ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಇಲ್ಲಿನ ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜು ವತಿಯಿಂದ ಪಂಚಮ ವರ್ಷಾಚರಣೆ ಕಾರ್ಯಕ್ರಮ ಸರಣಿ 3ರ ಅಂಗವಾಗಿ ‘ಮೌಲ್ಯ ಚಿಂತನಾ ಶಿಬಿರʼ ಕಾಲೇಜಿನ ಅಮೃತ ಮಹೋತ್ಸವದ ಕಟ್ಟಡದ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ಮಂಗಳೂರಿನ ಶ್ರೀ ರಾಮಕೃಷ್ಣ ಮಠದ ಸ್ವಾಮಿ ಶ್ರೀ ಯುಗೇಶಾನಂದಜಿ ಉದ್ಘಾಟಿಸಿದರು.ಇದೇ ಸಂದರ್ಭದಲ್ಲಿ ಸ್ವಾಮಿ ಯುಗೇಶಾನಂದಜಿ ಅವರಿಗೆ ಗೌರವಾರ್ಪಣೆ ಸಲ್ಲಿಸಲಾಯಿತು. ಅಕಾಡೆಮಿ ಆಫ್ ಜನರಲ್ ಎಜುಕೇಶನ್ ಮಣಿಪಾಲದ ಆಡಳಿತಾಧಿಕಾರಿ ಡಾ. ಕೆ. ಶ್ರೀಧರ ಆರ್. ಪೈ ಅಧ್ಯಕ್ಷತೆ ವಹಿಸಿದ್ದರು. ಎಂಜಿಎಂ ಕಾಲೇಜಿನ ಪ್ರಾಂಶುಪಾಲರಾದ ಡಾ. ಗಾಯತ್ರಿ ಜಿ. ಪೈ, ಉಪಪ್ರಾಂಶುಪಾಲರು ಹಾಗು ಬಿಸಿಎ ಸಂಯೋಜಕರಾದ ಡಾ. ಎಂ. ವಿಶ್ವನಾಥ ಪೈ, ಬಿಕಾಂ,ಬಿಬಿಎ ಸಂಯೋಜಕರಾದ ಡಾ. ಮಲ್ಲಿಕಾ ಎ. ಶೆಟ್ಟಿ, ಮಾಲತಿ ದೇವಿ ಪ್ರಾಂಶುಪಾಲರು ಎಂಜಿಎಂ ಪದವಿಪೂರ್ವ ಕಾಲೇಜು, ಟಿ ಮೋಹನದಾಸ್ ಪೈ ಕೌಶಲ್ಯ ಕೇಂದ್ರದ ನಿರ್ದೇಶಕರಾದ ಟಿ. ರಂಗ ಪೈ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು. ಮಹಾತ್ಮ ಗಾಂಧಿ ಸಂಧ್ಯಾ ಕಾಲೇಜಿನ ಪ್ರಾಂಶುಪಾಲರಾದ ಡಾ. ದೇವಿದಾಸ್…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಬೆಂಗಳೂರು ಕೇಂದ್ರ ಶೈಕ್ಷಣಿಕ ಜಿಲ್ಲೆ ಹಾಗೂ ಸಿಆರ್ಆರ್ ಪದವಿಪೂರ್ವ ಕಾಲೇಜು ದೊಡ್ಡಕನ್ನಲ್ಲಿ, ಬೆಂಗಳೂರು ಇವರ ಜಂಟಿ ಆಶ್ರಯದಲ್ಲಿ ನಡೆದ ಬಾಲಕಿಯರ ರಾಜ್ಯ ಮಟ್ಟದ ಖೋ-ಖೋ ಪಂದ್ಯಾವಳಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡವು ಚಾಂಪಿಯನ್ ಪಟ್ಟ ಅಲಂಕರಿಸಿತು. ಬಾಲಕಿಯರ ವಿಭಾಗ: ಬಾಲಕಿಯರ ವಿಭಾಗದ ಫೈನಲ್ ಪಂದ್ಯಾಟದಲ್ಲಿ ಆಳ್ವಾಸ್ ಪದವಿ ಪೂರ್ವ ಕಾಲೇಜಿನ ತಂಡವು ಮಂಡ್ಯ ಜಿಲ್ಲೆಯನ್ನು ಸೋಲಿಸಿ ಪ್ರಶಸ್ತಿಯನ್ನು ಪಡೆಯಿತು. ಬಾಲಕಿಯರ ವೈಯಕ್ತಿಕ ವಿಭಾಗದಲ್ಲಿ ಉತ್ತಮ ಹಿಡಿತಗಾರ್ತಿ ಪ್ರಶಸ್ತಿಯನ್ನು ಆಳ್ವಾಸ್ ಕಾಲೇಜಿನ ಲಾವಣ್ಯ ಹಾಗೂ ಉತ್ತಮ ಓಟಗಾರ್ತಿ ಪ್ರಶಸ್ತಿಯನ್ನು ಆಳ್ವಾಸ್ನ ವಿಜಯಲಕ್ಷ್ಮೀ ಪಡೆದರು. ವಿಜೇತ ಕ್ರೀಡಾಪಟುಗಳನ್ನು ಸಂಸ್ಥೆಯ ಅಧ್ಯಕ್ಷ ಡಾ. ಎಂ. ಮೋಹನ ಆಳ್ವರು ಅಭಿನಂದನೆ ಸಲ್ಲಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಇಲ್ಲಿನ ಸಾಲಿಗ್ರಾಮ ಶ್ರೀ ಗುರುನರಸಿಂಹ ದೇವಸ್ಥಾನಕ್ಕೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಸಾಲಿಗ್ರಾಮ ದೇಗುಲ ಸಮೀಪದ ರಾಷ್ಟ್ರೀಯ ಹೆದ್ದಾರಿ ಅಂಡರ್ ಪಾಸ್ ರಚನೆ ಕುರಿತಂತೆ ದೇಗುಲದ ಅಧ್ಯಕ್ಷ ಹಾಗೂ ಆಡಳಿತ ಮಂಡಳಿಯೊಂದಿಗೆ ಚರ್ಚಿಸಿ ಕೇಂದ್ರ ಸರಕಾರ ಹಾಗೂ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಚರ್ಚಿಸುವುದಾಗಿ ಆಡಳಿತ ಮಂಡಳಿಗೆ ತಿಳಿಸಿದರು. ಈ ಸಂದರ್ಭದಲ್ಲಿ ದೇಗುಲದ ಅಧ್ಯಕ್ಷ ಬಂಟ್ವಾಳ ನರಿಕೊಂಬು ಪ್ರಕಾಶ್ ಕಾರಂತ್ ಕಲ್ಲಡ್ಕ ಪ್ರಭಾಕರ್ ಭಟ್ ರವರಿಗೆ ಪ್ರಸಾದ ನೀಡಿ ಗೌರವಿಸಿದರು. ದೇಗುಲದಲ್ಲಿ ಅರ್ಚಕರಾದ ವೇ.ಮೂ ಜನಾರ್ದನ ಅಡಿಗ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ದೇಗುಲದ ಉಪಾಧ್ಯಕ್ಷ ಚಂದ್ರಶೇಖರ್ ಉಪಾಧ್ಯಾಯ,ಮಾಜಿ ಅಧ್ಯಕ್ಷ ಐರೋಡಿ ಜಗದೀಶ್ ಕಾರಂತ, ಉಪಾಧ್ಯಕ್ಷ ಚಂದ್ರಶೇಖರ ಉಪಾಧ್ಯಾಯ, ಕೋಶಾಧಿಕಾರಿ ಎಂ ಲಕ್ಷ್ಮೀನಾರಾಯಣ ಹೊಳ್ಳ, ಸದಸ್ಯರಾದ ಕೆ.ತಾರಾನಾಥ ಹೊಳ್ಳ, ಪ್ರಸನ್ನ ತುಂಗ, ಪೂರ್ವ ಉಪಾಧ್ಯಕ್ಷ ಬಿ. ರಘುನಾಥ ಸೋಮಯಾಜಿ, ಕೂಟಮಹಾಜಗತ್ತು ಸಾಲಿಗ್ರಾಮ ಕೇಂದ್ರ ಸಂಸ್ಥೆಯ ಅಧ್ಯಕ್ಷ ಎಚ್ ಸತೀಶ್ ಹಂದೆ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಕೋ-ಆಪರೇಟೀವ್ ಮ್ಯಾನೇಜ್ಮೆಂಟ್, ಮೂಡುಬಿದಿರೆ ಸಂಸ್ಥೆಯಲ್ಲಿ ಡಿಪ್ಲೊಮಾ ಇನ್ ಕೋ-ಆಪರೇಟಿವ್ ಆಡಿಟ್ ತರಬೇತಿಗೆ ಅರ್ಹ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪ್ರವೇಶಾತಿಗೆ ನವೆಂಬರ್ 14 ಕೊನೆಯ ದಿನ. ಖಾಸಗಿ ಅಭ್ಯರ್ಥಿಗಳಿಗೆ ಪ್ರವೇಶ ಶುಲ್ಕವಿರಲಿದ್ದು, ಬಿಪಿಎಲ್/ಪ.ಜಾತಿ/ಪ.ಪಂಗಡದ ಅಭ್ಯರ್ಥಿಗಳಿಗೆ ಸಂಪೂರ್ಣವಾಗಿ ಪ್ರವೇಶಾತಿ ಶುಲ್ಕದಿಂದ ವಿನಾಯಿತಿ ನೀಡಲಾಗುವುದು. ಈ ತರಬೇತಿಯನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ಸರ್ಕಾರದಿಂದ ಪರವಾನಗಿ ನೀಡಲಾಗುವುದು. ಪರವಾನಗಿ ಪಡೆದ ಅಭ್ಯರ್ಥಿಗಳು ಸಹಕಾರ ಸಂಸ್ಥೆಗಳಲ್ಲಿ ಲೆಕ್ಕಪರಿಶೋಧಕರಾಗಿ ಕಾರ್ಯನಿರ್ವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂ:7022429440, 8971361396 ಹಾಗೂ 7259729104 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಂಸ್ಥೆಯ ಪ್ರಾಂಶುಪಾಲರ ಕಛೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ನಕಲಿ ದಾಖಲೆಗಳನ್ನು ಸೃಷ್ಟಿಸಿ ಬ್ಯಾಂಕ್ಗೆ ಸಲ್ಲಿಸುವ ಮೂಲಕ ಟೊಯೋಟಾ ಕಾರು ಖರೀದಿ ಹಾಗೂ ಆಸ್ತಿ ಅಡಮಾನ ಸಾಲ ಪಡೆದು ಎಂ.ಸಿ.ಸಿ ಬ್ಯಾಂಕ್ ಯಡ್ತರೆ ಶಾಖೆಗೆ ಬರೋಬ್ಬರಿ 98.99 ಲಕ್ಷ ರೂ. ವಂಚಿಸಿರುವ ಆರೋಪದಡಿ ಬೈಂದೂರು ಪೊಲೀಸ್ ಠಾಣೆಯಲ್ಲಿ ಮೂರು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ಉಡುಪಿಯ MCC Bank Ltd.ನ ಮುಖ್ಯ ವ್ಯವಸ್ಥಾಪಕ ಹಾಗೂ ವಸೂಲಾತಿ ಅಧಿಕಾರಿ ಸಂದೀಪ್ ಕ್ವಾಡ್ರಸ್ ಅವರು ನೀಡಿದ ದೂರಿನ ಮೇರೆಗೆ ಈ ಪ್ರಕರಣಗಳು ದಾಖಲಾಗಿವೆ. ಬೈಂದೂರು ಯಡ್ತರೆ ಶಾಖೆಯಲ್ಲಿ ನಡೆದಿರುವ ಈ ವಂಚನೆ ಪ್ರಕರಣಗಳಲ್ಲಿ ಆರೋಪಿಗಳು ನಕಲಿ ದಾಖಲೆಗಳನ್ನು ಅಸಲಿ ಎಂದು ನಂಬಿಸಿ ಬ್ಯಾಂಕ್ನಿಂದ ಲಕ್ಷಾಂತರ ರೂಪಾಯಿ ಸಾಲ ಪಡೆದಿರುವುದು ಬೆಳಕಿಗೆ ಬಂದಿದೆ. ಪ್ರಕರಣ 1: ಶಿರೂರಿನ ಜುಹಾ ಮಂಜಿಲ್ ನಿವಾಸಿ ಸಮೀರನ್ ಶೇಖ್ ಎಂಬಾತ ತನ್ನ ಜಾಮೀನುದಾರ ಅಸ್ನಾ ಶೇಖ್ ಅವರೊಂದಿಗೆ 2026ರ ಜುಲೈ 11ರಂದು ಬ್ಯಾಂಕ್ಗೆ ಹಾಜರಾಗಿ ಹೊಸ ಟೊಯೋಟಾ ಇನೋವಾ ಕ್ರಿಸ್ಟಾ ಕಾರು ಖರೀದಿಸುವುದಾಗಿ ಸಾಲಕ್ಕೆ ಅರ್ಜಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉಪನಿರ್ದೇಶಕರ ಕಚೇರಿ, ಶಾಲಾ ಶಿಕ್ಷಣ ಇಲಾಖೆ ಮಣಿಪಾಲ ಇವರ ಆಶ್ರಯದಲ್ಲಿ ಸುಣ್ಣಾರಿಯ ವಿವೇಕೋದಯ ಶಾಲೆಯಲ್ಲಿ ಇತ್ತೀಚೆಗೆ ಜರುಗಿದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗಳಲ್ಲಿ ಸುಜ್ಞಾನ ಎಜುಕೇಶನಲ್ ಟ್ರಸ್ಟ್ನ ವಿದ್ಯಾರಣ್ಯ ಇಂಗ್ಲಿಷ್ ಮೀಡಿಯಂ ಸ್ಕೂಲ್ ಹಾಗೂ ಸುಜ್ಞಾನ ಪಿಯು ಕಾಲೇಜಿನ ವಿದ್ಯಾರ್ಥಿಗಳು ಅಭೂತಪೂರ್ವ ಸಾಧನೆ ಮಾಡಿದ್ದಾರೆ. ಪ್ರೌಢ ಹಾಗೂ ಹಿರಿಯ ಪ್ರಾಥಮಿಕ ವಿಭಾಗದ ವಿವಿಧ ಸ್ಪರ್ಧೆಗಳಲ್ಲಿ ಬರೋಬ್ಬರಿ 17 ಪ್ರಥಮ ಸ್ಥಾನಗಳನ್ನು ಗಳಿಸುವುದರ ಮೂಲಕ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಸುಜ್ಞಾನ ಪದವಿಪೂರ್ವ ಕಾಲೇಜಿನ ಪ್ರೌಢ ವಿಭಾಗದಲ್ಲಿ ವಿಜೇತರಾದ ವಿದ್ಯಾರ್ಥಿಗಳ ವಿವರ:ಪ್ರಥಮ ಸ್ಥಾನ:ಸೃಜನ್ ಶೆಟ್ಟಿ (ಮಿಮಿಕ್ರಿ), ಧನ್ವಿ (ಸಂಸ್ಕೃತ ಧಾರ್ಮಿಕ ಪಠಣ), ತುಷಾರ (ರಂಗೋಲಿ), ಫಾತಿಮಾ ನಜೀಫಾ (ಅರೇಬಿಕ್ ಧಾರ್ಮಿಕ ಪಠಣ), ಋತು & ತಂಡ (ಕವ್ವಾಲಿ), ಗರ್ವಿತಾ & ತಂಡ (ಜಾನಪದ ನೃತ್ಯ). ದ್ವಿತೀಯ ಸ್ಥಾನ:ವೃದ್ಧಿ (ಭಾವಗೀತೆ), ಸ್ಫೂರ್ತಿ (ಕನ್ನಡ ಭಾಷಣ), ಪೂರ್ವಿ (ಚಿತ್ರಕಲೆ), ಸಮೃದ್ಧಿ (ಕನ್ನಡ ಪ್ರಬಂಧ), ರಿಷಿ ಹಾಗೂ ವಿಲೋಕ್ ರಂಜನ್ (ಕ್ವಿಜ್),…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಶಾಲಾ ಶಿಕ್ಷಣ ಇಲಾಖೆ,(ಪದವಿಪೂರ್ವ) ದ.ಕ. ಹಾಗೂ ಸ್ವಸ್ತಿಶ್ರೀ ಜೈನ ವಸತಿ ಪದವಿ ಪೂರ್ವ ಕಾಲೇಜು ಮೂಡುಬಿದಿರೆ ಇದರ ಸಂಯುಕ್ತ ಆಶ್ರಯದಲ್ಲಿ ಸ್ವರಾಜ್ಯ ಮೈದಾನದಲ್ಲಿ ನಡೆದ ಪದವಿ ಪೂರ್ವ ಕಾಲೇಜುಗಳ ತಾಲೂಕು ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಆಳ್ವಾಸ್ ಪದವಿ ಪೂರ್ವ ಕಾಲೇಜು ಒಟ್ಟು 32 ಚಿನ್ನ ಮತ್ತು 30 ಬೆಳ್ಳಿ ಪದಕಗಳೊಂದಿಗೆ 62 ಪದಕಗಳನ್ನು ಪಡೆದು ಬಾಲಕರ ವಿಭಾಗದಲ್ಲಿ 122 ಅಂಕ ಮತ್ತು ಬಾಲಕಿಯರ ವಿಭಾಗದಲ್ಲಿ 116 ಅಂಕ ಒಟ್ಟು 238 ಅಂಕದೊಂದಿಗೆ ಎರಡು ವಿಭಾಗದಲ್ಲಿ ಸಮಗ್ರ ಪ್ರಶಸ್ತಿಯನ್ನು ಪಡೆಯಿತು. ವಿಜೇತ ಕ್ರೀಡಾಪಟುಗಳನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ಎಂ. ಮೋಹನ ಆಳ್ವ ಅಭಿನಂದಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕುಂದಾಪುರ ಶಿಶು ಅಭಿವೃದ್ಧಿ ವ್ಯಾಪ್ತಿಯಲ್ಲಿರುವ 8 ಅಂಗನವಾಡಿ ಕಂ ಕ್ರಷ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಲು ಬಾಕಿಯಿರುವ 4 ಅಂಗನವಾಡಿ ಕಾರ್ಯಕರ್ತೆ ಮತ್ತು 8 ಅಂಗನವಾಡಿ ಸಹಾಯಕಿಯರ ಗೌರವ ಹುದ್ದೆಗಳನ್ನು ಭರ್ತಿಮಾಡುವ ಕುರಿತು ಮರು ಅರ್ಜಿಸಲ್ಲಿಸಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ (ಅಭ್ಯರ್ಥಿಯು ಅದೇ ಗ್ರಾಮ/ವಾರ್ಡ್/ ಸ್ಥಳೀಯ ಅಂಗನವಾಡಿ ಕಂ ಕ್ರಷ್ ಕೇಂದ್ರದ ಸರ್ವೇ ವ್ಯಾಪ್ತಿಯಲ್ಲಿ ವಾಸವಿರಬೇಕು) ಆಫ್ಲೈನ್ ಮೂಲಕ ಅರ್ಜಿಗಳನ್ನು ಅಹ್ವಾನಿಸಲಾಗಿದ್ದು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿಯಲ್ಲಿ ಅರ್ಜಿಗಳನ್ನು ಪಡೆದು ಭರ್ತಿಮಾಡಿ ಕಛೇರಿಯಲ್ಲಿಟ್ಟಿರುವ ಅರ್ಜಿ ಪೆಟ್ಟಿಗೆಯಲ್ಲಿ ನವೆಂಬರ್ 19ರ ಒಳಗಾಗಿ ಹಾಕಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ ಶಾಸ್ತ್ರೀಸರ್ಕಲ್ ಕುಂದಾಪುರ ದೂರವಾಣಿ ಸಂಖ್ಯೆ:08254-230807 ಅನ್ನು ಸಂಪರ್ಕಿಸುವAತೆ ಕುಂದಾಪುರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರಾಜ್ಯದಲ್ಲಿ ನಗರ ಹಾಗೂ ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಸದಸ್ಯರು ಇಲ್ಲದೆ ಅವರ ಅಧಿಕಾರವನ್ನು ಅನುಭವಿಸುತ್ತಿರುವ ರಾಜ್ಯದ ಶಾಸಕರುಗಳು ಕೇವಲ ಅಧಿಕಾರ ವೀಕೆಂದ್ರಿಕರಣದ ಬಗ್ಗೆ ಮಾತನಾಡುತ್ತಾರೆ ಬಿಟ್ಟರೆ ಅಧಿಕಾರ ಹಂಚಿಕೆಗೆ ಯಾವೊಬ್ಬ ಶಾಸಕರು ತಯಾರು ಇಲ್ಲಾ. ಇದರ ಇನ್ನೊಂದು ಭಾಗವೆ ಬೈಂದೂರು ವಿಧಾನ ಸಭಾ ಕ್ಷೇತ್ರದ ಅಕ್ರಮ-ಸಕ್ರಮ ಹೆಚ್ಚುವರಿ ಸಮಿತಿ ವಿರುದ್ಧ ಬೈಂದೂರು ಶಾಸಕರು ನ್ಯಾಯಾಲಯದ ಮೊರೆ ಹೋದದ್ದು ಎಂದು ಕೆಪಿಸಿಸಿ ಸಂಯೋಜಕ ಕೆ. ವಿಕಾಸ್ ಹೆಗ್ಡೆ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಅಕ್ರಮ-ಸಕ್ರಮ ಯೋಜನೆ ಜಾರಿಗೆ ತಂದದ್ದು ಕಾಂಗ್ರೆಸ್ ಸರ್ಕಾರದ ಮುಖ್ಯಮಂತ್ರಿಯಾಗಿದ್ದ ಬಂಗಾರಪ್ಪನವರು. ಈ ಯೋಜನೆಯನ್ನು ಸಮರ್ಪಕವಾಗಿ ತಮ್ಮ ಕ್ಷೇತ್ರದಲ್ಲಿ ಅನುಷ್ಠಾನ ಮಾಡಿ ಸಾವಿರಾರು ರೈತರಿಗೆ ಭೂಮಿಯ ಹಕ್ಕು ನೀಡಿದವರು ಹಿಂದಿನ ಬೈಂದೂರು ಶಾಸಕರಾದ ಕೆ. ಗೋಪಾಲ ಪೂಜಾರರು. ಅದೆಷ್ಟೋ ರೈತರಿಗೆ ಭೂಮಿಯ ಹಕ್ಕು ನೀಡಿದ ಮಾಜಿ ಶಾಸಕರು ಹೆಚ್ಚುವರಿ ಅಕ್ರಮ-ಸಕ್ರಮ ಸಮಿತಿ ರಚನೆ ಮಾಡಿದ್ದನ್ನು ಹಾಲಿ ಬೈಂದೂರು ಶಾಸಕರು ವಿರೋಧಿಸಿದ್ದು ಅವರ ಅಧಿಕಾರ ವೀಕೆಂದ್ರಿಕರಣದ ವಿರೋಧಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ತೆಕ್ಕಟ್ಟೆ ವಿಶ್ವ ವಿನಾಯಕ ವಿದ್ಯಾಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಅತ್ಯಂತ ವಿಜೃಂಭಣೆಯಿಂದ ಹಾಗೂ ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮವು ದೀಪ ಬೆಳಗಿ ಕನ್ನಡಾಂಬೆಯ ಭಾವಚಿತ್ರಕ್ಕೆ ಪುಪ್ಷಾರ್ಚನೆ ಮಾಡುವ ಮೂಲಕ ಆರಂಭಗೊಂಡಿತು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳ ಸಾಂಸ್ಕ್ರತಿಕ ಕಾರ್ಯಕ್ರಮಗಳು, ಭಾಷಣಗಳು, ಕನ್ನಡದ ಕಂಪನ್ನು ಪಸರಿಸಿ ನೆರೆದವರಲ್ಲಿ ಕನ್ನಡಾಭಿಮಾನವನ್ನು ಮೂಡಿಸಿದವು. ಕಾರ್ಯಕ್ರಮವು ನಾಡು ನುಡಿ ಮತ್ತು ಸಂಸ್ಕ್ರತಿಯ ಮೇಲಿನ ಗೌರವವನ್ನು ಹೆಚ್ಚಿಸುವುದರೊಂದಿಗೆ ಅರ್ಥ ಪೂರ್ಣವಾಗಿ ಸಂಪನ್ನಗೊಂಡಿತು. ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿಯವರು, ಪ್ರಾಂಶುಪಾಲರು, ಶಿಕ್ಷಕರು, ವಿದ್ಯಾರ್ಥಿಗಳು, ಶಿಕ್ಷಕೇತರ ವರ್ಗದವರು ಉಪಸ್ಥಿತರಿದ್ದರು.
