Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ನೇಪಾಳದಲ್ಲಿ ನಡೆದ ಮಾಸ್ಟರ್ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ವಿಜೇತರಾದ ಕೋಟದ ದಿನೇಶ್ ಗಾಣಿಗ ಅವರಿಗೆ ಕೋಟ ಅಮೃತೇಶ್ವರೀ ದೇಗುಲದಲ್ಲಿ ಭವ್ಯ ಸ್ವಾಗತ ಕೋರಲಾಯಿತು. ಇದೇ ವೇಳೆ ದೇಗುಲ ವ್ಯವಸ್ಥಾಪಕ ಗಣೇಶ ಹೊಳ್ಳ ಶಾಲು ಹೋದಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಕೋಟ ಗ್ರಾ.ಪಂ ಸದಸ್ಯ ಭುಜಂಗ ಗುರಿಕಾರ, ದೇಗುಲದ ಮಾಜಿ ಟ್ರಸ್ಟಿ ಸುಬ್ರಾಯ ಆಚಾರ್, ಪಂಚವರ್ಣ ಯುವಕ ಮಂಡಲದ ಪೂರ್ವಾಧ್ಯಕ್ಷ ಅಜಿತ್ ಆಚಾರ್, ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ, ಕಾರ್ಯಾಧ್ಯಕ್ಷೆ ಕಲಾವತಿ ಅಶೋಕ್, ಪಂಚವರ್ಣದ ಉಪಾಧ್ಯಕ್ಷ ದಿನೇಶ ಆಚಾರ್ ಇದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ:  ಶಾರದಾ ವಿದ್ಯಾಲಯ ಕೊಡೈಲ್‌ ಬೈಲ್ ಮಂಗಳೂರು ಇಲ್ಲಿ ನಡೆದ ವೈಜ್ಞಾನಿಕ ಮಾದರಿ ಸಂರಚನೆಯ ಸ್ಪರ್ಧೆಯಲ್ಲಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿದ್ದು ದ್ವಿತೀಯ ಮತ್ತು ತೃತೀಯ ಸ್ಥಾನಗಳನ್ನು ಪಡೆದುಕೊಂಡಿದ್ದಾರೆ. ವಿದ್ಯಾರ್ಥಿಗಳು ಸ್ವತಃ ತಮ್ಮ ಜ್ಞಾನದಿಂದ ವಿಜ್ಞಾನದ ಮಾದರಿಗಳನ್ನು ನಿರ್ಮಿಸಿ, ಹೊಸ ಆವಿಷ್ಕಾರದ ಪ್ರಜ್ಞೆಯನ್ನು ಅವರಲ್ಲಿ ಅರಳಿಸುವ ನಿಟ್ಟಿನಲ್ಲಿ ಈ ಸ್ಪರ್ಧೆಯನ್ನು ಆಯೋಜಿಸಿದ್ದರು. ಜ್ಯೂನಿಯರ್ ವಿಭಾಗದ ಸ್ಪರ್ಧೆಯಲ್ಲಿ ನೀರಿನ ತೇವಾಂಶವನ್ನು ಗುರುತಿಸುವ ಮಾದರಿಯನ್ನು ತಯಾರಿಸಿದ ಕೆ. ಪೃಥುಲ್ ಮತ್ತು ಮೊಹಮ್ಮದ್ ವಾಸಿಲ್ ತೃತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಸೀನಿಯರ್ ವಿಭಾಗದ ಸ್ಪರ್ಧೆಯಲ್ಲಿ ನವೀನ ಕೃಷಿ ಮಾದರಿಯ ಪ್ರದರ್ಶನ ನಡೆಸಿದ ಚಿನ್ಮಯ್‌ ದೀಕ್ಷಿತ್ ಮತ್ತು ಅಮೋಘ ಎಮ್. ಎಸ್. ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಯನ್ನು ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿ ಮತ್ತು ಶಾಲಾ ಪ್ರಾಂಶುಪಾಲರಾದ ಶರಣ ಕುಮಾರರು ಪ್ರಶಂಸಿಸಿ, ಶುಭ ಹಾರೈಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಭಂಡಾರ್ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜಿನಲ್ಲಿ ಈ ಶೈಕ್ಷಣಿಕ ವರ್ಷದಿಂದ 2025 – 26ರಿಂದ ಕಂಪ್ಯೂಟರ್ ಸೈನ್ಸ್ ನಲ್ಲಿ ಸ್ನಾತಕೋತ್ತರ ಪದವಿ ಆರಂಭವಾಗಲಿದೆ. ಬಿ. ಎಸ್. ಸಿ ಕಂಪ್ಯೂಟರ್ ಸೈನ್ಸ್ ಮತ್ತು ಬಿಸಿಎ ಪದವಿ ಶಿಕ್ಷಣ ಪಡೆದವರು ತಮ್ಮ ದಾಖಲಾತಿಯನ್ನು ಈ ಕೋರ್ಸ್ ಗೆ ಮಾಡಿಕೊಳ್ಳಬಹುದು ಎಂದು ಕಾಲೇಜಿನ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪ್ರತಿಷ್ಠಿತ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಅತ್ಯುತ್ತಮ ಮೂಲ ಸೌಕರ್ಯ ಮತ್ತು ಶೈಕ್ಷಣಿಕ ಸೌಲಭ್ಯಗಳಿವೆ. ಮುಖ್ಯವಾಗಿ ಪ್ರಧಾನಮಂತ್ರಿ ಕೌಶಲ್ಯ ಕೇಂದ್ರವಿದೆ. ಉತ್ತಮ ಶೈಕ್ಷಣಿಕ ವಾತಾವರಣವಿದ್ದು ಇಂಟರ್ನ್ಶಿಪ್, ಪ್ರಾಜೆಕ್ಟ್ ವರ್ಕ್, ಮೈನರ್ ರಿಸರ್ಚ್ ಪ್ರಾಜೆಕ್ಟ್ ಮಾಡಲು ಉತ್ತಮ ಅವಕಾಶವಿದೆ. ವಿವಿಧ ಕಂಪನಿಗಳೊಂದಿಗೆ ಎಮ್.ಒ.ಯು ಮಾಡಿಕೊಂಡಿದ್ದು ವ್ರತ್ತಿ ಮಾರ್ಗದರ್ಶನ ಮತ್ತು ಉದ್ಯೋಗಾವಕಾಶ ಕೇಂದ್ರ ಈ ನೆಲೆಯಲ್ಲಿ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸುತ್ತಿದೆ. ಅನುಭವಿ ಉಪನ್ಯಾಸಕರು, ಸುಸಜ್ಜಿತ ಗ್ರಂಥಾಲಯ ಮತ್ತು ಪ್ರಯೋಗಾಲಯಗಳು, ವಿಭಾಗೀಯ ಗ್ರಂಥಾಲಯ ವಿದ್ಯಾರ್ಥಿನಿ ನಿಲಯ ಮ್ಯಾನೇಜ್ಮೆಂಟ್ ಸ್ಕಾಲರ್ಶಿಪ್ ಸೌಲಭ್ಯಗಳು ವಿದ್ಯಾರ್ಥಿಗಳಿಗೆ ಅಧ್ಯಯನಕ್ಕೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ನೀಡುವುದರ ಜೊತೆಜೊತೆಯಲ್ಲಿ ಕಲೆ, ಸಾಹಿತ್ಯ, ಕೌಶಲ್ಯಗಳತ್ತಲೂ ವಿಶೇಷ ಆದ್ಯತೆ ನೀಡುವ ಹಟ್ಟಿಯಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗಾಗಿ ಜಾದೂ ಪ್ರದರ್ಶನವನ್ನು ಏರ್ಪಡಿಸಲಾಗಿತ್ತು. ಖ್ಯಾತ ಜಾದೂಗಾರರಾದ ಸತೀಶ್ ಹೆಮ್ಮಾಡಿ ಅವರ ಭ್ರಮಾಲೋಕ ತಂಡವು ವಿಭಿನ್ನ ಜಾದೂ ಕೈಚಳಕಗಳ ಮೂಲಕ ವಿದ್ಯಾರ್ಥಿಗಳನ್ನು ರಂಜಿಸಿದರು. ಮಾಯದ ಜಾದೂ, ಮಾತನಾಡುವ ಗೊಂಬೆಯಂತಹ ಜಾದೂ ಪಟ್ಟುಗಳನ್ನು ಪ್ರದರ್ಶಿಸಿದ ಸತೀಶ್ ಹೆಮ್ಮಾಡಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿ, ಜಾದೂ ಎಂಬುದು ಮಾಯೆಯಲ್ಲ, ಭ್ರಮೆಯಲ್ಲ, ಅದೊಂದು ವಿಜ್ಞಾನಾಧಾರಿತ ಕೈಚಳಕ. ನಿರಂತರ ಅಭ್ಯಾಸದಿಂದ ಮಾತ್ರವೇ ಈ ಕಲೆಯಲ್ಲಿ ಪರಿಣತಿ ಹೊಂದಲು ಸಾಧ್ಯ. ಈ ಅಭ್ಯಾಸದಿಂದ ಮನಸ್ಸು ಮತ್ತು ಇಂದ್ರಿಯಗಳು ಚುರುಕಾಗುವುದರೊಂದಿಗೆ ಬುದ್ಧಿಶಕ್ತಿಯ ವೃದ್ಧಿಯಾಗುವುದು. ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯು ಹಲವಾರು ವರ್ಷಗಳಿಂದ ಹವ್ಯಾಸಿ ಕಲೆಗಳಿಗೆ ಬರಪೂರ ಪ್ರೋತ್ಸಾಹ ನೀಡುತ್ತಿದ್ದು, ಬಹಳಷ್ಟು ವಿದ್ಯಾರ್ಥಿಗಳು ಈ ಜಾದೂಕಲೆಯನ್ನು ಕರಗತ ಮಾಡಿಕೊಂಡಿದ್ದಾರೆ ಎಂದರು. ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿಗಳೂ ಹಾಗೂ ಶಾಲಾ ಪ್ರಾಂಶುಪಾಲರಾದ ಶರಣ ಕುಮಾರ, ಶಾಲಾ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಶಿಕ್ಷಣ ವ್ಯಕ್ತಿಗಳಿಗೆ ಉದ್ಯೋಗ ಪಡೆಯಲು ಅರ್ಹರನ್ನಾಗಿಸುವುದರ ಜತೆಗೆ ಆಸಕ್ತಿಯ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳಲು ವೈಯಕ್ತಿಕವಾಗಿ ಸಶಕ್ತರನ್ನಾಗಿಸುತ್ತದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರಾದ ದಿನೇಶ್ ಗುಂಡೂರಾವ್ ಹೇಳಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಆಯೋಜನೆಗೊಂಡಿರುವ ‘ಆಳ್ವಾಸ್ ಪ್ರಗತಿ’2 ದಿನಗಳ ಬೃಹತ್ ಉದ್ಯೋಗ ಮೇಳವನ್ನು ಉದ್ಘಾಟಿಸಿ ಮಾತನಾಡಿದರು. ಆಳ್ವಾಸ್ ವಿದ್ಯಾರ್ಥಿಗಳ ಭವಿಷ್ಯದ ದಾರಿಯನ್ನು ಸುಗಮಗೊಳಿಸಲು ವಿನೂತನ ಸಾಧ್ಯತೆಗಳನ್ನು ಪ್ರತಿ ವರ್ಷವೂ ತೆರೆದಿಡುತ್ತದೆ. ಶಿಕ್ಷಣ ವ್ಯವಸ್ಥೆಯನ್ನು ವ್ಯಾಪಾರವಾಗಿ ಕಾಣದೆ ಸಮಾಜದ ಒಳಿತಿಗೆ ಶ್ರಮಿಸುವ ಸಂಸ್ಥೆಯ ಬದ್ಧತೆ ನಿಜಕ್ಕೂ ಪ್ರೇರಣೀಯ. ಉತ್ತಮ ಶಿಕ್ಷಣ ಪ್ರತಿಯೊಬ್ಬರಿಗೂ ಸಿಗುವಂತೆ ಮಾಡುವುದು ಸರ್ಕಾರದ ಹಾಗೂ ಸಮಾಜದ ಕರ್ತವ್ಯ. ಉದ್ಯೋಗ ಗಳಿಸಿ ಸ್ವಂತಿಕೆಯಿಂದ ಬೆಳೆಯುವವರು ಇತರರನ್ನೂ ಬೆಳೆಸಿ ಸಮಾಜಕ್ಕೆ ಅಮೂಲ್ಯ ಆಸ್ತಿಯಾಗುತ್ತಾರೆ. ತಮ್ಮಲ್ಲಿರುವ ಪ್ರತಿಭೆಗಳನ್ನು ಹೊರ ಹಾಕಲು ಸಾಧ್ಯವಾಗದೇ ಇದ್ದಾಗ ಸಮಾಜಕ್ಕೆ ಹೊರೆಯಾಗಿ ಕಾಣುತ್ತಾರೆ. ಈ ಸಂಖ್ಯೆಯನ್ನು ಕಡಿಮೆಗೊಳಿಸುವ ಜವಾಬ್ದಾರಿ ಹೆಚ್ಚಾಗಬೇಕು. ದೇಶದಲ್ಲಿರುವ ಮಾನವ ಸಂಪನ್ಮೂಲವನ್ನು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಕೋಟ ವಿವೇಕ ಪದವಿ ಪೂರ್ವ ಕಾಲೇಜಿನ ಈ ಶೈಕ್ಷಣಿಕ ವರ್ಷದ ಸಮಾಜ ಸೇವಾ ಸಂಘದ ಉದ್ಘಾಟನಾ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ಜರುಗಿತು. ಕಾರ್ಯಕ್ರಮವನ್ನು ಗೆಳೆಯರ ಬಳಗ ಕಾರ್ಕಳ ಅಧ್ಯಕ್ಷ ಕೆ. ತಾರಾನಾಥ ಹೊಳ್ಳ ಕಾಲೇಜಿನ ಆವರಣದಲ್ಲಿ ಸಸಿ ನೆಡುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಅಧ್ಯಯನದೊಂದಿಗೆ ಸಾಮಾಜಿಕ ಸೇವೆಯಲ್ಲಿ ಭಾಗವಹಿಸಬೇಕು. ಅವಕಾಶ ಸಿಕ್ಕಾಗ ಇತರರಿಗೆ ಸಹಾಯ ಆಗುವ ಸೇವಾ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡಲ್ಲಿ ಮುಂದೆ ಸಮಾಜದಲ್ಲಿ ಉತ್ತಮ ನಾಗರಿಕನಾಗಲು ಸಾಧ್ಯ, ಇದರೊಂದಿಗೆ ಪರಿಸರ ಪ್ರೇಮವನ್ನು ಬೆಳೆಸಿಕೊಂಡು ಅದರ ರಕ್ಷಣಾ ಕಾರ್ಯದಲ್ಲಿ ತೊಡಗಿ ಪರಿಸರ ಸ್ನೇಹಿ ಆಗಬೇಕೆಂದು ಕರೆಯಿತ್ತರು. ಕಾಲೇಜಿನ ಪ್ರಾಂಶುಪಾಲ ಜಗದೀಶ ನಾವಡ ಅತಿಥಿಗಳನ್ನು ಪರಿಚಯಿಸಿ ಸ್ವಾಗತಿಸಿದರು. ಸಮಾಜ ಶಾಸ್ತ್ರ ಉಪನ್ಯಾಸಕ ಅಶೋಕ್ ಕುಮಾರ್ ಶೆಟ್ಟಿ ಮತ್ತು ಸಮಾಜ ಸೇವಾ ಸಂಘದ ಅಧ್ಯಕ್ಷ ಪವನ್ ಕುಮಾರ ವೇದಿಕೆಯಲ್ಲಿದ್ದರು. ಭೂಮಿಕಾ ಟಿಡಿ ನಿರೂಪಿಸಿ. ಸಂಘದ ಕಾರ್ಯದರ್ಶಿ ಕೃಪಾ ವಂದಿಸಿ, ಸಂಘದ ಸಂಚಾಲಕ ಕೃಷ್ಣ ಕಾರ್ಯಕ್ರಮ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ಹೆಚ್ಚಿನ ಮಳೆಯಿಂದಾಗಿ ಹಾಳಾದ ರಸ್ತೆಯ ದುರಸ್ಥಿ ಕಾರ್ಯಗಳನ್ನು ತ್ವರಿತವಾಗಿ ಮಾಡುವುದರೊಂದಿಗೆ ಸಾರ್ವಜನಿಕ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಕಾರ್ಮಿಕ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರೋಹಿಣಿ ಸಿಂಧೂರಿ ಸೂಚನೆ ನೀಡಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಪ್ರಾಕೃತಿಕ ವಿಕೋಪ ಹಾಗೂ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಹವಾಮಾನ ಇಲಾಖೆಯಿಂದ ಪ್ರತಿದಿನ ನೀಡುವ ಹವಾಮಾನ ಮುನ್ಸೂಚನೆಯ ಮಾಹಿತಿಯನ್ನು ಸಾರ್ವಜನಿಕರಿಗೆ ಹಾಗೂ ವಿಶೇಷವಾಗಿ ಮೀನುಗಾರಿಕೆಗೆ ತೆರಳುವ ಮೀನುಗಾರರುಗಳಿಗೆ ಒದಗಿಸಬೇಕು. ಮೀನುಗಾರರು ಸಮುದ್ರದಲ್ಲಿ ಮೀನುಗಾರಿಕೆ ಚಟುವಟಿಕೆಗಳಿಗೆ ಹೋಗುವಾಗ ಕಡ್ಡಾಯವಾಗಿ ಲೈಫ್ ಜಾಕೆಟ್‌ಗಳನ್ನು ಬಳಸುವಂತೆ ಮನವೊಲಿಸಬೇಕು. ಸಮುದ್ರದಲ್ಲಿ ಪ್ರಕ್ಷಬ್ಧ ವಾತಾವರಣವಿದ್ದಲ್ಲಿ ಮೀನುಗಾರಿಕೆಗೆ ಹೋಗದಂತೆ ಎಚ್ಚರವಹಿಸಬೇಕು ಎಂದರು. ಮಲ್ಪೆ ಬಂದರಿನಲ್ಲಿ ಮೀನುಗಾರಿಕೆ ಚಟುವಟಿಕೆಗಳನ್ನು ಕೈಗೊಳ್ಳಲು ಅನುಕೂಲವಾಗುವಂತೆ ಬಂದರಿನ ವಿಸ್ತರಣೆಗೆ ಯೋಜನೆಯನ್ನು ರೂಪಿಸಬೇಕು. ನೂತನ ಹೆಜಮಾಡಿ ಬಂದರಿನಲ್ಲಿ ಮೀನುಗಾರಿಕೆ ಚಟುವಟಿಕೆಗಳನ್ನು ಕೈಗೊಳ್ಳಲು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕೆಪಿಸಿಸಿ ಚುನಾವಣೆ ಪ್ರಚಾರ ಸಮಿತಿ ಉಪಾಧ್ಯಕ್ಷರನ್ನಾಗಿ ಅಬ್ದುಲ್ ಮುನೀರ್ ಜನ್ಸಾಲೆ ಅವರನ್ನು ಎಐಸಿಸಿ ಕಾರ್ಯದರ್ಶಿ ಕೆಸಿ ವೇಣುಗೋಪಾಲ್‌ ಅವರು ನೇಮಕ ಮಾಡಿ ಆದೇಶಿಸಿದ್ದಾರೆ. ಅಬ್ದುಲ್ ಮುನೀರ್ ಜನ್ಸಾಲೆ ಅವರು ಕೆಪಿಸಿಸಿ ಮಾಧ್ಯಮ ವಕ್ತಾರರು ಹಾಗೂ ತರಬೇತುದಾರರಾಗಿ ಕಾಂಗ್ರೆಸ್‌ ಪಕ್ಷದಲ್ಲಿ ಸಕ್ರಿಯರಾಗಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಬೈಂದೂರಿನ ಸೇವಾ ಸಂಗಮ ಶಿಶು ಮಂದಿರ, ಕುಂದಾಪುರ ಸೇವಾ ಸಂಗಮ ಶಿಶುಮಂದಿರದ ಟ್ರಸ್ಟ್ ವತಿಯಿಂದ 2025-26ನೇ ಸಾಲಿಗೆ ಹೊಸದಾಗಿ ಸೇರ್ಪಡೆಗೊಂಡ  ಪಾಲಕರಿಗೆ ಟ್ರಸ್ಟಿನ ಅಧ್ಯಕ್ಷರಾದ ಸುಬ್ರಮಣ್ಯ ಹೊಳ್ಳ ಕುಂದಾಪುರ ಅವರು ಭಾರತೀಯ ಸಂಸ್ಕೃತಿ-ಸಂಸ್ಕಾರ ಹಾಗೂ ಜಲ ಸಂರಕ್ಷಣೆಯ ಬಗ್ಗೆ ಮತ್ತು ನಮ್ಮ ಸುತ್ತಮುತ್ತಲಿನ ಪರಿಸರದ ಬಾಂಧವ್ಯದ ಕುರಿತಾಗಿ ಮಾಹಿತಿ ಕಾರ್ಯಾಗಾರವನ್ನು ನಡೆಸಿಕೊಟ್ಟು ಈ ಮೇಲಿನ ಮಾತನ್ನು ಹೇಳಿದರು. ಕಾರ್ಯಾಗಾರದ ಸಭಾಧ್ಯಕ್ಷತೆ ವಹಿಸಿದ್ದ ಬೈಂದೂರು ಸೇವಾ ಸಂಘದ ಅಧ್ಯಕ್ಷರಾದ ಮಂಜುನಾಥ್ ಶೆಟ್ಟಿ ಅವರು ಮಾತನಾಡಿ, ಕಳೆದ ನಾಲ್ಕು ದಶಕಗಳಿಂದ ಗ್ರಾಮೀಣ ಭಾಗವಾದ ಬೈಂದೂರಿನಲ್ಲಿ ಸೇವಾ ಸಂಗಮ ಶಿಶು ಮಂದಿರದ ಕಾರ್ಯವೈಖರಿ ಮತ್ತು ಈ ಶಿಶು ಮಂದಿರ ಅಭಿವೃದ್ಧಿಯ ಪಥದಲ್ಲಿ ಸಾಗಲು ಸಂಸ್ಕೃತಿ-ಸಂಸ್ಕಾರದೊಂದಿಗೆ ಮುನ್ನಡೆಯಲು ಸಹಕರಿಸುತ್ತಿರುವ ಎಲ್ಲ ಮಾತೆಯರಿಗೆ ಶ್ಲಾಘನೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಶಿಶುಮಂದಿರದ ಪುಟಾಣಿಗಳಿಗೆ ನೀಡಲಾದ ಆಟೋಪಕರಣವನ್ನು ಬಿಡುಗಡೆ ಮಾಡಿದರು. ವೇದಿಕೆಯಲ್ಲಿ ಸೇವಾ ಸಂಗಮದ ವ್ಯವಸ್ಥಾಪಕ ದಿನೇಶ್ ಹಾಗೂ ಉಪಾಧ್ಯಕ್ಷ ರವೀಂದ್ರ ಶಾನುಭಾಗ್ ಹಾಗೂ ಸುಧಾಕರ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಪೋಷಕರು ಮತ್ತು ಶಿಕ್ಷಕರು ಒಂದಾಗಿ ವಿದ್ಯಾರ್ಥಿಗಳ ಬದುಕು ರೂಪಿಸುವುದು ಅಗತ್ಯ. ಪದವಿ ಶಿಕ್ಷಣದ ಸಂದರ್ಭದಲ್ಲಿ ಪೋಷಕರು ಮಕ್ಕಳ ಕುರಿತು ಗಮನಹರಿಸುವುದರೊಂದಿಗೆ ಶಿಕ್ಷಕರ ಜೊತೆ ನಿರಂತರ ಸಂಪರ್ಕವನ್ನಿಟ್ಟುಕೊಳ್ಳುವುದು ಅಗತ್ಯ ಎಂದು ಕಾಲೇಜಿನ ಪ್ರಾಂಶುಪಾಲರಾದ ಕೆ. ಉಮೇಶ್ ಶೆಟ್ಟಿ ಹೇಳಿದರು. ಅವರು ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಐಕ್ಯೂಎಸಿ ಘಟಕ ಆಯೋಜಿಸಿದ ಪ್ರೇರಣಾ ಶಿಬಿರದ ಭಾಗವಾದ ರಕ್ಷಕ-ಶಿಕ್ಷಕರ ಪೂರ್ವ ಪರಿಚಯ ಕಾರ್ಯಕ್ರಮದಲ್ಲಿ ಮಾತನಾಡಿದರು. ಆಡಳಿತ ನಿಕಾಯಕರು ಹಾಗೂ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ರಕ್ಷಿತ್ ರಾವ್ ಗುಜ್ಜಾಡಿ ಮಾತನಾಡಿ, ಕಾಲೇಜಿನ ಆಡಳಿತದಲ್ಲಿ ವಿದ್ಯಾರ್ಥಿಗಳ ಮತ್ತು ಪೋಷಕರ ಪಾತ್ರವನ್ನು ತಿಳಿಸಿದರು. ಶೈಕ್ಷಣಿಕ ನಿಕಾಯಕರಾದ ಗಿರಿರಾಜ್ ಭಟ್ ಮಾತನಾಡಿ, ವಿದ್ಯಾರ್ಥಿಗಳ ಶೈಕ್ಷಣಿಕ ಅರ್ಹತೆಗೆ ಆಂತರಿಕ ಪರೀಕ್ಷೆಗಳು ಹೇಗೆ ಸಹಾಯವಾಗುತ್ತವೆ ಎಂಬುವುದನ್ನು ತಿಳಿಸಿದರು. ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ ಪ್ರಸ್ತಾವಿಸಿ, ಸ್ವಾಗತಿಸಿದರು. ಐಕ್ಯೂಎಸಿ ಸಂಯೋಜಕಿ ಹಾಗೂ ಇಂಗ್ಲೀಷ್ ವಿಭಾಗದ ಮುಖ್ಯಸ್ಥೆ ದೀಪಿಕಾ ಜಿ. ವಂದಿಸಿ, ವಾಣಿಜ್ಯ ವಿಭಾಗದ ಸಹಾಯಕ…

Read More