Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಪ್ರಕರಣಗಳನ್ನು ತಗ್ಗಿಸುವ ನಿಟ್ಟಿನಲ್ಲಿ ಆರ್‌ಟಿಓ ಅಧಿಕಾರಿ ಮಾರುತಿ ನಾಯ್ಕ್,  ಬೈಂದೂರು ಪೊಲೀಸ್ ವೃತ್ತ ನಿರೀಕ್ಷಕ ಶಿವಕುಮಾರ್ ಹಾಗೂ ಸಿಬ್ಬಂದಿಗಳು, ಐ.ಆರ್.ಬಿ ಸಂಸ್ಥೆಯ ಮನೋಜ್ ಮೊದಲಾದವರು ತ್ರಾಸಿ – ಮರವಂತೆ ಬೀಚ್ ಬಳಿ ಪರಿಶೀಲನೆ ನಡೆಸಿ ಹೆದ್ದಾರಿ ಗುತ್ತಿಗೆ ವಹಿಸಿಕೊಂಡಿರುವ ಕಂಪೆನಿಗೆ ಸೂಚನೆ ನೀಡಿದ್ದರು. ಅದರಂತೆ ಸೂಚನಾ ಫಲಕಗಳನ್ನು ಅಳವಡಿಕೆ ಮಾಡಲಾಗಿದೆ.  ತಾಲೂಕಿನ ತ್ರಾಸಿ – ಮರವಂತೆ ಬೀಚ್ ಬಳಿ ಎ.29 ರಂದು ಪ್ರವಾಸಿ ಬಸ್‌ವೊಂದು ನಿಂತಿದ್ದ ಟ್ಯಾಂಕರ್ ಹಾಗೂ ಟ್ರಕ್‌ಗೆ ಡಿಕ್ಕಿ ಹೊಡೆದು ಭೀಕರ ರಸ್ತೆ ಅಪಘಾತ ಸಂಭವಿಸಿತ್ತು. ಆ ಬಳಿಕ ಜಂಟಿ ಪರಿಶೀಲನೆ ನಡೆಸಲಾಗಿತ್ತು. ರಾ.ಹೆ–66ರ ತ್ರಾಸಿ ಮರವಂತೆ ಮಧ್ಯೆ ನೋ ಪಾರ್ಕಿಂಗ್, ಅಪಘಾತ ವಲಯ ಸೂಚಕ ನಾಮಫಲಕಗಳು, ವಾಹನಗಳ ವೇಗ ಮಿತಿ ಸಂಬಂಧಿತ ಸೂಚನೆಗಳು, ರಿಫ್ಲೆಕ್ಟರ್ʼಗಳನ್ನು ಅಳವಡಿಸಲಗಿದೆ. ವಾಹನ ಸವಾರರ ಸುರಕ್ಷತೆ ಹಾಗೂ ಅಪಘಾತ ನಿಯಂತ್ರಣದ ದೃಷ್ಟಿಯಿಂದ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವ ಮೂಲಕ ಗುತ್ತಿಗೆ ಸಂಸ್ಥೆ ಅಗತ್ಯ ಕ್ರಮವಹಿಸಿದೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬಳ್ಕೂರು ಗ್ರಾಮದಲ್ಲಿ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಳ್ಕೂರಿನ ನಿವಾಸಿ ರಾಜು (47) ಮೃತರು. ಅವರು ಕಳೆದ ಒಂದೂವರೆ ತಿಂಗಳಿನಿಂದ ಹೃದಯ ಸಂಬಂಧಿ ಕಾಯಿಲೆಗೆ ಚಿಕಿತ್ಸೆ ಪಡೆಯುತ್ತಿದ್ದರು. ಮೇ.13 ರಂದು ಅಸ್ವಸ್ಥತೆಯಿಂದ ಕೆಲಸಕ್ಕೆ ಹೋಗದೆ ಮನೆಯಲ್ಲೇ ಉಳಿದಿದ್ದರು. ಪತ್ನಿ ಶಕುಂತಲಾ ತಾಯಿ ಮನೆಗೆ ತೆರಳಿದ್ದು, ರಾಜು ಮನೆಯಲ್ಲಿ ಒಬ್ಬರೇ ಇದ್ದ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ರಾಷ್ಟ್ರೀಯ ಹೆದ್ದಾರಿ-66ರ ಅರಾಟೆ ಸೇತುವೆ ಸಮೀಪ ಸಿಡಿಲು ಬಡಿದು ಕಾರ್ಮಿಕನೊಬ್ಬ ಮೃತಪಟ್ಟ ದಾರುಣ ಘಟನೆ ಗುರುವಾರ ಸಂಜೆ ನಡೆದಿದೆ. ಪಂಜಾಬ್ ಮೂಲದ ಕಾರ್ಮಿಕ ಅಶುತೋಷ್ (35) ಮೃತ ವ್ಯಕ್ತಿ. ಮತ್ತೋರ್ವ ಕಾರ್ಮಿಕ ಲವಜೋತ್ ಸಿಂಗ್ (28) ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅರಾಟೆ ಹಳೆ ಸೇತುವೆಯ ದುರಸ್ತಿ ಕಾಮಗಾರಿ ಕಳೆದ ಕೆಲವು ದಿನಗಳಿಂದ ನಡೆಯುತ್ತಿದ್ದು, ಗುರುವಾರ ಸಂಜೆ ಪಂಜಾಬ್ ಮೂಲದ ಕಾರ್ಮಿಕರು ಕಾಮಗಾರಿಯಲ್ಲಿ ತೊಡಗಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಸಂಜೆ ವೇಳೆಗೆ ತಾಲೂಕಿನಲ್ಲಿ ಗುಡುಗು-ಮಿಂಚು ಸಹಿತ ಭಾರೀ ಮಳೆಯಾಗಿದ್ದು, ಸಿಡಿಲು ಬಡಿದ ಪರಿಣಾಮ ಇಬ್ಬರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸುವ ಪ್ರಯತ್ನ ನಡೆಸಲಾಯಿತಾದರೂ, ಅಶುತೋಷ್ ಮಾರ್ಗ ಮಧ್ಯೆಯೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಗಾಯಾಳು ಲವಜೋತ್ ಸಿಂಗ್ ಅವರನ್ನು ಕುಂದಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ದೇಶಾದ್ಯಂತ ಮೇ.3ರಂದು ನಡೆದಿದ್ದ ವೈದ್ಯಕೀಯ ಪ್ರವೇಶ ಪರೀಕ್ಷೆ (NEET-UG 2026) ಯನ್ನು ಪ್ರಶ್ನೆಪತ್ರಿಕೆ ಸೋರಿಕೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ರದ್ದುಗೊಳಿಸಿರುವುದನ್ನು ಎನ್.ಎಸ್.ಯು.ಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅನೀಶ್ ಪೂಜಾರಿ ತೀವ್ರವಾಗಿ ಖಂಡಿಸಿದ್ದಾರೆ.  ಈ ವರ್ಷ ಸುಮಾರು 22.5 ಲಕ್ಷ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸು ಹೊತ್ತು ಈ ಪರೀಕ್ಷೆಯನ್ನು ಬರೆದಿದ್ದರು. ಆದರೆ, ಪತ್ರಿಕೆ ಸೋರಿಕೆಯಂತಹ ಗಂಭೀರ ಲೋಪದೋಷಗಳಿಂದಾಗಿ ಇಡೀ ಪರೀಕ್ಷಾ ವ್ಯವಸ್ಥೆಯೇ ಕುಸಿದುಬಿದ್ದಿದೆ. ಕೇಂದ್ರ ಸರ್ಕಾರದ ಈ ವೈಫಲ್ಯವು ಲಕ್ಷಾಂತರ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಆತಂಕಕ್ಕೆ ದೂಡಿದೆ ಎಂದು ಅನೀಶ್ ಪೂಜಾರಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪರೀಕ್ಷೆಯ ಪಾವಿತ್ರ್ಯತೆಯನ್ನು ಕಾಪಾಡುವಲ್ಲಿ ಕೇಂದ್ರ ಶಿಕ್ಷಣ ಇಲಾಖೆ ಸಂಪೂರ್ಣವಾಗಿ ವಿಫಲವಾಗಿದೆ. ಪದೇ ಪದೇ ಇಂತಹ ಹಗರಣಗಳು ನಡೆಯುತ್ತಿರುವುದು ಕೇಂದ್ರ ಸರ್ಕಾರದ ಅದಕ್ಷತೆಯನ್ನು ತೋರಿಸುತ್ತದೆ. ವಿದ್ಯಾರ್ಥಿಗಳ ಜೀವನದ ಜೊತೆ ಚೆಲ್ಲಾಟವಾಡುತ್ತಿರುವ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಒಂದೆಡೆ ವಿದ್ಯಾರ್ಥಿಗಳು ಹಗಲಿರುಳು ಕಷ್ಟಪಟ್ಟು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾಲಯವು ಇತ್ತೀಚೆಗೆ ನಡೆಸಿದ ಎಂ.ಎಸ್ಸಿ (ಮೈಕ್ರೋಬಯಾಲಜಿ) ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ ತಾಲೂಕಿನ ಬಳ್ಳೂರು ಗ್ರಾಮದ ರೂಪಾ ಅವರು ಪ್ರಥಮ ರ್ಯಾಂಕ್ ಪಡೆಯುವುದರ ಜೊತೆಗೆ ಬಂಗಾರದ ಪದಕ ಮುಡಿಗೇರಿಸಿಕೊಂಡಿದ್ದಾರೆ. ಬಸ್ರೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬಳ್ಕೂರು ನಿವಾಸಿಗಳಾದ ಗೋಪಾಲ ಪೂಜಾರಿ ಹಾಗೂ ಯಶೋಧ ಪೂಜಾರ್ತಿ ದಂಪತಿಯ ಪುತ್ರಿಯಾಗಿರುವ ರೂಪಾ ಅವರು ಹುಟ್ಟಿನಿಂದಲೇ ವಿಕಲಚೇತನರಾದರೂ ವಿಜ್ಞಾನದಂತಹ ಕಠಿಣ ವಿಷಯದಲ್ಲಿ ಈ ಅತ್ಯುನ್ನತ ಸಾಧನೆ ಮಾಡಿರುವುದು ರಾಜ್ಯಕ್ಕೇ ಮಾದರಿಯಾಗಿದೆ. ಗ್ರಾಮೀಣ ಭಾಗದ ಪ್ರತಿಭೆಯಾಗಿರುವ ರೂಪಾ ಅವರ ಶೈಕ್ಷಣಿಕ ಸಾಧನೆಯ ಹಾದಿಯು ಪ್ರಾಥಮಿಕ/ಪ್ರೌಢ ಶಿಕ್ಷಣವನ್ನು ಬಸ್ರೂರು ಸರ್ಕಾರಿ ಪ್ರೌಢಶಾಲೆ, ಪದವಿ ಪೂರ್ವ ಶಿಕ್ಷಣವನ್ನು ಸರ್ಕಾರಿ ಪದವಿಪೂರ್ವ ಕಾಲೇಜು (ಬೋರ್ಡ್ ಹೈಸ್ಕೂಲ್), ಕು೦ದಾಪುರ, ಪದವಿಯನ್ನು ಕುಂದಾಪುರ ಭ೦ಡಾರ್ಕರ್ಸ್ ಕಾಲೇಜಿನಲ್ಲಿ ಮುಗಿಸಿ ಸೂಕ್ಷ್ಮ ಜೀವ ವಿಜ್ಞಾನದಂತಹ (ಮೈಕ್ರೋಬಯಾಲಜಿ) ಪ್ರಾಯೋಗಿಕ ಮತ್ತು ಕಠಿಣ ವಿಷಯದಲ್ಲಿ ಈ ಸಾಧನೆ ಮಾಡಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಕಾಲುಬಾಯಿ ರೋಗವು ಜಾನುಬಾರುಗಳಲ್ಲಿ ಅತ್ಯಂತ ವೇಗವಾಗಿ ಹರಡುವ ಸಾಂಕ್ರಾಮಿಕ ರೋಗವಾಗಿದ್ದು, ಈ ರೋಗದ ನಿಯಂತ್ರಣಕ್ಕಾಗಿ ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಕಾರ್ಯಕ್ರಮದಡಿ ಒಂಭತ್ತನೇ ಸುತ್ತಿನ ಕಾಲುಬಾಯಿ ಲಸಿಕಾ ಕಾರ್ಯಕ್ರಮವನ್ನು ಜಿಲ್ಲೆಯಾದ್ಯಂತ ಹಮ್ಮಿಕೊಳ್ಳಲಾಗಿದ್ದು, ರೈತರು ತಮ್ಮ ಜಾನುವಾರುಗಳಿಗೆ ಕಡ್ಡಾಯವಾಗಿ ಲಸಿಕೆ ಹಾಕಿಸುವಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಸೂಚನೆ ನೀಡಿದರು. ಅವರು ಬುಧವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ನಡೆದ 9ನೇ ಸುತ್ತಿನ ಕಾಲುಬಾಯಿ ಲಸಿಕಾ ಕಾರ್ಯಕ್ರಮದ ಜಿಲ್ಲಾ ಮಟ್ಟದ ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಕಾರ್ಯಕ್ರಮದಡಿ ಜಿಲ್ಲೆಯಾದ್ಯಂತ ಒಂಭತ್ತನೇ ಸುತ್ತಿನ ಕಾಲುಬಾಯಿ ಲಸಿಕಾ ಕಾರ್ಯಕ್ರಮ ಈಗಾಗಲೇ ಆರಂಭಗೊಂಡಿದ್ದು, ಮೇ.22ರ ವರೆಗೆ ಲಸಿಕಾ ಕಾರ್ಯಕ್ರಮ ನಡೆಯಲಿದೆ. ಜಾನುವಾರುಗಳಿಗೆ ವೈರಾಣುವಿನಿಂದ ಹರಡುವ ಈ ರೋಗ ತಡೆಗೆ ಲಸಿಕೆಯೊಂದೇ ಪರಿಹಾರವಾಗಿದ್ದು, ರೈತರುಗಳು ನಿರ್ಲಕ್ಷಯ ವಹಿಸದೇ ತಪ್ಪದೇ ಲಸಿಕೆ ಹಾಕಿಸುವಂತೆ ನೋಡಿಕೊಳ್ಳಬೇಕು ಎಂದು ಪಶು ವೈದ್ಯಾಧಿಕಾರಿಗಳಿಗೆ ತಿಳಿಸಿದರು. ಜಾನುವಾರುಗಳು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇತ್ತೀಚೆಗೆ ವಾಷಿಂಗ್ಟನ್ ಡೀಸಿಯಲ್ಲಿರುವ ಪ್ರತಿಷ್ಠಿತ ವಾಷಿಂಗ್ಟನ್ ಎಡ್ಡೆಂಟಿಸ್ಟ್ ಯುನಿವರ್ಸಿಟಿಯ 111ನೇ ಪದವಿ ಪ್ರದಾನ ಸಮಾರಂಭದಂದು ಮೆರಿಲ್ಯಾಂಡ್ ನಿವಾಸಿ ಉದ್ಯಮಿ, ಸಾಧಕ ಆನಂದ ಪೂಜಾರಿ ಅವರಿಗೆ ‘ಡಾಕ್ಟರ್ ಆಫ್ ಹೂಮನ್ ಲೆಟರ್ಸ್’ ಗೌರವ ಪದವಿಯನ್ನು ನೀಡಿ ಗೌರವಿಸಲಾಯಿತು. ಆರಂಭದಲ್ಲಿ ಪ್ರಾಸ್ತಾವಿಕವಾಗಿ ‘ಬ್ಯುಸಿನೆಸ್ ಎಂಡ್ ಕಮುನಿಟಿ ಸರ್ವಿಸೆಸ್’ನಲ್ಲಿ ಸಮಾಜಕ್ಕೆ ಅಸಾಧರಣ ಕೊಡುಗೆ ನೀಡಿದ ಸಾಧಕರಿಗೆ ಈ ಗೌರವ ಡಾಕ್ಟರೇಟ್ ಗೌರವವನ್ನು ನೀಡಲಾಗುತ್ತದೆ ಎಂದು ಉದ್ಯೋಷಕ ಚೆರ್ಲಿ ಕಿಸುಂಝು ಹೇಳಿದರು. ವಿಶ್ವವಿದ್ಯಾಲಯದ ಅಧ್ಯಕ್ಷರಾದ ವೇಯಮೌತ್ ಸ್ಟೆನ್ಸ್ ಅವರು, ಆನಂದ ಪೂಜಾರಿ ಅವರ ಹೊಟೇಲು ಮತ್ತು ಆತಿಥ್ಯ ಉದ್ಯಮದಲ್ಲಿ ವೃತ್ತಿಪರ ಸೇವೆ; ಸರಕಾರದ ರಾಜತಾಂತ್ರಿಕ ಸಂಸ್ಥೆಗಳೊಂದಿಗಿನ ಸೌಹಾರ್ದಪೂರ್ಣ ವೈಯಕ್ತಿಕ ಬಾಂದವ್ಯ ಮತ್ತು ತಮ್ಮ ವಿವಿಧ ಉದ್ಯಮದ ಮೂಲಕ ನೂರಾರು ಉದ್ಯೋಗಗಳನ್ನು ಸೃಷ್ಟಿ ಮಾಡಿರುವುದಲ್ಲದೆ, ಅನೇಕ ವಿದ್ಯಾರ್ಥಿಗಳು ಸಾಮಾಜಿಕ ಸೇವಾ ವಲಯದಲ್ಲಿ ನಾಯಕತ್ವ ಗುಣ ಬೆಳೆಸಿಕೊಳ್ಳುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ ಎಂದು ಹೇಳಿ ಆನಂದ ಪೂಜಾರಿ ಅವರನ್ನು ಅಭಿನಂದಿಸಿ, ನೆರೆದ ವಿದ್ಯಾರ್ಥಿಗಳು, ಅವರ ಪರಿವಾರದವರು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮನೆ ಮಾರಿ ಹಣ ಕೊಡುವಂತೆ ಒತ್ತಾಯಿಸಿ ತಂದೆಯ ಮೇಲೆ ಮಗ ಹಲ್ಲೆ ನಡೆಸಿ, ಅವಾಚ್ಯವಾಗಿ ಬೈದಿರುವ ಘಟನೆ ಬಳ್ಕೂರಿನಲ್ಲಿ ಸಂಭವಿಸಿದೆ. ಬಳ್ಕೂರಿನ ರಘು ಪೂಜಾರಿ (68) ಹಲ್ಲೆಗೊಳಗಾದವರು. ಅವರ ಪುತ್ರ ನವೀನ್ ಆರೋಪಿ. ರಘು ಬಳ್ಳೂರಿನ 5 ಸೆಂಟ್ಸ್ ಜಾಗದಲ್ಲಿ ಮನೆ ಕಟ್ಟಿಕೊಂಡಿದ್ದು, ಪುತ್ರ ಹಾಗೂ ಪುತ್ರಿಯ ಮದುವೆಗೆ ಸೊಸೈಟಿಯಲ್ಲಿ ಸಾಲ ಮಾಡಿದ್ದರು. ಸಾಲ ತೀರಿಸಲಾಗದೆ ಹರಾಜಿಗೆ ಬಂದಿದ್ದು, ಆಗ ಪುತ್ರಿ ಪ್ರಮೀಳಾ ಅವರು ತಮ್ಮ ಸ್ವಂತ ಹಣದಿಂದ ಸಾಲ ತೀರಿಸಿದ್ದರು. ಅನಂತರ ರಘು ಅವರು ಆ ಮನೆಯನ್ನು ಪುತ್ರಿಯ ಹೆಸರಿಗೆ ಮಾಡಿಕೊಟ್ಟಿದ್ದರು. ಇದೇ ವಿಚಾರವಾಗಿ ಪುತ್ರ ನವೀನ್ ಮನೆ ಮಾರಿ ಹಣ ಕೊಡುವಂತೆ ತಂದೆಯನ್ನು ಪೀಡಿಸುತ್ತಿದ್ದ. ಅನೇಕ ಬಾರಿ ಹಲ್ಲೆಗೈದಿದ್ದು, ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದು, ಅವರು ಎಚ್ಚರಿಕೆಯನ್ನು ಸಹ ನೀಡಿದ್ದರು. ಮೇ.9 ರಂದು ಮನೆಗೆ ಅಕ್ರಮವಾಗಿ ನುಗ್ಗಿದ ನವೀನ್ ತನಗೆ ಬೈದು, ಹಲ್ಲೆ ಮಾಡಿ, ತಾಯಿ ಹಾಗೂ ಸಹೋದರಿಗೂ ಬೆದರಿಕೆ ಹಾಕಿರುವುದಾಗಿ ರಘು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಇಲ್ಲಿನ ಕಿರಿಮಂಜೇಶ್ವರ ಗ್ರಾಮದ ನ್ಯಾರಿಕೇರಿ ಹತ್ತಿರದ ಕ್ಲಿನಿಕ್ ಒಂದರ ಎದುರುಗಡೆ ರಾ.ಹೆ 66ರ ಪೂರ್ವ ಬದಿಯ ಚರಂಡಿಯ ಬಳಿ 35 ರಿಂದ 40 ವರ್ಷದ ಒರ್ವ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ವ್ಯಕ್ತಿಯು ಕೆಲವು ದಿನಗಳಿಂದ ಈ ಪರಿಸರದಲ್ಲಿ ತಿರುಗಾಡಿಕೊಂಡಿದ್ದು ಮೇ.6ರಿಂದ7ರ ಮಧ್ಯಾವಧಿಯಲ್ಲಿ ಅನಾರೋಗ್ಯ ಅಥವಾ ಇನ್ನಾವುದೋ ಕಾರಣದಿಂದ ಮೃತಪಟ್ಟಿದ್ದಾರೆ ಎಂದು ಅಂದಾಜಿಸಲಾಗಿದೆ. 5 ಅಡಿ 5 ಇಂಚು ಎತ್ತರವಿದ್ದು, ವ್ಯಕ್ತಿಯು ತೆಲುಗು ಬಾಷೆ ಬಲ್ಲವರಾಗಿದ್ದರು. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕತಾರ್: ಭಾರತೀಯ ಸಾಂಸ್ಕೃತಿಕ ಕೇಂದ್ರ (ಐಸಿಸಿ) 2023–2024ರ ವ್ಯವಸ್ಥಾಪಕ ಸಮಿತಿಯನ್ನು ಕತಾರ್ನಲ್ಲಿರುವ ಭಾರತೀಯ ಸಮುದಾಯಕ್ಕೆ ನೀಡಿದ ವಿಶಿಷ್ಟ ಮತ್ತು ನಿಸ್ವಾರ್ಥ ಸೇವೆಗಾಗಿ ಭಾರತದ ರಾಯಭಾರ ಕಚೇರಿಯು ಇತ್ತೀಚಿಗೆ ಐಸಿಸಿ ಅಶೋಕ ಸಭಾಂಗಣದಲ್ಲಿ ಸನ್ಮಾನಿಸಲಾಯಿತು. ಭಾರತೀಯ ರಾಯಭಾರ ಕಚೇರಿಯ ಕೌನ್ಸಿಲರ್ (ಚಾನ್ಸೆರಿ ಮತ್ತು ಕಾನ್ಸುಲರ್ ಮುಖ್ಯಸ್ಥ) ಡಾ. ವೈಭವ್ ಎ. ತಂಡಲೆ ಅವರ ಸಮ್ಮುಖದಲ್ಲಿ ಕತಾರ್ಗೆ ಭಾರತದ ರಾಯಭಾರಿಯಾಗಿರುವ ಗೌರವಾನ್ವಿತ ವಿಪುಲ್, ಸುಬ್ರಹ್ಮಣ್ಯ ಹೆಬ್ಬಾಗಿಲು ಮತ್ತು ಐಸಿಸಿ ವ್ಯವಸ್ಥಾಪಕ ಸಮಿತಿಯ ಎಲ್ಲಾ ಸದಸ್ಯರಿಗೆ ಅವರ ಕೊಡುಗೆಗಳು ಮತ್ತು ಸೇವೆಯನ್ನು ಗುರುತಿಸಿ ಮೆಚ್ಚುಗೆಯ ಪ್ರಮಾಣ ಪತ್ರಗಳನ್ನು ಪ್ರದಾನ ಮಾಡಿದರು. ತಾರ್ನ ದೋಹಾದಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಸುಬ್ರಹ್ಮಣ್ಯ ಹೆಬ್ಬಾಗಿಲು ಅವರನ್ನು ಭಾರತೀಯ ಸಾಂಸ್ಕೃತಿಕ ಕೇಂದ್ರ ದೋಹಾದ ಉಪಾಧ್ಯಕ್ಷರಾಗಿದ್ದ ಅವಧಿಯಲ್ಲಿ ಭಾರತೀಯ ಸಮುದಾಯಕ್ಕೆ ನೀಡಿದ ವಿಶಿಷ್ಟ ಮತ್ತು ನಿಸ್ವಾರ್ಥ ಸೇವೆಗಾಗಿ ಸನ್ಮಾನಿಸಿತು, ವಿಶೇಷವಾಗಿ ಅವರು ಸತತ 4 ವರ್ಷಗಳ ಕಾಲ ಭಾರತೀಯ ಸಾಂಸ್ಕೃತಿಕ ಕೇಂದ್ರ ದೋಹಾದ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದರು. ಸುಬ್ರಹ್ಮಣ್ಯ…

Read More