ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸಂತೋಷ ಎನ್ನುವುದು ಒಂದು ಮಾನಸಿಕ ಸ್ಥಿತಿ. ಭಾವನಾತ್ಮಕ ಸಂಬಂಧಗಳು ಕಡಿಮೆಯಾಗುತ್ತಿರುವ ಇಂದಿನ ಕಾಲಘಟ್ಟದಲ್ಲಿ ಇಂತಹ ಸಂಘಟನೆಗಳಲ್ಲಿ ಸಕ್ರೀಯರಾಗುವ ಮೂಲಕ ನಮ್ಮ ಜೀವನದ ವಿಶೇಷ ಸಂದರ್ಭಗಳನ್ನು ನಮ್ಮ ಧಾರ್ಮಿಕ, ಸಾಂಸ್ಕೃತಿಕ ಚೌಕಟ್ಟಿನಲ್ಲಿ ಅರ್ಥಪೂರ್ಣವಾಗಿ ಆಚರಿಸಿ ಸಂಭ್ರಮಿಸಲು ಸಾಧ್ಯವಿದೆ. ಎಲ್ಲವನ್ನೂ ಹಿತಮಿತವಾಗಿ ನಾವು ಆಚರಿಸಲು ಮನಸ್ಸು ಮಾಡಬೇಕು ಎಂದು ಸೀನಿಯರ್ ಚೇಂಬರ್‌ನ ಯುವ ವ್ಯವಹಾರಗಳ ರಾಷ್ಟ್ರೀಯ ನಿರ್ದೇಶಕ ಹುಸೈನ್ ಹೈಕಾಡಿ ಹೇಳಿದರು. ಅವರು ನಾವುಂದ ಪದವಿ ಪೂರ್ವ ಕಾಲೇಜಿನಲ್ಲಿ ಉಪ್ಪುಂದ ಸಿನೀಯರ್ ಛೇಂಬರ್‌ನ ನೂತನ ರಚನೆಯ ವಿದ್ಯಾರ್ಥಿ ಯುವಪಡೆಗಳ (ಯೂಥ್ ವಿಂಗ್) ಪದಪ್ರದಾನ ಸಮಾರಂಭ ಉದ್ಘಾಟಿಸಿ, ನೂತನ ಪದಾಧಿಕಾರಿಗಳುಗೆ ಪ್ರಮಾಣ ವಚನ ಬೋಧಿಸಿ ಮಾತನಾಡಿದರು. ಸಂಘಟಿತ ಸಮಾಜ ನಿರ್ಮಾಣವಾಗಬೇಕಾದರೆ, ಸಂಘ ಸಂಸ್ಥೆಗಳ ಪಾತ್ರ ಮಹತ್ವದಾಗಿದ್ದು, ಸಿನೀಯರ್ ಛೇಂಬರ್‌ನಲ್ಲಿ ಪಡೆದುಕೊಂಡ ಅನುಭವ ಗಟ್ಟಿಗೊಳಿಸುವ ಉದ್ದೇಶದಿಂದ ವಿದ್ಯಾರ್ಥಿ ತಂಡದ ಎಲ್ಲಾ ಒಡನಾಡಿಗಳು ಜೊತೆ ಸೇರಿ ಒಳ್ಳೆಯ ವಿಚಾರಗಳನ್ನು ಪರಸ್ಪರ ವಿನಿಮಯ ಮಾಡಿಕೊಂಡು ನಿಸ್ವಾರ್ಥ ಸೇವಾ ಮನೋಭಾವನೆಯಿಂದ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸ್ಪಂದಿಸುವ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉಡುಪಿ ಸಿ.ಎಸ್.ಐ ಲೊಂಬಾರ್ಡ್ ಮೆಮೋರಿಯಲ್ ಆಸ್ಪತ್ರೆಯಲ್ಲಿ ಆಯೋಜಿಸಿದ್ದ ರಾಜ್ಯಮಟ್ಟದ ಕ್ವಿಜ್ ಸ್ಪರ್ಧೆಯಲ್ಲಿ ಒಟ್ಟು 30 ತಂಡಗಳು ಭಾಗವಹಿಸಿದ್ದು, ಅವುಗಳಲ್ಲಿ ಹಟ್ಟಿಅಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳು ವಿಜೃಂಭಣೀಯ ಯಶಸ್ಸು ಸಾಧಿಸಿದ್ದಾರೆ. 10ನೇ ತರಗತಿಯ ವಿದ್ಯಾರ್ಥಿನಿಯರಾದ ರಿಶಿಕಾ ದೇವಾಡಿಗ ಮತ್ತು ಅದಿತಿ ಪೂಜಾರಿ ಅವರು ಪ್ರಥಮ ಬಹುಮಾನವನ್ನು ಗಳಿಸುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಅದೇ ರೀತಿ, ಅವನಿ ಶೆಟ್ಟಿ ಮತ್ತು ಪರಿಣಿಕಾ ಅವರು ಮೂರನೇ ಬಹುಮಾನ ಪಡೆದು ತಮ್ಮ ಶೈಕ್ಷಣಿಕ ಸಾಮರ್ಥ್ಯವನ್ನು ತೋರಿಸಿದ್ದಾರೆ. ವಿದ್ಯಾರ್ಥಿಗಳ ಪರಿಶ್ರಮ, ತಾಳ್ಮೆ ಮತ್ತು ನಿರಂತರ ಅಭ್ಯಾಸಕ್ಕೆ ಇದು ಫಲ. ಈ ಸಾಧನೆ ನಮ್ಮ ಶಾಲೆಯ ಶೈಕ್ಷಣಿಕ ಮಟ್ಟವನ್ನು ಮತ್ತಷ್ಟು ಎತ್ತಿ ಹಿಡಿದಿದೆ: ಶರಣ ಕುಮಾರ, ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿ ಮತ್ತು ಶಾಲಾ ಪ್ರಾಂಶುಪಾಲರು
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ(ಎಂ ಐ ಟಿ ಕೆ) ಯಲ್ಲಿ ಹದಿನೆಂಟನೇ ಪದವಿ ಪ್ರದಾನ ಕಾರ್ಯಕ್ರಮ ಅದ್ಧೂರಿಯಾಗಿ ನಡೆಸಲಾಯಿತು. ಮುಖ್ಯ ಅತಿಥಿಗಳಾಗಿ ಎಮ್ ಎಸ್ ಎಮ್ ಇ( ಭಾರತ ಸರ್ಕಾರ) ನಿವೃತ್ತ ಡೆಪ್ಯೂಟಿ ಡೈರೆಕ್ಟರ್ ಮತ್ತು ಎ ಎಮ್ ಎಸ್ ಇಂಡಿಯಾ ಇದರ ಕೊ ಪೌಂಡರ್ ಆಗಿರುವ ಗೋಪಿನಾಥ ರಾವ್, ಐಈಡಿಎಸ್ ಅವರು ಆಗಮಿಸಿ, ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿ, ಸರ್ಕಾರದಿಂದ ಲಭ್ಯವಿರುವ ಫ಼ಂಡಿಂಗ್ ಅವಕಾಶಗಳು ಮತ್ತು ಅದರ ಪ್ರಯೋಜನಗಳ ಬಗ್ಗೆ ಸವಿವರವಾಗಿ ತಿಳಿಸಿದರು. ಉದ್ಯೋಗಿ ಮತ್ತು ಉದ್ಯೋಗದಾತರ ನಡುವಿನ ವ್ಯತ್ಯಾಸದ ಬಗ್ಗೆ ಮನದಟ್ಟು ಮಾಡಿ ತಾವು ಉದ್ಯೋಗ ಕೊಡಿಸುವ ಉದ್ಯಮಿ ಆಗುವ ಧ್ಯೇಯ ಇಟ್ಟುಕೊಂಡು ಆ ನಿಟ್ಟಿನಲ್ಲಿ ಪ್ರಯತ್ನ ಪಡಬೇಕು ಎಂದು ಆಶಿಸಿದರು. ಅಧ್ಯಕ್ಷತೆ ವಹಿಸಿದ ಐ ಎಂ ಜೆ ಸಂಸ್ಥಗಳ ಅಕಾಡಮಿಕ್ ಡೈರೆಕ್ಟರ್ ಡಾ. ಎಸ್ ಎನ್ ಭಟ್ ಮಾತನಾಡಿ, ಕಲಿಕೆ ಎನ್ನುವುದು ನಿರಂತರವಾದುದು ಅದನ್ನು ಎಂದಿಗೂ ನಿಲ್ಲಿಸಬೇಡಿ, ನಿಮ್ಮ ಮುಂದಿನ ಪ್ರಯಾಣದಲ್ಲಿ ಅದು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಭಾರತದ ಸ್ವಾತಂತ್ರ್ಯದ ಕನಸಿಗೆ ಮೊತ್ತ ಮೊದಲ ಶ್ರೀಕಾರ ಹಾಕಿದವರು ಉಳ್ಳಾಲದ ವೀರ ರಾಣಿ ಅಬ್ಬಕ್ಕ. ಹೆಣ್ಣು ಸರ್ವಶಕ್ತೆ, ಅಶಕ್ತೆಯಲ್ಲ. ಅಪರಿಮಿತ ಧೈರ್ಯದಿಂದ ಮುನ್ನುಗ್ಗುವ ಆತ್ಮವಿಶ್ವಾಸ, ಸವಾಲನ್ನು ಎದುರಿಸಬಲ್ಲೆನೆಂಬ ಭರವಸೆ ಮತ್ತು ಛಲ, ಸ್ವಂತ ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯವನ್ನು ರಾಣಿ ಅಬ್ಬಕ್ಕಳಂತೆ ಆಧುನಿಕ ಮಹಿಳೆಯರು ಹೊಂದಿದರೆ ಮಹಿಳಾ ಸಶಕ್ತೀಕರಣ ಸಾಧ್ಯವೆಂದು ಕಾಳಾವರ ಕಾಲೇಜಿನ ಉಪನ್ಯಾಸಕಿ ಶರಾವತಿ ಅಭಿಪ್ರಾಯ ವ್ಯಕ್ತಪಡಿಸಿದರು. ಅವರು ಕಾಳಾವರ ವರದರಾಜ ಎಂ. ಶೆಟ್ಟಿ ಸರಕಾರಿ ಪ್ರಥಮ ದರ್ಜೆ ಕಾಲೇಜು, ಕೋಟೇಶ್ವರ ಕುಂದಾಪುರ ಐಕ್ಯೂಎಸಿ, ಇತಿಹಾಸ ವಿಭಾಗ ಹಾಗೂ ಕರ್ನಾಟಕ ರಾಜ್ಯ ಮಾಹಾವಿದ್ಯಾಲಯ ಶಿಕ್ಷಕ ಸಂಘ ರಿ. ಮಂಗಳೂರು ಇವರು ಜಂಟಿ ಆಶ್ರಯದಲ್ಲಿ ಏರ್ಪಡಿಸಿದ ರಾಣಿ ಅಬ್ಬಕ್ಕ @ 500 ಇದರ ಪ್ರೇರಣಾದಾಯಿ 100 ಉಪನ್ಯಾಸಗಳ ಸರಣಿಯ ಎಸಳಿನ 93ನೇ ಕಾರ್ಯಕ್ರಮದಲ್ಲಿ ಮಾತನಾಡಿದರು. ಸಮಾರಂಭವನ್ನು ಉದ್ಘಾಟಿಸಿ, ಅಧ್ಯಕ್ಷತೆಯನ್ನು ವಹಿಸಿದ್ಧ ಕಾಲೇಜಿನ ಪ್ರಾಂಶುಪಾಲರಾದ ರಾಮರಾಯ ಆಚಾರ್ಯ ರಾಣಿ ಅಬ್ಬಕ್ಕಳ ಸಾಹಸಗಾಥೆಯನ್ನು ಕೇಳಿದ ನೀವು ಭವಿಷ್ಯದಲ್ಲಿ ಆತ್ಮ ಸ್ಥೆರ್ಯದಿಂದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ. ಬೆಂಗಳೂರು, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಲ ನಿ. ಬೆಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ. ಮಂಗಳೂರು ಇವರ ನೇತೃತ್ವದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್, ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಮಂಗಳೂರು, ನವೋದಯ ಗ್ರಾಮವಿಕಾಸ ಚಾರಿಟೇಬಲ್ ಟ್ರಸ್ಟ್ ಮಂಗಳೂರು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಕೃಷಿ ಪತ್ತಿನ ಸಹಕಾರ ಸಂಘಗಳು, ಪಟ್ಟಣ ಸಹಕಾರ ಬ್ಯಾಂಕ್‌ಗಳು, ಸೌಹಾರ್ದ ಸಹಕಾರ ಸಂಘಗಳು ಹಾಗೂ ಸಹಕಾರ ಇಲಾಖೆ ಸಹಯೋಗದಲ್ಲಿ ಮಂಗಳೂರಿನಲ್ಲಿ ಭಾನುವಾರ ನಡೆದ 72ನೇ ಅಖಿಲ ಭಾರತ ಸಹಕಾರ ಸಪ್ತಾಹ -2025ರಲ್ಲಿ ಗಂಗೊಳ್ಳಿ ಟೌನ್ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಲಿ. ಸಂಸ್ಥೆಗೆ ಉತ್ತಮ ಸಹಕಾರಿ ಸಂಘ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಲ ನಿರ್ದೇಶಕ, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉಡುಪಿ ಜಿಲ್ಲಾಮಟ್ಟದ ಬಾಲಕ-ಬಾಲಕಿಯರ 14ರ ವಯೋಮಾನದ ವಿಭಾಗದ ಥ್ರೋಬಾಲ್ ಸ್ಪರ್ಧೆಯಲ್ಲಿ ಯಡಾಡಿ ಮತ್ಯಾಡಿಯಲ್ಲಿರುವ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ಮೂವರು ವಿದ್ಯಾರ್ಥಿನಿಯರು ಪ್ರಥಮ ಸ್ಥಾನ ಗಳಿಸಿ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಜಿಲ್ಲಾ ಸಾರ್ವಜನಿಕ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಉಪ ನಿರ್ದೇಶಕರ ಕಚೇರಿ ಮತ್ತು ಬೈಂದೂರು ತಾಲೂಕು ಆಲೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆಲೂರು ಇವರ ಸಂಯುಕ್ತ ಆಶ್ರಯದಲ್ಲಿ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಎಂಟನೇ ತರಗತಿಯ ತನಿಷ್ಕಾ, ಸಾನಿಕಾ ಮತ್ತು ಪ್ರೇಕ್ಷಾ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿರುವ ವಿದ್ಯಾರ್ಥಿನಿಯರು. ಸಮಾರೋಪ ಸಮಾರಂಭದಲ್ಲಿ ವಿಜೇತರಿಗೆ ಫಲಕ ಪದಕ ಮತ್ತು ಪ್ರಶಸ್ತಿ ಪತ್ರಗಳನ್ನು ನೀಡಿ ಪ್ರೋತ್ಸಾಹಿಸಲಾಯಿತು. ಸುಜ್ಞಾನ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಡಾ. ರಮೇಶ್ ಶೆಟ್ಟಿ, ಕಾರ್ಯದರ್ಶಿ ಪ್ರತಾಪ್ ಚಂದ್ರ ಶೆಟ್ಟಿ, ಖಜಾಂಚಿ ಭರತ್ ಶೆಟ್ಟಿ ಹಾಗೂ ಪ್ರಾಂಶುಪಾಲ ಪ್ರದೀಪ್ ಕೆ. ವಿಜೇತ ವಿದ್ಯಾರ್ಥಿನಿಯರನ್ನು ಅಭಿನಂದಿಸಿದ್ದಾರೆ. ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕ ಸೂರ್ಯ ಕ್ರೀಡಾಪಟುಗಳಿಗೆ ತರಬೇತಿಯನ್ನು ನೀಡಿದ್ದರು. ಸುಜ್ಞಾನ ಪದವಿ ಪೂರ್ವ ಕಾಲೇಜು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕ ಅನಕ್ಷರಸ್ಥೆಯಾಗಿಯೂ ಅವರು ಮಾಡಿದ ಕಾರ್ಯ ಶಿಕ್ಷಣವಂತರಾದ ನಮಗೆಲ್ಲರಿಗೂ ಮಾದರಿ. ಹೀಗಾಗಿ ಅಗಲಿದ ಹಿರಿಯ ಜೀವಕ್ಕೆ ಶಾಂತಿ ಕೋರುವ ಮೂಲಕ ಅವರ ಜೀವನ ಮೌಲ್ಯಗಳನ್ನುವಿದ್ಯಾರ್ಥಿಗಳು ಅಳವಡಿಸಿಕೊಳ್ಳಬೇಕು ಎಂದು ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ. ಉಮೇಶ್ ಶೆಟ್ಟಿ ಹೇಳಿದರು. ಅವರು ಇಲ್ಲಿನ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗ ಆಯೋಜಿಸಿದ ವೃಕ್ಷ ಮಾತೆಗೆ ನುಡಿನಮನ ಕಾರ್ಯಕ್ರಮದಲ್ಲಿ ಪುಷ್ಪ ನಮನ ಸಲ್ಲಿಸಿ ನುಡಿ ನಮನದ ಮಾತುಗಳನ್ನಾಡಿದರು. ಈ ಸಂದರ್ಭದಲ್ಲಿ ಕಾಲೇಜಿನ ಉಪ-ಪ್ರಾಂಶುಪಾಲ ಡಾ. ಚೇತನ್ ಶೆಟ್ಟಿ ಕೋವಾಡಿ ಆಶಯ ನುಡಿಗಳನ್ನಾಡಿದರು. ಕನ್ನಡ ವಿಭಾಗದ ಪ್ರಾಧ್ಯಾಪಕರಾದ ರೇಷ್ಮಾ ಶೆಟ್ಟಿ ಸ್ವಾಗತಿಸಿ, ಪ್ರವೀಣಾ ಎಮ್. ಪೂಜಾರಿ ವಂದಿಸಿ, ರಶ್ಮಿತಾ ಶೆಟ್ಟಿ ನಿರೂಪಿಸಿದರು. ವಿದ್ಯಾರ್ಥಿಗಳು ಮತ್ತು ಬೋಧಕ-ಬೋಧಕೇತರರು ಉಪಸ್ಥಿತರಿದ್ದು ಮೌನ ಪ್ರಾರ್ಥನೆ ಸಲ್ಲಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನ ಆರ್.ಎನ್. ಶೆಟ್ಟಿ ಸಭಾಂಗಣದಲ್ಲಿ ರಕ್ಷಕ ಶಿಕ್ಷಕ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು. ಕಾಲೇಜಿನ ವಿಶ್ವಸ್ಥ ಮಂಡಳಿಯ ಹಿರಿಯ ಸದಸ್ಯರಾದ ರಾಜೇಂದ್ರ ತೋಳಾರ್ ಸಭೆಯನ್ನುದ್ದೇಶಿಸಿ ಮಾತನಾಡಿದರು. ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಶುಭಕರ ಆಚಾರಿ ಸಾಕ್ಷ್ಯ ನಿದರ್ಶನಗಳ ಮೂಲಕ ವಿದ್ಯಾರ್ಥಿಗಳಿಗೆ ಕಿವಿಮಾತುಗಳನ್ನು ತಿಳಿಸಿದರು. ಸಭಾಧ್ಯಕ್ಷತೆಯನ್ನು ವಹಿಸಿದ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ.ಜಿ.ಎಂ ಗೊಂಡ ಪ್ರಾಸ್ತಾವಿಕ ನುಡಿಗಳನ್ನಾಡಿದರು. ವಿದ್ಯಾರ್ಥಿ ಕ್ಷೇಮ ಪಾಲನಾ ಅಧಿಕಾರಿ ಡಾ. ಸರೋಜಾ ಎಂ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಸಭೆಯಲ್ಲಿ ವಿದ್ಯಾರ್ಥಿಗಳ ಪಾಲಕರುಗಳು ಕೆಲವು ಸಲಹೆಗಳನ್ನು ನೀಡಿದರು. ವಿದ್ಯಾರ್ಥಿನಿ ಭ್ರಂಗ ಉಡುಪ ಮತ್ತು ಧರಣಿ ಪ್ರಾರ್ಥನೆ ಗೈದರು. ವಾಣಿಜ್ಯಶಾಸ್ತ್ರ ಉಪನ್ಯಾಸಕ ವಿಧ್ಯಾದರ್ ಸರ್ವರನ್ನು ಸ್ವಾಗತಿಸಿದರು. ಆಂಗ್ಲ ಭಾಷಾ ಉಪನ್ಯಾಸಕ ಸೂರಜ್ ಭಟ್ ಸರ್ವರನ್ನು ವಂದಿಸಿದರು. ರೇಣುಕಾ ಪ್ರಸಾದ್ ಕಾರ್ಯಕ್ರಮ ನಿರ್ವಹಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ನಾಗಮಂಗಲದಲ್ಲಿ ನಡೆದ ರಾಜ್ಯ ಮಟ್ಟದ 14 ಮತ್ತು 17 ವಯೋಮಾನದ ಬಾಲಕ ಬಾಲಕಿಯರ ಯೋಗಾಸನ ಸ್ಪರ್ಧೆಯಲ್ಲಿ ಮೈಸೂರು ವಿಭಾಗವನ್ನು ಪ್ರತಿನಿಧಿಸಿದ ಆಳ್ವಾಸ್ ಶಾಲೆಯ ವಿದ್ಯಾರ್ಥಿಗಳು 14 ವರ್ಷ ವಯೋಮಿತಿಯ ಬಾಲಕ ಬಾಲಕಿಯರ ಹಾಗೂ 17 ವರ್ಷ ವಯೋಮಿತಿಯ ಬಾಲಕ ಬಾಲಕಿಯರ ತಂಡ ಪ್ರಶಸ್ತಿ ಪಡೆದುಕೊಳ್ಳುವಲ್ಲಿ ನಿರ್ಣಾಯಕ ಪಾತ್ರವಹಿಸಿದ್ದಾರೆ. ಆಳ್ವಾಸ್ ಶಾಲೆಯ 12 ಯೋಗ ಕೀಡಾಪಟುಗಳು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗುವ ಮೂಲಕ ಮಹೋನ್ನತ ಸಾಧನೆ ಮೆರೆದಿದ್ದಾರೆ. ಫಲಿತಾಂಶ: ಅಂಡರ್ 14 ಆರ್ಟಿಸ್ಟಿಕ್ ಯೋಗ ಪೇರ್ ಬಾಲಕರ ವಿಭಾಗದಲ್ಲಿ: ಶ್ಯಾಮ ಮತ್ತು ಶಶಿಕುಮಾರ್ – ಪ್ರಥಮಅಂಡರ್ 14 ರಿದಮಿಕ್ ಯೋಗ ಪೇರ್ ಬಾಲಕರ ವಿಭಾಗದಲ್ಲಿ: ಆದರ್ಶ್ ಮತ್ತು ಶಶಾಂಕ್ – ಪ್ರಥಮಅಂಡರ್ 14 ಆರ್ಟಿಸ್ಟಿಕ್ ಯೋಗ ಸಿಂಗಲ್‌ನಲ್ಲಿ ಬಾಲಕರ ವಿಭಾಗದಲ್ಲಿ: ಆದರ್ಶ ಕೆ.ಎಸ್ – ಪ್ರಥಮಅಂಡರ್ 14 ಟ್ರೆಡಿಶನಲ್ ಯೋಗ ಬಾಲಕರ ವಿಭಾಗದಲ್ಲಿ: ಶಶಿಕುಮಾರ್ ವಿ.ಜಿ – ಪ್ರಥಮಅಂಡರ್ 17 ಆರ್ಟಿಸ್ಟಿಕ್ ಯೋಗ ಪೇರ್ ಬಾಲಕರ ವಿಭಾಗದಲ್ಲಿ: ಕಾರ್ತಿಕ್ ಮತ್ತು ಪ್ರಜ್ವಲ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಉಡುಪಿ ನಗರಸಭೆಯ 2024-25ನೇ ಸಾಲಿನ ವಿವಿಧ ಕಾರ್ಯಕ್ರಮದಡಿ ಮೀಸಲಿರಿಸಿದ ಅನುದಾನದ ಉಳಿಕೆ ಮೊತ್ತದಲ್ಲಿ ವಿವಿಧ ಸೌಲಭ್ಯಗಳಿಗೆ ಅನುದಾನ ನೀಡುವುದಕ್ಕಾಗಿ ಆಸಕ್ತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಎಸ್.ಎಫ್.ಸಿ ಅನುದಾನದ ಶೇ. 5ರ ವಿಕಲಚೇತನ ಕಾರ್ಯಕ್ರಮದಡಿ ಸಣ್ಣ ಉದ್ದಿಮೆ, ಮನೆ ದುರಸ್ಥಿ, ಕೃತಕ ಅಂಗ ಜೋಡಣೆ / ಶಸ್ತçಚಿಕಿತ್ಸೆಗೆ ಧನಸಹಾಯ, ರಾಜ್ಯ, ರಾಷ್ಟ್ರೀಯ ಮಟ್ಟದ ಕ್ರೀಡೆ / ಸಾಂಸ್ಕೃತಿಕ ಹಾಗೂ ಇತರೆ ವ್ಯಾಸಾಂಗೇತರ ಚಟುವಟಿಕೆಗಳಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಪ್ರೋತ್ಸಾಹಧನ ಹಾಗೂ ಎಸ್.ಎಸ್.ಎಲ್.ಸಿ ಯಿಂದ ಮಾಸ್ಟರ್ ಡಿಗ್ರಿವರೆಗಿನ ವಿದ್ಯಾರ್ಥಿಗಳಿಗೆ ಸಹಾಯಧನ, ಎಸ್.ಎಫ್.ಸಿ / ಮುಕ್ತನಿಧಿ ಮತ್ತು ಪುರಸಭಾ ನಿಧಿಯ ಶೇ. 7.25 ರ ಇತರೆ ಹಿಂದುಳಿದ ವರ್ಗಗಳ ಕಲ್ಯಾಣ ಕಾರ್ಯಕ್ರಮ, ಪ.ಜಾತಿ/ಪಂಗಡದ ಕಲ್ಯಾಣ ಕಾರ್ಯಕ್ರಮ ಹಾಗೂ ಟಿ.ಎಸ್.ಪಿ (ಪ.ಪಂಗಡದ ಅನುದಾನ) ಕಾರ್ಯಕ್ರಮದಡಿ ಪಿ.ಯು.ಸಿ ಯಿಂದ ಉತ್ತೀರ್ಣರಾದ ಪದವಿ, ಬಿ.ಎ, ಪಿಎಸ್‌ಸಿ, ಬಿಕಾಂ, ಬಿಬಿಎ, ಬಿಬಿಎಂ, ಬಿಸಿಎ ಇತರೆ ಪದವಿ ಮೊದಲ ವರ್ಷದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಮತ್ತು ಎಸ್.ಎಸ್.ಎಲ್.ಸಿ ಯಿಂದ ಉತ್ತೀರ್ಣರಾದ ಪಿ.ಯು.ಸಿ, ಐ.ಟಿ.ಐ…
