ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕಟ್ಟಿಗೆ ತರಲೆಂದು ಹೋದ ವ್ಯಕ್ತಿ ಮೃತಪಟ್ಟ ಸ್ಥಿತಿಯಲ್ಲಿ ಹೊಳೆಯಲ್ಲಿ ಪತ್ತೆಯಾಗಿದ್ದಾರೆ. ಬೈಂದೂರಿನ ಯಡ್ತರೆ ನಿವಾಸಿ ನರಸಿಂಹ ಯಾನೆ ಸುರೇಶ್ (45) ಮೃತಪಟ್ಟವರು. ನ.1ರಂದು ಸಂಜೆ ಕಟ್ಟಿಗೆ ತರಲೆಂದು ಹೊರ ಹೋಗಿದ್ದು ಕತ್ತಲಾದರೂ ಮನೆಗೆ ವಾಪಸಾಗಿರಲಿಲ್ಲ. ಹುಡುಕಾಡುವಾಗ ಯಡ್ತರೆ ಗ್ರಾಮದ ಕಲ್ಲು ಹೊಳೆಯಲ್ಲಿ ತೇಲುತ್ತಿರುವ ರೀತಿಯಲ್ಲಿ ಅವರ ದೇಹ ಪತ್ತೆಯಾಗಿತ್ತು. ಕೂಡಲೆ ಅವರನ್ನು ಹೊಳೆಯಿಂದ ಮೇಲಕ್ಕೆತ್ತಿ ಬೈಂದೂರು ಸರಕಾರಿ ಆಸ್ಪತ್ರೆಗೆ ಕರೆತರಲಾಗಿತ್ತು. ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಇವರು ನಡೆಸಿದ ಕಲಾ ಪ್ರತಿಭೋತ್ಸವ 2025-26ರ ಜಿಲ್ಲಾ ಮಟ್ಟದ ಶಾಸ್ತ್ರೀಯ ನೃತ್ಯ ಸ್ಪರ್ಧೆಯಲ್ಲಿ ದ್ವೀತಿಯ ಸ್ಥಾನವನ್ನು ಪಡೆದ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ 9ನೇ ತರಗತಿಯ ವಿದ್ಯಾರ್ಥಿನಿ ಸಾನ್ವಿ ಶೆಟ್ಟಿ. ಅವರಿಗೆ, ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಯಕ್ಷಗಾನವು ಮನಸಿನ ಏಕಾಗ್ರತೆಗೆ ಅದ್ಭುತ ಔಷಧಿ ಎಂದು ಸೌಕೂರು ದೇವಸ್ಥಾನದ ಮೊಕ್ತೇಸರರು ಕಿಶನ್ ಹೆಗ್ಡೆ ಪಳ್ಳಿ ಹೇಳಿದರು ಅವರು ಭಾನುವಾರದಂದು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ 50ನೇ ವರ್ಷದ ರಾಜ್ಯೋತ್ಸವ ಯಕ್ಷಗಾನ ತಾಳಮದ್ದಳೆ ಪ್ರಯುಕ್ತ ನಡೆದ ‘ಬಂಗಾರದ ಹೆಜ್ಜೆ’ ಮಂಗಳೂರು ವಿಶ್ವವಿದ್ಯಾಲಯ ಮಟ್ಟದ ವಿದ್ಯಾರ್ಥಿಗಳಿಗೆ ಅಂತರ್ ಕಾಲೇಜು ಬಡಗುತಿಟ್ಟು ಯಕ್ಷಗಾನ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿದರು. ಸಮಯ ಕಳೆಯಲು ಯಕ್ಷಗಾನ ಕಲಿಯಬೇಡಿ. ಎಲ್ಲಾ ಯೋಗಾಸನಗಳ ಪರಿಚಯ ಯಕ್ಷಗಾನದಿಂದ ಸಿಗುತ್ತದೆ. ದೇಹಕ್ಕೆ ಉತ್ತಮ ಆರೋಗ್ಯ ಮತ್ತು ವ್ಯಾಯಾಮವನ್ನು ಕೊಡುತ್ತದೆ. ಅಂತೆಯೇ ಮಾನಸಿಕವಾಗಿ ಆತ್ಮ ವಿಶ್ವಾಸ ನೀಡುವುದಲ್ಲದೆ ದೃಢರಾಗಲೂ ಸಹಕಾರಿ. ಹಾಗಾಗಿ ವಿದ್ಯಾರ್ಥಿಗಳು ಯಕ್ಷಗಾನದಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಿ ಎಂದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಪುರಸಭೆ ಅಧ್ಯಕ್ಷ ಮೋಹನದಾಸ ಶೆಣೈ ಮಾತನಾಡಿ, ರಾಮಾಯಣ ಮತ್ತು ಮಹಾಭಾರತದ ಕಥೆಗಳನ್ನು ಆಡುಭಾಷೆಯ ರೂಪದಲ್ಲಿ ಜನರಿಗೆ ಅರ್ಥವಾಗುವಂತೆ ಸರಳವಾಗಿ ಉತ್ತಮ ಸಂದೇಶ ನೀಡುವ ಕಲೆ ಯಕ್ಷಗಾನ. ಅದನ್ನು ಉಳಿಸಿ ಬೆಳೆಸುವ ಈ ಪ್ರಯತ್ನ ನಿಜಕ್ಕೂ ಶ್ಲಾಘನೀಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಿಜಯ ಕರ್ನಾಟಕ ದಿನಪತ್ರಿಕೆಯು ವಿಶ್ವ ಪರಿಸರ ದಿನದ ಅಂಗವಾಗಿ ಶಾಲಾ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಉಡುಪಿ ಜಿಲ್ಲಾ ಮಟ್ಟದ ಚಿತ್ರಕಲೆ ಸ್ಪರ್ಧೆಯಲ್ಲಿ ಗಂಗೊಳ್ಳಿಯ ಕೊಂಚಾಡಿ ರಾಧಾ ಶೆಣೈ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 7ನೇ ತರಗತಿ ವಿದ್ಯಾರ್ಥಿ ಸಂಜಿತ್ ಎಂ. ದೇವಾಡಿಗ ದ್ವಿತೀಯ ಸ್ಥಾನವನ್ನು ಗಳಿಸಿರುತ್ತಾನೆ. ಅವನು ಗಂಗೊಳ್ಳಿಯ ಚಿತ್ರಕಲಾ ಶಿಕ್ಷಕ ಮಾಧವ ಎಮ್. ದೇವಾಡಿಗ ಮತ್ತು ಉಪನ್ಯಾಸಕಿ ಸಾವಿತ್ರಿ ಎಸ್. ದಂಪತಿ ಪುತ್ರ. ವಿದ್ಯಾರ್ಥಿಯ ಸಾಧನೆಗೆ ಶಾಲಾ ಎಸ್‌ಡಿಎಂಸಿ ಬಳಗ, ಮುಖ್ಯೋಪಾಧ್ಯಾಯರು, ಬೋಧಕ ಮತ್ತು ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಣ: ಇಲ್ಲಿನ ಮದರ್ ತೆರೇಸಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಪ್ರಣತಿ ಅವರು ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ಅವರು ಅಕ್ಟೋಬರ್ ತಿಂಗಳಿನಲ್ಲಿ “ಸೈಬರ್ ಸುರಕ್ಷತಾ ಜಾಗೃತಿ” ಬಗ್ಗೆ ಆಯೋಜಿಸಿದ ಎಮ್‌ಇಎಮ್‌ಇಎಸ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಗಳಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಅವರ ಈ ಸಾಧನೆಗೆ ಸಂಸ್ಥೆಯ ಸಂಸ್ಥಾಪಕರು, ಪಿಯು ಕಾಲೇಜು ಪ್ರಾಂಶುಪಾಲರು, ಉಪ ಪ್ರಾಂಶುಪಾಲರು, ಎಲ್ಲಾ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕಲಾವಿದನಾಗಿ, ವೈದ್ಯರಾಗಿ ಈ ಸಮಾಜಕ್ಕೆ ಡಾ. ಸತೀಶ್ ಪೂಜಾರಿ ಸೇವೆ ಅನನ್ಯ ಎಂದು ನಾಡೋಜ ಡಾ. ಜಿ. ಶಂಕರ್ ಹೇಳಿದರು. ಅವರು ಭಾನುವಾರದಂದು ಸರಕಾರಿ ಸಂಯುಕ್ತ ಪ್ರೌಢಶಾಲೆ ಮಣೂರು ಪಡುಕರೆಯಲ್ಲಿ ದಿ. ಡಾ. ಸತೀಶ್ ಪೂಜಾರಿ ಅವರ ಸ್ಮರಣಾರ್ಥ ಮನಸ್ಮಿತ ಫೌಂಡೇಶನ್, ಕೋಟ, ಗೀತಾನಂದ ಫೌಂಡೇಶನ್ ಮಣೂರು ಪಡುಕರೆ ಆಶ್ರಯದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಕಾರ್ಯಕ್ರಮ, ಕರೋಕೆ ಗಾಯನ ಸ್ಪರ್ಧೆ ಆಯೋಜಿಸಿ ವಿಜೇತರಿಗೆ ಬಹುಮಾನ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸಮಾಜದ ಬಗ್ಗೆ ಅವರಿಗಿದ್ದ ತುಡಿತ ಅಗಾಧ ಅಂತಹ ವ್ಯಕ್ತಿ ಕಳೆದುಕೊಂಡಿದ್ದು ನಮ್ಮ ದೌರ್ಭಾಗ್ಯ ಅವರ ಹೆಸರಿನಲ್ಲಿ ಕಿವಿ ತಪಾಸಣಾ ಕಾರ್ಯಕ್ರಮ ದೊಡ್ಡ ಮಟ್ಟದಲ್ಲಿ ಆಯೋಜಿಸಿ ನಾವು ನಿಮ್ಮ ಜತೆ ಕೈಜೋಡಿಸಲಿದ್ದೇವೆ ಎಂದರು. ಕೋಟದ ಪಡುಕರೆ ಗೀತಾನಂದ ಟ್ರಸ್ಟ್ ನ ಪ್ರವರ್ತಕ ಆನಂದ ಸಿ. ಕುಂದರ್ ಅಧ್ಯಕ್ಷತೆ ವಹಿಸಿದ್ದರು. ದಿ| ಡಾ| ಸತೀಶ್ ಪೂಜಾರಿ ಅವರ ಸಂಸ್ಮರಣೆಯನ್ನು ಬ್ರಹ್ಮಾವರ ಲೆಕ್ಕ ಪರಿಶೋಧಕ ಪದ್ಮನಾಭ ಕಾಂಚನ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕು ಮಟ್ಟದ ಪ್ರಸಕ್ತ ಸಾಲಿನ ಕ್ರೀಡಾಕೂಟದ ಬಾಲಕರ 200 ಮೀ. ಓಟದ 17ರ ವಯೋಮಾನದ ವಿಭಾಗದ ಸ್ಪರ್ಧೆಯಲ್ಲಿ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿ ವಿದ್ಯಾರ್ಥಿ ಪ್ರಥ್ವಿನ್ ಆರ್. ಮೊಗವೀರ ತೃತೀಯ ಸ್ಥಾನಗಳಿಸಿ ಕಂಚಿನ ಪದಕ ಪಡೆದಿದ್ದಾನೆ. ಸಾರ್ವಜನಿಕ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಜಿಲ್ಲಾ ಕಚೇರಿ ಮತ್ತು ವಕ್ವಾಡಿ ಸರಕಾರಿ ಪ್ರೌಢಶಾಲೆ ಆಶ್ರಯದಲ್ಲಿ ಈ ಕ್ರೀಡಾಕೂಟವನ್ನು ಆಯೋಜಿಸಲಾಗಿತ್ತು. ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷ ಡಾ. ರಮೇಶ್ ಶೆಟ್ಟಿ, ಕಾರ್ಯದರ್ಶಿ ಪ್ರತಾಪ್ ಚಂದ್ರ ಶೆಟ್ಟಿ, ಖಜಾಂಚಿ ಭರತ್ ಶೆಟ್ಟಿ, ಸಂಸ್ಥೆಯ ಮುಖ್ಯೋಪಾಧ್ಯಾಯ ಪ್ರದೀಪ್ ಕೆ. ವಿಜೇತ ವಿದ್ಯಾರ್ಥಿಯನ್ನು ಅಭಿನಂದಿಸಿದ್ದಾರೆ. ಈತ ರಾಘವೇಂದ್ರ ಮತ್ತು ಪ್ರತಿಮಾ ದಂಪತಿಯ ಪುತ್ರ. ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕ ಸತೀಶ್ ಕುಮಾರ್ ತರಬೇತಿ ನೀಡಿದ್ದರು. ದೈಹಿಕ ಶಿಕ್ಷಣ ಶಿಕ್ಷಕ ಸೂರ್ಯ ವ್ಯವಸ್ಥಾಪಕರಾಗಿದ್ದರು. ಸುಜ್ಞಾನ ಪದವಿ ಪೂರ್ವ ಕಾಲೇಜು ಮತ್ತು ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ಬೋಧಕ ಬೋಧಕೇತರ ವರ್ಗದವರು ಸಂತಸ ವ್ಯಕ್ತಪಡಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಭಾರತದ ನಿಜವಾದ ಶಕ್ತಿ ಅದರ ವೈವಿಧ್ಯತೆಯಲ್ಲಿ ಅಡಗಿದೆ. ದೇಶದ ಪ್ರತಿಯೊಂದು ಭಾಗದ ಸಂಸ್ಕೃತಿ ಮತ್ತು ಪರಂಪರೆಗಳು ಭಾರತದ ಅಸ್ತಿತ್ವವನ್ನು ಶ್ರೀಮಂತಗೊಳಿಸಿವೆ. ಪರಸ್ಪರ ಗೌರವ, ಸಹಬಾಳ್ವೆ ಮತ್ತು ಒಗ್ಗಟ್ಟಿನ ಮನೋಭಾವವೇ ನಿಜವಾದ ಏಕತೆಯ ಮೂಲ ಎಂದು ಕರ್ನಾಟಕ ಸರಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡು ರಾವ್ ಹೇಳಿದರು. ಅವರು ಮಿಜಾರಿನ ಆಳ್ವಾಸ್ ತಾಂತಿಕ ಮಹಾವಿದ್ಯಾಲಯದ ಸಭಾಂಗಣದಲ್ಲಿ ನಾರ್ತ್ ಈಸ್ಟರ್ನ್ ಪೀಪಲ್ಸ್ ಅಸೋಸಿಯೇಷನ್ (ನೇಪಮ್) ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಂಯುಕ್ತ ಆಶ್ರಯದಲ್ಲಿ ನಡೆದ ನೇಪಮ್ ಫ್ರೆಶರ್ಸ್ ಮೀಟ್ 2025 ಮತ್ತು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು. ಭಾರತದ ಸೌಂದರ್ಯ ಅದರ ವೈವಿಧ್ಯತೆಯಲ್ಲಿ ಅಡಗಿದೆ. ಪರಸ್ಪರದ ಭಿನ್ನತೆಯನ್ನು ಗೌರವಿಸಿ, ಸಾಮಾನ್ಯ ಮೌಲ್ಯಗಳಲ್ಲಿ ಒಂದಾಗುವ ಮನೋಭಾವವೇ ನಮ್ಮ ದೇಶದ ಶಕ್ತಿ. ಈಶಾನ್ಯ ಭಾರತದ ಜನರು ಕರ್ನಾಟಕದ ಜೀವನದ ಅಂಗವಾಗಿ ಬೆರೆತು, ರಾಷ್ಟ್ರದ ಏಕತೆಯನ್ನು ಬಲಪಡಿಸಿದ್ದಾರೆ ಎಂದರು. ಕಾರ್ಯಕ್ರಮದಲ್ಲಿ ಮಾತನಾಡಿದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕುಂದಾಪುರ ಹಾಗೂ ಸರಕಾರಿ ಪ್ರೌಢಶಾಲೆ ವಕ್ವಾಡಿ ಇವರ ಸಂಯುಕ್ತ ಆಶ್ರಯದಲ್ಲಿ ವಕ್ವಾಡಿಯಲ್ಲಿ ನಡೆದ, ಕುಂದಾಪುರ ತಾಲೂಕು ಮಟ್ಟದ 14 ರಿಂದ 17 ವರ್ಷ ವಯೋಮಾನದ ಬಾಲಕ- ಬಾಲಕಿಯರ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಇಲ್ಲಿನ ಮದರ್ ತೆರೆಸಾ ವಿದ್ಯಾಸಂಸ್ಥೆಯ 10ನೇ ತರಗತಿಯ ಅತ್ಯುತ್ತಮ ಕ್ರೀಡಾಪಟು ರೋಶನ್ ಆರ್. 100 ಮೀಟರ್ ಓಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ ಚಿನ್ನದ ಪದಕ ಪಡೆದಿದ್ದಾನೆ. 200 ಮೀಟರ್ ಓಟದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಗಳಿಸಿ, ಬೆಳ್ಳಿಯ ಪದಕ ಪಡೆದಿದ್ದಾನೆ. ಈ ಎರಡೂ ವಿಭಾಗಗಳಲ್ಲಿ ಉಡುಪಿ ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಭಾಗವಹಿಸಲು ಆಯ್ಕೆಯಾಗಿದ್ದಾನೆ. ಮದರ್ ತೆರೇಸಾ ಶಿಕ್ಷಣ ಸಂಸ್ಥೆಯ ಕೀರ್ತಿ ಹೆಚ್ಚಿಸಿರುವ ರೋಶನ್ ಗೆ ಹಾಗೂ ಅವನಿಗೆ ತರಬೇತಿ ನೀಡಿದ ದೈಹಿಕ ಶಿಕ್ಷಕರಿಗೆ ಮದರ್ ತೆರೇಸಾ ಶಿಕ್ಷಣ ಸಂಸ್ಥೆಯ ಶಾಲಾ ಆಡಳಿತ ಮಂಡಳಿ, ಪಿಯು ವಿಭಾಗದ ಪ್ರಾಂಶುಪಾಲರು, ಉಪ ಪ್ರಾಂಶುಪಾಲರು, ಶಾಲಾ ಮುಖ್ಯೋಪಾಧ್ಯಾಯಿನಿ, ವಿವಿಧ ವಿಭಾಗಗಳ ಮುಖ್ಯಸ್ಥರು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಸಾಲಿಗ್ರಾಮ ಪಟ್ಟಣಪಂಚಾಯತ್ ಸುವರ್ಣ ಮಹೋತ್ಸವ ಸಂಭ್ರಮವನ್ನು ಅರ್ಥಪೂರ್ಣಗೊಳಿಸಿದೆ ಎಂದು ಪಟ್ಟಣಪಂಚಾಯತ್ ಹಿರಿಯ ನಾಗರಿಕರಾದ ರಾಧಕೃಷ್ಣ ಮಯ್ಯ ಹೇಳಿದರು. ಅವರು ಸಾಲಿಗ್ರಾಮದ ತೋಡ್ಕಟ್ಟು ಹೊಸಬದುಕು ಆಶ್ರಮದಲ್ಲಿ ಪಟ್ಟಣಪಂಚಾಯತ್ ಸುವರ್ಣ ಮಹೋತ್ಸವ ಅಂಗವಾಗಿ ಹಮ್ಮಿಕೊಂಡ ಊಟೋಪಚಾರ ವಿತರಣೆ ಹಾಗೂ ವಿವಿಧ ಪರಿಕರ ಹಸ್ತಾಂತರಿಸುವ ಕಾರ್ಯಕ್ರಮದಲ್ಲಿ ಮಾತನಾಡಿದರು. ಸಾಲಿಗ್ರಾಮ ಪಟ್ಟಣಪಂಚಾಯತ್ ಕಾರ್ಯಕ್ರಮ ಆಯೋಜಿಸಿ ಹೊಸ ದಿಕ್ಕಿಗೆ ಮುನ್ನುಡಿ ಬರೆದಿದೆ ಅಲ್ಲದೆ ಆಶ್ರಮಕ್ಕೆ ನೆರವು ನೀಡುವ ಯೋಚನೆ ಯೋಜನೆ ಶ್ಲಾಘನೀಯ ಕಾರ್ಯ ಎಂದರು. ಇದೇ ವೇಳೆ ಸಾಲಿಗ್ರಾಮ ಪಟ್ಟಣಪಂಚಾಯತ್ ಅಧ್ಯಕ್ಷೆ ಸುಕನ್ಯಾ ಶೆಟ್ಟಿ ಅವರು ಆಶ್ರಮದ ಮುಖ್ಯಸ್ಥ ಹ.ರಾ ವಿನಯಚಂದ್ರ ಸಾಸ್ತಾನ ಅವರಿಗೆ ಪರಿಕರವನ್ನು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಸಾಲಿಗ್ರಾಮ ಪಟ್ಟಣಪಂಚಾಯತ್ ಉಪಾಧ್ಯಕ್ಷೆ ಗಿರಿಜಾ ಪೂಜಾರಿ, ಸದಸ್ಯರಾದ ರವೀಂದ್ರ ಕಾಮತ್, ಸಂಜೀವ ದೇವಾಡಿಗ, ಸ್ಥಾಯೀ ಸಮಿತಿಯ ಅನುಸೂಯ ಹೇರ್ಳೆ, ಮಾಜಿ ಸದಸ್ಯ ಕರುಣಾಕರ ಪೂಜಾರಿ, ಗ್ರಾಮದ ಪ್ರಮುಖರಾದ ಜಯೇಂದ್ರ ಪೂಜಾರಿ, ಸಂಜೀವ ಮರಕಾಲ ಉಪಸ್ಥಿತರಿದ್ದರು. ಪಟ್ಟಣಪಂಚಾಯತ್ ಮಾಜಿ ಅಧ್ಯಕ್ಷ ಪ್ರಸ್ತುತ ಸದಸ್ಯ…
