ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಕಿರಿಮಂಜೇಶ್ವರದ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವದ ಪ್ರಯುಕ್ತ ನಡೆದ ಬಹುಮಾನ ವಿತರಣಾ ಸಮಾರಂಭವು ಅದ್ಧೂರಿಯಾಗಿ ನಡೆಯಿತು. ಜನತಾ ಸಮೂಹ ಸಂಸ್ಥೆಗಳ ಅಧ್ಯಕ್ಷರಾಗಿರುವ ಗಣೇಶ್ ಮೊಗವೀರ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿಕೊಂಡು ತಮ್ಮ ಪ್ರಾಸ್ತಾವಿಕ ನುಡಿಯಲ್ಲಿ ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಯು ಕೇವಲ ನಾಲ್ಕು ಗೋಡೆಗೆ ಸೀಮಿತವಾಗಿರದೆ, ಅವರಲ್ಲಿ ಸುಪ್ತವಾಗಿರುವ ಪ್ರತಿಭೆಯನ್ನು ತೋರ್ಪಡಿಸಲು ಇದೊಂದು ವೇದಿಕೆಯಾಗಿದೆ. ಜೀವನದಲ್ಲಿ ಎದುರಾಗುವ ಸೋಲು ಗೆಲುವನ್ನು ಸಮದೂಗಿಸಿಕೊಂಡು ಹೋಗುವುದನ್ನು ವಿದ್ಯಾರ್ಥಿ ಜೀವನದಲ್ಲಿಯೇ ಅಳವಡಿಸಿಕೊಳ್ಳಬೇಕು ಎಂದರು. ಈ ಸಮಾರಂಭವನ್ನು ಉಡುಪಿ ನೌಕರರ ಸಂಘದ ಅಧ್ಯಕ್ಷರಾದ ಬಸ್ರೂರಿನ ನಿವೇದಿತ ಪ್ರೌಢಶಾಲೆಯ ಶಿಕ್ಷಕರಾದ ಪ್ರದೀಪ್ ಕುಮಾರ್ ಶೆಟ್ಟಿ ಅವರು ದೀಪ ಬೆಳಗುವುದರ ಮೂಲಕ ಉದ್ಘಾಟಿಸಿ, ವಿದ್ಯಾರ್ಥಿಗಳು ಪಠ್ಯದ ಜೊತೆಯಲ್ಲಿ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಾಗ ದೈಹಿಕ ಹಾಗೂ ಮಾನಸಿಕ ಸ್ಥಿರತೆಯನ್ನು ಕಂಡುಕೊಳ್ಳಲು ಸಾಧ್ಯವಾಗುತ್ತದೆ. ವಿದ್ಯಾರ್ಥಿಗಳನ್ನು ಭವಿಷ್ಯದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅಣಿಗೊಳಿಸುವಲ್ಲಿ ಸದಾ ಈ ಸಂಸ್ಥೆಯು ಮುಂಚೂಣಿಯಲ್ಲಿದೆ ಎಂದು ತಿಳಿಸಿದರು. ಸಭೆಯಲ್ಲಿ ಉಪಸ್ಥಿತರಿದ್ದ ಉಡುಪಿ ಜಿಲ್ಲಾ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕ್ಷೇತ್ರದಲ್ಲಿ ಆರೋಗ್ಯ ಸೇವೆ ಒದಗಿಸುವಲ್ಲಿ ರಾಜ್ಯ ಸರಕಾರ ವಿಫಲವಾಗಿದೆ ಎಂದು ಬೈಂದೂರು ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಗಜೇಂದ್ರ ಬೇಲೆಮನೆ ಆರೋಪಿಸಿದ್ದಾರೆ. ಬೈಂದೂರು ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಗಜೇಂದ್ರ ಎಸ್ ಬೇಲೆಮನೆ ಅವರು ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿ, ಕಾಂಗ್ರೇಸ್ ಸರಕಾರದ ಗ್ಯಾರಂಟಿ ಯೋಜನೆಯಿಂದ ಇವತ್ತು ರಾಜ್ಯದಲ್ಲಿ ಮೂಲಭೂತ ಸೌಕರ್ಯಗಳಿಗೆ ಕುಂದುಕೊರತೆಗಳಾಗುತ್ತಿವೆ. ಅದರಲ್ಲಿ ಮುಖ್ಯವಾಗಿ ಸರಕಾರಿ ಉಪ ಆರೋಗ್ಯ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ, ತಾಲ್ಲೂಕು ಆರೋಗ್ಯ ಕೇಂದ್ರ, ಜಿಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಸೇವೆ, ಸಿಬ್ಬಂದಿ ಮತ್ತು ವೈದ್ಯರ ವ್ಯವಸ್ಥೆಯನ್ನು ಸರಿಯಾಗಿ ಕಲ್ಪಿಸುವಂತೆ ಅವರು ಆಗ್ರಹಿಸಿದ್ದಾರೆ. ಸರಕಾರಿ ಆಸ್ಪತ್ರೆ ಮೇಲ್ದರ್ಜೆಗೇರಿಲು & ಮೂಲಭೂತ ಸೌಕರ್ಯ ಒದಗಿಸಲು ಆಗ್ರಹ: ಸುದ್ದಿಗೊಷ್ಠಿಯಲ್ಲಿ ಬೈಂದೂರು ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷರಾದ ಪ್ರದೀಪ್ ಉಪ್ಪುಂದ, ಜಗದೀಶ್ ಆಲoದೂರು, ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ ಆಜ್ರಿ, ಬೈಂದೂರು ಬಿಜೆಪಿ ಮಂಡಲ ಕಾರ್ಯದರ್ಶಿ ರಾಜೇಂದ್ರ ಬಿಜೂರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಇಲ್ಲಿನ ಕುಂಭಾಶಿಯ ವಿಶ್ವಕರ್ಮ ಕರಕುಶಲ ಶಿಲ್ಪ ಕಲಾ ಕೇಂದ್ರಕ್ಕೆ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಗುರುವಾರ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಅಲ್ಲಿನ ಕರಕುಶಲ ಕಾರ್ಯಶೈಲಿ ಹಾಗೂ ಚಟುವಟಿಕೆಗಳನ್ನು ಕಾರ್ಯವೈಕರಿಯ ಬಗ್ಗೆ ಶ್ಲಾಘಿಸಿದ ಅವರು ರಥ ಶಿಲ್ಪಿ ಲಕ್ಷ್ಮೀನಾರಾಯಣ ಆಚಾರ್ಯ ಹಾಗೂ ಪುತ್ರ ರಾಜಗೋಪಾಲ ಆಚಾರ್ಯ ಅವರೊಂದಿಗೆ ಚರ್ಚಿಸಿದರು. ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಕೋಟೇಶ್ವರ ಲಕ್ಷ್ಮೀನಾರಾಯಣ ಆಚಾರ್ಯ, ಪುತ್ರ ರಾಜಗೋಪಾಲ್ ಆಚಾರ್ಯ ಜಿಲ್ಲಾಧಿಕಾರಿ ಅವರನ್ನು ಶಾಲು ಹೋದಿಸಿ ಫಲಪುಷ್ಭ ನೀಡಿ ಗೌರವಿಸಿದರು. ಈ ವೇಳೆ ರಾಜಗೋಪಾಲ ಆಚಾರ್ಯ ಪುತ್ರಿ ಹಾಗೂ ಸಹೋದರ ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಶಿಕ್ಷಕ ಮತ್ತು ವಿದ್ಯಾರ್ಥಿಗಳ ಸಂಬಂಧ ಅವಿನಾಭಾವ ಸಂಬಂಧ. ವಿದ್ಯಾರ್ಥಿ ದಿಸೆಯಲ್ಲಿ ಪಡೆದ ಅನುಭವ ಜೀವನಕ್ಕೆ ಪ್ರೇರಣೆಯಾಗುತ್ತದೆ. ವಿದ್ಯಾರ್ಥಿಗಳಿಗೆ ಜೀವನದಲ್ಲಿ ಸಾಧಿಸುವ ಛಲ ಹೊಂದಿರಬೇಕು. ಪೈಪೋಟಿಯ ಸ್ಪರ್ಧಾತ್ಮಕ ಯುಗದಲ್ಲಿ ಅಂಕಗಳ ಜೊತೆಯಲ್ಲಿ ಕೌಶಲ್ಯ ಬೇಕು. ಮಾತನಾಡುವ ಕಲೆ, ಪರಿಸ್ಥಿತಿಯನ್ನು ಎದುರಿಸುವ ಧೈರ್ಯ ಇರಬೇಕು ಎಂದು ಪದವಿಪೂರ್ವ ಶಿಕ್ಷಣ ಇಲಾಖೆಯ ನಿವೃತ್ತ ಸಹಾಯಕ ನಿರ್ದೇಶಕ ಸಿ. ಸುರೇಶ ತುಂಗ ಹೇಳಿದರು. ಅವರು ಗಂಗೊಳ್ಳಿಯ ಸ.ವಿ. ಪದವಿಪೂರ್ವ ಕಾಲೇಜಿನ ವಠಾರದಲ್ಲಿ ಶುಕ್ರವಾರ ಜಿ.ಎಸ್.ವಿ. ಅಸೋಸಿಯೇಶನ್ ಗಂಗೊಳ್ಳಿ ಪ್ರಾಯೋಜಿತ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜು ಹಾಗೂ ಕನ್ನಡ ಮಾಧ್ಯಮ ಪ್ರೌಢಶಾಲೆಯ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ನಾವು ಬೆಳೆಯಬೇಕಾದರೆ ನಾವು ಬದಲಾಗಬೇಕು. ಬದಲಾಗಬೇಕಾದರೆ ಕಲಿಯಬೇಕು. ಕಲಿಯಬೇಕಾದರೆ ತೆರೆದುಕೊಳ್ಳಬೇಕು. ನಮ್ಮನ್ನು ನಾವು ಹೊರ ಜಗತ್ತಿಗೆ ಸಮರ್ಪಿಸಿಕೊಳ್ಳಬೇಕು. ಪ್ರತಿಯೊಬ್ಬರಲ್ಲೂ ಉತ್ಸಾಹ ಮತ್ತು ಹಂಬಲ ಇರಬೇಕು. ನಮ್ಮ ಸುತ್ತಮುತ್ತಲು ಇರುವ ಅವಕಾಶಗಳನ್ನು ನೋಡುತ್ತಿರಬೇಕು. ಇವೆಲ್ಲದರ ಮಧ್ಯೆ ತಾಳ್ಮೆ ಅವಶ್ಯಕ. ಮಾತು ಸಾಧನೆಯಾಗಬಾರದು. ಸಾಧನೆ ಮಾತು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸುರಭಿ (ರಿ) ಬೈಂದೂರು ಸಾಂಸ್ಕೃತಿಕ ಸಾಹಿತ್ಯ ಸೇವಾ ಪ್ರತಿಷ್ಠಾನ ಇದರ ಬೆಳ್ಳಿ ಹಬ್ಬದ ಸಂಭ್ರಮದ ಪ್ರಯುಕ್ತ ಡಿಸೆಂಬರ್ 14ರಿಂದ 21ರ ತನಕ 08 ದಿನಗಳ ಕಾಲ ರಾಜ್ಯ ಮಟ್ಟದ ನಾಟಕ ಸ್ಪರ್ಧೆ ಸಂಜೆ 07 ಗಂಟೆಗೆ ಯಡ್ತರೆ ಜೆ.ಎನ್.ಆರ್ ಕಲಾಮಂದಿರದ ಹೊರಾಂಗಣ ಸಭಾ ವೇದಿಕೆಯಲ್ಲಿ ನಡೆಯಲಿದೆ ಎಂದು ಸುರಭಿ ಸಂಸ್ಥೆಯ ಅಧ್ಯಕ್ಷ ಆನಂದ ಮದ್ದೋಡಿ ತಿಳಿಸಿದ್ದಾರೆ. ಅವರು ಗುರುವಾರ ಬೈಂದೂರು ರೋಟರಿ ಕ್ಲಬ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿ ನಮ್ಮ ಸಂಸ್ಥೆ ಬೆಳ್ಳಿಹಬ್ಬದ ವರ್ಷವನ್ನು ಸಂಭ್ರಮಿಸುತ್ತಿದ್ದು ವರ್ಷವಿಡಿ ವಿವಿಧ ಸಾಂಸ್ಕೃತಿಕ ಸಾಹಿತಿಕ ಕಾರ್ಯಕ್ರಮಗಳನ್ನು ಅದ್ಧೂರಿಯಾಗಿ ಆಯೋಜಿಸಲಾಗುತ್ತಿದೆ ಎಂದರು. ಡಿಸೆಂಬರ್ 14ರ ಆದಿತ್ಯವಾರ ರಂಗಾಯಣ ಟ್ರಸ್ಟ್ ಮೈಸೂರು ಪ್ರಸ್ತುತಿಯ ನಾಟಕ “ಚಾಮಚೆಲುವೆ” ಪ್ರದರ್ಶನಗೊಳ್ಳಲಿದೆ. ನಾಟಕ ರಚನೆ: ಡಾ. ಸುಜಾತ ಅಕ್ಕಿ, ನಿರ್ದೇಶನ ವಿಕಾಸ್ ಚಂದ್ರ, ಡಿಸೆಂಬರ್ 15ರ ಸೋಮವಾರ ಕಲಾರೋಹಣ ಶಿವಮೊಗ್ಗ ಪ್ರಸ್ತುತಿಯ ನಾಟಕ “ನನ… ನನಮ್ ರಸ್ತೆ” ಪ್ರದರ್ಶನಗೊಳ್ಳಲಿದೆ. ನಾಟಕ ರಚನೆ: ಡಾ. ಗಜಾನನ ಶರ್ಮಾ ಬೆಂಗಳೂರು,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮಾನವನು ಮಾನವನನ್ನು ಅರಿತು ಗೌರವಿಸಿ ಸಹಕಾರ ಸೌಹಾರ್ದತೆಯಿಂದ ಇರಲು ಮಾನವ ಹಕ್ಕು ಅತಿ ಅವಶ್ಯಕ. ಮಾನವ ಹಕ್ಕು ಮತ್ತು ಕರ್ತವ್ಯಗಳು ಒಂದೇ ನಾಣ್ಯದ ಎರಡು ಮುಖಗಳು. ಈ ಮಾನವೀಯ ಮೌಲ್ಯಗಳು ಇಂದಿಗೂ ಪ್ರಸ್ತುತ ಎಂದು ರಾಜ್ಯಶಾಸ್ತ್ರ ಸಹಾಯಕ ಪ್ರಾಧ್ಯಾಪಕರಾದ ರೋಹಿಣಿ ಹೇಳಿದರು. ಅವರು ಇಲ್ಲಿನ ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕೋಟೇಶ್ವರದ ಐಕ್ಯೂಎಸಿ ಮಾನವಿಕ ಸಂಘ ಇತಿಹಾಸ ಮತ್ತು ರಾಜ್ಯಶಾಸ್ತ್ರ ವಿಭಾಗ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಮಾನವ ಹಕ್ಕುಗಳ ದಿನ ಕಾರ್ಯಕ್ರಮದಲ್ಲಿ ಮಾತನಾಡಿದರು. ಪ್ರಾಂಶುಪಾಲರಾದ ರಾಮರಾಯ ಆಚಾರ್ಯ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ, ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಐ.ಕ್ಯೂ.ಎ.ಸಿ ಸಂಚಾಲಕ ನಾಗರಾಜ ಯು. ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ನಾಗರಾಜ ವೈದ್ಯ ಎಂ., ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಡಾ ಶೇಖರ್ ಬಿ., ಮಾನವ ಹಕ್ಕುಗಳ ಸಂಘದ ರಕ್ಷಿತಾ ಮತ್ತು ಗಣೇಶ ಉಪಸ್ಥಿತರಿದ್ದರು. ಇತಿಹಾಸ ವಿಭಾಗದ ಮುಖ್ಯಸ್ಥರಾದ ಗಣೇಶ್ ಪೈ. ಎಂ. ಪ್ರಸ್ತಾವಿಸಿ ಸ್ವಾಗತಿಸಿದರು. ನಾಗಮ್ಮ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಮಿಯ್ಯಾಣಿ ಕಾಡಿನತಾರುವಿನಲ್ಲಿ 27ನೇ ವರ್ಷದ ಸೂರ್ಯ ಕಂಬಳೋತ್ಸವ ಡಿಸೆಂಬರ್ 25 ಗುರುವಾರ ಬೆಳಿಗ್ಗೆ 10 ಗಂಟೆಯಿಂದ ನಡೆಯಲಿದೆ. ಕಂಬಳದಲ್ಲಿ ಹಗ್ಗ ಅತೀ ಕಿರಿಯ ವಿಭಾಗ, ಹಗ್ಗ ಕಿರಿಯ ವಿಭಾಗ ಹಾಗೂ ಹಲಗೆ ಮುಕ್ತ ವಿಭಾಗದಲ್ಲಿ ಸ್ಪರ್ಧೆ ನಡೆಯಲಿದ್ದು, ವಿಜೇತ ಕೋಣಗಳಿಗೆ ಹಾಗೂ ಕೋಣ ಓಡಿಸುವವರಿಗೆ ಬಹುಮಾನ ನೀಡಲಾಗುತ್ತದೆ ಎಂದು ಸಂಘಟಕ ಸಂತೋಷ ಪೂಜಾರಿ ಕಾಡಿನತಾರು ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ 37ನೇ ವಾರ್ಷಿಕೋತ್ಸವದ ಪ್ರಯುಕ್ತ ಸಂಸ್ಥೆಯ ಕಾರ್ಯದರ್ಶಿಯವರಾದ ಕೆ. ರಾಧಾಕೃಷ್ಣ ಶೆಣೈ ಅವರು ಧ್ವಜಾರೋಹಣ ಗೈದು ವಿದ್ಯಾರ್ಥಿಗಳಿಗೆ ಹಿತನುಡಿಗಳನ್ನು ತಿಳಿಸಿದರು. ಈ ಸಭಾ ಕಾರ್ಯಕ್ರಮದಲ್ಲಿ ವಿಭಾಗದ ಮುಖ್ಯಸ್ಥರು, ವಿದ್ಯಾರ್ಥಿ ವಿದ್ಯಾರ್ಥಿನಿಯರು ಹಾಗೂ ಬೋಧಕ ಬೋಧಕೇತರ ವರ್ಗದವರು ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಅವನಿಕಾ ಜಿ. ನಿರೂಪಿಸಿ, ಅಮೋಘ ಪೈ ಸ್ವಾಗತಿಸಿ, ಹರಿದಾಸ್ ಆರ್. ಮಲ್ಯ ವಂದನಾರ್ಪಣೆ ಗೈದರು. ಈ ಕಾರ್ಯಕ್ರಮದ ನಂತರ ಸಂಸ್ಥೆಯ ಎಲ್ಲಾ ವಿದ್ಯಾರ್ಥಿಗಳಿಗೆ ಐಸ್ ಕ್ರಿಂ ವಿತರಿಸಲಾಯಿತು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬ್ರಹ್ಮಾವರ: ಗ್ರಾಮಾಭಿವೃದ್ಧಿ ಮತ್ತು ಸ್ವ ಉದ್ಯೋಗ ತರಬೇತಿ (ರುಡ್ ಸೆಟ್) ಸಂಸ್ಥೆ ಬ್ರಹ್ಮಾವರ ಇವರ ಆಶ್ರಯದಲ್ಲಿ ಬ್ಯಾಂಕ್ ಮಿತ್ರ ತರಬೇತಿಯ ಉದ್ಘಾಟನಾ ಸಮಾರಂಭವು ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಮಾತನಾಡಿದ ಉಡುಪಿ ಕೆನರಾ ಬ್ಯಾಂಕ್ ಪ್ರಾದೇಶಿಕ ವ್ಯವಸ್ಥಾಪಕರಾದ ಪೂರ್ಣಾನಂದ ಅವರು ಭಾರತದ ಒಟ್ಟಾರೆ ಆರ್ಥಿಕತೆಯು ಗ್ರಾಮೀಣ ಭಾರತದ ಸಮಗ್ರ ಅಭಿವೃದ್ಧಿಯನ್ನು ಅವಲಂಬಿಸಿದೆ. ಇದು ಸಾಧ್ಯವಾಗಬೇಕಾದರೆ, ಆರ್ಥಿಕ ಚಟುವಟಿಕೆಗಳಿಂದ ಹೊರಗುಳಿದವರ ಸೇರ್ಪಡೆ ಅನಿವಾರ್ಯ. ಹಾಗಾಗಿ ಕೊನೆಯ ಹಂತದ ಸಂಪರ್ಕವನ್ನು ಪ್ರಯತ್ನಿಸುವ ಬ್ಯಾಂಕ್‌ನ ಪ್ರತಿನಿಧಿಯಾಗಿ ಸೇವೆಯನ್ನು ನೀಡುವ ವ್ಯವಸ್ಥೆ ಇದಾಗಿದೆ. ಈಗಾಗಲೇ ಬ್ಯಾಂಕ್ ಮಿತ್ರ ಯೋಜನೆಯು ಸಾಕಷ್ಟು ಪ್ರಾಮುಖ್ಯತೆಯನ್ನು ಪಡೆದಿದೆ. ಬ್ಯಾಂಕ್ ಮಿತ್ರ ಅಭ್ಯರ್ಥಿಗಳು ಕಮಿಷನ್‌ಗಾಗಿ ಕೆಲಸವನ್ನು ಮಾಡಬೇಡಿ, ಇದನ್ನು ಸೇವೆಯೆಂದು ಮನಗಂಡು ಕೆಲಸವನ್ನು ಮಾಡಿದಲ್ಲಿ ಖಂಡಿತವಾಗಿ ನಿಮಗೆ ಸಮಾಜದಲ್ಲಿ ಹೆಚ್ಚಿನ ಸ್ತಾನಮಾನಗಳು ದೊರೆಯುತ್ತದೆ. ಬ್ಯಾಂಕ್‌ಗೆ ಪೂರಕವಾಗಿ ಕಾರ್ಯವನ್ನು ಮಾಡುವುದು ಆದ್ಯ ಕರ್ತವ್ಯವಾಗಿದೆ ಎಂದು ಹೇಳಿ ಶಿಬಿರಾರ್ಥಿಗಳಿಗೆ ಪುಸ್ತಕವನ್ನು ವಿತರಿಸಿ, ಶುಭ ಹಾರೈಸಿದರು. ಲೀಡ್ ಬ್ಯಾಂಕ್‌ನ ಮ್ಯಾನೇಜರ್ ಹರೀಶ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಐ.ಐ.ಟಿ, ಐ.ಐ.ಐ.ಟಿ, ಎನ್.ಐ.ಟಿ, ಐ.ಐ.ಎಮ್, ಐ.ಐ.ಎಸ್.ಇ.ಆರ್, ಎ.ಐ.ಐ.ಎಂ.ಎಸ್, ಎನ್.ಎಲ್.ಯು, ಐ.ಎನ್.ಐ ಮತ್ತು ಐ.ಯು.ಎಸ್.ಎಲ್.ಎ ಇತ್ಯಾದಿ ಸರ್ಕಾರದಿಂದ ಶಾಸನಬದ್ಧ ಅನುಮತಿ ಪಡೆದ ಪ್ರತಿಷ್ಠಿತ ಸಂಸ್ಥೆಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ರಾಜ್ಯದ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಪಾರ್ಸಿ ಹಾಗೂ ಸಿಖ್ ಸಮುದಾಯದ ವಿದ್ಯಾರ್ಥಿಗಳಿಂದ ಪ್ರೋತ್ಸಾಹಧನ ಸೌಲಭ್ಯ ಪಡೆಯಲು ವೆಬ್‌ಸೈಟ್ https://sevasindhu.karnataka.gov.in/sevasindhu/DepartmentService ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು 2026 ರ ಜನವರಿ 31 ರ ವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಹಾಯವಾಣಿ ಸಂಖ್ಯೆ: 8277799990 ಅಥವಾ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಜಾದ್ ಭವನ, ಅಲೆವೂರು ರಸ್ತೆ, ಮಣಿಪಾಲ ದೂ.ಸಂಖ್ಯೆ: 0820-2573596, ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ನೆಲ ಮಹಡಿ, ಮೌಲಾನಾ ಅಜಾದ್ ಭವನ, ಅಲೆವೂರು ರಸ್ತೆ, ಶಿವಳ್ಳಿ ಗ್ರಾಮ, ಮಣಿಪಾಲ, ದೂರವಾಣಿ ಸಂಖ್ಯೆ: 0820-2574596 ಅಥವಾ ಕಾರ್ಕಳ ದೂರವಾಣಿ ಸಂಖ್ಯೆ:…
