ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಸಾಮಾಜಿಕ, ಸಾಹಿತ್ಯಿಕ, ಶೈಕ್ಷಣಿಕ ಬದುಕಿಗೆ ಸಂತೋಷ್ ಕುಮಾರ್ ಕೋಟ ತನ್ನ ಬದುಕನ್ನು ಸಮರ್ಪಸಿಕೊಂಡಿದ್ದರು ಅವರೊಬ್ಬ ಶಿಕ್ಷಕ ವೃತ್ತಿಗೆ ಸೀಮಿತವಾಗಿದರೆ ಇಡೀ ವ್ಯವಸ್ಥೆಗೆ ಮಾದರಿ ವ್ಯಕ್ತಿತ್ವವನ್ನು ರೂಪಿಸಿಕೊಂಡಿದ್ದಾರೆ ಎಂದು ರಾಷ್ಟ್ರೀಯ ಮಾನವಹಕ್ಕು ರಾಜ್ಯ ಸಮಿತಿಯ ಪ್ರಧಾನಕಾರ್ಯದರ್ಶಿ ಕೋಟ ದಿನೇಶ್ ಗಾಣಿಗ ಅಭಿಪ್ರಾಯಪಟ್ಟರು. ಅವರು ಭಾನುವಾರ ಮಣೂರು ಪಡುಕರೆಯಲ್ಲಿ ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಶ್ರೀ ರಾಮ್ ಫ್ರೆಂಡ್ಸ್ ಸಂಯೋಜನೆಯೊಂದಿಗೆ ವಿವಿಧ ಸಂಘಸಂಸ್ಥೆಗಳ ಸಹಕಾರದೊಂದಿಗೆ 267ನೇ ಭಾನುವಾರದ ಅಂಗವಾಗಿ ಇತ್ತೀಚಿಗೆ ಅಗಲಿದ ಸಾಹಿತಿ, ಶಿಕ್ಷಕ ಸಂತೋಷ್ ಕುಮಾರ್ ಕೋಟ ಇವರಿಗೆ ಹಸಿರು ನುಡಿನ ಕಾರ್ಯಕ್ರಮದಲ್ಲಿ ಮಾತನಾಡಿದರು. ಸಾಮಾಜಿಕ ವ್ಯವಸ್ಥೆಯ ಬಗ್ಗೆ ಸದಾ ತುಡಿತ ಹೊಂದಿದ ಅವರು,ಸಾಂಸ್ಕೃತಿಕವಾಗಿ ಹಲವಾರು ಕಾರ್ಯಕ್ರಮಗಳನ್ನು ರೂಪಿಸಿ ನಿರೂಪಕರಾಗಿ ಜನಮನವನ್ನು ಗೆದ್ದಿದ್ದಾರೆ.ಶಿಕ್ಷಣ ಕ್ಷೇತ್ರದಲ್ಲಿ ಸೇವಾ ಭಾವನೆಯಡಿ ಕಾರ್ಯನಿರ್ವಹಿಸಿ ಮಕ್ಕಳ ಶೈಕ್ಷಣಿಕ ಬದುಕಿಗೆ ಮುನ್ನುಡಿ ಬರೆದಿದ್ದಾರೆ. ನಿಸ್ವಾರ್ಥ ಬದುಕಿನೊಂದಿಗೆ ಸಮಾಜದ ಬಗ್ಗೆ ಅವರಿಗಿದ್ದ ಕಾಳಜಿ ಅಪಾರವಾದ್ದದ್ದು, ಕಲಾ ಕ್ಷೇತ್ರಕ್ಕೆ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಾತಿಗಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪರಿಶಿಷ್ಟ ಜಾತಿ /ಪರಿಶಿಷ್ಟ ವರ್ಗದ ಸಾಮಾನ್ಯ ಪದವಿ ಕೋರ್ಸಿನಲ್ಲಿ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ವೆಬ್ಸೈಟ್ https://shp.karnataka.gov.in/bcwd ನಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಆಗಸ್ಟ್ 25 ರ ವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ:8050770004 ಮತ್ತು 8050770005 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಇಲ್ಲಿನ ಕೋಟದ ಭಾರತೀಯ ಜನತಾ ಪಾರ್ಟಿ ಕಾರ್ಯಕರ್ತ ಹರ್ತಟ್ಟು ಕೀರ್ತೀಶ್ ಪೂಜಾರಿ ಕೋಟ ಅವರನ್ನು ಕೇಂದ್ರ ಸರಕಾರದ ಬಿ.ಎಸ್.ಎನ್.ಎಲ್ ಅನುಷ್ಠಾನ ಸಮಿತಿ ಜಿಲ್ಲಾ ನಾಮನಿರ್ದೇಶಿತ ಸದಸ್ಯರನ್ನಾಗಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಶಿಫಾರಸ್ಸಿನ ಮೇರೆಗೆ ಆಯ್ಕೆಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟದ ವತಿಯಿಂದ ಆದಿವಾಸಿ ಜೀವನ ಶಿಕ್ಷಣ ಕೇಂದ್ರ ಪೆರ್ನಾಲ್ ನಲ್ಲಿ ಕಾಪು ತಾಲೂಕು ಮಟ್ಟದ ಸಮುದಾಯದ ಯುವಜನತೆಗೆ ಸಾಮಾಜಿಕ ಭದ್ರತಾ ಯೋಜನೆಗಳು ಹಾಗೂ ಮೂಲಭೂತ ದಾಖಲಾತಿಗಳಿಗೆ ಸಂಬಂಧಿಸಿದ ಒಂದು ದಿನದ ತರಬೇತಿ ಕಾರ್ಯಗಾರ ನಡೆಯಿತು. ಕಾಪು ತಾಲೂಕು ತಹಶೀಲ್ದಾರರಾದ ಪ್ರತಿಭಾ ಅವರು ತರಬೇತಿಯ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿ, ಭಾರತ ದೇಶದ ಪ್ರಜೆಗಳಾಗಿ ಪ್ರತಿಯೊಬ್ಬ ವ್ಯಕ್ತಿಯು ಮೂಲಭೂತ ದಾಖಲಾತಿಗಳನ್ನು ಹೊಂದುವುದು ಅತ್ಯವಶ್ಯಕ. ಆರ್ಥಿಕವಾಗಿ ಹಿಂದುಳಿದ ಸಮುದಾಯವನ್ನು ಸರ್ಕಾರದ ಬೇರೆ ಬೇರೆ ಇಲಾಖೆಗಳ ಮುಖಾಂತರ ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳನ್ನು ಜಾರಿಗೆ ತಂದಿದೆ. ಈ ಸಂದರ್ಭದಲ್ಲಿ ಯೋಜನೆಗಳನ್ನು ಪಡೆಯಲು ಆವಶ್ಯಕ ದಾಖಲೆಗಳನ್ನು ಒದಗಿಸಬೇಕಾಗುತ್ತದೆ. ಇವೆಲ್ಲವನ್ನು ಪಡೆಯಲು ಶಿಕ್ಷಣ ಹಾಗೂ ತರಬೇತಿಗಳು ಮುಖ್ಯ. ಜ್ಞಾನವೇ ಶಕ್ತಿ ಜ್ಞಾನ ಮತ್ತು ಆತ್ಮವಿಶ್ವಾಸವನ್ನು ಬೆಳೆಸಿಕೊಂಡಾಗ ಜೀವನದಲ್ಲಿ ಮುಂದೆ ಬರಲು ಸಾಧ್ಯ ಎಂದರು. ನಂತರ ಗ್ರಾಮ ಸಹಾಯಕರಾದ ಶ್ರೀನಿವಾಸ್ ಅವರು ಕಂದಾಯ ಇಲಾಖೆಯಲ್ಲಿ ಸಿಗುವಂತಹ ಯೋಜನೆಗಳು ವಿವಿಧ ಪಿಂಚಣಿಗಳು ಹಾಗೂ ಭೂಮಿಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಕಿರಿಮಂಜೇಶ್ವರದ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ನಲ್ಲಿ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಜನತಾ ರಸಬಗ್ಗೆ ಎಂಬ ಶೀರ್ಷಿಕೆಯಡಿಯಲ್ಲಿ ಮುದ್ದುಕೃಷ್ಣ ಸ್ಪರ್ಧೆಯು ಭಾನುವಾರ ಸಂಪನ್ನಗೊಂಡಿತು. ಜೀ ಕನ್ನಡ ಸರಿಗಮಪ ಖ್ಯಾತಿಯ ಬಾಲಗಾಯಕಿ ದಿಯಾ ಹೆಗ್ಡೆ ಈ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ನಮ್ಮಂತಹ ಮಕ್ಕಳಿಗೆ ಬಾಲ್ಯದ ಹಂತದಲ್ಲಿಯೇ ವೇದಿಕೆಗಳು, ಯಥೇಚ್ಛ ಅವಕಾಶಗಳು ದೊರೆಯಬೇಕು. ನಮ್ಮಲ್ಲಿರುವ ಪ್ರತಿಭೆಯನ್ನು ಗುರುತಿಸಿಕೊಳ್ಳಲು, ನಮ್ಮ ಸಾಧನೆಯ ಹಾದಿಯನ್ನು ಕಂಡುಕೊಳ್ಳಲು ಇಂತಹ ವೇದಿಕೆಗಳು ಬಹು ಸಹಕಾರಿಯಾಗುತ್ತವೆ. ಇವು ನಮ್ಮಲ್ಲಿ ಆತ್ಮವಿಶ್ವಾಸವನ್ನು ವೃದ್ಧಿಸುತ್ತವೆ” ಎಂದರು. ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಜನತಾ ಸಮೂಹ ಸಂಸ್ಥೆಗಳ ಅಧ್ಯಕ್ಷರಾದ ಗಣೇಶ್ ಮೊಗವೀರ ಅವರು ಮಾತನಾಡಿ, “ನಮ್ಮ ಪರಂಪರೆಯ ಉದಾತ್ತ ಅಂಶಗಳನ್ನು ನಮ್ಮ ವಿದ್ಯಾರ್ಥಿಗಳಿಗೆ ತಿಳಿಯಪಡಿಸಲು ವಿವಿಧ ರೀತಿಯಲ್ಲಿ ಪ್ರಯತ್ನ ಶೀಲರಾಗಿದ್ದೇವೆ. ವಿದ್ಯಾರ್ಥಿಗಳ ಸರ್ವತೋಮುಖ ಪ್ರಗತಿಯೇ ನಮ್ಮಯ ಗುರಿಯಾಗಿದೆ. ಈ ನಾಡಿನ ಕಲೆ, ಸಾಹಿತ್ಯ, ಸಂಸ್ಕೃತಿಯ ವೈಭವವನ್ನು ಇಂದಿನ ಮುದ್ದುಕೃಷ್ಣ ಸ್ಪರ್ಧೆಯ ಮೂಲಕ ಯುವ ಪೀಳಿಗೆಯ ಮುಂದೆ ಅನಾವರಣಗೊಳಿಸಿದ್ದೇವೆ” ಎಂದರು. ಸಮಾರಂಭದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ಕೈಗೊಂಡಿರುವ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿಗಳನ್ನು ವಿಳಂಬವಿಲ್ಲದೇ ತ್ವರಿತವಾಗಿ ಪೂರ್ಣಗೊಳಿಸುವುದರೊಂದಿಗೆ ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡುವಂತೆ ಉಡುಪಿ – ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅಧಿಕಾರಿಗಳಿಗೆ ಹಾಗೂ ಅಭಿಯಂತರರುಗಳಿಗೆ ಸೂಚನೆ ನೀಡಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ಹೆದ್ದಾರಿ 169 ಎ ಗೆ ಸಂಬಂಧಿಸಿದಂತೆ ಹಾಗೂ ಇಂದ್ರಾಳಿ ರೈಲ್ವೆ ಮೇಲ್ಸೇತುವೆ ಪ್ರಗತಿ ಪರಿಶೀಲನೆ ಕುರಿತು ಚರ್ಚಿಸುವ ಸಲುವಾಗಿ ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಕೈಗೊಂಡಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳು ನಿಗಧಿತ ಕಾಲಾವಧಿಯಲ್ಲಿ ಪೂರ್ಣಗೊಳ್ಳದೇ ಸಾರ್ವಜನಿಕರಿಗೆ ಹೆಚ್ಚಿನ ತೊಂದರೆ ಉಂಟಾಗುತ್ತಿದೆ. ಮಳೆಯಿಂದಾಗಿ ರಸ್ತೆಗಳು ಹೊಂಡ-ಗುಂಡಿಗಳಿಂದ ಕೂಡಿದ್ದು, ಇವುಗಳ ದುರಸ್ಥಿಗೆ ಹಾಗೂ ನಿರ್ವಹಣೆಗೆ ಮುಂದಾಗಬೇಕು ಎಂದರು. ರಾಷ್ಟ್ರೀಯ ಹೆದ್ದಾರಿ 169 ಎ ಕರಾವಳಿ ಜಂಕ್ಷನ್ನಿಂದ ಮಲ್ಪೆವರೆಗಿನ ರಸ್ತೆ ಕಾಮಗಾರಿಗೆ ಅಗತ್ಯವಿರುವ ಭೂ ಸ್ವಾಧೀನ ಪ್ರಕ್ರಿಯೆಗೆ ಸಂಬಂಧಿಸಿದ ಪರಿಹಾರದ ಹಣವನ್ನು ಕಾಲಮಿತಿಯಲ್ಲಿ ನೀಡಬೇಕು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಹಳ್ಳಿಯ ಎಲ್ಲ ಮಕ್ಕಳಿಗೂ ಶಿಕ್ಷಣ ಸಿಗಬೇಕು. ಆಗ ಮಾತ್ರ ಗಾಂಧಿ ಕಂಡ ಕನಸ್ಸು ಸಾರ್ಥಕತೆ ಪಡೆಯುತ್ತದೆ.ಹಳ್ಳಿಯ ಪ್ರತಿ ಮಗು ಸಮಾಜದ ಮುಖ್ಯ ವಾಹಿನಿಗೆ ಬರಲು ನಾವೆಲ್ಲಾ ಶ್ರಮಿಸಬೇಕು. ವಿದ್ಯಾರ್ಥಿಗಳು ಕೂಡ ವೀರ ಯೋಧರ ತ್ಯಾಗ ಸ್ಮರಿಸಿ ಅವರ ಆದರ್ಶ ಗಳನ್ನುತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೆಮ್ಮಾಡಿಯ ಜನತಾ ಪಿಯು ಕಾಲೇಜಿನ ಪ್ರಾಂಶುಪಾಲರಾದ ಗಣೇಶ ಮೊಗವೀರ ಹೇಳಿದರು. ಅವರು ಹೆಮ್ಮಾಡಿಯ ಜನತಾ ಪಿಯು ಕಾಲೇಜು ಹಾಗೂ ಕಿರಿಮಂಜೇಶ್ವರ ಜನತಾ ನ್ಯೂ ಇಂಗ್ಲೀಷ್ ಮಿಡಿಯಂ ಸ್ಕೂಲ್ ಇವರ ಆಸರೆಯಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ-ಜನತಾ ವಿರಾಟ್ ಕಾರ್ಯಕ್ರಮದಲ್ಲಿ ಮಾತನಾಡಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಬೆಳಿಗ್ಗೆ ನಡೆದ ದ್ವಜಾರೋಹಣ ಕಾರ್ಯಕ್ರಮದಲ್ಲಿ ವಿವಿವಿ ಮಂಡಳಿಯ ಅಧ್ಯಕ್ಷರು ಹಾಗೂ ಮಾಜಿ ಶಾಸಕರಾದ ಗೋಪಾಲ ಪೂಜಾರಿ ಅವರು ಧ್ವಜಾರೋಹಣಗೈದು ದೇಶ ಭಕ್ತಿ, ದೇಶ ಪ್ರೇಮ ಬೆಳಿಸಿಕೊಂಡು ಆದರ್ಶ ವ್ಯಕ್ತಿಗಳಾಗಿ ಎಂದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಸಾಧಕರಿಗೆ ಸನ್ಮಾನ:ಕಾರ್ಯಕ್ರಮದಲ್ಲಿ ನಿವೃತ್ತ ಯೋಧರಾದ ಚಂದ್ರಶೇಖರ ನಾವುಡ, ಪ್ರಗತಿ ಪರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಇಲ್ಲಿನ ಮದರ್ ತೆರೆಸಾ ಶಿಕ್ಷಣ ಸಂಸ್ಥೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿ ಹಾಗೂ ದೇಶಭಕ್ತಿಯಿಂದ ಕೂಡಿದ ಭಾವಭರಿತ ವಾತಾವರಣದಲ್ಲಿ ಆಚರಿಸಲಾಯಿತು. ಈ ಆಚರಣೆಯ ಮುಖ್ಯ ಅತಿಥಿಯಾಗಿ ಕುಂದಾಪುರ ವೃತ್ತ ನಿರೀಕ್ಷಕರಾದ ಜಯರಾಮ್ ಸಿ. ಗೌಡ ಅವರು ಆಗಮಿಸಿ ಧ್ವಜಾರೋಹಣ ನೆರವೇರಿಸಿದರು. ಧ್ವಜಾರೋಹಣದ ಬಳಿಕ, ವಿದ್ಯಾರ್ಥಿಗಳಿಂದ ಶಿಸ್ತುಬದ್ಧವಾದ ಪಥಸಂಚಲನ ನಡೆಯಿತು. ಪಥಸಂಚಲನದ ಗೌರವರಕ್ಷೆಯನ್ನು ಧ್ವಜಾರೋಹಣಗೈದ ಜಯರಾಮ್ ಸಿ.ಗೌಡ ಸ್ವೀಕರಿಸಿದರು. ನಂತರ ಅವರು ವಿದ್ಯಾರ್ಥಿಗಳೊಂದಿಗೆ ಮಾತನಾಡಿ, ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಮತ್ತು ಬಲಿದಾನವನ್ನು ಸ್ಮರಿಸಿ, ವಿದ್ಯಾರ್ಥಿಗಳಿಗೆ ದೇಶಭಕ್ತಿಯ ಮೌಲ್ಯಗಳನ್ನು ಅಂಗೀಕರಿಸುವಂತೆ ಪ್ರೇರಣೆಯ ಮಾತುಗಳನ್ನಾಡಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಸಂಸ್ಥಾಪಕರು, ಪ್ರಾಂಶುಪಾಲರು, ಮುಖ್ಯೋಪಾಧ್ಯಾಯರು, ಉಪನ್ಯಾಸಕರು, ಶಿಕ್ಷಕರು ಮತ್ತು ಶಿಕ್ಷಕಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು. ಧ್ವಜಾರೋಹಣದ ನಂತರ, ಪೂರ್ವ ಪ್ರಾಥಮಿಕ ಹಾಗೂ ಕಿರಿಯ ಪ್ರಾಥಮಿಕ ವಿದ್ಯಾರ್ಥಿಗಳು ಸ್ವಾತಂತ್ರ್ಯ ಹೋರಾಟಗಾರರ ವೇಷಧಾರಣೆ ಮಾಡಿಕೊಂಡು ಏಕಪಾತ್ರಾಭಿನಯವನ್ನು ಅತ್ಯಂತ ಮನೋಜ್ಞವಾಗಿ ಮಾಡಿದರು. ಅದೇ ರೀತಿಯಲ್ಲಿ, ಕಿರಿಯ ಪ್ರಾಥಮಿಕ ವಿಭಾಗದಿಂದ ಹಿಡಿದು ಪದವಿ ಪೂರ್ವ ವಿಭಾಗದವರೆಗೆ ವಿಭಾಗವಾರು ಒಂದೊಂದು ವಿದ್ಯಾರ್ಥಿಗಳನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಇಲ್ಲಿನ ಹಿಂದು ಜಾಗರಣ ವೇದಿಕೆ ಇದರ ಆಶ್ರಯದಲ್ಲಿ ಅಖಂಡ ಭಾರತ ಸಂಕಲ್ಪ ದಿನ ಮತ್ತು ಪಂಜಿನ ಮೆರವಣಿಗೆ ಗಂಗೊಳ್ಳಿಯಲ್ಲಿ ಗುರುವಾರ ಸಂಜೆ ನಡೆಯಿತು. ಗಂಗೊಳ್ಳಿ ಶ್ರೀ ವೀರೇಶ ಮಾಂಗಲ್ಯ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಾಮಾಜಿಕ ಕಾರ್ಯಕರ್ತ ವಿಜಯ ಕೊಡವೂರು ದಿಕ್ಸೂಚಿ ಭಾಷಣ ಮಾಡಿ, ಈ ಹಿಂದಿನ ಕಹಿ ನೆನಪುಗಳನ್ನು ಮುಂದಿನ ಪೀಳಿಗೆಗೆ ಕೊಡಬೇಕು, ನೆನಪಿಡಬೇಕು ಮತ್ತು ಜಾಗೃತರಾಗಿರಬೇಕು ಎಂಬ ಉದ್ದೇಶದಿಂದ ಪ್ರತಿ ವರ್ಷ ಅಖಂಡ ಭಾರತ ಸಂಕಲ್ಪ ಕಾರ್ಯಕ್ರಮವನ್ನು ಮಾಡುತ್ತಾ ಬಂದಿದ್ದೇವೆ. ತುಂಡಾಗಿರುವ ಹಿಂದುಗಳನ್ನು ಮತ್ತೆ ಜೋಡಿಸಬೇಕು, ತುಂಡಾಗಿರುವ ಭೂಪ್ರದೇಶವನ್ನು ಮತ್ತೆ ಜೋಡಿಸಬೇಕು, ನೆನಪು ಹೋಗಿರುವ ಹಿಂದುಗಳನ್ನು ಮತ್ತೆ ಸೇರಿಸಬೇಕು, ನಿದ್ರೆಯಲ್ಲಿರುವ ಹಿಂದುಗಳನ್ನು ಮತ್ತೆ ನೆನಪು ಮಾಡಿಸಿ ಜಾಗೃತಿ ಮಾಡಿಸಬೇಕು, ನೋವುಂಡ ಹಿಂದುಗಳನ್ನು ಮತ್ತೆ ಜಾಗೃತಿ ಮಾಡಬೇಕು ಎಂಬ ಉದ್ದೇಶ ಈ ಕಾರ್ಯಕ್ರಮದ ಹಿಂದಿದೆ ಎಂದು ಹೇಳಿದರು. ನಮ್ಮ ದೇಶದ ಮೇಲೆ ಅದೆಷ್ಟೋ ಅಕ್ರಮಣಗಳು ನಡೆದಿದ್ದರೂ, ದೇವಸ್ಥಾನದ ವಿಗ್ರಹಗಳನ್ನು ಭಗ್ನ ಮಾಡಿದ್ದರೂ, ಅತ್ಯಾಚಾರಗಳು ನಡೆದಿದ್ದರೂ, ಸಾವಿರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮೂಡ್ಲಕಟ್ಟೆಯ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆಯ ಬಿಕಾಂ ಮತ್ತು ಬಿಬಿಎ ವಿದ್ಯಾರ್ಥಿಗಳಿಂದ ಗುಲ್ವಾಡಿಯ ಪ್ರಭಾಕಿರಣ್ ಟೈಲ್ ವರ್ಕ್ಸ್ ಗೆ ಕೈಗಾರಿಕಾ ಭೇಟಿ ನೀಡಲಾಯಿತು. ಸಂಸ್ಥೆಯು ವಿಸ್ತರಣಾ ಚಟುವಟಿಕೆ ಭಾಗವಾಗಿ ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು. ವಿದ್ಯಾರ್ಥಿಗಳು ಕೈಗಾರಿಕಾ ಪ್ರಕ್ರಿಯೆಗಳ ನೇರ ಅನುಭವ ಪಡೆದುಕೊಂಡರು. ಟೈಲ್ಸ್ ಉತ್ಪಾದನಾ ಪ್ರಕ್ರಿಯೆ, ಉಪಕರಣಗಳ ಬಳಕೆ ಹಾಗೂ ನಿರ್ವಹಣೆಯ ಕುರಿತು ಪ್ರಾಯೋಗಿಕ ಜ್ಞಾನವನ್ನು ಪಡೆದುಕೊಂಡರು. ಅಲ್ಲದೆ ಇದರಿಂದ ವಾಣಿಜ್ಯ ಜ್ಞಾನವನ್ನು ವಿಸ್ತರಿಸಿ ಕೊಳ್ಳುವುದರ ಮೂಲಕ ಕೈಗಾರಿಕಾ ಕ್ಷೇತ್ರದ ನೈಜ ಪರಿಸ್ಥಿತಿಯನ್ನು ಅರ್ಥ ಮಾಡಿಕೊಂಡರು. ಕಾಲೇಜಿನ ಉಪ ಪ್ರಾಂಶುಪಾಲರಾದ ಜಯಶೀಲ್ ಕುಮಾರ್, ವಾಣಿಜ್ಯ ಮತ್ತು ಆಡಳಿತ ವಿಭಾಗದ ಮುಖ್ಯಸ್ಥರಾದ ಅರ್ಚನಾ ಉಪಾಧ್ಯ ಹಾಗೂ ವಾಣಿಜ್ಯಶಾಸ್ತ್ರ ಉಪನ್ಯಾಸಕಿ ನಿಧಿ, ಕಾರ್ಖಾನೆಯ ವ್ಯವಸ್ಥಾಪಕರಾದ ರಾಜು ಅವರು ಉಪಸ್ಥಿತರಿದ್ದರು.
