Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಬದುಕಿನಲ್ಲಿ ನಿರ್ದಿಷ್ಟವಾಗಿ ಗುರಿ ಹಾಗೂ ಅದನ್ನು ಸಾಧಿಸಲು ಸತತವಾದ ಪರಿಶ್ರಮವಿದ್ದರೆ ಯಶಸ್ಸು ನಿಮ್ಮನ್ನು ಹಿಂಬಾಲಿಸಲಿದೆ. ಕುಂದಾಪುರದವರಾದ ಅನೂಪ ರಾಷ್ಟ್ರ ಮಟ್ಟದಲ್ಲಿ ಗುರುತಿಸುವಂತಹ ಸಾಧನೆಗೈದಿರುವುದು ಹೆಮ್ಮೆಯ ಸಂಗತಿ ಎಂದು ಉಡುಪಿ ಧರ್ಮಪ್ರಾಂತ್ಯದ ಧರ್ಮಗುರು ವ. ಜರಾಲ್ಡ್ ಐಸಾಕ್ ಲೋಬೋ ಹೇಳಿದರು. ಅವರು ಕುಂದಾಪುರ ಕ್ಯಾಥೋಲಿಕ್ ಸಭಾದ ವತಿಯಿಂದ ಕುಂದಾಪುರ ಸಂತ ಜೋಸೆಫರ ಪ್ರೌಢಶಾಲೆಯಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಏಕಲವ್ಯ ಪ್ರಶಸ್ತಿ ಪುರಸ್ಕೃತ ಅನೂಪ್ ಡಿಕೋಸ್ಟಾ ಅವರಿಗೆ ಕ್ಯಾಥೋಲಿಕ್ ಸಭಾ ಹಾಗೂ ಉಡುಪಿ ಧರ್ಮಪ್ರಾಂತ್ಯದ ಪರವಾಗಿ ಸನ್ಮಾನಿಸಿ ಮಾತನಾಡಿದರು. ಸನ್ಮಾನ ಸ್ವೀಕರಿಸಿದ ಅನೂಪ್ ಡಿಕೋಸ್ಟಾ ಮಾತನಾಡಿ ನನ್ನ ಸಾಧನೆಯ ಹಿಂದೆ ತಂದೆ-ತಾಯಿಯ ಮಾರ್ಗದರ್ಶನ ಹಾಗೂ ಗುರುಗಳ ನಿರಂತರವಾದ ಪ್ರೋತ್ಸಾಹವಿದೆ. ಗುರಿ ತಲುಪುವ ಕನಸು ಕಾಣುವುದರೊಂದಿಗೆ ಅದಕ್ಕೆ ಪೂರಕ ತಯಾರಿಗಳನ್ನು ಮಾಡಿಕೊಂಡಲೇ ಯಶಸ್ಸನ್ನು ಸಾಧಿಸುವ ಸಾಧ್ಯವಿದೆ ಎಂದರು. ಕುಂದಾಪುರದ ಹೋಲಿ ರೋಜರಿ ಚರ್ಚ್ ಧರ್ಮಗುರು ಅನಿಲ್ ಡಿಸೋಜಾ, ಎಐಸಿಯು ರಾಜ್ಯಾಧ್ಯಕ್ಷ ವಾಲ್ಟರ್ ಪಿಂಟೋ, ಕ್ಯಾಥೊಲಿಕ್ ಸಭಾ ವಲಯ ಸಮಿತಿ ಅಧ್ಯಕ್ಷ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ರೈಲ್ವೆ ಸುರಂಗದಲ್ಲಿ ಕಲ್ಲು ಕುಸಿದು ಬಿದ್ದು ಸಂಪೂರ್ಣ ನುಜ್ಜುಗೊಜ್ಜಾಗಿ ಎಳಲಾಗದ ಸ್ಥಿತಿಯಲ್ಲಿ 24 ವರ್ಷಗಳಿಂದ ಹಾಸಿಗೆಯಲ್ಲಿ ಮಲಗಿಯೇ ಇರುವ ಕಾವ್ರಾಡಿ ಗ್ರಾಮದ ಸಾರ್ಕಲ್ಲು ಜಯರಾಮ ಶೆಟ್ಟಿಯವರಿಗೆ ಬೆಂಗಳೂರು ಬಂಟರ ಸಂಘದ ಕಾರ್ಯಕಾರಿ ಸಮಿತಿ ಮಾನವೀಯ ಸ್ಪಂದನೆ ನೀಡಿದೆ. ಬೆಂಗಳೂರಿನಿಂದ ಆಗಮಿಸಿದ ಬೆಂಗಳೂರು ಬಂಟರ ಸಂಘದ ಕಾರ್ಯಕಾರಿ ಸಮಿತಿಯ ಸದಸ್ಯರ ತಂಡ ರೂ.55,000 ಚೆಕ್‌ನ್ನು ಜಯರಾಮ ಶೆಟ್ಟಿಯವರಿಗೆ ನೀಡಿತು. ಬ್ಯಾಂಕಿನಲ್ಲಿ ಸುಸ್ತಿ ಇರುವ ಜಯರಾಮ ಶೆಟ್ಟರ ಸಾಲದ ಮೊತ್ತದ ಪಾವತಿಯ ಬಗ್ಗೆಯೂ ಕೂಡಾ ಗಮನ ಹರಿಸುವುದಾಗಿ ತಿಳಿಸಿದರು. ಸಮಾಜ ವ್ಯಕ್ತಿಯೊಬ್ಬರು ಆಸಹಾಯಕವಾಗಿ ಹಾಸಿಗೆ ಹಿಡಿದಿರುವುದು ಮಾದ್ಯಮಗಳ ಮೂಲಕ ತಮ್ಮ ಗಮನಕ್ಕೆ ಬಂದಿದ್ದು, ಅಸಹಾಯಕರಿಗೆ ಸ್ಪಂದಿಸುವುದು ಸಂಘದ ಪ್ರಮುಖ ಧ್ಯೇಯವಾಗಿದ್ದು ಸ್ಪಂದಿಸುವ ಕೆಲಸ ಮಾಡಿದ್ದೇವೆ ಎಂದು ಬಂಟರ ಸಂಘದ ಕಾರ‍್ಯಕಾರಿಣಿ ತಿಳಿಸಿದೆ. ಈ ಸಂದರ್ಭದಲ್ಲಿ ಬೆಂಗಳೂರು ಬಂಟರ ಸಂಘದ ಗೌರವ ಪ್ರಧಾನ ಕಾರ್ಯದರ್ಶಿ ಜಪ್ತಿ ಸಂತೋಷಕುಮಾರ್ ಶೆಟ್ಟಿ, ಖಜಾಂಚಿ ಆನಂದರಾಮ ಶೆಟ್ಟಿ ಬಗ್ವಾಡಿ, ಸಮಾಜಸೇವಾ ವಿಭಾಗದ ಅಧ್ಯಕ್ಷ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕೇಂದ್ರ ಸರಕಾರದ ಮಹತ್ವಾಕಾಂಕ್ಷೆ ಕಾರ್ಯಕ್ರಮ ಸ್ಚಚ್ಚ ಭಾರತ ಮಿಷನ್ ಅಂಗವಾಗಿ ರೋಟರಿ ಕ್ಲಬ್ ಕುಂದಾಪುರದ ವತಿಯಿಂದ ಕುಂದಾಪುರದ ಮೂಡ್ಲಕಟ್ಟೆಯ ರೈಲ್ವೆ ಸ್ಟೇಷನ್‌ನಲ್ಲಿ ಸ್ವಚ್ಚತಾ ಅಭಿಯಾನ ನಡೆಸಲಾಯಿತು. ಕಾರ್ಯಕ್ರಮಕ್ಕೆ ರೋಟರಿ ಕ್ಲಬ್ ಕುಂದಾಪುರದ ಅಧ್ಯಕ್ಷ ಉದಯಕುಮಾರ ಶೆಟ್ಟಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕೊಂಕಣ ರೈಲ್ವೆಯ ಅಧಿಕಾರಿ, ಕುಂದಾಪುರ ರೋಟರಿ ಕ್ಲಬ್‌ನ ಸದಸ್ಯ ರಾಜೇಶ್ ಶೆಟ್ಟಿ, ನಿಕಟ ಪೂರ್ವಾಧ್ಯಕ್ಷ ಪ್ರಕಾಶ್ಚಂದ್ರ ಶೆಟ್ಟಿ ಚಿತ್ತೂರು, ಕಾರ್ಯದರ್ಶಿ ಮನೋಜ್ ನಾಯರ್, ಲಿಟ್ರಸಿ ಛೇರ್‌ಮೆನ್ ಆವರ್ಸೆ ಮುತ್ತಯ್ಯ ಶೆಟ್ಟಿ, ಸಂತೋಷ ಕೋಣಿ ಇನ್ನಿತರರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಭಾರತೀಯ ಜೀವ ವಿಮಾ ನಿಗಮ ಕೊಡಮಾಡುವ ಸ್ಟೂಡೆಂಟ್ ಆಫ್ ದಿ ಇಯರ್ ಅವಾರ್ಡ್‌ನ್ನು ಶತಮಾನೋತ್ಸವ ಆಚರಿಸುತ್ತಿರುವ ವಂಡ್ಸೆಯ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ನೀಡಲಾಯಿತು. ಭಾರತೀಯ ಜೀವ ವಿಮಾ ನಿಗಮ ಕುಂದಾಪುರದ ಹಿರಿಯ ಶಾಖಾಧಿಕಾರಿ ಕೃಷ್ಣ ವಿ. ಕುಲಕರ್ಣಿ ಮಾತನಾಡಿ, ಭಾರತೀಯ ಜೀವ ವಿಮಾ ನಿಗಮವು ಸಾಕಷ್ಟು ಜನೋಪಯೋಗಿ ಕಾರ್ಯಕ್ರಮಗಳನ್ನು ಗ್ರಾಮೀಣ ಪ್ರದೇಶಗಳಲ್ಲಿ ನಡೆಸುತ್ತಿದ್ದು, ಭೀಮಾ ಗ್ರಾಮ ಯೋಜನೆ, ಭೀಮಾ ಶಾಲೆ ಯೋಜನೆ ಹಾಗೂ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿ ವೇತನಗಳನ್ನು ನೀಡಿದೆ. ವಿದ್ಯಾರ್ಥಿಗಳು ಇದರ ಸದುಪಯೋಗವನ್ನು ಪಡೆದುಕೊಳ್ಳ ಬೇಕೆಂದು ತಿಳಿಸಿದರು. ಮುಖ್ಯ ಜೀವ ವಿಮಾ ಸಲಹೆಗಾರರಾದ ಪ್ರಕಾಶ್ಚಂದ್ರ ಶೆಟ್ಟಿ ಚಿತ್ತೂರು ಮಾತನಾಡಿ ವಿದ್ಯಾರ್ಥಿ ದೆಸೆಯಲ್ಲಿಯೇ ವಿಮಾ ಪಾಲಿಸಿಗಳನ್ನು ಮಾಡುವುದರೊಂದಿಗೆ ದೀರ್ಘಕಾಲಿಕ ಉಳಿತಾಯದ ಮನೋಭಾವನೆಯನ್ನು ಬೆಳಸಿಕೊಳ್ಳಿ, ಇಂದಿನ ಚಿಕ್ಕ ಉಳಿತಾಯ ಮುಂದಿನ ಸಧೃಢ ಆರ್ಥಿಕತೆಯ ಮೆಟ್ಟಿಲು ಎಂದರು ಈ ಸಂದರ್ಭದಲ್ಲಿ ಭಾರತೀಯ ಜೀವ ವಿಮಾ ನಿಗಮ ಕುಂದಾಪುರದ ಸಹಾಯಕ ಶಾಖಾಧಿಕಾರಿ ಗುರುರಾಜ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗ೦ಗೊಳ್ಳಿ: ಹರೆಯದಲ್ಲಿ ವಿರುದ್ಧ ಲಿಂಗಿಗಳೆಡೆಗೆ ಆಕರ್ಷಣೆ ಸಹಜವಾದದ್ದು. ಆದರೆ ಆಕರ್ಷಣೆಯನ್ನು ತಪ್ಪಾಗಿ ಭ್ರಮಿಸಿಕೊಂಡು ನಮ್ಮ ಜೀವನವನ್ನು ಚಿಕ್ಕ ವಯಸ್ಸಿನಲ್ಲೇ ಅನಾಕರ್ಷಕವನ್ನಾಗಿ ಮಾಡಿಕೊಳ್ಳಬಾರದು. ನಮ್ಮ ಇತಿಮಿತಿಗಳ ಅರಿವು ನಮಗಿರಬೇಕು ಎಂದು ಗಂಗೊಳ್ಳಿಯ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಶ್ವೇತಾ ಅಭಿಪ್ರಾಯಪಟ್ಟರು. ಅವರು ಇತ್ತೀಚೆಗೆ ಗ೦ಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನಲ್ಲಿ ಕಾಲೇಜಿನ ವಿದ್ಯಾರ್ಥಿನಿಯರಲ್ಲಿ ಹದಿಹರೆಯದ ಸಮಸ್ಯೆಗಳ ಕುರಿತಂತೆ ಅರಿವು ಮೂಡಿಸಲು ವಿಶೇಷವಾಗಿ ಹಮ್ಮಿಕೊ೦ಡಿದ್ದ ಹದಿವಯಸ್ಸು ಮತ್ತು ಮನಸ್ಸು ಕಾರ‍್ಯಕ್ರಮದಲ್ಲಿ ಉಪನ್ಯಾಸ ನೀಡಿದರು. ದೈಹಿಕ ಅಥವಾ ಮಾನಸಿಕ ಸಮಸ್ಯೆಗಳು ಕಾಣಸಿಕೊಂಡಾಗ ಅದನ್ನು ಮುಚ್ಚಿಟ್ಟುಕೊಳ್ಳುವ ಪ್ರಯತ್ನ ನಡೆಸಬಾರದು. ಅಸಡ್ಡೆಯನ್ನೂ ಮಾಡಬಾರದು. ಸೂಕ್ತ ತಜ್ಞರ ಸಲಹೆಯನ್ನು ಪಡೆದುಕೊಳ್ಳಬೇಕು.ವೈದ್ಯರ ಬಳಿ ಮುಚ್ಚುಮರೆ ಬೇಡ ಎಂದು ಅವರು ಸಲಹೆ ನೀಡಿದರು. ಪ್ರಾಂಶುಪಾಲೆ ಕವಿತಾ ಎಮ್ ಸಿ ಅಧ್ಯಕ್ಷತೆ ವಹಿಸಿದ್ದರು. ಪ್ರಾಥಮಿಕ ಆರೋಗ್ಯ ಕೇಂದ್ರದ ಪ್ರಜ್ವಲಾ, ಉಪನ್ಯಾಸಕರಾದ ಸುಮತಿ ಉಡುಪ, ಪ್ರತಿಮಾ,ಪ್ರಮೀಳ ಉಪಸ್ಥಿತರಿದ್ದರು.. ಉಪನ್ಯಾಸಕಿ ಸುಗುಣ ಆರ್ ಕೆ ಕಾರ‍್ಯಕ್ರಮ ನಿರ್ವಹಿಸಿದರು. ಶಾಲೆಟ್ ಲೋಬೊ…

Read More

ಕುಂದಾಪ್ರ ಡಾಟ್ ಕಾಂ ವರದಿ. ಬೈಂದೂರು: ಮಣಿಪಾಲದಲ್ಲಿ ನಡೆದ ಅಪಘಾತದಲ್ಲಿ ತಲೆಗೆ ಗಂಭೀರ ಏಟು ತಗಲಿ ಬ್ರೈನ್ ಡೆಡ್ ಆಗಿದ್ದ ಬೈಂದೂರಿನ ಖ್ಯಾತ ವೈದ್ಯ ಡಾ. ರವಿರಾಜ್ ಅವರ ಪುತ್ರ ಹಿಮಾಂಶುವಿನ ದೇಹದೊಳಗಿನ ಅಂಗಾಂಗಗಳನ್ನು ಶಸ್ತ್ರಚಿಕಿತ್ಸೆಯ ಮೂಲಕ ಹೊರತೆಗೆದು ಅಗತ್ಯವಿರುವವರಿಗೆ ಜೋಡಿಲಾಗಿದ್ದು, ನೋವಿನ ನಡುವೆಯೂ ಅಂಗಾಂಗ ದಾನಕ್ಕೆ ಮುಂದಾಗಿದ್ದ ಕುಟುಂಬದ ನಿರ್ಣಯದಿಂದಾಗಿ ಯುವಕನ ಅಂಗಾಗಗಳು ಐವರ ಬಾಳಿಗೆ ಬೆಳಕಾಗಿದೆ. ಅ.8ರ ಶನಿವಾರ ನಡೆದ ಅಪಘಾತದಲ್ಲಿ ಹಿಮಾಂಶುವಿನ ಬ್ರೈನ್ ಡೆಡ್ ಆಗಿರುವುದನ್ನು ಖಚಿತಪಡಿಸಿಕೊಂಡ ಬಳಿಕ ಮಣಿಪಾಲ ಕಸ್ತೂರ್ಬಾ ಆಸ್ಪತ್ರೆ ಮತ್ತು ಮಣಿಪಾಲ್ ಆಸ್ಪತ್ರೆ ಬೆಂಗಳೂರಿನ ನುರಿತ ವೈದ್ಯರ ತಂಡ ಸೋಮವಾರ ಬೆಳಿಗ್ಗೆ 2:30ರ ವೇಳೆಗೆ ಅಂಗಾಂಗಗಳನ್ನು ಶಸ್ತ್ರಕ್ರಿಯೆ ಮೂಲಕ ಹೊರತೆಗೆದು ಅದನ್ನು ಬೆಂಗಳೂರಿಗೆ ರವಾನೆ ಮಾಡಿ ಬೇರೆ ದೇಹಕ್ಕೆ ಯಶಸ್ವಿಯಾಗಿ ಜೋಡಣೆ ಮಾಡಿದ್ದಾರೆ. ಕುಂದಾಪ್ರ ಡಾಟ್ ಕಾಂ ವರದಿ. ಅಂಗಾಂಗ ದಾನ ಮಾಡುವ ಕುರಿತು ಸ್ವತಃ ವೈದ್ಯರಾಗಿರುವ ಡಾ. ರವಿರಾಜ್ ಹಾಗೂ ಸುಜಾತ ದಂಪತಿಗಳಿಂದ ಭಾನುವಾರ ಸಮ್ಮತಿ ದೊರೆತ ಕೂಡಲೇ ಕಾನೂನಿನ ವಿವಿಧ ಪ್ರಕ್ರಿಯೆಗಳಿಗೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಮೇಕೋಡು ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಅತ್ಯುತ್ತಮ ಹಾಲು ಉತ್ಪಾದಕರ ಸಹಕಾರಿ ಸಂಘ ಪ್ರಶಸ್ತಿ ಲಭಿಸಿದೆ. ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ಬ್ಯಾಂಕಿನ ಅಧ್ಯಕ್ಷರಾದ ಡಾ. ಎಮ್.ಎನ್. ರಾಜೇಂದ್ರಕುಮಾರ್ ಇವರು ಸಂಘದ ಅಧ್ಯಕ್ಷರಾದ ಪ್ರಕಾಶಚಂದ್ರ ಶೆಟ್ಟಿ ಮತ್ತು ಕಾರ್ಯದರ್ಶಿ ಕುಶಕುಮಾರ್ ಇವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಬ್ಯಾಂಕಿನ ನಿರ್ದೇಶಕರು ಉಪಸ್ಥಿತರಿದ್ದರು

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ನವರಾತ್ರಿಯ ಅಂಗವಾಗಿ ಪ್ರಸಿದ್ಥ ಯಾತ್ರಾಸ್ಥಳ ಕೊಲ್ಲೂರಿಗೆ ಆಗಮಿಸಿದ್ದ ಸಹಸ್ರಾರು ಭಕ್ತರು ವಿಜಯದಶಮಿಯಂದು ತಮ್ಮ ಮಕ್ಕಳಿಗೆ ವಿದ್ಯಾರಂಭ ಮಾಡಿಸಿದರು. ಶ್ರೀ ಮೂಕಾಂಬಿಕಾ ದೇವಸ್ಥಾನದ ಪ್ರಾಂಗಣದ ಸರಸ್ವತಿ ಮಂಟಪದ ಮುಂಭಾಗದಲ್ಲಿ ಮಕ್ಕಳಿಗೆ ಪ್ರಾಥಃಕಾಲದಿಂದಲೇ ಅಕ್ಷರಾಭಾಸ ಮಾಡಿಸಲಾಯಿತು. ಹೆತ್ತವರು ಕಾಲಿನ ಮೇಲೆ ಮಕ್ಕಳನ್ನು ಕುರಿಸಿಕೊಂಡು ವಿದ್ಯಾರಂಭ ಮಾಡಿಸಲಾಗುತ್ತದೆ. ಅರ್ಚಕರು ಚಿನ್ನದಿಂದ ಮಗುವಿನ ನಾಲಗೆಯ ಮೇಲೆ ಓಂ ಎಂದು ಬರೆಯುತ್ತಾರೆ, ಬಳಿಕ ಹೆತ್ತವರು ಮಗುವಿನ ಬೆರಳಿಂದ ಅಕ್ಕಿ ತುಂಬಿದ ಹರಿವಾಣದಲ್ಲಿ ಓಂ ಎಂದು ಬರೆಯಿಸಿ ಬಳಿಕ ಮಾತೃಭಾಷೆಯಲ್ಲಿ ಅ,ಆ,ಇ ಬರೆಸುವ ಮೂಲಕ ಅಕ್ಷರಾಭ್ಯಾಸ ಮಾಡಿಸಲಾಗುತ್ತದೆ. ಇದರಿಂದ ಮಕ್ಕಳ ನಾಲಿಗೆಯ ಮೇಲೆ ಸರಸ್ವತಿ ದೇವಿ ನೆಲೆಸಿ ಅವರ ಶೈಕ್ಷಣಿಕ ಭವಿಷ್ಯ ಸಮೃದ್ಧಿಯಾಗುತ್ತದೆ ಎಂಬ ನಂಬಿಕೆ ಭಕ್ತರದ್ದು. ನವಾನ್ನಪ್ರಾಶನ: ಎಳೆಯ ಕಂದಮ್ಮಗಳಿಗೆ ನವಾನ್ನಪ್ರಾಶನದ ಮೂಲಕ ಮೊದಲ ಭಾರಿಗೆ ಅನ್ನವನ್ನು ತಿನ್ನಿಸಲಾಗುತ್ತದೆ. ಶ್ರೀ ಮೂಕಾಂಬಿಕೆಯ ಸನ್ನಿಧಿಯಲ್ಲಿ ಅನ್ನಾಹಾರ ಆರಂಭಿಸಿದ ಮಗು ಮುಂದೆ ಯಾವುದೇ ರೀತಿಯ ಅನಾರೋಗ್ಯದಿಂದ ಬಳಲುವುದಿಲ್ಲ ಎಂಬುದು ನಂಬಿಕೆ. ಈ ಬಾರಿ ಕೊಲ್ಲೂರಿನ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಮುತ್ತೂಟ್ ಫೈನಾನ್ಸ್ ಸಂಸ್ಥೆಯ ಬೈಂದೂರು ಶಾಖಾ ವ್ಯವಸ್ಥಾಪಕ ಮಹೇಶ್ ಸುವರ್ಣ (32) ಸೋಮವಾರ ಶಾಖಾ ಕಚೇರಿಯಲ್ಲಿ ಕರ್ತವ್ಯ ನಿರತರಾಗಿದ್ದಾಗ ತೀವ್ರ ಹೃದಯಾಘಾತದಿಂದ ನಿಧನರಾದರು. ರಕ್ತದೊತ್ತಡದಲ್ಲಿ ಒಮ್ಮೆಲೇ ತೀವ್ರ ಕುಸಿತವಾದ ಕಾರಣ ಹೃಯಾಘಾತ ಸಂಭವಿಸಿತು ಎನ್ನಲಾಗಿದೆ. ಬ್ರಹ್ಮಾವರದ ಇಂದಿರಾನಗರ ನಿವಾಸಿ ಶೀನ ಮರಕಾಲ ಅವರ ಪುತ್ರರಾದ ಮಹೇಶ್ ಐದು ತಿಂಗಳ ಹಿಂದೆ ಚಿಕ್ಕಮಗಳೂರು ಶಾಖೆಯಿಂದ ಇಲ್ಲಿಗೆ ಶಾಖಾಧಿಕಾರಿಯಾಗಿ ಬಡ್ತಿಹೊಂದಿ ಬಂದಿದ್ದರು. ಶಾಲಾ ದಿನಗಳಿಂದಲೂ ಕ್ರೀಡಾಪಟುವಾಗಿದ್ದ ಅವರು ಕೊಕ್ಕೋ ಮತ್ತು ಕ್ರಿಕೆಟ್ ಆಟದಲ್ಲಿ ಪರಿಣತಿ ಹೊಂದಿದ್ದರು. ಬ್ರಹ್ಮಾವರದ ಎಂಜೋಯ್ ಕ್ರಿಕೆಟರ‍್ಸ್ ತಂಡದ ಸದಸ್ಯರಾಗಿ ವಿಶೇಷ ಸಾಧನೆ ಮಾಡಿದ್ದರು. ಅವಿವಾಹಿತರಾಗಿರುವ ಅವರು ತಂದೆ, ತಾಯಿ, ಇಬ್ಬರು ಸಹೋದರರು ಮತ್ತು ಸಹೋದರಿಯನ್ನು ಅಗಲಿದ್ದಾರೆ. ಅವರ ಅಂತಿಮ ಸಂಸ್ಕಾರ ಮಂಗಳವಾರ ಬ್ರಹ್ಮಾವರದಲ್ಲಿ ನಡೆಯಿತು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಶ್ರೀ ರಾಮಚಂದ್ರ ದೇವಸ್ಥಾನದ ಶ್ರೀ ರಾಮಕ್ಷತ್ರಿಯ ಯುವಕ ಮಂಡಳಿಯ 30ನೇ ವರ್ಷದ ಶಾರದೋತ್ಸವದ ಪುರಮೆರವಣಿಗೆ ವಿಜೃಂಭಣೆಯಿಂದ ಜರುಗಿತು. ಡೋಲು, ಕೀಲು ಕುದುರೆ, ಡೈನಾಸಾರೋ, ಬೆಂಕಿಯಾಟ, ಹುಲಿವೇಶ ಟ್ಯಾಬ್ಲೋ ಸಾರ್ವಜನಿಕರ ಗಮನ ಸೆಳೆದವು. ಬೈಂದೂರಿನ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಸಾಗಿ ಕೊನೆಯಲ್ಲಿ ಶಾರದಾ ಮಾತೆಯ ಜಲಸ್ತಂಭನ ಕಾರ್ಯಕ್ರಮ ಜರುಗಿತು.  More photos of Sharadotsava here – https://www.facebook.com/kundapra/posts/1203626803044421

Read More