ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಇವರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಪ್ರತಿಭಾನ್ವೇಷಣಾ ಪರೀಕ್ಷೆಯ ತರಬೇತಿ ತರಗತಿಗಳ ಉದ್ಘಾಟನಾ ಸಮಾರಂಭ ಮತ್ತು 2024- 25ನೇ ಸಾಲಿನ ರಾಷ್ಟ್ರೀಯ ಪ್ರತಿಭಾನ್ವೇಷಣಾ ಪರೀಕ್ಷೆಯ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ ಸಮಾರಂಭವು ಕಿರಿಮಂಜೇಶ್ವರದ ಜನತಾ ನ್ಯೂ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ ಜರುಗಿತು. ಕಿರಿಮಂಜೇಶ್ವರ ಗ್ರಾಮ ಪಂಚಾಯತ್‌ನ ಅಧ್ಯಕ್ಷರಾದ ಶೇಖರ್ ಖಾರ್ವಿ ಹಾಗೂ ನಾವುಂದ ಗ್ರಾಮ ಪಂಚಾಯತ್‌ನ ಅಧ್ಯಕ್ಷರಾದ ನರಸಿಂಹ ದೇವಾಡಿಗ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಶಿಕ್ಷಣ ಸಂಯೋಜಕರಾದ ಯೋಗೇಶ್ ಕೆ. ತಮ್ಮ ಪ್ರಾಸ್ತಾವಿಕ ನುಡಿಗಳಲ್ಲಿ “ಉತ್ತಮ ಯೋಜಿತ ಕಾರ್ಯಗಳು ಸದಾ ಯಶಸ್ಸನ್ನು ನೀಡುತ್ತವೆ ಎನ್ನುವುದಕ್ಕೆ ಹಿಂದಿನ ಸಾಲಿನ ಭರ್ಜರಿ ಫಲಿತಾಂಶವೇ ಸಾಕ್ಷಿ. ಜನತಾ ಸಮೂಹ ಸಂಸ್ಥೆಗಳ ಅಧ್ಯಕ್ಷರಾದ ಗಣೇಶ ಮೊಗವೀರರ ಸರಕಾರಿ ಶಾಲೆಗಳ ವಿದ್ಯಾರ್ಥಿಗಳ ಶ್ರೇಯೋನ್ನತಿಗೆ ವಿಶೇಷ ಸಹಕಾರ ನೀಡಿದ್ದು, ನಮಗೆ ವರದಾನವಾಗಿದೆ” ಎಂದರು. ಶೇಖರ ಖಾರ್ವಿ ಅವರು ತಮ್ಮ ಉದ್ಘಾಟನಾ ನುಡಿಗಳಲ್ಲಿ “ಎನ್ಎಂಎಂಎಸ್ ಪರೀಕ್ಷೆಯು…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ ಕುಂದಾಪುರ, ಸುಜ್ಞಾನ ಪಿಯು ಕಾಲೇಜು ಹಾಗೂ ವಿದ್ಯಾರಣ್ಯ ಇಂಗ್ಲಿಷ್ ಮೀಡಿಯಂ ಶಾಲೆ ಯಡಾಡಿ- ಮತ್ಯಾಡಿ ಇವರ ಸಹಭಾಗಿತ್ವದಲ್ಲಿ ನಡೆದ ಕುಂದಾಪುರ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಮದರ್ ತೆರೇಸಾ ಪ್ರಾಥಮಿಕ ಶಾಲೆ ಶಂಕರನಾರಾಯಣ ಇಲ್ಲಿನ ಬಾಲ ಪ್ರತಿಭೆ , ನಾಲ್ಕನೇ ತರಗತಿಯ ವಿದ್ಯಾರ್ಥಿನಿ ಪ್ರಣತಿ ಜೆ ಶೆಟ್ಟಿ ಇವರು ಕಥೆ ಹೇಳುವ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಗಳಿಸಿದ್ದಾರೆ.ಸಾಧಕ ಕಿರಿಯ ವಿದ್ಯಾರ್ಥಿನಿಗೆ ಶಾಲಾ ಆಡಳಿತ ಮಂಡಳಿ, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರು, ಉಪ ಪ್ರಾಂಶುಪಾಲರು, ಶಾಲಾ ಮುಖ್ಯೋಪಾಧ್ಯಾಯಿನಿ, ಶಿಕ್ಷಕ ಶಿಕ್ಷಕೇತರ ಸಿಬ್ಬಂದಿಗಳು ಅಭಿನಂದಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ ಕುಂದಾಪುರ, ಸುಜ್ಞಾನ ಪಿಯು ಕಾಲೇಜು ಹಾಗೂ ವಿದ್ಯಾರಣ್ಯ ಇಂಗ್ಲಿಷ್ ಮೀಡಿಯಂ ಶಾಲೆ ಯಡಾಡಿ- ಮತ್ಯಾಡಿ ಇವರ ಸಹಭಾಗಿತ್ವದಲ್ಲಿ ಆಯೋಜಿಸಲಾದ ಕುಂದಾಪುರ ವಲಯ ಮಟ್ಟದ ಹೈಸ್ಕೂಲ್ ವಿಭಾಗದ ಹಿಂದಿ ಭಾಷಣ ಸ್ಪರ್ಧೆಯಲ್ಲಿ ಮದರ್ ತೆರೇಸಾ ಪದವಿ ಪೂರ್ವ ಕಾಲೇಜು ಶಂಕರನಾರಾಯಣ ಇಲ್ಲಿನ ಪ್ರಥಮ ಪಿಯುಸಿ ವಿಭಾಗದ ಪ್ರತಿಭಾನ್ವಿತ ವಿದ್ಯಾರ್ಥಿನಿ ಶ್ರೀನಿಧಿ ಶೆಟ್ಟಿ ಇವರಿಗೆ ದ್ವಿತೀಯ ಸ್ಥಾನ ಲಭಿಸಿದೆ. ಸಾಧಕ ವಿದ್ಯಾರ್ಥಿನಿಗೆ ಶಾಲಾ ಆಡಳಿತ ಮಂಡಳಿ, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರು ಉಪ ಪ್ರಾಂಶುಪಾಲರು, ಎಲ್ಲಾ ಬೋಧಕ – ಬೋಧಕೇತರ ಸಿಬ್ಬಂದಿಗಳು ಅಭಿನಂದಿಸಿ ಸಂತಸ ವ್ಯಕ್ತಪಡಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: “ಮಕ್ಕಳು ಕೇವಲ ಓದು ಮತ್ತು ಅಂಕಗಳು ಎಂದು ಕಳೆದುಹೋಗದೇ ಪ್ರತಿಭಾ ಕಾರಂಜಿಯಂತಹ ಕಾರ್ಯಕ್ರಮದಲ್ಲಿ ಹೆಚ್ಚೆಚ್ಚು ತೊಡಗಿಸಿಕೊಳ್ಳಬೇಕು. ಮಕ್ಕಳ ತಮ್ಮ ಪ್ರತಿಭೆಯನ್ನು ಹೊರಹಾಕಲು ಇದೊಂದು ಅತ್ಯುತ್ತಮ ವೇದಿಕೆಯಾಗಿದೆ” ಎಂದು ಶಾಸಕ ಎ. ಕಿರಣ್ ಕುಮಾರ್ ಕೊಡ್ಗಿ ಅವರು ಹೇಳಿದರು. ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಕುಂದಾಪುರ, ಸುಜ್ಞಾನ ಪಿಯು ಕಾಲೇಜು ಹಾಗೂ ವಿದ್ಯಾರಣ್ಯ ಇಂಗ್ಲಿಷ್ ಮೀಡಿಯಂ ಸ್ಕೂಲ್ ಯಡಾಡಿ-ಮತ್ಯಾಡಿಯ ಸಹಭಾಗಿತ್ವದಲ್ಲಿ ಇತ್ತೀಚೆಗೆ ಕುಂದಾಪುರ ವಲಯ ಮಟ್ಟದ ಪ್ರತಿಭಾ ಕಾರಂಜಿಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸುಜ್ಞಾನ ಎಜುಕೇಶನಲ್ ಟ್ರಸ್ಟ್ ನ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿ ಮಾತನಾಡುತ್ತಾ, “ಹಿಂದೆ ಪ್ರತಿಭೆ ಇದ್ದರೂ ಅವಕಾಶಗಳು ಸಿಗುತ್ತಿರಲಿಲ್ಲ. ಪ್ರತಿಭಾ ಕಾರಂಜಿಯು ವಿದ್ಯಾರ್ಥಿಗಳಿಗೆ ತಮ್ಮ ಪ್ರತಿಭೆ ತೋರಲು ಒಂದು ಅತ್ಯುತ್ತಮ ವೇದಿಕೆಯಾಗಿದೆ. ಇದನ್ನು ಮಕ್ಕಳು ಸಮರ್ಪಕವಾಗಿ ಬಳಸಿಕೊಳ್ಳಬೇಕು.ಸ್ಪರ್ಧೆಯಲ್ಲಿ ಗೆಲ್ಲುವುದಕ್ಕಿಂತ ಭಾಗವಹಿಸುವಿಕೆ ತುಂಬಾ ಮುಖ್ಯ” ಎಂದು ಅವರು ಹೇಳಿದರು. ಈ ಸಂದರ್ಭದಲ್ಲಿ ಮಾತನಾಡಿದ ಕುಂದಾಪುರದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಳ್ವಾಸ್ ಶಾಲೆಯಲ್ಲಿ ನಿರ್ಮಿಸಲಾದ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಮೊದಲ ಖಗೋಳ ವಿಜ್ಞಾನ ಪ್ರಯೋಗಾಲಯವು ಶನಿವಾರ ಉದ್ಘಾಟಿಸಲಾಯಿತು. ಭಾರತದ ಚಂದ್ರಮಾನವ ಎಂದು ಖ್ಯಾತಿ ಪಡೆದಿರುವ ಪದ್ಮಶ್ರೀ ಪುರಸ್ಕೃತ ಡಾ. ಮೈಲ್ಸ್ವಾಮಿ ಅನ್ನಾದುರೈ ಅವರು ಉದ್ಘಾಟಿಸಿ, ಮಾತನಾಡಿ, ಇದು ಕೇವಲ ಖಗೋಳ ಪ್ರಯೋಗಾಲಯವಲ್ಲ, ಇದು ನಮ್ಮ ಬಾಹ್ಯಾಕಾಶ ಸಾಧನೆಯತ್ತ ಭವಿಷ್ಯದ ದೃಢ ಹೆಜ್ಜೆಯಾಗಬಲ್ಲದು ಎಂದು ಆಶಿಸಿದರು. ಭಾರತವು ಇಂದು ಉಪಗ್ರಹ ಸಂವಹನದಿಂದ ನ್ಯಾವಿಗೇಶನ್ ವ್ಯವಸ್ಥೆ, ದೂರ ಸಂವಹನ, ಚಂದ್ರಯಾನ–ಮಂಗಳಯಾನ ಮುಂತಾದ ಸಾಧನೆಗಳ ಮೂಲಕ ಜಗತ್ತನ್ನು ತನ್ನತ್ತಾ ಸೆಳೆಯುತ್ತಿದೆ. ಭಾರತದ ಶಿಕ್ಷಣ ಪದ್ದತಿಯನ್ನು ಉಲ್ಲೇಖಿಸಿದ ಅವರು, ಶಾಲೆಗಳು ಇಂದಿನ ಅಂತರಾಷ್ಟ್ರೀಯ ಚೆಸ್ ಗ್ರ್ಯಾಂಡ್ ಮಾಸ್ಟರ್‌ಗಳನ್ನು ಹೊರತರುತ್ತಿದ್ದರೆ, ನಾಳೆಯ ವಿಜ್ಞಾನಿಗಳನ್ನು ಕೂಡ ರೂಪಿಸಬಲ್ಲ ಸಾಮಾರ್ಥ್ಯ ಹೊಂದಿದೆ ಎಂದರು. ಭಾರತ, ಚಂದ್ರನಲ್ಲಿ ನೀರನ್ನು ಪತ್ತೆಹಚ್ಚಿದ ಸಾಧನೆಯನ್ನು ನೆನಪಿಸಿಕೊಂಡ ಅವರು ಕೊಲಂಬಸ್ ಭಾರತವನ್ನು ಹುಡುಕುತ್ತ ಅಮೇರಿಕಾವನ್ನು ಕಂಡುಹಿಡಿದ. ಶತಮಾನಗಳ ನಂತರ, ಚಂದ್ರನಲ್ಲಿ ನೀರನ್ನು ಪತ್ತೆಹಚ್ಚುವಲ್ಲಿ ಅಮೇರಿಕಕ್ಕೆ ಸಾಧ್ಯವಾಗಲಿಲ್ಲ, ಆದರೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕ ಕ್ರೀಡಾಕೂಟವು ಸಂಸ್ಥೆಯ ಕಾರ್ಯದರ್ಶಿಯವರಾದ ಕೆ. ರಾಧಾಕೃಷ್ಣ ಶೆಣೈ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಉಪನಿರ್ದೇಶಕರ ಕಛೇರಿ ಉಡುಪಿ ಇಲ್ಲಿಯ ದೈಹಿಕ ಶಿಕ್ಷಣಾಧಿಕಾರಿಗಳಾದ ಚಂದ್ರಶೇಖರ ಶೆಟ್ಟಿ ಅವರು ಕ್ರೀಡಾಪಟುಗಳಿಂದ ಗೌರವ ವಂದನೆ ಸ್ವೀಕರಿಸಿ, ಕ್ರೀಡಾಜ್ಯೋತಿಯನ್ನು ಬೆಳಗಿಸುತ್ತಾ ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಮನೋಭಾವವಿರಬೇಕು, ಸೋಲೇ ಗೆಲುವಿನ ಸೋಪಾನ ಎಂಬ ನುಡಿಯಂತೆ ಪ್ರತಿಯೊಬ್ಬರು ಸ್ಪರ್ಧೆಯಲ್ಲಿ ಭಾಗವಹಿಸಬೇಕು. ಸೋಲು ಮತ್ತು ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು ಎಂದು ನುಡಿಯುತ್ತಾ ವಿದ್ಯಾರ್ಥಿಗಳಿಗೆ ಕ್ರೀಡಾಸ್ಪರ್ಧೆಯಲ್ಲಿ ಭಾಗವಹಿಸುವಂತೆ ಪ್ರೆರೇಪಿಸಿದರು. ಶ್ರೀ ವೆಂಕಟರಮಣ ಪದವಿಪೂರ್ವಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ, ಉಪಪ್ರಾಂಶುಪಾಲರಾದ ಸುಜಯ್ ಕೋಟೆಗಾರ್, ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ಕೃಷ್ಣ ಅಡಿಗ, ಪ್ರಾಥಮಿಕ ವಿಭಾಗ ಮುಖ್ಯೋಪಾಧ್ಯಾಯಿನಿ ರೇಷ್ಮಾ ಡಿ’ಸೋಜಾ ಮತ್ತು ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ಪ್ರಮೀಳಾ ಡಿ’ಸೋಜಾರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಫಾತಿಮಾ ಶೀಝಾ ಕಾರ್ಯಕ್ರಮ ನಿರೂಪಿಸಿ, ಕನ್ವಿತಾ ಸ್ವಾಗತಿಸಿ ಹಾಗೂ ಮಹಾಲಸಾ ಶ್ಯಾನುಭಾಗ್ ವಂದಿಸಿದರು. ಈ ಸಮಾರಂಭದಲ್ಲಿ ಶಾಲೆಯ ವಿದ್ಯಾರ್ಥಿಗಳು,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಗುರುವಿಗೆ ಗೌರವ ನೀಡುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯ. ವಿದ್ಯೆಯೊಂದಿಗೆ ವಿವೇಕ ಮತ್ತು ತಾಳ್ಮೆ ಇರಬೇಕು. ಸಜ್ಜನರ ಸಹವಾಸ ವ್ಯಕ್ತಿತ್ವವನ್ನು ಒಳ್ಳೆಯ ದಾರಿಗೆ ಕೊಂಡೊಯ್ಯುತ್ತದೆ. ವ್ಯಕ್ತಿತ್ವ ನಿರ್ಮಾಣಕ್ಕೆ ಜೀವನದಲ್ಲಿ ದೃಢ ನಿಶ್ಚಯ ಮತ್ತು ಸ್ಪಷ್ಟ ಗುರಿ ಅತಿ ಮುಖ್ಯ. ನಮ್ಮ ಭವಿಷ್ಯ ನಮ್ಮ ಕೈಯಲ್ಲಿದೆ, ಸನ್ಮಾರ್ಗದಲ್ಲಿ ಸೃಜನಶೀಲ ಬದುಕನ್ನು ರೂಪಿಸಿಕೊಂಡಾಗ ಸಾಧನೆಗೆ ಸುಲಭವಾಗುತ್ತದೆ. ಹವ್ಯಾಸ ಬದಲಾದರೆ ಹಣೆಬರಹ ಬದಲಾಗುತ್ತದೆ, ದೃಷ್ಟಿ ಬದಲಾದರೆ ಜೀವನ ದೃಶ್ಯವೇ ಬದಲಾಗುತ್ತದೆ ಎಂದು ನಿವೃತ್ತ ವಾಣಿಜ್ಯ ತೆರಿಗೆ ಇಲಾಖೆಯ ಪರಿವೀಕ್ಷಣಾಧಿಕಾರಿ ಹಾಗೂ ಉಡುಪಿ ಜಿಲ್ಲೆಯ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯದರ್ಶಿ ಸುಬ್ರಹ್ಮಣ್ಯ ಶೆಟ್ಟಿ ಹೇಳಿದರು. ಅವರು ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಐಕ್ಯೂಎಸಿ ಘಟಕದ ಆಶ್ರಯದಲ್ಲಿ ನಡೆದ ವ್ಯಕ್ತಿತ್ವ ವಿಕಸನ ಕಾರ್ಯಗಾರದ ಸಂಪನ್ಮೂಲ ವ್ಯಕ್ತಿಗಳಾಗಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ. ಉಮೇಶ್ ಶೆಟ್ಟಿ, ಉಪ-ಪ್ರಾಂಶುಪಾಲರಾದ ಡಾ. ಚೇತನ್ ಶೆಟ್ಟಿ ಕೋವಾಡಿ, ಐಕ್ಯೂಎಸಿ ಘಟಕದ ಸಂಯೋಜಕರಾದ ದೀಪಿಕಾ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಸ್ಪರ್ಧೆಗಳು ನಮ್ಮನ್ನ ಕ್ರಿಯಾಶೀಲರಾಗಿ ಮಾಡುತ್ತದೆ ಅದಕ್ಕೆ ನಾವು ಪೂರಕವಾಗಿರಬೇಕೆಷ್ಟೇ ಹೊರತು ಮಾರಕವಾಗಿರಬಾರದು ಎಂದು ಸಾಂಸ್ಕೃತಿಕ ಚಿಂತಕರಾದ ಆನಂದ್ ಸಿ. ಕುಂದರ್ ನುಡಿದರು. ಅವರು ಕೋಟದ ಕಾರಂತ ಥೀಂ ಪಾರ್ಕ್‌ನಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್‌ನ ಜಿಲ್ಲಾ ಮಟ್ಟದ ವಿವಿಧ ಸ್ಪರ್ಧೆಗಳನ್ನು ಉದ್ಘಾಟಿಸಿ ಮಾತನಾಡಿದರು. ಶಾಂತಿವನ ಟ್ರಸ್ಟ್ ನಿರ್ದೇಶಕರಾದ ಡಾ. ಶಶಿಕಾಂತ್ ಜೈನ್ ಕಾರ್ಯಕ್ರಮದ ಸ್ವರೂಪಗಳನ್ನು ವಿವರಿಸಿದರು. ವೇದಿಕೆಯಲ್ಲಿ ಕೋಟತಟ್ಟು ಗ್ರಾಮ ಪಂಚಾಯಿತಿನ ಅಧ್ಯಕ್ಷ ಸತೀಶ್ ಬಾರಿಕೆರೆ, ಜಿಲ್ಲಾ ಸಂಯೋಜಕರಾದ ಕೃಷ್ಣ ಆಚಾರ್ ಉಪಸ್ಥಿತರಿದ್ದರು. ಪ್ರತಿಷ್ಠಾನದ ಕಾರ್ಯದರ್ಶಿ ನರೇಂದ್ರ ಕುಮಾರ್ ಕೋಟ ಕಾರ್ಯಕ್ರಮ ನಿರೂಪಿಸಿದರು. ಬಳಿಕ ಜಿಲ್ಲಾಮಟ್ಟದ ವಿವಿಧ ಸ್ಪರ್ಧೆಗಳು ನಡೆದವು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸೇವಾ ಸಂಗಮ ಶಿಶು ಮಂದಿರಗಳಲ್ಲಿ ಅಜಿತ್ ಕುಮಾರ್ ಅವರ ಪುಣ್ಯ ತಿಥಿಯನ್ನು ಸೇವಾ ದಿನಾಚರಣೆಯನ್ನಾಗಿ ಆಚರಿಸುತ್ತಿದ್ದು, ವಿವಿಧ ಸೇವೆಗಳ ಮೂಲಕ ಕಾರ್ಯಕ್ರಮ ಹಾಗೂ ಸಾಧಕರನ್ನು ಗುರುತಿಸಿ ಗೌರವಿಸುವ ಕಾರ್ಯವನ್ನು ಮಾಡಲಾಗುತ್ತಿದೆ. ಗಂಗೊಳ್ಳಿಯ ಸೇವಾ ಸಂಗಮ ನಿವೇದಿತಾ ಶಿಶು ಮಂದಿರ ಕಳೆದ 39 ವರ್ಷಗಳಿಂದ ಇಂತಹ ಚಟುವಟಿಕೆಗಳ ಮೂಲಕ ಸೇವಾ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ ಎಂದು ಗಂಗೊಳ್ಳಿಯ ಸೇವಾ ಸಂಗಮ ನಿವೇದಿತಾ ಶಿಶು ಮಂದಿರ ಅಧ್ಯಕ್ಷ ಬಿ. ರಾಘವೇಂದ್ರ ಪೈ ಹೇಳಿದರು. ಅವರು ಗಂಗೊಳ್ಳಿಯ ಸೇವಾ ಸಂಗಮ ನಿವೇದಿತಾ ಶಿಶು ಮಂದಿರದ ವತಿಯಿಂದ 39ನೇ ವರ್ಷದ ಸೇವಾ ದಿನಾಚರಣೆ ಪ್ರಯುಕ್ತ ಶನಿವಾರ ನಡೆದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಇದೇ ಸಂದರ್ಭ ಸಾಧಕ ಕಲಾವಿದ ಪಾಂಡುರಂಗ ಮಡಿವಾಳ ಗಂಗೊಳ್ಳಿ ಅವರನ್ನು ಶಿಶು ಮಂದಿರದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಆಟದ ಮೈದಾನವನ್ನು ಎನ್ನೆಸ್ಸೆಸ್ ವಿದ್ಯಾರ್ಥಿಗಳ ಸಹಯೋಗದಲ್ಲಿ ಸ್ವಚ್ಛಗೊಳಿಸಲಾಯಿತು. ಶಿಶು ಮಂದಿರದ ಸದಸ್ಯರಾದ ಉಷಾ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ತೆಕ್ಕಟ್ಟೆಯ ವಿಶ್ವ ವಿನಾಯಕ ಸಿ.ಬಿ.ಎಸ್.ಇ ಶಾಲೆಯ 20ನೇ ವಾರ್ಷಿಕೋತ್ಸವವನ್ನು ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಡಯಟ್ ಕಾಲೇಜು ಪ್ರಾಂಶುಪಾಲರಾದ ಡಾ. ಅಶೋಕ ಕಾಮತ್ ದೀಪ ಬೆಳಗುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮಕ್ಕಳ ಚಿಕ್ಕ ಚಿಕ್ಕ ಸಾಧನೆಗಳನ್ನು ಪ್ರೋತ್ಸಾಹಿಸಿ. ಮಕ್ಕಳಲ್ಲಿ ಆತ್ಮವಿಶ್ವಾಸ ಬೆಳೆಸುವ ಕೆಲಸ ಪೋಷಕರು ಹಾಗೂ ಶಾಲೆಯಿಂದ ಆಗಬೇಕು ಎಂದು ತಿಳಿಸಿದರು. ಕಾರ್ಯಕ್ರಮದ ಗೌರವ ಅತಿಥಿಗಳಾದ ಡಾ. ವಾದಿರಾಜ ಗೋಪಾಡಿ ಮಾತನಾಡಿ, ಶಿಕ್ಷಣ ಎಂದರೆ ಮಗುವಿನ ಒಳಗಿನ ಜ್ಞಾನ ಹಾಗೂ ಪ್ರಜ್ಞೆಯನ್ನು ಹೊರ ಜಗತ್ತಿಗೆ ತರುವುದಾಗಿದೆ. ಎಲ್ಲವೂ ಮಗುವಿನಲ್ಲಿ ಅಡಗಿರುತ್ತದೆ. ಅದರ ಜವಾಬ್ದಾರಿ ಪೋಷಕರು, ಸಮಾಜ ಹಾಗೂ ಶಾಲೆಯದ್ದಾಗಿದೆ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಶಾಲಾ ಮ್ಯಾನೇಜಿಂಗ್ ಡೈರೆಕ್ಟರ್ ಎಮ್. ಪ್ರಭಾಕರ ಶೆಟ್ಟಿ ಅವರು ಮಾತನಾಡಿ, ಪೋಷಕರ ಸಹಕಾರಕ್ಕೆ ಧನ್ಯವಾದಗಳನ್ನು ತಿಳಿಸಿದರು. ಮುಂದಿನ ಶೈಕ್ಷಣಿಕ ವರ್ಷದಲ್ಲಿ ಉತ್ತಮ ಗುಣಮಟ್ಟದ ಕಾಲೇಜು ಆರಂಭವಾಗುವುದಾಗಿ ತಿಳಿಸಿದರು. ವೇದಿಕೆಯಲ್ಲಿ ಶಾಲಾ ಮ್ಯಾನೇಜಿಂಗ್ ಟ್ರಸ್ಟಿ ಸುಧಾಕರ ಶೆಟ್ಟಿ ಹಾಗೂ ಬಿ.…
