಾಜ ಸೇವೆ ಮಾಡುತ್ತಿರುವ ನಿಸ್ವಾರ್ಥ ಸಾಧಕರನ್ನು ಗುರುತಿಸಿ ಗೌರವಿಸುವ ‘ಸೈಲೆಂಟ್ ಸ್ಟಾರ್ ಅವಾರ್ಡ್’ ಪ್ರದಾನ ಕಾರ್ಯಕ್ರಮವು ಸಪ್ತಾಹದ 7ನೇ ದಿನದಂದು ಬೈಂದೂರಿನ ಶಾರದಾ ವೇದಿಕೆಯಲ್ಲಿ ಅರ್ಥಪೂರ್ಣವಾಗಿ ಜರುಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೆಸಿಐ ಬೈಂದೂರು ಸಿಟಿ ಅಧ್ಯಕ್ಷರಾದ ಜೆಎಫ್ಎಂ. ಚೈತ್ರಾ ಸತೀಶ್ ವಹಿಸಿದ್ದರು. ಸಮಾಜದಲ್ಲಿ ಯಾವುದೇ ಪ್ರಚಾರದ ಹಂಬಲವಿಲ್ಲದೆ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ಇಬ್ಬರು ಸಾಧಕರನ್ನು ಈ ಸಂದರ್ಭದಲ್ಲಿ ಗೌರವಿಸಲಾಯಿತು. ಸಂಜೀವ ದೇವಾಡಿಗ, ಕಳವಾಡಿ: ಸಾವಿರಾರು ಅನಾಥ, ಕಾಯಿಲೆಯಿಂದ ಬಳಲುತ್ತಿರುವ ಹಾಗೂ ಅಪಘಾತಕ್ಕೀಡಾದ ಮೂಕ ಜೀವಿಗಳಾದ ಗೋವುಗಳನ್ನು ರಕ್ಷಿಸಿ, ಸ್ವಂತ ಮಕ್ಕಳಂತೆ ಪ್ರೀತಿಯಿಂದ ಪೋಷಿಸುತ್ತಿರುವ ಇವರ ಅಪೂರ್ವ ಗೋಸೇವೆಯನ್ನು ಗುರುತಿಸಿ ಸನ್ಮಾನಿಸಲಾಯಿತು. ಶ್ರೀನಿವಾಸ್ ದೇವಾಡಿಗ, ಬೈಂದೂರು: ವೃತ್ತಿಯಲ್ಲಿ ಬಳೆ ವ್ಯಾಪಾರಸ್ಥರಾಗಿದ್ದು, ಸ್ವಯಂಪ್ರೇರಿತರಾಗಿ ಸುಮಾರು 35ಕ್ಕೂ ಹೆಚ್ಚು ಬಾರಿ ರಕ್ತದಾನ ಮಾಡಿ ತುರ್ತು ಸಂದರ್ಭಗಳಲ್ಲಿ ಅದೆಷ್ಟೋ ಜೀವಗಳನ್ನು ಉಳಿಸಿದ ಇವರ ಜೀವಪರ ಕಳಕಳಿ ಹಾಗೂ ಸಮಾಜಮುಖಿ ಸೇವೆಯನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ಐ.ಕ್ಯೂ.ಎ.ಸಿ ಯುವ ರೆಡ್ ಕ್ರಾಸ್ ಘಟಕ ಮತ್ತು ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಕುಂದಾಪುರ ಇವರ ಸಂಯುಕ್ತ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ಪ್ರಥಮ ಚಿಕಿತ್ಸಾ ತರಬೇತಿ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ಜರುಗಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ, ಇದರ ಅಧ್ಯಕ್ಷರಾದ ಡಾ. ಜಯಕರ ಶೆಟ್ಟಿ ಅವರು ಮಾತಾನಾಡಿ, ಪ್ರಥಮ ಚಿಕಿತ್ಸೆ ತರಬೇತಿಯು ಕೇವಲ ಆರೋಗ್ಯ ಚಿಕಿತ್ಸೆಗೆ ಸಂಬಂಧಿಸಿದ ವಿಷಯವಲ್ಲ್ಲ ಬದಲಾಗಿ ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕಾದ ಜೀವನ ಕೌಶಲ್ಯವಾಗಿದೆ. ತುರ್ತು ಸಂದರ್ಭದಲ್ಲಿ ವ್ಯಕ್ತಿಗೆ ಸಮಯೋಜಿತವಾಗಿ ನೀಡುವ ಪ್ರಥಮ ಚಿಕಿತ್ಸೆ ವ್ಯಕ್ತಿಯ ಸ್ಥಿತಿಯನ್ನು ಹದಗೆಡದಂತೆ ನೋಡಿಕೊಳ್ಳಲು ಸಹಾಯ ಮಾಡುತ್ತದೆ. ಆದ್ದರಿಂದ ವಿದ್ಯಾರ್ಥಿಗಳು ಇಂತಹ ತರಬೇತಿಯಲ್ಲಿ ಪಾಲ್ಗೊಂಡು ತುರ್ತು ಸಂದರ್ಭಗಳನ್ನು ಎದುರಿಸುವ ಆತ್ಮವಿಶ್ವಾಸ ಬೆಳೆಸಿಕೊಳ್ಳಲು ಸಾಧ್ಯ ಎಂದರು. ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಇಶಾನಿ ಮೆಡಿಕಲ್ ಸೆಂಟರ್ ಕುಂದಾಪುರ ಇದರ ವೈದ್ಯಾಧಿಕಾರಿ ಡಾ. ಸೋನಿ ಡಿ’ಕೋಸ್ತಾ ವಿದ್ಯಾರ್ಥಿಗಳಿಗೆ ಗಾಯಗೊಂಡ ವ್ಯಕ್ತಿಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ವಿಭಾಗ ಉಡುಪಿ, ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜ್ ಕುಂದಾಪುರ ಇವರ ಆಸರೆಯಲ್ಲಿ ಜಿಲ್ಲಾಮಟ್ಟದ ಬಾಲಕರ ವಿಭಾಗದ ಫ್ರಿ ಸ್ಟೆಲ್ ಹಾಗೂ ಗ್ರಿಕೋ ರೋಮನ್ ಮತ್ತು ಬಾಲಕಿಯರ ವಿಭಾಗದಲ್ಲಿ ನಡೆದ ಕುಸ್ತಿ ಪಂದ್ಯಾಟದಲ್ಲಿ ಹೆಮ್ಮಾಡಿಯ ಜನತಾ ಪಿಯು ಕಾಲೇಜಿನ 8 ವಿದ್ಯಾರ್ಥಿಗಳು ಅತ್ಯುತ್ತಮ ಸಾಹಸವನ್ನು ಪ್ರದರ್ಶಿಸಿ ಚಿನ್ನದ ಪದಕ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಈ ಪಂದ್ಯಾಟದಲ್ಲಿ ಜನತಾ ಪದವಿ ಪೂರ್ವ ಕಾಲೇಜಿನ 8 ವಿದ್ಯಾರ್ಥಿಗಳು ಚಿನ್ನದ ಪದಕ, 10 ವಿದ್ಯಾರ್ಥಿಗಳು ಬೆಳ್ಳಿಯ ಪದಕ, 8 ವಿದ್ಯಾರ್ಥಿಗಳು ಕಂಚಿನ ಪದಕ ಪಡೆದು ಸತತವಾಗಿ 5ನೇ ಬಾರಿ ಸಮಗ್ರ ಪ್ರಶಸ್ತಿಯನ್ನು ತಮ್ಮ ಮುಡಿಗೇರಿಕೊಂಡರು. ಚಿನ್ನದ ಪದಕ ಸಾಧಕರು:ವಿದ್ಯಾರ್ಥಿಗಳಾದ ನವೀಶ್ (87kg),ಕಮಲೇಶ್ (82kg), ಸಾನ್ವಿತ್ ಖಾರ್ವಿ( 74kg)ನಯನ (72kg)ಪ್ರತೀಕ್ಷಾ (72kg)ಮಂಥನ್(70kg),ಕೃತಿಕಾ (62kg)ಅನನ್ಯ (57kg)ಇವರು ಚಿನ್ನದ ಪದಕ ಪಡೆಯುದರ ಮೂಲಕ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿ ಕಾಲೇಜಿಗೆ ಕೀರ್ತಿ ತಂದಿರುತ್ತಾರೆ. ಬೆಳ್ಳಿಯ ಪದಕ ಪಡೆದ ಸಾಧಕರು:ಪ್ರಜ್ವಲ್, ಶೋಭಿತ್,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕುಂಭಾಶಿ ಶಕ್ತಿ ಕೇಂದ್ರದ ವತಿಯಿಂದ ಪ್ರಧಾನಿ ಶ್ರೀ ನರೇಂದ್ರ ಮೋದಿಜೀ ಅವರ ಜನ್ಮದಿನಾಚರಣೆ ಹಾಗೂ ಅವರ 25 ವರ್ಷಗಳ ಸಾರ್ಥಕ ರಾಜಕೀಯ ಪಯಣದ ಪ್ರಯುಕ್ತ ಆನೆಗುಡ್ಡೆ ಶ್ರೀ ವಿನಾಯಕ ದೇವರ ಸನ್ನಿಧಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಕುಂದಾಪುರ ಮಂಡಲ ಅಧ್ಯಕ್ಷ ಸುರೇಶ್ ಶೆಟ್ಟಿ ಗೋಪಾಡಿ ಅವರು, “ನರೇಂದ್ರ ಮೋದಿಜೀ ಅವರ ಹುಟ್ಟುಹಬ್ಬದ ಸಂಭ್ರಮ ಹಾಗೂ 25 ವರ್ಷಗಳ ರಾಜಕೀಯ ಪಯಣವು ತ್ಯಾಗ, ಸೇವೆ ಮತ್ತು ರಾಷ್ಟ್ರ ನಿರ್ಮಾಣಕ್ಕೆ ಸಮರ್ಪಿತವಾದ ಪಯಣ. ಒಬ್ಬ ಸಾಮಾನ್ಯ ಕಾರ್ಯಕರ್ತನಾಗಿ ಆರಂಭಿಸಿ ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವದ ನಾಯಕನಾಗಿ ಬೆಳೆದಿರುವ ಅವರ ಬದುಕು ನಮಗೆಲ್ಲರಿಗೂ ಪ್ರೇರಣೆ. ಅವರಿಗೆ ಇನ್ನಷ್ಟು ಶಕ್ತಿ ದೊರೆಯಲಿ ಎಂದು ಆನೆಗುಡ್ಡೆ ವಿನಾಯಕನಲ್ಲಿ ಪ್ರಾರ್ಥಿಸಿದ್ದೇವೆ” ಎಂದರು. ಈ ಕಾರ್ಯಕ್ರಮದಲ್ಲಿ ಕುಂದಾಪುರ ಮಂಡಲ ಪ್ರಧಾನ ಕಾರ್ಯದರ್ಶಿ ಸುಧೀರ್ ಕೆ.ಎಸ್., ಮಂಡಲ ಉಪಾಧ್ಯಕ್ಷೆ ರೂಪಾ ಬಾಬು ಪೈ, ಕುಂಭಾಶಿ ಶಕ್ತಿ ಕೇಂದ್ರದ ಅಧ್ಯಕ್ಷ ಮಹೇಶ್ ಶೆಣೈ, ಪ್ರಮುಖರಾದ ರಾಜೇಶ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವ್ಯವಹಾರ ಆಡಳಿತ ವಿಭಾಗದ ಆಯೋಜನೆಯಲ್ಲಿ ನಡೆದ “ನೋವೆಷನ್” ಮ್ಯಾನೇಜ್ಮೆಂಟ್ ಫೆಸ್ಟ್ ಇಂಟರ್ ಕಂಪೆನಿ ಸ್ಪರ್ಧೆ ಕಾಲೇಜಿನ ಮೂಕಾಂಬಿಕಾ ಸಭಾಂಗಣದಲ್ಲಿ ಸಂಪನ್ನಗೊಂಡಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಕುಂದಾಪುರದ ಸುಪ್ರೀಂ ಟೈಲ್ಸ್ ನ ಆಡಳಿತ ನಿರ್ದೇಶಕರಾದ ಕೆ. ಜಯಕರ ಶೆಟ್ಟಿ ಮಾತನಾಡಿ, ವಿದ್ಯಾರ್ಥಿಗಳು ಸ್ವಾಮಿ ವಿವೇಕಾನಂದರಂತಹ ಮಹಾನ್ ವ್ಯಕ್ತಿಗಳ ಆದರ್ಶಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು. ಹಾಗೆಯೇ ಕಾರ್ಯಕ್ರಮದ ಆಯೋಜನೆ ಕುರಿತು ಮೆಚ್ಚುಗೆ ಮಾತುಗಳನ್ನಾಡಿ ವಿಜೇತರಿಗೆ ಬಹುಮಾನವನ್ನು ವಿತರಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ. ಉಮೇಶ್ ಶೆಟ್ಟಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಉಪ-ಪ್ರಾಂಶುಪಾಲರಾದ ಡಾ. ಚೇತನ್ ಶೆಟ್ಟಿ ಕೋವಾಡಿ ಶುಭಕೋರಿದರು. ವ್ಯವಹಾರ ಆಡಳಿತ ವಿಭಾಗದ ಮುಖ್ಯಸ್ಥರಾದ ನಂದಾ ರೈ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕಾರ್ಯಕ್ರಮದ ಸಂಯೋಜಕರಾದ ಹರೀಶ್ ಬಿ. ಹಾಗೂ ಅವಿತಾ ಕೊರೆಯಾ, ವಿದ್ಯಾರ್ಥಿ ಪ್ರತಿನಿಧಿಗಳಾದ ಅಂತಿಮ ಬಿ.ಬಿ.ಎ ರಾಕೇಶ್ ಹಾಗೂ ರಾಜೇಶ್ವರಿ ಉಪಸ್ಥಿತರಿದ್ದರು. ಸಹಾಯಕ ಪ್ರಾಧ್ಯಾಪಕರಾದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಕುಂದಾಪುರದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಸೆ.12ರಂದು ನಡೆದ ಜಿಲ್ಲಾಮಟ್ಟದ ಕುಸ್ತಿ ಪಂದ್ಯಾಟದಲ್ಲಿ ಮದರ್ ತೆರೇಸಾ ಮೆಮೋರಿಯಲ್ ಸ್ಕೂಲ್ನ 10ನೇ ತರಗತಿಯ ವಿದ್ಯಾರ್ಥಿ ಸಮಿತ್ ಶೆಟ್ಟಿ ಅವರು 110 ಕೆ.ಜಿ. ವಿಭಾಗದ 17ರ ವಯೋಮಾನದ ಬಾಲಕರ ಕುಸ್ತಿ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ. ತಮ್ಮ ಶಕ್ತಿ, ಕೌಶಲ್ಯ ಹಾಗೂ ಆತ್ಮವಿಶ್ವಾಸದ ಅದ್ಭುತ ಪ್ರದರ್ಶನದ ಮೂಲಕ ಎದುರಾಳಿಗಳನ್ನು ಮಣಿಸಿದ ಸಮಿತ್ ಶೆಟ್ಟಿ, ಜಿಲ್ಲಾಮಟ್ಟದಲ್ಲಿ ಪ್ರಥಮ ಸ್ಥಾನ ಅಲಂಕರಿಸುವುದರೊಂದಿಗೆ ರಾಜ್ಯಮಟ್ಟದ ಕುಸ್ತಿ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ. ಸಮಿತ್ ಶೆಟ್ಟಿಯ ಈ ಸಾಧನೆಗೆ ಶಾಲೆಯ ಆಡಳಿತ ಮಂಡಳಿ, ಪ್ರಾಂಶುಪಾಲರು, ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದು, ರಾಜ್ಯಮಟ್ಟದಲ್ಲಿಯೂ ಉತ್ತಮ ಪ್ರದರ್ಶನ ನೀಡಿ ಶಾಲೆ ಹಾಗೂ ಜಿಲ್ಲೆಗೆ ಕೀರ್ತಿ ತರಲಿ ಎಂದು ಶುಭ ಹಾರೈಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ಸೈಂಟ್ ಥಾಮಸ್ ಶಾಲೆಯಲ್ಲಿ ಹಿಂದಿ ದಿವಸ್ ಕಾರ್ಯಕ್ರಮವನ್ನು ಅತ್ಯಂತ ಸಂಭ್ರಮ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು. ಹಿಂದಿ ಭಾಷೆಯ ಮಹತ್ವವನ್ನು ವಿದ್ಯಾರ್ಥಿಗಳಿಗೆ ಪರಿಚಯಿಸುವುದರ ಜೊತೆಗೆ, ರಾಷ್ಟ್ರಾಭಿಮಾನ, ರಾಷ್ಟ್ರೀಯ ಏಕತೆ ಮತ್ತು ದೇಶಪ್ರೇಮದ ಭಾವನೆಗಳನ್ನು ಬೆಳೆಸುವ ಉದ್ದೇಶದಿಂದ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಪ್ರಾಂಶುಪಾಲರಾದ ವಂದನೀಯ ಫಾದರ್ ಫಿಲಿಪ್ ನೆಲ್ಲಿವಿಳಾ ಅವರು ವಹಿಸಿದ್ದರು. ಉಪ ಪ್ರಾಂಶುಪಾಲರು ಸಿಸ್ಟರ್ ಕಾರ್ಮೆಲ್ ಅವರ ಮಾರ್ಗದರ್ಶನದಲ್ಲಿ ಕಾರ್ಯಕ್ರಮವು ಯಶಸ್ವಿಯಾಗಿ ನಡೆಯಿತು. ಹಿಂದಿ ದಿವಸದ ಅಂಗವಾಗಿ ವಿದ್ಯಾರ್ಥಿಗಳಿಗಾಗಿ ವಿವಿಧ ಹಿಂದಿ ಭಾಷಾ ಚಟುವಟಿಕೆಗಳು, ಭಾಷಣ, ಕವನ ವಾಚನ, ದೇಶಭಕ್ತಿಗೀತೆಗಳು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು. ವಿಶೇಷವಾಗಿ ದೇಶದ ಏಕತೆ, ವೈವಿಧ್ಯತೆಯಲ್ಲಿ ಏಕತೆ ಮತ್ತು ದೇಶದ ಮೇಲಿನ ಪ್ರೀತಿಯನ್ನು ಸಾರುವ ಸಾಂಸ್ಕೃತಿಕ ಕಾರ್ಯಕ್ರಮಗಳು ಎಲ್ಲರ ಗಮನ ಸೆಳೆದವು. ಕಾರ್ಯಕ್ರಮದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಬಹುಮಾನ ಹಾಗೂ ಪ್ರಶಸ್ತಿ ವಿತರಣೆ…
