ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮುನಿಯಾಲು ಸಂಜೀವಿನಿ ಗೋಧಾಮದಲ್ಲಿ ಫೆಬ್ರವರಿ 19 ರಿಂದ 21ರ ತನಕ ನಡೆಯುವ ಪಾರಂಪರಿಕ ಸಂಪ್ರದಾಯದಂತೆ ದೊಂದಿ ಬೆಳಕಿನಲ್ಲಿ ನಡೆಯುವ ಭಕ್ತಿಭಾವಪೂರ್ಣ ಏಕಪವಿತ್ರ ಶ್ರೀಮನ್ನಾಗಮಂಡಲದಲ್ಲಿ ಫೆಬ್ರವರಿ 20ರಂದು ಸಂಜೆ ಶ್ರೀನಿವಾಸ ಸಭಾಮಂಟಪದಲ್ಲಿ ರೈತಪೀಠ ಪ್ರಶಸ್ತಿ ಪ್ರದಾನ ನಡೆಯಲಿದೆ. 240ಕ್ಕೂ ಹೆಚ್ಚು ಭಾರತೀಯ ಭತ್ತದ ತಳಿಗಳನ್ನು ಸಂರಕ್ಷಣೆ ಮಾಡಿದ ಅಪರೂಪದ ಕೃಷಿಕ ಋಷಿ ಬಿ.ಕೆ. ದೇವರಾಯ ಮಿತ್ತಬಾಗಿಲು. ಅವರು ಮೂಡಬಿದರೆ ಎಸ್ ಕೆಎಫ್ ಸಂಸ್ಥೆ ನೀಡುವ ನೂತನ ಪ್ರಥಮ ರೈತಪೀಠ ಪ್ರಶಸ್ತಿಯನ್ನು ಸ್ವೀಕರಿಸುವರು. ತಮ್ಮ ಬದುಕನ್ನೇ ಕೃಷಿ ಕಾಯಕಕ್ಕೆ ಅರ್ಪಿಸಿರುವ ರೈತರ ತ್ಯಾಗ, ಪರಿಶ್ರಮ ಮತ್ತು ರೈತರ ಮಹತ್ವವನ್ನು ಗುರುತಿಸುವ ಮಹತ್ವದ ಉದ್ದೇಶದಿಂದ “ರೈತಪೀಠ” ಎಂಬ ಗೌರವ ಪ್ರಶಸ್ತಿಯನ್ನು ಸ್ಥಾಪಿಸಿ ರೈತರನ್ನು ಗೌರವಿಸುವುದು ನಮ್ಮ ಮುಖ್ಯ ಉದ್ದೇಶ. ನಮ್ಮ ಯುವ ಸಮುದಾಯ ಕೃಷಿಯತ್ತ ಆಕರ್ಷಿತರಾಗಬೇಕು, ಕೃಷಿಯನ್ನೂ ಕೂಡ ಕಾರ್ಪೋರೇಟ್ ವ್ಯವಸ್ಥೆಯ ಹಂತಕ್ಕೆ ಬೆಳೆಸಬೇಕು, ಮುನಿಯಾಲಿನ ಗೋಧಾಮ ಎಂಬ ಕೃಷಿಲೋಕವನ್ನು ಕಂಡು ಯುವಕರು ಕೃಷಿಯಲ್ಲಿ ತೊಡಗಿ ಸುಂದರ ಬದುಕು ಕಟ್ಟಿಕೊಳ್ಳಬೇಕು…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವಡೇರಹೋಬಳಿ ನಿವಾಸಿ ಮಂಜುನಾಥ ಮೊಗವೀರ (72) ಅವರಿಗೆ ಸ್ಕೂಟರ್ ಢಿಕ್ಕಿಯಾಗಿ, ಗಾಯಗೊಂಡ ಘಟನೆ ಹೆಮ್ಮಾಡಿಯ ಸಂತೋಷನಗರ ಕ್ರಾಸ್ ಹತ್ತಿರ ಇತ್ತೀಚಿಗೆ ಸಂಭವಿಸಿದೆ. ಗಾಯಗೊಂಡ ಮಂಜುನಾಥ ಅವರನ್ನು ಸ್ಕೂಟರ್ ಸವಾರ ಪ್ರವೀಣ್ ಹಾಗೂ ಸ್ಥಳೀಯರು ಕುಂದಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಬಗ್ಗೆ ಕುಂದಾಪುರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಪಾಂಡೇಶ್ವರ ಗ್ರಾಮಪಂಚಾಯತ್ನ ವಿಕಲಚೇತನ ಕೊಠಡಿ ಮತ್ತು ರೆಕಾರ್ಡ್ ರೂಮ್ ಅನ್ನು ಉಡುಪಿ ಮತ್ತು ಚಿಕ್ಕಮಗಳೂರು ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸಿದರು. ಪಂಚಾಯತ್ ಅಧ್ಯಕ್ಷೆ ಸುಶೀಲ ಪೂಜಾರಿ, ಉಪಾಧ್ಯಕ್ಷ ವೈಬಿ ರಾಘವೇಂದ್ರ, ಗ್ರಾಮ ಆಡಳಿತಾಧಿಕಾರಿ ಐರಿನ್ ಶಾಂತಿ ಫೆರೆರಾ, ಪಂಚಾಯತ್ ಸದಸ್ಯರು, ಪಿಡಿಓ ವಂದನಾ, ಕಾರ್ಯದರ್ಶಿ ವಿಜಯ ಇದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಗೋಪಾಡಿ ಗ್ರಾಮದ ಮೂಡುಗೋಪಾಡಿಯ ವೆಂಕಟೇಶ ಮರಕಾಲ ಅವರ ಪುತ್ರ ನಾಗರಾಜ್ ಕುಂದರ್ (38) ಅವರು ಯಾವುದೋ ಕಾರಣಕ್ಕೆ ಜೀವನದಲ್ಲಿ ಜಿಗುಪ್ಸೆಗೊಂಡು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ಸಂಭವಿಸಿದೆ. ಅವರು ಅವಿವಾಹಿತರಾಗಿದ್ದು, ರೆಡಿಮೇಡ್ ಪಾಗರ ಮಾಡುವ ಕೆಲಸ ಮಾಡಿಕೊಂಡಿದ್ದರು. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ತೀರ್ಥಹಳ್ಳಿ-ಕುಂದಾಪುರ ರಾಜ್ಯ ಹೆದ್ದಾರಿ-52ರ 79.00ಕಿ.ಮೀ. ನಲ್ಲಿ ಬಳ್ಕೂರು- ಕಂಡ್ಲೂರು ಮಧ್ಯದಲ್ಲಿ ವರಾಹಿ ನದಿಗೆ ನಿರ್ಮಿಸಲಾಗಿರುವ ಸೇತುವೆಯ ಮರು ನಿರ್ಮಾಣದ ಕುರಿತ ರಾಜ್ಯ ಸರಕಾರದ ನಿರ್ಧಾರಕ್ಕೆ ಕುಂದಾಪುರ ಶಾಸಕ ಎ. ಕಿರಣ್ ಕುಮಾರ್ ಕೊಡ್ಗಿ ಹರ್ಷ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಕೊಡ್ಗಿ ಅವರು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳೆ ಅವರನ್ನು ಭೇಟಿ ಮಾಡಿ ಮನವಿ ಮಾಡಿದ್ದರು. ಇದೀಗ ಉಡುಪಿ ಜಿಲ್ಲೆಯಿಂದ ಶಿವಮೊಗ್ಗ ಜಿಲ್ಲೆಗೆ ಸಂಪರ್ಕ ಕಲ್ಪಿಸುವ ಅತಿ ಹತ್ತಿರದ ಈ ಮಾರ್ಗದ ಕಿ.ಮೀ 79.00ರಲ್ಲಿ ಬಳ್ಕೂರು – ಕಂಡ್ಲೂರು ಮಧ್ಯ ಸೇತುವೆ ಇದ್ದು ಇದು 1972ರಲ್ಲಿ ನಿರ್ಮಾಣಗೊಂಡಿದೆ. ಸೇತುವೆಯು 10 ಅಂಕಣಗಳನ್ನು ಒಳಗೊಂಡಿದ್ದು ಒಟ್ಟು 312ಮೀ. ಉದ್ದವಿದೆ. ಈ ಸೇತುವೆ ಈಗಾಗಲೇ ಶಿಥಿಲ ಗೊಂಡಿರುವ ಕಾರಣ ಇದರ ಮೇಲೆ ಅಧಿಕ ಭಾರ ಹೊತ್ತ ವಾಹನಗಳು ಸಂಚರಿಸುವ ಸಂದರ್ಭದಲ್ಲಿ ಸೇತುವೆ ಕುಸಿಯುವ ಸಾಧ್ಯತೆಯೊಂದಿಗೆ ರಸ್ತೆ ಸಂಪರ್ಕ ಸಂಪೂರ್ಣ ಕಡಿತಗೊಳ್ಳುವ ಸಂಭವವಿದೆ. ಹೀಗಾಗಿ ಸೇತುವೆಯ ಮರುನಿರ್ಮಾಣಕ್ಕೆ ಅಂದಾಜು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆಯ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ತರಬೇತಿ ಮತ್ತು ಉದ್ಯೋಗ ಘಟಕವು ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗಾಗಿ ಒಂದು ವಾರದ ಸಾಫ್ಟ್ ಸ್ಕಿಲ್ಸ್ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಿದ್ದರು. ಅದು ಯಶಸ್ವಿಯಾಗಿ ಮುಕ್ತಾಯಗೊಂಡಿತು. ಪ್ರಸ್ತುತ ಉದ್ಯಮದ ನಿರೀಕ್ಷೆಗಳಿಗೆ ಅನುಗುಣವಾಗಿ ವಿದ್ಯಾರ್ಥಿಗಳ ಪರಸ್ಪರ ಮತ್ತು ವೃತ್ತಿಪರ ಸಾಮರ್ಥ್ಯಗಳನ್ನು ಬಲಪಡಿಸುವ ಗುರಿಯನ್ನು ಈ ಕಾರ್ಯಕ್ರಮ ಹೊಂದಿತ್ತು. ‘ಥ್ರಸ್ಟ್ ಅಕಾಡೆಮಿ’ಯ ಸಂಸ್ಥಾಪಕ ಕಾರ್ತಿಕ್ ಆಳ್ವ ಅವರು ಸಂಪನ್ಮೂಲ ವ್ಯಕ್ತಿಯಾಗಿ ತರಬೇತಿಯನ್ನು ನಡೆಸಿದರು. ತರಬೇತಿಯ ಸಮಯದಲ್ಲಿ, ವಿದ್ಯಾರ್ಥಿಗಳಿಗೆ ಸಂವಹನ ಕೌಶಲ್ಯ, ವ್ಯಕ್ತಿತ್ವ ಅಭಿವೃದ್ಧಿ, ಸಂದರ್ಶನ ಸಿದ್ಧತೆ, ಗುಂಪು ಚರ್ಚಾ ತಂತ್ರಗಳು, ಕೆಲಸದ ಸ್ಥಳದ ಶಿಷ್ಟಾಚಾರ ಮತ್ತು ವೃತ್ತಿಪರ ಪ್ರಸ್ತುತಿಯ ಬಗ್ಗೆ ಮಾರ್ಗದರ್ಶನ ನೀಡಲಾಯಿತು. ಸಂವಾದಾತ್ಮಕ ತರಬೇತಿಯಲ್ಲಿ ವಿದ್ಯಾರ್ಥಿಗಳ ಆತ್ಮವಿಶ್ವಾಸ ಮತ್ತು ಉದ್ಯೋಗಾವಕಾಶಗಳನ್ನು ಹೆಚ್ಚಿಸುವ ಸಲುವಾಗಿ ಪ್ರಾಯೋಗಿಕ ಚಟುವಟಿಕೆಗಳು ಹಾಗು ಅಣುಕು ಸಂದರ್ಶನವನ್ನು ನಡೆಸಲಾಯಿತು.ಪ್ರಾಂಶುಪಾಲರು ಮತ್ತು ಅಧ್ಯಾಪಕರು ವಿದ್ಯಾರ್ಥಿಗಳಿಗೆ ತಮ್ಮ ಶೈಕ್ಷಣಿಕ ಮತ್ತು ವೃತ್ತಿ ಅನ್ವೇಷಣೆಗಳಲ್ಲಿ ಪಡೆದ ಕೌಶಲ್ಯಗಳನ್ನು ಪರಿಣಾಮಕಾರಿಯಾಗಿ ಅನ್ವಯಿಸಲು ಪ್ರೋತ್ಸಾಹಿಸಿದರು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಇಲ್ಲಿನ ಸಾಸ್ತಾನದ ಸಮೀಪದ ಗುಂಡ್ಮಿ ಪ್ರದೇಶದಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಮನೆಮಾಡಿದೆ. ಕಳೆದೆರಡು ದಿನಗಳಿಂದ ಗುಂಡ್ಮಿ ಮೊಗ್ಗೋಡು ಗಿರಿಜಾ ಮರಕಾಲ್ತಿ ಮನೆ ವಠಾರದಲ್ಲಿ, ಗುಂಡ್ಮಿ ಪಟ್ಟಾಭಿ ಮಿಲ್ ಸಮೀಪ ರಿತಾಜ್ ಎಂಬಾಕೆ ನೋಡಿದ್ದು ಸ್ಥಳೀಯರಾದ ರಾಜು ಮರಕಾಲ ಗೋವಿಂದ ಪೂಜಾರಿ ಅವರಿಗೆ ಮಾಹಿತಿ ನೀಡಿದ್ದು ಸಾಮಾಜಿಕ ಕಾರ್ಯಕರ್ತರಾದ ಪ್ರತಾಪ್ ಶೆಟ್ಟಿ, ವಿಠ್ಠಲ್ ಪೂಜಾರಿ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಗುರುವಾರ ಮತ್ತೆ ಪುನಃ ಗುಂಡ್ಮಿ ರಥಬೀದಿ ಸುಬ್ಬ ರಾವ್ ಮನೆ ಹತ್ತಿರ ಪ್ರತ್ಯಕ್ಷವಾಗಿದ್ದು ಶುಕ್ರವಾರ ಅರಣ್ಯ ಇಲಾಖೆಗೆ ಪಟ್ಟಣಪಂಚಾಯತ್ ಮಾಜಿ ಸದಸ್ಯ ರವೀಂದ್ರ ಕಾಮತ್ ಇಲಾಖೆಗೆ ಮಾಹಿತಿ ನೀಡಿ ಇಲಾಖೆ ಶುಕ್ರವಾರ ಅಪರಾಹ್ನ ಬೋನ್ ಇರಿಸಿದೆ. ಒಟ್ಟಿನಲ್ಲಿ ತೆಕ್ಕಟ್ಟೆ, ಬೇಳೂರು ವ್ಯಾಪ್ತಿಯಲ್ಲಿ ಆಗಾಗ ಕಾಣಿಸಿಕೊಳ್ಳುತ್ತಿದ್ದ ಚಿರತೆ ಇದೀಗ ಪಟ್ಟಣವ್ಯಾಪ್ತಿಯ ಕಡೆ ಮುಖ ಮಾಡಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಫೆ.21ರಂದು ಕಡಂದಲೆಯ ಶ್ರೀ ನಾರಾಯಣಗುರು ಸಭಾಭವನದಲ್ಲಿ ನಡೆಯಲಿರುವ ಮೂಡುಬಿದಿರೆ ತಾಲೂಕು ದ್ವಿತೀಯ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಸಾಹಿತಿ ಮಿಜಾರಿನ ಅಬ್ದುಲ್ ಹಮೀದ್ ಪಕ್ಕಲಡ್ಕ ಅವರು ಆಯ್ಕೆಯಾಗಿರುತ್ತಾರೆ ಎಂಬುದಾಗಿ ಕ.ಸಾ.ಪ ಮೂಡುಬಿದಿರೆ ತಾಲೂಕು ಅಧ್ಯಕ್ಷರಾದ ಕೆ. ವೇಣುಗೋಪಾಲ ಶೆಟ್ಟಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮಂಗಳೂರು ತಾಲೂಕಿನ ಕಂಕನಾಡಿ ಗ್ರಾಮದ ಪಕ್ಕಲಡ್ಕದ ಅಹಮ್ಮದ್ ಕೆಪಿ ಹಾಗೂ ಫಾತಿಮಾ ದಂಪತಿಯ ಸುಪುತ್ರರಾಗಿ 1947ರಲ್ಲಿ ಜನಿಸಿದ ಅವರು ಬಿ.ಕಾಂ ಪದವೀಧರರು. 1968ರಲ್ಲಿ ರಾಜ್ಯ ಸರಕಾರದ ಅರಣ್ಯ ಇಲಾಖೆಯಲ್ಲಿ ದ್ವಿತೀಯ ದರ್ಜೆ ಸಹಾಯಕರಾಗಿ ತನ್ನ ವೃತ್ತಿ ಜೀವನವನ್ನು ಪ್ರಾರಂಭಿಸಿದ ಅವರು ನಂತರ ಪ್ರಥಮ ದರ್ಜೆ ಸಹಾಯಕರಾಗಿ ಹಾಗೂ ಅಧೀಕ್ಷರಾಗಿಯೂ ಭಡ್ತಿ ಪಡೆದು 37 ವರ್ಷಗಳ ತನ್ನ ಸಾರ್ಥಕ ಸೇವೆಯನ್ನು ಮುಗಿಸಿ 2005ರಲ್ಲಿ ನಿವೃತ್ತರು. ಕೃಷಿಯ ಜೊತೆ ಸಾಹಿತ್ಯ ಕೃಷಿಯಲ್ಲಿಯೂ ತೊಡಗಿಸಿಕೊಂಡಿರುವ ಅವರು ಸಣ್ಣ ಕಥಾ ರಚನೆಯಲ್ಲಿ ವಿಶೇಷ ಆಸಕ್ತಿಯನ್ನು ಹೊಂದಿದವರು. ಈಗಾಗಲೇ ‘ಪಾದದಡಿಯ ಸ್ಪರ್ಗ’, ‘ಬಿಳಿಗೋಡೆ’, ‘ಅಲೆಮಾರಿ’, ‘ಭ್ರಮೆ’ ‘ಒಂಟಿತೆಪ್ಪ’, ‘ನೆನಪುಗಳು ಸಾಯುವುದಿಲ್ಲ’,…
ಕುಂದಾಪ್ರ ಡಾಟ್ ಕಾಂ ಸುದ್ದಿ..ಕೋಟ: ಗ್ರಾಮಪಂಚಾಯತ್ ಅಭಿವೃದ್ಧಿಯಾಗಬೇಕು ತನ್ಮೂಕ ಜನಸೇವೆ ನಿರಂತರಗೊಳಿಸಿ ಜನಸ್ನೇಹಿ ಆಡಳಿತ ನೀಡುವಂತ್ತಾಗಬೇಕು ಎಂದು ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಹೇಳಿದರು. ಅವರು ಶುಕ್ರವಾರ ಪಾಂಡೇಶ್ವರ ಗ್ರಾಮಪಂಚಾಯತ್ನ ಮಹಾತ್ಮಾಗಾಂಧಿ ಸಭಾಂಗಣ, ವಿಕಲಚೇತನ ಕೊಠಡಿ ರೆಕಾರ್ಡ್ ರೂಮ್, ಶುದ್ಧ ಕುಡಿಯುವ ನೀರಿನ ಘಟಕ ಇದರ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು. ಪಂಚಾಯತ್ ಪ್ರತಿನಿಧಿಗಳ ಆಡಳಿತ ವ್ಯವಸ್ಥೆ ಅಂತ್ಯಗೊಳ್ಳುತ್ತಿದ್ದು ಮುಂದಿನ ಚುನಾವಣಾ ಪ್ರಕ್ರಿಯೆ ಮರಿಚಿಕೆಯಾಗದೆ ಜನರ ಅನುಕೂಲತೆಗೆ ಸಹಕಾರಿಯಾಗಲಿ ಎಂದು ಹಾರೈಸಿದರು. ಉಡುಪಿ ಮತ್ತು ಚಿಕ್ಕಮಗಳೂರು ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ರೇಕಾಡ್೯ ರೂಮ್ ಅನ್ನು ಉದ್ಘಾಟಿಸಿದರು. ಕೆನರಾ ಬ್ಯಾಂಕ್ ವತಿಯಿಂದ ಕೊಡಮಾಡಿದ ಶುದ್ಧ ಕುಡಿಯುವ ನೀರಿನ ಘಟಕವನ್ನು ಕೆನರಾ ಬ್ಯಾಂಕ್ ಸಾಸ್ತಾನ ಶಾಖಾ ಪ್ರಭಂಧಕ ಪ್ರಜಿನ್ ಉದ್ಘಾಟಿಸಿದರು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಂಚಾಯತ್ ಅಧ್ಯಕ್ಷೆ ಸುಶೀಲ ಪೂಜಾರಿ ವಹಿಸಿದ್ದರು. ಈ ಸಂದರ್ಭದಲ್ಲಿ ಪಂಚಾಯತ್ ನಲ್ಲಿ ಈ ಹಿಂದೆ ಅಭಿವೃದ್ಧಿ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ ಇನಾಯಿತ್ ಉಲ್ಲಾ ಬೇಗ್, ಲೋಲಾಕ್ಷಿ, ಸತೀಶ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹಟ್ಟಿಅಂಗಡಿಯ ಶ್ರೀ ಸಿದ್ಧಿ ವಿನಾಯಕ ವಸತಿ ಶಾಲೆಯಲ್ಲಿ ಶುಕ್ರವಾರದಂದು ಶಾರದಾ ಪೂಜೆಯನ್ನು ಶ್ರದ್ಧಾ – ಭಕ್ತಿಯಿಂದ ಆಚರಿಸಲಾಯಿತು. ಪ್ರತಿ ವರ್ಷದಂತೆ ಈ ವರ್ಷವೂ ವಿದ್ಯಾರ್ಥಿಗಳು ಅವರವರ ಮನೆಯ ಕೈದೋಟಗಳಲ್ಲಿ ಬೆಳೆದ ಬಣ್ಣ ಬಣ್ಣದ ವಿವಿಧ ಹೂವುಗಳನ್ನು ತಂದು ವಿದ್ಯಾ ದೇವತೆಯಾದ ತಾಯಿ ಶಾರದೆಯನ್ನು ಹೂವುಗಳಿಂದ ಅಲಂಕರಿಸಿದರು. ಕಾರ್ಯಕ್ರಮದ ಉದ್ದಕ್ಕೂ ವಿದ್ಯಾರ್ಥಿಗಳು ಶ್ರೀ ಸಿದ್ಧಿ ವಿನಾಯಕ ಹಾಗೂ ದೇವಿ ಶಾರದೆಯ ಕುರಿತಾಗಿ ಭಕ್ತಿ ಗೀತೆಗಳನ್ನು ಸುಶ್ರಾವ್ಯವಾಗಿ ಹಾಡಿ, ದೈವಿಕ ವಾತಾವರಣವನ್ನು ಮೂಡಿಸಿದರು. ಶಾಲೆಯ ಸಹ ಶಿಕ್ಷಕರಾದ ರಾಮಕೃಷ್ಣ ಉಡುಪರು ಶಾಸ್ತ್ರೋಕ್ತವಾಗಿ ಮಂತ್ರಗಳನ್ನು ಪಠಿಸಿ, ತಾಯಿ ಶಾರದೆಯ ಪೂಜೆಯನ್ನು ನೆರವೇರಿಸುವುದರ ಜೊತೆಗೆ ಮಕ್ಕಳಿಗೆ ತಾಯಿ ಸರಸ್ವತಿಯ ಮಹಿಮೆ ಮತ್ತು ವಿದ್ಯೆಯ ಮಹತ್ವವನ್ನು ತಿಳಿಸಿದರು. ಈ ಸಂದರ್ಭದಲ್ಲಿ ಅವರು ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿ ಹಾಗೂ ಸರ್ವಾಂಗೀಣ ಪ್ರಗತಿಗಾಗಿ ಪ್ರಾರ್ಥನೆಯನ್ನು ಸಲ್ಲಿಸಿದರು. ಶಾಲೆಯಲ್ಲಿ ಈ ರೀತಿಯ ಆಚರಣೆಯು ವಿದ್ಯಾರ್ಥಿಗಳಲ್ಲಿ ಹುಮ್ಮಸ್ಸು ತುಂಬಿ, ಸಾಂಸ್ಕೃತಿಕ ಮೌಲ್ಯಗಳ ಪರಿಚಯವನ್ನು ಮಾಡಿಸಿ, ಶಿಸ್ತನ್ನು ಬೆಳೆಸಲು ಸಹಾಯ ಮಾಡುತ್ತದೆ.…
