ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಮಂಗಳೂರು, ಬ್ರಹ್ಮಾವರ ಕ್ಷೇತ್ರ ಸಮಿತಿ ಹಾಗೂ ಕೋಟ-ಸಾಲಿಗ್ರಾಮ ವಲಯ ಸಮಿತಿಯ ವತಿಯಿಂದ ಅಶಕ್ತರಿಗೆ ಸಹಾಯಧನ ಹಾಗೂ ವಿದ್ಯಾರ್ಥಿ ವೇತನ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಭಾನುವಾರ ಕೋಟ ಸಿ ಎ ಬ್ಯಾಂಕ್ ಬಿ.ಸಿ ಹೊಳ್ಳ ಸಭಾಂಗಣದಲ್ಲಿ ಜರಗಿತು. ಕಾರ್ಯಕ್ರಮವನ್ನು ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ ಸಿ. ಕುಂದರ್ ಉದ್ಘಾಟಿಸಿದರು. ಸಂಸದ ಕೋಟ ಶ್ರೀನಿವಾಸ ಪೂಜಾರಿ ಸನ್ಮಾನ ಹಾಗೂ ಪ್ರತಿಭಾ ಪುರಸ್ಕಾರ ನೆರವೇರಿಸಿದರು. ಸಭೆಯ ಅಧ್ಯಕ್ಷತೆಯನ್ನು ಬ್ರಹ್ಮಾವರ ಕ್ಷೇತ್ರ ಸಮಿತಿ ಅಧ್ಯಕ್ಷ ಗಣೇಶ್ ಪೂಜಾರಿ ವಹಿಸಿದ್ದರು. ಸಹಾಯಧನ, ವಿದ್ಯಾರ್ಥಿ ವೇತನ ವಿತರಣೆಯನ್ನು ಶಬರಿ ಕನ್ಸ್ಟ್ರಕ್ಷನ್, ಕೋಟ ಮುಖ್ಯಸ್ಥ ಸುರೇಶ್ ಕಾಂಚನ್ ಬಾರಿಕೆರೆ ವಿತರಿಸಿದರು. ಮುಖ್ಯ ಅತಿಥಿಗಳಾಗಿ ಉದ್ಯಮಿಗಳಾದ ಅನಂತ್ ನಾಯಕ್, ಕುಸುಮ ದೇವಾಡಿಗ, ಉಡಪಿ ಜಿಲ್ಲಾಧ್ಯಕ್ಷ ದಯಾನಂದ ಕೋಟ್ಯಾನ್, ಬ್ರಹ್ಮಾವರ ಕ್ಷೇತ್ರ ಸಮಿತಿಯ ಕೋಶಾಧಿಕಾರಿ ವೀಣಾಶ್ರೀ, ಕೋಟ ಸಾಲಿಗ್ರಾಮ ವಲಯ ಸಮಿತಿ ಉಪಾಧ್ಯಕ್ಷ ಪರಮೇಶ್ವರ ಗಾಣಿಗ, ಬ್ರಹ್ಮಾವರ ನಗರ ಸಮಿತಿ ಅಧ್ಯಕ್ಷ ಪವಿತ್ರ ಕುಮಾರ್, ಬಾರ್ಕೂರಿ ವಲಯ ಸಮಿತಿ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ರಾಷ್ಟ್ರೀಯ ಹೆದ್ದಾರಿ 66ರ ಕೋಟ ಜಂಕ್ಷನ್‌ನಲ್ಲಿ ಸೈಕಲ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಸೈಕಲ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಕಾರು ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಸೋಮವಾರ ಮುಂಜಾನೆ ಸಂಭವಿಸಿದೆ. ಮೃತರನ್ನು ಕೋಟ ಮಣೂರು ನಿವಾಸಿ, ಹಿರಿಯ ಆರ್‌ಎಸ್‌ಎಸ್ ಮುಖಂಡ ಗುರುದಾಸ್ ಶೆಣೈ (68)ಎಂದು ಗುರುತಿಸಲಾಗಿದೆ. ಗುರುದಾಸ್ ಶೆಣೈ ಅವರು ಕೋಟ ಜಂಕ್ಷನ್‌ನಲ್ಲಿ ಸೈಕಲ್‌ನಲ್ಲಿ ರಸ್ತೆ ದಾಟುತ್ತಿದ್ದ ವೇಳೆ ಉಡುಪಿ ಕಡೆಯಿಂದ ಕುಂದಾಪುರದತ್ತ ಅತಿವೇಗವಾಗಿ ಬರುತ್ತಿದ್ದ ಕಾರು ಸೈಕಲ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಕಾರು ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಸೈಕಲ್ ಸವಾರ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಅಪಘಾತದಲ್ಲಿ ಕಾರು ಚಾಲಕ, ಕೋಟೇಶ್ವರದ ಬೀಜಾಡಿ ನಿವಾಸಿ ಪ್ರದೀಪ್ ಕಾಂಚನ್ ಗಂಭೀರವಾಗಿ ಗಾಯಗೊಂಡಿದ್ದಾರೆ. ತಕ್ಷಣ ಸ್ಥಳಕ್ಕೆ ಧಾವಿಸಿದ ಕೋಟದ ಜೀವನ್ ಮಿತ್ರ ನಾಗರಾಜ್ ಪುತ್ರನ್ ಅವರು ಗಾಯಾಳುವನ್ನು ಆಂಬುಲೆನ್ಸ್‌ನಲ್ಲಿ ಬ್ರಹ್ಮಾವರದ ಖಾಸಗಿ ಆಸ್ಪತ್ರೆಗೆ ಸಾಗಿಸಲು ನೆರವಾದರು. ಇವರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಯಕ್ಷದೇಗುಲ ಬೆಂಗಳೂರು ತಂಡದವರಿಂದ ಬೆಂಗಳೂರಿನ ಸರ್ಜಾಪುರದ ಅಜೀಂ ಪ್ರೇಮ್‌ಜಿ ಯೂನಿವರ್ಸಿಟಿಯಲ್ಲಿ ಯಕ್ಷಗಾನ ಕಲಿತಾ ಇರುವ ವಿದ್ಯಾರ್ಥಿಗಳಿಗೆ ಮೇಕಪ್ ಕಾರ್ಯಾಗಾರ ನಡೆಸಲಾಯಿತು. ಕಾರ್ಯಾಗಾರದಲ್ಲಿ ಎಲ್ಲಾ ವರ್ಗದ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಯಕ್ಷಗಾನ ಅರಿವೇ ಇಲ್ಲದ ಈ ವಿದ್ಯಾರ್ಥಿಗಳಿಗೆ ಯಕ್ಷಗಾನದ ಮೇಕಪ್‌ನಲ್ಲಿ ಅರಿವು ಮೂಡಿಸಲಾಯಿತು. ಯಕ್ಷಗಾನದಲ್ಲಿ ವೇಷಭೂಷಣ ಮತ್ತು ಮುಖವರ್ಣಿಕೆ ಬಗ್ಗೆ ವಿಶೇಷ ಸ್ಥಾನವಿದೆ. ಮೇಕಪ್ ನಿಂದ ಯಕ್ಷಗಾನ ಪಾತ್ರದ ಸ್ವಭಾವವನ್ನು ಪ್ರೇಕ್ಷಕರಿಗೆ ತೋರಿಸಲಾಗುವುದು. ಕೃಷ್ಣ, ರಾಮ, ರಾವಣ, ಅರ್ಜುನ, ಬಣ್ಣದ ವೇಷ, ಸ್ತ್ರೀ ಪಾತ್ರ, ಕಿರಾತ, ಹೆಣ್ಣು ಬಣ್ಣದ ವೇಷ, ಗಂಧರ್ವರು ಹೀಗೆ ನಾವು ಮೇಕಪ್ ಮೂಲಕ ಪಾತ್ರವನ್ನು ಗುರುತಿಸಬಹುದು. ಹೀಗೆ ಬಣ್ಣದ ಬಗ್ಗೆ ಪರಿಚಯಿಸಿ, ವಿದ್ಯಾರ್ಥಿಗಳಿಂದಲೇ ಮೇಕಪ್ ಮಾಡಿಸಲಾಯಿತು. ಈ ಕಾರ್ಯಾಗಾರವನ್ನು ಯಕ್ಷಗುರುಗಳಾದ ಸುದರ್ಶನ ಉರಾಳ ಮತ್ತು ಪ್ರಿಯಾಂಕ ಕೆ. ಮೋಹನ್ ನಡೆಸಿಕೊಟ್ಟರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ ಹಾಗೂ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ (ಸುಜ್ಞಾನ ಎಜುಕೇಶನಲ್ ಟ್ರಸ್ಟ್) ಇವುಗಳ ಸಂಯುಕ್ತ ಆಶ್ರಯದಲ್ಲಿ 14 ಮತ್ತು 17 ವರ್ಷದೊಳಗಿನ ಬಾಲಕ-ಬಾಲಕಿಯರ ಕುಂದಾಪುರ ವಲಯ ಮಟ್ಟದ ಕ್ರೀಡಾಕೂಟವು ಇತ್ತೀಚೆಗೆ ನಡೆಯಿತು. ಕ್ರೀಡಾಕೂಟದ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಸುಜ್ಞಾನ ಎಜುಕೇಶನಲ್ ಟ್ರಸ್ಟ್ ನ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿ ಅವರು, ಪಂದ್ಯಾಟಗಳಲ್ಲಿ ಭಾಗವಹಿಸಿ ವಿಜೇತರಾದ ಎಲ್ಲಾ ಕ್ರೀಡಾಪಟುಗಳಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದರು. ಇಲಾಖೆಯು ಹಮ್ಮಿಕೊಳ್ಳುವ ಇಂತಹ ಯಾವುದೇ ಶೈಕ್ಷಣಿಕ ಹಾಗೂ ಕ್ರೀಡಾ ಚಟುವಟಿಕೆಗಳಿಗೆ ಸಂಸ್ಥೆಯ ವತಿಯಿಂದ ಸಂಪೂರ್ಣ ಸಹಕಾರ ಹಾಗೂ ಬೆಂಬಲ ನೀಡಲು ಸದಾ ಸಿದ್ಧ ಎಂದು ಶುಭ ಹಾರೈಸಿದರು. ಕ್ರೀಡಾಕೂಟದಲ್ಲಿ 14ರ ವಯೋಮಾನದ ಬಾಲಕರು ಮತ್ತು ಬಾಲಕಿಯರ ವಿಭಾಗದಲ್ಲಿ ಸಮಗ್ರ ಪ್ರಶಸ್ತಿಯನ್ನು ಹಾಲಾಡಿ ವೃತ್ತ ಪಡೆದುಕೊಂಡಿತು. 17ರ ವಯೋಮಾನದ ಬಾಲಕರ ಸಮಗ್ರ ಪ್ರಶಸ್ತಿಯನ್ನು ಹಾಲಾಡಿ ವೃತ್ತ ಪಡೆದುಕೊಂಡಿತು. 17ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ಕೋಟೇಶ್ವರ ವೃತ್ತ ಪಡೆದುಕೊಂಡಿತು. ಕ್ರೀಡಾಕೂಟದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಬೈಂದೂರು ಇವರು ವಂಡ್ಸೆಯ ನೆಂಪುವಿನ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಆಯೋಜಿಸಿದ್ದ ಬೈಂದೂರು ತಾಲ್ಲೂಕು ಮಟ್ಟದ ಕ್ರೀಡಾಕೂಟದಲ್ಲಿ ಕಿರಿಮಂಜೇಶ್ವರದ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲೆಯು ವಿಶೇಷ ಸಾಧನೆಗೈದಿತು. 17ರ ವಯೋಮಾನದ ಬಾಲಕಿಯರ ಚಕ್ರ ಎಸೆತ ಮತ್ತು ಗುಂಡೆಸೆತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ಹಾಗೂ ತ್ರಿವಿಧ ಜಿಗಿತದಲ್ಲಿ ದ್ವಿತೀಯ ಸ್ಥಾನದೊಂದಿಗೆ ಬೆಳ್ಳಿ ಪದಕವನ್ನು ಮುಡಿಗೇರಿಸಿಕೊಂಡ ಜನತಾದ ವಿದ್ಯಾರ್ಥಿನಿ ಶರಣ್ಯಾ ವೈಯಕ್ತಿಕ ಚಾಂಪಿಯನ್ ಗೌರವದೊಂದಿಗೆ ಜಿಲ್ಲಾ ಮಟ್ಟಕ್ಕೆ ಆಯ್ಕೆಗೊಂಡರು. ಗುಂಡೆಸೆತ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನದೊಂದಿಗೆ ಬೆಳ್ಳಿ ಪದಕ ಹಾಗೂ ಹ್ಯಾಮರ್ ಥ್ರೋ ಸ್ಪರ್ಧೆಯಲ್ಲಿ ಕಂಚಿನ ಪದಕ ಪಡೆದ ಜನತಾದ ವಿದ್ಯಾರ್ಥಿನಿ ಕೃತಿಕಾ ಸಹ ಜಿಲ್ಲಾ ಮಟ್ಟದ ಸ್ಪರ್ಧೆಗೆ ಅರ್ಹತೆ ಪಡೆದರು. 17ರ ವಯೋಮಾನದ ಬಾಲಕರ ತ್ರಿವಿಧ ಜಿಗಿತ ಸ್ಪರ್ಧೆಯಲ್ಲಿ ಜನತಾದ ಪ್ರವೀಶ್ ಕಂಚಿನ ಪದಕ ಗಳಿಸಿದರು. ಶೈಕ್ಷಣಿಕ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮಗಳನ್ನು ಕೊಲೆಗೈದ ಬಳಿಕ ತಾಯಿಯು ನೇಣಿಗೆ ಶರಣಾದ ಘಟನೆ ತಾಲೂಕಿನ ಶಾನಾಡಿ ಕೊರಗ ಕಾಲೋನಿಯಲ್ಲಿ ಭಾನುವಾರ ಬೆಳಗ್ಗೆ ಸಂಭವಿಸಿದೆ. ಕೊರಗ ಕಾಲನಿ ನಿವಾಸಿ ಸುಧಾಕರ ಕೊರಗ ಅವರ ಪುತ್ರಿಯಾದ ಸುಪ್ರತಿ (14) ವಿಶೇಷ ಚೇತನೆಯಾಗಿದ್ದು ಆಕೆಯನ್ನು ಕೊಲೆಗೈದು ಪತ್ನಿ ನೇತ್ರಾವತಿ (34) ಆತ್ಮಹತ್ಯೆಗೆ ಶರಣಾಗಿದ್ದಾರೆ. ಸುಧಾಕರ ಅವರು ಕೂಲಿ ಕೆಲಸ ಮಾಡಿಕೊಂಡು ಕುಟುಂಬ ನಿರ್ವಹಿಸುತ್ತಿದ್ದರು. ಸುಪ್ರತಿ ಹುಟ್ಟಿನಿಂದಲೇ ಅಂಗವಿಕಲೆಯಾಗಿದ್ದು, ನಡೆಯಲು ಅಥವಾ ಕುಳಿತುಕೊಳ್ಳಲು ಲ, ಮಾತನಾಡಲು ಸಾಧ್ಯವಾಗದೆ ಹಾಸಿಗೆಯಲ್ಲೇ ಇರಬೇಕಾದ ಸ್ಥಿತಿಯಲ್ಲಿದ್ದರು. ಮಗಳ ಆರೈಕೆಯನ್ನು ತಾಯಿ ನೇತ್ರಾವತಿ ಮಾಡುತ್ತಿದ್ದರು. ದಂಪತಿಗೆ ಒಂದು ವರ್ಷದ ಗಂಡು ಮಗುವಿದೆ. ರವಿವಾರ ಬೆಳಗ್ಗೆ ಸುಧಾಕರ ಅವರು ಕೆಲಸಕ್ಕೆ ತೆರಳಿದ ಬಳಿಕ ನೇತ್ರಾವತಿ ಮನೆಯ ಕೆಲಸಗಳನ್ನು ಮುಗಿಸಿದ ಬಳಖ ಈ ಕೃತ್ಯ ಮಾಡಿದ್ದಾರೆ ಎನ್ನಲಾಗಿದೆ. ಬಳಿಕ ತಾವೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಘಟನೆಗೆ ನಿಖರ ಕಾರಣವೇನು ಎಂಬುದು ಇನ್ನೂ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಉಡುಪಿ ಹೆಚ್ಚುವರಿ ಎಸ್ಪಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಮುಳ್ಳಿಕಟ್ಟೆ ಸಮೀಪದ ಹೊಸಾಡು ಗ್ರಾಮದ ಕೆರೆಯಲ್ಲಿ ಮುಳುಗಿ ಇಬ್ಬರು ಶಾಲಾ ವಿದ್ಯಾರ್ಥಿನಿಯರು ಮೃತಪಟ್ಟ ಘಟನೆ ನಡೆದಿದೆ. ಮೃತ ಬಾಲಕಿಯರನ್ನು ಮುಳ್ಳಿಕಟ್ಟೆ ಹೆದ್ದಾರಿ ಪಕ್ಕದ ಜೋಪಡಿಯಲ್ಲಿ ವಾಸವಾಗಿದ್ದ, ಮೂಲತಃ ಹಾವೇರಿ ಜಿಲ್ಲೆಯವರಾದ ವೈಶಾಲಿ ಮತ್ತು ಸುನಿತಾ ಎಂದು ಗುರುತಿಸಲಾಗಿದೆ. ಇಬ್ಬರೂ ಸಮೀಪದ ಸರ್ಕಾರಿ ಶಾಲೆಯಲ್ಲಿ 7ನೇ ತರಗತಿಯಲ್ಲಿ ಓದುತ್ತಿದ್ದರು ಎಂದು ತಿಳಿದುಬಂದಿದೆ. ಬಟ್ಟೆ ಒಗೆಯಲು ಹಾಗೂ ಸ್ನಾನ ಮಾಡಲು ಕೆರೆಗೆ ತೆರಳಿದ್ದ ಸಂದರ್ಭದಲ್ಲಿ ಬಾಲಕಿಯರು ನೀರಿನಲ್ಲಿ ಮುಳುಗಿದ್ದಾರೆ ಎನ್ನಲಾಗಿದೆ. ಘಟನೆ ತಿಳಿಯುತ್ತಿದ್ದಂತೆ ಸ್ಥಳೀಯರು ನೆರವಿಗೆ ಧಾವಿಸಿದ್ದು, ಗಂಗೊಳ್ಳಿ ಪೊಲೀಸ್ ಠಾಣೆಯ ಸಿಬ್ಬಂದಿ, ಕುಂದಾಪುರ ಅಗ್ನಿಶಾಮಕ ದಳ, ದಿನೇಶ್ ಖಾರ್ವಿ ನೇತೃತ್ವದ ತಂಡ ಹಾಗೂ ಟೀಮ್ ಎಚ್‌ಐ ತುರ್ತು ಸ್ಪಂದನಾ ತಂಡದ ಸದಸ್ಯರು ಕಾರ್ಯಾಚರಣೆಗೆ ಕೈಜೋಡಿಸಿದರು. ಘಟನಾ ಸ್ಥಳಕ್ಕೆ ಆಂಬುಲೆನ್ಸ್, ಅಗ್ನಿಶಾಮಕ ದಳ ಹಾಗೂ ಮುಳುಗು ತಜ್ಞರ ತಂಡಗಳು ತಲುಪಲು ಸಾಕಷ್ಟು ಹರಸಾಹಸ ಪಡಬೇಕಾಯಿತು. ಬಳಿಕ ದಿನೇಶ್ ಖಾರ್ವಿ ಅವರ ತಂಡ ಕಾರ್ಯಾಚರಣೆ ನಡೆಸಿ ಇಬ್ಬರು ಬಾಲಕಿಯರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಅ.25: ತಾಲೂಕಿನ ಅರಾಟೆ ಸೇತುವೆ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಬೆಳಗ್ಗೆ ಎರಡು ಖಾಸಗಿ ಬಸ್‌ಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 26 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ. ಹೆಮ್ಮಾಡಿ ಅರಾಟೆ ಸೇತುವೆ ಬಳಿ ಭಾನುವಾರ ಬೆಳಗ್ಗೆ ಮಂಗಳೂರಿನತ್ತ ತೆರಳುತ್ತಿದ್ದ ಖಾಸಗಿ ಬಸ್ ಹಾಗೂ ಕುಂದಾಪುರದಿಂದ ಸಾಗರದ ಕಡೆಗೆ ಸಂಚರಿಸುತ್ತಿದ್ದ ಖಾಸಗಿ ಬಸ್‌ಗಳ ಮುಖಮುಖಿ ಡಿಕ್ಕಿಯಾಗಿವೆ. ಅಫಘಾತದ ತೀವ್ರತೆಗೆ ಎರಡೂ ಬಸ್ಸಿನಲ್ಲಿದ್ದ ಪ್ರಯಾಣಿಕರು ಗಾಯಗೊಂಡಿದ್ದರು. ಒಟ್ಟು 26 ಪ್ರಯಾಣಿಕರಿಗೆ ಗಾಯಗಳಾಗಿದ್ದು, ಗಂಭೀರ ಗಾಯಗೊಂಡ ಮೂವರನ್ನು ಮಣಿಪಾಲದ ಖಾಸಗಿ ಆಸ್ಪತ್ರೆಗೆ ಹಾಗೂ ಉಳಿದವರನ್ನು ಕುಂದಾಪುರದ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆ ಗಂಗೊಳ್ಳಿಯ ಟೀಮ್ ಎಂ.ಎಚ್.ಐ ಆಪತ್ಥಾಂಧವ ಆಂಬುಲೆನ್ಸ್ ತಂಡದ ಇಬ್ರಾಹಿಂ ಗಂಗೊಳ್ಳಿ, ಅಬ್ರಾರ್ ಹಾಗೂ ಸ್ವಯಂಸೇವಕ ವಿಕಾಸ್ ಎರಡು ಆಂಬುಲೆನ್ಸ್‌ಗಳ ಮೂಲಕ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸುವ ಕಾರ್ಯದಲ್ಲಿ ತೊಡಗಿಸಿಕೊಂಡರು. ಸ್ಥಳೀಯ ರಿಕ್ಷಾ ಚಾಲಕರು ಹಾಗೂ ಸಾರ್ವಜನಿಕರು ಆಸ್ಪತ್ರೆಗೆ ಸಾಗಿಸುವಲ್ಲಿ ನೆರವಾದರು. ಘಟನಾ ಸ್ಥಳಕ್ಕೆ ಪೊಲೀಸರು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಹಾಗೂ ವಿವೇಕಾನಂದ ಪಿಯು ಕಾಲೇಜು ಪುತ್ತೂರು ಇವರ ಜಂಟಿ ಆಶ್ರಯದಲ್ಲಿ ನಡೆದ ನಡೆದ ಬಾಲಕರ ಹಾಗೂ ಬಾಲಕಿಯರ ಜಿಲ್ಲಾ ಮಟ್ಟದ ಖೋ-ಖೋ ಪಂದ್ಯಾವಳಿಯಲ್ಲಿ ಆಳ್ವಾಸ್ ಪದವಿ ಪೂರ್ವ ಕಾಲೇಜಿನ ತಂಡವು ಕ್ರಮವಾಗಿ 19 ಹಾಗೂ 17ನೇ ಬಾರಿಗೆ ಸಮಗ್ರ ಚಾಂಪಿಯನ್ಸ್ ಪಟ್ಟ ಅಲಂಕರಿಸಿತು. ಬಾಲಕರ ವಿಭಾಗ:ಬಾಲಕರ ವಿಭಾಗದ ಫೈನಲ್ ಪಂದ್ಯಾಟದಲ್ಲಿ ಆಳ್ವಾಸ್ ಪದವಿ ಪೂರ್ವ ಕಾಲೇಜಿನ ತಂಡವು ವಿವೇಕಾನಂದ ಕಾಲೇಜು ಪುತ್ತೂರು ತಂಡವನ್ನು ಸೋಲಿಸಿ 19ನೇ ಬಾರಿ ಚಾಂಪಿಯನ್ಸ್ ಪ್ರಶಸ್ತಿ ಪಡೆಯಿತು. ಬಾಲಕರ ವೈಯಕ್ತಿಕ ವಿಭಾಗದಲ್ಲಿ ಉತ್ತಮ ಓಟಗಾರ ಪ್ರಶಸ್ತಿಯನ್ನು ಆಳ್ವಾಸ್‌ನ ವಿಜಯ್ ಕುಮಾರ್ ಹಾಗೂ ಉತ್ತಮ ಸವ್ಯಸಾಚಿ ಪ್ರಶಸ್ತಿಯನ್ನು ಆಳ್ವಾಸ್‌ನ ಚೇತನ್ ಕೆ ಪಿ ಪಡೆದರು. ಬಾಲಕಿಯರ ವಿಭಾಗ: ಬಾಲಕಿಯರ ವಿಭಾಗದ ಫೈನಲ್ ಪಂದ್ಯಾಟದಲ್ಲಿ ಆಳ್ವಾಸ್ ಪದವಿ ಪೂರ್ವ ಕಾಲೇಜಿನ ತಂಡವು ಎಸ್ ಡಿ ಪಿ ಟಿ ಪಿಯು ಕಾಲೇಜು ಕಟೀಲು ತಂಡವನ್ನು ಸೋಲಿಸಿ 17ನೇ ಬಾರಿ ಜಯಶಾಲಿಯಾಯಿತು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶಿಕ್ಷಣ ಎನ್ನುವುದು ಶೈಕ್ಷಣಿಕ, ಭಾವನಾತ್ಮಕ ಮತ್ತು ಸಾಮಾಜಿಕ ಬುದ್ಧಿಮತ್ತೆಯನ್ನು ಕಲಿಸುತ್ತದೆ ಎಂದು ನಿವೃತ್ತ ಪ್ರಾಧ್ಯಾಪಕ ಕೆ. ಗೋಪಾಲ್ ಹೇಳಿದರು. ಅವರು ಶನಿವಾರ ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನ ಆರ್ ಎನ್ ಶೆಟ್ಟಿ ಸಭಾಭವನದಲ್ಲಿ ಕಲಾ ವಿಭಾಗ ಆಯೋಜಿಸಿದ್ದ “ಆದ್ಯತಾ” ಕಲಾ ಉತ್ಸವವನ್ನು ಉದ್ಘಾಟಿಸಿ ಮಾತನಾಡಿದರು. ಶಿಕ್ಷಣ ಎನ್ನುವುದು ಕೇವಲ ಕಲಿಯುವಿಕೆ ಅಥವಾ ಅಂಕಗಳಿಗೆ ಸೀಮಿತವಾಗಿರಬಾರದು. ವಿದ್ಯಾರ್ಥಿಗಳಲ್ಲಿ ಶೈಕ್ಷಣಿಕವಾಗಿ ಕ್ರಿಯಾಶೀಲತೆ ಸೃಜನಶೀಲತೆ ಮತ್ತು ಉತ್ತಮ ಅಂಕಗಳನ್ನು ಪಡೆಯುವುದು, ಭಾವನಾತ್ಮಕವಾಗಿ ಆತ್ಮಸ್ಥೈರ್ಯ, ದೃಢ ಮನೋಭಾವ, ನಾಯಕತ್ವದ ಗುಣಗಳನ್ನು ಮತ್ತು ಸಾಮಾಜಿಕವಾಗಿ ಹೊಂದಾಣಿಕೆ, ಕಾರ್ಯಗಳನ್ನು ಸುಸಂಬದ್ಧ ರೀತಿಯಲ್ಲಿ ಮಾಡುವ ಮತ್ತು ನಿಭಾಯಿಸುವ ಪರಿಯನ್ನು ಪರಿಣಾಮಕಾರಿಯಾಗಿ ತಿಳಿಸಬೇಕು ಈ ಮೂರು ಅಂಶಗಳ ಸಮ್ಮಿಲನ ಈ ಕಾರ್ಯಕ್ರಮದಲ್ಲಿ ಕಾಣುತ್ತಿದೆ ಎಂದು ಅಭಿಪ್ರಾಯಪಟ್ಟರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಭಂಡಾರ್ಕಾರ್ಸ್ ಕಾಲೇಜಿನ ಪ್ರಾಂಶುಪಾಲ ಡಾ.ಶುಭಕರಾಚಾರಿ ಮಾತನಾಡಿ ಕಲಾ ವಿಭಾಗದ ವಿದ್ಯಾರ್ಥಿಗಳು ಎಲ್ವಲಾ ಕ್ಷೇತ್ರದಲ್ಲಿ ಮಿಂಚುತ್ತಿದ್ದಾರೆ. ಕಾಲೇಜಿನ ಇತಿಹಾಸದ ಪುಟಗಳನ್ನು ತೆರೆದರೆ ವಿಶೇಷ ಸಾಧನೆ ಮಾಡಿದ ವಿದ್ಯಾರ್ಥಿಗಳ ಸಾಲಿನಲ್ಲಿ…
