ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಹರಿಯಾಣದಲ್ಲಿ ನವೆಂಬರ್ 26 ರಿಂದ 30ರವರೆಗೆ ನಡೆಯಲಿರುವ ಪದವಿ ಪೂರ್ವ ಕಾಲೇಜುಗಳ ರಾಷ್ಟ್ರ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟಕ್ಕೆ ಆಳ್ವಾಸ್ ಪದವಿ ಪೂರ್ವ ಕಾಲೇಜಿನ 12 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಬಾಲಕರ ವಿಭಾಗದಲ್ಲಿ:ಸಮರ್ಥ್ – 1500ಮೀ, ಆಕಾಶ್ ಹುಕ್ಕೇರಿ – 400ಮೀ ಹರ್ಡಲ್ಸ್, ಮನೀಶ್ – ತ್ರಿವಿಧ ಜಿಗಿತ, ರೂಪೇಶ್ ಲಮನಿ – ಪೋಲೊ ವಾಲ್ಟ್ ಬಾಲಕಿಯರ ವಿಭಾಗದಲ್ಲಿ:ನಾಗಿಣಿ – 800ಮೀ, 1500ಮೀ, ಗುಡ್ಡಗಾಡು ಓಟ, 4*400ಮೀ ರಿಲೇ ಚರಿಷ್ಮಾ – 3000ಮೀ, 1500ಮೀ, ಗುಡ್ಡಗಾಡು ಓಟ, 4*400ಮೀ ರಿಲೇ, ಗೋಪಿಕಾ ಜಿ – 100ಮೀ, 4*100ಮೀ ರಿಲೇ, ಮಾನ್ವಿ ವಿ ಶೆಟ್ಟಿ – 4*100ಮೀ ರಿಲೇ, ಭಾನವಿ – 4*100ಮೀ ರಿಲೇ, ವೈಷ್ಣವಿ – 4*100ಮೀ ರಿಲೇ, ನಿರ್ಮಲಾ – 400ಮೀ ಹರ್ಡಲ್ಸ್, 4*400ಮೀ ರಿಲೇ, ಜಾನಕಿ ಜಿ ಸಿ – 400ಮೀ ಹರ್ಡಲ್ಸ್, 4*400ಮೀ ರಿಲೇ ಆಯ್ಕೆಯಾದ ಕ್ರೀಡಾಪಟುಗಳನ್ನು ಸಂಸ್ಥೆಯ ಅಧ್ಯಕ್ಷ ಡಾ. ಎಂ.ಮೋಹನ ಆಳ್ವ ಅಭಿನಂದಿಸಿದ್ದಾರೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜನಸಾಮಾನ್ಯರಿಗೆ ಉತ್ತಮ ಆರೋಗ್ಯ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ಅನೇಕ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಜಾರಿಗೆ ತರಲಾಗಿದೆ. ಇದನ್ನು ಪೂರ್ಣ ಪ್ರಮಾಣದಲ್ಲಿ ಅನುಷ್ಠಾನಗೊಳಿಸುವುದರೊಂದಿಗೆ ಜನರು ಉತ್ತಮ ಆರೋಗ್ಯ ವಹಿಸುವಂತೆ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಆರೋಗ್ಯ ಇಲಾಖೆಯ ವಿವಿಧ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಾರ್ವಜನಿಕರು ಯಾವುದೇ ರೋಗ ಬಂದು ಚಿಕಿತ್ಸೆ ಪಡೆಯುವ ಬದಲು ರೋಗಗಳು ಹರಡದಂತೆ ಜನಸಾಮಾನ್ಯರಲ್ಲಿ ಆರೋಗ್ಯ ಶಿಕ್ಷಣದ ಬಗ್ಗೆ ತಿಳಿಸಿ ಅಗತ್ಯ ಮುನ್ನೆಚ್ಚರಿಕಾ ಕ್ರಮ ತೆಗೆದುಕೊಳ್ಳುವ ಬಗ್ಗೆ ಪ್ರಚಾರ ಪಡಿಸಬೇಕು. ಒಂದೊಮ್ಮೆ ರೋಗದ ಲಕ್ಷಣಗಳು ಕಂಡು ಬಂದ ಕೂಡಲೇ ಸಮೀಪದ ಆರೋಗ್ಯ ಕೇಂದ್ರ ಅಥವಾ ಆಸ್ಪತ್ರೆಗಳಿಗೆ ಭೇಟಿ ನೀಡಿ ಅವುಗಳ ಬಗ್ಗೆ ಚಿಕಿತ್ಸೆ ಪಡೆಯುವಂತೆ ನೋಡಿಕೊಳ್ಳುವುದು ಆರೋಗ್ಯ ಇಲಾಖೆಯ ಅಧಿಕಾರಿಗಳು, ನೌಕರರು ಹಾಗೂ ಆಶಾ ಕಾರ್ಯಕರ್ತರುಗಳು ಕ್ರಮವಹಿಸಬೇಕು ಎಂದರು. ಹೆಣ್ಣು ಮಕ್ಕಳು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ಕ್ಷೇತ್ರವು ಬಹುತೇಕ ಅರಣ್ಯ ಪ್ರದೇಶಗಳನ್ನು ಹೊಂದಿದ್ದು ಸಾಮಾನ್ಯ ಅರಣ್ಯ ಪ್ರದೇಶ ಸೇರಿದಂತೆ ಮೀಸಲು ಅರಣ್ಯ, ಸಾಮಾಜಿಕ ಅರಣ್ಯ ಹಾಗೂ ಕೆಸಿಡಿಸಿ ವ್ಯಾಪ್ತಿ ದೊಡ್ಡದಿರುವ ಕಾರಣ ಗ್ರಾಮೀಣ ಪ್ರದೇಶಗಳಲ್ಲಿ ಅಭಿವೃದ್ಧಿ ಯೋಜನೆಗಳು ಜಾರಿಯಾದ ಸಂದರ್ಭದಲ್ಲಿ ಅರಣ್ಯ ಇಲಾಖೆಯಿಂದ ಅಗತ್ಯ ನಿರಾಕ್ಷೇಪಣೆ ಪಡೆಯಲು ಅವಕಾಶವಿದ್ದರೂ, ಅರಣ್ಯ ಕಾನೂನಿನ ಅರ್ಥೈಸುವಿಕೆ ಹಾಗೂ ಪರಿವೆಷಿ ತಂತ್ರಾಂಶಗಳ ಬಳಕೆ ಬಗ್ಗೆ ಅನುಷ್ಠಾನ ಇಲಾಖೆಗಳಿಗೆ ಮಾಹಿತಿ ಕೊರತೆಯ ಕಾರಣದಿಂದ ಯೋಜನೆಗಳು ನೆನೆಗುದಿಗೆ ಬಿದ್ದು ರದ್ದುಗೊಳ್ಳುವ ಸಂದರ್ಭವಿರುವುದರಿಂದ ಅದನ್ನು ತಡೆಗಟ್ಟಲು ಮುಂದಿನ ದಿನಗಳಲ್ಲಿ ಅರಣ್ಯ ಅದಾಲತ್ ಮಾದರಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಶೆಟ್ಟಿ ಗಂಟಿಹೊಳೆ ಹೇಳಿದರು. ಅವರು ತಾಲೂಕು ಆಡಳಿತ ಕಚೇರಿ ಪ್ರಜಾ ಸೌಧದಲ್ಲಿ ಕುಂದಾಪುರ ಉಪ ವಿಭಾಗಾಧಿಕಾರಿಯವರ ಸಮಕ್ಷಮ ಬೈಂದೂರು ಕ್ಷೇತ್ರದ ವಿವಿಧ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಅರಣ್ಯ, ಕಂದಾಯ ಹಾಗೂ ಇತರೆ ಇಲಾಖೆಗಳ ಜೊತೆ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಕೊಲ್ಲೂರು ಗ್ರಾಮದ ಸ. ನಂ 121…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಮಕ್ಕಳು ಸಿಕ್ಕ ಅವಕಾಶಗಳನ್ನು ಬಳಸಿಕೊಂಡು ಬೆಳೆಯಬೇಕು. ಅಂತಹ ಸಾಧಕ ಮಕ್ಕಳನ್ನು ಅತಿಥಿಗಳಾಗಿ ಮಾಡಿ. ಮಕ್ಕಳ ಹಬ್ಬ ಮಾಡಿದಾಗ ಇತರೆ ವಿದ್ಯಾರ್ಥಿಗಳಿಗೂ ಸ್ಫೂರ್ತಿಯಾಗುತ್ತದೆ ಎಂದು ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಮಾಜಿ ಸಂಸದರಾದ ಕೆ. ಜಯಪ್ರಕಾಶ್ ಹೆಗ್ಡೆ ನುಡಿದರು. ಅವರು ಹೆಸಕುತ್ತೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಲಾಗಿದ್ದ ಮಕ್ಕಳ ಹಬ್ಬದ ಸಡಗರ ಸಿಂಗಾರದಲ್ಲಿ ಭಾಗವಹಿಸಿ ಮಾತನಾಡಿದರು. ಕಾರ್ಯಕ್ರಮವನ್ನು ಕಾಂತಾರ ಚಾಪ್ಟರ್ 1 ಸಿನಿಮಾದ ಬಾಲನಟಿ ಸಮೀಕ್ಷ ಸುರೇಶ ಹಕ್ಲಾಡಿ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ವಿದ್ಯಾರ್ಥಿ ನಾಯಕಿ ಆರಾಧನಾ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಶಾಲಾ ಉಪ ನಾಯಕ ಅದ್ವಿತ್ ವಿ. ಶೆಟ್ಟಿ, ಶಾಲಾ ವಿಪಕ್ಷ ನಾಯಕಿ ರನ್ಯಾ, ಶಾಲಾ ಸಾಂಸ್ಕೃತಿಕ ಸಚಿವರಾದ ಕನಿಷ್ಕ, ಆರಾಧ್ಯ ಎಂ.ಪಿ. ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಸಮೀಕ್ಷ ಸುರೇಶ್ ಹಕ್ಲಾಡಿ ಅವರನ್ನು ಕೆ. ಜಯಪ್ರಕಾಶ್ ಹೆಗಡೆಯವರು ಸನ್ಮಾನಿಸಿದರು. ಕುಂದಾಪುರ ತಾಲೂಕು ಅಕ್ಷರ ದಾಸೋಹದ ಸಹಾಯಕ ನಿರ್ದೇಶಕರಾದ ಚಂದ್ರ ನಾಯ್ಕ್ ಶುಭ ಹಾರೈಸಿದರು. ಹಾಗೆಯೇ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಡಿಸೆಂಬರ್ 21 ರಂದು ನಡೆಯುವ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ 0-5 ಒಳಗಿನ ಜಿಲ್ಲೆಯ ಎಲ್ಲಾ ಮಕ್ಕಳಿಗೂ ಪೋಷಕರು ತಪ್ಪದೇ ಪಲ್ಸ್ ಪೋಲಿಯೋ ಲಸಿಕೆ ಹಾಕಿಸುವಂತೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಕರೆ ನೀಡಿದರು. ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದ ಜಿಲ್ಲಾ ಲಸಿಕಾ ಕಾರ್ಯಪಡೆ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಾಷ್ಟ್ರೀಯ ಪಲ್ಸ್ ಪೊಲೀಯೋ ಕಾರ್ಯಕ್ರಮದಡಿಯಲ್ಲಿ ಡಿಸೆಂಬರ್ 21 ರ ಭಾನುವಾರದಂದು 0-5 ವರ್ಷದೊಳಗಿನ ಮಕ್ಕಳಿಗೆ ಜಿಲ್ಲೆಯ ಸುಮಾರು 660 ಲಸಿಕಾ ಕೇಂದ್ರಗಳಲ್ಲಿ ಪೊಲೀಯೋ ಹನಿಗಳನ್ನು ಹಾಕಲಾಗುವುದು ಎಂದ ಅವರು, ಯಾವುದೇ ಮಕ್ಕಳು ಪಲ್ಸ್ ಪೊಲೀಯೋ ಲಸಿಕೆಯಿಂದ ತಪ್ಪಿ ಹೋಗದಂತೆ ನೋಡಿಕೊಳ್ಳಬೇಕು ಎಂದರು. ಜಿಲ್ಲೆಯ ಗ್ರಾಮಾಂತರ ಪ್ರದೇಶಗಳಲ್ಲಿ 53,595 ಹಾಗೂ ನಗರ ಪ್ರದೇಶಗಳಲ್ಲಿ 13,545 ಸೇರಿದಂತೆ ಒಟ್ಟು 67,140 ಐದು ವರ್ಷದೊಳಗಿನ ಮಕ್ಕಳನ್ನು ಈಗಾಗಲೇ ಗುರುತಿಸಲಾಗಿದೆ. ಇವರುಗಳಿಗೆ ಲಸಿಕೆಗಳನ್ನು ನೀಡಲು ಗ್ರಾಮೀಣ ಹಾಗೂ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಇಲ್ಲಿನ ಸಾಸ್ತಾದ ಶ್ರೀ ಬ್ರಹ್ಮಬೈದರ್ಕಳ ಶ್ರೀ ಕ್ಷೇತ್ರ ಗೋಳಿ ಗರಡಿಯಲ್ಲಿ ಶ್ರೀ ಕ್ಷೇತ್ರದ ವತಿಯಿಂದ 2025-26ನೇ ಸಾಲಿನ ಯಕ್ಷಗಾನಮೇಳ ತಿರುಗಾಟದ ಉದ್ಘಾಟನಾ ಕಾರ್ಯಕ್ರಮವು ಇತ್ತೀಚಿಗೆ ಶ್ರೀ ಕ್ಷೇತ್ರದಲ್ಲಿ ಜರಗಿತು. ಕ್ಷೇತ್ರದ ವತಿಯಿಂದ ಯಕ್ಷ ಕಲಾವಿದ ನಾಯ್ಕನಕಟ್ಟೆ ಭಾಸ್ಕರ್ ಪೂಜಾರಿ ಅವರನ್ನು ಸನ್ಮಾನಿಸಲಾಯಿತು. ಮುಖ್ಯ ಅತಿಥಿಯಾಗಿ ಸಾಲಿಗ್ರಾಮ ಶ್ರೀ ಗುರುನರಸಿಂಹ ದೇಗುಲದ ಅಧ್ಯಕ್ಷ ಡಾ. ಕೆ.ಎಸ್. ಕಾರಂತ, ಸಿಎ ದೇವಾನಂದ್, ಪ್ರೊಫೆಸರ್ ಉದಯಕುಮಾರ್ ಶೆಟ್ಟಿ, ಕ್ಷೇತ್ರದ ಪಾತ್ರಿ ಶಂಕರ್ ಪೂಜಾರಿ, ಮೇಳದ ಯಜಮಾನ ಜಿ.ವಿಠ್ಠಲ ಪೂಜಾರಿ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಗಣೇಶ್ ಪಾಂಡೇಶ್ವರ ನಿರೂಪಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ರ ಅಲೆಮಾರಿ / ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ, ಇಲಾಖೆಯ ಮೂಲಕ ನೀಡಲಾಗುತ್ತಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಅಲೆಮಾರಿ / ಅರೆ ಅಲೆಮಾರಿ ಜನಾಂಗದ ಮೆಟ್ರಿಕ್ ನಂತರದ ಅರ್ಹತಾ ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ ಮತ್ತು ವಿದ್ಯಾಸಿರಿ ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ ವೆಬ್‌ಸೈಟ್ https://ssp.postmatric.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ನವೆಂಬರ್ 25 ರ ವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಇಲಾಖಾ ಸಹಾಯವಾಣಿ ಸಂಖ್ಯೆ: 8050770005 ಅಥವಾ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ ಸಂಖ್ಯೆ: 1902 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಕ್ರೀಡಾಕೂಟಗಳು ವ್ಯಕ್ತಿಯ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ವರ್ಧಿಸುತ್ತವೆ. ಒತ್ತಡ ಪೂರ್ಣ ಸನ್ನಿವೇಶಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಇಲಾಖೆಯು ಆಯೋಜಿಸಿರುವ ಕ್ರೀಡಾಕೂಟದಿಂದ ಪೊಲೀಸರ ದೈಹಿಕ ಆರೋಗ್ಯದ ಜೊತೆಗೆ ಮನಸ್ಸು ಕೂಡ ಲವಲವಿಕೆಯಿಂದೊಡಗೂಡಿ ಅವರ ಕಾರ್ಯಕ್ಷಮತೆ ಹೆಚ್ಚುತ್ತದೆ ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ ಹೇಳಿದರು. ಅವರು ಮಂಗಳವಾರ ನಗರದ ಅಜ್ಜರಕಾಡು ಮಹಾತ್ಮಾ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಪೊಲೀಸ್ ಇಲಾಖೆಯ ವಾರ್ಷಿಕ ಕ್ರೀಡಾಕೂಟ-2025 ಅನ್ನು ಉದ್ಘಾಟಿಸಿ ಮಾತನಾಡಿದರು. ಪೊಲೀಸ್ ಇಲಾಖೆಯು ಅಚ್ಚುಕಟ್ಟಾಗಿ ಮತ್ತು ಶಿಸ್ತುಬದ್ಧವಾಗಿ ಕ್ರೀಡಾಕೂಟವನ್ನು ಆಯೋಜಿಸಿದೆ. ಕ್ರೀಡಾಮನೋಭಾವನೆಯನ್ನು ಹೆಚ್ಚಿಸುವ ಇಂತಹ ಕ್ರೀಡಾಕೂಟಗಳು ನಿಯಮಿತವಾಗಿ ನಡೆಯುತ್ತಿದ್ದಾಗ ದೇಹ ಸುಸ್ಥಿತಿಯಲ್ಲಿರುತ್ತದೆ. ಪೊಲೀಸರು ಹಲವಾರು ದಿನಗಳವರೆಗೆ ನಿರಂತರವಾಗಿ ಕೆಲಸ ಮಾಡುವ ಸನ್ನಿವೇಶಗಳು ಎದುರಾಗುತ್ತವೆ. ಈ ಸಮಯದಲ್ಲಿ ದೈಹಿಕ ಹಾಗೂ ಮಾನಸಿಕವಾಗಿ ಫಿಟ್ ಆಗಿರಬೇಕಾಗುತ್ತದೆ. ನಿತ್ಯವೂ ಕ್ರೀಡೆ ಅಥವಾ ವ್ಯಾಯಾಮಗಳಲ್ಲಿ ತೊಡಗಿಸಿಕೊಂಡಾಗ ಫಿಟ್ನೆಸ್ ಅನ್ನು ಕಾಪಾಡಿಕೊಳ್ಳಬಹುದು. ಇತರ ಇಲಾಖೆಗಳು ಕೂಡ ಪೊಲೀಸ್ ಇಲಾಖೆಯಿಂದ ಸ್ಪೂರ್ತಿ ಪಡೆದು ಕ್ರೀಡಾಕೂಟಗಳನ್ನು ಆಯೋಜಿಸಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಚಲಿಸುತ್ತಿದ್ದ ಕಾರಿಗೆ ಅಚಾನಕ್ ಆಗಿ ಬೆಂಕಿ ತಗುಲಿ, ಸಂಪೂರ್ಣ ಕಾರು ಸುಟ್ಟು ಕರಕಲಾದ ಘಟನೆ ನಾವುಂದ ಫ್ಲೈಓವರ್ ಮೇಲೆ ಗುರುವಾರ ಮಧ್ಯಾಹ್ನ ನಡೆದಿದೆ. ಕೋಟೇಶ್ವರದಿಂದ – ಉಪ್ಪುಂದ ಕಡೆಗೆ ತೆರಳುತ್ತಿದ್ದ ಮಾರುತಿ ಸ್ವಿಫ್ಟ್ ಕಾರಿಗೆ ನಾವುಂದ ಪೇಟೆ ಬಳಿ ಬರುತ್ತಿದ್ದಂತೆ ಅಚಾನಕ್ ಆಗಿ ಬೆಂಕಿ ತಗುಲಿದೆ. ಕಾರಿನಲ್ಲಿ ಚಾಲಕ ಸಹಿತ ಇಬ್ಬರು ಪ್ರಯಾಣಿಸುತ್ತಿದ್ದು, ಫ್ಲೈಓವರ್ ಮೇಲೆ ಕಾರು ನಿಲ್ಲಿಸಿ ತಕ್ಷಣ ಇಳಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ನಿತೀಶ್ ವಾಹನ ಚಲಾಯಿಸುತ್ತಿದ್ದು, ಅವರ ಅಜ್ಜಿ ಜೊತೆಯಲ್ಲಿದ್ದರು. ಕಾರು ಸಂಪೂರ್ಣ ಸುಟ್ಟು ಕರಕಲಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸಿದ್ದಾರೆ. ಕೆಲಕಾಲ ರಾಷ್ಟ್ರೀಯ ಹೆದ್ದಾರಿ ಬ್ಲಾಕ್ ಆಯಿತು. ಹೈವೇ ಪಟ್ರೋಲ್ ಸಿಬ್ಬಂದಿಗಳು ಸುಗಮ ಸಂಚಾರಕ್ಕೆ ಅನುವುಮಾಡಿಕೊಟ್ಟರು. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ಕಂಬದಕೋಣೆ ಗ್ರಾಮದ ಹಳಗೇರಿಯ ಶ್ರೀ ಕೊಕ್ಕೇಶ್ವರ ದೇವಸ್ಥಾನದಲ್ಲಿ ರಂಗಪೂಜಾದಿ ದೀಪೋತ್ಸವ ಕಾರ್ಯಕ್ರಮವು ಬುಧವಾರದಂದು ನಾನಾ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ನಡೆಯಿತು. ದೀಪೋತ್ಸವ ಕಾರ್ಯಕ್ರಮದ ಅಂಗವಾಗಿ ಶ್ರೀ ದೇವರಿಗೆ ವಿಶೇಷ ಅಲಂಕಾರ ಪೂಜೆ, ಮಂಗಳಾರತಿ ಸೇವೆ ಹಾಗೂ ಲಘುಉಪಹಾರ ಸೇವೆ ನಡೆಯಿತು. ಹಳಗೇರಿ ಭಜನಾ ಮಹಿಳೆಯರ ತಂಡದಿಂದ ಭಜನಾ ಕಾರ್ಯಕ್ರಮ ನಡೆಯಿತು. ಈ ವೇಳೆ ದೇವಸ್ಥಾನದ ಮೊಕ್ತೇಸರರು, ಭಜನಾ ತಂಡದ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು, ಆಡಳಿತ ಮಂಡಳಿ ಪಧಾಧಿಕಾರಿಗಳು ಮತ್ತು ಊರ ಜನರು ಉಪಸ್ಥಿತರಿದ್ದರು.
