ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: 2025 ನವೆಂಬರ್‌ನಲ್ಲಿ ನಡೆದ ಸಿ.ಎಸ್.ಇ.ಇ.ಟಿ. ಪರೀಕ್ಷೆಯಲ್ಲಿ ಆಳ್ವಾಸ್ ಕಾಲೇಜಿನ ಬಿ.ಕಾಂ. ವಿದ್ಯಾರ್ಥಿಗಳಾದ ವರ್ಷಾ ಕೋಟ್ಯಾನ್, ರ್ಯಾನ್ ಮಾಸ್ಕರೇನ್ಹಸ್, ಸುಪ್ರೀತಾ ಎಂ. ಕೆ., ಸಿಂಚನಾ, ವೀಕ್ಷಾ, ಮನೀಷಾ, ರಿಯಾ ಅಂಜುಮ್, ಸಿ. ಜ್ನಾನಿಕಾ ಶೆಟ್ಟಿ, ವೈಷ್ಣವಿ ರಾಜೇಶ್ ರೇನಕೆ ಹಾಗೂ ಅಭಿಷ್ ಆಚಾರ್ಯ ಮೊದಲ ಪ್ರಯತ್ನದಲ್ಲಿ ಉತ್ತಮ ಫಲಿತಾಂಶದೊಂದಿಗೆ ಉತ್ತೀರ್ಣರಾಗಿದ್ದಾರೆ. ಈ ಮೂಲಕ ಆಳ್ವಾಸ್ ಕಾಲೇಜು 77% ದಷ್ಟು ಫಲಿತಾಂಶ ದಾಖಲಿಸಿದೆ. ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳಿಗೆ ಸಂಸ್ಥೆಯ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ, ಪ್ರಾಂಶುಪಾಲ ಡಾ. ಕುರಿಯನ್, ವೃತ್ತಿಪರ ವಾಣಿಜ್ಯ ವಿಭಾಗದ ಸಂಯೋಜಕರಾದ ಅಶೋಕ ಕೆ.ಜಿ ಹಾಗೂ ಸಿ.ಎಸ್. ಸಂಯೋಜಕರಾದ ದೀಕ್ಷಾ ಅಸ್ರಣ್ಣ ಅಭಿನಂದಿಸಿದ್ದಾರೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಹೊಲಿಗೆ ಯಂತ್ರ ವಿತರಣಾ ಯೋಜನೆಯ ಸೌಲಭ್ಯ ಪಡೆಯಲು, ಪ್ರವರ್ಗ-3-ಬಿ ಅಡಿಯಲ್ಲಿ2(ಎ) ಯಿಂದ 2(ಎಫ್)ವರೆಗೆ ಬರುವ ಸಮುದಾಯಕ್ಕೆ ಸೇರಿರುವ, ನಮೂನೆ-3 ಬಿ ಯಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆದಿರುವ, ರಾಜ್ಯದಲ್ಲಿ ಖಾಯಂ ವಿಳಾಸ ಹೊಂದಿರುವ ಅರ್ಹ ಫಲಾನುಭವಿಗಳಿಂದ ಸೇವಾಸಿಂಧು ಪೋರ್ಟಲ್ ಮೂಲಕ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಡಿಸೆಂಬರ್ 6 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್ ಸೈಟ್ https://kmcdc.karnataka.gov.in ಅಥವಾ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಕಚೇರಿ ದೂ.ಸಂಖ್ಯೆ: 0820-2574882 ಅಥವಾ ನಿಗಮ ಸಹಾಯವಾಣಿ ಸಂಖ್ಯೆ: 8867537799, ದೂ.ಸಂಖ್ಯೆ: 080-29903994 ಅನ್ನು ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಜನರು ನಮ್ಮ ಬಗ್ಗೆ ಅನವಶ್ಯಕವಾಗಿ ಮಾಡುವ ಟೀಕೆಗಳು ಶಾಶ್ವತವಲ್ಲ ಅವುಗಳು ಇಂದು ಹುಟ್ಟಿ ನಾಳೆ ಸಾಯುತ್ತವೆ. ಆದರೆ ಜನರಿಗಾಗಿ ನಾವು ಮಾಡುವ ಒಳ್ಳೆ ಕೆಲಸಗಳಿಗೆ ಅಳಿವಿಲ್ಲ. ಅದು ಶಾಶ್ವತವಾಗಿ ನಮಗೆ ಒಳ್ಳೆ ಹೆಸರು ತರುತ್ತದೆ ಎಂದು ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು. ಅವರು ಮಂಗಳವಾರ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ ಅವರ ಜನ್ಮ ದಿನಾಚರಣೆ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾ. ಯೋಜನೆ, ಬಿ.ಸಿ. ಟ್ರಸ್ಟ್ ಬ್ರಹ್ಮಾವರ ತಾಲೂಕು, ಎಸ್‌ಡಿಎಂ ಆಯುರ್ವೇದ ಕಾಲೇಜು ಆಸ್ಪತ್ರೆ ಮತ್ತು ಸಂಶೋಧಕ ಕೇಂದ್ರ ಕುತ್ಪಾಡಿ ಇವರ ಸಹಯೋಗದೊಂದಿಗೆ ಎಸ್.ಡಿ.ಎಂ. ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆಯ ನುರಿತ ವೈದ್ಯರಿಂದ ಕೋಟ ಮಾಂಗಲ್ಯ ಮಂದಿರದಲ್ಲಿ ನಡೆದ ಆರೋಗ್ಯ ತಪಾಸಣೆ ಉಚಿತ ಶಿಬಿರ ಮತ್ತು ಆರೋಗ್ಯ ಮಾಹಿತಿ ಶಿಬಿರ ಉದ್ಘಾಟಿಸಿ ಮಾತನಾಡಿದರು.ಡಾ. ಡಿ.ವೀರೇಂದ್ರ ಹೆಗ್ಗಡೆ ಅವರ ಸಾಮಾಜಿಕ ಕಾಳಜಿಯ ಕಾರ್ಯಗಳು ಇಡೀ ದೇಶಕ್ಕೆ ಮಾದರಿಯಾಗಿದೆ. ಅವರ ಕನಸುಗಳಿಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನದ ನೇತೃತ್ವದಲ್ಲಿ ಕೊಡಮಾಡುವ 2025ನೇ ಸಾಲಿನ ಡಾ. ಶಿವರಾಮ ಕಾರಂತ ಬಾಲ ಪುರಸ್ಕಾರಕ್ಕೆ ಸುರಭಿ ಬೈಂದೂರು ಇದರ ಬಾಲ ಕಲಾವಿದೆ, ಸಂದೀಪನ್ ಆಂಗ್ಲ ಮಾಧ್ಯಮ ಶಾಲೆಯ 6ನೇ ತರಗತಿ ವಿದ್ಯಾರ್ಥಿನಿ ದೀಪಾ ದಿನೇಶ ಕುಂದರ್ ಆಯ್ಕೆಯಾಗಿದ್ದಾರೆ. ಈಕೆ ಸ್ವಾತಿ ಮತ್ತು ದಿನೇಶ ಕುಂದರ್ ಅವರ ಪುತ್ರಿ. ಅವರು ಯಕ್ಷಗಾನ, ರ೦ಗಭೂಮಿಯಲ್ಲಿ ಅಭ್ಯಾಸ ಮಾಡುತ್ತಾ, ವಿವಿಧೆಡೆ ಪ್ರದರ್ಶನವನ್ನು ನೀಡಿದ್ದಾರೆ. ಯಕ್ಷಗಾನ ಹೆಜ್ಜೆ ಅಭ್ಯಾಸ ಮಾಡುತ್ತಿರುವ ದೀಪ್ತಾ ಹಲವಾರು ವೇದಿಕೆಗಳಲ್ಲಿ ಯಕ್ಷಗಾನ ನೃತ್ಯ ಪ್ರದರ್ಶನ ನೀಡಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬ್ರಹ್ಮಾವರ ಸ್ಪೋರ್ಟ್ಸ್ ಕ್ಲಬ್ ಮತ್ತು ಉಡುಪಿ ಜಿಲ್ಲಾ ಚೆಸ್ ಎಸೋಸಿಯೇಷನ್ ಅವರ ಜಂಟಿ ಆಶ್ರಯದಲ್ಲಿ ನಡೆದ ಅಂತರ್ ರಾಜ್ಯ ಎರಡನೇ ಬಿಎಸ್‌ಸಿ ಟ್ರೋಫಿಯ ಸಮಾರೋಪ ಸಮಾರಂಭವು ಬ್ರಹ್ಮಾವರ ಸ್ಪೋರ್ಟ್ಸ್ ಕ್ಲಬ್ಬಿನ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಬ್ರಹ್ಮಾವರ ರೋಟರಿ ಕ್ಲಬ್ ಅಧ್ಯಕ್ಷ ಮೋಹನ್ ಶೆಟ್ಟಿ, ಇವರುಗಳು ಉಪಸ್ಥಿತರಿದ್ದು, ವಿಜೇತರಿಗೆ ನಗದು ಬಹುಮಾನ, ಪ್ರಮಾಣ ಪತ್ರ ಮತ್ತು ಟ್ರಾಫಿಗಳನ್ನು ನೀಡಿ ಶುಭಕೋರಿದರು ಹಾಗೂ ಬ್ರಹ್ಮಾವರ ಸ್ಫೋರ್ಟ್ಸ್ ಕ್ಲಬ್ಬಿನ ಸಮಾಜಮುಖಿ ಕಾರ್ಯಗಳ ಬಗ್ಗೆ ಮೆಚ್ಚುಗೆಯನ್ನ ಸೂಚಿಸಿದರು. ಸಭೆಯ ಅಧ್ಯಕ್ಷತೆಯನ್ನು ಬ್ರಹ್ಮಾವರ ಸ್ಪೋರ್ಟ್ಸ್ ಕ್ಲಬ್ಬಿನ ಅಧ್ಯಕ್ಷರಾದ ಬಿಜು ಜಿ. ನಾಯರ್ ಅವರು ವಹಿಸಿ, ಸರ್ವರನ್ನು ಸ್ವಾಗತಿಸಿದರು. ಗೌರವಾಧ್ಯಕ್ಷರಾದ ಎಂ. ಚಂದ್ರಶೇಖರ್ ಹೆಗ್ಡೆ ಮತ್ತು ಉಪಾಧ್ಯಕ್ಷರಾದ ಚಂದ್ರಶೇಖರ್ ಶೆಟ್ಟಿ,ಕಾರ್ಯಕಾರಿ ಸಮಿತಿಯ ಸದಸ್ಯರು , ಉಡುಪಿ ಜಿಲ್ಲಾ ಚೆಸ್ ಎಸೋಸಿಯೇಷನ್, ಅಧ್ಯಕ್ಷ ಉಮಾನಾಥ ಠಾಕೂರ್, ಮುಖ್ಯ ತೀರ್ಪುಗಾರರಾಗಿ ಸಾಕ್ಷಾತ್ ಯು.ಕೆ. ಅವರುಗಳು ಉಪಸ್ಥಿತರಿದ್ದರು. ಚಾಂಪಿಯನ್ ಆಗಿ ಅನಿಶ್ ಎಸ್. ಸಿ. ಉಡುಪಿ, ಮೂಡಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕ್ಷೇತ್ರ ಸಂಪನ್ಮೂಲ ಕೇಂದ್ರ ಮತ್ತು ಅಂಜುಮನ್ ಆಂಗ್ಲ ಮಾಧ್ಯಮ ಶಾಲೆ ಗಂಗೊಳ್ಳಿ ಇವರ ಆಶ್ರಯದಲ್ಲಿ ಗಂಗೊಳ್ಳಿಯಲ್ಲಿ ನಡೆದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರಾದ ಧನ್ಯ ಯು. (ಚರ್ಚಾ ಸ್ಪರ್ಧೆ ಪ್ರಥಮ), ಝುವೈನಾ ಯೂಸುಫ್ (ಗಜಲ್ ಪ್ರಥಮ) ಪ್ರಾರ್ಥನಾ ಪೈ (ಸಂಸ್ಕೃತ ಭಾಷಣ ದ್ವಿತೀಯ) ಅದಿತಿ ಖಾರ್ವಿ (ಭರತನಾಟ್ಯ ದ್ವಿತೀಯ) ಮತ್ತು ಆಯಿಷಾ ನಿಫಾ (ಉರ್ದು ಭಾಷಣ ತೃತೀಯ) ಬಹುಮಾನಗಳನ್ನು ಪಡೆದಿರುತ್ತಾರೆ. ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಮತ್ತು ಭೋದಕ ಬೋಧಕೇತರ ಬಳಗವು ವಿದ್ಯಾರ್ಥಿಗಳ ಸಾಧನೆಯನ್ನು ಅಭಿನಂದಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಯಣ: ಇಲ್ಲಿನ ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನದ ವತಿಯಿಂದ ನೀಡುವ ಐದನೇ ವರ್ಷದ ಡಾ. ಶಿವರಾಮ ಕಾರಂತ ಬಾಲ ಪುರಸ್ಕಾರಕ್ಕೆ ಮದರ್ ತೆರೇಸಾ ಮೆಮೋರಿಯಲ್ ಶಾಲೆ ಇಲ್ಲಿನ ಇಬ್ಬರು ಪ್ರತಿಭಾನ್ವಿತ ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಪ್ರಾಥಮಿಕ ಶಾಲಾ ವಿಭಾಗದಲ್ಲಿ ಇತ್ತೀಚೆಗೆ ಬಿಡುಗಡೆಯಾದ ಶಂಕ್ರ ಕಿರುಚಿತ್ರದಲ್ಲಿ ತನ್ನ ಅಮೋಘ ಅಭಿನಯದಿಂದ ಪ್ರಖ್ಯಾತಿ ಪಡೆದ ಬಾಲ ಕಲಾವಿದೆ ಮದರ್ ತೆರೇಸಾ ಪ್ರಾಥಮಿಕ ಶಾಲೆಯ 4ನೇ ತರಗತಿಯ ಪ್ರತಿಭಾನ್ವಿತ ವಿದ್ಯಾರ್ಥಿನಿ ಸ್ಮಿತಾ ಬಿ.ಕೆ. ಪ್ರಶಸ್ತಿ ಪಡೆದಿದ್ದಾರೆ. ಹಾಗೆಯೇ ಪ್ರೌಢಶಾಲಾ ವಿಭಾಗದಲ್ಲಿ ಮದರ್ ತೆರೇಸಾ ಶಾಲೆಯ 8ನೇ ತರಗತಿಯ ಅತ್ಯುತ್ತಮ ಚಂಡೆ ಹಾಗೂ ಕೊಳಲು ವಾದಕ ಪನ್ನಗ ಕೆ. ಆರೂರು ಅವರು ಪ್ರಶಸ್ತಿ ಪಡೆದಿದ್ದಾರೆ. ಕೋಟ ಕಾರಂತ ಥೀಮ್ ಪಾರ್ಕಿನಲ್ಲಿ ಇದೇ ದಿನಾಂಕ 30 ರಂದು ನಡೆಯುವ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಈ ಪ್ರತಿಷ್ಠಿತ ಪ್ರಶಸ್ತಿ ಪಡೆಯಲಿರುವ ಈ ಇಬ್ಬರು ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸಂಸ್ಥೆಯ ಸಂಸ್ಥಾಪಕರು, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರು,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶ್ರೀ ಸೋಂದಾ ಸ್ವರ್ಣವಲ್ಲಿ ಮಹಾಪ್ರತಿಷ್ಠಾನದ ಶ್ರೀ ಸರ್ವಜ್ಞೇಂದ್ರ ಸರಸ್ವತಿ ಅಭಿಯಾನ ಕರ್ನಾಟಕ, ಅವರು ಆಯೋಜಿಸಿದ ಜಿಲ್ಲಾ ಮಟ್ಟದ ಭಗವದ್ಗೀತೆ ಕಂಠಪಾಠ ಸ್ಪರ್ಧೆಯಲ್ಲಿ ಇಲ್ಲಿನ ಕಿರಿಮಂಜೇಶ್ವರ ಜನತಾ ನ್ಯೂ ಇಂಗ್ಲಿಷ್ ಮೀಡಿಯಂ ಸಂಸ್ಥೆಯ ವಿದ್ಯಾರ್ಥಿನಿ ಶ್ರಿಯಾ ಕೆ. (7ನೇ ತರಗತಿ) ಪ್ರಥಮ ಸ್ಥಾನ ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ. ವಿದ್ಯಾರ್ಥಿನಿಗೆ ಜನತಾ ಸಮೂಹ ಸಂಸ್ಥೆಗಳ ಸಂಸ್ಥಾಪಕರಾದ ಗಣೇಶ ಮೊಗವೀರ, ಶಾಲೆಯ ಮುಖ್ಯ ಶಿಕ್ಷಕಿ ದೀಪಿಕಾ ಆಚಾರ್ಯ ಹಾಗೂ ಜನತಾ ಸಮೂಹ ಸಂಸ್ಥೆಗಳ ಶಿಕ್ಷಕ/ ಶಿಕ್ಷಕಕೇತರ ವೃಂದದವರು ಮೆಚ್ಚುಗೆ ವ್ಯಕ್ತಪಡಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಸ್ಪೋರ್ಟ್ಸ್ ಕ್ಲಬ್‌ನ ಹೆಮ್ಮೆಯ ಕಬಡ್ಡಿ ಕ್ರೀಡಾಪಟು ಧನಲಕ್ಷ್ಮಿ ಪೂಜಾರಿಯನ್ನು ಒಳಗೊಂಡ ಭಾರತೀಯ ಮಹಿಳಾ ರಾಷ್ಟ್ರೀಯ ತಂಡವು ಬಾಂಗ್ಲಾದೇಶದ ಢಾಕಾದಲ್ಲಿ ನಡೆದ ದ್ವಿತೀಯ ಮಹಿಳಾ ಕಬಡ್ಡಿ ವಿಶ್ವಕಪ್-2025ರಲ್ಲಿ ಅಪ್ರತಿಮ ಪ್ರದರ್ಶನ ಮೂಲಕ ಕಿರೀಟ ಮುಡಿಗೇರಿಸಿಕೊಂಡು ದೇಶದ ಕೀರ್ತಿಯನ್ನು ಮತ್ತಷ್ಟು ಎತ್ತರಿಸಿದೆ. ಫೈನಲ್ ಪಂದ್ಯದಲ್ಲಿ ಚೈನೀಸ್ ತೈಪೆ ತಂಡವನ್ನು 35–28 ಅಂಕಗಳಿಂದ ಸೋಲಿಸಿದ ಭಾರತ ಮಹಿಳಾ ತಂಡವು ಜಾಗತಿಕ ಕಬಡ್ಡಿ ಚಾಂಪಿಯನ್ಸ್ ಪಟ್ಟವನ್ನು ಮುಡಿಗೇರಿಸಿಕೊಂಡಿತು. ದಕ್ಷಿಣ ಭಾರತದ ಏಕೈಕ ಆಟಗಾರ್ತಿ ಧನಲಕ್ಷ್ಮೀ, ದಕ್ಷಿಣ ಭಾರತದಿಂದ ರಾಷ್ಟ್ರೀಯ ತಂಡಕ್ಕೆ ಆಯ್ಕೆಯಾದ ಏಕೈಕ ಆಟಗಾರ್ತಿ ಎಂಬ ಹಿರಿಮೆಯೊಂದಿಗೆ, ತನ್ನ ಆಲ್‌ರೌಂಡರ್ ಆಟದಿಂದ ತಂಡದಲ್ಲಿ ಬಹುಬೇಡಿಕೆಯ ಕ್ರೀಡಾಪಟುವಾಗಿ ಮೂಡಿಬಂದರು. ಅವರು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಂಪೂರ್ಣ ಕ್ರೀಡಾ ದತ್ತು ಶಿಕ್ಷಣ ಯೋಜನೆಯಲ್ಲಿ ಉಚಿತವಾಗಿ ತಮ್ಮ ಶಿಕ್ಷಣವನ್ನು ಪೂರೈಸಿದ್ದರು. ಕರ್ನಾಟಕ ರಾಜ್ಯ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಹಾಗೂ ದಕ್ಷಿಣಕನ್ನಡ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್‌ನ ಸಹಕಾರ ಸ್ಮರಿಸಲಾಗಿದೆ. ಆಳ್ವಾಸ್‌ನ ಕ್ರೀಡಾ ದತ್ತು ಶಿಕ್ಷಣ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಸನ್ಮಾನ್ಯ ಪ್ರಧಾನಮಂತ್ರಿ ಅವರು ನವೆಂಬರ್ 28ರಂದು ಉಡುಪಿ ಜಿಲ್ಲೆಗೆ ಭೇಟಿ ನೀಡುವ ಸಂದರ್ಭದಲ್ಲಿ ಸರಕಾರದ ನಿಯಮಾನುಸಾರ ಶಿಷ್ಠಾಚಾರ ಪಾಲಿಸುವಂತೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಅವರು ಸೋಮವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸನ್ಮಾನ್ಯ ಭಾರತದ ಪ್ರಧಾನಮಂತ್ರಿಯವರು ಉಡುಪಿ ಜಿಲ್ಲಾ ಭೇಟಿ ಸಂದರ್ಭದಲ್ಲಿ ಜಿಲ್ಲಾಡಳಿತದ ವತಿಯಿಂದ ಸೂಕ್ತ ಶಿಷ್ಠಾಚಾರವನ್ನು ಪಾಲಿಸುವ ಸಲುವಾಗಿ ಆಯೋಜಿಸಲಾದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸನ್ಮಾನ್ಯ ಪ್ರಧಾನಮಂತ್ರಿಯವರು ನವೆಂಬರ್ 28ರಂದು ಆದಿ ಉಡುಪಿಯ ಹೆಲಿಪ್ಯಾಡ್‌ನಿಂದ ಕರಾವಳಿ ಬೈಪಾಸ್, ಸಿಟಿ ಬಸ್ ನಿಲ್ದಾಣ, ಕಲ್ಸಂಕ ಮಾರ್ಗವಾಗಿ ಶ್ರೀಕೃಷ್ಠನ ಮಠಕ್ಕೆ ಭೇಟಿ ನೀಡಿ, ಲಕ್ಷ ಕಂಠ ಗೀತಾ ಕಾರ್ಯಕ್ರಮ-ಗೀತೋತ್ಸವದಲ್ಲಿ ಭಾಗವಹಿಸಲಿದ್ದು, ಭೇಟಿ ಸಂದರ್ಭದಲ್ಲಿ ಭದ್ರತೆಗೆ ಅಗತ್ಯವಿರುವ ಸೂಕ್ತ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಪೊಲೀಸ್ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು. ಭದ್ರತೆಗೆ ಅನುಕೂಲವಾಗುವಂತೆ ಕಾರ್ಯಕ್ರಮ ನಡೆಯುವ ಸ್ಥಳಗಳಲ್ಲಿ, ರಸ್ತೆಯಲ್ಲಿ ಹಾಗೂ ಮತ್ತಿತರ ಕಡೆಗಳಲ್ಲಿ ಸಿ.ಸಿ.ಟಿವಿ ಅಳವಡಿಸಬೇಕು. ಅನಧಿಕೃತ…
