Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಆದಿವಾಸಿ ನಾಯಕ ಬಿರ್ಸಾ ಮುಂಡಾ ಅವರ ಜನ್ಮ ದಿನದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಜಾರ್ಖಂಡ್‌ನಲ್ಲಿ ಪಿಎಂ ಜನಮನ್ ಯೋಜನೆಗೆ ಚಾಲನೆ ನೀಡಿದ್ದರು. ಈ ಯೋಜನೆಯ ಮೂಲಕ ಆದಿವಾಸಿ ಸಮುದಾಯದ ಅಭಿವೃದ್ಧಿ, ಮೂಲಸೌಕರ್ಯಗಳಿಗೆ ಒತ್ತು ನೀಡುವ ಕೆಲಸ ಆಗುತ್ತಿದೆ. ರೂ.198.48ಲಕ್ಷ ವೆಚ್ಚದಲ್ಲಿ ಇಲ್ಲಿ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲಾಗಿದೆ. ಈ ಭಾಗದಲ್ಲಿ ರಸ್ತೆ ಅಭಿವೃದ್ಧಿಗೆ ದೊಡ್ಡ ಮೊತ್ತ ಇಲ್ಲಿಗೆ ಲಭಿಸಿದೆ ಎಂದು ಸಂಸದ ಬಿ. ವೈ.ರಾಘವೇಂದ್ರ ಹೇಳಿದರು. ಅವರು ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯ, ಬೈಂದೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಪ್ರಧಾನಮಂತ್ರಿ ಜನ್‌ಜಾತಿ ಆದಿವಾಸಿ ನ್ಯಾಯಾ ಮಹಾ ಅಭಿಯಾನ್ ಯೋಜನೆಯಡಿಯಲ್ಲಿ ಮಂಜೂರಾಗಿರುವ ಕಾಮಗಾರಿ ಎಲ್ 023 ಆತ್ರಾಡಿ ಪಿ.ವಿ.ಟಿ.ಜಿ ಹ್ಯಾಮ್ಲೆಟ್ ರಸ್ತೆ ಅಭಿವೃದ್ದಿ ಕಾಮಗಾರಿಗಳಿಗೆ ರೂ. 198.48ಲಕ್ಷ ಮಂಜೂರಾಗಿದ್ದು ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು. ಬೈಂದೂರು ಕ್ಷೇತ್ರದಲ್ಲಿ ಪಿಎಂ ಜನಮನ್ ಯೋಜನೆಯಲ್ಲಿ ರೂ.4.89 ಕೋಟಿ ವೆಚ್ಚದಲ್ಲಿ ರಸ್ತೆ ನಿರ್ಮಾಣವಾಗುತ್ತಿದೆ. ರೂ.1.80 ಕೋಟಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ:  ಸಿ.ಬಿ.ಎಸ್.ಇ ಬೋರ್ಡ್ ಹಾಗೂ ಪಿ.ಎಸ್.ಎಸ್.ಇ.ಎಂ.ಆರ್ ಶಾಲೆ ದಾವಣಗೆರೆ ಆಯೋಜಿಸಿರುವ ರಾಜ್ಯಮಟ್ಟದ ಸಿಬಿಎಸ್ಇ ಶಾಲಾ ಅಥ್ಲೆಟಿಕ್ಸ್ ಸ್ಪರ್ಧೆಯಲ್ಲಿ ಕುಂದಾಪುರ ಟ್ರ್ಯಾಕ್ ಅಂಡ್ ಫೀಲ್ಡ್ ಕ್ರೀಡಾಪಟು ಧನ್ವೀನ್ ರಾಮಕೃಷ್ಣ ಪೂಜಾರಿ ಅವರು ಹದಿನಾಲ್ಕು ವರ್ಷದ ಒಳಗಿನ ಬಾಲಕರ ವಿಭಾಗದ ಉದ್ದ ಜಿಗಿತ ಸ್ಪರ್ಧೆಯಲ್ಲಿ ಕಂಚಿನ ಪದಕವನ್ನು ಗೆದ್ದುಕೊಂಡಿದ್ದಾರೆ. ವಿಜೇತ ಕ್ರೀಡಾಪಟುವಿಗೆ ಕುಂದಾಪುರ ಟ್ರ್ಯಾಕ್ ಅಂಡ್ ಫೀಲ್ಡ್ ಅಥ್ಲೆಟಿಕ್ಸ್ ಅಕಾಡೆಮಿಯ ಮುಖ್ಯಸ್ಥ ಪ್ರಶಾಂತ್ ಶೆಟ್ಟಿಯವರು ಅಭಿನಂದನೆ ತಿಳಿಸಿದ್ದಾರೆ

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಸಾರ್ವಜನಿಕ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕುಂದಾಪುರ ಇವರ ನೇತೃತ್ವದಲ್ಲಿ ಆಯೋಜಿಸಿರುವ ಕುಂದಾಪುರ ತಾಲೂಕು ಮಟ್ಟದ 17ರ ವಯೋಮಾನದ ಹುಡುಗರ ಕ್ರಿಕೆಟ್ ಪಂದ್ಯಾಟದಲ್ಲಿ ಯಡಾಡಿ ಮತ್ಯಾಡಿಯಲ್ಲಿರುವ ವಿದ್ಯಾರಣ್ಯ ಆಂಗ್ಲಮಾಧ್ಯಮ ಶಾಲೆಯ ಹುಡುಗರ ತಂಡವು ದ್ವೀತಿಯ ಸ್ಥಾನ ಪಡೆಯಿತು. ತಂಡದ ಐವರು ವಿದ್ಯಾರ್ಥಿಗಳಾದ ಆಯುಷ್ ಶೆಟ್ಟಿ, ಅನುಜ್ ಅಂಬ್ಲಿ, ಕನಿಷ್ಕ್, ಸನ್ವಿತ್ ಮತ್ತು ಅಭಿಷ್ ಜಿಲ್ಲಾ ಮಟ್ಟದ ಕ್ರಿಕೆಟ್ ತಂಡಕ್ಕೆ ಆಯ್ಕೆಯಾಗಿದ್ದಾರೆ. ಸಮಾರೋಪ ಸಮಾರಂಭದಲ್ಲಿ ವಿಜೇತರಿಗೆ ಫಲಕ ಪದಕ ಮತ್ತು ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು. ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷ ಡಾ. ರಮೇಶ್ ಶೆಟ್ಟಿ, ಕಾರ್ಯದರ್ಶಿ ಪ್ರತಾಪ್ ಚಂದ್ರ ಶೆಟ್ಟಿ, ಖಜಾಂಚಿ ಭರತ್ ಶೆಟ್ಟಿ ಹಾಗೂ ಮುಖ್ಯೋಪಾಧ್ಯಾಯರಾದ ಪ್ರದೀಪ್. ಕೆ ವಿಜೇತ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ. ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕ ಸತೀಶ್ ಕುಮಾರ್ ಹಾಗೂ ಸೂರ್ಯ ಕ್ರೀಡಾಪಟುಗಳಿಗೆ ತರಬೇತಿ ನೀಡಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯ ನಿರಂತರ ಸಾಧನೆಯನ್ನು ಗಮನಿಸಿ ಆಸ್ಟಿನ್‌ನಲ್ಲಿ ನೆಲೆಸಿರುವ ಪ್ರೋಜೆಕ್ಟ್ ಮೆನೇಜರ್ (ಎಸ್.ಎಲ್.ಕೆ.) ರಾಜೇಶ್ ರತ್ನಾಕರ್ ಪೈ ಅವರು ಗೊಂಬೆಯಾಟ ಅಕಾಡೆಮಿಗೆ 55 ಇಂಚಿನ ಟಿ.ಸಿ.ಎಲ್. ಟಿ.ವಿ.ಯನ್ನು ಇತ್ತೀಚಿಗೆ ಕೊಡುಗೆಯಾಗಿ ನೀಡಿದ್ದಾರೆ. ರಾಜೇಶ್ ರತ್ನಾಕರ್ ಪೈ ಅವರ ತಂದೆ ಎಮ್. ರತ್ನಾಕರ್ ಪೈ ಮತ್ತು ತಾಯಿ ರಾಜಶ್ರೀ ಆರ್.ಪೈ ಅವರು ಇದನ್ನು ಅಕಾಡೆಮಿ ಅಧ್ಯಕ್ಷ ಭಾಸ್ಕರ್ ಕೊಗ್ಗ ಕಾಮತ್ ಅವರಿಗೆ ಹಸ್ತಾಂತರಿಸಿದರು. ಈ ವೇಳೆನಿವೃತ್ತ ಮುಖ್ಯೋಪಾಧ್ಯಾಯ ನಾಗೇಶ್ ಶ್ಯಾನುಭಾಗ್ ಬಂಟ್ವಾಡಿ, ನಿವೃತ್ತ ಶಿಕ್ಷಕ ಉದಯ ಭಂಡಾರ್‌ಕಾರ್ ಹಟ್ಟಿಯಂಗಡಿ ಹಾಗೂ ನೇತಾಜಿ ಕಮಿಟಿ ಫ್ರೆಂಡ್ಸ್ ನ ರಾಜೇಂದ್ರ ಪೈ ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: 2025-26ನೇ ಸಾಲಿನ ಉಡುಪಿ ಜಿಲ್ಲಾ ಮಟ್ಟದ ಕಿರಿಯ ಪ್ರಾಥಮಿಕ, ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗಗಳಿಂದ ಒಟ್ಟು 15 ಮಂದಿ ಶಿಕ್ಷಕರುಗಳನ್ನು ಉತ್ತಮ ಶಿಕ್ಷಕರ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಕಿರಿಯ ಪ್ರಾಥಮಿಕ ಶಾಲಾ ವಿಭಾಗ:ಸರಸ್ವತಿ (ಸಹ ಶಿಕ್ಷಕರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಮರೂರು ಕುಂದಾಪುರ), ವಸುಂಧರ (ಸಹ ಶಕ್ಷಕರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಗುಡ್ಡೆಯಂಗಡಿ ಬೊಮ್ಮಾರಬೆಟ್ಟು), ಹರೀಶ್ ಪೂಜಾರಿ (ಸಹಶಿಕ್ಷಕರು, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಪಡುಕುಡೂರು ಕಾರ್ಕಳ ತಾಲೂಕು), ಸುಮಂಗಲಾ ಗಾಣಿಗ (ಸಹ ಶಿಕ್ಷಕರು, ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಕಿಸ್ಮತಿ ಬೈಂದೂರು ವಲಯ) ವಿಜಯ ಎ (ಸಹ ಶಿಕ್ಷಕರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಮೂಡುಕೆರೆ ಅಚ್ಲಾಡಿ ಬ್ರಹ್ಮಾವರ ವಲಯ) ಹಿರಿಯ ಪ್ರಾಥಮಿಕ ಶಾಲಾ ವಿಭಾಗ:ಶೇಖರ ಕುಮಾರ (ಮುಖ್ಯ ಶಿಕ್ಷಕರು, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹೆಸ್ಕತ್ತೂರು ಕುಂದಾಪುರ), ವೀಣಾ (ಸಹ ಶಿಕ್ಷಕರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಂಗಾರಕಟ್ಟೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಬೆಳ್ಳಾಲ, ನಾಡ ಹಾಗೂ 74 ಉಳ್ಳೂರು ಗ್ರಾಮದಲ್ಲಿ “PMJANMAN” ಯೋಜನೆಯಡಿ ಸುಮಾರು ರೂ. 1.80 ಕೋಟಿ ಅನುದಾನದಲ್ಲಿ ನಿರ್ಮಿಸಲು ಉದ್ದೇಶಿಸಿರುವ “Multi Purpose Center (MPC)” ಕಾಮಗಾರಿಗಳಿಗೆ ಸಂಸದ ಬಿ.ವೈ ರಾಘವೇಂದ್ರ ಅವರು ಗುರುವಾರದಂದು ಶಂಕು ಸ್ಥಾಪನೆ ನೆರವೇರಿಸಿದರು. ಶಾಸಕರಾದ ಗುರುರಾಜ್ ಗಂಟಿಹೊಳೆ, ಮಂಡಲದ ಅಧ್ಯಕ್ಷರಾದ ಅನಿತಾ ಆರ್‌ ಕೆ., ಸೇರಿದಂತೆ ಬಿಜೆಪಿ ಪಕ್ಷದ ಮುಖಂಡರು ಮತ್ತು ಗಣ್ಯರು ಉಪಸ್ಥಿತರಿದ್ದರು. ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ:ಬೈಂದೂರು ವಿಧಾನಸಭಾ ವ್ಯಾಪ್ತಿಯ ವಂಡ್ಸೆ, ಹರ್ಕೂರು, 74 ಉಳ್ಳೂರು ಗ್ರಾಮಗಳಲ್ಲಿ “PMJANMAN” ಯೋಜನೆಯಡಿ ಸುಮಾರು ರೂ. 4.35 ಕೋಟಿಗಳ ಅನುದಾನದಲ್ಲಿ ಅಭಿವೃದ್ಧಿ ಪಡಿಸಲು ಉದ್ದೇಶಿಸಿರುವ ರಸ್ತೆ ಕಾಮಗಾರಿಗಳಿಗೆ ಸಂಸದ ಬಿ.ವೈ ರಾಘವೇಂದ್ರ ಅವರು ಶಂಕು ಸ್ಥಾಪನೆ ನೆರವೇರಿಸಿ, ನೂಜಾಡಿ ಗ್ರಾಮದಲ್ಲಿ ನಡೆಯುತ್ತಿರುವ ರಸ್ತೆ ಕಾಮಗಾರಿ ವೀಕ್ಷಣೆ ಮಾಡಿದರು. ಈ ವೇಳೆ ಶಾಸಕರಾದ ಗುರುರಾಜ್ ಗಂಟಿಹೊಳೆ, ಮಂಡಲದ ಅಧ್ಯಕ್ಷರಾದ ಅನಿತಾ ಆರ್‌ ಕೆ., ಸೇರಿದಂತೆ ಬಿಜೆಪಿ ಪಕ್ಷದ ಮುಖಂಡರು ಮತ್ತು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಭಾರತೀಯ ಸೇನೆ /ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ) ಗಳ ಅರ್ಹ ಅಭ್ಯರ್ಥಿಗಳಿಗೆ ಆಯ್ಕೆಯ ಪೂರ್ವ ಸಿದ್ಧತೆ ಬಗ್ಗೆ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಯನ್ನು ಉಚಿತವಾಗಿ ನೀಡಲಾಗುತ್ತಿದ್ದು, ಜಿಲ್ಲೆಯ ಅರ್ಹ ಅಭ್ಯರ್ಥಿಗಳಿಂದ (ಬಾಲಕರು ಮಾತ್ರ) ಅರ್ಜಿ ಆಹ್ವಾನಿಸಲಾಗಿದೆ. ಬ್ರಹ್ಮಾವರ ತಾಲೂಕು ಬಾರ್ಕೂರು ಹನೆಹಳ್ಳಿ ನ್ಯಾಷನಲ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದ್ದು, ಅಭ್ಯರ್ಥಿಯು 2005 ರ ಸೆಪ್ಟಂಬರ್ 26 ರಿಂದ 2008ರ ಸೆಪ್ಟಂಬರ್ 26 ರ ಅವಧಿಯಲ್ಲಿ ಜನಿಸಿರುವ ಅರ್ಹರು ಸೆಪ್ಟಂಬರ್ 26 ರ ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಹ ಅಭ್ಯರ್ಥಿಗಳನ್ನು ನಗರದ ಅಜ್ಜರಕಾಡು ಮಹಾತ್ಮಗಾಂಧಿ ಮೈದಾನದಲ್ಲಿ ಅಕ್ಟೋಬರ್ 6 ರಂದು ನಡೆಯುವ ರ‍್ಯಾಲಿಯಲ್ಲಿ ಆಯ್ಕೆ ಮಾಡಲಾಗುವುದು. ಸದರಿ ರ‍್ಯಾಲಿಯಲ್ಲಿ ಭಾಗವಹಿಸಲು ಇಚ್ಛೆ ಇರುವ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಹಿಂದುಳಿದ ವರ್ಗಗಳ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಕಾರಂತ ಪ್ರತಿಷ್ಠಾನ ಕೋಟ, ಕೋಟತಟ್ಟು ಗ್ರಾಮ ಪಂಚಾಯತ್, ಹಾಜಿ ಅಬ್ದುಲ್ಲ ಸಾಹೇಬ್ ಮೆಮೋರಿಯಲ್ ಚಾರಿಟೇಬಲ್ ಟ್ರಸ್ಟ್  ಉಡುಪಿ, ರೋಟರಿ ಕ್ಲಬ್ ಕೋಟ ಸಿಟಿ, ಉಸಿರು ಕೋಟ ಇವರ ಸಾರಥ್ಯದಲ್ಲಿ ಕೊಡಮಾಡುವ ಶಿವರಾಮ ಕಾರಂತ ಶಿಕ್ಷಕ ಪುರಸ್ಕಾರಕ್ಕೆ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರ ಸೂಚನೆಗೆ ಆಹ್ವಾನ ನೀಡಲಾಗಿದೆ. ಸೂಚನೆ ಮಾಡುವ ಪ್ರತಿನಿಧಿಗಳು ಸೂಚಿಸುವ ಶಿಕ್ಷಕರ ಹೆಸರು ಮತ್ತು 5 ಕಾರಣಗಳನ್ನು ವಾಟ್ಸಪ್ ಮೂಲಕ ಈ ನಂಬರಿಗೆ 9663750499 ಕಳಿಸಬೇಕಾಗಿ ಪ್ರತಿಷ್ಠಾನದ ಗೌರವಾಧ್ಯಕ್ಷರಾದ ಆನಂದ್ ಸಿ. ಕುಂದರ್, ಅಧ್ಯಕ್ಷರಾದ ಸತೀಶ್ ಕುಂದರ್ ಬಾರಿಕೆರೆ, ಕಾರ್ಯದರ್ಶಿ ನರೇಂದ್ರ ಕುಮಾರ್ ಕೋಟ, ಉಪಾಧ್ಯಕ್ಷರಾದ ಸರಸ್ವತಿ, ಪಿಡಿಒ ರವೀಂದ್ರ ರಾವ್, ಕಾರ್ಯದರ್ಶಿ ಸುಮತಿ ಅಂಚನ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇತ್ತಿಚಿಗೆ ಬೆಂಗಳೂರಿನ ಸೈಂಟ್ ಜೋಸೆಫ್ ಬಾಯ್ಸ್ ಹೈಸ್ಕೂಲ್ ಹಾಲಿನಲ್ಲಿ ನಡೆದ ವರ್ಡ್‌ಕ್ಯಾಂಪ್‌ 2025 ವೇದಿಕೆಯ ಸೆಷನ್‌ನಲ್ಲಿ ಕುಂದಾಪುರದ ಮಿಲ್ಲೇನಿಯಲ್ ಡ್ಯುಯೋ ಜೋಡಿಗಳಾದ ಕೆ ಕೀರ್ತಿ ಪ್ರಭು ಮತ್ತು ವಿ ಗೌತಮ್ ನಾವಡ ಅವರು “ ಟೆಸ್ಟರ್‌ನಂತೆ ಯೋಚಿಸುವುದು: ಕ್ಲೈಂಟ್‌ಗಿಂತ ಮೊದಲು ಬಗ್ಗ್‌ಗಳನ್ನು ಪತ್ತೆಹಚ್ಚುವುದು” ವಿಷಯ ಮಂಡನೆ ಮಾಡಿದರು. ಸೆಷನ್‌ನಲ್ಲಿ, ಡೆವಲಪರ್‌ಗಳು ಮತ್ತು ಡಿಸೈನರ್‌ಗಳು ಟೆಸ್ಟಿಂಗ್‌ನ್ನು ಅಂತಿಮ ಹಂತವಾಗಿ ನೋಡದೆ, ಪ್ರತಿದಿನದ ಕೆಲಸದಲ್ಲಿ ಒಂದು ಮನೋಭಾವವಾಗಿ ಅಳವಡಿಸಿಕೊಳ್ಳಬೇಕೆಂಬ ಸಂದೇಶವನ್ನು ಹಂಚಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಬೆಂಗಳೂರು ಸೇರಿದಂತೆ ದೇಶದ ವಿವಿಧ ಭಾಗಗಳಿಂದ 250ಕ್ಕೂ ಹೆಚ್ಚು ವರ್ಡ್‌ಪ್ರೆಸ್ ಅಭಿಮಾನಿಗಳು ಪಾಲ್ಗೊಂಡರು. ದಿನಪೂರ್ತಿ ನಡೆದ ಉಪನ್ಯಾಸಗಳು, ನೆಟ್‌ವರ್ಕಿಂಗ್ ಮತ್ತು ಸಮುದಾಯ ಚಟುವಟಿಕೆಗಳಲ್ಲಿ ಇವರ ಸೆಷನ್ ಪ್ರಾಯೋಗಿಕ ಪರೀಕ್ಷೆಗಳು ನಡೆದವು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹೆಮ್ಮಾಡಿಯ ಜನತಾ ಪದವಿ ಪೂರ್ವ ಕಾಲೇಜು, ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ವಿಭಾಗ ಉಡುಪಿ ಇವರ ಆಸರೆಯಲ್ಲಿ ಜಿಲ್ಲಾ ಮಟ್ಟದ ಪದವಿ ಪೂರ್ವ ಬಾಲಕ ಬಾಲಕಿಯರ ಕುಸ್ತಿ ಪಂದ್ಯಾಟವು ಜನತಾ ಪಿಯು ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯಿತು. ಕುಸ್ತಿ ಪಂದ್ಯಾಟವು ಬಾಲಕರ ವಿಭಾಗದ ಫ್ರಿ ಸ್ಟೆಲ್ ಹಾಗೂ ಗ್ರಿಕೋ ರೋಮನ್ ಮತ್ತು ಬಾಲಕಿಯರ ವಿಭಾಗ ದಲ್ಲಿ ನಡೆಯಿತು. ಉಡುಪಿ ಜಿಲ್ಲೆಯ ವಿವಿಧ ಪದವಿ ಪೂರ್ವ ಕಾಲೇಜುಗಳ ಸುಮಾರು 160ವಿದ್ಯಾರ್ಥಿಗಳು ಈ ಪಂದ್ಯಾಟದಲ್ಲಿ ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಂಡರು. ಈ ಪಂದ್ಯಾಟದಲ್ಲಿ ಜನತಾ ಪದವಿ ಪೂರ್ವ ಕಾಲೇಜಿನ 14ವಿದ್ಯಾರ್ಥಿಗಳು ಚಿನ್ನದ ಪದಕ 2ವಿದ್ಯಾರ್ಥಿಗಳು ಬೆಳ್ಳಿಯ ಪದಕ 8ವಿದ್ಯಾರ್ಥಿಗಳು ಕಂಚಿನ ಪದಕ ಪಡೆದು ಸತತವಾಗಿ 4ನೇ ಬಾರಿ ಸಮಗ್ರ ಪ್ರಶಸ್ತಿಯನ್ನು ತಮ್ಮ ಮುಡಿಗೇರಿಕೊಂಡರು. ವಿದ್ಯಾರ್ಥಿಗಳಾದ ರತ್ವಿಕ್, ಸೌಲತ್, ಪನ್ನಗ್, ಶಶಾಂಕ್, ಮಂದಿರ್ ಶೆಟ್ಟಿ, ಸ್ವಸ್ತಿಕ್, ಕಿಶನ್, ಆದಿತ್ಯ, ಪ್ರಣಿತ್, ಗಾಯತ್ರಿ, ಆರ್ಯನ್, ವಿಜಯ್, ಮಂಥನ್, ಸೃಜನ್ ಅವರು ಚಿನ್ನದ…

Read More