Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ವಿದ್ಯಾರ್ಥಿಗಳ ಜೀವನದಲ್ಲಿ ತಂದೆ, ತಾಯಿ, ಗುರು ಎನ್ನುವ ಮೂರು ಮೌಲ್ಯಗಳನ್ನು ಅರ್ಥೈಸಿಕೊಂಡರೆ ಎಲ್ಲವನ್ನು ಪಡೆಯಲು ಸಾಧ್ಯ. ನಮ್ಮ ನಡುವಿನ ವ್ಯಕ್ತಿಗಳ ವ್ಯಕ್ತಿತ್ವದಿಂದ ಕಲಿಯುವಂತದ್ದು ತುಂಬಾ ಇದೆ. ವಿದ್ಯಾರ್ಥಿಗಳು ಸಮಯ ಪ್ರಜ್ಞೆ, ಮಾನವೀಯ ಗುಣಗಳನ್ನು ಬೆಳೆಸಿಕೊಳ್ಳುವುದರ ಜೊತೆಗೆ ಸಂವೇದನಾಶೀಲತೆಯನ್ನು ಬೆಳೆಸಿಕೊಂಡರೆ ಸತ್ಪ್ರಜೆಗಳಾಗಲು ಸಾಧ್ಯ ಎಂದು ಕುಂದಾಪುರದ ನ್ಯಾಯವಾದಿಗಳಾದ ಶಿರಿಯಾರ ಗೋಪಾಲಕೃಷ್ಣ ಶೆಟ್ಟಿ ಹೇಳಿದರು. ಅವರು ಇಲ್ಲಿನ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಆಯೋಜಿಸಿದ್ದ ʼಜೀವನ ಮೌಲ್ಯ’ಸರಣಿ ಉಪನ್ಯಾಸ ಮಾಲಿಕೆ-4ರ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ. ಉಮೇಶ್‌ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಪ-ಪ್ರಾಂಶುಪಾಲ ಡಾ. ಚೇತನ್ ಶೆಟ್ಟಿ ಕೋವಾಡಿ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿಗಳಾದ ಶ್ರೀ ರಕ್ಷಿತ್ ರಾವ್ ಗುಜ್ಜಾಡಿ ಮತ್ತು ರೇಷ್ಮಾ ಶೆಟ್ಟಿ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಸುಜನ್‌ ಪ್ರಾರ್ಥಿಸಿ, ರಜತ್‌ ಸ್ವಾಗತಿಸಿ, ಕೃತಿ ಕೆ. ದೇವಾಡಿಗ ಅತಿಥಿಗಳನ್ನು ಪರಿಚಯಿಸಿ, ಧನ್ಯಶ್ರೀ ವಂದಿಸಿ, ಪ್ರಥ್ವಿನಿ ಕಾರ್ಯಕ್ರಮ ನಿರೂಪಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ತಾಲೂಕಿನ ಬಹುಕಾಲದ ಬೇಡಿಕೆಯಾಗಿದ್ದ ತಾಲೂಕು ಆಸ್ಪತ್ರೆಯ ಬೇಡಿಕೆಗೆ ಸರಕಾರವು ಸ್ಪಂದಿಸಿ ಸದ್ಯ 50 ಹಾಸಿಗೆ ಸಾಮರ್ಥ್ಯದ ತಾಲೂಕು ಆಸ್ಪತ್ರೆ ಮಂಜೂರಾತಿಗೆ ಆದೇಶ ಮಾಡಿದೆ. ಪ್ರಸ್ತುತವಿರುವ ಸಮುದಾಯ ಆರೋಗ್ಯ ಕೇಂದ್ರವು ತಾಲೂಕು ಆಸ್ಪತ್ರೆಯಾಗಿ ಮೇಲ್ದರ್ಗೆಜೇರಲಿದೆ. ಇದಕ್ಕಾಗಿ ಒಟ್ಟು 25 ಕೋಟಿ ರೂ ಅನುದಾನ ಮೀಸಲಿರಿಸಿದ್ದು, ಪ್ರಸ್ತುತ ಸಾಲಿನಲ್ಲಿ 2 ಕೋಟಿ ಬಿಡುಗಡೆಯಾಗಲಿದೆ. ಬೈಂದೂರು ತಾಲೂಕಿನ ಬಡ ಜನರು ಆರೋಗ್ಯ ಸಮಸ್ಯೆಗಳಿಗಾಗಿ ಕುಂದಾಪುರ ಹಾಗೂ ಉಡುಪಿ ಭಾಗದ ಆಸ್ಪತ್ರೆಗಳಿಗೆ ಹೆಚ್ಚಿನ ಚಿಕಿತ್ಸೆಗಾಗಿ ತೆರಳಬೇಕಾದ ಅನಿವಾರ್ಯತೆ ಇತ್ತು. ಹೊಸದಾಗಿ ರಚನೆಯಾದ ತಾಲೂಕಿನಲ್ಲಿ ಸಮುದಾಯ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಿ ಕನಿಷ್ಠ 100 ಹಾಸಿಗೆಗಳ ಸಾಮರ್ಥ್ಯದ ತಾಲೂಕು ಆಸ್ಪತ್ರೆಯನ್ನಾಗಿಸಬೇಕು ಎಂದು ಬೈಂದೂರು ಶಾಸಕರು ಹಾಗೂ ಮಾಜಿ ಶಾಸಕರುಗಳು ಸೇರಿದಂತೆ ವಿವಿಧ ಸಂಘಟನೆಗಳು ಬೇಡಿಕೆ ಇಟ್ಟಿದ್ದರು. ಇದರ ಫಲವಾಗಿ ಆಸ್ಪತ್ರೆ ಹೆಚ್ಚುವರಿಗೆ ಅಗತ್ಯಕ್ಕೆ ಬೇಕಾಗಿದ್ದ 2.11 ಎಕ್ರೆ ಸರಕಾರಿ ಜಾಗವನ್ನು ಈ ಹಿಂದೆ ಇಲಾಖೆ ಹೆಸರಿಗೆ ಮಂಜೂರು ಮಾಡಿಸಿಕೊಳ್ಳಲಾಗಿತ್ತು. ಬೈಂದೂರು ತಾಲೂಕು ಕೇಂದ್ರಕ್ಕೆ 100 ಹಾಸಿಗೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ನಾಟ್ಯ ಮಯೂರಿ ನೃತ್ಯ ಟ್ರಸ್ಟ್ ರಿ., ವಿರಾಜಪೇಟೆ, ಕೊಡಗು ಜಿಲ್ಲೆ ಇವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ಸಹಯೋಗದೊಂದಿಗೆ ಸಂಗೀತ ಹಾಗೂ ಚಿತ್ರಕಲೆ ಕ್ಷೇತ್ರದಲ್ಲಿ ಸಾಧನೆ ಮಾಡಿದ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಗೀತಾ ನಾಯಕ್ ಅವರಿಗೆ ’ಸ್ವರ್ಣ ಶ್ರೀ’ ರಾಷ್ಟ್ರೀಯ ಪ್ರಶಸ್ತಿಯನ್ನು ನೀಡಿ ಗೌರವಿಸಿದ್ದಾರೆ.. ಅವರಿಗೆ, ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು  ಅಭಿನಂದನೆ ಸಲ್ಲಿಸಿರುತ್ತಾರೆ

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಇಲ್ಲಿನ ಪಡುವರಿಯ ಹೋಲಿ ಕ್ರಾಸ್ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ ಶಿರೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ 2026-27 ಕಾರ್ಯಕ್ರಮವು ಸಂಭ್ರಮದಿಂದ ಜರುಗಿತು. ವಿದ್ಯಾರ್ಥಿಗಳಲ್ಲಿ ಅಡಗಿರುವ ಸೃಜನಶೀಲತೆ, ಕಲಾತ್ಮಕ ಅಭಿರುಚಿ ಹಾಗೂ ವಿವಿಧ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸಲು ಪ್ರತಿಭಾ ಕಾರಂಜಿಯಂತಹ ಕಾರ್ಯಕ್ರಮಗಳು ಮಹತ್ವದ ವೇದಿಕೆಯಾಗಿವೆ. ವಿದ್ಯಾರ್ಥಿಗಳು ತಮ್ಮಲ್ಲಿರುವ ಪ್ರತಿಭೆಯನ್ನು ಮುಕ್ತವಾಗಿ ಅಭಿವ್ಯಕ್ತಪಡಿಸಲು ಇಂತಹ ಸ್ಪರ್ಧೆಗಳು ಅವಕಾಶ ಕಲ್ಪಿಸುತ್ತವೆ ಎಂದು ಕಾರ್ಯಕ್ರಮದಲ್ಲಿ ಅಭಿಪ್ರಾಯ ವ್ಯಕ್ತವಾಯಿತು. ಶಿರೂರು ಕ್ಲಸ್ಟರ್ ವ್ಯಾಪ್ತಿಯ ಸುಮಾರು 19 ಶಾಲೆಗಳ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು. ಕಾರ್ಯಕ್ರಮವನ್ನು ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ್ ನಾಯ್ಕ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ಗೌರವಿಸಿದರು. ಬೈಂದೂರಿನ ಹೋಲಿ ಕ್ರಾಸ್ ಶಾಲೆಯ ವ್ಯವಸ್ಥಾಪಕರಾದ ರೆವರೆಂಡ್ ಸಿಸ್ಟರ್ ಆನ್ಸಿ ಪೌಲ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಬೈಂದೂರು ಹೋಲಿ ಕ್ರಾಸ್ ಚರ್ಚ್‌ನ ರೆವರೆಂಡ್ ಫಾದರ್ ಡೆನಿಸ್ ಡಿಸೋಜಾ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಬೈಂದೂರು ಸಂಯೋಜಕರಾದ ಪ್ರದೀಪ್ ಕುಮಾರ್ ಶೆಟ್ಟಿ,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಕಾಲೇಜಿನ ಅಂಗರಚನಾಶಾಸ್ತ್ರ ವಿಭಾಗದ ವತಿಯಿಂದ ಪ್ರಥಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಗಳಿಗಾಗಿ ಶವದೇಹ ಗೌರವ ಪ್ರತಿಜ್ಞಾ ಸಮಾರಂಭವು ಗುರುವಾರ ಮಿಜಾರು ಕ್ಯಾಂಪಸ್‌ನಲ್ಲಿ ನಡೆಯಿತು. ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಮಂಗಳೂರಿನ ಯೆನೆಪೋಯ ವಿಶ್ವವಿದ್ಯಾಲಯದ ತುರ್ತು ಚಿಕಿತ್ಸಾ ವಿಭಾಗದ ಪ್ರಾಧ್ಯಾಪಕಿ ಹಾಗೂ ಸಿಮ್ಯುಲೇಶನ್ ಪ್ರಯೋಗಾಲಯದ ಸಂಯೋಜಕಿ ಡಾ. ಮೇಘನಾ ಮುಕುಂದ್, “ವೈದ್ಯಕೀಯ ವಿದ್ಯಾರ್ಥಿಗಳಿಗೆ ಶವದೇಹವೇ ಮೊದಲ ಗುರು. ಅದನ್ನು ಅತ್ಯಂತ ಗೌರವ ಮತ್ತು ಕೃತಜ್ಞತೆಯಿಂದ ಕಾಣುವುದು ಪ್ರತಿಯೊಬ್ಬ ವಿದ್ಯಾರ್ಥಿಯ ಕರ್ತವ್ಯ. ಮಾನವ ದೇಹದ ಅಂಗರಚನೆಯನ್ನು ಅರಿತುಕೊಳ್ಳಲು ಹಾಗೂ ವೈದ್ಯಕೀಯ ಜ್ಞಾನದ ಮೂಲಭೂತ ಅಂಶಗಳನ್ನು ಕಲಿಯಲು ಶವದೇಹಗಳ ಕೊಡುಗೆ ಅಪಾರ. ಈ ಅಪರೂಪದ ಕಲಿಕಾ ಅವಕಾಶವನ್ನು ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳಬೇಕು ಎಂದರು. ಆಳ್ವಾಸ್ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಡೀನ್ ಡಾ. ಮಹಾಬಲ ಶೆಟ್ಟಿ ಮಾತನಾಡಿ, “ತಮ್ಮ ದೇಹವನ್ನು ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನೆಗಾಗಿ ದಾನ ಮಾಡುವುದು ಸಾಮಾನ್ಯ ನಿರ್ಧಾರವಲ್ಲ. ಅದಕ್ಕೆ…

Read More

ಕುಂದಾಪ್ರ ಡಟ್‌ ಕಾಂ ಸುದ್ದಿ.ಉಡುಪಿ: ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಜಿಲ್ಲಾ ಘಟಕದ ಅನುಷ್ಠಾನದಲ್ಲಿರುವ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯ ಯೋಜನೆಯಡಿಯಲ್ಲಿ ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದಲ್ಲಿ ಖಾಲಿ ಇರುವ ಪಿ & ಒ ಇಂಜಿನಿಯರ್ ಮತ್ತು ಲೆದರ್ ವರ್ಕರ್ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪಿ & ಒ ಹುದ್ದೆಗೆ ಬ್ಯಾಚುಲರ್ ಆಫ್ ಪ್ರೋಸ್ಥೆಟಿಕ್ ಅಂಡ್ ಆರ್ಥೆಟಿಕ್ಸ್ ಬಿಪಿಒ ಅಥವಾ ಡಿಪ್ಲೋಮಾ ಇನ್ ಪ್ರೋಸ್ಥೆಟಿಕ್ ಅಂಡ್ ಆರ್ಥೆಟಿಕ್ಸ್ ಡಿಪಿಒ ವಿದ್ಯಾರ್ಹತೆ ಮತ್ತು ಸದ್ರಿ ಕ್ಷೇತ್ರದಲ್ಲಿ 2 ರಿಂದ 5 ವರ್ಷ ಅನುಭವ ಹೊಂದಿರುವ ಹಾಗೂ ಲೆದರ್‌ವರ್ಕರ್ ಹುದ್ದೆಗೆ ಲೆದರ್‌ವರ್ಕ್ ಬಗ್ಗೆ ಪ್ರಮಾಣಪತ್ರವನ್ನು ಹೊಂದಿರುವ ಅರ್ಹ ಅಭ್ಯರ್ಥಿಗಳು ನವೆಂಬರ್ 20ರ ಒಳಗಾಗಿ ಸದಸ್ಯ ಕಾರ್ಯದರ್ಶಿಯವರು, ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ, ರೆಡ್‌ಕ್ರಾಸ್ ಭವನ, ಅಜ್ಜರಕಾಡು, ಉಡುಪಿ-576101 ಇವರಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂಖ್ಯೆ: 0820-2533372, 9964583433 ಸಂಪರ್ಕಿಸಬಹುದಾಗಿದ್ದು, ಕೊನೆಯ ದಿನಾಂಕದ ನಂತರ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೊಲ್ಲೂರು: ಇಲ್ಲಿನ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಶಂಕರನಾರಾಯಣ ಇದರ ಕಲಾ ವಿಭಾಗ ಸಾದರ ಪಡಿಸುವ ಆಹ್ವಾನಿತ ಪದವಿ ಪೂರ್ವ ಕಾಲೇಜುಗಳ ಸಾಂಸ್ಕೃತಿಕ ಸ್ಪರ್ಧೆ ಉನ್ಮೇಷ 2k26ರಲ್ಲಿ ಶ್ರೀ ಮೂಕಾಂಬಿಕಾ ದೇವಳದ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಯಲ್ಲಿ ಭಾಗವಹಿಸಿ ದ್ವಿತೀಯ ಸಮಗ್ರ ಪ್ರಶಸ್ತಿಯನ್ನು ಪಡೆದಿರುತ್ತಾರೆ . ಇವರೆಲ್ಲರಿಗೂ ಕಾಲೇಜು ಆಡಳಿತ ಮಂಡಳಿ, ಶ್ರೀ ದೇವಳದ ಕಾರ್ಯನಿರ್ವಹಣಾಧಿಕಾರಿ, ಪ್ರಾಂಶುಪಾಲರು ಮತ್ತು ಉಪನ್ಯಾಸಕ ವರ್ಗದವರು ಅಭಿನಂದನೆಯನ್ನು ಸಲ್ಲಿಸಿರುತ್ತಾರೆ.ಪ್ರಶಸ್ತಿ ಗಳಿಸಿದ ವಿದ್ಯಾರ್ಥಿಗಳೊಂದಿಗೆ ಕಾಲೇಜಿನ ಸಾಂಸ್ಕೃತಿಕ ವಿಭಾಗದ ಮುಖ್ಯಸ್ಥ ವಾಸುದೇವ ಉಡುಪ ಉಪಸ್ಥಿತರಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಪ್ರತಿಭಾ ಕಾರಂಜಿ ಎಂಬುದು ಕೇವಲ ಸ್ಪರ್ಧೆಯಲ್ಲ; ಮಕ್ಕಳಲ್ಲಿರುವ ಕಲಾ ಪ್ರತಿಭೆಗಳಿಗೆ ಜೀವ ತುಂಬಿ, ಅವರ ಭವಿಷ್ಯದ ಸಾಧನೆಗೆ ಭದ್ರ ಬುನಾದಿ ಹಾಕುವ ಸಾಂಸ್ಕೃತಿಕ ಸಂಭ್ರಮವಾಗಿದೆ. ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಪ್ರದರ್ಶಿಸುವುದರ ಜೊತೆಗೆ ಸ್ಪರ್ಧಾ ಮನೋಭಾವ, ಆತ್ಮವಿಶ್ವಾಸ, ಸಮಯಪ್ರಜ್ಞೆ, ನಾಯಕತ್ವ ಗುಣ ಹಾಗೂ ಪರಸ್ಪರ ಸಹಕಾರದ ಮನೋಭಾವವನ್ನು ಬೆಳೆಸಿಕೊಳ್ಳಲು ಈ ಕಾರ್ಯಕ್ರಮ ಸಹಕಾರಿಯಾಗಿದೆ ಎಂದು ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಜಯಂತಿ ಖಾರ್ವಿ ಹೇಳಿದರು. ಅವರು ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಕುಂದಾಪುರ ವಲಯ ಹಾಗೂ ಎಸ್. ವಿ. ಆಂಗ್ಲ ಮಾಧ್ಯಮ ಶಾಲೆ ಗಂಗೊಳ್ಳಿ ಇವರ ಸಹಯೋಗದೊಂದಿಗೆ ಗಂಗೊಳ್ಳಿಯ ಎಸ್. ವಿ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗುರುವಾರ ಆಯೋಜಿಸಲಾಗಿದ್ದ ಗಂಗೊಳ್ಳಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ 2026-27 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಗಂಗೊಳ್ಳಿ ಜಿ.ಎಸ್.ವಿ.ಎಸ್.ಅಸೋಸಿಯೇಶನ್ ಅಧ್ಯಕ್ಷ ಡಾ.ಕಾಶೀನಾಥ ಪೈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶಾಲೆಯ ಸಂಚಾಲಕ ಎನ್.ಸದಾಶಿವ ನಾಯಕ್,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಉಪನಿರ್ದೇಶಕರ ಕಛೇರಿ ಶಾಲಾ ಶಿಕ್ಷಣ ಇಲಾಖೆ ಬೆಂಗಳೂರು ಉತ್ತರ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಹಾಗೂ ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ಇವರ ಸಂಯುಕ್ತ ಆಶ್ರಯದಲ್ಲಿ ನವಂಬರ್ 01 ರಿಂದ 03ರ ವರೆಗೆ ಶ್ರೀ ಕಂಠೀರವ ಸ್ಟೇಡಿಯಂನಲ್ಲಿ ನಡೆದ ರಾಜ್ಯ ಮಟ್ಟದ 17 ವರ್ಷ ವಯೋಮಿತಿಯ ಬಾಲಕ ಮತ್ತು ಬಾಲಕಿಯರ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಸಮಗ್ರ ಚಾಂಪಿಯನ್ಸ್ ಪಟ್ಟವನ್ನು ಪಡೆದುಕೊಂಡಿತು. ಆಳ್ವಾಸ್ ಶಾಲೆಯ ಕ್ರೀಡಾಪಟುಗಳು ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿ 11 ಚಿನ್ನ, 08 ಬೆಳ್ಳಿ ಮತ್ತು 07 ಕಂಚಿನ ಪದಕಗಳೊಂದಿಗೆ ಒಟ್ಟು 26 ಪದಕಗಳನ್ನು ಪಡೆದುಕೊಂಡು ಬಾಲಕ ಬಾಲಕಿಯರ ಎರಡು ವಿಭಾಗದ ತಂಡ ಪ್ರಶಸ್ತಿ ಹಾಗೂ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡರು. ಮಧ್ಯಪ್ರದೇಶದಲ್ಲಿ ನಡೆಯುವ ರಾಷ್ಟ್ರೀಯ ಶಾಲಾ ಅಥ್ಲೆಟಿಕ್ಸ್ ಕ್ರೀಡಾಕೂಟಕ್ಕೆ 12 ಕ್ರೀಡಾಪಟುಗಳು ಆಯ್ಕೆಯಾಗಿರುತ್ತಾರೆ. ಫಲಿತಾಂಶ:ಬಾಲಕಿಯರ ವಿಭಾಗದಲ್ಲಿ:ಮೇಘಾ – 400ಮೀ (ಪ್ರಥಮ), 800ಮೀ (ದ್ವಿತೀಯ), 4*400ಮೀ ರಿಲೇ (ಪ್ರಥಮ), ಸುಜಾತ – 4*400ಮೀ ರಿಲೇ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಕ್ಷೇತ್ರ ಸಂಪನ್ಮೂಲ ಕೇಂದ್ರ ಕುಂದಾಪುರ ಮತ್ತು ಪಿಎಂಶ್ರೀ ಕರ್ನಾಟಕ ಪಬ್ಲಿಕ್ ಸ್ಕೂಲ್ (ಪ್ರೌಢಶಾಲಾ ವಿಭಾಗ) ತೆಕ್ಕಟ್ಟೆ ಇದರ ಸಹಯೋಗದೊಂದಿಗೆ ತೆಕ್ಕಟ್ಟೆಯ ಪಿಎಂಶ್ರೀ ಕರ್ನಾಟಕ ಪಬ್ಲಿಕ್ ಸ್ಕೂಲ್ ವಠಾರದಲ್ಲಿ ನಡೆದ 2026-27ನೇ ಸಾಲಿನ ಕುಂದಾಪುರ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ 17 ವರ್ಷದೊಳಗಿನ ಬಾಲಕರ ವಿಭಾಗದಲ್ಲಿ ಗಂಗೊಳ್ಳಿಯ ಎಸ್.ವಿ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು, ಜಿಲ್ಲಾ ಮಟ್ಟದ ಪಂದ್ಯಾವಳಿಗೆ ಆಯ್ಕೆಯಾಗಿದ್ದಾರೆ.

Read More