Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ರೋಟರಿ ವಲಯ-1ರ ಸಹಾಯಕ ಗವರ್ನರ್ ಆಗಿ ಐ. ನಾರಾಯಣ ಆಯ್ಕೆಯಾಗಿದ್ದಾರೆ. ವಲಯ ಒಂದರ ವ್ಯಾಪ್ತಿಯಲ್ಲಿ ಒಟ್ಟು ಎಂಟು ಕ್ಲಬ್‌ಗಳಿಗೆ ಸಹಾಯಕ ಗವರ್ನರ್ ಆಗಿ ಮಾರ್ಗದರ್ಶನ ನೀಡಲಿದ್ದಾರೆ. 2016ರಲ್ಲಿ ರೋಟರಿ ಕ್ಲಬ್ ಬೈಂದೂರಿನ ಸದಸ್ಯರಾಗಿ ರೋಟರಿ ಚಟುವಟಿಕೆಯಲ್ಲಿ ಸಕ್ರಿಯ ತೊಡಗಿಸಿಕೊಂಡ ಅವರು 2015-19ರ ಸಾಲಿಗೆ ಬೈಂದೂರು ರೋಟರಿಯ ಅಧ್ಯಕ್ಷರಾಗಿ ಕ್ಲಬ್ಬನ್ನು ಅತ್ಯಂತ ಯಶಸ್ವಿಯಾಗಿ ಮುನ್ನಡೆಸಿದರು. ನಂತರದ ವರ್ಷಗಳಲ್ಲಿ ವಲಯ ಮಟ್ಟದ ಹುದ್ದೆಗಳು ಹಾಗೂ ಜಿಲ್ಲಾ ರೋಟರಿ ಲಿಟರಸಿ ಮಿಷನ್ ಇದರ ವೈಸ್ ಚೇರ್ಮನ್ ಆಗಿ, 2024-25ರ ಸಾಲಿನ ಆರ್‌ಐಎಲ್‌ಎಂ ಜಿಲ್ಲಾ ಚೇರ್ಮನ್ ಆಗಿ ರೋಟರಿ ಸೇವೆಯಲ್ಲಿ ಜಿಲ್ಲಾ ನಾಯಕರಾಗಿ ಗುರುತಿಸಿಕೊಂಡಿದ್ದಾರೆ. ವಿವಿಧ ಸಾಮಾಜಿಕ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿರುವ ಅವರು ಉಡುಪಿ ಜಿಲ್ಲೆಯ ಪ್ರತಿಷ್ಠಿತ ಟೀಚರ್ಸ್ ಕೋ-ಆಪರೇಟಿವ್ ಬ್ಯಾಂಕ್‌ನಲ್ಲಿ ಹತ್ತು ವರ್ಷ ನಿರ್ದೇಶಕರಾಗಿ, ಒಂದು ಅವಧಿಗೆ ಉಪಾಧ್ಯಕ್ಷರಾಗಿ ಕೂಡ ಸೇವೆ ಸಲ್ಲಿಸಿರುತ್ತಾರೆ. ಕುಂದಾಪುರ ತಾಲೂಕು ಸರ್ಕಾರಿ ನೌಕರರ ಸಂಘದ ಸಂಘಟನಾ ಕಾರ್ಯದರ್ಶಿಯಾಗಿ, ಕ್ರೀಡಾ ಕಾರ್ಯದರ್ಶಿಯಾಗಿ, ಕರ್ನಾಟಕ ರಾಜ್ಯ ಸರ್ಕಾರಿ ಪ್ರಾಥಮಿಕ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕೋಟೇಶ್ವರದ ರಾಷ್ಟ್ರೀಯ ಹೆದ್ದಾರಿ ಬಳಿಯ ಮ್ಯಾಕ್ಸಿಮಾ ವಿಲ್ಲಾ ಮನೆಗೆ ಮಾರಕಾಸ್ತ್ರಗಳೊಂದಿಗೆ ಕಳ್ಳರು ನುಗ್ಗಲು ಯತ್ನಿಸಿದ ಘಟನೆ ಇತ್ತೀಚಿಗೆ ನಡೆದಿದೆ. ಬಾಗಿಲಿನ ನೆಟ್ ಮುರಿದು ಒಳಗೆ ನುಗ್ಗಲು ಕಳ್ಳರು ಪ್ರಯತ್ನಿಸಿದ್ದಾರೆ. ಬಾಗಿಲು ಮುರಿಯುವ ವೇಳೆ ಮನೆಯಾಕೆ ಎಚ್ಚರಗೊಂಡಿದ್ದಾರೆ. ಮಹಿಳೆಯ ಬೊಬ್ಬೆ ಮತ್ತು ಆಕೆ ಫೋನ್ ಕರೆ ಮಾಡುತ್ತಿರುವುದನ್ನು ಗಮನಿಸಿದ ಕಳ್ಳರು ಸ್ಥಳದಿಂದ ಕಾಲ್ಕಿತ್ತಿದ್ದಾರೆ. ಘಟನಾ ಸ್ಥಳಕ್ಕೆ ಕುಂದಾಪುರದ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಮನೆಯಲ್ಲಿ ಅಳವಡಿಸಲಾಗಿದ್ದ ಸಿಸಿ ಕ್ಯಾಮರಾದಲ್ಲಿ ಕಳ್ಳರ ಕೃತ್ಯ ಸೆರೆಯಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಅಖಿಲ ಭಾರತೀಯ ಗಂಧರ್ವ ಮಹಾವಿದ್ಯಾಲಯ ಮಂಡಲ ಮುಂಬೈ ಇದರ 2024-25ನೇ ಸಾಲಿನ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ಪ್ರಾವೇಶಿಕ ಪ್ರಥಮ ಪರೀಕ್ಷೆಯಲ್ಲಿ ಕುಂದಾಪುರದ ಗುರು ಪರಂಪರಾ ಸಂಗೀತ ಸಭಾದ ವಿದ್ಯಾರ್ಥಿ ಹಾಗೂ ಕೋಟ ವಿವೇಕ ಆಂಗ್ಲ ಮಾಧ್ಯಮ ಶಾಲೆಯ 10 ನೇ ತರಗತಿಯ ವಿದ್ಯಾರ್ಥಿ ಸಂಕಲ್ಪ್ ಕುಮಾರ್, 75 ರಲ್ಲಿ 70 ಅಂಕಗಳನ್ನು ಪಡೆದು ಹೊನ್ನಾವರ ಸೆಂಟರ್ ನಲ್ಲಿ ಪ್ರಥಮ ಸ್ಥಾನ ಗಳಿಸಿರುತ್ತಾರೆ. ಈತ ಎಮ್‌ಐಟಿ ಮಣಿಪಾಲದ ಪ್ರಾಧ್ಯಾಪಕ  ಡಾ. ಸಂಪತ್ ಕುಮಾರ್ ಹಾಗೂ ಶಿಲ್ಪಾ ದಂಪತಿಗಳ ಪ್ರಥಮ ಪುತ್ರ. ಅವರು ಗೋಪಾಡಿ ವಿದ್ವಾನ್ ಸತೀಶ್ ಭಟ್ ಮಾಳಕೊಪ್ಪ ಹಾಗೂ ವಿದುಷಿ ಪ್ರತಿಮಾ ಭಟ್ ಮಾಳಕೊಪ್ಪ ಅವರಲ್ಲಿ ಕಳೆದ ಎಂಟು ವರ್ಷಗಳಿಂದ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ಅಭ್ಯಾಸ ಮಾಡುತ್ತಿದ್ದಾರೆ. ಅಲ್ಲದೆ 2024-25 ನೇ ಸಾಲಿನ ಡ್ರಾಯಿಂಗ್ ಸೀನಿಯರ್ ಪರೀಕ್ಷೆಯಲ್ಲೂ ವಿಶಿಷ್ಟ ಶ್ರೇಣಿಯೊಂದಿಗೆ ಉತ್ತೀರ್ಣನಾಗಿರುತ್ತಾರೆ. ಸಂಕಲ್ಪ್ ಕುಮಾರ್ ಅವರ ಸಾಧನೆಗೆ ಗುರು ಪರಂಪರಾ ಸಂಗೀತ ಸಭಾ, ಕುಂದಾಪುರ ಹಾಗೂ ಕೋಟ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಎಆರ್‌ಎಸ್‌ಐ ಅವರು ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಪೊಲೀಸ್ ಕ್ರೀಡಾಕೂಟದಲ್ಲಿ 45 ವರ್ಷ ಮೇಲ್ಪಟ್ಟ ವರ್ಗದಲ್ಲಿ 100ಮೀ ಓಟದಲ್ಲಿ ಶಂಕರ್ ಪೂಜಾರಿ ಅವರು ದ್ವಿತೀಯ ಸ್ಥಾನ ಹಾಗೂ 200ಮೀ ಓಟದಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ಮೂಲತಃ ಬೈಂದೂರು ತಾಲೂಕು ಬಿಜೂರಿನವರಾದ ಶಂಕರ ಪೂಜಾರಿ ಅವರು ಕ್ರೀಡಾ ಕ್ಷೇತ್ರದಲ್ಲಿ ಉತ್ತಮ ಸಾಧನೆ ತೋರಿದ್ದು, ಓಟ, ರಿಲೇ ಮೊದಲಾದ ವಿಭಾಗದಲ್ಲಿ ರಾಜ್ಯ, ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದ ತನಕವೂ ಭಾಗವಹಿಸಿದ್ದಾರೆ. 2014ರಲ್ಲಿ ನಡೆದ 26ನೇ ಮಲೇಷಿಯಾ ಅಥ್ಲೆಟಿಕ್ ಚಾಂಪಿಯನ್’ಶಿಪ್’ನಲ್ಲಿ 2 ಚಿನ್ನ ಹಾಗೂ ಎರಡು ಬೆಳ್ಳಿಯ ಪದಕ ಗೆದ್ದಿದ್ದರು ಹಾಗೂ ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಮಾಸ್ಟ್ ಸ್ಪೋರ್ಟ್ಸ್ 2021 ಕ್ರೀಡಾಕೂಟ 100 ಹಾಗೂ 200 ಮೀಟರ್ ಓಟದ ಸ್ವರ್ಧೆಯಲ್ಲಿ ಅವರು ಬೆಳ್ಳಿಯ ಪದಕ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದರು. ಶಂಕರ ಪೂಜಾರಿ ಅವರು ಪ್ರಸ್ತುತ ಅವರು ಯಡ್ತಾಡಿ ಸೈಬ್ರಕಟ್ಟೆಯಲ್ಲಿ ನೆಲೆಸಿದ್ದಾರೆ. ಅವರಿಗೆ ಮಾನ್ಯ ಡಿಎಸ್‌ಪಿ ಹಾಗೂ ಉಡುಪಿ ಜಿಲ್ಲೆಯ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ರಾಜ್ಯದಲ್ಲಿ ಕರ್ನಾಟಕ ದಲಿತ ಸಂಘದ ಸಮಿತಿ ಕಳೆದ ಹಲವರು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿವೆ. ಸಮಾಜದಲ್ಲಿ ಸಂಕಷ್ಠಕ್ಕೆ ಒಳಗಾಗಿರುವ ಸಮುದಾಯಗಳಿಗೆ ಹೋರಾಟ, ಪ್ರತಿಭಟನೆಯ ಮೂಲಕ ನ್ಯಾಯ ಒದಗಿಸಲಾಗುತ್ತಿದೆ. ರಾಜ್ಯದ ಎಲ್ಲ ಜಿಲ್ಲಾ ಕೇಂದ್ರ ಹಾಗೂ ತಾಲೂಕು ಕೇಂದ್ರಗಳಲ್ಲಿ ಶಾಖೆಗಳ ಮೂಲಕ ಸಂಘಟನೆಗೆ ಆದ್ಯತೆ ನೀಡಲಾಗಿದೆ ಎಂದು ಕರ್ನಾಟಕ ದಲಿತ ಸಂಘದ ಸಮಿತಿ ರಾಜ್ಯ ಸಂಘಟನಾ ಸಂಚಾಲಕ ಸುಂದರ್ ಮಾಸ್ತರ್ ಹೇಳಿದರು. ಅವರು ರೋಟರಿ ಸಮುದಾಯ ಭವನದಲ್ಲಿ ನಡೆದ ಕರ್ನಾಟಕ ದಲಿತ ಸಂಘದ ಸಮಿತಿ, ಅಂಬೇಡ್ಕರ್‌ವಾದ ಜಿಲ್ಲಾ ಸಮಿತಿ, ಬೈಂದೂರು ತಾಲೂಕು ಸಮಿತಿ ವತಿಯಿಂದ ನೂತನ ಪದಾಧಿಕಾರಿಗಳ ಪದಗ್ರಹಣ ಮತ್ತು ಭೀಮ ಶಕ್ತಿ ಸಮಾವೇಶ ಉದ್ಘಾಟಿಸಿ ಮಾತನಾಡಿದರು. ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಸಾಮೂಹಿಕ ಪುಷ್ಪನಮನ ಸಲ್ಲಿಸಲಾಯಿತು. ಸಮುದಾಯದ ಶೈಕ್ಷಣಿಕ ಸಾಧಕ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ, ಬೈಂದೂರು ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ, ಜಿಲ್ಲಾ ಪ್ರಧಾನ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ 2024-25 ನೇ ಸಾಲಿನ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ರಾಜೀವ್ ಗಾಂಧಿ ವಿಶ್ವವಿದ್ಯಾಲಯದ ಕೋರ್ಸುಗಳಿಗೆ ಶುಲ್ಕ ಮರುಪಾವತಿ ಕಾರ್ಯಕ್ರಮಕ್ಕೆ ವೆಬ್‌ಸೈಟ್ https://ssp.postmatric.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಜುಲೈ 10 ರವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಇಲಾಖಾ ಸಹಾಯವಾಣಿ ಸಂಖ್ಯೆ: 8050770005, ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ ಸಂಖ್ಯೆ: 1902, ಇ-ಮೇಲ್ postmetrichelp@karnataka.gov.in ಅನ್ನು ಸಂಪರ್ಕಿಸಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಸಿಐಎಸ್‌ಸಿಇ ನಡೆಸುತ್ತಿರುವ ಗೇಮ್ಸ್ ಮತ್ತು ಸ್ಪೋರ್ಟ್ಸ್ 2025-26ರ ಸ್ಪರ್ಧೆಗಳ ಅಂಗವಾಗಿ ಸೋಮವಾರ ಹಟ್ಟಿಅಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ಖೋ ಖೋ ಸ್ಪರ್ಧೆಗಳನ್ನು ನಡೆಸಲಾಯಿತು. ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿಗಳು ಮತ್ತು ಶಾಲಾ ಪ್ರಾಂಶುಪಾಲರಾದ ಶರಣ ಕುಮಾರ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಕ್ರೀಡೆಯಲ್ಲಿ ಸ್ಪರ್ಧೆ ಇರಬೇಕು. ಸೋಲು ಕೂಡ ಗೆಲುವಿನ ಮೂಲವಾದ್ದರಿಂದ ಸೋತಿದ್ದೇವೆಂದು ನೊಂದುಕೊಳ್ಳಬಾರದು. ಪ್ರಾಮಾಣಿಕವಾಗಿ ಆಟಗಳನ್ನು ಆಡಬೇಕು ಎಂದು ವಿದ್ಯಾರ್ಥಿಗಳನ್ನು ಹುರಿದುಂಬಿಸಿದರು. 14 ವರ್ಷದೊಳಗಿನ ವಯೋಮಿತಿಯ ಹುಡುಗರ ವಲಯ ಮಟ್ಟದ ಖೋ ಖೋ ಸ್ಪರ್ಧೆಯಲ್ಲಿ ಟ್ರಿನಿಟಿ ಸೆಂಟ್ರಲ್ ಸ್ಕೂಲ್ ಪಾರಂಪಳ್ಳಿ, ಉಡುಪಿ ಪ್ರಥಮ ಸ್ಥಾನವನ್ನು, ಸೈಂಟ್ ಫಿಲಿಪ್ಸ್ ಸೆಂಟ್ರಲ್ ಸ್ಕೂಲ್, ಬಸ್ರೂರು ದ್ವಿತೀಯ ಸ್ಥಾನವನ್ನು, ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆ ತೃತೀಯ ಸ್ಥಾನವನ್ನು ಪಡೆದುಕೊಂಡಿತು. 14 ವರ್ಷದೊಳಗಿನ ವಯೋಮಿತಿಯ ಹುಡುಗಿಯರ ವಲಯ ಮಟ್ಟದ ಖೋ ಖೋ ಸ್ಪರ್ಧೆಯಲ್ಲಿ ಟ್ರಿನಿಟಿ ಸೆಂಟ್ರಲ್ ಸ್ಕೂಲ್ ಪಾರಂಪಳ್ಳಿ, ಉಡುಪಿ ಪ್ರಥಮ ಸ್ಥಾನವನ್ನು, ಸೈಂಟ್ ಫಿಲಿಪ್ಸ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ವಡೇರಹೋಬಳಿ ಗ್ರಾಮದ ಬಿ.ಸಿ ರಸ್ತೆ ಕಾಂತರಬೆಟ್ಟು ನಿವಾಸಿ ಜಯೇಂದ್ರ (26) ಎಂಬ ಯುವಕನು ಜೂನ್ 23 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 6 ಇಂಚು ಎತ್ತರ, ಕೋಲು ಮುಖ, ಸದೃಢ ಮೈಕಟ್ಟು, ಎಣ್ಣೆಕಪ್ಪು ಮೈಬಣ್ಣ ಹೊಂದಿರುತ್ತಾರೆ. ಸದ್ರಿ ವ್ಯಕ್ತಿಯ ಬಗ್ಗೆ ಮಾಹಿತಿ ದೊರೆತಲ್ಲಿ ಕುಂದಾಪುರ ಪೊಲೀಸ್ ಠಾಣೆ ದೂ.ಸಂಖ್ಯೆ: 08254-230338, ಡಿ.ವೈ.ಎಸ್.ಪಿ ಕುಂದಾಪುರ ಮೊ.ನಂ: 9480805422, ಪಿ.ಐ ಕುಂದಾಪುರ ಠಾಣೆ ಮೊ.ನಂ: 9480805455, ಪಿ.ಎಸ್.ಐ ಕುಂದಾಪುರ ಠಾಣೆ ಮೊ.ನಂ: 8277988957 ಹಾಗೂ 8277988959 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕುಂದಾಪುರ ಪೊಲೀಸ್ ಠಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ‌ ಹಾಗೂ ಪ್ರೌಢಶಾಲೆ ಇಲ್ಲಿನ ವಿದ್ಯಾದಾಯಿನಿ ಸಭಾಭವನದಲ್ಲಿ ಈ ದಿನ ವಿಜ್ಞಾನ ಪ್ರಯೋಗಾಲಯಕ್ಕೆ ಅಗತ್ಯವಿರುವ ಉಪಕರಣಗಳನ್ನು ಮತ್ತು ತರಗತಿಗಳಿಗೆ ಗ್ರೀನ್ ಬೋರ್ಡ್ ಗಳನ್ನು ರೋಟರಿ ಕ್ಲಬ್ ಕುಂದಾಪುರ ಮಿಡ್ ಟೌನ್ ಇವರ ವತಿಯಿಂದ ನೀಡಲಾಯಿತು. ರೋಟರಿ ಕುಂದಾಪುರ ಮಿಡ್ ಟೌನ್ ಇದರ ಅಧ್ಯಕ್ಷರಾದ ರೊಟೇರಿಯನ್ ಶೇಖರ್. ಎನ್. ಶೆಟ್ಟಿ aವರು ತಮ್ಮ ಅಧ್ಯಕ್ಷೀಯ ಅವಧಿಯ ಕೊನೆಯ ದಿನದ ಕೊನೆಯ ಕಾರ್ಯಕ್ರಮವನ್ನು ತಮ್ಮ ಊರಿನ ಶಾಲೆಗೆ ದೇಣಿಗೆ ನೀಡಿ, ಮಕ್ಕಳಿಗೆ ಉತ್ತಮ ಕಿವಿಮಾತು ಹೇಳುವ ಮೂಲಕ ನಡೆಸಿಕೊಟ್ಟರು ಮತ್ತು ಇದರೊಂದಿಗೆ ತಮ್ಮ ಅಧ್ಯಕ್ಷೀಯ ಅವಧಿಯಲ್ಲಿ ಮಾಡಿದ ಅನೇಕಾನೇಕ ಸಮಾಜ ಸೇವೆಗಳಿಂದ ಸಾರ್ಥಕತೆ ಕಂಡು ಕೊಂಡಿರುವುದಾಗಿ ತಿಳಿಸಿದರು. ಗ್ರಾಮೀಣ ಭಾಗದ ಶಾಲೆಯಲ್ಲಿ ವಿಜ್ಞಾನ ಪ್ರಯೋಗಾಲಯದ ಕನಸು ನನಸಾಗಿಸುವಲ್ಲಿ ರೊಟೇರಿಯನ್ ಶೇಖರ್. ಎನ್. ಶೆಟ್ಟಿ ಅವರ ದೇಣಿಗೆ ಬೃಹತ್ ಕೊಡುಗೆಯಾಗಿದೆ ಎಂದು ಸಂಜಯಗಾಂಧಿ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷರಾದ ಸಂತೋಷ್ ಕುಮಾರ್ ಶೆಟ್ಟಿ ಬಲಾಡಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಮರವಂತೆಯ ಶ್ರೀ ರಾಮ ಮಂದಿರ ಮೀನುಗಾರರ ಸೇವಾ ಸಮಿತಿ ವತಿಯಿಂದ ಮರವಂತೆ ಬ್ರೇಕ್ ವಾಟರ್ ಸಮೀಪದ ಕಡಲ ತೀರದಲ್ಲಿ ಸಮುದ್ರ ಪೂಜೆ ಸೋಮವಾರ ನಡೆಯಿತು. ಇಂದು ಬೆಳಿಗ್ಗೆ ಮರವಂತೆಯ ಶ್ರೀ ರಾಮ ಮಂದಿರದ, ಶ್ರೀ ಗಂಗಾಧರೇಶ್ವರ ದೇವಸ್ಥಾನ ಹಾಗೂ ವರಾಹ ಸ್ವಾಮಿ ದೇವಸ್ಥಾನದ ದೇವರ ಸನ್ನಿಧಿಯಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ ಮೀನುಗಾರರು ವಿಶೇಷ ಪೂಜೆ ಸಲ್ಲಿಸಿದರು. ಕರಾವಳಿ ಮಹಾ ಬೊಬ್ಬರ್ಯ ದೇವಸ್ಥಾನದಲ್ಲಿ ಗಣಹೋಮ ಸೇವೆ ಸಲ್ಲಿಸಿದ ಬಳಿಕ ಮರವಂತೆ ಬ್ರೇಕ್‌ವಾಟರ್‌ನ ಕಡಲ ತೀರದಲ್ಲಿ ಸಮುದ್ರ ರಾಜನಿಗೆ ಹಾಲು, ಅಣಬೆ, ಹಣ್ಣು, ಹಳದಿ ಕುಂಕುಮದೊಂದಿಗೆ ವಿಶೇಷ ಪೂಜೆ ಸಲ್ಲಿಸಿದರು. ಅರ್ಚಕ ಮಹಾಬಲೇಶ್ವರ ಭಟ್ ನೇತೃತ್ವದಲ್ಲಿ ಸಮುದ್ರ ಪೂಜೆಯ ಧಾರ್ಮಿಕ ವಿಧಿವಿಧಾನಗಳು ಸಂಪನ್ನಗೊಂಡಿತು. ಮುಂದಿನ ಮೀನುಗಾರಿಕಾ ಋತುವಿನಲ್ಲಿ ಸಮೃದ್ಧ ಮತ್ಸ್ಯ ಸಂಪತ್ತು ದೊರೆಯುವಂತಾಗಲಿ, ಮೀನುಗಾರರು ಸಮುದ್ರಕ್ಕೆ ಇಳಿಯುವಾಗ ಯಾವುದೇ ಅಪಾಯ ಎದುರಾಗದಿರಲಿ, ಪ್ರಕೃತಿ ವಿಕೋಪಗಳು ಬಾರದಿರಲಿ, ಎಲ್ಲಾ ಮೀನುಗಾರರ ಬಾಳಿನಲ್ಲಿ ಸುಖ ಶಾಂತಿ ನೆಮ್ಮದಿ ಇರುವಂತಾಗಲಿ, ಸಮಸ್ತ…

Read More