ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಇಲ್ಲಿನ ಕೋಟ ಶ್ರೀ ಅಮೃತೇಶ್ವರೀ ಹಲವು ಮಕ್ಕಳ ತಾಯಿ ದೇವಸ್ಥಾನದಲ್ಲಿ ಶುಕ್ರವಾರದಂದು ವರಮಹಾಲಕ್ಷ್ಮೀ ಪೂಜಾ ಕಾರ್ಯಕ್ರಮ ಜರಗಿತು. ಈ ಅಂಗವಾಗಿ ಶ್ರೀ ಕ್ಷೇತ್ರದಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ವೃತ ಬೆಳಿಗ್ಗೆ 9.30ಕ್ಕೆ ಆರಂಭಗೊಂಡಿತು. ಸಾವಿರಾರು ಭಕ್ತರು ಶ್ರೀ ದೇಗುಲದಲ್ಲಿ ನಡೆದ ವಿವಿಧ ಪೂಜಾ ಕಾರ್ಯದಲ್ಲಿ ಭಾಗಿಯಾದರು. ದೇಗುಲದಲ್ಲಿ ವಿಶೇಷ ಹೂವಿನ ಅಲಂಕಾರ, ಸಹಸ್ರ ಕುಂಕುಮಾರ್ಚನೆ ಹಾಗೂ ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಿತು. ದೇಗುಲದ ಆಡಳಿತ ಮಂಡಳಿಯ ಅಧ್ಯಕ್ಷ ಆನಂದ್ ಸಿ. ಕುಂದರ್ ನೇತೃತ್ವದಲ್ಲಿ ದೇಗುಲದ ಟ್ರಸ್ಟಿ ಸುಭಾಷ್ ಶೆಟ್ಟಿ ದಂಪತಿಗಳು ಪೂಜಾ ವಿಧಿವಿಧಾನದಲ್ಲಿ ಪಾಲ್ಗೊಂಡರು. ಶ್ರೀ ದೇವಿ ಅಮೃತೇಶ್ವರೀ ಗೆ ವರಮಹಾಲಕ್ಷ್ಮೀ ಅಂಗವಾಗಿ ವಿಶೇಷ ಅಲಂಕಾರ ಭಕ್ತ ಮಹಾಶಯನ್ನು ವಿಶೇಷವಾಗಿ ಸೆಳೆಯಿತು. ದೇಗುಲದ ಟ್ರಸ್ಟಿಗಳಾದ ಗಣೇಶ್ ನೆಲ್ಲಿಬೆಟ್ಟು, ಶಿವ ಪೂಜಾರಿ, ರತನ್ ಐತಾಳ್, ಸುಧಾ ಪೂಜಾರಿ, ಜ್ಯೋತಿ ಡಿ.ಕಾಂಚನ್, ಅರ್ಚಕ ಪ್ರತಿನಿಧಿಗಳಾದ ಸುಬ್ರಾಯ ಜೋಗಿ, ದಿನೇಶ್ ಜೋಗಿ ಮತ್ತಿತರರು ಇದ್ದರು. ಧಾರ್ಮಿಕ ವಿಧಿವಿಧಾನವನ್ನು ವೇ.ಮೂ ಮಧುಸೂದನ ಬಾಯರಿ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಜಿ.ಎಸ್.ಬಿ. ಮಹಿಳಾ ಮಂಡಳಿ ಗಂಗೊಳ್ಳಿ ಇವರ ವತಿಯಿಂದ ಶ್ರೀ ವರಮಹಾಲಕ್ಷ್ಮೀ ವೃತ ಶ್ರೀ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶ ಶ್ರೀಮದ್ ವಿದ್ಯಾಧೀಶ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿಯವರ ಆಶೀರ್ವಾದ, ಮಾರ್ಗದರ್ಶನದಲ್ಲಿ ಗಂಗೊಳ್ಳಿಯ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದ ವಿದ್ಯಾಧಿರಾಜ ಸಭಾಭವನದಲ್ಲಿ ಶುಕ್ರವಾರ ಜರಗಿತು. ದೇವಳದ ತಾಂತ್ರಿಕ ಜಿ.ವಸಂತ ಭಟ್ ನೇತೃತ್ವದಲ್ಲಿ ವರಮಹಾಲಕ್ಷ್ಮೀ ವೃತದ ಧಾರ್ಮಿಕ ವಿಧಿವಿಧಾನಗಳು ಶಾಸ್ತ್ರೋಕ್ತವಾಗಿ ವಿಜೃಂಭಣೆಯಿಂದ ನಡೆಯಿತು. ಜಿಎಸ್ಬಿ ಸಮಾಜದ ಮುತ್ತೈದೆಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಶ್ರೀದೇವರ ಪ್ರಸಾದ ಸ್ವೀಕರಿಸಿದರು. ದೇವಳದ ಪ್ರಧಾನ ಅರ್ಚಕ ಎಸ್.ವೆಂಕಟರಮಣ ಆಚಾರ್ಯ, ದೇವಳದ ಆಡಳಿತ ಮೊಕ್ತೇಸರ ಎನ್.ಸದಾಶಿವ ನಾಯಕ್, ಜಿಎಸ್ಬಿ ಮಹಿಳಾ ಮಂಡಳಿ ಅಧ್ಯಕ್ಷೆ ವಿಜಯಶ್ರೀ ವಿ.ಆಚಾರ್ಯ, ಕಾರ್ಯದರ್ಶಿ ವೈಭವಿ ವಿ.ಶೆಣೈ, ಪುರೋಹಿತರು, ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರು, ಜಿಎಸ್ಬಿ ಮಹಿಳಾ ಮಂಡಳಿ ಪದಾಧಿಕಾರಿಗಳು, ಸದಸ್ಯರು, ಸಮಾಜಬಾಂಧವರು, ಊರಿನ ಹತ್ತು ಸಮಸ್ತರು, ಮತ್ತಿತರರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಗೃಹಲಕ್ಷ್ಮೀ ಫಲಾನುಭವಿಗಳ ಸ್ವಸಹಾಯ ಗುಂಪು ರಚಿಸಿ, ಅದರ ಉಳಿತಾಯದ ಹಣದಲ್ಲಿ ಮಹಿಳೆಯರ ಸ್ವ-ಉದ್ಯೋಗಕ್ಕೆ ಅವಕಾಶ ಕಲ್ಪಿಸಿ ಕೊಡುವ ಬಗ್ಗೆ ಚಿಂತನೆಯಿದೆ. ಅದು ಆ.15ರಂದು ಘೋಷಣೆಯಾಗುವ ಸಾಧ್ಯತೆಯಿದೆ ಎಂದು ಬೈಂದೂರು ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಮೋಹನ್ ಪೂಜಾರಿ ಹೇಳಿದರು. ಅವರು ಇಲ್ಲಿನ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಗ್ಯಾರಂಟಿ ಅನುಷ್ಠಾನ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಗೃಹಲಕ್ಷ್ಮೀ ಫಲಾನುಭವಿಗಳ ಸ್ವ-ಸಹಾಯ ಗುಂಪುಗಳನ್ನು ಉದ್ಯೋಗ ಖಾತ್ರಿ ಯೋಜನೆಯಡಿ ವಿಲೀನಗೊಳಿಸಿ, ಮಹಿಳಾ ಸ್ವಉದ್ಯೋಗಕ್ಕೆ ಅವಕಾಶ ಕಲ್ಪಿಸುವ ಬಗ್ಗೆ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಸಭೆಯಲ್ಲಿ ಚರ್ಚಿಸಲಾಗಿದೆ ಎಂದರು. ಬೈಂದೂರಿನಲ್ಲಿ ನಿರ್ಮಾಣ ಹಂತದಲ್ಲಿರುವ ಕೆಎಸ್ಆರ್ಟಿಸಿ ಬಸ್ ನಿಲ್ದಾಣಕ್ಕೆ ನೀರು ಸರಬರಾಜು ಮಾಡುವ ಕಾಮಗಾರಿ ಪ್ರಗತಿಯಲ್ಲಿದ್ದು, ಸದ್ಯದಲ್ಲಿ ಅದು ಪೂರ್ಣಗೊಳ್ಳಲಿದೆ ಎಂದ ಅವರು ಶಾಲಾ ಅವಧಿಯಲ್ಲಿ ವಿದ್ಯಾರ್ಥಿಗಳ ಸಂಚಾರಕ್ಕೆ ತೊಡಕ್ಕಾಗದಂತೆ ಹೆಚ್ಚುವರಿ ಕೆಎಸ್ಆರ್ಟಿಸಿ ಬಸ್ ವ್ಯವಸ್ಥೆ ಕಲ್ಪಿಸು ವಂತೆ ಕೆಎಸ್ಆರ್ಟಿಸಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಗ್ಯಾರಂಟಿಯಿಂದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ಶ್ರೀ ವೀರರಾಜೇಂದ್ರ ಹೆಗ್ಡೆ ಸಭಾ ಭವನದಲ್ಲಿ ಹೊಸದಾಗಿ ಆಗಮಿಸಿದ ವಿದ್ಯಾರ್ಥಿಗಳಿಗೆ ’ಫ್ರೆಶರ್ಸ್ ಡೇʼ ಕಾರ್ಯಕ್ರಮ ಶುಕ್ರವಾರ ಜರುಗಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಸೃಷ್ಟಿ ಇನ್ಪೋಟೆಕ್ ಕುಂದಾಪುರ ಇದರ ಮ್ಯಾನೇಜಿಂಗ್ ಡೈರೆಕ್ಟರ್ ಆದ ಹರ್ಷವರ್ಧನ ಶೆಟ್ಟಿ ಕಾರ್ಯಕ್ರಮ ಉದ್ಧೇಶಿಸಿ ಮಾತನಾಡಿ, ಹೊಸದಾಗಿ ಕಾಲೇಜಿಗೆ ಸೇರಿದ ವಿದ್ಯಾರ್ಥಿಗಳನ್ನು ಸ್ವಾಗತಿಸಲು ಆಚರಿಸುವ ಈ ದಿನದಲ್ಲಿ ವಿದ್ಯಾರ್ಥಿಗಳು ತಮ್ಮ ಮೂರು ವರ್ಷಗಳ ಪದವಿ ಶಿಕ್ಷಣದಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡು ಸ್ಪಷ್ಟ ಗುರಿಯೊಂದಿಗೆ ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳುವುದರ ಮೂಲಕ ಎದುರಾಗುವ ಸನ್ನಿವೇಶಗಳನ್ನು ಎದುರಿಸುವ ಸಾಮರ್ಥ್ಯ ಬೆಳೆಸಿಕೊಳ್ಳಬೇಕು ಎಂದರು. ಇಂದಿನ ಕೃತಕ ಬುದ್ಧಿಮತ್ತೆ ಯುಗದಲ್ಲಿ ವಿದ್ಯಾರ್ಥಿಗಳು ಸ್ಪಷ್ಟ ಗುರಿ ಹೊಂದಿರಬೇಕು. ಜೊತೆಗೆ ಗುಣಾತ್ಮಕ ಗುಣಗಳನ್ನು ಬೆಳೆಸಿಕೊಂಡು ವಿಷಯದ ಬಗ್ಗೆ ಆಳವಾಗಿ ಅಧ್ಯಯನ ಮಾಡಿದಾಗ ವಿದ್ಯಾರ್ಥಿಗಳಲ್ಲಿ ಆತ್ಮ ವಿಶ್ವಾಸ ರೂಢಿಸಿಕೊಳ್ಳಲು ಸಾಧ್ಯವಾಗುತ್ತದೆ. ವಿದ್ಯಾರ್ಥಿ ದೆಶೆಯಲ್ಲಿಯೇ ಪದವಿ ಹಂತದ ವಿದ್ಯಾರ್ಥಿಗಳು ಉದ್ಯೋಗವನ್ನು ಪಡೆದುಕೊಳ್ಳಬೇಕಾದರೆ ಕೃತಜ್ಞತೆ ಮನೋಭಾವ ಪ್ರಾಮಾಣಿಕತೆ, ಗುರಿ, ಕೌಶಲ್ಯತೆ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆ ಐಎಂಜೆ ಪದವಿ ಕಾಲೇಜು ಇದರ ಕಾಮರ್ಸ್ ಮತ್ತು ವ್ಯವಹಾರ ಆಡಳಿತ ಸಂಘದ ಆಶ್ರಯದಲ್ಲಿ 2025-26ನೇ ಸಾಲಿನಲ್ಲಿ ಕಾಲೇಜಿಗೆ ಸೇರ್ಪಡೆಗೊಂಡ ಪ್ರಥಮ ವರ್ಷದ ಪದವಿಯ ಸಿ.ಎ ಮತ್ತು ಸಿ.ಎಸ್ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಸಿ.ಎ ಪಾಂಡುರಂಗ ನಾಯಕ್ ಅವರು ಸಿ.ಎ ಮತ್ತು ಸಿ.ಎಸ್ ಕೋರ್ಸ್ ನ ಸಂಪೂರ್ಣ ಮಾಹಿತಿಯನ್ನು ವಿವರಿಸಿ ಮಾತನಾಡಿ, ಸಮಾಜದಲ್ಲಿ ಉತ್ತಮ ಸ್ತರದಲ್ಲಿರುವ ಸಿಎ ಮತ್ತು ಸಿ.ಎಸ್ ಕೋರ್ಸ್ ಅನ್ನು ನಿರಂತರ ಪ್ರಯತ್ನ, ಛಲ ಮತ್ತು ಏಕಾಗ್ರತೆಯಿಂದ ಯಾವ ವಿದ್ಯಾರ್ಥಿಯು ಸಫಲತೆಯನ್ನು ಸಾಧಿಸಬಹುದು ಎಂದರು. ಜಿಲ್ಲೆಯ ನುರಿತ ಸಿ.ಎ, ಸಿ.ಎಸ್ ತರಬೇತುದಾರರಿಂದ ಕಾಲೇಜಿನಲ್ಲಿಯೇ ಕೋಚಿಂಗ್ ವ್ಯವಸ್ಥೆಯನ್ನು ಒದಗಿಸುತ್ತಿರುವ ಸಂಸ್ಥೆಯ ಕಾರ್ಯವೈಖರಿಯನ್ನು ಶ್ಲಾಗಿಸಿದರು. ಕೋರ್ಸ್ ನ ವಿವಿಧ ಹಂತಗಳು, ವಿಷಯ, ಪರೀಕ್ಷಾ ತಯಾರಿ, ಮಾನಸಿಕ ಸಿದ್ಧತೆ ಹೀಗೆ ಹಲವು ವಿಷಯಗಳನ್ನು ಹಂಚಿಕೊಂಡರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಪ್ರತಿಭಾ ಎಂ. ಪಟೇಲ್, ಉಪ ಪ್ರಾಂಶುಪಾಲರು ಹಾಗೂ ಐಕ್ಯೂಎಸಿ ಸಂಯೋಜಕರಾದ ಜಯಶೀಲ್ ಕುಮಾರ್,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮರವಂತೆ ಶ್ರೀ ಮಹಾರಾಜ ಸ್ವಾಮಿ ಶ್ರೀ ವರಾಹ ದೇವಸ್ಥಾನದ ಅಭಿವೃದ್ಧಿ ಕಾರ್ಯದ ಅಂಗವಾಗಿ ವಾಸ್ತು ತಜ್ಞರ ಕಟ್ಟಿ ಮುಖೇನ ಸಿದ್ದಪಡಿಸಿರುವ ನೀಲ ನಾಕ ನಕಾಶೆಯನ್ನು ಬೈಂದೂರು ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳೆ ಅವರು ಬಿಡುಗಡೆಗೊಳಿಸಿ ಶುಭಹಾರೈಸಿದರು. ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಅಭಿವೃದ್ಧಿ ಸಮಿತಿ ವಿಜ್ಞಾಪನಾ ಪತ್ರವನ್ನು ಅನಾವರಣಗೊಳಿಸಿದರು. ದೇವಳದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ರಾಜಶೇಖರ್ ಹೆಬ್ಬಾರ್ ಮಾತನಾಡಿ, ಅರಬ್ಬಿ ಸಮುದ್ರ ಮತ್ತು ಸೌಪರ್ಣಿಕಾ ನದಿ ಮಧ್ಯದಲ್ಲಿ, ಉದ್ಭವಿಸಿರುವ ಅತ್ಯಂತ ಪುರಾತನ ಇತಿಹಾಸವನ್ನು ಹೊಂದಿರುವಂತಹ ಜಿಲ್ಲೆಯ ಸುಪ್ರಸಿದ್ದ ದೇವಾಲ ಯವು ಜೀರ್ಣಾವಸ್ಥೆಯಲ್ಲಿದೆ. ದೇವಾಲಯವನ್ನು ಜೀರ್ಣೋದ್ದಾರ ಮಾಡುವ ನಿಟ್ಟಿನಲ್ಲಿ ಕಾರ್ಯಯೋಜನೆಯನ್ನು ರೂಪಿಸಿದ್ದು, ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ದೇವಾಲಯದ ಅಭಿವೃದ್ಧಿ ಸಮಿತಿ ಕೂಡ ರಚಿಸಲಾಗಿದೆ. ಅಂದಾಜು 15 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸುವ ದೇವಾಲಯವನ್ನು ಆಲೋಚನೆ ಹೊಂದಲಾಗಿದೆ. ಅತಿ ಶೀಘ್ರದಲ್ಲೆ ಜೀರ್ಣೋದ್ದಾರ ಕಾರ್ಯಕ್ಕೆ ಮುಂದಾಗಲಿದ್ದೇವೆ ಎಂದು ಹೇಳಿದರು. ಮಹಾರಾಜ ಸ್ವಾಮಿ ಶ್ರೀ ವರಾಹ ದೇವಾಲಯ ಇತಿಹಾಸಕಾರರ ಅಭಿಪ್ರಾಯದಂತೆ ದೇವ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕೇಂದ್ರ ಬಂದರು, ಹಡಗು ಮತ್ತು ಜಲಸಾರಿಗೆ ಸಚಿವ ಸರ್ಬಾನಂದ ಸೋನವಾಲ ಅವರನ್ನು ಗುರುವಾರ ಭೇಟಿಯಾದ ಸಂಸದ ಬಿ.ವೈ. ರಾಘವೇಂದ್ರ ಅವರು ಅಭಿವೃದ್ಧಿ ಯೋಜನೆಗಳ ಕುರಿತು ಮನವಿ ಸಲ್ಲಿಸಿದರು. ಗಂಗೊಳ್ಳಿ ರಾಜ್ಯದ 2ನೇ ಅತೀದೊಡ್ಡ ಮೀನುಗಾರಿಕ ಬಂದರಾಗಿದ್ದು, 200ಕ್ಕೂ ಹೆಚ್ಚು ದೋಣಿಗಳು ಅವಲಂಬಿತವಾಗಿವೆ. ಮತ್ಯೋದ್ಯಮ, ವ್ಯಾಪಾರ ಹಾಗೂ ಕರಾವಳಿಯ ವಾಣಿಜ್ಯ ವ್ಯವಹಾರಕ್ಕೆ ಗಂಗೊಳ್ಳಿ ಬಂದರು ಪ್ರಮುಖ ಕೇಂದ್ರವಾಗಿದೆ. ಗಂಗೊಳ್ಳಿಯಿಂದ ತಾಲೂಕು ಕೇಂದ್ರ ಕುಂದಾಪುರವು ಕೂಗಳತೆಯ ದೂರದಲ್ಲಿದ್ದರೂ, ಇಲ್ಲಿನ ಜನರು ಪ್ರಸ್ತುತ ರಾ.ಹೆ.-66 ಮೂಲಕ 17-18ಕಿ.ಮೀ. ಸಂಚರಿಸಿ ಕುಂದಾಪುರ ತಲುಪಬೇಕಿದೆ. ಇದರಿಂದ ಸಾರ್ವಜನಿಕರಿಗೆ ಸಮಯ ಹಾಗೂ ಆರ್ಥಿಕ ನಷ್ಟ ಉಂಟಾಗುತ್ತಿದೆ. ಹಾಗಾಗಿ ಗಂಗೊಳ್ಳಿ-ಕುಂದಾಪುರ ಸೇತುವೆ ಯೋಜನೆಯನ್ನು ಸಾಗರಮಾಲಾ ಯೋಜನೆಯ ಬಂದರು ಸಂಪರ್ಕ ಘಟಕದಡಿ ಸೇರಿಸಿ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯಕ್ಕೆ ಶಿಫಾರಸು ಮಾಡುವಂತೆ ಸಂಸದರು ಒತ್ತಾಯಿಸಿದರು. ಶಿರೂರು ಅಳಿವೆಗದ್ದೆ ಬಂದರಿನಲ್ಲಿ ಮೂಲಸೌಕರ್ಯವನ್ನು ಒದಗಿಸಿ ಮೀನುಗಾರರ ಬದುಕನ್ನು ಬೆಂಬಲಿಸಿ ಸುಸ್ಥಿರ ಮೀನುಗಾರಿಕೆಯನ್ನು ಉತ್ತೇಜಿಸಬೇಕು ಎಂದು ಸಂಸದರು ವಿವರಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ಸೌಪರ್ಣಿಕಾ ನದಿಯಲ್ಲಿ ಸ್ನಾನ ಮಾಡಲು ತೆರಳಿದ ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ಕಾಲು ಜಾರಿ ನದಿಗೆ ಬಿದ್ದು ಸಾವನ್ನಪಿದ ಘಟನೆ ಗುರುವಾರ ಸಂಭವಿಸಿದೆ. ಕೊಲ್ಲೂರು ನಿವಾಸಿ, ನರಸಿಂಹ ಬಾಳಿಗ ಅವರ ಪುತ್ರರಾಗಿರುವ ನಟೇಶ್ ಬಾಳಿಗ (36) ಮೃತಪಟ್ಟವರು. ಪಶ್ಚಿಮ ಘಟ್ಟ ತಪ್ಪಲುಗಳಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ನದಿಗಳೆಲ್ಲವೂ ಉಕ್ಕಿ ಹರಿಯುತ್ತಿವೆ ನೀರಿನ ಸೆಳೆತವು ಜಾಸ್ತಿಯಾಗಿದೆ. ಗುರುವಾರ ಬೆಳಿಗ್ಗೆ ನದಿಯಲ್ಲಿ ಸ್ನಾನ ಮಾಡುವಾಗ ಈ ಘಟನೆ ನಡೆದಿದೆ. ನೀರಿನ ಸೆಳೆತಕ್ಕೆ ಕೊಚ್ಚಿ ಹೋದ ವ್ಯಕ್ತಿಯ ಮೃತ ದೇಹವು ಮಾವಿನಕಾರು ಸೇತುವೆ ಸಮೀಪ ನದಿಯಲ್ಲಿ ಪತ್ತೆಯಾಗಿದೆ. ನಟೇಶ್ ಅವರು ದೇವಸ್ಥಾನದ ವಾಹನಗಳ ನಿಲುಗಡೆ ಪರಿಸರದಲ್ಲಿ ತಿಂಡಿ ಅಂಗಡಿ ನಡೆಸುತ್ತಿದ್ದರು. ಅವಿವಾಹಿತರಾಗಿದ್ದ ಅವರು ತಂದೆ ತಾಯಿ ಮತ್ತು ಸಹೋದರಿಯನ್ನು ಅಗಲಿದ್ದಾರೆ. ಈ ಬಗ್ಗೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಯಾವುದೇ ಸಂದರ್ಭದಲ್ಲಿಯೂ ಕೂಡ ಬ್ಯಾಂಕ್ ಖಾತೆಗೆ ಸಂಬಂಧಪಟ್ಟಂತಹ ತೀರಾ ವೈಯಕ್ತಿಕ ವಿವರಗಳನ್ನು ಅಪರಿಚಿತರೊಂದಿಗೆ ಹಂಚಿಕೊಳ್ಳಲು ಹೋಗಬಾರದು. ಈ ಬಗ್ಗೆ ಕೈಗೊಳ್ಳಬೇಕಾದ ಸುರಕ್ಷತಾ ಕ್ರಮಗಳನ್ನು ನಾವು ಅರಿತುಕೊಂಡು ಎಲ್ಲರಿಗೂ ತಿಳಿಸುವ ಪ್ರಯತ್ನಗಳನ್ನು ಕೂಡ ಮಾಡಬೇಕು ಎಂದು ಗಂಗೊಳ್ಳಿಯ ಕೆನರಾ ಬ್ಯಾಂಕಿನ ಆಫೀಸರ್ ಸಾಗರ್ ಕೆ ಶಿವದಾಸ್ ಅವರು ಅಭಿಪ್ರಾಯ ಪಟ್ಟರು. ಅವರು ಗಂಗೊಳ್ಳಿಯ ಕೆನರಾ ಬ್ಯಾಂಕ್, ವತಿಯಿಂದ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಕ್ರಮ ಅಕೌಂಟ್ ಗಳನ್ನು ತಡೆಗಟ್ಟುವ ಕುರಿತು ಮತ್ತು ಸೈಬರ್ ಸುರಕ್ಷತಾ ಕ್ರಮಗಳ ಬಗ್ಗೆ ಮಾಹಿತಿ ನೀಡಿ ಮಾತನಾಡಿದರು. ಕೆನರಾ ಬ್ಯಾಂಕಿನ ಸೀನಿಯರ್ ಮ್ಯಾನೇಜರ್ ವಾಸು ದೇವಾಡಿಗ ಶುಭ ಹಾರೈಸಿದರು. ಸರಸ್ವತಿ ವಿದ್ಯಾಲಯದ ಪ್ರಾಂಶುಪಾಲೆ ಕವಿತಾ ಎಂ. ಸಿ. ಅಧ್ಯಕ್ಷತೆ ವಹಿಸಿದ್ದರು. ಕೆನರಾ ಬ್ಯಾಂಕ್ ಸಿಬ್ಬಂದಿ ರಾಜೇಂದ್ರ ಬಿ. ಟಿ. ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಶ್ರೇಷ್ಠ ಮೇಸ್ತ ಸ್ವಾಗತಿಸಿದರು. ವಾಣಿಜ್ಯಶಾಸ್ತ್ರ ಉಪನ್ಯಾಸಕ ನರೇಂದ್ರ ಎಸ್. ಗಂಗೊಳ್ಳಿ ನಿರ್ವಹಿಸಿ, ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಜೀವನದಲ್ಲಿ ಮೋಕ್ಷ ಸಾಧನೆ ಪಡೆಯುವುದೇ ಪ್ರಧಾನ ಅಂಶವಾಗಿದ್ದು ಮೋಕ್ಷ ಸಾಧನೆಗೆ ಭಗವಂತನ ಸಾಕ್ಷಾತ್ಕಾರ ಆಗಬೇಕಾಗಿದ್ದು ಇದಕ್ಕೆ ಪುಣ್ಯಕ್ಷೇತ್ರಗಳ ಯಾತ್ರೆ ಮಾಡಿ ದೇಶವನ್ನು ಸುತ್ತುವುದರೊಂದಿಗೆ ಜೀವನದನುಭವವವು ಮೋಕ್ಷ ಸಾಧಿಸಲು ಸಾಧ್ಯ ಎಂದು ವಿದ್ವಾನ್ ಮಂಜುನಾಥ ಭಟ್ ಹರೆಗೋಡು ಹೇಳಿದರು. ಅವರು ಕಿರಿಮಂಜೇಶ್ವರದ ಶ್ರೀ ಗುರುನರಸಿಂಹ ಸಭಾಭವನದಲ್ಲಿ ಕುಂದಾಪುರ ತಾಲೂಕು ದ್ರಾವಿಡ ಬ್ರಾಹ್ಮಣ ಪರಿಷತ್ತು ರಿ. ಉಪ್ಪುಂದ ವಲಯ ಇದರ ಶ್ರಾವಣ ಸಂದ್ಯಾ ಕಾರ್ಯಕ್ರಮ ಹಾಗೂ ಕಾಶಿ ಸಮಾರಾಧನೆಯ ಧಾರ್ಮಿಕ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿ ಮಾತನಾಡಿದರು. ಹುಟ್ಟಿನಿಂದ ಯಾರು ಬ್ರಾಹ್ಮಣನಾಗಲು ಸಾಧ್ಯವಿಲ್ಲ ಶೋಡಷಕರ್ಮ ನೀಡಿ, ವೇದಗಳ ಅದ್ಯಯನ ಮೂಲಕ ಎಲ್ಲಾ ವಿದ್ಯಗಳನ್ನು ಕಲಿತು ಸಂಸ್ಕಾರಗಳನ್ನು ಪಡೆದಿದ್ದರೆ ಮಾತ್ರ ಬ್ರಾಹ್ಮಣನಾಗುತ್ತಾನೆ ಎಂದರು. ನಿವೃತ್ತ ಉಪನ್ಯಾಸಕ ಕೊಡೇರಿ ವಾಸುದೇವ ಕಾರಂತರು ಜ್ಯೋತಿ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಉಪ್ಪುಂದ ವಲಯಾದ್ಯಕ್ಷ ಯು. ಸಂದೇಶ ಭಟ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ವೇದಿಕೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗಣೇಶ ರಾವ್ ಕುಂಭಾಶಿ, ತಾಲೂಕು ಉಪಾಧ್ಯಕ್ಷ ಬಿ.…
