ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ನೇಪಾಳ ರಂಗಶೀಲ ಸ್ಟೇಡಿಯಂನಲ್ಲಿ ನಡೆದಿರುವ ಅಂತಾರಾಷ್ಟ್ರೀಯ ಮಟ್ಟದ ಮಾಸ್ಟರ್ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಅಂತಾರಾಷ್ಟ್ರೀಯ ಕ್ರೀಡಾ ಪಟು ಕೋಟದ ದಿನೇಶ ಗಾಣಿಗ ಅವರು ಒಂದು ಚಿನ್ನದ ಪದಕ ಗಳಿಸಿದ್ದಾರೆ. ವೇಗ ನಡಿಗೆ, ಗುಂಡೆಸೆತ, ಲಾಂಗ್ ಜಂಪ್‌ನಲ್ಲಿ ಭಾಗವಹಿಸಿ, 5 ಕಿಲೋಮೀಟರ್ ವೇಗ ನಡಿಗೆಯಲ್ಲಿ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ ಗೆದ್ದಿದ್ದಾರೆ. ಈ ಹಿಂದೆ ಥೈಲ್ಯಾಂಡ್ ರಾಜಾಬಟಾ ಸ್ಟೇಡಿಯಂನಲ್ಲಿ ನಡೆದ ಅಂತಾರಾಷ್ಟ್ರೀಯ ಮಾಸ್ಟರ್ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಭಾಗವಹಿಸಿ, ಗುಂಡು ಎಸೆತದಲ್ಲಿ ಪ್ರಥಮ ಸ್ಥಾನ ಪಡೆದು ಒಂದು ಚಿನ್ನದ ಪದಕ, ಹರ್ಡಲ್ಸನಲ್ಲಿ ದ್ವಿತೀಯ ಒಂದು ಬೆಳ್ಳಿ ಪದಕ ಮತ್ತು ವೇಗ ನಡಿಗೆಯಲ್ಲಿ ತೃತೀಯ ಕಂಚು ಪದಕ ಹಾಗೂ 2021 ಸಿಂಗಾಪುರ, 2022 ಮಲೇಷಿಯಾ ಹಾಗೂ 2023 ರಲ್ಲಿ ಶ್ರೀಲಂಕಾ ಅಂತಾರಾಷ್ಟ್ರೀಯ ಮಾಸ್ಟರ್ ಅಥ್ಲೆಟಿಕ್ಸ್ನಲ್ಲಿ ಭಾಗವಹಿಸಿ ಚಿನ್ನ, ಬೆಳ್ಳಿ, ಕಂಚು ಪದಕ ವಿಜೇತರಾಗಿದ್ದಾರೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಜಾನುವಾರು ಅಕ್ರಮ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಬೈಂದೂರು ಪೊಲೀಸರು ಗುರುವಾರ ಬಂಧಿಸಿದ್ದಾರೆ. ಬಂಧಿತ ಆರೋಪಿಗಳು ಬೈಂದೂರಿನ ಕಲಿನ ಮನೆ ನಿವಾಸಿ ರಮೇಶ್ ಮೊಗವೀರ (40) ಹಾಗೂ ಬೈಂದೂರಿನ ಗುಂಜನಗುಡ್ಡೆ ನಿವಾಸಿ ಅಬ್ದುಲ್ ಖಯೂಮ್ (26) ಎಂದು ತಿಳಿದು ಬಂದಿದೆ. ಗುರುವಾರ ಮುಂಜಾನೆ ಬಂದ ಖಚಿತ ಮಾಹಿತಿ ಮೇರೆಗೆ ಬೈಂದೂರು ಪೊಲೀಸ್ ಠಾಣೆಯ ಪಿಎಸ್‌ಐ ತಿಮ್ಮೇಶ್ ಬಿ.ಎನ್ ನೇತೃತ್ವದ ತಂಡ ಹೇರೂರಿನ ಚಟ್ಗುಳಿ ಕಡೆಯಿಂದ ಬರುವ ರಸ್ತೆಯ ಗುಂಜನಗುಡ್ಡೆ ಬಳಿ ದಾಳಿ ನಡೆಸಿದ್ದಾರೆ. ಯಾವುದೇ ಅನುಮತಿ ಇಲ್ಲದೆ ಅಕ್ರಮವಾಗಿ ಜಾನುವಾರು ಸಾಗಿಸುತ್ತಿದ್ದ ವಾಹನವನ್ನು ತಂಡ ತಡೆದಿದೆ ಎಂದು ತಿಳಿದು ಬಂದಿದೆ. ಪೊಲೀಸರು ವಾಹನವನ್ನು ತಪಾಸಣೆ ನಡೆಸಿದಾಗ ವಾಹನದಲ್ಲಿ ಹಸುವನ್ನು ಅಕ್ರಮವಾಗಿ ಸಾಗಿಸುತ್ತಿರುವುದು ಕಂಡುಬಂದಿದೆ. ತಕ್ಷಣವೇ ಪೊಲೀಸರು ಹಸುವನ್ನು ರಕ್ಷಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕೇಂದ್ರ ಸರಕಾರದ ರಾಷ್ಟ್ರೀಯ ಗ್ರಾಮೀಣ ಸಾಕ್ಷಾರತ ಮಿಷನ್ ಯೋಜನೆಯ ಅಡಿಯಲ್ಲಿಅಂಪಾರು ಗ್ರಾಮದ ಸರಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ 1 ರಿಂದ 4ನೇ ತರಗತಿ ಮಕ್ಕಳಿಗೆ ಉಚಿತ ಸ್ವೇಟರ್ ವಿತರಿಸಿಲಾಯಿತು. ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷರಾದ ಗೋಪಾಲಕೃಷ್ಣ ಕಿಣಿ, ಉಪಾಧ್ಯಕ್ಷರಾದ ವನಜ ಮೊಗವೀರ, ಸದಸ್ಯರಾದ ಕೆ. ಅಶೋಕ್, ಸತೀಶ್ ಶೆಟ್ಟಿ ಹಡಾಳಿ, ನವೀನ್ ಶೆಟ್ಟಿ ಹೊಸಿಮನೆ, ಭಾರತಿ ಶೇಟ್, ಶಕ್ತಿ ಕೇಂದ್ರ ಅಧ್ಯಕ್ಷರಾದ ಅರುಣ್ ಕುಮಾರ್ ಶೆಟ್ಟಿ, ಮುಖಂಡರಾದ ಮಹೇಂದ್ರ ಭೋವಿ ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಪ್ರಸಕ್ತ ಸಾಲಿನಲ್ಲಿ ಉಡುಪಿಯ ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಪ್ರಥಮ ವರ್ಷದ ಡಿಪ್ಲೋಮಾ ಪ್ರವೇಶಾತಿಗಾಗಿ ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅರ್ಹ ಅಭ್ಯರ್ಥಿಗಳಿಂದ ಹಾಗೂ ಲ್ಯಾಟರಲ್ ಎಂಟ್ರಿ ಮೂಲಕ ನೇರವಾಗಿ ಮೂರನೇ ಸೆಮಿಸ್ಟರ್‌ಗೆ ಪ್ರವೇಶಾತಿ ಪಡೆಯಲು ಐ.ಟಿ.ಐ, ದ್ವಿತೀಯ ಪಿ.ಯು.ಸಿ ವಿಜ್ಞಾನ ಹಾಗೂ ತಾಂತ್ರಿಕ ವಿಷಯಗಳಲ್ಲಿ ಉತ್ತೀರ್ಣರಾಗಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಸಲ್ಲಿಸುವ ಅವಧಿಯನ್ನು ಆಗಸ್ಟ್ 11 ರ ವರೆಗೆ ವಿಸ್ತರಿಸಲಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಪ್ರಾಚಾರ್ಯರು, ಸರ್ಕಾರಿ ಪಾಲಿಟೆಕ್ನಿಕ್, ಉಡುಪಿ ದೂ.ಸಂಖ್ಯೆ: 0820-2570244 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಂಸ್ಥೆಯ ಪ್ರಾಚಾರ್ಯರ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನಲ್ಲಿ ದುಬಾರಿ ಬೆಲೆಯ ಕಾರುಗಳಿದ್ದ 360 ಮಂದಿಯ ಬಿಪಿಎಲ್ ಚೀಟಿ ರದ್ದಾಗಿದೆ ಎಂದು ಆಹಾರ ಇಲಾಖೆ ಅಧಿಕಾರಿ ತಿಳಿಸಿದರು. ಅವರು ಇಲ್ಲಿನ ತಾಲೂಕು ಪಂಚಾಯತ್ ನಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿ ಸಭೆಯಲ್ಲಿ ಮಾತನಾಡಿದರು. ಆರ್ ಟಿಒದಿಂದ ಲಭಿಸಿದ ಮಾಹಿತಿ ಹಾಗೂ ಪರಿಶೀಲನೆ ಬಳಿಕವೇ ತೆಗೆಯಲಾಗುತ್ತಿದೆ. 15-20 ಲಕ್ಷ ರೂ.ಗಳ ಕಾರುಗಳಿದ್ದವರೂ ಬಿಪಿಎಲ್ ಚೀಟಿ ಹೊಂದಿದ್ದರು ಎಂದರು. ಪಡಿತರ ಚೀಟಿ ರದ್ದತಿ ಕುರಿತು ಕೋಣಿ ನಾರಾಯಣ ಆಚಾರ್, ಚಂದ್ರಕಾಂಚನ್ ಮಾತನಾಡಿ, ಅನರ್ಹರ ಪ್ರಕರಣ ಮಾತ್ರ ಪರಿಗಣಿಸಿ, ನೈಜ ಬಡವರ ಪಡಿತರ ಚೀಟಿ ರದ್ದು ಮಾಡಬೇಡಿ, ಅಂಗವಿಕಲರನ್ನು ಕರೆದೊಯ್ಯಲು ವಾಹನ ಇದ್ದರೂ ಬಿಪಿಎಲ್‌ನಿಂದ ತೆಗೆದು ಸಿರಿವಂತರೆನ್ನಬೇಡಿ ಎಂದರು. ಪರಿಶೀಲಿಸಿ ಕ್ರಮ ಕೈಗೊಳ್ಳಿ ಎಂದು ಅಧ್ಯಕ್ಷರು ಸೂಚಿಸಿದರು. ಅಧ್ಯಕ್ಷತೆ ವಹಿಸಿದ್ದ ಹರಿಪ್ರಸಾದ್ ಶೆಟ್ಟಿ ಕಾನಕ್ಕಿ ಮಾತನಾಡಿ, ಸರಕಾರದ ಗ್ಯಾರಂಟಿ ಯೋಜನೆಗಳ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಬೇಕು. ರಾಜ್ಯ ಸರಕಾರ ನೀಡುತ್ತಿರುವ ಯೋಜನೆಗಳೆಂದು ತಿಳಿಯಬೇಕು. ಅದಕ್ಕಾಗಿ ವಿವಿಧ ಇಲಾಖೆಗಳು ಕ್ರಮಕೈಗೊಳ್ಳಬೇಕು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮಕ್ಕಳ ಭವಿಷ್ಯ ಕಟ್ಟುವ ಮಹತ್ವದ ಜವಾಬ್ದಾರಿ ಹೊಂದಿರುವ ಉಪನ್ಯಾಸಕರು ಹೊಸತನಕ್ಕೆ ಸದಾ ತೆರೆದುಕೊಂಡಿದ್ದರೆ ಮಾತ್ರ ವಿದ್ಯಾರ್ಥಿಗಳನ್ನು ಅರಿಯಲು ಸಾಧ್ಯವಾಗುತ್ತದೆ ಎಂದು ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಮಾರುತಿ ಹೇಳಿದರು. ಅವರು ಗುರುವಾರ ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ), ಪದವಿಪೂರ್ವ ಕಾಲೇಜು ಕನ್ನಡ ಉಪನ್ಯಾಸಕರ ಸಂಘ ಉಡುಪಿ ಜಿಲ್ಲೆ ಮತ್ತು ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಕುಂದಾಪುರ ಇವರ ಆಶ್ರಯದಲ್ಲಿ ಒಂದು ದಿನದ ಕನ್ನಡ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು. ಬೋಧಕರು ನಿರಂತರ ಅಭ್ಯಾಸದಲ್ಲಿ ತೊಡಗಿದ್ದರೆ ವಿದ್ಯಾರ್ಥಿಗಳ ಭವಿಷ್ಯಕ್ಕೆ ಭದ್ರ ಬುನಾದಿ ಹಾಕಬಹುದು. ವಿದ್ಯಾರ್ಥಿಗಳ ಬಗ್ಗೆ ಯಾವುದೇ ಕಾರಣಕ್ಕೂ ನಿಲಕ್ಷ್ಯ ಧೋರಣೆ ಸಲ್ಲದು. ಇಂತಹ ಕಾರ್ಯಾಗಾರಗಳು ಬೋಧನಾ ವೃತ್ತಿಯಲ್ಲಿರುವವರಿಗೆ ಹೊಸ ವಿಷಯಗಳನ್ನು ಕಲಿಯಲು ಸಹಾಯ ಮಾಡುತ್ತವೆ ಎಂದು ಅವರು ಅಭಿಪ್ರಾಯಪಟ್ಟರು. ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಜನ್ನಾಡಿಯ ಫೇವರೇಟ್ ಕ್ಯಾಶ್ಯೂ ಇಂಡಸ್ಟೀಸ್ ನ ಹೊಳ್ಮಗೆ ಶಂಕರ ಹೆಗ್ಡೆ ಅವರು ಮಾತನಾಡಿ, ಬದುಕಿನಲ್ಲಿ ಸವಾಲುಗಳು ಸಾಧನೆಯ ಶಿಖರವೇರಲು ಸಹಾಯ ಮಾಡುತ್ತವೆ;…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸಾಧನೆ ಸುಲಭದ ಮಾತಲ್ಲ. ಕೇವಲ ಪ್ರತಿಭೆಯಿಂದ ಮಾತ್ರ ಯಶಸ್ಸು ಕಾಣಲಾಗದು. ಕಠಿಣ ಪ್ರಯತ್ನದಿಂದ ಮಾತ್ರ ವಿದ್ಯಾರ್ಥಿಗಳು ಸಾಧನೆ ಮಾಡಲು ಸಾಧ್ಯ. ಜಗತ್ತಿನಲ್ಲಿ ಯಾವುದೂ ಕೂಡ ಸುಲಭವಾಗಿ ದಕ್ಕುವುದಿಲ್ಲ. ನಾವು ಸ್ವೀಕರಿಸುವ ರೀತಿ ಮತ್ತು ಸಾಧಿಸುವ ಛಲ. ಸತತ ಪರಿಶ್ರಮ ಬದುಕಿಗೆ ಸಾರ್ಥಕತೆಯನ್ನು ನೀಡುತ್ತದೆ ಎಂದು ಬೈಂದೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ನಾಗರಾಜ ಶೆಟ್ಟಿ ಹೇಳಿದರು ಅವರು ಇಲ್ಲಿನ ಶ್ರೀರಾಮ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಇದರ ಸಂಘದ ಪ್ರಧಾನ ಕಛೇರಿಯಲ್ಲಿ ಸೊಸೈಟಿ ವತಿಯಿಂದ ಕೊಡಮಾಡುವ ವಿದ್ಯಾರ್ಥಿ ವೇತನ ಹಾಗೂ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಿಸಿ ಮಾತನಾಡಿದರು. ವಿದ್ಯಾರ್ಥಿ ದೆಸೆಯಲ್ಲಿ ಕಠಿಣ ಪ್ರಯತ್ನದ ಮೂಲಕ ಬೆಳೆಯಬೇಕು. ಸಾರ್ಥಕತೆಯ ಸಂತ್ರಪ್ತಿ ದೊರೆಯಬೇಕಾದರೆ ಸಾಧನೆಯ ಬದುಕು ನಮ್ಮದಾಗಬೇಕು ಎಂದರು. ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷ ಎಸ್. ರಾಜು ಪೂಜಾರಿ ಮಾತನಾಡಿ, ಮಕ್ಕಳು ಸಮಾಜಕ್ಕೆ ಶಕ್ತಿ ತುಂಬುವ ಆಸ್ತಿಯಾಗಬೇಕು. ಭಾರತೀಯ ಸಂಸ್ಕೃತಿ ಆಧಾರಿತ ಶಿಕ್ಷಣ ನೀಡುವ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಿಐಎಸ್‌ಸಿಇ ನಡೆಸುತ್ತಿರುವ ಗೇಮ್ಸ್ ಮತ್ತು ಸ್ಪೋರ್ಟ್ಸ್ 2025-26ರಲ್ಲಿ ವಿವಿಧ ಶಾಲೆಗಳಲ್ಲಿ ಜೂನ್ ಮತ್ತು ಜುಲೈ ತಿಂಗಳುಗಳಲ್ಲಿ ನಡೆದ ವಲಯ ಮಟ್ಟದ ವಿವಿಧ ಸ್ಪರ್ಧೆಗಳಲ್ಲಿ 14 ವರ್ಷದೊಳಗಿನ ವಯೋಮಿತಿಯ ಕರಾಠೆಯಲ್ಲಿ ರಾಹುಲ್ ಉಳ್ಳೂರ್, ಆತ್ಮಿಕಾ ಉಳ್ಳೂರ್, 17 ವರ್ಷದೊಳಗಿನ ವಯೋಮಿತಿಯಲ್ಲಿ ಶುಭನ್ ಪುತ್ರನ್ ರಾಜ್ಯಮಟ್ಟಕ್ಕೆ ಆಯ್ಕೆಗೊಂಡಿರುತ್ತಾರೆ. 14 ವರ್ಷದೊಳಗಿನ ವಯೋಮಿತಿಯ ಟೇಬಲ್ ಟೆನ್ನೀಸ್ ಆಟದಲ್ಲಿ ಭಾಗವಹಿಸಿ 8ನೇ ತರಗತಿಯ ಶುಭಾಂಗಿ ಮತ್ತು 17 ವರ್ಷದೊಳಗಿನ ವಯೋಮಿತಿಯಲ್ಲಿ 9ನೇ ತರಗತಿಯ ಶ್ರೇಯಾ ಟಿ, ಸ್ಪೂರ್ತಿ ಎಸ್ ಪಿ, ಮಹೇಶ್ ರಾಜ್ಯಮಟ್ಟಕ್ಕೆ ಆಯ್ಕೆಗೊಂಡಿರುತ್ತಾರೆ. 14 ವರ್ಷದೊಳಗಿನ ವಯೋಮಿತಿಯ ಚೆಸ್ ಆಟದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಲ್ಲಿ ಅರ್ಜುನ್ ಕೆ ಶೆಟ್ಟಿ ಮತ್ತು ಕೃಶವ್ ಚಿತ್ತಾಪುರ್ ರಾಜ್ಯಮಟ್ಟಕ್ಕೆ ಆಯ್ಕೆಗೊಂಡಿರುತ್ತಾರೆ. 14 ವರ್ಷದೊಳಗಿನ ವಯೋಮಿತಿಯ ಹುಡುಗಿಯರ ಟೇಬಲ್ ಟೆನಿಸ್ ಸ್ಪರ್ಧೆಯಲ್ಲಿ ಶುಭಾಂಗಿ ಎಸ್ ಮಂಕಿಕರ್ ಮತ್ತು 17 ವರ್ಷದೊಳಗಿನ ವಯೋಮಿತಿಯ ಹುಡುಗಿಯರಲ್ಲಿ ಶ್ರೇಯಾ ಟಿ ಮತ್ತು ಸ್ಫೂರ್ತಿ ಪಾಟೀಲ್ ಹಾಗೂ 17 ವರ್ಷದೊಳಗಿನ ವಯೋಮಿತಿಯ ಹುಡುಗರಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಇಲ್ಲಿನ ಸಾಸ್ತಾನದ ಐರೋಡಿ ಗ್ರಾಮಪಂಚಾಯತ್ ವ್ಯಾಪ್ತಿಯ ಕೋಡಿ ರಸ್ತೆ ಸಮೀಪ ನಿರ್ಮಾಣಗೊಳ್ಳಲಿರುವ ಮದ್ಯದಂಗಡಿಯ ವಿರುದ್ಧ ಅಲ್ಲಿನ ಸ್ಥಳೀಯರು ವಿರೋಧ ವ್ಯಕ್ತಪಡಿಸಿದ ಘಟನೆ ಗುರುವಾರ ನಡೆದಿದೆ ಸ್ಥಳೀಯವಾಗಿ ಶಿಶುಮಂದಿರ, ಪಶು ಅಸ್ಪತ್ರೆ ಸೇರಿದಂತೆ ಅನೇಕ ಮನೆಗಳು ವಾಸ್ತವ್ಯವಿದ್ದು ಸಾರ್ವಜನಿಕರಿಗೆ ಸಮಸ್ಯೆಯಾಗಲಿದೆ ಎಂದು ಹೋರಾಟ ಸಮಿತಿ ಪ್ರಮುಖರಾದ ರಶಿರಾಜ್ ಸಾಸ್ತಾನ ಮಾಧ್ಯಮಕ್ಕೆ ತಿಳಿಸಿ ಐರೋಡಿ ಗ್ರಾಮಪಂಚಾಯತ್ ಮನವಿ ನೀಡಿದರು. ಈ ಸಂದರ್ಭಗಳಲ್ಲಿ ಪಂಚಾಯತ್ ಅಧ್ಯಕ್ಷೆ ಸಕು, ಅಭಿವೃದ್ಧಿ ಅಧಿಕಾರಿ ಪ್ರಶಾಂತ್ ಮನವಿ ಸ್ವೀಕರಿಸಿದರು. ಪಂಚಾಯತ್ ಸದಸ್ಯ ನವೀನ್ ಕಾರಂತ್, ಸ್ಥಳೀಯ ಗ್ರಾಮಸ್ಥರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ರ ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಅಲೆಮಾರಿ/ಅರೆ ಅಲೆಮಾರಿ ಜನಾಂಗದ ಮೆಟ್ರಿಕ್ ನಂತರದ ಅರ್ಹತಾ ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ ಹಾಗೂ ವಿದ್ಯಾಸಿರಿ ಊಟ ಮತ್ತು ವಸತಿ ಸಹಾಯ ಯೋಜನೆ ಕಾರ್ಯಕ್ರಮಗಳ ಸೌಲಭ್ಯ ಪಡೆಯಲು ವೆಬ್‌ಸೈಟ್ https://ssp.postmatric.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟಂಬರ್ 30 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಇಲಾಖಾ ಸಹಾಯವಾಣಿ ಸಂಖ್ಯೆ: 8050770005 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
