Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: 2026ರಲ್ಲಿ ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆದ 5ನೇ ರಾಷ್ಟ್ರೀಯ ಮಾಸ್ಟರ್ ಗೇಮ್ಸ್‌ನ 400 ಮೀಟರ್ ಹರ್ಡಲ್ಸ್ (ಅಡೆತಡೆ ಓಟ) ಸ್ಪರ್ಧೆಯಲ್ಲಿ ತಾಲೂಕಿನ ಗೋಲಿಬೇರು ಗ್ರಾಮದವರಾದ ಗೋಕುಲ್ ಪೂಜಾರಿ ಅವರು ಬೆಳ್ಳಿ ಪದಕವನ್ನು ಗೆದ್ದಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಸಮಾಜದ ಏಳುಬೀಳಿನ ಕಥನವನ್ನು ಹೇಳಿ ಆರೋಗ್ಯಪೂರ್ಣ ಸಮಾಜ ಕಟ್ಟುವ ಸೃಜನಶೀಲತೆಯೇ ಸಾಹಿತ್ಯ. ಬದುಕಿನ ಕಥೆಯನ್ನು ಹೇಳಿ ಮಾನವೀಯ ಮೌಲ್ಯಗಳ ಪುನರುತ್ಥಾನದೊಂದಿಗೆ ಸುಸಂಸ್ಕೃತ ಸಮಾಜ ರಚನೆಯ ಹಂಬಲ ಸಾಹಿತಿಯದ್ದಾಗಿದೆ. ಕಾರಂತರು ಈ ನಿಟ್ಟಿನಲ್ಲಿ ಸಾಹಿತ್ಯ ಕೃಷಿ ಮಾಡಿದ್ದು ಆ ಕಾಲದ ವಿಶಿಷ್ಟತೆಯಾಗಿದೆ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಿರಿಯಡ್ಕದ ಕನ್ನಡ ಉಪನ್ಯಾಸಕಿ ಶಾಲಿನಿ ಯು.ಬಿ. ಹೇಳಿದರು. ಅವರು ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಕುಂದಾಪುರ, ಕೋಟೇಶ್ವರ ಇಲ್ಲಿ ಕಾರಂತ ಟ್ರಸ್ಟ್ ಉಡುಪಿ, ಕಾಲೇಜಿನ ಕನ್ನಡ ಸಂಘ ಹಾಗೂ ಐಕ್ಯೂಎಸಿಯ ಸಹಯೋಗದಲ್ಲಿ ಅರಿವಿನ ಬೆಳಕು ಉಪನ್ಯಾಸ ಮಾಲೆ – 17ರ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು. ಕಾರಂತ ಟ್ರಸ್ಟ್ ಅಧ್ಯಕ್ಷ ಡಾ. ಗಣನಾಥ ಶೆಟ್ಟಿ ಎಕ್ಕಾರು ಟ್ರಸ್ಟ್‌ನ ಉದ್ದೇಶ ಮತ್ತು ನಿಲುವುಗಳನ್ನು ಹೇಳಿ ಓದಿನಿಂದ ಭೌದ್ಧಿಕ ವಿಕಸನ ಸಾಧ್ಯವಾಗಿ ಆತ್ಮವಿಶ್ವಾಸ ಇಮ್ಮಡಿಯಾಗುತ್ತದೆ ಎಂದರು. ಕಾಲೇಜಿನ ವಿದ್ಯಾರ್ಥಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ, ವ್ಯಕ್ತಿತ್ವ ವಿಕಸನ ,ಹಾಜರಾತಿ ಹಾಗೂ ಉಜ್ವಲ ಭವಿಷ್ಯದ ನಿರ್ಮಾಣಕ್ಕೆ ಪೋಷಕರು ಮತ್ತು ಶಿಕ್ಷಕರ ನಡುವಿನ ಸಮನ್ವಯ ಅತ್ಯಗತ್ಯ ಎಂಬ ಆಶಯದೊಂದಿಗೆ ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ ಮಂಗಳವಾರ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳ ಪೋಷಕ – ಶಿಕ್ಷಕರ ಸಭೆ ನಡೆಯಿತು. ಸಭೆಯಲ್ಲಿ ಮಾತನಾಡಿದ ಪ್ರಾಂಶುಪಾಲರಾದ ವಿದ್ವಾನ್ ಗಣಪತಿ ಭಟ್ ಅವರು, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಾಣಿಜ್ಯ ಶಿಕ್ಷಣವು ಅನೇಕ ಉನ್ನತ ಶಿಕ್ಷಣ ಹಾಗೂ ವೃತ್ತಿಪರ ಅವಕಾಶಗಳಿಗೆ ದಾರಿಯಾಗಿದ್ದು, ವಿದ್ಯಾರ್ಥಿಗಳು ಪದವಿಪೂರ್ವ ಶಿಕ್ಷಣದ ಹಂತದಿಂದಲೇ ಸ್ಪಷ್ಟ ಗುರಿಯನ್ನು ರೂಪಿಸಿಕೊಂಡು ಮುನ್ನಡೆಯಬೇಕು ಎಂದು ಹೇಳಿದರು  ಇದು  ವಿದ್ಯಾರ್ಥಿಗಳ ಯಶಸ್ಸಿನಲ್ಲಿ ಶಿಕ್ಷಕರ ಮಾರ್ಗದರ್ಶನ, ಪೋಷಕರ ಪ್ರೋತ್ಸಾಹ ಮತ್ತು ವಿದ್ಯಾರ್ಥಿಗಳ ನಿರಂತರ ಪರಿಶ್ರಮ ಪ್ರಮುಖ ಪಾತ್ರ ವಹಿಸುತ್ತವೆ ಎಂದರು. ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಯನ್ನು ಮತ್ತಷ್ಟು ಉತ್ತಮಪಡಿಸುವುದು, ಅವರಲ್ಲಿರುವ ಪ್ರತಿಭೆ ಹಾಗೂ ಸಾಮರ್ಥ್ಯವನ್ನು ಗುರುತಿಸುವುದು ಮತ್ತು ಭವಿಷ್ಯದ ಶೈಕ್ಷಣಿಕ ಗುರಿಗಳನ್ನು ರೂಪಿಸುವಲ್ಲಿ ಕಾಲೇಜು ಮಹತ್ವದ ಪಾತ್ರವನ್ನು ವಹಿಸುತ್ತಿದೆ ಎಂದರು. ಕ್ರಿಯೇಟಿವ್ ನ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಒಬ್ಬ ವಿದ್ಯಾರ್ಥಿ ದೈಹಿಕ ಮಾನಸಿಕ ಕಲಾತ್ಮಕ ಸದೃಢತೆ ಸಾಧಿಸುವಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಅಂತಹ ಶಿಬಿರಗಳು ಸಹಕಾರಿಯಾಗುವುದು. ಎಂದು ಪ್ರದೀಪ್ ಕುಮಾರ್ ಶೆಟ್ಟಿ ಕ್ಷೇತ್ರ ಸಮನ್ವಯ ಅಧಿಕಾರಿ ಬಿ.ಆರ್.ಸಿ. ಬೈಂದೂರು ಅಭಿಪ್ರಾಯಪಟ್ಟರು. ಅವರು ಶಿರೂರು ಪಿ.ಎಂ. ಶ್ರೀ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ನಡೆದ ಜಿ.ಎಸ್. ವಿ.ಎಸ್ ಅಸೋಸಿಯೇಷನ್ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ ಭಾಷಣದಲ್ಲಿ ಮಾತನಾಡಿದರು. ಮುಖ್ಯ ಅತಿಥಿ ಮಂಗೇಶ್ ವಿ. ಶಾನುಭಾಗ್ ಮಾತನಾಡಿ, ವಿದ್ಯಾರ್ಥಿಗಳು ಕೌಶಲ್ಯವನ್ನು ಬೆಳೆಸಿಕೊಂಡಾಗ ಬದುಕಲ್ಲಿ ಸಾಧನೆಯನ್ನು ಮಾಡಲು ಸಾಧ್ಯ ಎಂಬುದಾಗಿ ತಿಳಿಸಿದರು. ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂ.ಸಿ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಸಂಜಯ್ ನಾಯ್ಕ್., ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ  ಬೈಂದೂರು ತಾಲೂಕು,  ರಾಜೇಶ್ ಕುಮಾರ್ ಶಿಕ್ಷಣ ಸಂಯೋಜಕರು ಬೈಂದೂರು, ಪಿಎಂಶ್ರೀ ಕೆಪಿಎಸ್ ನ ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ಕೃಷ್ಣ ಪೂಜಾರಿ, ಜಿ.ಎಸ್.ವಿ.ಎಸ್. ಅಸೋಸಿಯೇಷನ್ ಕಾರ್ಯದರ್ಶಿ ಸದಾಶಿವ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಧಾರ್ಮಿಕವಾಗಿ ಕಳಿಬೈಲು ಕ್ಷೇತ್ರ ಭಕ್ತಸಮುದಾಯದ ಸಂಕಷ್ಟ ನಿವಾರಕ ಕ್ಷೇತ್ರವಾಗಿ ಗುರುತಿಸಿಕೊಂಡಿದೆ ಎಂದು ರಾಜ್ಯ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಉಪಾಧ್ಯಕ್ಷ ಐರೋಡಿ ವಿಠ್ಠಲ್ ಪೂಜಾರಿ ಹೇಳಿದರು. ಭಾನುವಾರ ಇಲ್ಲಿನ ಸಾಸ್ತಾನದ ಪಾಂಡೇಶ್ವರ ಶ್ರೀ ಕ್ಷೇತ್ರ ಕಳಿಬೈಲು ತುಳಿಸಿ ಅಮ್ಮ ಪರಿವಾರ, ಕೊರಗಜ್ಜ ಸಾನಿಧ್ಯ ಕ್ಷೇತ್ರದಲ್ಲಿ ಶರನ್ನವರಾತ್ರಿ ಉತ್ಸವದ ಅಂಗವಾಗಿ ಹಸಿರು ಕಳಿಬೈಲು ಪುರಸ್ಕಾರ ಸಮಾರಂಭದಲ್ಲಿ ಮಾತನಾಡಿ ಹಲವಾರು ಪವಾಡಗಳಿಗೆ ಸಾಕ್ಷಿಯಾದ ಈ ಕ್ಷೇತ್ರದಲ್ಲಿ ಸಾಮಾಜಿಕ ಪರಿವರ್ತನಾ ಕಾರ್ಯಕ್ರಮಗಳು ಸಮಾಜಮುಖಿ ಚಿಂತನೆಗಳು ಪಸರಿಸುತ್ತಿರುವುದು ಶ್ಲಾಘನೀಯ ಎಂದರು. ಈ ಸಂದರ್ಭದಲ್ಲಿ ಸ್ಥಳೀಯ ಇರ್ವರು ಸಾಧಕರಾದ ಸುನೀಲ್ ಪಾಂಡೇಶ್ವರ, ಶ್ರೀಶ ಆಚಾರ್ ಇವರುಗಳಿಗೆ ಹಸಿರು ಕಳಿಬೈಲು ಪುರಸ್ಕಾರ ನೀಡಿ ಗೌರವಿಸಲಾಯಿತು. ದೇಗುಲದ ಪಾತ್ರಿ ನವೀನ್ ಕುಂಜಿಬೆಟ್ಟು ಹಸಿರು ಪುರಸ್ಕಾರ ನೀಡಿ ಗೌರವಿಸಿದರು. ಸಭಾಧ್ಯಕ್ಷತೆಯನ್ನು ದೇಗುಲದ ಅಧ್ಯಕ್ಷ ಎಂ.ಸಿ ಚಂದ್ರಶೇಖರ್ ಪೂಜಾರಿ ವಹಿಸಿದ್ದರು. ಕಾರ್ಯಕ್ರಮದ ಉದ್ಘಾಟಕರಾಗಿ ಜಿಲ್ಲಾ ದೈವಾರಾಧಕರ ಒಕ್ಕೂಟದ ಅಧ್ಯಕ್ಷ ವಿನೋದ ಶೆಟ್ಟಿ ಭಾಗವಹಿಸಿ ಶುಭಹಾರೈಸಿದರು. ಮುಖ್ಯ ಅಭ್ಯಾಗತರಾಗಿ ಪತ್ರಕರ್ತ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಡಾ. ಕೋಟ ಶಿವರಾಮ ಕಾರಂತ ರಿಸರ್ಚ& ಸ್ಟಡಿ ಸೆಂಟರ್ ಟ್ರಸ್ಟ್ ಮಾನಸ ಸಾಲಿಗ್ರಾಮ ಹಾಗೂ ನಟರಾಜ ನೃತ್ಯ ನಿಕೇತನ ಸಾಲಿಗ್ರಾಮ ಇವರ ಸಹಯೋಗದಲ್ಲಿ ಡಾ.ಕೆ‌. ಶಿವರಾಮ ಕಾರಂತರ 120ನೇ ಜನ್ಮದಿನಾಚರಣೆಯನ್ನು ಆಚರಿಸಲಾಯಿತು. ಗಣ್ಯರು ಡಾ‌.  ಕೋಟ ಶಿವರಾಮ ಕಾರಂತರ ಭಾವ ಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಟ್ರಸ್ಟ್ ನ ಅಧ್ಯಕ್ಷ ಬಿ.ಎಮ್. ಗುರುರಾಜ್ ರಾವ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಕಾಡ ಗೆಳಯ ಬಳಗದ ಅಧ್ಯಕ್ಷ  ತಾರಾನಾಥ್ ಹೊಳ್ಳ ಇವರು ಮಾತನಾಡಿ, ಕಾರಂತರು ಕೇವಲ ಕೃತಿಯಲ್ಲದ್ದೆ ವಿಚಾರಗಳನ್ನು ಕಾರ್ಯರೂಪದಲ್ಲಿ ಮಾಡಿ ತೋರಿಸುವರು ಎಂದು ಕಾರಂತರನ್ನು ವಿವಿಧ ಕ್ಷೇತ್ರಗಳ ಕಾರ್ಯಭಾರಗಳನ್ನು ನೆನಪು ಮಾಡಿ ಕೊಟ್ಟರು. ಇದೇ ಸಂದರ್ಭದಲ್ಲಿ ಸ್ಥಳೀಯ ನಟರಾಜ ನೃತ್ಯ ನಿಕೇತನ ತರಗತಿಯನ್ನು ಉದ್ಘಾಟನೆಗೈದ ಸ್ಥಳೀಯ ಉದ್ಯಮಿ ಪ್ರಶಾಂತ್ ಕುಂದರ್ ಮಾತಾಡಿ ಹೇಗೆ ಸಮುದ್ರದ ಆಳವನ್ನು ಅಳೆಯಲು ಅಸಾಧ್ಯ ಹಾಗೆ ಗಗನಕ್ಕೆ ಗಗನವೇ ಸಾಟಿ ಸಮುದ್ರಕ್ಕೆ ಸಮುದ್ರವೇ ಸಾಟಿ ಕಾರಂತರಿಗೆ ಪರ್ಯಾಯ ಇಲ್ಲ, ಕಲೆ, ಸಾಹಿತ್ಯ, ಸಂಸ್ಕೃತಿ ಗೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ನಡೆಸುವ ರಾಷ್ಟ್ರೀಯ ರಕ್ಷಣಾ ಅಕಾಡೆಮಿ (ಎನ್‌ಡಿಎ) ಮತ್ತು ನೌಕಾ ಅಕಾಡೆಮಿ (ಎನ್‌ಎ) ಪ್ರವೇಶ ಪರೀಕ್ಷೆಯಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜಿನ 10 ವಿದ್ಯಾರ್ಥಿಗಳು ಅರ್ಹತೆ ಪಡೆದುಕೊಂಡಿದ್ದಾರೆ. ವಿದ್ಯಾರ್ಥಿಗಳಾದ ಪ್ರಣವ್ ಜಜ್ಜು, ವಿನಯ್ ಟಿ., ಓಂಕಾರ್ ರಾಜೇಶ್, ಅದ್ವೈತ್ ವಿಕ್ರಾಂತ್ ಶಿಂಧೆ, ವಿವೇಕ್ ಎ., ಅಮೋಘ್ ಎನ್. ಬಿ., ಎಂ. ಯೂಸುಫ್ ಎನ್. ಎಸ್., ಸಾಯೀಶ್ ಪಿ. ಟಿ., ಪ್ರಹ್ಲಾದ್ ಡಿ. ಡಿ. ಹಾಗೂ ಸಂಹಿತ್ ವಿ. ಆರ್. ಉತ್ತೀರ್ಣರಾಗಿದ್ದಾರೆ. ವಿದ್ಯಾರ್ಥಿಗಳಿಗೆ ಎನ್‌ಡಿಎ ಪರೀಕ್ಷೆಯ ಸಿದ್ಧತೆಗಾಗಿ ಕಾಲೇಜಿನ ವತಿಯಿಂದ ವಿಶೇಷ ತರಬೇತಿ, ಅಣಕು ಪರೀಕ್ಷೆಗಳು ಹಾಗೂ ಮಾರ್ಗದರ್ಶನ ಕಾರ್ಯಾಗಾರಗಳನ್ನು ನಿರಂತರವಾಗಿ ಆಯೋಜಿಸಲಾಗುತ್ತಿದೆ. ಈ ಪರೀಕ್ಷೆಯ ಮೂಲಕ ಭಾರತೀಯ ಸೇನೆ, ನೌಕಾಪಡೆ ಮತ್ತು ವಾಯುಪಡೆಗಳಲ್ಲಿ ಅಧಿಕಾರಿಗಳಾಗಿ ಸೇವೆ ಸಲ್ಲಿಸಲು ಅವಕಾಶ ದೊರೆಯುತ್ತದೆ. ವಿದ್ಯಾರ್ಥಿಗಳ ಸಾಧನೆಯನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಅಭಿನಂದಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಒಂದು ಗ್ರಾಮ ಅಭಿವೃದ್ಧಿ ಹೊಂದಬೇಕಾದರೆ ಅಲ್ಲಿನ ಸುತ್ತಮುತ್ತಲಿನ ಪರಿಸರದಲ್ಲಿನ ಸೌಲಭ್ಯಗಳ ವ್ಯವಸ್ಥೆಯ ಮೇಲೆ ಅವಲಂಬಿತಗೊಳ್ಳುತ್ತದೆ ಆದರೆ ಮಣೂರು ಪಡುಕರೆ ಹಿಂದೆ ಇದ್ದ ಸ್ಥಿತಿಗಿಂತ ಪ್ರಸ್ತುತ ಅಭಿವೃದ್ಧಿ ಹೊಂದುತ್ತಿರುವ ಕೇಂದ್ರವಾಗಿ ಮೂಡಿ ಬಂದಿದೆ ಇದಕ್ಕೆ ಇಲ್ಲಿನ ದಾನಿಗಳಾದ ಆನಂದ್ ಸಿ ಕುಂದರ್ ಎಂಬ ಶಕ್ತಿ ಕಾರಣ ಎಂದು ರಾಷ್ಟ್ರೀಯ ಮಾನವ ಹಕ್ಕು ರಾಜ್ಯ ಸಮಿತಿ ಪ್ರಧಾನಕಾರ್ಯದರ್ಶಿ ದಿನೇಶ್ ಗಾಣಿಗ ಹೇಳಿದರು ಅವರು ಭಾನುವಾರ ಮಣೂರು ಪಡುಕರೆಯಲ್ಲಿ ಗೀತಾನಂದ ಫೌಂಡೇಶನ್ ವತಿಯಿಂದ ನಿರ್ಮಾಣಗೊಂಡ ನೂತನ ರಿಕ್ಷಾ ನಿಲ್ದಾಣದ ಲೋಕಾರ್ಪಣಾ ಸಮಾರಂಭದಲ್ಲಿ ಮಾತನಾಡಿದರು. ಕುಂದರ್ ಗ್ರಾಮೀಣ ಭಾಗದಲ್ಲಿ ಶೈಕ್ಷಣಿಕ, ಧಾರ್ಮಿಕ, ಸಾಮಾಜಿಕ ಕಾರ್ಯಗಳಿಗೆ ಅನುದಾನ ಒದಗಿಸಿ ಪರಿಸರದ ಅದೆಷ್ಟೋ ಕುಟುಂಬಗಳಿಗೆ ಆಸರೆಯಾಗಿದ್ದಾರೆ,ಇದೀಗ ಮಣೂರು ಪಡುಕರೆ ಸರ್ಕಲ್ ಸುಂದರ ನಗರ ಪಟ್ಟಣ ವ್ಯಾಪ್ತಿಯ ರೀತಿಯಲ್ಲಿ ಅಭಿವೃದ್ಧಿಗೊಳಿಸಿದ್ದಾರೆ ಇಂತಹ ಮಹಾದಾನಿ ಬಲುಅಪರೂಪ ಎಂದರು. ಕಾರ್ಯಕ್ರಮದಲ್ಲಿ ಆಟೋ ನಿಲ್ದಾಣದ ರೂವಾರಿ ಆನಂದ್ ಸಿ. ಕುಂದರ್ ಹಾಗೂ ಅರ್ಚಕ ನರಸಿಂಹಯ್ಯ ಅವರನ್ನು ಸನ್ಮಾನಿಸಲಾಯಿತು ಸಭಾಧ್ಯಕ್ಷತೆಯನ್ನು ರಿಕ್ಷಾ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಮೊಬೈಲ್ ಸಂದೇಶಗಳ ಭರಾಟೆಯಲ್ಲಿ ಪತ್ರದ ಮಧುರತೆಯನ್ನು ಮರೆತಿರುವ ಇಂದಿನ ಕಾಲಘಟ್ಟದಲ್ಲಿ, ಕ್ರಿಯೇಟಿವ್ ಗ್ಲೋಬಲ್ ಶಾಲೆಯ ವಿದ್ಯಾರ್ಥಿಗಳು ಅಂಚೆ ದಿನಾಚರಣೆಯನ್ನು ವಿಶೇಷವಾಗಿ ಆಚರಿಸಿದರು. ವಿದ್ಯಾರ್ಥಿಗಳು ತಮ್ಮ ಕೈಬರಹದಲ್ಲಿ ಅಪ್ಪ-ಅಮ್ಮನಿಗೆ ಹಬ್ಬದ ಶುಭಾಶಯಗಳನ್ನು ಕೋರಿ, ಪ್ರೀತಿ ಮತ್ತು ಭಾವನೆಗಳನ್ನು ತುಂಬಿದ ಪತ್ರಗಳನ್ನು ಬರೆದರು. ಬಳಿಕ ಅಂಚೆ ಕಚೇರಿಗೆ ಭೇಟಿ ನೀಡಿ, ಅಂಚೆ ವ್ಯವಸ್ಥೆಯ ಕಾರ್ಯವೈಖರಿ, ಪತ್ರಗಳ ವಿಂಗಡಣೆ ಮತ್ತು ಅವುಗಳನ್ನು ಮನೆಮನೆಗೆ ತಲುಪಿಸುವ ಪ್ರಕ್ರಿಯೆಯ ಕುರಿತು ಮಾಹಿತಿ ಪಡೆದರು. ತಾವೇ ಬರೆದ ಪತ್ರಗಳನ್ನು ಅಂಚೆ ಪೆಟ್ಟಿಗೆಯಲ್ಲಿ ಹಾಕುವ ಮೂಲಕ ತಮ್ಮ ಪ್ರೀತಿಯ ಸಂದೇಶಗಳು ಮನೆಯವರನ್ನು ತಲುಪುವಂತೆ ಮಾಡಿದರು. ಮಕ್ಕಳಿಗೆ ಇದೊಂದು ಹೊಸ ಅನುಭವ, ಕುತೂಹಲಕಾರಿ ಕಲಿಕೆ ಮತ್ತು ಮರೆಯಲಾಗದ ಸಂಭ್ರಮವಾಯಿತು. ಮನೆಗೆ ಪತ್ರ ತಲುಪಿದಾಗ ಅನೇಕ ಪೋಷಕರು ವ್ಯಕ್ತಪಡಿಸಿದ ಸಂತೋಷ ಮತ್ತು ಭಾವನಾತ್ಮಕ ಪ್ರತಿಕ್ರಿಯೆಗಳು ಈ ಪ್ರಯತ್ನದ ಸಾರ್ಥಕತೆಯನ್ನು ಸಾರಿದವು. ಮೊಬೈಲ್ ಸಂದೇಶಗಳು ಕ್ಷಣಾರ್ಧದಲ್ಲಿ ತಲುಪುವ ಈ ಡಿಜಿಟಲ್ ಯುಗದಲ್ಲಿ, ಮಕ್ಕಳ ಮುಗ್ಧ ಮನಸ್ಸಿನ ಪ್ರೀತಿ, ತಮ್ಮ ಕೈಬರಹದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಹೆಬ್ರಿಯ ನಮ ತುಳುವೆರ್ ಕಲಾ ಸಂಘಟನೆ(ರಿ.) ಕೊಡಮಾಡಲ್ಪಡುವ 2026-27 ನೇ ಸಾಲಿನ ಕರ್ಣಾಟನಾಡ ಪೋಷಕ ಪ್ರಶಸ್ತಿ ಕಂಟೆಂಟ್ ಕ್ರಿಯೇಟರ್, ಹೆಗ್ಗದ್ದೆ ಸಮೂಹ ಸಂಸ್ಥೆಗಳ ಮಾಲೀಕ ಸಂದೀಪ್ ಶೆಟ್ಟಿ ಹೆಗ್ಗದ್ದೆಗೆ ಲಭಿಸಿದೆ. 26ನೇ ವರ್ಷದ ನವರಂಗೋತ್ಸವದಲ್ಲಿ ನಾಟ್ಕ ಮುದ್ರಾಡಿಯ 41ನೇ ವರ್ಷದ ಸಂಭ್ರಮದಲ್ಲಿ ಈ ಪ್ರಶಸ್ತಿಯನ್ನು ಪ್ರದಾನಿಸಲಾಯಿತು. ಮಾಧ್ಯಮ ವಿಭಾಗದಲ್ಲಿ, ಡಿಜಿಟಲ್ ಲೋಕದಲ್ಲಿ ಸರಿಸುಮಾರು ವರ್ಷದಿಂದ ವೃತ್ತಿಯಲ್ಲಿರುವ, 8000 ಕ್ಕೂ ಅಧಿಕ ಕಾರ್ಯಕ್ರಮಗಳ ಮೂಲಕ ಜನ ಮನದಲ್ಲಿ ಮಿಲಿಯನ್ ಗಟ್ಟಲೇ ಜನರ ಪ್ರೀತಿ ಸಂಪಾದಿಸಿರುವ ಸಂದೀಪ್ ಶೆಟ್ಟಿ ಹೆಗ್ಗದ್ದೆಯವರ ಕಾರ್ಯವೈಖರಿಯನ್ನ ಗಮನಿಸಿ ಈ ಪ್ರಶಸ್ತಿ ನೀಡಲಾಗಿದೆ. ಇವರ ಕೆಲಸ ಕಾರ್ಯ ಇನ್ನೂ ಹೆಚ್ಚಿನ ಮಟ್ಟದಲ್ಲಿ ಪ್ರಭೆ ಬೀರಲಿ ಎಂದು ಮುದ್ರಾಡಿಯ ಅಭಯಹಸ್ತೆ ಆದಿಶಕ್ತಿ ಸನ್ನಿಧಾನದ ಮೊಕ್ತೇಸರರು, ನಾಟ್ಕ ಮುದ್ರಾಡಿಯ ಅಧ್ಯಕ್ಷರು ಸನ್ಮಾನಿಸಿ ಹಾರೈಸಿದರು. ಪ್ರಶಸ್ತಿಯನ್ನ ಸ್ವೀಕರಿಸಿದ ಸಂದೀಪ್ ಶೆಟ್ಟಿ ಹೆಗ್ಗದ್ದೆ ಮಾತನಾಡಿ ಪ್ರಶಸ್ತಿ ಪಡೆಯುವಾಗ ನಮ್ಮ ಜವಾಬ್ಧಾರಿಗಳು ಜಾಸ್ತಿಯಾಗುತ್ತವೆ. ನಮ್ಮ ಹಿರಿಮೆ ಗರಿಮೆಯ ಜೊತೆಗೆ ಇನ್ನೂ…

Read More