ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಬಿ.ಎಸ್.ಸಿ ನರ್ಸಿಂಗ್ ಮತ್ತು ಜಿ.ಎನ್.ಎಮ್ ನರ್ಸಿಂಗ್ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಂದ ಪ್ರೋತ್ಸಾಹಧನ ಸೌಲಭ್ಯ ಪಡೆಯಲು ವೆಬ್‌ಸೈಟ್ https://sevaone.karnataka.gov.in/service ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಡಿಸೆಂಬರ್ 31 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಹಾಯವಾಣಿ: 8277799990, ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಜಾದ್ ಭವನ, ಅಲೆವೂರು ರಸ್ತೆ, ಮಣಿಪಾಲ ದೂ.ಸಂ: 0820-2574596 ಅಥವಾ ಜಿಲ್ಲಾ / ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೆಂಗಳೂರು: ಸ್ಪರ್ಧೆಗಳ ಜೊತೆ ಅಸೂಯೆ ಜೊತೆಯಾಗಬಾರದು. ಸ್ಪರ್ಧೆಯು ಕ್ರೀಡಾ ಮನೋಭಾವ ಹಾಗೂ ಸಂಭ್ರಮಿಸುವ ಮನಸ್ಥಿತಿಯನ್ನು ಕಲಿಸಿಕೊಡಬೇಕು. ನಮ್ಮ ಪ್ರತಿಬಿಂಬ ಕಾರ್ಯಕ್ರಮದಲ್ಲಿ ಅಸೂಯೆ ಇಲ್ಲದ ಸ್ಪರ್ಧಾ ಮನೋಭಾವ ಹಾಗೂ ಪ್ರತಿಭೆಗಳನ್ನು ಸಂಭ್ರಮಿಸುವ ಸಹಜತೆ ಇದೆ ಎಂಬುದು ನಮ್ಮ ಸಮಾಜದ ಹೆಮ್ಮೆ ಎಂದು ಡಾ. ಗಿರಿಧರ ಕಜೆ ಹೇಳಿದರು. ಅವರು ಬೆಂಗಳೂರಿನ ಮಲ್ಲೇಶ್ವರದ ಹವ್ಯಕ ಭವನದಲ್ಲಿ ನಡೆದ ‘ಪ್ರತಿಬಿಂಬ ಗ್ರ್ಯಾಂಡ್ ಫಿನಾಲೆ’ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು. ಹವ್ಯಕ ಮಹಾಸಭೆಯ ಅಧ್ಯಕ್ಷ ಡಾ. ಗಿರಿಧರ ಕಜೆ, ಪ್ರತಿಬಿಂಬ ಸ್ಪರ್ಧಾ ಸೌರಭವನ್ನು 31 ವರ್ಷಗಳ ಹಿಂದೆ ಆರಂಭಿಸಲಾಯಿತು. ಇದು ಅಂದಿನಿಂದ ಇಂದಿನವರೆಗೂ ಸಮಾಜದ ಪ್ರತಿಭೆಗಳಿಗೆ ವೇದಿಕೆಯನ್ನು ಕಲ್ಪಿಸಿಕೊಂಡು ಬಂದಿದೆ. ಈ ವರ್ಷ ವಿಶೇಷವಾಗಿ ರಾಜ್ಯ ಹೊರ ರಾಜ್ಯಗಳ 13 ಪ್ರಾಂತ್ಯಗಳಲ್ಲಿ ಪ್ರತಿಬಿಂಬವನ್ನು ನಡೆಸಲಾಗಿದ್ದು, ಸಮಾಜದಿಂದ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದರು. ಡಿಸೆಂಬರ್ 20ಕ್ಕೆ ಬೃಹತ್ ಮಾತೃಸಂಗಮ:ಮಹಿಳೆಯರಿಗೆ ಗೌರವ ಸಲ್ಲಿಸಿ ಸಂಭ್ರಮಿಸುವ ಕಾರ್ಯಕ್ರಮ ಮಾತೃಸಂಗಮವಾಗಿದ್ದು, ಬೆಂಗಳೂರಿನ ಅರಮನೆ ಮೈದಾನದಲ್ಲಿ ಈ ಬೃಹತ್ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. …
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಮಕ್ಕಳ ರಕ್ಷಣೆ ನಮ್ಮೆಲ್ಲರ ಹೊಣೆ. ಮಕ್ಕಳ ಮೇಲಾಗುವ ಶೋಷಣೆ ಹಾಗೂ ದೌರ್ಜನ್ಯಗಳನ್ನು ತಡೆಯಲು ಜಾರಿಗೊಳಿಸಲಾದ ಮಕ್ಕಳ ರಕ್ಷಣಾ ನೀತಿ-ನಿಯಮಗಳನ್ನು ಅನುಷ್ಠಾನಗೊಳಿಸಲು ಪ್ರತಿಯೊಬ್ಬ ನಾಗರಿಕರು ಕೈಜೋಡಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್ ಕರೆ ನೀಡಿದರು. ಅವರು ಬುಧವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಉಡುಪಿ ಜಿಲ್ಲೆ ಇವರುಗಳ ಸಹಯೋಗದಲ್ಲಿ, ಮಕ್ಕಳ ರಕ್ಷಣೆಯ ಕುರಿತು ಹಾಗೂ ಮಕ್ಕಳ ರಕ್ಷಣಾ ನೀತಿ -2016 ರ ಕುರಿತು ಜಿಲ್ಲೆಯ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಿಗೆ ಆಯೋಜಿಸಲಾದ ಒಂದು ದಿನದ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು. ಇಂದಿನ ಮಕ್ಕಳೇ ನಾಳಿನ ಪ್ರಜೆಗಳು ಎನ್ನುತ್ತಿದ್ದ ನಾವುಗಳು ಪ್ರಸ್ತುತ ಇಂದಿನ ಮಕ್ಕಳೇ ಇಂದಿನ ಪ್ರಜೆಗಳು ಎಂಬುದನ್ನು ಅರಿತುಕೊಳ್ಳಬೇಕು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಪಶ್ಚಿಮ ಘಟ್ಟಗಳು ಜಾಗತಿಕ ಮಟ್ಟದಲ್ಲಿ ಅತ್ಯಂತ ಸೂಕ್ಷ್ಮ ಪರಿಸರ ವ್ಯವಸ್ಥೆ ಹೊಂದಿರುವ ಪ್ರದೇಶವಾಗಿದ್ದು, ಅಭಿವೃದ್ಧಿಯ ಹೆಸರಿನಲ್ಲಿ ಅಲ್ಲಿನ ನೈಸರ್ಗಿಕ ಸಂಪನ್ಮೂಲಗಳಿಗೆ ಹಾನಿಯಾಗದಂತೆ ಎಚ್ಚರಿಕೆ ವಹಿಸಬೇಕು. ಪರಿಸರ ಸಂರಕ್ಷಣೆ, ಜನರ ಜೀವನೋಪಾಯ ಹಾಗೂ ಅಭಿವೃದ್ಧಿಯ ನಡುವೆ ಸಮತೋಲನ ಸಾಧಿಸುವುದು ಇಂದಿನ ಅಗತ್ಯವಾಗಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ್ ಆಳ್ವ ಹೇಳಿದರು. ಅವರು ಬೆಂಗಳೂರು ಚಾಣಕ್ಯ ವಿಶ್ವವಿದ್ಯಾಲಯದ ಸ್ಕೂಲ್ ಆಫ್ ಎಂಜಿನಿಯರಿಂಗ್ ಆಯೋಜಿಸಿದ್ದ ‘ಲೇಕ್ ಕಾನ್ಫರೆನ್ಸ್–2026’ರಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು, ಪಶ್ಚಿಮ ಘಟ್ಟಗಳ ಜೀವವೈವಿಧ್ಯ, ಜಲಮೂಲಗಳ ಸಂರಕ್ಷಣೆ ಮತ್ತು ಪರಿಸರ ಸ್ನೇಹಿ ಅಭಿವೃದ್ಧಿಯ ಅಗತ್ಯವನ್ನು ವಿವರಿಸಿದರು. ಬಹುತೇಕ ದೇಶಗಳಲ್ಲಿ ಕೇವಲ 30ರಿಂದ 40 ಸಸ್ಯ ಮತ್ತು ಪ್ರಾಣಿ ಪ್ರಭೇದಗಳು ಕಂಡುಬರುವ ಪ್ರದೇಶಗಳಿದ್ದರೆ, ಪಶ್ಚಿಮ ಘಟ್ಟಗಳಲ್ಲಿ ಸುಮಾರು 6,800 ಪ್ರಭೇದಗಳ ಜೀವವೈವಿಧ್ಯವಿದೆ. ಇದರಲ್ಲಿ ನಮ್ಮ ಭಾಗದ ಪಶ್ಚಿಮ ಘಟ್ಟಗಳಲ್ಲಿಯೇ ಸುಮಾರು 3,500 ಪ್ರಭೇದಗಳಿವೆ. ಒಂದು ಬದಿಯಲ್ಲಿ ಪಶ್ಚಿಮ ಘಟ್ಟಗಳು, ಮತ್ತೊಂದು ಬದಿಯಲ್ಲಿ ಅರಬ್ಬಿ ಸಮುದ್ರ ಹೊಂದಿರುವ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಕನ್ನಡ ಭಾಷೆಯ ಉಳಿವಿನ ಬಗ್ಗೆ ಮಾತನಾಡುವುದರ ಜೊತೆಗೆ ಕನ್ನಡ ಮಾಧ್ಯಮ ಶಾಲೆಗಳ ಉಳಿವಿಗೂ ಸಮಾಜ ಕಾಳಜಿ ವಹಿಸಬೇಕು. ಆಂಗ್ಲ ಮಾಧ್ಯಮದ ಮೇಲಿನ ಹೆಚ್ಚುತ್ತಿರುವ ಒಲವಿನಿಂದ ಕನ್ನಡ ಮಾಧ್ಯಮ ಶಾಲೆಗಳು ವಿದ್ಯಾರ್ಥಿಗಳ ಕೊರತೆ ಎದುರಿಸುತ್ತಿದ್ದು, ಅವುಗಳ ಉಳಿವಿಗೆ ಪೋಷಕರು, ಸರ್ಕಾರ ಹಾಗೂ ಶಿಕ್ಷಣ ಸಂಸ್ಥೆಗಳ ಸಹಭಾಗಿತ್ವ ಅಗತ್ಯ ಎಂದು ಆಳ್ವಾಸ್ ಪದವಿಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕಿ ಡಾ. ಸುಧಾರಾಣಿ ಹೇಳಿದರು. ಅವರು ಆಳ್ವಾಸ್ ಕನ್ನಡ ಮಾಧ್ಯಮ ಶಾಲೆಯಲ್ಲಿ ಮಂಗಳವಾರ ನಡೆದ ‘ಕನ್ನಡ ನುಡಿ ಹಬ್ಬ ಸಂಭ್ರಮ–2026’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಕನ್ನಡ ಭಾಷೆ ಕೇವಲ ಸಂವಹನದ ಸಾಧನವಲ್ಲ. ಅದು ನಾಡಿನ ಇತಿಹಾಸ, ಸಂಸ್ಕೃತಿ ಮತ್ತು ಪರಂಪರೆಯ ಪ್ರತಿಬಿಂಬ. ಆಧುನಿಕ ಜಗತ್ತಿನಲ್ಲಿ ಇತರ ಭಾಷೆಗಳನ್ನು ಕಲಿಯುವುದು ಅಗತ್ಯವಾದರೂ ಮಾತೃಭಾಷೆಯನ್ನು ಮರೆಯಬಾರದು. ವಿದ್ಯಾರ್ಥಿಗಳು ಕನ್ನಡ ಸಾಹಿತ್ಯ ಓದುವ, ಕನ್ನಡದಲ್ಲಿ ಮಾತನಾಡುವ ಹಾಗೂ ಬರೆಯುವ ಅಭ್ಯಾಸ ಬೆಳೆಸಿಕೊಳ್ಳಬೇಕು. ಕನ್ನಡದ ಮೇಲಿನ ಅಭಿಮಾನ ಘೋಷಣೆಗಳಿಗೆ ಸೀಮಿತವಾಗದೆ ದೈನಂದಿನ ಬದುಕಿನಲ್ಲೂ ವ್ಯಕ್ತವಾಗಬೇಕು ಎಂದರು. ಆಳ್ವಾಸ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ ಕೋಟ, ಕೋಟತಟ್ಟು ಗ್ರಾಮ ಪಂಚಾಯತ್ ಶ್ರೀ ವೇಣುಗೋಪಾಲ ಕೃಷ್ಣ ಎಜುಕೇಶನಲ್ ಸೊಸೈಟಿ ಮೂಡುಕೇರಿ ಬಾರ್ಕೂರು, ಗೀತಾನಂದ ಫೌಂಢೇಶನ್ ಮಣೂರು ಪಡುಕರೆ, ಉಸಿರು ಕೋಟ, ಶ್ರೀ ಚಂದು ಪೂಜಾರಿ ದತ್ತಿನಿಧಿ ಸಾಸ್ತಾನ, ಅರಿವು ಕೇಂದ್ರ ಡಿಜಿಟಲ್ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರ ಕೋಟತಟ್ಟು ಇವರ ಆಸರೆಯಲ್ಲಿ ನಡೆಯುವ 6ನೇ ವರ್ಷದ ಮಕ್ಕಳ ಸಾಹಿತ್ಯ ಸಮ್ಮೇಳನದ ಅಧ್ಯಕ್ಷೆಯಾಗಿ ವಿವೇಕ ಬಾಲಕಿಯರ ಫ್ರೌಢಶಾಲೆ ಕೋಟದ ಐಶ್ವರ್ಯ ಜೆ ನಾರಿ ಆಯ್ಕೆಯಾಗಿದ್ದಾರೆ. ಬರಹಗಾರ್ತಿಯಾಗಿ ಗುರುತಿಸಿಕೊಂಡು ರಾಜ್ಯಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಿ ಮತ್ತು ಹಲವಾರು ಪ್ರಬಂಧ ಸ್ಪರ್ದೆಯಲ್ಲಿ ಭಾಗವಹಿಸಿ ಬಹುಮಾನ ಪಡೆದಿರುವ ಅವರು ಜನಾರ್ಧನ ಹಾಗೂ ಸುಜಾತ ಅವರ ಪುತ್ರಿಯಾಗಿರುತ್ತಾರೆ. ಬಹುಮುಖ ಪ್ರತಿಭೆಯಾಗಿರುವ ಇವರು ಮಕ್ಕಳ ಸಾಹಿತ್ಯ ಸಮ್ಮೇಳನದ ಅಧ್ಯೆಕ್ಷೆಯಾಗಿ ಆಯ್ಕೆಯಾಗಿರುತ್ತಾರೆ ಎಂದು ಪ್ರತಿಷ್ಠಾನದ ಗೌರವ ಅಧ್ಯಕ್ಷರಾದ ಆನಂದ ಸಿ ಕುಂದರ್, ಕಾರ್ಯದರ್ಶಿ ನರೇಂದ್ರಕುಮಾರ್ ಕೋಟ, ಪಿಡಿಓ ರವೀಂದ್ರ ರಾವ್ ಪ್ರಕಟಣೆಯಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಇಲ್ಲಿನ ಗುಜ್ಜಾಡಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಡಿ.09 ರಂದು ಆಯೋಜಿಸಲಾಗಿರುವ ಬೈಂದೂರು ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮದ ಪೂರ್ವಭಾವಿ ಸಭೆ ಶಾಲೆಯ ವಠಾರದಲ್ಲಿ ಸೋಮವಾರ ನಡೆಯಿತು. ಬೈಂದೂರು ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ ನಾಯ್ಕ್ ಅವರು ಮಾತನಾಡಿ, ಇಲಾಖೆಯಿಂದ ಸಾಧ್ಯವಿರುವ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು ಹಾಗೂ ಬೇಕಾಗುವ ಅಧಿಕಾರಿ, ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ ಎಂದರು. ಕ್ಷೇತ್ರ ಸಮನ್ವಯಾಧಿಕಾರಿ ಪ್ರದೀಪ ಕುಮಾರ ಶೆಟ್ಟಿ ಅವರು ಪ್ರತಿಭಾ ಕಾರಂಜಿ ಉದ್ದೇಶ ಮತ್ತು ಅದರ ನಿರ್ವಹಣೆಯ ಕುರಿತಾಗಿ ಮಾಹಿತಿ ನೀಡಿದರು. ಪ್ರತಿಭಾ ಕಾರಂಜಿಯ ತಾಲೂಕು ನೋಡಲ್ ಅಧಿಕಾರಿ ಸತ್ಯನಾ ಕೋಡೇರಿ ಅವರು ಕಾರ್ಯಕ್ರಮದ ಸಮಿತಿಗಳನ್ನು ರಚಿಸಿ ಅದರ ಕಾರ್ಯ ಚಟುವಟಿಕೆಯ ಬಗ್ಗೆ ವಿವರವಾದ ಮಾಹಿತಿ ನೀಡಿದರು. ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷ ನಾರಾಯಣ ಆಚಾರ ಅವರು ಕಾರ್ಯಕ್ರಮಕ್ಕೆ ಬೇಕಾಗುವ ಹೆಚ್ಚಿನ ಸಂಪನ್ಮೂಲ ಸಂಗ್ರಹಿಸುವ ಮೂಲಕ ಉತ್ತಮ ರೀತಿಯಲ್ಲಿ ಆಯೋಜಿಸಲು ಎಲ್ಲರೂ ಸಹಕರಿಸಬೇಕು ಎಂದರು. ಸಭೆಯಲ್ಲಿ ಶಿಕ್ಷಣ ಸಂಯೋಜಕ ವೆಂಕಪ್ಪ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗದಲ್ಲಿ ಪ್ರಸಕ್ತ ಶೈಕ್ಷಣಿಕ ಸಾಲಿನ ಯುಜಿ ಲ್ಯಾಟರಲ್ ಎಂಟ್ರಿ ಕೋಟಾದಡಿ ಅಂತಿಮ ಸುತ್ತಿನ ಪ್ರವೇಶಾತಿ ಪ್ರಕ್ರಿಯೆಯ ನಂತರವೂ ಭರ್ತಿಯಾಗದೇ ಉಳಿದಿರುವ ವಿವಿಧ ಸ್ನಾತಕ ಪದವಿ ಕಾರ್ಯಕ್ರಮಗಳ ಪ್ರವರ್ಗವಾರು ಸೀಟುಗಳನ್ನು ನವೆಂಬರ್ 24ರಂದು ಮುಕ್ತ ಕೌನ್ಸೆಲಿಂಗ್ ಆಯ್ಕೆ ಪ್ರಕ್ರಿಯೆ ಮೂಲಕ ಭರ್ತಿ ಮಾಡಲಾಗುತ್ತದೆ. ಈ ಮುಕ್ತ ಕೌನ್ಸೆಲಿಂಗ್ ಪ್ರಕ್ರಿಯೆಯಲ್ಲಿ ಪ್ರವೇಶಾತಿ ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ವಿಶ್ವವಿದ್ಯಾಲಯದ ಜಾಲತಾಣ www.uahs.edu.in ನಲ್ಲಿ ಡೌನ್‌ಲೋಡ್ ಮಾಡಿಕೊಂಡು, ಭರ್ತಿ ಮಾಡಿ ಸೂಕ್ತ ದಾಖಲೆಗಳ ಜೆರಾಕ್ಸ್ ಪ್ರತಿಗಳನ್ನು ಲಗತ್ತಿಸಿ, ಖುದ್ದಾಗಿ ಕುಲಸಚಿವರ ಕಾರ್ಯಾಲಯ, ಶರಾವತಿ ಆಡಳಿತ ಭವನ, 2ನೇ ಮಹಡಿ, ಇರುವಕ್ಕಿ-577412 ಶಿವಮೊಗ್ಗ ಜಿಲ್ಲೆ ಇಲ್ಲಿಗೆ ನವೆಂಬರ್ 24 ರ ಬೆಳಗ್ಗೆ 11 ಗಂಟೆಯೊಳಗಾಗಿ ಸಲ್ಲಿಸಬಹುದಾಗಿದೆ. ನಿಗದಿತ ಸಮಯ ಮೀರಿದ ಅಭ್ಯರ್ಥಿಯ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ. ಲಭ್ಯವಿರುವ ಸೀಟುಗಳಿಗೆ ಮುಕ್ತ ಕೌನ್ಸೆಲಿಂಗ್ ಆಯ್ಕೆ ಪ್ರಕ್ರಿಯೆಗಳನ್ನು ಕೆಳದಿ ಶಿವಪ್ಪ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ರೋಟರಿ ಕ್ಲಬ್ ತೀರ್ಥಹಳ್ಳಿ ಆತಿಥ್ಯದಲ್ಲಿ ನಡೆದ ರೋಟರಿ ಜಿಲ್ಲಾ ಮಟ್ಟದ ಸಾಂಸ್ಕ್ರತಿಕ ಸ್ಪರ್ಧೆಯಲ್ಲಿ ಅರುಣ್ ಕುಮಾರ್ ಶಿರೂರು ನೇತ್ರತ್ವದ ಬೈಂದೂರು ರೋಟರಿ ತಂಡ ಭಾಗವಹಿಸಿದ ಎಲ್ಲಾ ಸ್ಪರ್ಧೆಗಳಲ್ಲಿ ಗೆಲುವು ಸಾಧಿಸುವ ಮೂಲಕ ವಲಯ 1ರ ಸತತ ನಾಲ್ಕನೇ ಬಾರಿ ಚಾಂಪಿಯನ್ ಪಟ್ಟಗಳಿಸುವ ಮೂಲಕ ದಾಖಲೆ ನಿರ್ಮಾಣವಾಗಿದೆ. ರೋಟರಿ ಜಿಲ್ಲಾ ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ಹಾಸನ ಕಂದಾಯ ಜಿಲ್ಲೆಗಳ 11 ವಲಯದ ಒಟ್ಟು 87 ರೋಟರಿ ಕ್ಲಬ್‌ಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಬೈಂದೂರು ರೋಟರಿ ಕುಂದಾಪುರದಲ್ಲಿ ನಡೆದ ವಲಯ ಸಾಂಸ್ಕ್ರತಿಕ ಸ್ಪರ್ಧೆಯಲ್ಲಿ ಗೆಲುವು ಸಾಧಿಸಿ ಜಿಲ್ಲಾ ಮಟ್ಟದ ಅರ್ಹತೆ ಪಡೆದಿತ್ತು. ಮಹಿಳೆಯರ ಸಿನಿಮಾ ಹಾಡು ಸ್ಪರ್ಧೆಯಲ್ಲಿ ಪೂರ್ಣಿಮಾ ಪ್ರಥಮ, ಡ್ಯುಯೆಟ್ ಹಾಡು ಸ್ಪರ್ಧೆಯಲ್ಲಿ ಉದಯ ಆಚಾರ್, ಪೂರ್ಣಿಮಾ ಪ್ರಥಮ, ಏಕಾಭಿನಯ ಸ್ಪರ್ಧೆಯಲ್ಲಿ ಸುಬ್ರಹ್ಮಣ್ಯ ಜಿ. ಉಪ್ಪುಂದ ಪ್ರಥಮ ಸ್ಥಾನ ಗಳಿಸಿದ್ದಾರೆ. ರೈತ ಹೋರಾಟ ಕಥೆಯ ನಾಟಕಕ್ಕೆ ಪ್ರಶಸ್ತಿ:ಬೈಂದೂರಿನಲ್ಲಿ ನಿರಂತರ 432 ದಿನಗಳ ಕಾಲ ರೈತರು ಹೋರಾಟ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಸಹಕಾರಿ ಸಂಸ್ಥೆಗಳು ಕೇವಲ ಲಾಭ ಗಳಿಸುವ ಉದ್ದೇಶದಿಂದ ಕಾರ್ಯನಿರ್ವಹಿಸದೆ, ರೈತರು ಹಾಗೂ ಜನಸಾಮಾನ್ಯರ ಸೇವೆಗೆ ಆದ್ಯತೆ ನೀಡಬೇಕು. ಜನರ ವಿಶ್ವಾಸ, ಪಾರದರ್ಶಕ ಆಡಳಿತ ಮತ್ತು ಸೇವಾ ಮನೋಭಾವವೇ ಸಹಕಾರಿ ಕ್ಷೇತ್ರದ ನಿಜವಾದ ಶಕ್ತಿಯಾಗಿದೆ ಎಂದು ಉಪ್ಪುಂದ ಕಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಹೇಳಿದರು. ಅವರು 73ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ಕೋಟ ಸಹಕಾರಿ ವ್ಯವಸಾಯಕ ಸಂಘ, ಕೋಟತಟ್ಟು ಪಡುಕರೆ ಹಾಲು ಉತ್ಪಾದಕರ ಸಹಕಾರಿ ಸಂಘ ಹಾಗೂ ಉಡುಪಿ ಜಿಲ್ಲಾ ಸಹಕಾರ ಇಲಾಖೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಕೋಟದ ಬಿ.ಸಿ. ಹೊಳ್ಳ ಸಹಕಾರ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ದಿಕ್ಸೂಚಿ ಭಾಷಣ ಮಾಡಿದರು. ಉಡುಪಿ ಜಿಲ್ಲೆಯಲ್ಲಿ 735 ಹಾಲು ಉತ್ಪಾದಕರ ಸಹಕಾರಿ ಸಂಘಗಳ ಮೂಲಕ ಸುಮಾರು 55 ಸಾವಿರ ರೈತರು ಹಾಲು ಪೂರೈಸುತ್ತಿದ್ದು, ವಾರ್ಷಿಕವಾಗಿ ಸುಮಾರು 750 ಕೋಟಿ ರೂ. ಹಣ ರೈತರಿಗೆ ಪಾವತಿಯಾಗುತ್ತಿದೆ. ಇದು ಗ್ರಾಮೀಣ…
