Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ರಾಷ್ಟ್ರೀಯ ಹೆದ್ದಾರಿ 66ರ ಮಣೂರು ಗ್ರಾಮದ ಕಿರಿ ಮಹಾಲಿಂಗೇಶ್ವರ ದೇವಸ್ಥಾನದ ಹತ್ತಿರ ಟೆಂಪೊ ಹಾಗೂ ಬೈಕ್‌ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಶುಕ್ರವಾರ ಬೆಳಿಗ್ಗೆ ನಡೆದಿದೆ. ಕುಂದಾಪುರದಿಂದ ಉಡುಪಿ ಕಡೆಗೆ ತೆರಳುತ್ತಿದ್ದ 407 ಟೆಂಪೊ ಚಾಲಕ ಯಾವುದೇ ಸೂಚನೆ ನೀಡದೆ ಏಕಾಏಕಿ ತನ್ನ ವಾಹನವನ್ನು ರಸ್ತೆಯ ಮಧ್ಯಭಾಗದಲ್ಲಿ ನಿಲ್ಲಿಸಿದ್ದಾನೆ. ಇದರಿಂದಾಗಿ ಅದೇ ದಿಕ್ಕಿನಲ್ಲಿ ಹಿಂಬದಿಯಿಂದ ಬರುತ್ತಿದ್ದ ಬೈಕ್‌ ಸವಾರ ಸಚಿನ್ (42) ನಿಯಂತ್ರಣ ಕಳೆದುಕೊಂಡು ಟೆಂಪೊಗೆ ಹಿಂಬದಿಯಿಂದ ಭೀಕರವಾಗಿ ಡಿಕ್ಕಿ ಹೊಡೆದಿದ್ದಾರೆ. ಅಪಘಾತದ ತೀವ್ರತೆಗೆ ಸವಾರ ಸಚಿನ್ ಅವರ ಎದೆ, ತಲೆ ಹಾಗೂ ಹೊಟ್ಟೆಗೆ ತೀವ್ರ ಸ್ವರೂಪದ ರಕ್ತಗಾಯಗಳಾಗಿದ್ದು, ತಕ್ಷಣವೇ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಸೈಬರ್ ವಂಚಕರಿಂದ ವ್ಯಕ್ತಿಯೊಬ್ಬರು ವಂಚನೆಗೆ ಒಳಗಾಗಿ ಕ್ರೆಡಿಟ್ ಕಾರ್ಡ್ ಮೂಲಕ 2.24 ಲಕ್ಷ ರೂ. ಕಳೆದುಕೊಂಡ ಘಟನೆ ಬುಧವಾರ ಕುಂದಾಪುರದಲ್ಲಿ ಸಂಭವಿಸಿದೆ. ದೂರುದಾರ ಶೇಖರ ವಂಚನೆಗೊಳಗಾದವರು. ಅವರಿಗೆ ಅಪರಿಚಿತ ವ್ಯಕ್ತಿ ಹಿಂದಿ ಭಾಷೆಯಲ್ಲಿ ಕರೆಮಾಡಿ ನೀವು ಸೀನಿಯರ್ ಸಿಟಿಜನ್ ಆಗಿರುವುದರಿಂದ ಕ್ರೆಡಿಟ್ ಕಾರ್ಡ್ ನೀಡುತ್ತಿದ್ದೇವೆ ಎಂದು ಹೇಳಿ ಮಾಹಿತಿ ಪಡೆದು ಎಪಿಕೆ ಫೈಲ್ ಕಳುಹಿಸಿ ಬ್ಯಾಂಕ್ ಆಫ್ ಬರೋಡಾಕ್ಕೆ ಸಂಬಂಧಿಸಿದಂತೆ ವಿವರವನ್ನು ಕೇಳಿದ್ದಾನೆ. ಸಂಜೆ ಮೊಬೈಲ್ ಇನ್‌ಬಾಕ್ಸ್ ಚೆಕ್ ಮಾಡಿದಾಗ ಅವರ ಬ್ಯಾಂಕ್ ಆಫ್ ಬರೋಡಾ ಕ್ರೆಡಿಟ್ ಕಾರ್ಡ್‌ನಿಂದ 1,30,490 ರೂ., 22,167 ರೂ., 10,000 ರೂ., ಮತ್ತು ಆರ್‌ಬಿಎಲ್ ಬ್ಯಾಂಕ್ ಕ್ರೆಡಿಟ್ ಕಾರ್ಡ್‌ನಿಂದ 3,468 ರೂ., 20,000 ರೂ., 37,999 ರೂ. ಸೇರಿ ಒಟ್ಟು 2,24,124 ರೂ. ಹಣವನ್ನು ಸೈಬ‌ರ್ ವಂಚಕರು ವರ್ಗಾಯಿಸಿಕೊಂಡಿರುತ್ತಾರೆ. ಶೇಖರ ಅವರು ನೀಡಿದ ದೂರಿನಂತೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಕಿತ್ತಳೆ ಮಾರಿ ವ್ಯಕ್ತಿಯೊಬ್ಬ ಸರಕಾರಿ ಶಾಲೆಯೊಂದನ್ನು ಕಟ್ಟಿ ಅದನ್ನು ಮುನ್ನಡೆಸಲು ಸಾಧ್ಯ ಎಂದು ತೋರಿಸಿಕೊಟ್ಟವರು ಹರೆಕಳ ಹಾಜಬ್ಬ ಎಂದು ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಸಾಹೇಬರಕಟ್ಟೆ ಮಹಾತ್ಮ ಗಾಂಧಿ ಪ್ರೌಢಶಾಲೆಯಲ್ಲಿ ಯಡ್ತಾಡಿ ಶ್ರೀ ವಿನಾಯಕ ಯುವಕ ಮಂಡಲದ ನೇತೃತ್ವದಲ್ಲಿ 15ನೇ ವರ್ಷದ ಶಾರದೋತ್ಸವ ನಮ್ಮೂರ ದಸರಾ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿ, ಶ್ರೀಮಂತರ ಸ್ವತ್ತಾಗಿದ್ದ ಪದ್ಮಶ್ರೀಯಂತಹ ಅತ್ಯುನ್ನತ ಪ್ರಶಸ್ತಿಗಳು ತಳಮಟ್ಟದ ಹರೆಕಳ ಹಾಜಬ್ಬರಂತ ಸಾಮಾನ್ಯ ಸಾಧಕರಿಗೂ ತಲುಪುವಂತೆ ಮಾಡಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ. ಹರೇಕಳ ಹಾಜಬ್ಬ ಪದ್ಮಶ್ರೀ ಪ್ರಶಸ್ತಿ, ಗೌರವ ಡಾಕ್ಟರೇಟ್‌ನಂತಹ ಹಲವು ಪ್ರಶಸ್ತಿ, ಪಾರಿತೋಷಕ ಪಡೆದರೂ ಸರಳತೆ, ಸಾಮಾನ್ಯರಲ್ಲಿ ಸಾಮಾನ್ಯರಂತೆ ಬದುಕು ಕಟ್ಟಿಕೊಂಡವರು ಎಂದರು. ಹರೇಕಳ ಹಾಜಬ್ಬರಿಗೆ ಶ್ರೀ ವಿನಾಯಕ ಸಾಧನಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಹರೇಕಳ ಹಾಜಬ್ಬ , ನನ್ನ ಧಣಿ ಅಚ್ಚಣ್ಣ ಶೆಟ್ಟರು ಬಾರ್ಕೂರು ಸೀಮೆಯವರು, ನನ್ನ ತಂದೆ ತಾಯಿ ಅವರಲ್ಲಿ ಕೆಲಸಕ್ಕೆ ಹೋಗುತ್ತಿದ್ದರು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಕಾಲೇಜಿನ ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ವಿದ್ಯಾರ್ಥಿ ವೇದಿಕೆ ‘ಅಭಿವ್ಯಕ್ತಿ’ಯ 2026–27ನೇ ಸಾಲಿನ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ಶುಕ್ರವಾರ ಕಾಲೇಜಿನ ಮಲ್ಟಿಮೀಡಿಯಾ ಸ್ಟುಡಿಯೋದಲ್ಲಿ ನಡೆಯಿತು. ನಿರೂಪಕ ನಿತೇಶ್ ಪೂಜಾರಿ ಮಾರ್ನಾಡ್ ದೀಪ ಪ್ರಜ್ವಲಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ನಿರೂಪಣೆ ಎನ್ನುವುದು ಕೇವಲ ಮಾತಿನ ಕಲೆಯಲ್ಲ, ಅದಕ್ಕೆ ಜ್ಞಾನ, ಆತ್ಮವಿಶ್ವಾಸ, ಪೂರ್ವಸಿದ್ಧತೆ, ವಿಷಯದ ಮೇಲಿನ ಆಸಕ್ತಿ, ಧ್ವನಿಯ ಏರಿಳಿತ ಮತ್ತು ಬದ್ಧತೆ ಅತ್ಯಗತ್ಯ ಎಂದರು. ನಿರೂಪಣೆ ಸುಲಭದ ಕೆಲಸವಲ್ಲ. ಪ್ರತಿಯೊಂದು ಕಾರ್ಯಕ್ರಮಕ್ಕೂ ಅದರ ಸ್ವರೂಪಕ್ಕೆ ತಕ್ಕ ಸಿದ್ಧತೆ ಅಗತ್ಯ. ಕಾರ್ಯಕ್ರಮದ ಕುರಿತು ಮೂಲಭೂತ ಮಾಹಿತಿಯನ್ನಾದರೂ ನಿರೂಪಕರು ತಿಳಿದುಕೊಂಡಿರಬೇಕು. ವಿಷಯದ ಬಗ್ಗೆ ಆಳವಾದ ಜ್ಞಾನ ಇರಲೇಬೇಕೆಂದಿಲ್ಲವಾದರೂ, ಕಾರ್ಯಕ್ರಮದ ಹಿನ್ನೆಲೆ ಮತ್ತು ಸಂದರ್ಭವನ್ನು ಅರ್ಥಮಾಡಿಕೊಂಡಿರಬೇಕು. ನಿರೂಪಣೆಯ ಸ್ಕ್ರಿಪ್ಟ್ ಅನ್ನು ಕಂಠಪಾಠ ಮಾಡುವುದಕ್ಕಿಂತ ಅದರ ಆಶಯವನ್ನು ಮನಸ್ಸಿನಲ್ಲಿ ಅರ್ಥಮಾಡಿಕೊಂಡು ಸಹಜವಾಗಿ ಪ್ರಸ್ತುತಪಡಿಸುವುದು ಮುಖ್ಯ. ಧ್ವನಿಯ ವಿಭಿನ್ನ ಭಾವಗಳು, ಸೂಕ್ತ ಏರಿಳಿತ ಮತ್ತು ಮಾತಿನ ಶೈಲಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಶ್ರೀ ಗುರುನರಸಿಂಹ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘ ಸಾಲಿಗ್ರಾಮ ಇದರ ನೂತನ ವಿಸೃತ ಕಟ್ಟಡ ನಿರ್ಮಾಣದ ಶಿಲಾನ್ಯಾಸ ಕಾರ್ಯಕ್ರಮ ಇತ್ತೀಚಿಗೆ ಜರಗಿತು. ಸಂಘದ ಅಧ್ಯಕ್ಷ ಆನಂದ ಸಿ. ಕುಂದರ್ ಧಾರ್ಮಿಕ ಕಾರ್ಯದಲ್ಲಿ ಭಾಗಿಯಾಗಿ ಸಂಘದ ನಿವೇಶದಲ್ಲಿ ರೂ.1.50 ಕೋಟಿ ಅಂದಾಜು ವಿನ್ಯಾಸದಲ್ಲಿ ವಿಸ್ತೃತ ಕಟ್ಟಡವನ್ನು ನಿರ್ಮಿಸಿ ಶೀಘ್ರ ಸದಸ್ಯರ ಸೇವೆಗೆ ಅರ್ಪಿಸುವುದಾಗಿ ತಿಳಿಸಿದರು. ಕಾರ್ಯಕ್ರಮದಲ್ಲಿ ಸಂಘದ ನಿರ್ದೇಶಕರುಗಳಾದ ಸಂಜೀವ ಜಿ., ಮಂಜುನಾಥ ಎಸ್.ಕೆ., ಶಂಕರ ಬಂಗೇರ, ವಸಂತ ಶೆಟ್ಟಿ, ವೈ. ಕೃಷ್ಣಮೂರ್ತಿ ಐತಾಳ್,  ಕೃಷ್ಣಪ್ಪ ಮರಕಾಲ, ಸುಂದರ, ವೈ. ಗೋಪಾಲ ಭಟ್ಟ, ಶಾಂತಾ ಭಟ್ಟ, ನಾಗರತ್ನ ಬಾಯರಿ ಮತ್ತು ಸವಿತಾ ಪೂಜಾರಿ ಮತ್ತು ಮುಖ್ಯಕಾರ್ಯನಿರ್ವಾಹಕ ಜಿ.ಎಸ್. ಸೋಮಾಯಾಜಿ ಹಾಗೂ ಶಿಬಂಧಿವರ್ಗ ಮತ್ತು ಸದಸ್ಯವರ್ಗ ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ಹೊಸ ಕೈಗಾರಿಕಾ ಉದ್ಯಮಗಳನ್ನು ಸ್ಥಾಪಿಸಲು ಉದ್ಯಮಿಗಳು ಮುಂದೆ ಬರುತ್ತಿದ್ದಾರೆ. ಅವರುಗಳಿಗೆ ಕೈಗಾರಿಕಾ ಪ್ರದೇಶದಲ್ಲಿ ನಿವೇಶನ ಸೇರಿದಂತೆ ಮತ್ತಿತರ ಅಗತ್ಯ ಮೂಲಭೂತ ಸೌಕರ್ಯಗಳು, ಸಲಹೆಗಳನ್ನು ನೀಡಿ, ಉದ್ಯೋಗ ಅವಕಾಶಗಳು ಹೆಚ್ಚಿಸುವಂತೆ ನೋಡಿಕೊಳ್ಳಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚನೆ ನೀಡಿದರು. ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಏಕಗವಾಕ್ಷಿ ಸಮಿತಿ ಸಭೆ ಹಾಗೂ ಕೈಗಾರಿಕಾ ಸ್ಪಂದನ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಹೆಬ್ರಿ ತಾಲೂಕಿನ ಶಿವಪುರದಲ್ಲಿ 74.84 ಎಕ್ರೆ, ಕೆರೆಬೆಟ್ಟುವಿನಲ್ಲಿ 38.75 ಎಕ್ರೆ, ಕಾರ್ಕಳದ ನಿಟ್ಟೆಯಲ್ಲಿ 50.42 ಎಕ್ರೆ ಹಾಗೂ ಬ್ರಹ್ಮಾವರ ತಾಲೂಕಿನ ಉಪ್ಪೂರು 101.19 ಎಕ್ರೆ ಪ್ರದೇಶದಲ್ಲಿ ಹೊಸ ಕೈಗಾರಿಕಾ ಪ್ರದೇಶ ನಿರ್ಮಾಣ ಮಾಡಲು ಭೂ ಸ್ವಾಧೀನ ಸೇರಿದಂತೆ ಮತ್ತಿತರ ಪ್ರಕ್ರಿಯೆಗಳನ್ನು ಶೀಘ್ರದಲ್ಲಿಯೇ ಪೂರ್ಣಗೊಳಿಸಿ, ಕೈಗಾರಿಕೆಗಳ ಸ್ಥಾಪನೆಗೆ ಮುಂದಾಗಬೇಕು ಎಂದರು. ಜಿಲ್ಲೆಯಲ್ಲಿ ಕೈಗಾರಿಕಾ ಘಟಕ ಸ್ಥಾಪನೆಗೆ ನಿವೇಶನ ಹಂಚಿಕೆಯನ್ನು ಮಾಡಿದ್ದರೂ ಸಹ ಕಳೆದ ಸಭೆಯಲ್ಲಿ 17…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಶಂಕರನಾರಾಯಣ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಇಲಾಖೆ, ಆಯುಕ್ತರ ಕಚೇರಿ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ, ಬೆಂಗಳೂರು ಇವರ ವತಿಯಿಂದ 2026–27ನೇ ಸಾಲಿನಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾದ ಕುಂದಾಪುರ ತಾಲೂಕು ಮಟ್ಟದ ವಿಜ್ಞಾನ ವಿಚಾರಗೋಷ್ಠಿಯು ಬಸ್ರೂರಿನ ಕರ್ನಾಟಕ ಪಬ್ಲಿಕ್ ಸ್ಕೂಲ್ಕ್‌ನಲ್ಲಿ ನಡೆಯಿತು. ಈ ವಿಚಾರಗೋಷ್ಠಿಯಲ್ಲಿ ಶಂಕರನಾರಾಯಣದ ಮದರ್ ತೆರೇಸಾ ಮೆಮೋರಿಯಲ್ ಸ್ಕೂಲ್‌ನ 9ನೇ ತರಗತಿಯ ವಿದ್ಯಾರ್ಥಿನಿ ಸಮನ್ವಿ ಶೆಟ್ಟಿ ಅವರು ತಾಲೂಕು ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸುವುದು, ವಿಜ್ಞಾನ ವಿಷಯದ ಕುರಿತು ಆಸಕ್ತಿ ಮೂಡಿಸುವುದು ಹಾಗೂ ಸಂಶೋಧನಾ ಚಿಂತನೆಯನ್ನು ಉತ್ತೇಜಿಸುವ ಉದ್ದೇಶದಿಂದ ಈ ವಿಚಾರಗೋಷ್ಠಿಯನ್ನು ಆಯೋಜಿಸಲಾಗಿತ್ತು. “ಭಾರತದ ಇಂಧನದ ವಿವಿಧ ರೀತಿಯ ಮಿಶ್ರಣ 2047: ಅವಕಾಶಗಳು ಮತ್ತು ಸವಾಲುಗಳು” ಎಂಬ ವಿಷಯದ ಕುರಿತು ಸಮನ್ವಿ ಶೆಟ್ಟಿ ಅವರು ಪರಿಣಾಮಕಾರಿಯಾಗಿ ವಿಚಾರ ಮಂಡಿಸಿ ಪ್ರಥಮ ಸ್ಥಾನ ಗಳಿಸಿರುವುದು ಶಾಲೆಗೆ ಹೆಮ್ಮೆಯ ಸಂಗತಿಯಾಗಿದೆ. ಈ ಸಾಧನೆಗೆ ಪ್ರೌಢಶಾಲಾ ವಿಭಾಗದ ವಿಜ್ಞಾನ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಹೆಮ್ಮಾಡಿಯ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯರಾದ ಮನ್ವಿ , ಸನ್ನಿಧಿ ಹಾಗೂ ನಿಸರ್ಗ ದೇವಾಡಿಗ ಅವರು ಜಿಲ್ಲಾ ಮಟ್ಟದ ಯುವ ಸಂಸತ್–2026 ಕಾರ್ಯಕ್ರಮದಲ್ಲಿ ಭಾಗವಹಿಸಲು ಆಯ್ಕೆಯಾಗಿದ್ದಾರೆ. ಮಾದರಿಯ ಯುವ ಸಂಸತ್ ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಪ್ರಜಾಪ್ರಭುತ್ವದ ಮೌಲ್ಯಗಳು, ಸಂಸದೀಯ ಕಾರ್ಯವೈಖರಿ ಹಾಗೂ ನಾಯಕತ್ವದ ಗುಣಗಳನ್ನು ಬೆಳೆಸುವ ಉದ್ದೇಶ ಹೊಂದಿದೆ. ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಮೂಲಕ ವಿದ್ಯಾರ್ಥಿನಿಯರು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಉತ್ತಮ ಅವಕಾಶ ಪಡೆದಿದ್ದಾರೆ. ವಿದ್ಯಾರ್ಥಿನಿಯರ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ಸಿಬ್ಬಂದಿ ವರ್ಗ ಅಭಿನಂದನೆ ಸಲ್ಲಿಸಿದ್ದಾರೆ

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಬೈಂದೂರು ಕೆ.ಎಸ್.ಆರ್.ಟಿ.ಸಿ ನಿಲ್ದಾಣ ಆರಂಭಗೊಂಡು ಒಂದು ವರ್ಷ ಕಳೆಯುತ್ತಾ ಬಂದರೂ ಸಂಪೂರ್ಣ ಮೂಲಭೂತ ಸೌಕರ್ಯ ಕಲ್ಪಿಸುವಲ್ಲಿ ಹಾಗೂ ನಿಲ್ದಾಣ ಮೂಲಕವೇ ಹೆಚ್ಚಿನ ಸರ್ಕಾರಿ ಬಸ್ಸುಗಳ ಸಂಚರಿಸುವಂತೆ ಮಾಡುವಲ್ಲಿ ಅಧಿಕಾರಿಗಳ ವೈಫಲ್ಯ ಎದ್ದು ಕಾಣುತ್ತಿದೆ. ಲಾಭಿಗೆ ಮಣಿದು ಸರ್ಕಾರಿ ಬಸ್ ನಿಲ್ದಾಣವನ್ನು ಮುಚ್ಚುವ ವ್ಯವಸ್ಥಿತ ಹುನ್ನಾರ ಇದರ ಹಿಂದಿದೆ ಎಂದು ಎಂದು ಬೈಂದೂರು ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಮೋಹನ್ ಪೂಜಾರಿ ಆರೋಪಿಸಿದ್ದಾರೆ. ಅವರು ಇಲ್ಲಿನ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಗ್ಯಾರಂಟಿ ಅನುಷ್ಠಾನ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ತಾಲೂಕಿನ ಯಡ್ತರೆಯಲ್ಲಿ ಸುಸಜ್ಜಿತವಾದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ ಆಗಿದ್ದರೂ ಸರ್ವಿಸ್ ರಸ್ತೆ ಆಗದ ಸಮಸ್ಯೆಯಾಗುತ್ತಿದೆ. ರಾತ್ರಿಯಾಗುತ್ತಿದ್ದಂತೆ ನಿಲ್ದಾಣದ ಲೈಟ್ಗಳನ್ನು ಬಂದ್ ಮಾಡಿ ಸಾರ್ವಜನಿಕರು ಸಂಚರಿಸದಂತೆ ಮಾಡಲಾಗುತ್ತಿದೆ. ಗ್ರಾಮೀಣ ಪ್ರದೇಶಗಳಿಗೆ ಹೆಚ್ಚುವರಿ ಬಸ್ ಸೇವೆ ಒದಗಿಸುವಂತೆ ಹಾಗೂ ದೂರದ ಎಲ್ಲಾ ಬಸ್ಸುಗಳು ಬೈಂದೂರು ಕೆ.ಎಸ್.ಆರ್.ಟಿ.ಸಿ ನಿಲ್ದಾಣ ಮೂಲಕವೇ ತೆರಳುವಂತೆ ತಿಳಿಸಲಾಗಿದ್ದರೂ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ದುಡಿಮೆಯ ಒಂದು ಭಾಗವನ್ನು ಯಾವುದೇ ಫಲಾಪೇಕ್ಷೆ ಇಲ್ಲದೆ ಶಿಕ್ಷಣ, ಆರೋಗ್ಯ, ಕಲೆ, ಸಾಹಿತ್ಯ, ಕ್ರೀಡೆ, ಧಾರ್ಮಿಕತೆಗಳಿಗೆ ನೀಡುತ್ತಿರುವ ನಾಡೋಜ ಜಿ. ಶಂಕರ್ ರವರ ಸಮಾಜ ಸೇವೆಯನ್ನು ಗುರುತಿಸಿ ಅವರಿಗೆ ವಿಧಾನ ಪರಿಷತ್ ನಾಮನಿರ್ದೇಶನ ಸದಸ್ಯರನ್ನಾಗಿ ಸರ್ಕಾರ ಮಾಡಬೇಕೆಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ. ವಿಕಾಸ್ ಹೆಗ್ಡೆ ಪತ್ರಿಕಾ ಹೇಳಿಕೆ ಮೂಲಕ ಮನವಿ ಮಾಡಿದ್ದಾರೆ. ಮೊಗವೀರ ಯುವ ಸಂಘಟನೆ ಮೂಲಕ ರಕ್ತದಾನದ ಕ್ರಾಂತಿಯನ್ನು ಮಾಡುವುದರ ಮೂಲಕ, ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ಮೂಲಕ ಮಣಿಪಾಲ ಆರೋಗ್ಯ ಕಾರ್ಡ್ ಮೂಲಕ ಆರ್ಥಿಕ ಅಶಕ್ತರಿಗೆ ಆರೋಗ್ಯ ಸಮಸ್ಯೆಗೆ ಸಹಾಯ, ಉಚ್ಚಿಲ ದಸರಾ ಮೂಲಕ ಧಾರ್ಮಿಕ ಕಾರ್ಯಕ್ರಮ, ಮೊಗವೀರ ಮಹಿಳೆಯರಿಗೆ ಆರ್ಥಿಕ ಸ್ವಾವಲಂಬನೆ, ಮೀನುಗಾರಿಕ ಜಟ್ಟಿ, ಬಂದರುಗಳ ಅಭಿವೃದ್ಧಿ, ಧರ್ಮ, ಜಾತಿ ಯಾವುದನ್ನೂ ನೋಡದೆ ಎಲ್ಲಾ ಆರ್ಥಿಕ ಅಶಕ್ತರಿಗೆ ಆರ್ಥಿಕ ಸಹಾಯ, ದೈಹಿಕ ವಿಕಲಾಂಗರಿಗೆ ಸಹಾಯ, ಕರಾವಳಿಯ ಸರ್ವ ಜಾತಿ, ಸರ್ವ ಸಮುದಾಯದ ದೇವಸ್ಥಾನ, ದೈವಸ್ಥಾನಗಳ ಅಭಿವೃದ್ಧಿಗೆ ಸಹಾಯ ಇಂತಹ ಅದೆಷ್ಟೋ…

Read More