ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯು ಮಾರ್ಚ್ 18 ರಿಂದ ಏಪ್ರಿಲ್ 22 ವರೆಗೆ ಜಿಲ್ಲೆಯ 51 ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷೆಯಲ್ಲಿ ಯಾವುದೇ ಗೊಂದಲಗಳಿಗೆ ಆಸ್ಪದ ನೀಡದಂತೆ ವಿದ್ಯಾರ್ಥಿಗಳು ಸುಗಮವಾಗಿ ಭಯ ಮುಕ್ತ ವಾತಾವರಣದಲ್ಲಿ ಪರೀಕ್ಷೆ ಬರೆಯಲು ಪೂರಕ ವಾತಾವರಣ ಕಲ್ಪಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಸೂಚನೆ ನೀಡಿದರು. ಅವರು ಗುರುವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಎಸ್.ಎಸ್.ಎಲ್.ಸಿ ಪರೀಕ್ಷೆಯ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಕ್ಕಳ ಭವಿಷ್ಯ ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸುವ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಲೋಪದೋಷಗಳಾಗದಂತೆ ಪರೀಕ್ಷಾ ಪಾವಿತ್ರ್ಯತೆ ಕಾಪಾಡುವುದರೊಂದಿಗೆ ಸುಲಲಿತವಾಗಿ ನಡೆಸಲು ಅಗತ್ಯವಿರುವ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಬೇಕು. ಇದಕ್ಕೆ ಜಿಲ್ಲಾಡಳಿತದ ವತಿಯಿಂದ ಸಂಪೂರ್ಣ ಸಹಕಾರ ನೀಡಲಾಗುವುದು ಎಂದ ಅವರು, ಜಿಲ್ಲೆಯು ಪ್ರತಿಶತಃ ನೂರರಷ್ಟು ಫಲಿತಾಂಶವನ್ನು ದಾಖಲಿಸಲು ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದರು. ಜಿಲ್ಲೆಯಲ್ಲಿ ಹೊಸದಾಗಿ 13,516 ವಿದ್ಯಾರ್ಥಿಗಳು, 295 ರೆಗ್ಯೂಲರ್ ಪುನರಾವರ್ತಿತ ಅಭ್ಯರ್ಥಿಗಳು,…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ದಕ್ಷಿಣ ಭಾರತದ ಪ್ರಸಿದ್ದ ತೀರ್ಥಕ್ಷೇತ್ರಗಳಲ್ಲೊಂದಾದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಯ ವಾರ್ಷಿಕ ಮನ್ಮಹಾರಥೋತ್ಸವ ಸೋಮವಾರ ಸಡಗರ ಸಂಭ್ರಮದಿಂದ ಜರುಗಿತು. ಕೊಲ್ಲೂರು ಕ್ಷೇತ್ರದ ಅಧಿದೇವತೆ ಹಾಗೂ ಗ್ರಾಮದೇವತೆ ಶ್ರೀ ಮೂಕಾಂಬಿಕಾ ಅಮ್ಮನವರ ವಾರ್ಷಿಕ ಜಾತ್ರಾ ಮಹೋತ್ಸವಕ್ಕೆ ಧ್ವಜಾರೋಹಣದೊಂದಿಗೆ ಚಾಲನೆ ನೀಡಲಾಗಿತ್ತು. ರಥೋತ್ಸವದ ಪ್ರಯುಕ್ತ ಊರಿನ ಹತ್ತು ಸಮಸ್ತರು, ಭಕ್ತಾದಿಗಳು ಸೇರಿ ತಮ್ಮ ಅಂಗಡಿ ಮುಂಗಟ್ಟು, ಮನೆ, ಬೀದಿಗಳನ್ನು ವಿಶೇಷವಾದ ವಿದ್ಯುದ್ದೀಪಗಳಿಂದ ಅಲಂಕರಿಸಿದ್ದರು. ವಾರ್ಷಿಕ ಉತ್ಸವದ ಪ್ರಯುಕ್ತ ಕಳೆದ ರಾಜ್ಯ-ಹೊರರಾಜ್ಯದ ಕಲಾವಿದರಿಂದ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ರಥೋತ್ಸವದ ಸಂದರ್ಭ ಸಾವಿರಾರು ಭಕ್ತರು ಪಾಲ್ಗೊಂಡು ಪುನೀತರಾದರು. ದೇವಳದ ತಂತ್ರಿ, ವ್ಯವಸ್ಥಾಪನಾ ಸಮಿತಿ ಸದಸ್ಯ ನಿತ್ಯಾನಂದ ಅಡಿಗ ಧಾರ್ಮಿಕ ವಿಧಿ ನೆರವೇರಿಸಿದರು. ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ, ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ, ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಾಬು ಶೆಟ್ಟಿ, ಸದಸ್ಯರಾದ ಧನಾಕ್ಷಿ ಪೂಜಾರಿ, ಸುರೇಂದ್ರ ಶೆಟ್ಟಿ, ಉಪ್ಪಿನಕುದ್ರು ರಾಜೇಶ್ ಕಾರಂತ, ಮಹಾಲಿಂಗ ನಾಯ್ಕ್, ಸುಧಾ ಕೆ.,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಮಾ.12: ಯುದ್ಧ ಸನ್ನಿವೇಶದ ಹಿನ್ನೆಲೆ, ಅನಿಲ ಕೊರತೆ ಉಂಟಾಗುತ್ತದೆ ಎಂದು ಸಾರ್ವಜನಿಕರು ಏಕಕಾಲದಲ್ಲಿ ಅನಿಲ ಸಂಪರ್ಕಕ್ಕೆ ಬುಕ್ಕಿಂಗ್ ಮಾಡುತ್ತಿದ್ದು, ಇದರಿಂದ ಬುಕ್ಕಿಂಗ್ ಕ್ರ್ಯಾಷ್ ಆಗುತ್ತಿದೆ. ಸಾರ್ವಜನಿಕ ಆಸ್ಪತ್ರೆಗಳು, ವಸತಿ ನಿಲಯಗಳು, ಗೃಹಬಳಕೆ, ಅತೀ ಅವಶ್ಯಕ ವಸ್ತುಗಳನ್ನು ಉತ್ಪಾದಿಸುವ ಕೈಗಾರಿಕಾ ಘಟಕಗಳು, ಸೇರಿದಂತೆ ಸಾರ್ವಜನಿಕರ ಬೇಡಿಕೆಗೆ ಅನುಗುಣವಾಗಿ ಆದ್ಯತೆಯ ಮೇಲೆ ಅನಿಲ ಪೂರೈಸಲು ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚನೆ ನೀಡಿದರು. ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯಲ್ಲಿ ಪ್ರಸ್ತುತ ಗೃಹ ಬಳಕೆಯ ಎಲ್ಪಿಜಿ ಗ್ಯಾಸ್ ಮತ್ತು ವಾಣಿಜ್ಯ ಬಳಕೆಯ ಗ್ಯಾಸ್ ಬಗ್ಗೆ ಗ್ಯಾಸ್ ಏಜೆನ್ಸಿ ಮಾಲೀಕರೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಮಧ್ಯಪ್ರಾಚ್ಯ ದೇಶಗಳಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮದಿಂದ ದೇಶದಲ್ಲಿ ಅಡುಗೆ ಅನಿಲ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಬಹುದು ಎಂಬ ಸಾಮಾಜಿಕ ಜಾಲ ತಾಣಗಳಲ್ಲಿ ಹರಿದಾಡುತ್ತಿರುವ ವಂದತಿಗಳಿಗೆ ಜಿಲ್ಲೆಯ ಸಾರ್ವಜನಿಕರು ಕಿವಿಗೊಡದಂತೆ ಅವರುಗಳಿಗೆ ಪ್ರಸ್ತುತ ಸನ್ನಿವೇಶವನ್ನು ವಿವರಿಸಿ, ಅರಿವು ಮೂಡಿಸಬೇಕು. ಜಿಲ್ಲೆಯಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಇಲ್ಲಿನ ಕೋಟ ಮಣೂರು ಮಹಾಲಿಂಗೇಶ್ವರ ಜಾತ್ರೆಯ ಪ್ರಯುಕ್ತ ಪ್ರತಿವರ್ಷ ಮಣೂರು ಫ್ರೆಂಡ್ಸ್ ಮಣೂರು ಆಶ್ರಯದಲ್ಲಿ ನಡೆಯುತ್ತಿರುವ ಸಾಂಸ್ಕೃತಿಕ ಪರ್ವಕ್ಕೆ ಬೆಳ್ಳಿ ಹಬ್ಬದ ಸಂಭ್ರಮ. ಈ ಪ್ರಯುಕ್ತ ರಜತ ಸಂಭ್ರಮ ಶೀರ್ಷಿಕೆಯಡಿ ವಿವಿಧ ಸಾಮಾಜಿಕ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸುತ್ತಿದ್ದು ಇದರ ಆಮಂತ್ರಣ ಪತ್ರಿಕೆಯನ್ನು ಮಣೂರು ಮಹಾಲಿಂಗೇಶ್ವರ ದೇಗುಲ ಆಡಳಿತ ಮಂಡಳಿಯ ಅಧ್ಯಕ್ಷ ಸತೀಶ್ ಹೆಚ್. ಕುಂದರ್ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಮಣೂರು ಫ್ರೆಂಡ್ಸ್ ಅಧ್ಯಕ್ಷ ರಾಘವೇಂದ್ರ ಆಚಾರ್, ಗೌರವ ಸಲಹೆಗಾರ ಸುಬ್ರಾಯ ಆಚಾರ್, ಗೌರವಾಧ್ಯಕ್ಷ ಸುರೇಶ್ ಆಚಾರ್, ದೇಗುಲದ ಟ್ರಸ್ಟಿ ಅಶೋಕ್ ಶೆಟ್ಟಿ ಕೊಯ್ಕೂರು, ಸಂಘದ ಪ್ರಮುಖರಾದ ಸುಧಾಕರ ಆಚಾರ್, ದಿನೇಶ್ ಆಚಾರ್, ದೇಗುಲದ ಜೀರ್ಣೋದ್ಧಾರ ಸಮಿತಿಯ ಪ್ರಮುಖರಾದ ವಿಷ್ಣುಮೂರ್ತಿ ಮಯ್ಯ, ಅರುಣಾಚಲ ಮಯ್ಯ, ಶಿವರಾಮ ಶೆಟ್ಟಿ, ಗೋಪಾಲ ಪೈ, ಸುರೇಶ್ ಶೆಟ್ಟಿ, ನಾಗರಾಜ್ ಅಮೀನ್ ಸೇರಿದಂತೆ ಅನೇಕ ಗಣ್ಯರು, ಮಣೂರು ಫ್ರೆಂಡ್ಸ್ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಸಾಲಿಗ್ರಾಮ ಪಟ್ಟಣ ಪಂಚಾಯತ್ ಘನತ್ಯಾಜ್ಯ ನಿರ್ವಹಣೆಗೆ ಉಳ್ತೂರು ಗ್ರಾಮದಲ್ಲಿ ಖರೀದಿಸಿದ ಸ್ಥಳಕ್ಕೆ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಬುಧವಾರ ಭೇಟಿ ನೀಡಿದರು. ಈ ಸಂರ್ದದಲ್ಲಿ ಸ್ಥಳದಲ್ಲಿ ಸ್ಥಳೀಯ ಗ್ರಾಮಸ್ಥರು ಸ್ಥಳದಲ್ಲಿ ಯಾವುದೇ ಘಟಕ ನಿರ್ಮಾಣ ಮಾಡದಂತೆ ಆಕ್ಷೇಪಣೆ ವ್ಯಕ್ತಪಡಿಸಿದರು. ಜಿಲ್ಲಾಧಿಕಾರಿ ಅವರು ಸಾರ್ವಜನಿಕರಲ್ಲಿ ಸರಕಾರದ ಯೋಜನೆಯ ಉಪಯೋಗದ ಬಗ್ಗೆ ಈ ಯೋಜನೆಯಿಂದ ಸಾರ್ವಜನಿಕರಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗುವುದಿಲ್ಲವೆಂದು ಇದನ್ನು ಸದುಪಯೋಗಿಸುವಂತೆ ಮನವರಿಕೆ ಮಾಡಿದರು. ಸಾಲಿಗ್ರಾಮ ಪಟ್ಟಣಪಂಚಾಯತ್ ಮುಖ್ಯಾಧಿಕಾರಿ ಅಜಯ್ ಭಂಡಾರ್ಕಾರ್ ಸ್ಥಳೀಯರಲ್ಲಿ ಮುಂದಿನ ದಿನಗಳಲ್ಲಿ ಗ್ರಾಮ ಪಂಚಾಯತ್ ಕೂಡ ಎನ್‌ಜಿಟಿ ನಿರ್ದೇಶನವನ್ನು ಪಾಲಿಸಬೇಕಾಗುತ್ತದೆ. ಸುತ್ತಮುತ್ತಲಿನ ಗ್ರಾಮ ಪಂಚಾಯತ್‌ನ ಬಳಸಿದ ನೀರನ್ನು ಸಹಾ ಈ ಘಟಕದಲ್ಲಿ ವಿಲೇಮಾಡಿದ್ದಲ್ಲಿ ಗ್ರಾಮ ಪಂಚಾಯತ್‌ಗೂ ಸಹಾ Infrastructure ನ ಮೊತ್ತವನ್ನು ಉಳಿಸಬಹುದಾಗಿರುವುದಾಗಿ ತಿಳಿಸಿದರು. ಈ ಬಗ್ಗೆ ಸ್ಥಳೀಯರು ತೀವ್ರ ವಿರೋಧ ವ್ಯಕ್ತಪಡಿಸಿರುವುದರಿಂದ ಜಿಲ್ಲಾಧಿಕಾರಿಯವರು ಉಳ್ತೂರು ಗ್ರಾಮದ ಸ್ಥಳೀಯರನ್ನು ಈಗಾಗಲೇ ಉಡುಪಿ ಜಿಲ್ಲೆಯ ಬೈಂದೂರು ಪಟ್ಟಣ ಪಂಚಾಯತ್ ಮತ್ತು ಕಾಪು ಪುರಸಭೆಯಲ್ಲಿನ ಘಟಕವನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಐಎಂಜೆ ಇನ್ಸ್ಟಿಟ್ಯೂಶನ್ ಅಧ್ಯಕ್ಷರಾದ ಸಿದ್ದಾರ್ಥ್ ಜೆ. ಶೆಟ್ಟಿ ಅವರ ದೂರ ದೃಷ್ಟಿ ಹಾಗೂ ಮಾರ್ಗದರ್ಶನದ ಅಡಿಯಲ್ಲಿ, ವಿದ್ಯಾರ್ಥಿಗಳಲ್ಲಿ ಸಂವಹನ ಕೌಶಲ್ಯ, ಸೃಜನಶೀಲತೆ ಹಾಗೂ ಮಾಧ್ಯಮ ಸಂಬಂಧಿತ ಜ್ಞಾನವನ್ನು ಅಭಿವೃದ್ಧಿ ಪಡಿಸುವ ಹಾಗೂ ಹೊಸ ಕೌಶಲ್ಯಗಳ ಬೆಳೆಸುವ ಉದ್ದೇಶದಿಂದ ” ಪ್ರೇಮ್ ಎಕ್ಸ್ (Frame X)” ಹೆಸರಿನ ಮೀಡಿಯಾ ಕ್ಲಬ್ ಅನ್ನು ಉದ್ಘಾಟಿಸಲಾಯಿತು. ಕಾರ್ಯಕ್ರಮದಲ್ಲಿ ಕುಂದಾಪುರ ತಾಲ್ಲೂಕಿನ ಪತ್ರಕರ್ತರ ಸಂಘದ ಅಧ್ಯಕ್ಷರಾದ ನಾಗರಾಜ್ ರಾಯಪ್ಪನಮಠ ಅವರು ಆಗಮಿಸಿ, ಬ್ಯಾನರ್ ಅನಾವರಣ ಹಾಗೂ ದೀಪ ಪ್ರಜ್ವಲನಗೊಳಿಸುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಮಾಧ್ಯಮದವರ ಪ್ರಯತ್ನ, ಕಷ್ಟ ಹಾಗೂ ವೃತ್ತಿ ಜೀವನದಲ್ಲಿ ಎದುರಿಸುವ ಸವಾಲುಗಳನ್ನು ತಮ್ಮ ಅನುಭವದ ಮೂಲಕ ಹಂಚಿಕೊಂಡರು. ಈ ಕಾಲೇಜು ಆರಂಭವಾದ ದಿನದಿಂದ ತಮಗೆ ಇರುವ ಒಡನಾಟವನ್ನು ನೆನಪಿಸಿಕೊಂಡು, ವಿಧ್ಯಾರ್ಥಿಗಳ ಪ್ರತಿಭೆ ಪ್ರದರ್ಶನಕ್ಕೆ ಈ ಸಂಘ ಒಂದು ಉತ್ತಮ ವೇದಿಕೆಯಾಗಲಿ ಎಂದು ಹೇಳುವುದರ ಜೊತೆಗೆ, ಮೀಡಿಯಾ ಕ್ಲಬ್ ಗೆ ಶುಭಹಾರೈಸಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ರಾಮಕೃಷ್ಣ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಮೈಸೂರಿನ ಕೇಂದ್ರೀಯ ಪೆಟ್ರೋಕೆಮಿಕಲ್ಸ್ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸಂಸ್ಥೆ (ಸಿಪೆಟ್) ಕೌಶಲ್ಯ ಮತ್ತು ತಾಂತ್ರಿಕ ತರಬೇತಿ ಕೇಂದ್ರದಲ್ಲಿ 2026-27ನೇ ಸಾಲಿನ ಉದ್ಯೋಗಾಧಾರಿತ ಡಿಪ್ಲೋಮಾ ಇನ್ ಪ್ಲಾಸ್ಟಿಕ್ಸ್ ಟೆಕ್ನಾಲಜಿ (ಡಿ.ಪಿ.ಟಿ) ಹಾಗೂ ಡಿಪ್ಲೋಮಾ ಇನ್ ಪ್ಲಾಸ್ಟಿಕ್ಸ್ ಮೌಲ್ಡ್ ಟೆಕ್ನಾಲಜಿ (ಡಿ.ಪಿ.ಎಂ.ಟಿ) – 3 ವರ್ಷಗಳ ಅವಧಿಯ ಕೋರ್ಸ್ಗಳ ಪ್ರವೇಶಾತಿಗೆ ಆನ್‌ಲೈನ್ ಹಾಗೂ ಆಫ್‌ಲೈನ್ ಮೂಲಕ ನೋಂದಣಿ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗಿದ್ದು, ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ಪರೀಕ್ಷೆಯಲ್ಲಿ ತೇರ್ಗಡೆಯಾದವರು ಹಾಗೂ ಹಾಜರಾಗುವವರು ಆನ್‌ಲೈನ್ https://cipet26.onlineregistrationform.org/CIPET/ ಮೂಲಕ ನೋಂದಣಿ ಮಾಡಿಕೊಳ್ಳಬಹುದಾಗಿದೆ. ಇದರೊಂದಿಗೆ ಸಿಪೆಟ್ ಸಂಸ್ಥೆಯು ಉಚಿತ 3 ರಿಂದ 6 ತಿಂಗಳುಗಳ ಕೌಶಲ್ಯ ತರಬೇತಿ ಕಾರ್ಯಕ್ರಮವನ್ನು ಕರ್ನಾಟಕ ಕೌಶಲ್ಯ ಯೋಜನೆ ಮತ್ತು ಪ್ರಧಾನ ಮಂತ್ರಿ ಕೌಶಲ್ ವಿಕಾಸ್ ಯೋಜನೆ ಅಡಿ ಆಯೋಜಿಸಲಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತ ಆಹಾರ ಹಾಗೂ ವಸತಿ ಸೌಲಭ್ಯ ಒದಗಿಸಲಾಗುತ್ತದೆ. ಹೆಚ್ಚಿನ ಮಾಹಿತಿಗೆ ಮೊ.ನಂ: 9480253024, 9791431827 ಅಥವಾ ವೆಬ್‌ಸೈಟ್ www.cipet.gov.in ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಂಸ್ಥೆಯ ಮುಖ್ಯಸ್ಥರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬ್ರಹ್ಮಾವರದಲ್ಲಿ ಕೃಷಿ ಕಾಲೇಜು ಪ್ರಾರಂಭಿಸುವ ಬಗ್ಗೆ ಕುಂದಾಪುರ ಕ್ಷೇತ್ರದ ಶಾಸಕ ಎ. ಕಿರಣ್ ಕುಮಾರ್ ಕೊಡ್ಲಿ ಅಧಿವೇಶನದಲ್ಲಿ ಸರ್ಕಾರದ ಗಮನ ಸಳೆದಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಒಟ್ಟು 1,53, 114 ಹೆಕ್ಟರ್ ಕೃಷಿ ಭೂಮಿ ಇದ್ದು ಅದರಲ್ಲಿ ರೈತರು ಭತ್ತ ಮತ್ತು ಕಮರ್ಷಿಯಲ್ ಕ್ರಾಪ್ ಆದ ಅಡಿಕೆ, ತೆಂಗು, ಇತರೆ ಕೃಷಿಯನ್ನ ನಿರ೦ತರ ಮಾಡುತ್ತಾ ಇದ್ದಾರೆ. 2010ರಲ್ಲಿ ಬಿಎಸ್ ಯಡಿಯೂರಪ್ಪನವರು ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಆವಾಗ ಕೃಷಿ ಕಾಲೇಜು ಮಂಜೂರಾತಿ ನೀಡಲಾಗಿದೆ. ಆದರೆ 2014ರ ತನಕ ಯಾವುದೇ ಕೆಲಸ ಆಗಿರುವುದಿಲ್ಲ. 2014ರಲ್ಲಿ ಕೃಷಿ ಡಿಪೆ ‘ಮಾ ಕಾಲೇಜು ಪ್ರಾರ೦ಭ ಮಾಡಲಾಗಿರುತ್ತದೆ. ಅದರ ನಂತರ ನಿರಂತರವಾಗಿ ಉಡುಪಿ ಜಿಲ್ಲೆಯಲ್ಲಿ ಕೃಷಿ ಕೃಷಿ ಪದವಿ ಕಾಲೇಜುಗಾಗಿ ಸರಕಾರಕ್ಕೆ ಬೇಡಿಕೆ ಇಟ್ಟಿದ್ದು ಬ್ರಹ್ಮಾವರ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರದಲ್ಲಿ 300 ಎಕರೆ ಜಾಗವಿದ್ದು, ಹಾಸ್ಟೆಲ್ ಹಾಗೂ ಕಾಲೇಜ್ ಗೆ ಅಗತ್ಯವಿರುವ ಕಟ್ಟಡ ಮತ್ತು ಲ್ಯಾಬೋರೇಟರಿ ಸೇರಿದಂತೆ ಇತರ ಸಂಪೂರ್ಣ ಮೂಲಭೂತ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಜನತಾ ಸಂಸ್ಥೆಯ ವತಿಯಿಂದ 55ನೇ ರಾಷ್ಟ್ರೀಯ ಸುರಕ್ಷತಾ ವಾರ ಹಾಗೂ ಸಂಸ್ಥೆಯ ನಾಲ್ಕನೇ ವರ್ಷದ ಸುರಕ್ಷತಾ ವಾರ ಜಾಗೃತಿ 2026 ಸಮಾರೋಪ ಸಮಾರಂಭವು ಸಂಸ್ಥೆಯ ಆವರಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಜತನಾ ಸಂಸ್ಥೆಯ ಮುಖ್ಯಸ್ಥರಾದ ಆನಂದ ಸಿ. ಕುಂದರ್ ಉದ್ಘಾಟಿಸಿದರು. ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಮನೋವೈದ್ಯ ಡಾ. ಪ್ರಕಾಶ್ ತೋಳಾರ್ ಅವರು ಸುರಕ್ಷತೆ ಎಂಬುದು ಕೇವಲ ನಿಯಮವಲ್ಲ, ಪ್ರತಿಯೊಬ್ಬರ ಜೀವನದ ಅವಿಭಾಜ್ಯ ಅಂಗವಾಗಿರಬೇಕು ಎಂದು ಹೇಳಿದರು. ಕೆಲಸ ಮಾಡುವ ಸ್ಥಳದಲ್ಲಿ ಎಚ್ಚರಿಕೆ ಮತ್ತು ಜಾಗೃತಿಯಿಂದ ನಡೆದುಕೊಂಡರೆ ಅನೇಕ ಅಪಘಾತಗಳನ್ನು ತಪ್ಪಿಸಬಹುದು ಎಂದು ಅವರು ಸಲಹೆ ನೀಡಿದರು. ಸಂಸ್ಥೆಯ ಎಜಿಎಂ ಶ್ರೀನಿವಾಸ ಕುಂದರ್ ಕಾರ್ಯಕ್ರಮದ ಪ್ರಸ್ತಾವನೆಗೈದು ಸುರಕ್ಷತಾ ವಾರದ ಮಹತ್ವವನ್ನು ವಿವರಿಸಿದರು. ನಂತರ ಸಂಸ್ಥೆಯ ಸಿಬ್ಬಂದಿ ಮಹೇಶ್ ನಾಯರಿ ಪ್ರಾರ್ಥನೆ ನಡೆಸಿದರು. ಸುರಕ್ಷತಾ ವಾರದ ಅಂಗವಾಗಿ ನಡೆದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಅಪಘಾತದಿಂದ ಪಾರಾದ ಸಿಬ್ಬಂದಿಗಳ ಅನುಭವಗಳು, ಅಗ್ನಿ ಅವಘಡದ ಸಂದರ್ಭದಲ್ಲಿನ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ತೋಟಗಾರಿಕೆ ಇಲಾಖೆ ವತಿಯಿಂದ ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿ ಕಾರ್ಯಕ್ರಮವನ್ನು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗುತ್ತಿದ್ದು, ಜಿಲ್ಲೆಗೆ 07 ಅಭ್ಯರ್ಥಿಗಳ ಗುರಿ ನಿಗಧಿಪಡಿಸಿದ್ದು, ಕನಿಷ್ಟ ಎಸ್.ಎಸ್.ಎಲ್.ಸಿ ಉತ್ತೀರ್ಣರಾಗಿರುವ, ಕೃಷಿ ಜಮೀನು ಹೊಂದಿರುವ ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ಏಪ್ರಿಲ್ 23ರ ಪೂರ್ವಾಹ್ನ ತೋಟಗಾರಿಕೆ ಜಂಟಿ ನಿರ್ದೇಶಕರು (ಜಿಪಂ), ಉಡುಪಿ ರವರ ಕಛೇರಿಯಲ್ಲಿ ಸಂದರ್ಶನ ನಡೆಯಲಿದ್ದು, ಏ. 27 ರಂದು ಆಯ್ಕೆ ಪಟ್ಟಿ ಪ್ರಕಟಿಸಲಾಗುವುದು. ಅರ್ಜಿ ಸಲ್ಲಿಸಲು ಏಪ್ರಿಲ್ 15 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್ಸೈಟ್ https://horticulturedir.karnataka.gov.in ನಲ್ಲಿ ಅಥವಾ ತೋಟಗಾರಿಕೆ ಜಂಟಿ ನಿರ್ದೇಶಕರು (ಜಿಪಂ), ಉಡುಪಿ, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ರಾವ), ಉಡುಪಿ ಅಥವಾ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, (ಜಿಪಂ), ಉಡುಪಿ, ಕುಂದಾಪುರ ಹಾಗೂ ಕಾರ್ಕಳ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಇಲಾಖೆಯ ಕಚೇರಿ ಪ್ರಕಟಣೆ ತಿಳಿಸಿದೆ.
