Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ತಾಲೂಕಿನ ಪಾರಂಪಳ್ಳಿ ಗ್ರಾಮದ ಮಸೀದಿ ಬಳಿಯ ಬೀಚ್ ಹತ್ತಿರದ ಪತ್ನಿ ಮನೆಯಲ್ಲಿ ವಾಸವಿದ್ದ ಮೊಹಮ್ಮದ್ ಇಕ್ಬಾಲ್  (47) ಸೋಮವಾರ ಬೆಳಗಿನ ಜಾವ ಮೃತಪಟ್ಟಿದ್ದು ಅವರ ಸಾವಿನ ಬಗ್ಗೆ ಸಂಶಯ ವ್ಯಕ್ತಪಡಿಸಿ ಕೋಟ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಕೋಟತಟ್ಟು ಗ್ರಾಮದ ನಿವಾಸಿ ಆಟೋ ಹಾಗೂ ಲ್ಯಾಂಡ್ ಲಿಂಕ್ ಕೆಲಸ ನಿರ್ವಹಿಸುತ್ತಿದ್ದ ಮೊಹಮ್ಮದ್ ಇಕ್ಸಾಲ್ ಪತ್ನಿಯ ಮನೆಯಲ್ಲಿ ವಾಸವಾಗಿದ್ದರು. ಅ.19ರಂದು ಬೆಳಗಿನ ಜಾವ ಇಟ್ಬಾಲ್ ಅವರನ್ನು ಕೋಟೇಶ್ವರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬೆಳಗಿನ ಜಾವ ಅವರು ಮೃತಪಟ್ಟಿರುವುದಾಗಿ ವೈದ್ಯಾಧಿಕಾರಿಗಳು ತಿಳಿಸಿದ್ದಾರೆ. ಇಕ್ಬಾಲ್ ಮತ್ತು ಪತ್ನಿ ಸಫ್ರಾಭಿ ನಡುವೆ ಆಗಾಗ್ಗೆ ಗಲಾಟೆ ನಡೆಯುತ್ತಿರುವುದಾಗಿ ಇನ್ಸಾಲ್ ಮನೆಗೆ ಬಂದಾಗ ಹೇಳಿಕೊಳ್ಳುತ್ತಿದ್ದರು. ಅದೇ ರೀತಿ ಅವರ ಪತ್ನಿ ಹಾಗೂ ಪತ್ನಿಯ ಮನೆಯವರು ಹಿಂದಿನಂತೆ ಗಲಾಟೆ ಮಾಡಿರುವ ಸಾಧ್ಯತೆಯಿದ್ದು, ಅವರ ಸಾವಿನಲ್ಲಿ ಸಂಶಯವಿದೆ ಎಂದು ಇಕ್ಸಾಲ್ ಅವರ ಸಹೋದರಿ ಬಲ್ಕಿಸ್ ಅವರು ಕೋಟ ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ಈ ಕುರಿತು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರಾಂಗಣದಲ್ಲಿರುವ ಸರಸ್ವತಿ ದೇವರ ಮೂರ್ತಿಗೆ ನವರಾತ್ರಿಯ ಪ್ರಯುಕ್ತ ವಿಶೇಷ ಪೂಜೆ ಸಲ್ಲಿಸಲಾಯಿತು. ಕಾಲೇಜಿನ ಗ್ರಂಥಾಲಯದಲ್ಲಿ ಶಾರದಾ ಪೂಜಾ ಕಾರ್ಯಕ್ರಮವನ್ನು ಭಜನಾ ಕೀರ್ತನೆಯೊಂದಿಗೆ ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಕಾಲೇಜಿನ ಗಣಕ ವಿಜ್ಞಾನ ವಿಭಾಗದ ಸಹ ಪ್ರಾಧ್ಯಾಪಕರಾದ ಗಿರಿರಾಜ್ ಭಟ್ ಅವರು ಪೂಜಾ ವಿಧಿವಿಧಾನಗಳನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ| ಕೆ. ಉಮೇಶ್ ಶೆಟ್ಟಿ, ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ, ಮುಖ್ಯ ಗ್ರಂಥಪಾಲಕರಾದ ಮಹೇಶ್ ನಾಯ್ಕ್, ಗ್ರಂಥಾಲಯ ಸಹಾಯಕಿ ಪ್ರತೀಕಾ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಮತ್ತು ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಶಂಕರನಾರಾಯಣ ಇದರ ಸಹಕಾರದೊಂದಿಗೆ ಶಂಕರನಾರಾಯಣದಲ್ಲಿ ನಡೆದ ’ಯುವ ಸೌರಭ’ 2026-27ನೇ ಸಾಲಿನ ಯುವ ಪ್ರತಿಭೆಗಳ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ದಾಖಲೆಯ ಕೊಳಲು ವಾದಕ ಶಾಮ್ ಜಿ. ಎನ್. ಪೂಜಾರಿ ಗಂಗೊಳ್ಳಿ ಇವರಿಂದ ಕೊಳಲು ವಾದನ ಕಾರ್ಯಕ್ರಮ ನಡೆಯಿತು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಆಧುನಿಕ ವೈದ್ಯಕೀಯ ತಂತ್ರಜ್ಞಾನ, ಪರಿಣತ ವೈದ್ಯಕೀಯ ಸೇವೆ ಮತ್ತು ಕೈಗೆಟುಕುವ ದರದ ಚಿಕಿತ್ಸೆಯ ಮೂಲಕ ಜನಸಾಮಾನ್ಯರಿಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುತ್ತಿರುವ ಮೂಡುಬಿದಿರೆಯ ಆಳ್ವಾಸ್ ಆರೋಗ್ಯ ಕೇಂದ್ರವು ಶಸ್ತçಚಿಕಿತ್ಸಾ ಕ್ಷೇತ್ರದಲ್ಲಿ ಗಮನಾರ್ಹ ಸಾಧನೆ ಮಾಡಿದೆ. ಕಳೆದ ಒಂದು ದಶಕದಲ್ಲಿ ಕೇಂದ್ರದಲ್ಲಿ 5,000ಕ್ಕೂ ಅಧಿಕ ಲ್ಯಾಪ್ರೊಸ್ಕೋಪಿಕ್ ಶಸ್ತçಚಿಕಿತ್ಸೆಗಳು ಮತ್ತು ಎಂಡೋಸ್ಕೋಪಿಕ್ ಪ್ರಕ್ರಿಯೆಗಳನ್ನು ನಡೆಸಲಾಗಿದೆ. ಆಧುನಿಕ ಶಸ್ತçಚಿಕಿತ್ಸಾ ವಿಧಾನಗಳನ್ನು ಸ್ಥಳೀಯವಾಗಿಯೇ ಲಭ್ಯವಾಗಿಸುವ ಮೂಲಕ ರೋಗಿಗಳಿಗೆ ಸುಧಾರಿತ ಚಿಕಿತ್ಸಾ ಸೇವೆ ಒದಗಿಸುವಲ್ಲಿ ಕೇಂದ್ರ ಮಹತ್ವದ ಹೆಜ್ಜೆ ಇರಿಸಿದೆ. 1986ರ ಮೇ.31 ರಂದು ಡಾ. ಎಂ. ಮೋಹನ್ ಆಳ್ವರಿಂದ ಸ್ಥಾಪನೆಯಾದ ಆಳ್ವಾಸ್ ಆರೋಗ್ಯ ಕೇಂದ್ರವು ಮೂಡುಬಿದಿರೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಜನರಿಗೆ ವಿವಿಧ ವೈದ್ಯಕೀಯ ಮತ್ತು ಶಸ್ತçಚಿಕಿತ್ಸಾ ಸೇವೆಗಳನ್ನು ಒದಗಿಸುತ್ತಿದೆ. ಸಾಮಾನ್ಯ ಶಸ್ತçಚಿಕಿತ್ಸೆ, ಲ್ಯಾಪ್ರೊಸ್ಕೋಪಿಕ್ ಶಸ್ತçಚಿಕಿತ್ಸೆ ಮತ್ತು ಎಂಡೋಸ್ಕೋಪಿಕ್ ಚಿಕಿತ್ಸಾ ವಿಧಾನಗಳಿಗೆ ವಿಶೇಷ ಆದ್ಯತೆ ನೀಡಲಾಗಿದ್ದು, ಶಸ್ತçಚಿಕಿತ್ಸಾ ತಜ್ಞ ಡಾ. ವಿನಯ್ ಆಳ್ವರ ನೇತೃತ್ವದಲ್ಲಿ ವಿಭಾಗವು ಆಧುನಿಕ ಚಿಕಿತ್ಸಾ ತಂತ್ರಗಳನ್ನು ಅಳವಡಿಸಿಕೊಂಡಿದೆ.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಗ್ರಾಮೀಣ ಪ್ರದೇಶದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣವನ್ನು ಒದಗಿಸುವ ಉದ್ದೇಶದಿಂದ 2001ರಲ್ಲಿ ಆರಂಭಗೊಂಡ ಸೈಂಟ್ ಥಾಮಸ್ ಹೈಯರ್ ಪ್ರೈಮರಿ ಸ್ಕೂಲ್ ಇದೀಗ ‘ಸೈಂಟ್ ಥಾಮಸ್ ಸೆಂಟ್ರಲ್ ಸ್ಕೂಲ್’ ಎಂಬ ನೂತನ ಹೆಸರಿನೊಂದಿಗೆ ಗುರುತಿಸಿಕೊಳ್ಳಲಿದೆ. ಕರ್ನಾಟಕ ಸರ್ಕಾರದ ಅನುಮೋದನೆ ಹಾಗೂ ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿಯ (CBSE) ಮಾನ್ಯತೆಯ ಮೇರೆಗೆ ಶಾಲೆಯ ಮರುನಾಮಕರಣಕ್ಕೆ ಅನುಮೋದನೆ ದೊರೆತಿದ್ದು, ಈ ಕುರಿತು ಅಧಿಕೃತ ಆದೇಶ ಹೊರಡಿಸಲಾಗಿದೆ ಎಂದು ಶಾಲೆಯ ಪ್ರಕಟಣೆ ತಿಳಿಸಿದೆ. ಮಂಡಳಿಯು 18-10-2026ರಂದು ಪತ್ರ ಸಂಖ್ಯೆ CNOO 180-27 28/2027-28ರ ಮೂಲಕ ಮರುನಾಮಕರಣಕ್ಕೆ ಸಂಬಂಧಿಸಿದ ಆದೇಶ ನೀಡಿದೆ ಎಂದು ತಿಳಿಸಲಾಗಿದೆ. ಇನ್ನು ಮುಂದೆ ಶಾಲೆಯ ಅಧಿಕೃತ ದಾಖಲೆಗಳು, ಪತ್ರವ್ಯವಹಾರಗಳು ಹಾಗೂ ಶೈಕ್ಷಣಿಕ ಚಟುವಟಿಕೆಗಳಲ್ಲಿ ‘ಸೈಂಟ್ ಥಾಮಸ್ ಸೆಂಟ್ರಲ್ ಸ್ಕೂಲ್’ ಎಂಬ ಹೆಸರನ್ನು ಬಳಸಲಾಗುತ್ತದೆ. ಗ್ರಾಮೀಣ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಆದ್ಯತೆಗ್ರಾಮೀಣ ಭಾಗದ ಮಕ್ಕಳಿಗೂ ನಗರ ಪ್ರದೇಶದ ವಿದ್ಯಾರ್ಥಿಗಳಿಗೆ ಲಭ್ಯವಾಗುವ ಗುಣಮಟ್ಟದ ಶಿಕ್ಷಣ ಹಾಗೂ ಆಧುನಿಕ ಕಲಿಕಾ ಸೌಲಭ್ಯಗಳು ದೊರೆಯಬೇಕು ಎಂಬ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ ಆಯೋಜಿಸಲಾದ 2026ನೇ ಸಾಲಿನ SGFI (State Syllabus) 14 ವರ್ಷದೊಳಗಿನ ಬಾಲಕ ಮತ್ತು ಬಾಲಕಿಯರ ಕರ್ನಾಟಕ ರಾಜ್ಯಮಟ್ಟದ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ ಕುಂದಾಪುರದ ಕಶ್ವಿ ಚೆಸ್ ಶಾಲೆಯ ಪ್ರತಿಭಾನ್ವಿತ ಚೆಸ್ ಆಟಗಾರರಾದ ಅವನೀಶ್ ಪ್ರಸಾದ್ ಕೆ. ಹಾಗೂ ಲಾಸ್ಯ ಶೆಟ್ಟಿ ಅತ್ಯುತ್ತಮ ಪ್ರದರ್ಶನ ನೀಡಿ ರಾಜ್ಯಮಟ್ಟದಲ್ಲಿ ತೃತೀಯ ಹಾಗೂ ನಾಲ್ಕನೇ ಸ್ಥಾನಗಳನ್ನು ಗಳಿಸುವ ಮೂಲಕ ರಾಷ್ಟ್ರೀಯ ಮಟ್ಟದ ಚೆಸ್ ಚಾಂಪಿಯನ್‌ಶಿಪ್‌ಗೆ ಆಯ್ಕೆಯಾಗಿದ್ದಾರೆ. ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಅಕ್ಟೋಬರ್ 15ರಿಂದ 17ರವರೆಗೆ ನಡೆದ SGFI ಕರ್ನಾಟಕ ರಾಜ್ಯಮಟ್ಟದ 14 ವರ್ಷದೊಳಗಿನ ಬಾಲಕ ಮತ್ತು ಬಾಲಕಿಯರ ಚೆಸ್ ಚಾಂಪಿಯನ್‌ಶಿಪ್‌ ನಲ್ಲಿ ಕುಂದಾಪುರದ ಕಾಶ್ವಿ ಚೆಸ್ ಶಾಲೆಯ ವಿದ್ಯಾರ್ಥಿಗಳಾದ ಅವನೀಶ್ ಪ್ರಸಾದ್ ಕೆ. ಹಾಗೂ ಲಾಸ್ಯ ಶೆಟ್ಟಿ ಅವರು ಅತ್ಯುತ್ತಮ ಪ್ರದರ್ಶನ ನೀಡಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಕರ್ನಾಟಕದ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ಪ್ರತಿಭಾನ್ವಿತ ಚೆಸ್ ಆಟಗಾರರು ಭಾಗವಹಿಸಿದ್ದರು. ತೀವ್ರ ಪೈಪೋಟಿಯ ನಡುವೆಯೂ ಕುಂದಾಪುರದ ಇಬ್ಬರು ವಿದ್ಯಾರ್ಥಿಗಳು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಸಂಸ್ಕಾರವು ವ್ಯಕ್ತಿಯ ವ್ಯಕ್ತಿತ್ವವನ್ನು ರೂಪಿಸಿದರೆ, ಶಿಸ್ತು ಆ ವ್ಯಕ್ತಿತ್ವಕ್ಕೆ ಘನತೆಯನ್ನು ತಂದುಕೊಡುತ್ತದೆ. ಉತ್ತಮ ಸಂಸ್ಕಾರ ಮತ್ತು ಶಿಸ್ತಿನ ಜೀವನವು ಯಶಸ್ಸಿನ ಹಾದಿಯಲ್ಲಿ ಮುನ್ನಡೆಯಲು ಸಹಕಾರಿಯಾಗಿದೆ”ಎಂದು ಮಂದಾರ್ತಿ ಶ್ರೀ ದುರ್ಗಾಪರಮೇಶ್ವರಿ ದೇವಳ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ರವಿಚಂದ್ರ ಬಾಯರಿ ಹೇಳಿದರು. ಅವರು ಮಂದಾರ್ತಿಯಲ್ಲಿ ನಡೆಯುತ್ತಿರುವ ಡಾl ಬಿ.ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕಗಳ ವಾರ್ಷಿಕ ವಿಶೇಷ ಶಿಬಿರದಲ್ಲಿ ಶೈಕ್ಷಣಿಕ ಕಾರ್ಯಕ್ರಮದ ಭಾಗವಾಗಿ” ಸಂಸ್ಕಾರದ ಬೆಳಕಿನಲ್ಲಿ ಶಿಸ್ತಿನ ಪಯಣ” ಎಂಬ ವಿಷಯದ ಕುರಿತು ಉಪನ್ಯಾಸ ನೀಡಿ ಮಾತನಾಡಿದರು. ಇದೇ ಸಂದರ್ಭ ಅವರು ವಿದ್ಯಾರ್ಥಿಗಳಲ್ಲಿ ಉತ್ತಮ ಸಂಸ್ಕಾರಗಳನ್ನು ಬೆಳೆಸುವಲ್ಲಿ ಕುಟುಂಬ, ಶಾಲೆ ಹಾಗೂ ಸಮಾಜದ ಪಾತ್ರ ಮಹತ್ವದ್ದಾಗಿದೆ. ಸಂಸ್ಕಾರವೇ ಶಿಸ್ತಿನ ಬದುಕಿಗೆ ಭದ್ರಬುನಾದಿ ಎಂದರು. ಮಂದಾರ್ತಿ ಲಕ್ಷ್ಮೀ ಗ್ರೂಪ್ ನ ದೇವದಾಸ್ ಶೆಟ್ಟಿ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ದುರ್ಗಾಪರಮೇಶ್ವರಿ ದೇವಳದ ಪದವಿ-ಪೂರ್ವ ಕಾಲೇಜಿನ ಹಿಂದಿ ಉಪನ್ಯಾಸಕಿ ರೇಷ್ಮಾ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಪಂಚವರ್ಣ ಯುವಕ ಮಂಡಲ ಕೋಟ ಹಾಗೂ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ಕೋಟ ಇವರ ನೇತೃತ್ವದಲ್ಲಿ ರೋಟರಿ ಸಮುದಾಯದಳ ಕೋಟೇಶ್ವರ ಇವರ ಸಹಭಾಗಿತ್ವದಡಿ ೩೨೧ನೇ ಪರಿಸರಸ್ನೇಹಿ ಭಾನುವಾರದ ಪ್ರಯುಕ್ತ ಕುಂಭಾಶಿ ಆನೆಗುಡ್ಡೆ ಶ್ರೀವಿನಾಯಕ ದೇಗುಲ ವಠಾರ ಸ್ವಚ್ಛತಾಕಾರ್ಯಕ್ರಮ ಭಾನುವಾರ ಹಮ್ಮಿಕೊಂಡಿತು. ದೇಗುಲ ಸ್ವಚ್ಛತಾ ಕಾರ್ಯಕ್ಕೆ ದೇಗುಲದ ಮುಕ್ತೇಸರ ಶ್ರೀರಮಣ ಉಪಾಧ್ಯಾಯ ಚಾಲನೆ ನೀಡಿದರು. ಸ್ವಚ್ಛತಾ ಕಾರ್ಯದ ಅಂಗವಾಗಿ ದೇಗುಲದ ವ್ಯವಸ್ಥಾಪಕ ನಟೇಶ್ ಕಾರಂತ ಸ್ವಚ್ಛಾಗೃಹಿ ಪಂಚವರ್ಣ ಸಂಘಟನೆ ಪರವಾಗಿ ಲಲಿತಾ ಪೂಜಾರಿ ಹಾಗೂ ರೋಟರಿ ಸಮುದಾಯದಳದ ಪರವಾಗಿ ಸುಪ್ರಿತಾ ಪುರಾಣಿಕ್ ಇವರುಗಳನ್ನು ವಿಶೇಷವಾಗಿ ಗುರುತಿಸಿ ಗೌರವಿಸಲಾಯಿತು. ಪಂಚವರ್ಣ ಸಂಘಟನೆಯ ಸ್ಥಾಪಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ,ರೋಟರಿ ಸಮುದಾಯ ದಳದ ಪ್ರಮುಖರು ಉಪಸ್ಥಿತರಿದ್ದರು. ನಡಿಗೆಗಾಗಿ ಪಾದರಕ್ಷೆ ಅಭಿಯಾನ:ಸ್ವಚ್ಛತಾ ಕಾರ್ಯಕ್ರಮದಲ್ಲಿ  ಸಮಾಜಸೇವಕ ಅವಿನಾಶ್ ಕಾಮತ್  ನೇತೃತ್ವದಲ್ಲಿ ಇದೇ ಅಕ್ಟೋಬರ್ 23,24,25 ರಂದು ನಡೆಯುವ ನಡಿಗೆ ಹಳೆಯ ಪಾದರಕ್ಷೆ ಅಭಿಯಾನಕ್ಕೆ ಪಂಚವರ್ಣ ಸಂಘಟನೆ ಹಾಗೂ ರೋಟರಿ ಸಮುದಾಯ ಕೋಟೇಶ್ವರ ಕೈಜೋಡಿಸಿದ್ದು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಇಲ್ಲಿನ ಕೋಟದ ಅಮೃತೇಶ್ವರೀ ಹಲವು ಮಕ್ಕಳ ತಾಯಿ ದೇಗುಲದಲ್ಲಿ ಶರನ್ನವರಾತ್ರಿ ಅಂಗವಾಗಿ ಪ್ರತಿದಿನ ದುರ್ಗಾಹೋಮ ಕಾರ್ಯಕ್ರಮಗಳು ಜರಗುತ್ತಿದ್ದು ಭಾನುವಾರ ಸಂಸದ ಕೋಟ ಶ್ರೀನಿವಾಸ ಪೂಜಾರಿ ಸಹಿತ ಹಲವು ಸೇವಾರ್ತಿಗಳಿಂದ ದುರ್ಗಾಹೋಮ ಕಾರ್ಯಕ್ರಮಗಳು ಜರಗಿದವು. ವೇ.ಮೂ.ಮಧುಸೂದನ್ ಬಾಯರಿ ನೇತೃತ್ವದಲ್ಲಿ ನಡೆದ ಹೋಮಾಧಿಕಾರ್ಯಕ್ರಮದಲ್ಲಿ ಸಂಸದ ಕೋಟ ಹಾಗೂ ಪತ್ನಿ ಶಾಂತ ಮತ್ತು ಮಕ್ಕಳು ಇತರ ಸೇವಾರ್ತಿಗಳಾದ ಲಕ್ಷ್ಮಿ ಮತ್ತು ನರಸಿಂಹ ಪೂಜಾರಿ ಹಾಗೂ ಕುಟುಂಬ ಅಪೂರ್ವ ನಿಲಯ ಹಾಡಿಕೆರೆ ಕೋಟ, ಸಜನಿ ಮತ್ತು  ಆದಿತ್ಯ ಕೋಟ್ಯಾನ್ ಕುಟುಂಬದವರು, ನಡುಬೆಟ್ಟು ಮಣೂರು ಇವರು ಸೇವಾರ್ತಿಗಳಾಗಿ ಭಾಗಿಯಾದರು. ದೇಗುಲದ ಅಧ್ಯಕ್ಷ ಆನಂದ್ ಸಿ. ಕುಂದರ್ ಸೇವಾರ್ತಿಗಳಿಗೆ ಶಾಲು ಹೊದಿಸಿ ಪ್ರಸಾದ ನೀಡಿ ಗೌರವಿಸಿದರು. ದೇಗುಲದ ಟ್ರಸ್ಟಿಗಳಾದ ರತನ್ ಐತಾಳ್, ಸುಭಾಷ್ ಶೆಟ್ಟಿ, ಶಿವ ಪೂಜಾರಿ, ಗಣೇಶ್ ನೆಲ್ಲಿಬೆಟ್ಟು, ಸುಧಾ ಎ. ಪೂಜಾರಿ, ಜ್ಯೋತಿ ಕಾಂಚನ್, ಸುಬ್ರಾಯ ಜೋಗಿ, ಚಂದ್ರ ಅಚಾರ್ಸಹಿತ ಹಲವರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಕೃಷಿ ಮತ್ತು ತೋಟಗಾರಿಕಾ ಬೆಳೆಗಳ ಮೌಲ್ಯವರ್ಧನೆಗೆ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಜಾರಿಗೆ ತಂದಿರುವ ಯೋಜನೆಗಳನ್ನು ಇನ್ನಷ್ಟು ಪರಿಣಾಮಯಾಗಿ ರೈತಾಪಿ ವರ್ಗದವರಿಗೆ ತಲುಪಿಸಿ, ಅವರುಗಳನ್ನು ಸ್ವಾವಲಂಭಿಗಳನ್ನಾಗಿ ಮಾಡಬೇಕು. ಕೃಷಿ ಮತ್ತು ತೋಟಗಾರಿಕೆ ಮೇಳದ ಮೂಲಕ ಕೃಷಿಕರ ಬದುಕಿಗೆ ಆತ್ಮಸ್ಥೆöÊರ್ಯ ದೊರಕುವಂತಾಗಬೇಕು. ನೇಗಿಲ ಯೋಗಿಯ ಶ್ರಮಕ್ಕೆ ಆಧುನಿಕ ತಂತ್ರಜ್ಞಾದ ಬೆಳಕು ಸಿಗಲಿ ಎಂದು ಉಡುಪಿ- ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಶನಿವಾರ ಬ್ರಹ್ಮಾವರದ ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರದಲ್ಲಿ, ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಶಿವಮೊಗ್ಗ, ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ ಬ್ರಹ್ಮಾವರ, ಐ.ಸಿ.ಎ.ಆರ್- ಕೃಷಿ ವಿಜ್ಞಾನ ಕೇಂದ್ರ ಮತ್ತು ಡಿಪ್ಲೋಮಾ ಕೃಷಿ ಮಹಾವಿದ್ಯಾಲಯ ಬ್ರಹ್ಮಾವರ, ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ ಉಳ್ಳಾಲ ಹಾಗೂ ಇತರೆ ಕೃಷಿ ಸಂಬಂಧಿತ ಇಲಾಖೆಗಳ ಸಹಯೋಗದೊಂದಿಗೆ ನಡೆದ ಕೃಷಿ ಮತ್ತು ತೋಟಗಾರಿಕೆ ಮೇಳ…

Read More