Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಕರ್ನಾಟಕ ಮಾಧ್ಯಮ ಅಕಾಡೆಮಿಯು 2026ನೇ ಸಾಲಿನ ವಿವಿಧ ದತ್ತಿನಿಧಿ ಪ್ರಶಸ್ತಿಗಳಿಗಾಗಿ ಪತ್ರಕರ್ತರಿಂದ ಲೇಖನಗಳನ್ನು ಆಹ್ವಾನಿಸಿದೆ. ಕರ್ನಾಟಕ ಮಾಧ್ಯಮ ಅಕಾಡೆಮಿಯಲ್ಲಿ ರಾಜ್ಯದ ವಿವಿಧ ಮಾಧ್ಯಮ ಸಂಸ್ಥೆಗಳು ಈ ಕೆಳಕಂಡಂತೆ ದತ್ತಿನಿಧಿ, ಪ್ರಶಸ್ತಿಗಳನ್ನು ಸ್ಥಾಪಿಸಿವೆ. ಬೆಂಗಳೂರಿನ ‘ಅಭಿಮಾನಿ ಪ್ರಕಾಶನ’ ಸಂಸ್ಥೆಯು ರಾಜ್ಯ ಮತ್ತು ಜಿಲ್ಲಾಮಟ್ಟದ ಕನ್ನಡ ಪತ್ರಿಕೆಗಳಲ್ಲಿ ‘ಸಾಮಾಜಿಕ ಸಮಸ್ಯೆ’ ಗಳನ್ನು ಪರಿಣಾಮಕಾರಿಯಾಗಿ ಪ್ರತಿಬಿಂಬಿಸುವ ಲೇಖನ-ವರದಿಗಳಿಗೆ “ಅಭಿಮಾನಿ ಪ್ರಶಸ್ತಿ”, ಮೈಸೂರಿನ “ಮೈಸೂರು ದಿಗಂತ ಪತ್ರಿಕಾ ಸಂಸ್ಥೆಯು ‘ಮಾನವೀಯ ಸಮಸ್ಯೆ’ ಗಳನ್ನು ಪರಿಣಾಮಕಾರಿಯಾಗಿ ಪ್ರತಿಬಿಂಬಿಸುವ ಲೇಖನ-ವರದಿಗಳಿಗೆ “ಮೈಸೂರು ದಿಗಂತ ಪ್ರಶಸ್ತಿ, ಬೆಂಗಳೂರಿನ ಅಭಿಮನ್ಯು ಪತ್ರಿಕೆ ಸಂಸ್ಥೆಯು ದಮನಿತ ಸಮುದಾಯಗಳ ಪರ ದನಿಯಾದ ಅತ್ಯುತ್ತಮ ಲೇಖನ/ಅಂಕಣ/ಸಂಪಾದಕೀಯ/ಪರಿಣಾಮಕಾರಿ ವರದಿಗೆ “ಅಭಿಮನ್ಯು ಪ್ರಶಸ್ತಿ”, ಬೆಂಗಳೂರಿನ ಪ್ರಜಾ ಸಂದೇಶ ಪತ್ರಿಕಾ ಸಂಸ್ಥೆಯು ಶೋಷಣೆಯನ್ನು ಪರಿಣಾಮಕಾರಿಯಾಗಿ ಬಿಂಬಿಸುವ ಲೇಖನಕ್ಕೆ “ಪ್ರಜಾ ಸಂದೇಶ ದತ್ತಿ ಪ್ರಶಸ್ತಿ”, ಹಾಗೂ ಹಿರಿಯ ಪತ್ರಕರ್ತರ ಹೆಸರಿನ ಸ್ಥಾಪಿಸಲಾದ ಕೃಷಿವಲಯದಲ್ಲಿ ಅತ್ಯುತ್ತಮ ವರದಿ/ಅಂಕಣ/ಲೇಖನ “ಬಸವರಾಜ ದೊಡ್ಡಮನಿ ದತ್ತಿ ಪ್ರಶಸ್ತಿ” ಗಳನ್ನು ಸ್ಥಾಪಿಸಿವೆ. ಈ ದತ್ತಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಕನ್ನಡ ನಾಡು ನುಡಿಯ ಜೊತೆಗೆ ಭಾಷಾಭಿಮಾನ ಹೆಚ್ಚಬೇಕು ಆ ಮೂಲಕ ಕನ್ನಡ ಭಾಷೆ ಉಳಿಯಲು ಸಾಧ್ಯ ಎಂದು ಕೋಟ ಆರಕ್ಷಕ ಠಾಣೆಯ ಎಎಸ್‌ಐ ಗೋಪಾಲ್ ಪೂಜಾರಿ ಹೇಳಿದರು. ಅವರು ಭಾನುವಾರ ಕೋಟದ ಡಾ.ಕೋಟ ಶಿವರಾಮ ಕಾರಂತರ ಮನೆಯಂಗಳದಲ್ಲಿ ಪಂಚವರ್ಣ ಯುವಕ ಮಂಡಲ ಹಾಗೂ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ಕೋಟ ಇವರ ಆಶ್ರಯದಲ್ಲಿ 29ನೇ ವರ್ಷದ ಸದ್ಭಾವನಾ -2026 ಶೀರ್ಷಿಕೆಯಡಿ ನಡೆದ ಕನ್ನಡ ರಾಜ್ಯೋತ್ಸವ ಸಂಭ್ರಮ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೆರಿಸಿ ಮಾತನಾಡಿದರು. ಪಂಚವರ್ಣ ಸಂಘಟನೆ ಅನೇಕ ವರ್ಷಗಳಿಂದ ಭಾಷಾಭಿಮಾನ ಬಿತ್ತುವ ಹಾಗೂ ಹಲವು ಸಮಾಜಮುಖಿ ಕಾರ್ಯಗಳ ಮೂಲಕ ಮನೆ ಮಾತಾಗಿ ಬೆಳೆದು ನಿಂತಿದೆ ಎಂದರು. ಪರಿಸರವಾದಿ ಕೋ.ಗಿ.ನಾ ಮಾತನಾಡಿ, ಭಾಷಾ ಅಸ್ಮಿತೆ ನಮ್ಮೊಳಗಿದೆ ಅದನ್ನು ಅಳಿಸಿ ಹಾಕಲು ಯಾರಿಂದಲೂ ಸಾಧ್ಯವಿಲ,ನಮ್ಮತನ ನಮ್ಮ ಭಾಷಾಭಿಮಾನ ಎಲ್ಲಿ ಹೊದರು ಅದು ನಮ್ಮ ಮನೆಯ ಭಾಷೆಯಾಗಿ ಉಳಿಯುತ್ತದೆ.ಅದರ ಜೊತೆಗೆ ರಾಜ್ಯೋತ್ಸವ ಕನ್ನಡದ ಉತ್ಸವವಾಗಿ ಹೊರಹೊಮ್ಮುತ್ತಿದೆ ಎಂದರು. ಕಾರ್ಯಕ್ರಮವನ್ನು ಕೋಟ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಇಲ್ಲಿನ ಸೇಂಟ್ ಥಾಮಸ್ ಸೆಂಟ್ರಲ್ ಸ್ಕೂಲ್ ವತಿಯಿಂದ 2026ನೇ ಸಾಲಿನ ವಾರ್ಷಿಕ ಕ್ರೀಡಾಕೂಟವಾದ “ವಿಕ್ಟರಿ 2026” ಅನ್ನು ಶಾಲಾ ಮೈದಾನದಲ್ಲಿ ಅತ್ಯಂತ ಸಂಭ್ರಮದಿಂದ ಆಯೋಜಿಸಲಾಯಿತು. “ಸಾಮರ್ಥ್ಯ, ಉತ್ಸಾಹ ಮತ್ತು ಕ್ರೀಡಾಸ್ಫೂರ್ತಿಯ ಸಂಭ್ರಮ” ಎಂಬ ಆಶಯದೊಂದಿಗೆ ನಡೆದ ಈ ಕಾರ್ಯಕ್ರಮಕ್ಕೆ ಅಂತಾರಾಷ್ಟ್ರೀಯ ಕ್ರೀಡಾಪಟು ಹಾಗೂ ಚಿನ್ನದ ಪದಕ ವಿಜೇತೆ ಕುಮಾರಿ ಪ್ರಜ್ಞಾ ಕೆ. ಉಡುಪಿ ಮುಖ್ಯ ಅತಿಥಿಯಾಗಿ ಆಗಮಿಸಿ ಕ್ರೀಡಾಕೂಟವನ್ನು ಉದ್ಘಾಟಿಸಿದರು. ಕಾರ್ಯಕ್ರಮದ ಆರಂಭದಲ್ಲಿ ವಿದ್ಯಾರ್ಥಿಗಳ ಆಕರ್ಷಕ ಪಥಸಂಚಲನ ನಡೆಯಿತು. ಶಿಸ್ತುಬದ್ಧವಾಗಿ ಹೆಜ್ಜೆ ಹಾಕಿದ ವಿದ್ಯಾರ್ಥಿಗಳು ಕ್ರೀಡಾಸ್ಫೂರ್ತಿ ಮತ್ತು ಏಕತೆಯ ಸಂದೇಶ ಸಾರಿದರು. ಇದರೊಂದಿಗೆ ವಿದ್ಯಾರ್ಥಿಗಳ ಮನಮೋಹಕ ಸಂಗೀತ ನೃತ್ಯ ಕಾರ್ಯಕ್ರಮವು ಸಮಾರಂಭಕ್ಕೆ ವಿಶೇಷ ಮೆರುಗು ನೀಡಿತು. ಮುಖ್ಯ ಅತಿಥಿಗಳಾದ ಪ್ರಜ್ಞಾ ಅವರು ರಾಷ್ಟ್ರೀಯ ಮಟ್ಟದ ಅಥ್ಲೆಟಿಕ್ ಚಾಂಪಿಯನ್‌ಶಿಪ್‌ಗಳಲ್ಲಿ ಹಲವು ಪದಕಗಳನ್ನು ಗೆದ್ದು ಸಾಧನೆ ಮಾಡಿದ್ದಾರೆ. 2019ರ 400 ಮೀಟರ್ ಹರ್ಡಲ್ಸ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಹಾಗೂ 80ನೇ ಅಖಿಲ ಭಾರತ ಅಥ್ಲೆಟಿಕ್ ಕೂಟದ 400 ಮೀಟರ್…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಕನ್ನಡ ಭಾಷೆಯ ಬಗ್ಗೆ ನಮಗಿರುವ ಅಭಿಮಾನ ಕೇವಲ ಘೋಷಣೆಗಳಿಗೆ ಸೀಮಿತವಾಗಬಾರದು. ಅದು ನಮ್ಮ ಆಲೋಚನೆ, ಮಾತು ಮತ್ತು ನಡವಳಿಕೆಯಲ್ಲಿ ಪ್ರತಿಫಲಿಸಬೇಕು. ಇಂದು ಕನ್ನಡ ಕೊರಳಿನ ಕೂಗಾಗಿದೆಯೇ ಹೊರತು ಕರುಳಿನ ಕೂಗಾಗಿಲ್ಲ. ಕನ್ನಡವನ್ನು ಉಳಿಸುವ ಬಗ್ಗೆ ಮಾತನಾಡುವುದಕ್ಕಿಂತ ಅದನ್ನು ದಿನನಿತ್ಯದ ಬದುಕಿನಲ್ಲಿ ಬಳಸುವ ಮೂಲಕ ಬೆಳೆಸುವ ಅಗತ್ಯವಿದೆ ಎಂದು ಚಿಂತಕ ಅರವಿಂದ ಚೊಕ್ಕಾಡಿ ಅಭಿಪ್ರಾಯಪಟ್ಟರು. ಅವರು ಭಾನುವಾರ ಆಳ್ವಾಸ್ ಎಂಜಿನಿಯರಿಂಗ್ ಕಾಲೇಜಿನ ಕನ್ನಡ ಸಂಘ ಆಯೋಜಿಸಿದ್ದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು. ನವೆಂಬರ್ 1 ಕನ್ನಡ ರಾಜ್ಯೋತ್ಸವವಲ್ಲ. ಕರ್ನಾಟಕ ರಾಜ್ಯೋತ್ಸವ. ಕರ್ನಾಟಕ ರಾಜ್ಯದ ರಚನೆಯ ಸ್ಮರಣಾರ್ಥ ಈ ದಿನವನ್ನು ಆಚರಿಸಲಾಗುತ್ತದೆ. ಭಾಷೆಯೊಂದಕ್ಕೆ ನಿರ್ದಿಷ್ಟವಾಗಿ ಉದಯವಾದ ದಿನ ಎಂಬುದಿಲ್ಲ. ಕನ್ನಡಕ್ಕೆ ಸುಮಾರು ಎರಡರಿಂದ ಎರಡೂವರೆ ಸಾವಿರ ವರ್ಷಗಳ ದಾಖಲಿತ ಇತಿಹಾಸವಿದ್ದು, ಅದಕ್ಕೂ ಹಿಂದಿನ ಅಸ್ತಿತ್ವವೂ ಇದ್ದಿರಬಹುದು. ಹೀಗಾಗಿ ರಾಜ್ಯೋತ್ಸವದ ಆಚರಣೆಯನ್ನು ಭಾಷೆಯ ಇತಿಹಾಸ ಮತ್ತು ರಾಜ್ಯದ ಅಸ್ಮಿತೆಯ ವಿಶಾಲ ಹಿನ್ನೆಲೆಯಲ್ಲಿ ಅರ್ಥಮಾಡಿಕೊಳ್ಳಬೇಕು. ಹಲವು ಭಾಷೆಗಳನ್ನು ಕಲಿಯುವುದು ಒಳ್ಳೆಯ ಬೆಳವಣಿಗೆ.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಕಿರಿಮಂಜೇಶ್ವರದ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್‌ನಲ್ಲಿ 71ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯ ಶಿಕ್ಷಕಿ ದೀಪಿಕಾ ಆಚಾರ್ಯ ವಹಿಸಿದ್ದರು. ಕನ್ನಡ ನಾಡು, ನುಡಿ, ನೆಲ, ಜಲ ಹಾಗೂ ಕನ್ನಡ ಭಾಷೆಯ ಶ್ರೀಮಂತ ಪರಂಪರೆಯನ್ನು ಸ್ಮರಿಸುವ ಉದ್ದೇಶದಿಂದ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಕನ್ನಡ ಶಿಕ್ಷಕ ಮಹಾದೇವ ಅವರು ಕನ್ನಡ ಭಾಷೆಯ ಇತಿಹಾಸ, ಕರ್ನಾಟಕದ ಏಕೀಕರಣದ ಮಹತ್ವ ಹಾಗೂ ಕನ್ನಡಿಗರ ಅಭಿಮಾನ ಮತ್ತು ಸ್ವಾಭಿಮಾನದ ಕುರಿತು ಭಾಷಣ ಮಾಡಿದರು. ಕನ್ನಡ ಭಾಷೆಯನ್ನು ಉಳಿಸಿ ಬೆಳೆಸುವಲ್ಲಿ ಪ್ರತಿಯೊಬ್ಬರ ಜವಾಬ್ದಾರಿಯನ್ನು ತಿಳಿಸಿದರು. ಶಾಲಾ ಸಂಯೋಜಕರಾದ ಸುಬ್ರಮಣ್ಯ ಮಾರಾಟಿ ಹಾಗೂ ಸಾಂಸ್ಕೃತಿಕ ವಿಭಾಗದ ಸಂಯೋಜಕರಾದ ರಾಘವೇಂದ್ರ ಬಿಲ್ಲವ, ಬೋಧಕ – ಬೋಧಕೇತರ ವೃಂದದವರು ಹಾಗೂ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಕನ್ನಡ ಶಿಕ್ಷಕಿ ಶ್ವೇತಾ ಅವರು ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರೂಪಿಸಿದರು. ಕನ್ನಡ ಶಿಕ್ಷಕಿ ಸುಜಾತಾ ಅವರು ಸ್ವಾಗತಿಸಿ, ಕೊನೆಯಲ್ಲಿ ವಂದನಾರ್ಪಣೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಉಡುಪಿ ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಬಾಲಕಿಯರ ಪ್ರೌಢಶಾಲೆ ಅಜ್ಜರಕಾಡು, ಉಡುಪಿ ಇವರ ವತಿಯಿಂದ ಅಜ್ಜರಕಾಡು ಈಜುಕೊಳದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಈಜು ಸ್ಪರ್ಧೆಯಲ್ಲಿ ಕ್ರಿಯೇಟಿವ್ ಗ್ಲೋಬಲ್ ಸ್ಕೂಲಿನ 6ನೇ ತರಗತಿ ವಿದ್ಯಾರ್ಥಿನಿಯರಾದ ಆದ್ಯ ಎಸ್. ಕಿರಣ್ ಅವರು 50 ಮೀಟರ್ ಬೆಸ್ಟ್ ಸ್ಟ್ರೋಕ್‌ನಲ್ಲಿ ದ್ವಿತೀಯ ಸ್ಥಾನ ಮತ್ತು 50 ಮೀಟರ್ ಫ್ರೀ ಸ್ಟೈಲ್ ನಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ. ಹಾಗೆಯೇ ಅದಿತಿ ತಂತ್ರಿ ಅವರು 50 ಮೀಟರ್ ಬೆಸ್ಟ್ ಸ್ಟ್ರೋಕ್‌ನಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ. ಸಾಧನೆಗೈದ ವಿದ್ಯಾರ್ಥಿನಿಯರನ್ನು ಕಾಲೇಜಿನ ಆಡಳಿತ ಮಂಡಳಿ ಹಾಗೂ ಪ್ರಾಂಶುಪಾಲರು ಅಭಿನಂದಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳಿಂದ ಟೋಲ್‌ಗಳನ್ನು ಸಂಗ್ರಹ ಮಾಡಲಾಗುತ್ತದೆ. ಅದಕ್ಕನುಗುಣವಾಗಿ ರಸ್ತೆಯಲ್ಲಿ ವಾಹನಗಳು ಸುಗಮ ಹಾಗೂ ಸುರಕ್ಷಿತವಾಗಿ ಸಂಚರಿಸಲು ವೈಜ್ಞಾನಿಕ ರೀತಿಯಲ್ಲಿ ರಸ್ತೆ ಕಾಮಗಾರಿಗಳನ್ನು ಕೈಗೊಳ್ಳುವುದರ ಜೊತೆಗೆ ಅವುಗಳ ನಿರ್ವಹಣೆಯನ್ನು ಕಾಲಕಾಲಕ್ಕೆ ನಿರ್ವಹಿಸಬೇಕು ಎಂದು ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರುಗಳಿಗೆ ಉಡುಪಿ- ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟ ಶ್ರೀನಿವಾಸ ಪೂಜಾರಿ ಸೂಚನೆ ನೀಡಿದರು. ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಹೆದ್ದಾರಿ-66 ರ ಕೋಟ, ಪಡುಬಿದ್ರೆ, ತೆಕ್ಕಟ್ಟೆ ಸೇರಿದಂತೆ ಮುಂತಾದ ಸ್ಥಳಗಳಲ್ಲಿ ಸರಣಿ ಅಪಘಾತಗಳು ನಡೆಯುತ್ತಿರುವ ಬಗ್ಗೆ ಚರ್ಚಿಸಲು ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಾಷ್ಟ್ರೀಯ ಹೆದ್ದಾರಿ-66 ರಲ್ಲಿ ರಸ್ತೆ ಅಪಘಾತಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಾ ಸಾವು-ನೋವುಗಳು ಉಂಟಾಗುತ್ತಿವೆ. ರಾಷ್ಟ್ರೀಯ ಹೆದ್ದಾರಿಯ ಗುತ್ತಿಗೆದಾರರು ಟೋಲ್ ಸಂಗ್ರಹವನ್ನು ಮಾಡುವುದೊಂದೆ ತಮ್ಮ ಗುರಿಯಾಗಿಸಿಕೊಂಡರೆ ಸಾಲದು. ಟೋಲ್ ವಸೂಲಿಯೊಂದಿಗೆ ನಿಯಮಾನುಸಾರ ರಾ. ಹೆದ್ದಾರಿಗಳ ನಿರ್ವಹಣೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸುವುದರೊಂದಿಗೆ ಅಪಘಾತಗಳು ಕಡಿಮೆ ಮಾಡುವ ನಿಟ್ಟಿನಲ್ಲಿ ಕ್ರಮಗಳನ್ನು ಕೈಗೊಳ್ಳಬೇಕು.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಯಕ್ಷಗಾನ ರಾಜಕಲೆಯಾಗಿ ಹೊರಹೊಮ್ಮಿದ್ದು ಸರಕಾರ ಇದನ್ನು ವಿಶೇಷವಾಗಿ ಗುರುತಿಸಿ ನಾಟಕ ಸೇರಿದಂತೆ ವಿವಿಧ ಕಲೆಗೆ ನೀಡಲಾಗುವ ಮಾನ್ಯತೆ ನೀಡಬೇಕು ಎಂದು ಯಕ್ಷಗಾನ ವಿಮರ್ಶಕ ಎಂ.ಎಸ್. ಸಾಮಗ ಹೇಳಿದರು. ಅವರು ಶುಕ್ರವಾರ ಗುಂಡ್ಮಿ ಯಕ್ಷಗಾನ ಕಲಾಕೇಂದ್ರ ಹಂಗಾರಕಟ್ಟೆ ಇಲ್ಲಿ ಒಂದು ವಾರಗಳ ಯಕ್ಷ ಸಪ್ತಾಹ ಕಾಳಗೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿ ಯಕ್ಷಗಾನಕ್ಕೆ ಯುನಿವರ್ಸಿಟಿ ಮಟ್ಟದಲ್ಲಿ ಗುರುತಿಸಿಕೊಂಡಿದೆ ಇಂತಹ ಕಲೆಯ ತನ್ನ ಚೌಕಟ್ಟನ್ನು ಮೀರದೆ ಅದರ ಪರಂಪರೆಯನ್ನು ಉಳಿಸಿ ಮುಂದಿನ ತಲೆಮಾರಿಗೆ ಕೊಂಡ್ಯೋಯುವ ಕಾರ್ಯ ಆಗಲಿ ಈ ದಿಸೆಯಲ್ಲಿ ಯಕ್ಷಗಾನ ಕಲಾಕೇಂದ್ರ ಹಲವಾರು ಕಲಾವಿದರನ್ನು ಧಾರೆ ಎರೆಯುವ ಮೂಲಕ ಯಕ್ಷಗಾನ ನೈಜ ಪರಂಪರೆಗೆ ಸಾಕ್ಷಿಯಾಗಿದೆ ಎಂದರು. ಸಭೆಯಲ್ಲಿ ವೈದ್ಯರಾದ ಡಾ. ಭಾರ್ಗವಿ ಐತಾಳ್, ನಿವೃತ್ತ ಬ್ಯಾಂಕ್ ಅಧಿಕಾರಿ ಮಂಜುನಾಥ್ ಉಪಾಧ್ಯಾ ಉಪಸ್ಥಿತರಿದ್ದರು. ಕಲಾಕೇಂದ್ರದ ಕಾರ್ಯದರ್ಶಿ ರಾಜಶೇಖರ್ ಹೆಬ್ಬಾರ್ ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕಾರ್ಯಕ್ರಮವನ್ನು ವಿಭಾವನ್ ಹೇರ್ಳೆ ನಿರೂಪಿಸಿದರು.ವೆಂಕಟೇಶ ಕ್ರಮಾಧಾರಿ ವಂದಿಸಿದರು. ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮದ ಭಾಗವಾಗಿ ಕೋಟದ ಪಂಚವರ್ಣ ಕಲಾತಂಡದಿಂದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಮೂಡ್ಲಕಟ್ಟೆಯ ಐಎಂಜೆ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ಪಿಯುಸಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾದ ‘ನವೋನ್ಮೇಶ’ ರಾಜ್ಯ ಮಟ್ಟದ ವಿಜ್ಞಾನ, ವಾಣಿಜ್ಯ, ಸಾಂಸ್ಕೃತಿಕ ಹಾಗೂ ಕ್ರೀಡಾ ಉತ್ಸವದ ಸಮಾರೋಪ ಸಮಾರಂಭವು ಯಶಸ್ವಿಯಾಗಿ ಸಂಪನ್ನಗೊಂಡಿತು. ಸಮಾರೋಪ ಸಮಾರಂಭದ ಮುಖ್ಯ ಅತಿಥಿಯಾಗಿ ಖ್ಯಾತ ಚಲನಚಿತ್ರ ನಟ ವಜ್ರಂಗ್ ಶೆಟ್ಟಿ ಅವರು ಭಾಗವಹಿಸಿ, ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೋರಿದ ಉತ್ಸಾಹವನ್ನು ಶ್ಲಾಘಿಸಿದರು ಮತ್ತು ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಶುಭಕೋರಿದರು. ಈ ಬಾರಿಯ ‘ನವೋನ್ಮೇಶ’ ಫೆಸ್ಟ್‌ನಲ್ಲಿ ವಿವಿಧ ಸ್ಪರ್ಧೆಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಮಂಗಳೂರಿನ ಕೆನರಾ ವಿಕಾಸ್ ಪಿಯು ಕಾಲೇಜಿನ  ತಂಡವು ಸಮಗ್ರ ಚಾಂಪಿಯನ್ (Winner) ಪಟ್ಟವನ್ನು ಮುಡಿಗೇರಿಸಿಕೊಂಡಿತು. ಉಡುಪಿಯ ಎಂಜೆಎಂ ಪಿಯು ಕಾಲೇಜಿನ ತಂಡವು ಪ್ರಥಮ ರನ್ನರ್ ಅಪ್ ಹಾಗೂ ಕುಂದಾಪುರದ ಶ್ರೀ ವೆಂಕಟರಮಣ ಪಿಯು ಕಾಲೇಜ್ ದ್ವಿತೀಯ ರನ್ನರ್ ಅಪ್ ಪ್ರಶಸ್ತಿಗೆ ಭಾಜನರಾದರು. ಸಮಾರೋಪ ಸಮಾರಂಭದ ಮುಖ್ಯ ಅತಿಥಿಯಾಗಿ ಖ್ಯಾತ ಚಲನಚಿತ್ರ ನಟ ವಜ್ರಂಗ್…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಚರ್ಮ ಕುಶಲಕರ್ಮಿಗಳ ಸರ್ವತೋಮುಖ ಅಭಿವೃದ್ಧಿಗಾಗಿ ಡಾ. ಬಾಬು ಜಗಜೀವನ್ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನ ಕ್ರಿಯಾ ಯೋಜನೆಯಡಿ ಸ್ವಾವಲಂಬಿ / ಸಂಚಾರಿ ಮಾರಾಟ ಮಳಿಗೆ, ನೇರಸಾಲ ಯೋಜನೆ, ಚರ್ಮಶಿಲ್ಪ ಯೋಜನೆ, ಮಹಿಳಾ ಕುಶಲಕರ್ಮಿಗಳಿಗೆ ಕಾಯಕಸ್ಪೂರ್ತಿ ಯೋಜನೆ, ಪಾದುಕೆ ಕುಟೀರ ಹಾಗೂ ಮಾರುಕಟ್ಟೆ ಸಹಾಯ ಯೋಜನೆಗಳನ್ನು ಜಾರಿಗೊಳಿಸಲಾಗಿದ್ದು, ಯೋಜನೆಯ ಸೌಲಭ್ಯ ಪಡೆಯಲು ಪರಿಶಿಷ್ಟ ಜಾತಿಯ ಚರ್ಮ ಕುಶಲಕರ್ಮಿಗಳು ಸೇವಾಸಿಂಧು ಪೋರ್ಟಲ್‌ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ನವೆಂಬರ್ 28 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಸಂಯೋಜಕರು ಮೊ.ನಂ: 9980431954 ಹಾಗೂ 6362891017, ಕಲ್ಯಾಣಮಿತ್ರ ಸಹಾಯವಾಣಿ ಸಂಖ್ಯೆ: 9482300400 ಅಥವಾ ನಿಗಮದ ವೆಬ್‌ಸೈಟ್ http://lidkar.com ಅನ್ನು ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ಸಂಯೋಕರ ಕಚೇರಿ ಪ್ರಕಟಣೆ ತಿಳಿಸಿದೆ.

Read More