Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಬಸ್ರೂರು ಶ್ರೀ ಶಾರದಾ ಕಾಲೇಜಿನ ವಾಣಿಜ್ಯ ಮತ್ತು ನಿರ್ವಹಣಾ ಶಾಸ್ತ್ರ ವಿಭಾಗದ ವತಿಯಿಂದ ಪ್ರಥಮ ವರ್ಷದ ಸಿ.ಎ. ಸಿ.ಎಸ್. ವಿದ್ಯಾರ್ಥಿಗಳಿಗೆ ಅಭಿವಿನ್ಯಾಸ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ಜರುಗಿತು. ಕಾರ್ಯಕ್ರಮವನ್ನು ಕಾಲೇಜಿನ ಟ್ರಸ್ಟಿಗಳಾದ ಅನುಪಮಾ ಎಸ್. ಶೆಟ್ಟಿ, ಉದ್ಘಾಟಿಸಿ ಮಾತನಾಡಿ, ಸಿ.ಎ. ಮತ್ತು ಸಿ.ಎಸ್. ನಂತರ ವೃತ್ತಿಪರ ಕೋರ್ಸ್‌ಗಳನ್ನು ಪದವಿಯ ಜೊತೆಗೆ ಅಧ್ಯಯನ ಮಾಡುವುದರಿಂದ ವಿದ್ಯಾರ್ಥಿಗಳು ಉದ್ಯೋಗ ಮಾರುಕಟ್ಟೆಯಲ್ಲಿ ಉತ್ತಮ ಉದ್ಯೋಗ ಪಡೆಯಲು ಸಾಧ್ಯ ಮತ್ತು ವಿದ್ಯಾರ್ಥಿಗಳು ಕಠಿಣ ಪರಿಶ್ರಮದಿಂದ ಕಾಲೇಜಿನಲ್ಲಿ ನೀಡಲಾಗುತ್ತಿರುವ ತರಬೇತಿಯನ್ನು ಪಡೆಯುವುದರ ಮುಖಾಂತರ ಹೆಚ್ಚು ಜ್ಞಾನಾರ್ಜನೆಯನ್ನು ಮಾಡಿಕೊಳ್ಳಿ ಎಂದು ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಕುಂದಾಪುರದ ಕೆರಿಯ್ ಕೋಚಿಂಗ್ ಸಂಸ್ಥೆಯ ಸ್ಥಾಪಕ ಸಿ.ಎ. ರಾಜೇಶ ಶೆಟ್ಟಿ ಮತ್ತು ಸಿ.ಎ. ನಾಗೇಶ ಆರ್ ನಾಯ್ಕ್ ಭಾಗವಹಿಸಿ ವಿದ್ಯಾರ್ಥಿಗಳಿಗೆ ಸಿ.ಎ. ಎಸ್. ಕೋರ್ಸ್‌ನ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಚಂದ್ರಾವತಿ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮ ಸಂಯೋಜಕರಾದ ವಾಣಿಜ್ಯ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಲಯನ್ಸ್ ಕ್ಲಬ್ ಹಂಗಳೂರು ಇವರು ವಿದ್ಯಾರ್ಥಿಗಳಲ್ಲಿ ದೇಶಭಕ್ತಿಯನ್ನು ಬೆಳೆಸುವ ಸಲುವಾಗಿ ಆದಿತ್ಯವಾರ ದೇಶಭಕ್ತಿಗೀತೆ ಸ್ಪರ್ಧೆಯನ್ನು ಆಯೋಜಿಸಿದರು. ಕುಂದಾಪುರ ತಾಲೂಕಿನ ಅನೇಕ ಶಾಲೆಗಳಿಂದ ವಿದ್ಯಾರ್ಥಿಗಳು ಭಾಗವಹಿಸಿದ್ದು, ಹಟ್ಟಿಯಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿನಿ ಪೂರ್ವೀ ಜಗನ್ನಾಥ್ ಪ್ರಥಮ ಸ್ಥಾನವನ್ನು ಪಡೆದಿರುತ್ತಾಳೆ. ಹಾಗೆಯೇ ಹತ್ತನೇ ತರಗತಿಯ ದಾಕ್ಷಾಯಣಿ ತೃತೀಯ ಸ್ಥಾನವನ್ನು ಪಡೆದಿರುತ್ತಾಳೆ. ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿಗಳು ಹಾಗೂ ಶಾಲಾ ಪ್ರಾಂಶುಪಾಲರಾದ ಶರಣ ಕುಮಾರ ವಿದ್ಯಾರ್ಥಿಗಳನ್ನು ಹರಸಿ, ಅಭಿನಂದಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಕುಂದಾಪ್ರ ಭಾಷೆ ತನ್ನದೆ ಆದ ಪರಂಪರೆಯನ್ನು ವಿಶ್ವದೆಲ್ಲೆಡೆ ಪಸರಿಸಿಕೊಂಡಿದೆ, ಇಲ್ಲಿನ ಭಾಷೆಯ ಜತೆಗೆ ಸಾಂಪ್ರಾದಾಯಿಕ ಬದುಕು ಕಟ್ಟಿಕೊಟ್ಟಿದೆ ಎಂದು ಸಾಹಿತಿ ಕುಂದಗನ್ನಡದ ಪೂರ್ಣಿಮಾ ಕಮಲಶಿಲೆ  ಹೇಳಿದರು. ಅವರು ಭಾನುವಾರ ಕೋಟದ ಹಂದಟ್ಟು ಗೆಳೆಯರ ಬಳಗ ಗೀತಾನಂದ ವೇದಿಕೆಯಲ್ಲಿ ಪಂಚವರ್ಣ ಮಹಿಳಾ ಮಂಡಲ ನೇತೃತ್ವದಲ್ಲಿ ಮಾತೃ ಸಂಸ್ಥೆ ಪಂಚವರ್ಣ ಯುವಕ ಮಂಡಲ ಕೋಟ ಇದರ ಮಾರ್ಗದರ್ಶನದಲ್ಲಿ ನಾಲ್ಕನೇ ವರ್ಷದ ಆಸಾಡಿ ಒಡ್ರ್‌-2025 ಊರ್ ಕೇರಿ ಬದ್ಕಿನ್ ಹಬ್ಬು ಕುಂದಾಪ್ರ ಭಾಷಿಯ ಗಮ್ಜಲ್ ಮಾಡಿ ಮಾತನಾಡಿದರು. ಇಂದಿನ ಮಕ್ಕಳು ಬರೇ ಮೊಬೈಲ್ ಗೀಳಿನಲ್ಲಿ ಕುಂದಾಪ್ರ ಭಾಷೆ ಬದುಕಿನ ವಿಚಾರಧಾರೆಯನ್ನು ಮೆರೆತಿರುವುದು ಬೇಸರದ ಸಂಗತಿ. ಮನೆಯ ಹಿರಿಯರು ಮಕ್ಕಳಿಗೆ ಇದರ ಉಳಿವಿನ ಬಗ್ಗೆ ಆಗಾಗ ತಿಳಿಹೇಳುವ ಕಾರ್ಯಮಾಡಬೇಕು. ಪಂಚವರ್ಣ ಮಹಿಳಾ ಮಂಡಲ ಈ ಕುಂದಗನ್ನಡ ಸಂಸ್ಕತಿ ಉಳಿಸುವ ಕಾರ್ಯ ಪ್ರಶಂಸನೀಯ. ಇಂತಹ ಕಾರ್ಯಕ್ರಮ ಎಲ್ಲೆಡೆ ಪಸರಿಸಿಕೊಳ್ಳಲಿ ಭಾಷಾಭಿಮಾನ, ಬದುಕಿನ ಸಂಸ್ಕಾರದ ಬೀಜ ಬಿತ್ತೋಣ ಎಂದರು. ಕಾರ್ಯಕ್ರಮವನ್ನು ಸಮಾಜಸೇವಕಿ ಡಾ. ವಾಣಿಶ್ರೀ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಶಂಕರನಾರಾಯಣ: ಇಲ್ಲಿನ ಮದರ್ ತೆರೇಸಾ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಸೃಜನಶೀಲತೆ ಹಾಗೂ ಕೌಶಲ್ಯಗಳ ಅಭಿವೃಕ್ತಿಗೆ ವೇದಿಕೆ ಕಲ್ಪಿಸುವ ಉದ್ದೇಶದಿಂದ ” ಟ್ಯಾಲೆಂಟ್ ಡೇ ” ಹಾಗೂ “ಫ್ರೆಶರ್ಸ್ ಡೇ ” ಅನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಈ ಕಾರ್ಯಕ್ರಮದ ಪ್ರಮುಖ ಉದ್ದೇಶ ವಿದ್ಯಾರ್ಥಿಗಳಲ್ಲಿರುವ ಕಲಾತ್ಮಕ ಸಾಂಸ್ಕೃತಿಕ ಹಾಗೂ ಸಹಪಠ್ಯ ಚಟುವಟಿಕೆಗಳ ಸಾಮರ್ಥ್ಯವನ್ನು ಹೊರ ತರಲು ಅವಕಾಶ ಕಲ್ಪಿಸುವುದಾಗಿತ್ತು. ಈ ವಿಶೇಷ ಕಾರ್ಯಕ್ರಮವನ್ನು ಶಾಲಾ ಸಂಸ್ಥಾಪಕರು ಉದ್ಘಾಟಿಸಿದರು. ‘ರೆಟ್ರೋಥೀಮ್ ‘ಅಡಿಯಲ್ಲಿ ಆರಂಭವಾದ ಕಾರ್ಯಕ್ರಮ 70- 80ರ ದಶಕದ ಶೈಲಿಯ ಪೋಷಾಕಿನೊಂದಿಗೆ ವಿದ್ಯಾರ್ಥಿಗಳು ನೃತ್ಯ, ಗೀತ ಗಾಯನ , ನಾಟಕ, ಇನ್ಸ್ಟ್ರುಮೆಂಟಲ್ ಸಂಗೀತ ಹೀಗೆ ಅನೇಕ ವಿಭಿನ್ನ ಕ್ಷೇತ್ರಗಳಲ್ಲಿ ತಮ್ಮ ಪ್ರತಿಭೆ ತೋರಿ ಕಾರ್ಯಕ್ರಮವನ್ನು ಸಕಾಲಿಕವಾಗಿ ಸಮೃದ್ಧಗೊಳಿಸಿದರು. ಇದರಲ್ಲಿ ಪದವಿಪೂರ್ವ ವಿಭಾಗದ ಹದಿನೈದಕ್ಕೂ ಹೆಚ್ಚು ತಂಡಗಳು ಭಾಗವಹಿಸಿದ್ದು ವಿಶೇಷವಾಗಿತ್ತು. ಇದಕ್ಕೆ ಜೊತೆಯಾಗಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ವಿಶೇಷವಾಗಿ ‘ಫ್ರೆಷರ್ಸ್ ಡೇ’ ಕಾರ್ಯಕ್ರಮವನ್ನು ಕೂಡ ಆಚರಿಸಲಾಯಿತು. ಈ ಕಾರ್ಯಕ್ರಮದ ಪ್ರಮುಖ ಆಶಯವೆಂದರೆ ಹೊಸದಾಗಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ. ಕುಂದಾಪುರ: ನಿಸ್ವಾರ್ಥ ಮನೋಭಾವದ ಸೇವೆಯೇ ನಿಜವಾದ ಧರ್ಮ. ಅಂತಹ ಸೇವಾ ಮನೋಭಾವನೆಯನ್ನು ಬೆಳೆಸುವಲ್ಲಿ ರಾಷ್ಟ್ರೀಯ ಸೇವಾ ಯೋಜನೆಯು ಮಹತ್ತರವಾದ ಪಾತ್ರವನ್ನು ವಹಿಸುತ್ತದೆ ಎಂದು ಸೀನಿಯರ್ ಟ್ಯಾಕ್ಸ್ ಕನ್ಸಲ್ಟೆಂಟ್ ಜತಿಂದ್ರ ಮರವಂತೆ ಅಭಿಪ್ರಾಯಪಟ್ಟರು. ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನಲ್ಲಿ ರೋಟರಿ ಕ್ಲಬ್ ಗಂಗೊಳ್ಳಿ ಅವರ ಸಹಾಯದೊಂದಿಗೆ ನಡೆದ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಗಂಗೊಳ್ಳಿಯ ರೋಟರಿ ಕ್ಲಬ್ ಅಧ್ಯಕ್ಷ ಕೃಷ್ಣ ಪೂಜಾರಿ ಶುಭ ಹಾರೈಸಿದರು. ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂಸಿ ಅಧ್ಯಕ್ಷತೆ ವಹಿಸಿದ್ದರು. ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಸುಗುಣ ಆರ್‌ಕೆ ಸ್ವಾಗತಿಸಿದರು. ಉಪನ್ಯಾಸಕಿ ಪ್ರಫುಲ್ಲಾ ಕಾರ್ಯಕ್ರಮ ನಿರ್ವಹಿಸಿದರು. ವಿದ್ಯಾರ್ಥಿನಿ ಗೌತಮಿ ನಾಯಕ್ ವಂದಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ’ಬೆಳಕು – ಆಪ್ತ ಸಮಾಲೋಚನಾ ಕೇಂದ್ರ’ವನ್ನು ಆಳ್ವಾಸ್ ಪದವಿಪೂರ್ವ ಕಾಲೇಜಿನ ನೂತನ ಕಟ್ಟಡಕ್ಕೆ ಸ್ಥಳಾಂತರಿಸಿ ಉದ್ಘಾಟಿಸಲಾಯಿತು. ಪ್ರತಿಷಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಅವರು ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿ, ಭೂಮಿಯಲ್ಲಿರುವ ಎಲ್ಲಾ ಜೀವಿಗಳ ಪೈಕಿ ಮನುಷ್ಯ ಅತ್ಯಂತ ವಿಶೇಷ. ತನ್ನ ಬುದ್ಧಿಶಕ್ತಿ, ಕಲ್ಪನೆ, ನೈತಿಕ ಮೌಲ್ಯಗಳು ಹಾಗೂ ಸಮಾಜವನ್ನು ರೂಪಿಸುವ ಸಾಮರ್ಥ್ಯವು ಮನುಷ್ಯನನ್ನು ಇತರ ಜೀವರಾಶಿಗಳಿಗಿಂತ ಭಿನ್ನಗೊಳಿಸಿದೆ. ಆದರೆ, ಈ ಅಸಾಧಾರಣ ಸಾಮರ್ಥ್ಯಗಳ ಜೊತೆಗೆ ಮನುಷ್ಯ ತನ್ನ ಭಾವನಾತ್ಮಕ ಅಸ್ಥಿರತೆಯ ಬಲೆಗೆ ಸುಲಭವಾಗಿ ಸಿಲುಕ ಬಲ್ಲ ಎಂದರು. ಅದರಲ್ಲೂ ಮುಖ್ಯವಾಗಿ ವಿದ್ಯಾರ್ಥಿಗಳು ತಮ್ಮ ಸಾಮರ್ಥ್ಯಕ್ಕಿಂತ ಹೆಚ್ಚು ಪ್ರಯತ್ನ ಮಾಡುವ ಸಂದರ್ಭಗಳಲ್ಲಿ, ಸ್ಪರ್ಧೆ, ಅತಿಯಾದ ಆಕಾಂಕ್ಷೆ ಹಾಗೂ ಪೋಷಕರ ಒತ್ತಡದಿಂದಾಗಿ ನಿರೀಕ್ಷಿತ ಫಲಿತಾಂಶವನ್ನು ಸಾಧಿಸಲು ಕೆಲವೊಮ್ಮೆ ಸಾಧ್ಯವಾಗುವುದಿಲ್ಲ. ಇಂತಹ ಸಂದರ್ಭಗಳು ಮನಸ್ಸಿನ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿ ಅನೇಕ ಸಮಸ್ಯೆಗಳಿಗೆ ಕಾರಣವಾಗುತ್ತವೆ. ಈ ಸಮಯದಲ್ಲಿ ಆಪ್ತ ಸಮಾಲೋಚನೆಯ ಅಗತ್ಯತೆಯಿದೆ ಎಂದರು. ಸಮಸ್ಯೆಯಿಂದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಮಾದಕ ದ್ರವ್ಯಗಳು ಯುವ ಜನತೆಯ ಮೇಲೆ ಬೀರುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿಯನ್ನು ಮೂಡಿಸುವ ಸಲುವಾಗಿ ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ ‘ವಿಶ್ವ ಮಾದಕ ದ್ರವ್ಯ ವಿರೋಧಿ ದಿನಾಚರಣೆ’ಯನ್ನು ಆಚರಿಸಲಾಯಿತು. ಕಾರ್ಕಳ ನಗರ ಠಾಣೆಯ ಪೊಲೀಸ್ ಸಬ್ ಇನ್ಸ್ಪೆಕ್ಟರ್ ರಾದ ಶಿವಕುಮಾರ್ ಅವರು ಮಾತನಾಡಿ, ಮಾದಕ ವ್ಯಸನಗಳಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಿ ಅದರಿಂದ ಜೀವ/ ಜೀವನ ಎರಡನ್ನು ಕಳೆದುಕೊಳ್ಳಬೇಕಾಗುತ್ತದೆ ಎಂಬ ಎಚ್ಚರಿಕೆಯ ನುಡಿ ಗಳೊಂದಿಗೆ, ಅದನ್ನು ಹೋಗಲಾಡಿಸುವಲ್ಲಿ ಯುವಜನತೆಯ ಜವಾಬ್ದಾರಿ ಮಹತ್ತರವಾದುದು ಮತ್ತು ಅಂತಹ ಚಟುವಟಿಕೆಗಳಲ್ಲಿ ತೊಡಗಿಕೊಂಡಿರುವವರನ್ನು ಕಾನೂನಿನ ಮೂಲಕ ಕಠಿಣ ಶಿಕ್ಷೆಗೆ ಗುರಿಪಡಿಸಲಾಗುವುದು ಎಂದು ಕಾನೂನಿನ ಅರಿವನ್ನು ಮೂಡಿಸುವುದರ ಮೂಲಕ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತುಗಳನ್ನಾಡಿದರು. ಪೋಕ್ಸೋ ಕಾನೂನು, ಸಂಚಾರ ನಿಯಮಗಳ ಬಗ್ಗೆ ಅರಿವು ಹಾಗೂ ಇನ್ನಿತರ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿಕೊಂಡರೆ ಆಗುವ ಸಮಸ್ಯೆಗಳ ಕುರಿತು ಮಾಹಿತಿಯನ್ನು ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದ ಸಂಸ್ಥೆಯ ಪ್ರಾಂಶುಪಾಲರು ಹಾಗೂ ಸಹ ಸಂಸ್ಥಾಪಕರಾದ ವಿದ್ವಾನ್ ಗಣಪತಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹೆಮ್ಮಾಡಿಯ ಜನತಾ ಪಿಯು ಕಾಲೇಜಿನಲ್ಲಿ ಶನಿವಾರ ಪೋಷಕರ ಸಭೆ ಆಯೋಜಿಸಲಾಯಿತು. ರಾಷ್ಟ್ರೀಯ ಮಟ್ಟದ ವ್ಯಕ್ತಿತ್ವ ವಿಕಸನ ತರಬೇತುದಾರರಾದ ರಾಜೇಂದ್ರ ಭಟ್ ಕಾರ್ಯಕ್ರಮವನ್ನು ಉದ್ಘಾಟಿಸಿ ವಿದ್ಯಾರ್ಥಿ ಕಲಿಕೆಯಲ್ಲಿ ಪೋಷಕರ ಪಾತ್ರದ ಕುರಿತು ಮಾತನಾಡಿದರು. ಸಮಾರಂಭದ ಅಧ್ಯಕ್ಷತೆ ವಹಿಸಿರುವ ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರು ಹಾಗೂ ಪ್ರಾಂಶುಪಾಲರಾದ ಗಣೇಶ ಮೊಗವೀರ ಅವರು ವಾರ್ಷಿಕ ಯೋಜನೆಯ ಕುರಿತು ಹಾಗೂ ಕಾಲೇಜಿನ ನಿಯಮಗಳ ಕುರಿತು ಮಾತನಾಡಿದರು. ಉಪ-ಪ್ರಾಂಶುಪಾಲರಾದ ರಮೇಶ ಪೂಜಾರಿ ಸ್ವಾಗತಿಸಿ, ಉಪನ್ಯಾಸಕ ಉದಯ ನಾಯ್ಕ ನಿರೂಪಿಸಿ, ವಂದಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಸಾರ್ವಜನಿಕ ಗಣೇಶೋತ್ಸವ ಸಮಿತಿ ಕೋಡಿ ಕನ್ಯಾಣ ಇದರ ವತಿಯಿಂದ ಪ್ರತಿ ವರ್ಷ ನಡೆಯುವ ಸಮುದ್ರ ಪೂಜೆ ಇತ್ತೀಚಿಗೆ ನೆರವೆರಿತು. ಸಮುದ್ರ ಪೂಜಾ ವಿಧಿಗಳನ್ನು ವಿದ್ವಾನ್ ಸುಬ್ರಾಯ ಐತಾಳ್ ನೆರವೆರಿಸಿದರು. ಈ ಸಂದರ್ಭದಲ್ಲಿ ಸಮಿತಿ ಅಧ್ಯಕ್ಷ ಸಂತೋಷ್ ಖಾರ್ವಿ, ಉಪಾಧ್ಯಕ್ಷರಾದ ಸಂತೋಷ್ ಕುಂದರ್, ಉದಯ್ ಕಾಂಚನ್, ಕಾರ್ಯದರ್ಶಿ ಸುಧೀರ್ ಕುಂದರ್, ಜೊತೆ ಕಾರ್ಯದರ್ಶಿ ವೆಂಕಟೇಶ್ ಮೆಂಡನ್, ವಾಮನ ಸಾಲಿಯಾನ, ಪ್ರಭಾಕರ್ ಮೆಂಡನ್, ನಾರಾಯಣ ಬಂಗೇರ ,ಅಣ್ಣಪ್ಪ ಕುಂದರ್, ಸತೀಶ್ ಕುಂದರ್ ,ರಾಘವ ಕುಂದರ್, ಮಂಜುನಾಥ ಕುಂದರ್, ಗಣೇಶ್ ಕುಂದರ್, ಶ್ರೀರಾಮ ದೇಗುಲದ ಅಧ್ಯಕ್ಷರಾದ ರಾಘವೇಂದ್ರ ಕರ್ಕೇರ, ರಾಮಚಂದ್ರ ಖಾರ್ವಿ, ಆನಂದ ತಂಡೇಲ್ಕರ್, ನಾಗರಾಜ ಖಾರ್ವಿ, ಶ್ರೀನಿವಾಸ ಪೂಜಾರಿ, ವಿಜಯ ತಿಂಗಳಾಯ, ಮುತ್ತಪ್ಪ ಸಾಲಿಯಾನ್, ಸುಬ್ರಮಣ್ಯ ಖಾರ್ವಿ, ಜೀವನ ಖಾರ್ವಿ, ವಿಜಯ ಕರ್ಕೇರ, ಚಂದ್ರ ಕುಂದರ್, ಪ್ರಕಾಶ್ ಬಂಗೇರ, ಸಂತೋಷ್ ಸಾಲಿಯಾನ್, ಮೀನುಗಾರ ಮುಖಂಡರಾದ ಸಂತೋಷ್ ಕುಂದರ್, ಶಂಕರ್ ಸಿರಿಯಾನ್, ನರಸಿಂಹ ಕೋಟ್ಯಾನ್, ಜಯಂತ ಬೆನ್ನು ಉಪಸ್ಥಿರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕಂಡ್ಲೂರು ಝಿಯಾ ಪಬ್ಲಿಕ್ ಸ್ಕೂಲ್‌ನಲ್ಲಿ ನಡೆದ ತಾಲೂಕು ಮಟ್ಟದ 14ರ ವಯೋಮಾನದ ಬಾಲಕರ 35 ಕೆ.ಜಿ ವಿಭಾಗದ ಕರಾಟೆ ಪಂದ್ಯಾಟದಲ್ಲಿ ಅಂಪಾರು ಸಂಜಯಗಾಂಧಿ ಆಂಗ್ಲ ಮಾಧ್ಯಮ ಶಾಲೆಯ 8ನೇ ತರಗತಿ ವಿದ್ಯಾರ್ಥಿ ಗಗನ್ ಪ್ರಥಮ ಸ್ಥಾನಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಹಾಗೂ ಅದೇ ಪಂದ್ಯಾಟದ 25 ಕೆ.ಜಿ ವಿಭಾಗದ ಕರಾಟೆ ಪಂದ್ಯದಲ್ಲಿ ಪ್ರೀತೇಶ್ 8ನೇ ತರಗತಿ ವಿದ್ಯಾರ್ಥಿ ಪ್ರಥಮ ಸ್ಥಾನಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಪಂದ್ಯಾಟದ 30 ಕೆ.ಜಿ ವಿಭಾಗದ ಕರಾಟೆ ಪಂದ್ಯದಲ್ಲಿ ಸುಧನ್ವ 8 ನೇ ತರಗತಿ ವಿದ್ಯಾರ್ಥಿ ತೃತೀಯ ಸ್ಥಾನಗಳಿಸಿರುತ್ತಾರೆ. ಅವರಿಗೆ ಸಂಜಯ ಗಾಂಧಿ ಚಾರಿಟೇಬಲ್ ಟ್ರಸ್ಟ್, ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆಯ ಆಡಳಿತಾಧಿಕಾರಿ ಹಾಗೂ ಶಿಕ್ಷಕ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

Read More