Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಮೀನುಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಜಿಲ್ಲಾ ವಲಯ ಯೋಜನೆಯಡಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಸಾಮಾನ್ಯ ವರ್ಗಕ್ಕೆ ಸೇರಿದ ಮೀನುಗಾರರಿಗೆ ಉಚಿತವಾಗಿ ಮೀನುಗಾರಿಕಾ ಸಲಕರಣೆ ಕಿಟ್ಟು ವಿತರಣೆ ಯೋಜನೆ, ಮತ್ಸ್ಯವಾಹಿನಿ ಯೋಜನೆಯಡಿ ಮೀನು ಮಾರಾಟಕ್ಕೆ ದ್ವಿಚಕ್ರ, ತ್ರಿಚಕ್ರ ಮತ್ತು ನಾಲ್ಕು ಚಕ್ರದ ವಾಹನ ಖರೀದಿಗೆ ಸಹಾಯ ಹಾಗೂ ರಾಜ್ಯ ವಲಯ ಯೋಜನೆಯಡಿ ಕರಾವಳಿ ತಾಲೂಕುಗಳ ಅರ್ಹ ಫಲಾನುಭವಿಗಳಿಗೆ ಜೀವರಕ್ಷಕ ಸಾಧನಗಳನ್ನು, ಹೆಬ್ರಿ ಮತ್ತು ಕಾರ್ಕಳ ತಾಲೂಕುಗಳ ಫಲಾನುಭವಿಗಳಿಗೆ ಮೀನುಗಾರಿಕೆ/ ಮೀನು ಮಾರಾಟ ಸಾಮಗ್ರಿಗಳನ್ನು ಉಚಿತವಾಗಿ ವಿತರಿಸುವ ಯೋಜನೆಗಳನ್ನು ಪಾರದರ್ಶಕವಾಗಿ ಹಾಗೂ ಯಶಸ್ವಿಯಾಗಿ ಅನುಷ್ಠಾನಗೊಳಿಸಲು ಜಿಲ್ಲೆಯ ಅರ್ಹ ಆಸಕ್ತ ಮೀನುಗಾರರಿಂದ ಸೇವಾ ಸಿಂಧು ಪೋರ್ಟಲ್‌ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟಂಬರ್ 20 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಡುಪಿ, ಕುಂದಾಪುರ ಹಾಗೂ ಕಾರ್ಕಳ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಛೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ದಿನನಿತ್ಯದ ಪ್ರಾರ್ಥನೆ, ವ್ಯಾಯಾಮ, ಗುಣಮಟ್ಟದ ಆಹಾರ ಪದ್ಧತಿ ಹಾಗೂ ಒತ್ತಡ ನಿರ್ವಹಣೆ ಇಂತಹ ಆರೋಗ್ಯಕರ ಅಭ್ಯಾಸಗಳಿಂದ ಮಾತ್ರ ಉತ್ತಮ ಆರೋಗ್ಯವನ್ನು ಪಡೆಯಲು ಸಾಧ್ಯ ಎಂದು ಕುಂದಾಪುರದ ಇಶಾನಿ ಮೆಡಿಕಲ್ ಸೆಂಟರ್‌ನ ವೈದ್ಯಾಧಿಕಾರಿ ಡಾ| ಸೋನಿ ಡಿಕೋಸ್ಟ ಹೇಳಿದರು. ಅವರು ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಕಾಲೇಜಿನ ಐಕ್ಯೂಎಸಿ ಘಟಕ ಹಮ್ಮಿಕೊಂಡ ‘ಪ್ರೇರಣಾ’ ಶಿಬಿರದಲ್ಲಿ ‘ಉತ್ತಮ ಆರೋಗ್ಯ’ ವಿಷಯದ ಕುರಿತು ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ, ಐಕ್ಯೂಎಸಿ ಸಂಯೋಜಕಿ ಹಾಗೂ ಇಂಗ್ಲೀಷ್ ವಿಭಾಗದ ಮುಖ್ಯಸ್ಥೆ ದೀಪಿಕಾ ಜಿ., ಆಡಳಿತ ನಿಕಾಯಕರು ಹಾಗೂ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ರಕ್ಷಿತ್ ರಾವ್ ಗುಜ್ಜಾಡಿ, ಕಾರ್ಯಕ್ರಮದ ಸಂಯೋಜಕ ಹಾಗೂ ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕ ಯೋಗೀಶ್ ಶ್ಯಾನುಭೋಗ್, ಬೋಧಕ-ಬೋಧಕೇತರ ವರ್ಗದವರು ಉಪಸ್ಥಿತರಿದ್ದರು. ಕಾರ್ಯಕ್ರಮದ ಸಂಯೋಜಕಿ ಹಾಗೂ ವಾಣಿಜ್ಯ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಪಂಚಾಯತ್ ಸಭಾಂಗಣದಲ್ಲಿ 2024-25 ನೇ ಸಾಲಿನಲ್ಲಿ ಜಿಲ್ಲಾ ಉದ್ಯಮ ಕೇಂದ್ರ  ಹಾಗೂ ವೃತ್ತಿ ಪರ ಕುಶಲ ಕರ್ಮಿಗಳಿಗೆ  ಉಚಿತ ಸುಧಾರಿತ ಉಪಕರಣ ಸರಬರಾಜು ಯೋಜನೆಯಡಿ ಬೈಂದೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಗ್ರಾಮೀಣ ಪ್ರದೇಶದ ವೃತ್ತಿ ನಿರತ ಕುಶಲ ಕರ್ಮಿಗಳಿಗೆ ಸ್ವ ಉದ್ಯೋಗ ಸಂಬಂಧ ಸುಧಾರಿತ ಉಪಕರಣಗಳನ್ನು ಬೈಂದೂರು ವಿಧಾನ ಸಭಾ ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ ಅವರು ವಿತರಿಸಿದರು. ಶಾಸಕರು ಕಾರ್ಯಕ್ರಮದಲ್ಲಿ ಮಾತನಾಡಿ, ಬೈಂದೂರು ಕ್ಷೇತ್ರವು ಸಾಕಷ್ಟು ಗ್ರಾಮೀಣ ಪ್ರದೇಶಗಳನ್ನು ಹೊಂದಿದ್ದು ವಿವಿಧ ವೃತ್ತಿಪರರು ಸ್ವ ಉದ್ಯೋಗ ಮೂಲಕ ತಮ್ಮ ಜೀವನಮಟ್ಟ ಸುಧಾರಿಸಿ ಕೊಂಡು ಗೌರವಯುತ ಜೀವನ ನಡೆಸುತ್ತಿದ್ದಾರೆ ಹಾಗೂ ತಮ್ಮ ಮುಂದಿನ ಪೀಳಿಗೆಯ ಶೈಕ್ಷಣಿಕ ಭವಿಷ್ಯ ಸೇರಿದಂತೆ ಕುಟುಂಬದ ಸುಭದ್ರ ಬದುಕಿಗೆ ಶ್ರಮಿಸುತ್ತಿದ್ದಾರೆ. ಇಂತಹ ವರ್ಗವು ಹೆಚ್ಚು ಹೆಚ್ಚು ಗ್ರಾಮೀಣ ಭಾಗದಲ್ಲಿ ಏಳಿಗೆ ಕಾಣುವುದರಿಂದ ಇಡೀ ಸಮಾಜ ಅಭಿವೃದ್ಧಿ ಹೊಂದಲು ಸಾಧ್ಯವಾಗುತ್ತದೆ. ಹಾಗಾಗಿ ಪಡೆದ ಸವಲತ್ತುಗಳನ್ನು ಸದುಪಯೋಗ ಪಡಿಸಿಕೊಂಡು ಸ್ವಾವಲಂಬಿಗಳಾಗಿ ಬದುಕು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ತಾವು ಕಲಿತ ಶಾಲೆಯಲ್ಲಿ ನಿಕಟವಾದ ಸಂಪರ್ಕವನ್ನು ಇಟ್ಟುಕೊಂಡು ಕಳೆದ ಬಹಳ ವರ್ಷಗಳಿಂದ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನೂ ಗುರುತಿಸಿ ಪ್ರೋತ್ಸಾಹಿಸುತ್ತಿರುವುದು ಇತರ ವಿದ್ಯಾರ್ಥಿಗಳಿಗೆ ಸ್ಫೂರ್ತಿದಾಯಕವಾಗುತ್ತದೆ. ಈ ಕಾರ್ಯದಿಂದಾಗಿ ಮತ್ತಷ್ಟು ವಿದ್ಯಾರ್ಥಿಗಳು ಕಲಿಕೆಯಲ್ಲಿ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ಮುಂದೆ ಬರಲು ಉತ್ತೇಜಿಸುತ್ತಿರುವ ಇವರ ಕಾರ್ಯ ಮೆಚ್ಚುಗೆ ಪಡುವಂತದ್ದು ಎಂದು ಕರ್ನಾಟಕ ಪಬ್ಲಿಕ್ ಸ್ಕೂಲ್ ಕೋಟೇಶ್ವರ ಇದರ ಪ್ರಾಂಶುಪಾಲರಾದ ಪ್ರಕಾಶ ಶೆಟ್ಟಿ ಹೇಳಿದರು. ಅವರು ಕೋಟೇಶ್ವರ ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರೌಢಶಾಲಾ ವಿಭಾಗ ಚೇತನಾ ಸಭಾಭವನದಲ್ಲಿ ಶುಕ್ರವಾರ ಜರುಗಿದ 2002-03ನೇ ಸಾಲಿನ ಸ್ನೇಹ ಸಂಗಮ ಹಳೆ ವಿದ್ಯಾರ್ಥಿ ಸಂಘದ 14ನೇ ವರ್ಷದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಉಪ ಪ್ರಾಂಶುಪಾಲರಾದ ಚಂದ್ರಶೇಖರ ಶೆಟ್ಟಿ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಶಾಲಾ ಎಸ್‌ಡಿಎಮ್‌ಸಿ ಸದಸ್ಯ ಅಶೋಕ ಜಿ., ಸ್ನೇಹ ಸಂಗಮ ಹಳೇ ವಿದ್ಯಾರ್ಥಿ ಸಂಘದ ಅಧಕ್ಷ ಗೀರಿಶ್ ಪೂಜಾರಿ, ಸದಸ್ಯರಾದ ರವಿ ದೇವಾಡಿಗ, ಯೋಗೀಶ್ ದೇವಾಡಿಗ, ರಾಘವೇಂದ್ರ ಎಸ್ ಬೀಜಾಡಿ ಉಪಸ್ಥಿತರಿದ್ದರು. ಕಲಿಕೆ,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಕೆರಾಡಿ ಗ್ರಾಮದ ಚಪ್ಪರಕ/ ಕೋಣ್‌ಬೇರು ಎಂಬಲ್ಲಿ ಲಾರಿ ಹಾಗೂ ಬೈಕ್‌ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್‌ ಸವಾರ ದಾರುಣವಾಗಿ ಮೃತಪಟ್ಟ ಘಟನೆ ಗುರುವಾರ ಸಂಜೆ ನಡೆದಿದೆ. ಮೃತಪಟ್ಟ ವ್ಯಕ್ತಿ ಬೈಕ್ ಸವಾರ ರೋಧಿ ಲಾಲ್‌ ‌ಎಂದು ತಿಳಿದುಬಂದಿದೆ. ಬೈಕ್ ಸವಾರ ಕೆರಾಡಿ ಕಡೆಯಿಂದ ಕಾರಿಬೈಲು ಕಡೆಯಿಂದ ಕೆರಾಡಿ ಕಡೆಗೆ ಗುಂಡು ಎಂಬವರು ಚಲಾಯಿಸಿಕೊಂಡು ಲಾರಿಗೆ ಎದುರುಗಡೆಯಿಂದ ಡಿಕ್ಕಿ ಹೊಡೆದು ರಸ್ತೆಯಲ್ಲಿ ಬೈಕ್‌ ಸಹಿತ ಬಿದ್ದಿದ್ದು ಲಾರಿಯ ಚಕ್ರ ಬೈಕ್‌ ಚಾಲಕ ರೋಧಿ ಲಾಲ್‌ ತಲೆಯ ಮೇಲೆ ಹತ್ತಿದ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಈ ಬಗ್ಗೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಬೈಂದೂರು ಸೇನೇಶ್ವರ ದೇವಾಸ್ಥಾನದ ಅರ್ಚಕರಾದ ಕೆರೆಕಟ್ಟೆ ಸೀತಾರಾಮ ಅಡಿಗ (72) ಅವರು ಗುರುವಾರ ರಾತ್ರಿ ಅಸೌಖ್ಯದಿಂದ ಮೃತಪಟ್ಟಿದ್ದಾರೆ. ಮೃತರು ಪತ್ನಿ, ಎರಡು ಗಂಡು, ಒಂದು ಹೆಣ್ಣು ಹಾಗೂ ಕುಟುಂಬದವರನ್ನು ಅಗಲಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನ ಭತ್ತದ ಬಿತ್ತನೆ ಗುರಿ 35,000 ಹೆಕ್ಟೇರ್ ಇದ್ದು, ಈವರೆಗೆ 26,050 ಹೆಕ್ಟೇರ್ ಬಿತ್ತನೆಯಾಗಿರುತ್ತದೆ. ಜೂನ್ ಮಾಹೆಯ 2ನೇ ವಾರದಿಂದ ಬಿತ್ತನೆ ಪ್ರಾರಂಭಗೊಂಡಿದ್ದು, ಪ್ರಸ್ತುತ ಭರದಿಂದ ಸಾಗುತ್ತಿದ್ದು, ಆಗಸ್ಟ್ 2ನೇ ವಾರದಲ್ಲಿ ಬಿತ್ತನೆ ಪೂರ್ಣಗೊಳ್ಳುವ ನಿರೀಕ್ಷೆಯಿರುತ್ತದೆ. ಜಿಲ್ಲೆಯ ಮುಂಗಾರು ಹಂಗಾಮಿನ ರಸಗೊಬ್ಬರ ಬೇಡಿಕೆ 8,404 ಮೆ.ಟನ್ ಇದ್ದು, ಜುಲೈ ಅಂತ್ಯದವರೆಗಿನ ಬೇಡಿಕೆ 5,470 ಮೆ.ಟನ್ ಆಗಿರುತ್ತದೆ. ಈವರೆಗೆ 6,809 ಮೆ.ಟನ್ ಸರಬರಾಜಾಗಿ 2,568 ಮೆ.ಟನ್ ವಿತರಣೆಯಾಗಿ, 4,240 ಮೆ.ಟನ್ ದಾಸ್ತಾನು ಲಭ್ಯವಿರುತ್ತವೆ. ಯೂರಿಯಾ ರಸಗೊಬ್ಬರದ ದಾಸ್ತಾನು ಸಾಕಷ್ಟು ಪ್ರಮಾಣದಲ್ಲಿದ್ದು, ಜುಲೈ ಅಂತ್ಯದವರೆಗಿನ ಬೇಡಿಕೆ 1,510 ಮೆ.ಟನ್ ಇದ್ದು, 2035 ಮೆ.ಟನ್ ಪೂರೈಕೆಯಾಗಿ, 792 ಟನ್ ವಿತರಣೆಯಾಗಿ 1243 ಟನ್ ದಾಸ್ತಾನು ಇರುತ್ತದೆ. ಯೂರಿಯಾ ರಸಗೊಬ್ಬರವನ್ನು ಭತ್ತದ ಕೃಷಿಯಲ್ಲಿ ಮೂಲ ಹಾಗೂ ಮೇಲುಗೊಬ್ಬರವಾಗಿ ಬಳಕೆ ಮಾಡುತ್ತಿದ್ದು, ಬೇಡಿಕೆಗೆ ಅನುಗುಣವಾಗಿ ಪೂರೈಕೆ ಇದ್ದು, ಯಾವುದೇ ಕೊರತೆ ಇರುವುದಿಲ್ಲ. ಭೌತಿಕ ಯೂರಿಯಾ ರಸಗೊಬ್ಬರಕ್ಕೆ ಪರ್ಯಾಯವಾಗಿ ನ್ಯಾನೋ ಯೂರಿಯಾವನ್ನು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಇಲ್ಲಿನ ಹಂಗಾರಕಟ್ಟೆ ಚೇತನಾ ಪ್ರೌಢಶಾಲೆಯ ಸಭಾಂಗಣದಲ್ಲಿ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮವು ಬುಧವಾರ ಜರಗಿತು. ಶಾಲಾ ಆಡಳಿತ ಮಂಡಳಿಯ ಕಾರ್ಯದರ್ಶಿ ಎಚ್. ಇಬ್ರಾಹಿಂ ಸಾಹೇಬ್ ದೀಪ ಬೆಳಗಿಸುವ ಮೂಲಕ ಸಂಸ್ಥಾಪನಾ ದಿನಾಚರಣೆಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಹಂಗಾರಕಟ್ಟೆ ಸಾಸ್ತಾನ ರೋಟರಿ ಕ್ಲಬ್‌ನ ಅಧ್ಯಕ್ಷೆ ಜ್ಯೋತಿ ಉದಯ್ ಕುಮಾರ್ ಚೇತನಾ ಇಂಟರಾಕ್ಟ್ ಪದಗ್ರಹಣ ಕಾರ್ಯಕ್ರಮವನ್ನು ನೆರವೆರಿಸಿದರು. ಐರೋಡಿ ಕರ್ಣಾಟಕ ಬ್ಯಾಂಕ್ ಪ್ರಭಂದಕ ಮಂಜುನಾಥ ಶೇಟ್ ಶಾಲಾ ವಿದ್ಯಾರ್ಥಿ ಮಾರ್ಗದರ್ಶಿಯನ್ನು ಬಿಡುಗಡೆಗೊಳಿಸಿದರು. ಯಕ್ಷ ಗುರು ಪ್ರತೀಶ್ ಕುಮಾರ್ ಹಾಗೂ ವಿದ್ಯಾರ್ಥಿನಿ ಕು.ಭೂಮಿಕಾ ಹಾಗೂ ಕು.ಸುಪ್ರಭಾ ರವರಿಂದ ಯಕ್ಷಗಾನ ಪ್ರಾತ್ಯಕ್ಷಿತೆಯೊಂದಿಗೆ ಯಕ್ಷಗಾನ ತರಬೇತಿ ತರಗತಿಯು ಉದ್ಘಾಟನೆಗೊಂಡಿತು. ಮುಖ್ಯ ಶಿಕ್ಷಕಿ ಕಲ್ಪನಾ ಶೆಟ್ಟಿ ಶಾಲಾ ಸರಕಾರದ ನೂತನ ಮಂತ್ರಿಮಂಡಲಕ್ಕೆ ಪ್ರತಿಜ್ಞಾ ವಿಧಿ ಬೋಧಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿ ಸ್ವಾಗತಿಸಿದರು. ಆಡಳಿತ ಮಂಡಳಿಯ ಅಧ್ಯಕ್ಷ ಬಿ .ಭರತ್ ಕುಮಾರ್ ಶೆಟ್ಟಿ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಫಾರ್ಚುನ್ ಕಾಲೇಜಿನ ಮುಖ್ಯಸ್ಥ ತಾರಾನಾಥ ಶೆಟ್ಟಿ, ಚೇತಾ ಪ್ರೌಢಶಾಲಾ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಕರ್ನಾಟಕ ವಿಧಾನಸಭೆಗೆ ಮೊದಲ ಬಾರಿಗೆ ಆಯ್ಕೆಯಾಗಿರುವ ಬೈಂದೂರು ಶಾಸಕ ಗುರುರಾಜ್‌ ಗಂಟಿಹೊಳೆ ಅವರು ವಿಧಾನಸಭಾ ಸಮಿತಿಯ ಮೂಲಕ ಅಮೇರಿಕಾದ ಬೋಸ್ಟನ್‌ಗೆ ಅಧ್ಯಯನ ಪ್ರವಾಸದ ಅವಕಾಶ ಪಡೆದಿದ್ದಾರೆ. ರಾಜ್ಯ ಶಾಸಕರ ರಾಷ್ಟ್ರೀಯ ಸಮಾವೇಶ ಹಾಗೂ ರಾಷ್ಟ್ರೀಯ ಶಾಸಕರ ಸಮಾವೇಶ ಸಂಸ್ಥೆಗಳ ಆಶ್ರಯದಲ್ಲಿ ಅಮೇರಿಕಾದ ಬೋಸ್ಟನ್ ನಗರದಲ್ಲಿ ಶಾಸಕಾಂಗ ಶೃಂಗಸಭೆ 2025 ನಡೆಯಲಿದ್ದು, ಈ ಶೃಂಗಸಭೆಯಲ್ಲಿ ಭಾರತದ ಸಂಸದರು, ವಿವಿಧ ರಾಜ್ಯಗಳ ವಿಧಾನ ಸಭೆ ಹಾಗೂ ವಿಧಾನ ಪರಿಷತ್ತಿನ ಸದಸ್ಯರು, ಸಚಿವರುಗಳು, ರಾಜಕೀಯ ತಜ್ಞರು, ನೀತಿ ನಿರೂಪಕರು, ರಾಜಕೀಯ ಮುತ್ಸದ್ದಿಗಳು ಸೇರಿದಂತೆ ವಿವಿಧ ಗಣ್ಯರು ಪಾಲ್ಗೊಳ್ಳಲಿದ್ದಾರೆ. ಈ ಶೃಂಗಸಭೆಯಲ್ಲಿ ಪ್ರಜಾತಂತ್ರ ಗಟ್ಟಿಗೊಳಿಸುವಿಕೆಯಲ್ಲಿ ಶಾಸನ ಸಭೆಗಳ ಪಾತ್ರ, ಶಾಸನ ಸಭೆಗಳ ಪಕ್ಷಾತೀತ ನಿರ್ವಹಣೆ, ಶಾಸನ ಸಭೆಗಳಿಗೆ ಅರ್ಥಿಕ ಸ್ವಾಯತ್ತತೆ ಸೇರಿದಂತೆ ಹತ್ತು ಹಲವು ವಿಷಯಗಳ ಕುರಿತು ಗೋಷ್ಠಿಗಳು, ವಿಚಾರ ಸಂಕಿರಣ, ಸಂವಾದಗಳು ಜರುಗಲಿವೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಪಂಚ ಗ್ಯಾರಂಟಿ ಯೋಜನೆಯಿಂದ ಜನಸಾಮಾನ್ಯರ ಕಷ್ಟಕಾರ್ಪಣ್ಯಗಳನ್ನು ತಗ್ಗಿಸುವುದರೊಂದಿಗೆ ನೆಮ್ಮದಿಯ ಬದುಕಿಗೆ ಆಸರೆಯಾಗಿದೆ. ಸಮಾಜದಲ್ಲಿ ಈ ಯೋಜನೆಯ ಫಲಾನುಭವಿಯಾಗಲು ಅರ್ಹತೆ ಇದ್ದ ಪ್ರತಿಯೊಬ್ಬರಿಗೂ ಇವುಗಳನ್ನು ತಲುಪಿಸಿ ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಅಶೋಕ್ ಕೊಡವೂರು ತಿಳಿಸಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್‌ನ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿಯ ಪ್ರಗತಿಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪಂಚ ಗ್ಯಾರಂಟಿ ಯೋಜನೆಗಳನ್ನು ಸರಕಾರ ಕಳೆದ ಎರಡು ವರ್ಷಗಳ ಹಿಂದೆ ಜಾರಿಗೆ ತರುವುದರೊಂದಿಗೆ ನಿರಂತರವಾಗಿ ಯೋಜನೆಗಳನ್ನು ಜನಸಾಮಾನ್ಯರಿಗೆ ಎರಡು ವರ್ಷದಿಂದಲೂ ತಲುಪಿಸುತ್ತಿದೆ. ಈ ಬಾರಿಯ ಬಜೆಟ್‌ನಲ್ಲಿ 51,034 ಕೋಟಿ ರೂ. ಮೊತ್ತದ ಅನುದಾನವನ್ನು ಮೀಸಲಿಟ್ಟಿದೆ. ಈ ಯೋಜನೆಗಳು ಪ್ರತಿಯೊಬ್ಬರಿಗೂ ತಲುಪಿಸುವಂತೆ ಪ್ರತಿಯೊಂದು ಇಲಾಖೆಗಳು ಕಾರ್ಯನಿರ್ವಹಿಸಬೇಕು ಎಂದರು. ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಿಗೆ ಯಾವುದೇ ರೀತಿಯ ಸಮಸ್ಯೆಗಳ ಕುರಿತು ದೂರುಗಳು ಬಂದಲ್ಲಿ ಕೂಡಲೇ ಅವುಗಳಿಗೆ ಸ್ಪಂದಿಸುವ…

Read More