Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕಲಾವಿದರು ಇನ್ನಷ್ಟು  ಸಾಧನೆಯನ್ನು ಮಾಡುವುದಕ್ಕೆ  ಪ್ರೇರಣೆಯಾಗಲಿ ಎಂಬ ಉದ್ದೇಶದಿಂದ ಈ ಪುರಸ್ಕಾರವನ್ನು ನೀಡಿ ಗೌರವಿಸುವುದು ಎಂದು ಸ್ವಪ್ನ ಶಿಲ್ಪಿ ಶಿಕ್ಷಣ ತಜ್ಞ ಡಾ. ಹೆಚ್.ಶಾಂತಾರಾಮ್ ಹೇಳಿದರು. ಅವರು ಭಂಡಾರ್ಕಾರ್ಸ್ ಕಾಲೇಜಿನ ಆರ್. ಎನ್. ಶೆಟ್ಟಿ ಸಭಾಭವನದಲ್ಲಿ ನಡೆದ “51ನೇ ರಾಜ್ಯೋತ್ಸವ ತಾಳಮದ್ದಳೆ ಮತ್ತು ಡಾ. ಹೆಚ್. ಶಾಂತಾರಾಮ್ ಯಕ್ಷಗಾನ ಪುರಸ್ಕಾರ” ಕಾರ್ಯಕ್ರಮದಲ್ಲಿ ಈ ವರ್ಷದ ಡಾ.ಹೆಚ್. ಶಾಂತಾರಾಮ್ ಯಕ್ಷಗಾನ ಪುರಸ್ಕಾರ-2026 ನ್ನು ಮಹಾಬಲೇಶ್ವರ ಭಟ್ಟ ಕ್ಯಾದಗಿ ಅವರಿಗೆ ಪುರಸ್ಕರಿಸಿ ಮಾತನಾಡಿದರು. ಪ್ರಶಸ್ತಿ ಪುರಸ್ಕಾರಗಳು ಕಲಾವಿದನಲ್ಲಿ ಕಲೆಯನ್ನು ಉಳಿಸಿ ಬೆಳೆಸುವ ಮತ್ತು ಅದನ್ನು ಮುಂದಿನ ಪೀಳಿಗೆಗೆ ಹಂಚುವ ಗುರುತರ ಜವಾಬ್ದಾರಿಯನ್ನು ಕೊಡುತ್ತದೆ. ಅಂತೆಯೇ ಶ್ರೇಷ್ಠ ಯಕ್ಷಗಾನ ಕಲೆಯನ್ನು ಉಳಿಸಿ ಬೆಳೆಸುವ ಉದ್ದೇಶದಿಂದ ಈ ಯಕ್ಷಗಾನ ಪುರಸ್ಕಾರವನ್ನು ಆರಂಭಿಸಿದ್ದೇವೆ. ಉದಯೋನ್ಮುಖ ಕಲಾವಿದರನ್ನು ಗುರುತಿಸಿ ಅವರ ಸಾಧನೆಯನ್ನು ಬೆಂಬಲಿಸಿ ಪ್ರೋತ್ಸಾಹಿಸುವ ಮೂಲಕ ಈ ಕಲೆಯನ್ನು ಬೆಳೆಸುವುದಾಗಿದೆ. ಈ ಯಕ್ಷಗಾನ ಪುರಸ್ಕಾರವನ್ನು ಪಡೆದ ಕಲಾವಿದರಿಗೂ ಸಹ ಯಕ್ಷಗಾನ ಕಲೆಯನ್ನು ಉಳಿಸುವ ಜವಾಬ್ದಾರಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಉಡುಪಿ ಜಿಲ್ಲಾ ಪಂಚಾಯತ್ ಕೇಂದ್ರ ಸರಕಾರದ ಗ್ರಾಮೀಣಾಭಿವೃದ್ಧಿ ಮಂತ್ರಾಲಯ ನೀಡಲ್ಪಡುವ ಅತ್ಯುನ್ನತ ಪ್ರಶಸ್ತಿಯಾದ “ನಾನಾಜಿ ದೇಶಮುಖ್ ಸರ್ವೋತ್ತಮ ಪಂಚಾಯತ್ ಸತತ ವಿಕಾಸ ಪುರಸ್ಕಾರ” 2026ಕ್ಕೆ ನಾಮ ನಿರ್ದೇಶನಗೊಂಡ ಹಿನ್ನಲೆಯಲ್ಲಿ ಆಯ್ದ ಗ್ರಾಮ ಪಂಚಾಯತ್ ಪರಿಶೀಲನೆ ಪ್ರಯುಕ್ತ ಭಾರತ ಸರಕಾರದ ಪಂಚಾಯತ್ ರಾಜ್ ಸಚಿವಾಲಯದ ಸಹಾಯಕ ವಿಭಾಗೀಯ ಅಧಿಕಾರಿ  ಆಶಾದೇವಿ ಹಾಗೂ ಹಿರಿಯ ಸಮಲೋಚಕಿ ವಿದ್ಯುಲತಾ ಅವರು ಕೋಡಿ ಗ್ರಾಮ ಪಂಚಾಯತ್‌ಗೆ ಭೇಟಿ ನೀಡಿ ದಾಖಲೆ ಹಾಗೂ ಸ್ಥಳ ಪರಿಶೀಲನೆ ನಡೆಸಿದರು. 24/7 ಕುಡಿಯುವ ನೀರಿನ ವ್ಯವಸ್ಥೆ, ಎಸ್.ಎಲ್.ಆರ್. ಎಮ್, ಕಛೇರಿ ದಾಖಲೆ ಇತ್ಯಾದಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು 2023-24ನೇ ಸಾಲಿನ ಗ್ರಾಮ ಪಂಚಾಯತ್ ಜನಪ್ರತಿನಿಧಿಗಳು ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಹಾಗೂ ಸಿಬ್ಬಂದಿ ವರ್ಗ, ಸ್ಥಳೀಯ ಶಾಲಾ ಶಿಕ್ಷಕ ವರ್ಗ, ಸಂಜೀವಿನಿ ಸಂಘದ ಪದಾಧಿಕಾರಿಗಳು, ಹಾಗೂ ಸಿಬ್ಬಂಧಿ ವರ್ಗ, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಗ್ರಾಮ ಪಂಚಾಯತ್ ಆಡಳಿತಾಧಿಕಾರಿಯವರು, ಸ್ಥಳಿಯ ಆರೋಗ್ಯ ಇಲಾಖೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಜೆಸಿಐ ವಿಟ್ಲ ಹಾಗೂ ಜೆಸಿಐ ತುಂಬೆ ಎಲೈಟ್ ಘಟಕಗಳ ಆಶ್ರಯದಲ್ಲಿ ನಡೆದ ವಲಯ ಸಮ್ಮೇಳನ ‘ಆರ್ಯ-2026’ ರಲ್ಲಿ ಜೆಸಿಐ ಶಿರೂರು ಘಟಕವು ಹಲವು ಪ್ರತಿಷ್ಠಿತ ಪ್ರಶಸ್ತಿಗಳು ಹಾಗೂ ವಿಶೇಷ ಮನ್ನಣೆಗಳಿಗೆ ಭಾಜನವಾಗಿದೆ. 2026ನೇ ಸಾಲಿನಲ್ಲಿ ಘಟಕವು ಹಮ್ಮಿಕೊಂಡ ವಿವಿಧ ಸಮಾಜಮುಖಿ ಹಾಗೂ ಸೇವಾ ಕಾರ್ಯಕ್ರಮಗಳನ್ನು ಗುರುತಿಸಿ, ಝೋನ್ ಪ್ರೆಸಿಡೆಂಟ್ ಎಕ್ಸಲೆನ್ಸಿ ಅವಾರ್ಡ್, ರಕ್ತದಾನ ವಿಭಾಗದ ಮನ್ನಣೆ, ಸೆಲ್ಯೂಟ್ ದ ಸೈಲೆಂಟ್ ಸ್ಟಾರ್ ಮನ್ನಣೆ ಹಾಗೂ ಗೋ ಗ್ರೀನ್ ವಿಭಾಗದ ಮನ್ನಣೆ ಸೇರಿದಂತೆ ಹಲವು ಪ್ರಶಸ್ತಿ ಹಾಗೂ ಗೌರವಗಳನ್ನು ನೀಡಿ ಸನ್ಮಾನಿಸಲಾಯಿತು. ವಲಯಾಧ್ಯಕ್ಷ ಜೆಸಿ ಸಂತೋಷ ಶೆಟ್ಟಿ ಹಾಗೂ ವಲಯ ಉಪಾಧ್ಯಕ್ಷ ಜೆಸಿ ಪ್ರದೀಪ್ ಶೆಟ್ಟಿ ಅವರು ಜೆಸಿಐ ಶಿರೂರು ಅಧ್ಯಕ್ಷ ಜೆಸಿ ವಿನೋದ್ ಮೇಸ್ತ ಅವರಿಗೆ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು. ಈ ಸಂದರ್ಭದಲ್ಲಿ ಜೆಸಿಐ ಶಿರೂರು ಘಟಕದ ಪೂರ್ವಾಧ್ಯಕ್ಷರಾದ ಜೆಸಿ ಪ್ರಸಾದ್ ಪ್ರಭು, ಜೆಸಿ ಅರುಣ್ ಕುಮಾರ್ ಹಾಗೂ ಜೆಸಿ ಹರೀಶ್ ಶೇಟ್ ಉಪಸ್ಥಿತರಿದ್ದರು. ಘಟಕದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ತೆಕ್ಕೆಟ್ಟೆ ವಿಶ್ವ ವಿನಾಯಕ ವಿದ್ಯಾಸಂಸ್ಥೆಯಲ್ಲಿ ಪೋಷಕರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ನಡುವೆ ಉತ್ತಮ ಬಾಂಧವ್ಯ ಬೆಳೆಸುವ ಮತ್ತು ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೂರಕವಾದ ವಾತಾವರಣ ನಿರ್ಮಿಸುವ ಉದ್ದೇಶದಿಂದ ಶಾಲೆಯಲ್ಲಿ ಪೋಷಕರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ಅಭೀಮುಖೀಕರಣ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಸಂಸ್ಥೆಯ ಆಡಳಿತ ನಿರ್ದೇಶಕರು ಪ್ರಭಾಕರ ಶೆಟ್ಟಿ, ಸಂಸ್ಥೆಯ ಸಿ.ಇ.ಒ ವಿವಿರಾಜ್ ಹೆಗ್ಡೆ, ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ದಾಮೋದರ ಶರ್ಮ ಬಾರಕೂರು ಅವರು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ, ಶಿಸ್ತು, ಜೀವನದ ಮೌಲ್ಯಗಳು, ಸಮಯ ಪಾಲನೆ ಹಾಗೂ ಉತ್ತಮ ನಡವಳಿಕೆಯ ಮಹತ್ವದ ಕುರಿತು ಮಾರ್ಗದರ್ಶನ ನೀಡಿದರು. ಮಕ್ಕಳ ಭವಿಷ್ಯ ರೂಪಿಸುವಲ್ಲಿ ಪೋಷಕರು ಮತ್ತು ಶಿಕ್ಷಕರ ಪಾತ್ರ ಬಳ ಮಹತ್ವದ್ದಾಗಿದೆ. ಮಕ್ಕಳ ಆಸಕ್ತಿ ಪ್ರತಿಭೆ ಹಾಗೂ ಸಾಮರ್ಥ್ಯವನ್ನು ಗುರುತಿಸಿ ಅವರಿಗೆ ಸೂಕ್ತ ಪ್ರೋತ್ಸಾಹ ನೀಡಬೇಕು. ಕೇವಲ ಅಂಗಳಿಕೆಯೇ ಶಿಕ್ಷಣದ ಗುರಿಯಾಗದೆ, ಮಕ್ಕಳಲ್ಲಿ ಆತ್ಮವಿಶ್ವಾಸ, ಜವಬ್ದಾರಿ, ಸಂಸ್ಕಾರ ಮತ್ತು ಮಾನವೀಯ ಗುಣಗಳನ್ನು ಬೆಳೆಸುವುದು ಅಗತ್ಯ ಎಂದು ಹೇಳಿದರು. ಪೋಷಕರು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಕರ್ನಾಟಕ ಮಾಧ್ಯಮ ಅಕಾಡೆಮಿಯು 2026ನೇ ಸಾಲಿನ ವಿವಿಧ ದತ್ತಿನಿಧಿ ಪ್ರಶಸ್ತಿಗಳಿಗಾಗಿ ಪತ್ರಕರ್ತರಿಂದ ಲೇಖನಗಳನ್ನು ಆಹ್ವಾನಿಸಿದೆ. ಕರ್ನಾಟಕ ಮಾಧ್ಯಮ ಅಕಾಡೆಮಿಯಲ್ಲಿ ರಾಜ್ಯದ ವಿವಿಧ ಮಾಧ್ಯಮ ಸಂಸ್ಥೆಗಳು ಈ ಕೆಳಕಂಡಂತೆ ದತ್ತಿನಿಧಿ, ಪ್ರಶಸ್ತಿಗಳನ್ನು ಸ್ಥಾಪಿಸಿವೆ. ಬೆಂಗಳೂರಿನ ‘ಅಭಿಮಾನಿ ಪ್ರಕಾಶನ’ ಸಂಸ್ಥೆಯು ರಾಜ್ಯ ಮತ್ತು ಜಿಲ್ಲಾಮಟ್ಟದ ಕನ್ನಡ ಪತ್ರಿಕೆಗಳಲ್ಲಿ ‘ಸಾಮಾಜಿಕ ಸಮಸ್ಯೆ’ ಗಳನ್ನು ಪರಿಣಾಮಕಾರಿಯಾಗಿ ಪ್ರತಿಬಿಂಬಿಸುವ ಲೇಖನ-ವರದಿಗಳಿಗೆ “ಅಭಿಮಾನಿ ಪ್ರಶಸ್ತಿ”, ಮೈಸೂರಿನ “ಮೈಸೂರು ದಿಗಂತ ಪತ್ರಿಕಾ ಸಂಸ್ಥೆಯು ‘ಮಾನವೀಯ ಸಮಸ್ಯೆ’ ಗಳನ್ನು ಪರಿಣಾಮಕಾರಿಯಾಗಿ ಪ್ರತಿಬಿಂಬಿಸುವ ಲೇಖನ-ವರದಿಗಳಿಗೆ “ಮೈಸೂರು ದಿಗಂತ ಪ್ರಶಸ್ತಿ, ಬೆಂಗಳೂರಿನ ಅಭಿಮನ್ಯು ಪತ್ರಿಕೆ ಸಂಸ್ಥೆಯು ದಮನಿತ ಸಮುದಾಯಗಳ ಪರ ದನಿಯಾದ ಅತ್ಯುತ್ತಮ ಲೇಖನ/ಅಂಕಣ/ಸಂಪಾದಕೀಯ/ಪರಿಣಾಮಕಾರಿ ವರದಿಗೆ “ಅಭಿಮನ್ಯು ಪ್ರಶಸ್ತಿ”, ಬೆಂಗಳೂರಿನ ಪ್ರಜಾ ಸಂದೇಶ ಪತ್ರಿಕಾ ಸಂಸ್ಥೆಯು ಶೋಷಣೆಯನ್ನು ಪರಿಣಾಮಕಾರಿಯಾಗಿ ಬಿಂಬಿಸುವ ಲೇಖನಕ್ಕೆ “ಪ್ರಜಾ ಸಂದೇಶ ದತ್ತಿ ಪ್ರಶಸ್ತಿ”, ಹಾಗೂ ಹಿರಿಯ ಪತ್ರಕರ್ತರ ಹೆಸರಿನ ಸ್ಥಾಪಿಸಲಾದ ಕೃಷಿವಲಯದಲ್ಲಿ ಅತ್ಯುತ್ತಮ ವರದಿ/ಅಂಕಣ/ಲೇಖನ “ಬಸವರಾಜ ದೊಡ್ಡಮನಿ ದತ್ತಿ ಪ್ರಶಸ್ತಿ” ಗಳನ್ನು ಸ್ಥಾಪಿಸಿವೆ. ಈ ದತ್ತಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಕನ್ನಡ ನಾಡು ನುಡಿಯ ಜೊತೆಗೆ ಭಾಷಾಭಿಮಾನ ಹೆಚ್ಚಬೇಕು ಆ ಮೂಲಕ ಕನ್ನಡ ಭಾಷೆ ಉಳಿಯಲು ಸಾಧ್ಯ ಎಂದು ಕೋಟ ಆರಕ್ಷಕ ಠಾಣೆಯ ಎಎಸ್‌ಐ ಗೋಪಾಲ್ ಪೂಜಾರಿ ಹೇಳಿದರು. ಅವರು ಭಾನುವಾರ ಕೋಟದ ಡಾ.ಕೋಟ ಶಿವರಾಮ ಕಾರಂತರ ಮನೆಯಂಗಳದಲ್ಲಿ ಪಂಚವರ್ಣ ಯುವಕ ಮಂಡಲ ಹಾಗೂ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ಕೋಟ ಇವರ ಆಶ್ರಯದಲ್ಲಿ 29ನೇ ವರ್ಷದ ಸದ್ಭಾವನಾ -2026 ಶೀರ್ಷಿಕೆಯಡಿ ನಡೆದ ಕನ್ನಡ ರಾಜ್ಯೋತ್ಸವ ಸಂಭ್ರಮ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೆರಿಸಿ ಮಾತನಾಡಿದರು. ಪಂಚವರ್ಣ ಸಂಘಟನೆ ಅನೇಕ ವರ್ಷಗಳಿಂದ ಭಾಷಾಭಿಮಾನ ಬಿತ್ತುವ ಹಾಗೂ ಹಲವು ಸಮಾಜಮುಖಿ ಕಾರ್ಯಗಳ ಮೂಲಕ ಮನೆ ಮಾತಾಗಿ ಬೆಳೆದು ನಿಂತಿದೆ ಎಂದರು. ಪರಿಸರವಾದಿ ಕೋ.ಗಿ.ನಾ ಮಾತನಾಡಿ, ಭಾಷಾ ಅಸ್ಮಿತೆ ನಮ್ಮೊಳಗಿದೆ ಅದನ್ನು ಅಳಿಸಿ ಹಾಕಲು ಯಾರಿಂದಲೂ ಸಾಧ್ಯವಿಲ,ನಮ್ಮತನ ನಮ್ಮ ಭಾಷಾಭಿಮಾನ ಎಲ್ಲಿ ಹೊದರು ಅದು ನಮ್ಮ ಮನೆಯ ಭಾಷೆಯಾಗಿ ಉಳಿಯುತ್ತದೆ.ಅದರ ಜೊತೆಗೆ ರಾಜ್ಯೋತ್ಸವ ಕನ್ನಡದ ಉತ್ಸವವಾಗಿ ಹೊರಹೊಮ್ಮುತ್ತಿದೆ ಎಂದರು. ಕಾರ್ಯಕ್ರಮವನ್ನು ಕೋಟ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಇಲ್ಲಿನ ಸೇಂಟ್ ಥಾಮಸ್ ಸೆಂಟ್ರಲ್ ಸ್ಕೂಲ್ ವತಿಯಿಂದ 2026ನೇ ಸಾಲಿನ ವಾರ್ಷಿಕ ಕ್ರೀಡಾಕೂಟವಾದ “ವಿಕ್ಟರಿ 2026” ಅನ್ನು ಶಾಲಾ ಮೈದಾನದಲ್ಲಿ ಅತ್ಯಂತ ಸಂಭ್ರಮದಿಂದ ಆಯೋಜಿಸಲಾಯಿತು. “ಸಾಮರ್ಥ್ಯ, ಉತ್ಸಾಹ ಮತ್ತು ಕ್ರೀಡಾಸ್ಫೂರ್ತಿಯ ಸಂಭ್ರಮ” ಎಂಬ ಆಶಯದೊಂದಿಗೆ ನಡೆದ ಈ ಕಾರ್ಯಕ್ರಮಕ್ಕೆ ಅಂತಾರಾಷ್ಟ್ರೀಯ ಕ್ರೀಡಾಪಟು ಹಾಗೂ ಚಿನ್ನದ ಪದಕ ವಿಜೇತೆ ಕುಮಾರಿ ಪ್ರಜ್ಞಾ ಕೆ. ಉಡುಪಿ ಮುಖ್ಯ ಅತಿಥಿಯಾಗಿ ಆಗಮಿಸಿ ಕ್ರೀಡಾಕೂಟವನ್ನು ಉದ್ಘಾಟಿಸಿದರು. ಕಾರ್ಯಕ್ರಮದ ಆರಂಭದಲ್ಲಿ ವಿದ್ಯಾರ್ಥಿಗಳ ಆಕರ್ಷಕ ಪಥಸಂಚಲನ ನಡೆಯಿತು. ಶಿಸ್ತುಬದ್ಧವಾಗಿ ಹೆಜ್ಜೆ ಹಾಕಿದ ವಿದ್ಯಾರ್ಥಿಗಳು ಕ್ರೀಡಾಸ್ಫೂರ್ತಿ ಮತ್ತು ಏಕತೆಯ ಸಂದೇಶ ಸಾರಿದರು. ಇದರೊಂದಿಗೆ ವಿದ್ಯಾರ್ಥಿಗಳ ಮನಮೋಹಕ ಸಂಗೀತ ನೃತ್ಯ ಕಾರ್ಯಕ್ರಮವು ಸಮಾರಂಭಕ್ಕೆ ವಿಶೇಷ ಮೆರುಗು ನೀಡಿತು. ಮುಖ್ಯ ಅತಿಥಿಗಳಾದ ಪ್ರಜ್ಞಾ ಅವರು ರಾಷ್ಟ್ರೀಯ ಮಟ್ಟದ ಅಥ್ಲೆಟಿಕ್ ಚಾಂಪಿಯನ್‌ಶಿಪ್‌ಗಳಲ್ಲಿ ಹಲವು ಪದಕಗಳನ್ನು ಗೆದ್ದು ಸಾಧನೆ ಮಾಡಿದ್ದಾರೆ. 2019ರ 400 ಮೀಟರ್ ಹರ್ಡಲ್ಸ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಹಾಗೂ 80ನೇ ಅಖಿಲ ಭಾರತ ಅಥ್ಲೆಟಿಕ್ ಕೂಟದ 400 ಮೀಟರ್…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಕನ್ನಡ ಭಾಷೆಯ ಬಗ್ಗೆ ನಮಗಿರುವ ಅಭಿಮಾನ ಕೇವಲ ಘೋಷಣೆಗಳಿಗೆ ಸೀಮಿತವಾಗಬಾರದು. ಅದು ನಮ್ಮ ಆಲೋಚನೆ, ಮಾತು ಮತ್ತು ನಡವಳಿಕೆಯಲ್ಲಿ ಪ್ರತಿಫಲಿಸಬೇಕು. ಇಂದು ಕನ್ನಡ ಕೊರಳಿನ ಕೂಗಾಗಿದೆಯೇ ಹೊರತು ಕರುಳಿನ ಕೂಗಾಗಿಲ್ಲ. ಕನ್ನಡವನ್ನು ಉಳಿಸುವ ಬಗ್ಗೆ ಮಾತನಾಡುವುದಕ್ಕಿಂತ ಅದನ್ನು ದಿನನಿತ್ಯದ ಬದುಕಿನಲ್ಲಿ ಬಳಸುವ ಮೂಲಕ ಬೆಳೆಸುವ ಅಗತ್ಯವಿದೆ ಎಂದು ಚಿಂತಕ ಅರವಿಂದ ಚೊಕ್ಕಾಡಿ ಅಭಿಪ್ರಾಯಪಟ್ಟರು. ಅವರು ಭಾನುವಾರ ಆಳ್ವಾಸ್ ಎಂಜಿನಿಯರಿಂಗ್ ಕಾಲೇಜಿನ ಕನ್ನಡ ಸಂಘ ಆಯೋಜಿಸಿದ್ದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು. ನವೆಂಬರ್ 1 ಕನ್ನಡ ರಾಜ್ಯೋತ್ಸವವಲ್ಲ. ಕರ್ನಾಟಕ ರಾಜ್ಯೋತ್ಸವ. ಕರ್ನಾಟಕ ರಾಜ್ಯದ ರಚನೆಯ ಸ್ಮರಣಾರ್ಥ ಈ ದಿನವನ್ನು ಆಚರಿಸಲಾಗುತ್ತದೆ. ಭಾಷೆಯೊಂದಕ್ಕೆ ನಿರ್ದಿಷ್ಟವಾಗಿ ಉದಯವಾದ ದಿನ ಎಂಬುದಿಲ್ಲ. ಕನ್ನಡಕ್ಕೆ ಸುಮಾರು ಎರಡರಿಂದ ಎರಡೂವರೆ ಸಾವಿರ ವರ್ಷಗಳ ದಾಖಲಿತ ಇತಿಹಾಸವಿದ್ದು, ಅದಕ್ಕೂ ಹಿಂದಿನ ಅಸ್ತಿತ್ವವೂ ಇದ್ದಿರಬಹುದು. ಹೀಗಾಗಿ ರಾಜ್ಯೋತ್ಸವದ ಆಚರಣೆಯನ್ನು ಭಾಷೆಯ ಇತಿಹಾಸ ಮತ್ತು ರಾಜ್ಯದ ಅಸ್ಮಿತೆಯ ವಿಶಾಲ ಹಿನ್ನೆಲೆಯಲ್ಲಿ ಅರ್ಥಮಾಡಿಕೊಳ್ಳಬೇಕು. ಹಲವು ಭಾಷೆಗಳನ್ನು ಕಲಿಯುವುದು ಒಳ್ಳೆಯ ಬೆಳವಣಿಗೆ.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಕಿರಿಮಂಜೇಶ್ವರದ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್‌ನಲ್ಲಿ 71ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯ ಶಿಕ್ಷಕಿ ದೀಪಿಕಾ ಆಚಾರ್ಯ ವಹಿಸಿದ್ದರು. ಕನ್ನಡ ನಾಡು, ನುಡಿ, ನೆಲ, ಜಲ ಹಾಗೂ ಕನ್ನಡ ಭಾಷೆಯ ಶ್ರೀಮಂತ ಪರಂಪರೆಯನ್ನು ಸ್ಮರಿಸುವ ಉದ್ದೇಶದಿಂದ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಕನ್ನಡ ಶಿಕ್ಷಕ ಮಹಾದೇವ ಅವರು ಕನ್ನಡ ಭಾಷೆಯ ಇತಿಹಾಸ, ಕರ್ನಾಟಕದ ಏಕೀಕರಣದ ಮಹತ್ವ ಹಾಗೂ ಕನ್ನಡಿಗರ ಅಭಿಮಾನ ಮತ್ತು ಸ್ವಾಭಿಮಾನದ ಕುರಿತು ಭಾಷಣ ಮಾಡಿದರು. ಕನ್ನಡ ಭಾಷೆಯನ್ನು ಉಳಿಸಿ ಬೆಳೆಸುವಲ್ಲಿ ಪ್ರತಿಯೊಬ್ಬರ ಜವಾಬ್ದಾರಿಯನ್ನು ತಿಳಿಸಿದರು. ಶಾಲಾ ಸಂಯೋಜಕರಾದ ಸುಬ್ರಮಣ್ಯ ಮಾರಾಟಿ ಹಾಗೂ ಸಾಂಸ್ಕೃತಿಕ ವಿಭಾಗದ ಸಂಯೋಜಕರಾದ ರಾಘವೇಂದ್ರ ಬಿಲ್ಲವ, ಬೋಧಕ – ಬೋಧಕೇತರ ವೃಂದದವರು ಹಾಗೂ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಕನ್ನಡ ಶಿಕ್ಷಕಿ ಶ್ವೇತಾ ಅವರು ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರೂಪಿಸಿದರು. ಕನ್ನಡ ಶಿಕ್ಷಕಿ ಸುಜಾತಾ ಅವರು ಸ್ವಾಗತಿಸಿ, ಕೊನೆಯಲ್ಲಿ ವಂದನಾರ್ಪಣೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಉಡುಪಿ ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಬಾಲಕಿಯರ ಪ್ರೌಢಶಾಲೆ ಅಜ್ಜರಕಾಡು, ಉಡುಪಿ ಇವರ ವತಿಯಿಂದ ಅಜ್ಜರಕಾಡು ಈಜುಕೊಳದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಈಜು ಸ್ಪರ್ಧೆಯಲ್ಲಿ ಕ್ರಿಯೇಟಿವ್ ಗ್ಲೋಬಲ್ ಸ್ಕೂಲಿನ 6ನೇ ತರಗತಿ ವಿದ್ಯಾರ್ಥಿನಿಯರಾದ ಆದ್ಯ ಎಸ್. ಕಿರಣ್ ಅವರು 50 ಮೀಟರ್ ಬೆಸ್ಟ್ ಸ್ಟ್ರೋಕ್‌ನಲ್ಲಿ ದ್ವಿತೀಯ ಸ್ಥಾನ ಮತ್ತು 50 ಮೀಟರ್ ಫ್ರೀ ಸ್ಟೈಲ್ ನಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ. ಹಾಗೆಯೇ ಅದಿತಿ ತಂತ್ರಿ ಅವರು 50 ಮೀಟರ್ ಬೆಸ್ಟ್ ಸ್ಟ್ರೋಕ್‌ನಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ. ಸಾಧನೆಗೈದ ವಿದ್ಯಾರ್ಥಿನಿಯರನ್ನು ಕಾಲೇಜಿನ ಆಡಳಿತ ಮಂಡಳಿ ಹಾಗೂ ಪ್ರಾಂಶುಪಾಲರು ಅಭಿನಂದಿಸಿದ್ದಾರೆ.

Read More