ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: 2024-25ನೇ ಸಾಲಿನಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್ ಪಡೆದ ಗಂಗೊಳ್ಳಿಯ ಎಸ್.ವಿ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಮನಾಲಿ ಅವರನ್ನು ಗಂಗೊಳ್ಳಿಯ ಜಿ.ಎಸ್.ವಿ.ಎಸ್. ಅಸೋಸಿಯೇಶನ್ ಪರವಾಗಿ ಅವರ ಸ್ವಗೃಹದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಜಿ.ಎಸ್.ವಿ.ಎಸ್.ಅಸೋಸಿಯೇಶನ್ ಅಧ್ಯಕ್ಷ ಡಾ. ಕಾಶೀನಾಥ ಪೈ, ಕಾರ್ಯದರ್ಶಿ ಎಚ್. ಗಣೇಶ ಕಾಮತ್, ಸರಸ್ವತಿ ವಿದ್ಯಾಲಯ ವಿದ್ಯಾಸಂಸ್ಥೆಗಳ ಸಂಚಾಲಕ ಎನ್. ಸದಾಶಿವ ನಾಯಕ್, ಶಾಲೆಯ ಆಡಳಿತ ಮಂಡಳಿ ಸದಸ್ಯರಾದ ಜಿ. ಗೋವಿಂದ್ರಾಯ ಆಚಾರ್ಯ, ಕೆ. ರಾಮನಾಥ ನಾಯಕ್, ಎನ್. ಅಶ್ವಿನ್ ನಾಯಕ್, ಎಂ. ನಾಗೇಂದ್ರ ಪೈ, ಎಸ್.ವಿ. ಆಂಗ್ಲ ಮಾಧ್ಯಮ ಶಾಲೆಯ ಮುಖೋಪಾಧ್ಯಾಯ ರಾಘವೇಂದ್ರ ಶೇರುಗಾರ್, ಸಹಶಿಕ್ಷಕಿ ಸುಜಾತ, ಮಂಜುನಾಥ ಖಾರ್ವಿ, ಮಂಜು ಟೈಲರ್ ಮತ್ತಿತರರು ಉಪಸ್ಥಿತರಿದ್ದರು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ವತಿಯಿಂದ ನೀಟ್ – ಯು.ಜಿ 2025 ಪರೀಕ್ಷೆಯು ಮೇ 4 ರಂದು ಮಧ್ಯಾಹ್ನ 2 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಒಂದು ಪಾಳಿಯಲ್ಲಿ ಜಿಲ್ಲೆಯ ಒಟ್ಟು 8 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಜಿಲ್ಲೆಯ ಒಟ್ಟು 2,947 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ಪರೀಕ್ಷೆಗೆ ಹಾಜರಾಗಲಿರುವ ಅಭ್ಯರ್ಥಿಗಳು ಪರೀಕ್ಷಾ ದಿನದಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1.30 ರ ಒಳಗಾಗಿ ಪರೀಕ್ಷಾ ಕೇಂದ್ರದಲ್ಲಿ ಕಡ್ಡಾಯವಾಗಿ ಹಾಜರಿರಬೇಕು. ಮೊಬೈಲ್, ಸೆಲ್ಯೂಲಾರ್ ಫೋನ್, ಟ್ಯಾಬ್ಲೆಟ್, ಪೆನ್ಡ್ರೈವ್, ಬ್ಲೂಟೂತ್ ಡಿವೈಸ್, ಸ್ಮಾರ್ಟ್ ವಾಚ್, ಕ್ಯಾಲ್ಕುಲೇಟರ್ ಮತ್ತು ಇತರೆ ಯಾವುದೇ ರೀತಿಯ ಎಲೆಕ್ಟ್ರಾನಿಕ್ ಉಪಕರಣಗಳು ಅಥವಾ ಲಾಗ್ ಟೇಬಲ್, ಕೈಚೀಲ, ಪರ್ಸ್, ನೋಟುಗಳು, ಚಾರ್ಟ್, ಬಿಡಿ ಹಾಳೆಗಳು ಅಥವಾ ರೆಕಾರ್ಡಿಂಗ್ ವಸ್ತುಗಳನ್ನೂ ಸೇರಿದಂತೆ ಇನ್ನಿತರ ಯಾವುದೇ ರೀತಿಯ ಉಪಕರಣಗಳನ್ನು ಪರೀಕ್ಷಾ ಕೇಂದ್ರದೊಳಗೆ ಕೊಂಡೊಯ್ಯುವುದನ್ನು ನಿಷೇಧಿಸಲಾಗಿದೆ. ತಿನ್ನಬಹುದಾದ ಪದಾರ್ಥಗಳನ್ನು ಪರೀಕ್ಷಾ ಕೊಠಡಿಯೊಳಗೆ ತರುವುದನ್ನು ಹಾಗೂ ತಿನ್ನುವುದನ್ನು ನಿಷೇಧಿಸಲಾಗಿದೆ. ಅಭ್ಯರ್ಥಿಗಳಿಗೆ ಕುಡಿಯುವ ನೀರಿನ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕಾರ್ಕಳದ ಪ್ರತಿಷ್ಠಿತ ತಾಂತ್ರಿಕ ಶಿಕ್ಷಣ ಸಂಸ್ಥೆ ಸರ್ಕಾರಿ ಪಾಲಿಟೆಕ್ನಿಕ್ನಲ್ಲಿ ಪ್ರಸಕ್ತ ಸಾಲಿನ ಡಿಪ್ಲೊಮಾ ಇಂಜಿನಿಯರಿಂಗ್ ಕೋರ್ಸುಗಳಿಗೆ ಪ್ರವೇಶ ಪ್ರಕ್ರಿಯೆ ಆರಂಭಗೊಂಡಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಎಸ್.ಎಸ್.ಎಲ್.ಸಿ ಉತ್ತೀರ್ಣ ಹಾಗೂ ಪಿಯುಸಿ ಉತ್ತೀರ್ಣ/ಅನುತ್ತೀರ್ಣರಾಗಿರುವ ವಿದ್ಯಾರ್ಥಿಗಳಿಗೆ 3 ವರ್ಷಗಳ ಅವಧಿಯ ಮೆಕ್ಯಾನಿಕಲ್ ಇಂಜಿನಿಯರಿಂಗ್, ಸಿವಿಲ್ ಇಂಜಿನಿಯರಿಂಗ್, ಇಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್ ಇಂಜಿನಿಯರಿಗ್ ಹಾಗೂ ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ಕೋರ್ಸುಗಳು ಲಭ್ಯವಿದ್ದು, ಮೆರಿಟ್ ಆಧಾರಿತ ಮೊದಲು ಬಂದವರಿಗೆ ಆದ್ಯತೆ ನೆಲೆಯಲ್ಲಿ ಸೀಟು ಹಂಚಿಕೆ ಮಾಡಲಾಗುವುದು. ಅತೀ ಕಡಿಮೆ ಸರ್ಕಾರಿ ಶುಲ್ಕ, ವಿದ್ಯಾರ್ಥಿ ವೇತನ ಸೌಲಭ್ಯ, ನುರಿತ, ಅನುಭವಿ ಬೋಧಕ ವೃಂದ, ಸುಸಜ್ಜಿತ ಕಟ್ಟಡಗಳ ಸಮುಚ್ಚಯ, ಪ್ರಯೋಗಾಲಯಗಳು, ಉತ್ತಮ ಕಲಿಕಾ ವಾತಾವರಣವಿದ್ದು ಡಿಪ್ಲೊಮಾ ಪಾಸಾದ ವಿದ್ಯಾರ್ಥಿಗಳಿಗೆ ಸರ್ಕಾರಿ ಇಲಾಖೆಗಳಲ್ಲಿ ಜೆಇ/ಜೆಟಿಓ ಹುದ್ದೆಗಳು ಸೇರಿದಂತೆ ಅರೆ-ಸರಕಾರಿ ಹಾಗೂ ಖಾಸಗಿ ಉದ್ದಿಮೆಗಳಲ್ಲಿ ವಿಫುಲ ಉದ್ಯೋಗಾವಕಾಶಗಳಿವೆ. ದಾಖಲಾತಿ ಕುರಿತ ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲರಾದ ಕುಮಾರ ಕೆ.ಎಂ. ಮೊ.ನಂ:9731575859, ಪ್ರವೇಶ ನಿರ್ವಾಹಕ ಗುಣಪಾಲ ಜೈನ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕೃಷಿ ಪದ್ದತಿಯಲ್ಲಿ ಕಾಲಕ್ಕೆ ಅನುಗುಣವಾಗಿ ಬದಲಾವಣೆಗಳು ಅವಶ್ಯ ಈ ನಿಟ್ಟಿನಲ್ಲಿ ಯಾಂತ್ರಿಕತೆಯ ಮೂಲಕ ಸಮಗ್ರ ಕೃಷಿ ಪದ್ದತಿಯನ್ನು ರೂಪಿಸಿಕೊಳ್ಳಿ ಎಂದು ಉಡುಪಿ ಜಿಲ್ಲಾ ಉಪ ಕೃಷಿ ನಿರ್ದೇಶಕ ಚಂದ್ರಶೇಖರ್ ನಾಯ್ಕ್ ಹೇಳಿದರು. ಅವರು ಕೋಟದ ಗಾಂಧಿ ಮೈದಾನದಲ್ಲಿ ಸಂಸ್ಕ್ರತಿ ಸಂಭ್ರಮ ಟ್ರಸ್ಟ್ ಕೋಟ ಕುಂದಾಪುರ, ವಿಧಾತ್ರಿ ರೈತ ಉತ್ಪಾದಕ ಸಂಸ್ಥೆ ಕೋಟ,ಗೀತಾನಂದ ಫೌಂಡೇಶನ್ ಮಣೂರು,ಕೋಟ ಸಹಕಾರಿ ವ್ಯವಸಾಯಕ ಸಂಘ ಇವರುಗಳ ಸಹಭಾಗಿತ್ವದಡಿ ಹಲಸು ಮಾವು ಹಾಗೂ ಕೃಷಿ ಮೇಳ 2025 ಕಾರ್ಯಕ್ರಮದ ಎರಡನೇ ದಿನದ ಕಾರ್ಯಕ್ರಮದಲ್ಲಿ ವಿಧಾತ್ರಿ ಸಂಸ್ಥೆಯ ಪ್ಲಾಟ್ ಫಾಮ್೯ ಬಿಡುಗಡೆ, ಟ್ರೇಡ್ ಮಾಕ್೯ ಅನಾವರಣ ಮತ್ತು ರೈತ ಏಕತಾ ಕೇಂದ್ರ ಉದ್ಘಾಟನೆಗೊಳಿಸಿ ಮಾತನಾಡಿದರು. ರೈತರ ಆದಾಯವನ್ನು ದ್ವಿಗುಣಗೊಳಿಸುವ ಜತೆಗೆ ಉತ್ಪಾದನಾ ವೆಚ್ಚ ಕಡಿಮೆಗೊಳಿಸುವ ಯೋಜನೆ ರೂಪಿಸಬೇಕು ಈ ಮೂಲಕ ಕೃಷಿ ಕೃಷಿ ಕ್ಷೇತ್ರದಲ್ಲಿ ಆಮೂಲಾಗ್ರ ಸುಧಾರಣೆ ತರುವ ಅವಶ್ಯಕತೆ ಸಭೆಯಲ್ಲಿ ಒತ್ತಿ ಹೇಳಿದರು. ಕಾರ್ಯಕ್ರಮದಲ್ಲಿ ವಿಧಾತ್ರಿ ಸಂಸ್ಥೆಗೆ ಸಂಬಂಧಿಸಿದ ಯೂಟ್ಯೂಬ್ ಹಾಗೂ ಇನ್ಸ್ತಗ್ರಮ್,ಇ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ತಾಲೂಕು ಕಚೇರಿಯಲ್ಲಿ ಬೈಂದೂರು ಹೋಬಳಿಗೆ ಸಂಬಂಧಿಸಿದಂತೆ 94 ಸಿ ಅಡಿ ಅರ್ಜಿ ಹಾಕಿರುವವರಿಗೆ ಶೀಘ್ರವಾಗಿ ಹಕ್ಕು ಪತ್ರ ಒದಗಿಸುವ ನಿಟ್ಟಿನಲ್ಲಿ ಎಲ್ಲಾ ಗ್ರಾಮ ಆಡಳಿತ ಅಧಿಕಾರಿಗಳು ತಮ್ಮ ಹಂತದಲ್ಲಿ ಇರುವ ಅರ್ಜಿಗಳಿಗೆ ಸಕಾರಾತ್ಮಕ ವರದಿ ಮಾಡಬೇಕು ಎಂದು ಶಾಸಕ ಗುರುರಾಜ ಗಂಟಿಹೊಳೆ ಹೇಳಿದರು. ಅವರು ಇಲ್ಲಿನ ತಾಲೂಕು ಕಛೇರಿಯಲ್ಲಿ ಅರ್ಹ ಪಲಾಭವಿಗಳಿಗೆ ಹಕ್ಕು ಪತ್ರ ವಿತರಿಸಿ ಮಾತನಾಡಿ, ತಾಲೂಕು ಕಚೇರಿಯಲ್ಲೂ ಹಲವು ಅರ್ಹ ಅರ್ಜಿಗಳು ವಿಲೇವಾರಿಗೆ ಬಾಕಿ ಇದ್ದು ಅದನ್ನು ಈ ಮಾಸಾಂತ್ಯದೊಳಗೆ ವಿಲೇಗೊಳಿಸಿ ಬೈಂದೂರು ಹೋಬಳಿಯಲ್ಲಿ ಶೂನ್ಯ ಅರ್ಹ 94 ಸಿ ಅರ್ಜಿ ಇರುವಂತೆ ಎಲ್ಲಾ ಹಂತದ ಅಧಿಕಾರಿಗಳು ಆಸಕ್ತಿ ವಹಿಸಿ ಶ್ರಮಿಸಬೇಕು ಎಂದರು. ಮುಂದಿನ ದಿನಗಳಲ್ಲಿ ಅಧಿಕಾರಿಗಳ ಜೊತೆ ಪ್ರತಿ ಪಂಚಾಯತ್ ಭೇಟಿ ನೀಡಿ ಅಲ್ಲಿನ ಜನರಿಂದಲೇ ಅಹವಾಲು ಪಡೆದು 94 ಸಿ ಗೆ ಸಂಬಂಧಿಸಿದಂತೆ ಯಾವೊಬ್ಬ ಅರ್ಹ ಫಲಾನುಭವಿಗಳು ಹಕ್ಕು ಪತ್ರ ವಂಚಿತರಾಗದೇ ಇರುವ ಬಗ್ಗೆ ಖಾತ್ರಿ ಪಡಿಸಿ ಅರ್ಹರಿಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ಗ್ಯಾರಂಟಿ ಅನುಷ್ಠಾನ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯು ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಮೋಹನ್ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ಜರುಗಿತು. ಬೈಂದೂರು ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಮೋಹನ್ ಪೂಜಾರಿ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯುತ್ ಲೋಡ್ ಶೆಡ್ಡಿಂಗ್ ಆಗುತ್ತಿರುವ ಬಗ್ಗೆ ಮೆಸ್ಕಾಂ ಉಪಕೇಂದ್ರದಲ್ಲಿ ತಲೆದೂರಿದ ತಾಂತ್ರಿಕ ಸಮಸ್ಯೆಯನ್ನು ತಿಳಿಯಪಡಿಸುವ ಕೆಲಸ ಮಾಡಬೇಕು. ಜನರಿಗೆ ತೊಂದರೆಯಾಗದಂತೆ ನಿರ್ದಿಷ್ಟ ಸಮಯದ ಮಿತಿಯಲ್ಲಿ ಅಧಿಕಾರಿಗಳೂ ಪರಿಹಾರ ಕಂಡಕೊಳ್ಳಲು ಮುಂದಾಗಬೇಕು. ಸರಕಾರದ ಬಗ್ಗೆ ಇದರಿಂದ ತಪ್ಪು ಅಭಿಪ್ರಾಯ ಬರುವಂತೆ ಮಾಡಬೇಡಿ. ಜೊತೆಗೆ ಜನಪ್ರತಿನಿಧಿಗಳು ವಾಸ್ತವ ಅರಿಯದೇ ಹೇಳಿಕೆ ನೀಡುವುದು ಸರಿಯಲ್ಲ ಎಂದರು. ಈ ಬಗ್ಗೆ ಸಭೆಯಲ್ಲಿದ್ದ ಬೈಂದೂರು ಮೆಸ್ಕಾಂ ಉಪಕೇಂದ್ರದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಹರೀಶ್ ಅವರು ಸ್ಪಷ್ಟನೆ ನೀಡಿ, ಬೈಂದೂರು ಹಾಗೂ ಕೊಲ್ಲೂರು ಮೆಸ್ಕಾಂ ಉಪಕೇಂದ್ರಗಳಿಗೆ ವಿದ್ಯುತ್ ಸರಬರಾಜು ಮಾಡುವ ನಾವುಂದದ 110 ಕೆ.ವಿ. ವಿದ್ಯುತ್ ಸಬ್ಸ್ಟೇಷನ್ನಲ್ಲಿನ 20ಎಂವಿಎ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸಮಾಜದಲ್ಲಿ ಜಾಗೃತಿ ಮೂಡಿಸುವುದರರ ಜೊತೆಯಲ್ಲಿ ಸಮಾಜವು ಒಗ್ಗಟ್ಟಿನಿಂದ ಸಂಘಟಿತವಾಗಬೇಕಾಗಿದೆ. ಈ ನಿಟ್ಟಿನಲ್ಲಿ ನಮ್ಮ ಶ್ರೀ ಮೂಕಾಂಬಿಕಾ ಡಿವೂಟೀಸ್ ಟ್ರಸ್ಟ್ (ಕೇರಳ) ತಮ್ಮತನವನ್ನು ಹಾಗೂ ಸನಾತನ ಧರ್ಮ ರಕ್ಷಣೆಯ ಮೂಲಕ ಸ್ವಾಭಿಮಾನಿಯಾಗಿ ಬೆಳೆಯಬೇಕೆನ್ನುವ ನೆಲೆಯಲ್ಲಿ ಕಾರ್ಯ ನಿರ್ವಹಿಸುತ್ತಿದೆ ಎಂದು ಟ್ರಸ್ಟ್ ಅಧ್ಯಕ್ಷ ನ್ಯಾಯವಾದಿ ಪ್ರಶಾಂತ್ ಹೇಳಿದರು. ಅವರು ಕೊಲ್ಲೂರು ದೇವಳದ ಸ್ವರ್ಣಮುಖಿ ವೇದಿಕೆಯಲ್ಲಿ ಶ್ರೀ ಮೂಕಾಂಬಿಕಾ ಡಿವೂಟೀಸ್ ಟ್ರಸ್ಟ್ ವತಿಯಿಂದ ನಾಲ್ಕು ದಿನಗಳ ಕಾಲ ಆಯೋಜಿಸಿದ ಮೂರನೇ ವರ್ಷದ ಶ್ರೀ ಶಂಕರ ಜಯಂತ್ಯೋತ್ಸವದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕೇರಳದ ನಾಲ್ವರು ಮೂಕಾಂಬಿಕಾ ಭಕ್ತರು ಸೇರಿ 2022ರಲ್ಲಿ ಆರಂಭಿಸಿದ ಈ ಸಂಸ್ಥೆಯಲ್ಲಿ ಪ್ರಸ್ತುತ 400ಕ್ಕೂ ಅಧಿಕ ಭಕ್ತಾದಿಗಳು ಸೇರ್ಪಡೆಗೊಂಡಿದ್ದಾರೆ. ಶೈಕ್ಷಣಿಕ, ಧಾರ್ಮಿಕ ಹಾಗೂ ಸಾಮಾಜಿಕವಾಗಿ ಟ್ರಸ್ಟ್ ಕಾರ್ಯನಿರ್ವಹಿಸುತ್ತಿದೆ. ಪ್ರತೀ ವರ್ಷ ವಿದ್ಯಾನಿಧಿ ಯೋಜನೆ ಮೂಲಕ ಐದು ಮಕ್ಕಳನ್ನು ದತ್ತು ಪಡೆದು ಅವರಿಗೆ ಶಿಕ್ಷಣ ನೀಡುವುದು, ಸದಸ್ಯರ ಸಮರ್ಪಣಾಭಾವದಿಂದ ಬಡಕುಟುಂಬಗಳಿಗೆ ವಸತಿ, ವಸ್ತ್ರ ಹಾಗೂ ದಿನಸಿಗಳನ್ನು ವಿತರಿಸುವುದು ಇತ್ಯಾದಿ ಸಾಮಾಜಿಕ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಿದ್ಯಾರ್ಥಿಗಳು ಕೇವಲ ಪಠ್ಯಕ್ಕೆ ತಮ್ಮನ್ನು ಸೀಮಿತಗೊಳಿಸಿಕೊಳ್ಳದೆ ಪಠ್ಯೇತರ ಚಟುವಟಿಕೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಾಗ ಮಾತ್ರ ಸರ್ವಾಂಗೀಣ ಅಭಿವೃದ್ಧಿಯನ್ನು ಕಾಣುವುದಕ್ಕೆ ಸಾಧ್ಯ, ಈ ಹಿನ್ನಲೆಯಲ್ಲಿ ಕಾಲೇಜು ನಿಮಗೆ ಒದಗಿಸುವ ಈ ವೇದಿಕೆಯನ್ನು ಸೂಕ್ಷ್ಮವಾಗಿ ಬಳಸಿಕೊಳ್ಳಬೇಕು ಎಂದು ಕೋಟ ವಿವೇಕ ಪದವಿ ಪೂರ್ವ ಕಾಲೇಜಿನ ಇಂಗ್ಲೀಷ್ ಉಪನ್ಯಾಸಕ ಶಿವಪ್ರಸಾದ್ ಶೆಟ್ಟಿಗಾರ್ ಹೇಳಿದರು. ಅವರು ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರತಿಭಾ ದಿನಾಚರಣೆ “ಸಂಭ್ರಮ”ವನ್ನು ಉದ್ಘಾಟಿಸಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭ ತೀರ್ಪುಗಾರರಾಗಿ ಆಗಮಿಸಿದ ವಡ್ಡರ್ಸೆಯ ಸರಕಾರಿ ಪ್ರೌಢ ಶಾಲಾ ಶಿಕ್ಷಕರಾದ ಆನಂದ ಶೆಟ್ಟಿ ಹಾಗೂ ಶಂಕರನಾರಾಯಣ ಮದರ್ ತೆರೇಸಾ ಪದವಿ ಪೂರ್ವ ಕಾಲೇಜಿನ ಉಪ-ಪ್ರಾಂಶುಪಾಲರಾದ ಗೀತಾ, ಕಾಲೇಜಿನ ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ ಉಪಸ್ಥಿತರಿದ್ದರು. ಆಡಳಿತ ನಿಕಾಯಕರಾದ ರಕ್ಷಿತ್ ರಾವ್ ಗುಜ್ಜಾಡಿ ಸ್ವಾಗತಿಸಿ, ವಾಣಿಜ್ಯ ಉಪನ್ಯಾಸಕ ಸುಧೀರ್ ಕುಮಾರ್ ಅತಿಥಿಗಳನ್ನು ಪರಿಚಯಿಸಿ, ಆಂಗ್ಲ ಭಾಷಾ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಡಾ. ಶಿವರಾಮ ಕಾರಂತ ಪ್ರತಿಷ್ಠಾನ ಕೋಟ, ಕೋಟತಟ್ಟು ಗ್ರಾ.ಪಂ. ಉಸಿರು ಕೋಟ, ಬ್ರಹ್ಮಾವರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಗೀತಾನಂದ ಫೌಂಡೇಶನ್ ಮಣೂರು ಪಡುಕೆರೆ, ಅರಿವು ಕೇಂದ್ರ ಡಿಜಿಟಲ್ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರ ಕೋಟತಟ್ಟು ಆಶ್ರಯದಲ್ಲಿ ಮೇ. 04 ರಂದು ಬೆಳಗ್ಗೆ 9 ರಿಂದ ಕೋಟದ ಕಾರಂತ ಥೀಮ್ ಪಾರ್ಕಿನಲ್ಲಿ ಕುಂದಾಪ್ರ ಕನ್ನಡ ಐದನೆಯ ಸಾಹಿತ್ಯ ಸಮ್ಮೇಳನ – ಕಾಂಬ 2025 ಜರಗಲಿದೆ. ಸಮ್ಮೇಳನದ ಸರ್ವಾಧ್ಯಕ್ಷತೆಯನ್ನು ಸಾಹಿತಿ ಡಾ. ಅಣ್ಣಯ್ಯ ಕುಲಾಲ್ ಉಳ್ತೂರು ವಹಿಸಲಿದ್ದಾರೆ. ಕುಂದಾಪ್ರ ಕನ್ನಡ ಅಧ್ಯಯನ ಪೀಠದ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಸಭಾಧ್ಯಕ್ಷತೆಯನ್ನು ಕೋಟತಟ್ಟು ಗ್ರಾ.ಪಂ. ಅಧ್ಯಕ್ಷ ಸತೀಶ್ ಬಾರಿಕೆರೆ ವಹಿಸಲಿದ್ದಾರೆ. ಡಾ. ವಿಜಯ ಬಲ್ಲಾಳ್ ಮೊದಲಾದವರು ಉಪಸ್ಥಿತರಿರುವರು. ಸಮ್ಮೇಳನದ ಪ್ರಯುಕ್ತ ಬೆಳಗ್ಗೆ 11.30ರಿಂದ ಕವಿಗೋಷ್ಠಿ, ಕುಂದಕನ್ನಡದ ಹರಟೆ, ಅಧ್ಯಕ್ಷರೊಂದಿಗೆ ಮಾತುಕತೆ, ಕೆ.ಸಿ.ಕುಂದರ್ ದತ್ತಿನಿಧಿ ಪ್ರದಾನ ನಡೆಯಲಿದೆ. ಕುಂದಾಪ್ರ ಕನ್ನಡಕ್ಕಾಗಿ ಸಾಕಷ್ಟು ಸೇವೆ ಸಲ್ಲಿಸಿದ ಪಂಜು ಗಂಗೊಳ್ಳಿ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ : 2024-25ನೇ ಸಾಲಿನ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆ ಶೇ.98.27 ಫಲಿತಾಂಶ ದಾಖಲಿಸಿದ್ದಾರೆ. ವಿದ್ಯಾರ್ಥಿಗಳಾದ ಸುಶ್ಮಿತಾ ಎಸ್. ಗಾಣಿಗ (624), ಮನಾಲಿ (619), ವೈಷ್ಣವಿ (611), ಅಭಿಜ್ಞಾ ಖಾರ್ವಿ (610), ಧನ್ಯ ಮೇಸ್ತ (610), ಸೃಜನಾ (603), ವಿಕ್ರಮ್ ವಿ. ದೇವಾಡಿಗ (600), ಪ್ರಾರ್ಥನಾ ಪೈ (596), ಶ್ರೀಯಾ ಖಾರ್ವಿ (595), ಅಶ್ವಿತಾ ಎಸ್.ಮೊಗವೀರ (588), ಸಹನಾ ಆರ್.ಮೇಸ್ತ (580), ಬಿ. ಅಪೂರ್ವ ನಾಯಕ್ (580) ಉತ್ತಮ ಸಾಧನೆ ಮಾಡಿದ್ದಾರೆ. ಪರೀಕ್ಷೆಗೆ ಹಾಜರಾದ 58 ವಿದ್ಯಾರ್ಥಿಗಳ ಪೈಕಿ 57 ವಿದ್ಯಾರ್ಥಿಗಳು ತೇರ್ಗಡೆಗೊಂಡಿದ್ದು, 30 ವಿದ್ಯಾರ್ಥಿಗಳು ವಿಶಿಷ್ಠ ದರ್ಜೆಯಲ್ಲಿ, 24 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, 3 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. 624 ಅಂಕಗಳನ್ನು ಪಡೆದಿರುವ ಸುಶ್ಮಿತಾ ಎಸ್. ಗಾಣಿಗ ಶಾಲೆಗೆ ಪ್ರಥಮ ಸ್ಥಾನ ಮತ್ತು ರಾಜ್ಯದಲ್ಲಿ 2ನೇ ರ್ಯಾಂಕ್ ಪಡೆದು ಅತ್ಯುತ್ತಮ ಸಾಧನೆ ಮಾಡಿದ್ದಾರೆ.
