Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ವಸತಿ ಇಲಾಖೆಯಲ್ಲಿ ಮನೆ ಪಡೆಯಬೇಕಾದರೆ ಹಣ ನೀಡಬೇಕು ಎನ್ನುವ ಆರೋಪವನ್ನು ಆಡಳಿತ ಪಕ್ಷವಾದ ಕಾಂಗ್ರೆಸ್‌ನ ಶಾಸಕರೇ ಮಾಡಿದ್ದಾರೆ. ಹೀಗಾಗಿ ಈ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುವ ಸಚಿವರು, ಅಧಿಕಾರಿಗಳ ವಿರುದ್ಧ ಮುಖ್ಯ ಮಂತ್ರಿ ಸಿದ್ಧರಾಮಯ್ಯ ಅವರು ಕ್ರಮಕೈಗೊಳ್ಳಬೇಕು. ಸಚಿವರಿಂದ ರಾಜೀನಾಮೆ ಪಡೆಯಬೇಕು. ಹಗರಣದಲ್ಲಿ ಭಾಗಿಯಾದವರಿಗೆ ಶಿಕ್ಷೆಯಾಗುವ ತನಕ ನಾವು ನಿರಂತರವಾಗಿ ಹೋರಾಟ ನಡೆಸಲಿದ್ದೇವೆ ಎಂದು ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಎಚ್ಚರಿಕೆ ನೀಡಿದರು.  ಅವರು ಕೋಟ ಗ್ರಾ.ಪಂ. ಆವರಣದಲ್ಲಿ, ಬಿಜೆಪಿ ವತಿಯಿಂದ ಕಾಂಗ್ರೆಸ್ ಸರಕಾರದ ವೈಪಲ್ಯಗಳ ವಿರುದ್ಧ ಹಮ್ಮಿಕೊಳ್ಳಲಾದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದರು. ಸರಕಾರ ಎಕವಿನ್ಯಾಸ ನಕ್ಷೆ, 11-ಇ ನೀಡುವ ಅಧಿಕಾರವನ್ನು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ನೀಡಿದೆ. ಉಡುಪಿ ಪ್ರಾಧಿಕಾರದಲ್ಲಿ ಯಾವುದೇ ಕೆಲಸವಾಗುತ್ತಿಲ್ಲ. ಇನ್ನಾದರೂ ಸರಕಾರ ನಗರಾಭಿವೃದ್ಧಿ ಪ್ರಾಧಿಕಾರದ ಹಕ್ಕನ್ನು ಮರಳಿ ಗ್ರಾಮ ಪಂಚಾಯತ್‌ಗೆ ನೀಡಬೇಕು ಎಂದರು. ಉಡುಪಿ ಜಿಲ್ಲಾ ಯುವಮೋರ್ಚಾ ಅಧ್ಯಕ್ಷ ಪ್ರಥ್ವಿರಾಜ್ ಶೆಟ್ಟಿ ಬಿಲ್ಲಾಡಿ ಮಾತನಾಡಿದರು. ಬಿಜೆಪಿ ಪ್ರಮುಖರಾದ ಶಂಕರ್ ಅಂಕದಕಟ್ಟೆ, ಕೋಟ ಗ್ರಾ.ಪಂ.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಪ್ರಸಕ್ತ ಸಾಲಿನಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಾತಿಗಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಕ್ಕೆ ಸೇರಿದ ಪಿ.ಯು.ಸಿ, ಐ.ಟಿ.ಐ ಹಾಗೂ ಡಿಪ್ಲೋಮಾ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ವೆಬ್‌ಸೈಟ್ https://shp.karnataka.gov.in/bcwd ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್ 30 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್‌ಸೈಟ್ https://bcwd.karnataka.gov.in/ ಅಥವಾ ಸಹಾಯವಾಣಿ ಸಂಖ್ಯೆ: 805077004 ಹಾಗೂ 8050770005 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕೊಲ್ಲಿ ರಾಷ್ಟ್ರಗಳಲ್ಲೊಂದು ಪುಟ್ಟ ದೇಶ, ಅದರ ರಾಜಧಾನಿಯಲ್ಲೊಂದು  ಚಿಕ್ಕ ಜಾಗದಲ್ಲಿ ಒಳಾಂಗಣ ಮಳಿಗೆ. ಮಳಿಗೆಯ ಹೊರಗಿನ ಮಾರುಕಟ್ಟೆ ಪ್ರದೇಶದಲ್ಲಿ 36°C ತಾಪಮಾನ, ಮಳಿಗೆಯ ಒಳಗೆ ಹವಾನಿಯಂತ್ರಿತ ವಾತಾವರಣ, ವಿಶೇಷವಾಗಿ ಹಣ್ಣಿನ ರಾಜನಿಗೆ ಈ ಸಿದ್ಧತೆ. ಎರಡನೇ ಬಾರಿ ಆಯೋಜಿಸುತ್ತಿರುವ ಮಾವಿನ ಹಾಂಬಾ ಪ್ರದರ್ಶನ ಇದಾಗಿದೆ. 50ಕ್ಕೂ ಹೆಚ್ಚು ಅಂಗಡಿಗಳು, ಸುಮಾರು 25 ಮಾರಾಟಗಾರರು, ಎರಡು ವಾರದ ಸಂತೆ ಎಂದೇ ಹೇಳಬಹುದು. ಪ್ರತಿದಿನಕ್ಕೆ ಸಾವಿರಾರು ಜನರು ಬಂದು ಆನಂದಿಸಿ, ಸ್ವಾದಿಸಿ, ಹೋಗುತ್ತಿರುವರು. ಇದೇ ಕತಾರಿನ ದೋಹದಲ್ಲಿರುವ ಸೂಕ್ ವಾಕಿಫ್ ನಲ್ಲಿ ನಡೆದ ಮಾವಿನ ಮೇಳ. ರಾಜಪುರಿ, ತೂತಪುರಿ, ಬಾದಾಮಿ, ನಾಟಿ, ಸಿಂಧೂರ ಇನ್ನೂ ಅನೇಕ ತಳಿಗಳ ಮಾವಿನ ಹಣ್ಣುಗಳ ಸುವಾಸನೆ ತುಂಬಿದ ಈ ಒಳಾಂಗಣ ಪ್ರದೇಶದಲ್ಲಿ, ಮಾವಿನ ಹಣ್ಣಿನ ರಸ, ಮಾವಿನಕಾಯಿ ಜೊತೆಗೆ ಉಪ್ಪು ಖಾರ, ಮಾವಿನ ಉಪ್ಪಿನಕಾಯಿ, ಮಾವಿನ ಐಸ್ ಕ್ರೀಮ್, ಮಾವಿನ ಫಲೂದ, ಮಾವಿನ ಲಸ್ಸಿ ಹೀಗೆ ವೈವಿಧ್ಯಮಯ ರುಚಿಕರ ರಸಭರಿತ ಮಾವಿನ ತಿಂಡಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಬೈಂದೂರು ಇನ್ನರ್‌ವೀಲ್‌ ಕ್ಲಬ್ ಇದರ 2025- 26ನೇ ಸಾಲಿನ ನೂತನ ಅಧ್ಯಕ್ಷರಾಗಿ ಕೆ. ಶಾರದಾ ನಾರಾಯಣ್ ಹಾಗೂ ಕಾರ್ಯದರ್ಶಿಯಾಗಿ ಚೈತ್ರ ಸತೀಶ್‌ ಯಡ್ತರೆ ಆಯ್ಕೆಯಾಗಿದ್ದಾರೆ. ಶಾರದಾ ಅವರು ನಿವೃತ್ತ ಶಿಕ್ಷಕಿಯಾಗಿದ್ದು, ವಿವಿಧ ಸಂಸ್ಥೆಗಳಲ್ಲಿಯೂ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ನೂತನ ಪದಾಧಿಕಾರಿಗಳ ಪದಪ್ರಧಾನ ಸಮಾರಂಭ ಜುಲೈ 9ರಂದು ಬೈಂದೂರು ರೋಟರಿ ಸಮುದಾಯ ಭವನದಲ್ಲಿ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹೆಮ್ಮಾಡಿಯ ಜನತಾ ಪದವಿ ಪೂರ್ವ ಕಾಲೇಜು ಹಾಗೂ ಕಿರಿಮಂಜೇಶ್ವರದ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್‌ನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ಆಚರಿಸಲಾಯಿತು. ಮುಖ್ಯ ಶಿಕ್ಷಕಿ ದೀಪಿಕಾ ಆಚಾರ್ಯ ಅವರು ಮಾತನಾಡಿ, ಯೋಗದ ಮಹತ್ವವನ್ನು ಸಾರುತ್ತ ಪ್ರತಿಯೊಬ್ಬರು ಯೋಗವನ್ನು ಕಲಿತು ಆರೋಗ್ಯಕರ ಜೀವನದ ಕಡೆಗೆ ಹೆಚ್ಚು ಹಾಕಬೇಕು ಎಂದರು. ಜನತಾ ಸಮೂಹ ಸಂಸ್ಥೆಯ ವಿದ್ಯಾರ್ಥಿಗಳು ಸಾಮೂಹಿಕ ಯೋಗ ಪ್ರಾತ್ಯಕ್ಷಿಕೆ ನಡೆಸಿದರು. ಕಾಲೇಜಿನ ರಾಷ್ಟ್ರಮಟ್ಟದ ಯೋಗಪಟು ನಿರೀಕ್ಷಾ ಹಾಗೂ ಸಾನಿಧ್ಯಾ ಎಸ್. ಮೊಗವೀರ  ಮತ್ತು ವಂಶಿತ್ (7ನೇ ತರಗತಿ) ಯೋಗ ನೃತ್ಯವನ್ನು ಪ್ರದರ್ಶಿಸಿದರು. ಡ್ರಾಮಾ ಜೂನಿಯರ್ ಖ್ಯಾತಿಯ ಸಿಂಚನ ಕೋಟೇಶ್ವರ (ಪ್ರಥಮ ಪಿಯುಸಿ) ಅವರಿಂದ ಡ್ರಾಮಾ ಪ್ರದರ್ಶನ ನಡೆಯಿತು. ಕಾರ್ಯಕ್ರಮದಲ್ಲಿ ಜನತಾ ಸಮೂಹ ಸಂಸ್ಥೆಗಳ ವಿದ್ಯಾರ್ಥಿಗಳು, ಬೋಧಕ/ಬೋಧಕೇತರ  ವೃಂದದವರು  ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಯೋಗ ಶಿಕ್ಷಕಿಯಾದ ಅನ್ವಿತಾ ನಿರೂಪಿಸಿ, ಸ್ವಾಗತಿಸಿ, ಸಮಾಜ ವಿಜ್ಞಾನ ಶಿಕ್ಷಕರಾದ ಸುಬ್ರಹ್ಮಣ್ಯ ಮರಾಟಿ ವಂದಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ಪಡುಕೋಣೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದಾನಿಗಳಿಂದ ಉಚಿತ ನೋಟ್ ಪುಸ್ತಕ ವಿತರಣಾ ಕಾರ್ಯಕ್ರಮವು ಶನಿವಾರ ನಡೆಯಿತು.  ಶಾಲಾ ಪ್ರಾಕ್ತನ ವಿದ್ಯಾರ್ಥಿನಿ ಪದ್ಮಾ ಐತಾಳ್ ಪಡುಕೋಣೆ ಅವರು ನೋಟ್ ಪುಸ್ತಕದ ಪ್ರಾಯೋಜಕತ್ವವನ್ನು ವಹಿಸಿದ್ದರು. ಶಾಲೆಯ ಎಲ್‌ಕೆಜಿ ಯಿಂದ 8ನೇ ತರಗತಿಯವರೆಗಿನ ಎಲ್ಲಾ ಮಕ್ಕಳಿಗೂ ಶಾಲಾ ಎಸ್‌ಡಿಎಂಸಿ ಅಧ್ಯಕ್ಷರು ಹಾಗೂ ಸದಸ್ಯರು ನೋಟ್ ಪುಸ್ತಕ ವಿತರಿಸಿ ದಾನಿಗಳಿಗೆ ಕೃತಜ್ಞತೆ ಸಲ್ಲಿಸಿದರು. ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ದಿನೇಶ್ ಪೂಜಾರಿ, ಉಪಾಧ್ಯಕ್ಷೆ ಪೂರ್ಣಿಮಾ ಎಸ್. ಡಿಎಂಸಿ ಸದಸ್ಯರುಗಳು, ಪೋಷಕರು, ಸಹಶಿಕ್ಷಕರು ಹಾಗೂ ಗೌರವ ಶಿಕ್ಷಕರು ಉಪಸ್ಥಿತರಿದ್ದರು. ಶಾಲಾ ಮುಖ್ಯೋಪಾಧ್ಯಾಯ ಆನಂದ ಜಿ. ಪ್ರಾಸ್ತಾವಿಕ ಮಾತುಗಳನ್ನಾಡಿದರು. ಅಮಿತಾ ಕಾರ್ಯಕ್ರಮ ನಿರೂಪಿಸಿ, ಸಹಶಿಕ್ಷಕಿ ಶ್ಯಾಮಲಾ ಸ್ವಾಗತಿಸಿ, ಸುಜಾತಾ ವಂದಿಸಿದರು. ಪೋಟೋ ಪೈಲ್ ನೇಮ್ : ೨೨ಜಿಎಎನ್೬ (ಪಡುಕೋಣೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದಾನಿಗಳಿಂದ ಉಚಿತ ನೋಟ್ ಪುಸ್ತಕ ವಿತರಣಾ ಕಾರ್ಯಕ್ರಮ ನಡೆಯಿತು)

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತ್ರಾಸಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಭ್ರಾಮರಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ವಾರ್ಷಿಕ ಮಹಾಸಭೆ ಕಾರ್ಯಕ್ರಮದಲ್ಲಿ ಯೋಗ ದಿನಾಚರಣೆಯ ಅಂಗವಾಗಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ಸಂದೀಪ್‌ ಪೂಜಾರಿ ತ್ರಾಸಿ. ಅವರನ್ನು ಭ್ರಾಮರಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ಪರವಾಗಿ ತ್ರಾಸಿಯ ಡಾ. ಅಂಬೇಡ್ಕರ್ ಸಭಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗೌರವಿಸಲಾಯಿತು. ಗ್ರಾಮ ಪಂಚಾಯತ್ ಅಧ್ಯಕ್ಷ ಮಿಥುನ್ ಎಂ.ಡಿ. ಬಿಜೂರು, ಪಿಡಿಒ ಶೋಭಾ ಎಸ್., ಗ್ರಾಮ ಪಂಚಾಯತ್ ಸದಸ್ಯರು, ಗುಜ್ಜಾಡಿ ಪಶು ವೈಧ್ಯಾಧಿಕಾರಿ ಅರುಣ್ ಕೆ.ಪಿ., ಭ್ರಾಮರಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ಅಧ್ಯಕ್ಷರು, ಪದಾಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ 2024 ನೇ ಸಾಲಿನ Tenzing Norjy National Adventure (T.N.N.A.A) ಪ್ರಶಸ್ತಿಗಾಗಿ 2022 ರಿಂದ 2024 ನೇ ಸಾಲಿನ ವರೆಗೆ ಜಲಸಾಹಸ, ವಾಯುಸಾಹಸ ಮತ್ತು ಭೂ ಸಾಹಸ ಕ್ರೀಡೆಗಳಲ್ಲಿ ಸಾಧನೆ ಮಾಡಿರುವ ಅರ್ಹ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್ 30 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ http://awards.gov.in/ ಅಥವಾ ಉಚಿತ ಸಹಾಯವಾಣಿ ಸಂಖ್ಯೆ: 01123386898 ಅಥವಾ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉಡುಪಿ ದೂ.ಸಂಖ್ಯೆ: 0820-2521324, ಮೊ.ನಂ: 9845432303 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಇಲಾಖೆಯ ಕಚೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ನಿವೃತ್ತ ಮುಖ್ಯ ಶಿಕ್ಷಕ, ರಾಜ್ಯ ಮಟ್ಟದ ಯೋಗ ಸಂಪನ್ಮೂಲ ವ್ಯಕ್ತಿ ನಾರಾಯಣ ದೇವಾಡಿಗ ಅವರ ನೇತೃತ್ವದಲ್ಲಿ ಹಿರಿಯ ನಾಗರಿಕರ ವೇದಿಕೆಯಲ್ಲಿ ವಿಶ್ವ ಯೋಗ ದಿನಾಚರಣೆ ನಡೆಯಿತು. ವೇದಿಕೆಯ ಅಧ್ಯಕ್ಷ ಗಿರೀಶ್ ಶ್ಯಾನುಭಾಗರ ಅಧ್ಯಕ್ಷತೆಯಲ್ಲಿ ಜರಗಿದ ಸಭಾ ಕಾರ್ಯಕ್ರಮದಲ್ಲಿ, ಯೋಗಗುರುಗಳಾದ ನಾರಾಯಣ ದೇವಾಡಿಗ ಅವರಿಗೆ ಸನ್ಮಾನಿಸಲಾಯಿತು. ಸದಸ್ಯ ವೆಂಕಟರಮಣರು ಲಯಬದ್ಧವಾಗಿ ಯೋಗ ಗೀತೆ ಹಾಡಿದರು. ನಿಕಟ ಪೂರ್ವ ಅಧ್ಯಕ್ಷ ಪುಂಡಲೀಕ ನಾಯಕರು ಯೋಗದ ಮಹತ್ವವನ್ನು ವಿವರಿಸಿ ಸ್ವರಚಿತ ಯೋಗ ಕವನ ವಾಚಿಸಿದರು. ನಿವೃತ್ತ ಮುಖ್ಯ ಶಿಕ್ಷಕ ಉಮೇಶ ರಾಯ್ಕರ್ ಅವರಿಂದ ಪ್ರಾರ್ಥನೆ, ಕಾರ್ಯದರ್ಶಿ ಗೋವಿಂದ ಬಿಲ್ಲವರಿಂದ ಗತಸಭೆಯ ವರದಿವಾಚನ, ಕಾರ್ಯಕ್ರಮ ನಿರೂಪಣೆ ನಡೆಯಿತು. ಕಾರ್ಯಕ್ರಮಕ್ಕೆ ಸಹಯೋಗ ನೀಡಿದ ಸೀನಿಯರ್ ಛೇಂಬರ್ ವತಿಯಿಂದ ಉಪಹಾರ ವ್ಯವಸ್ಥೆ ಮಾಡಲಾಯಿತು. ವೇದಿಕೆ ಉಪಾಧ್ಯಕ್ಷ ಜಿ. ಈಶ್ವರ, ಸೀನಿಯರ್ ಛೇಂಬರ್’ನ ಅಧ್ಯಕ್ಷ ಶ್ರೀಕಾಂತ್ ‌ಶೆಟ್ಟಿ, ನಿಕಟಪೂರ್ವ ಕಾರ್ಯದರ್ಶಿ ಜಯಾನಂದ ಪಟಗಾರರು ಉಪಸ್ಥಿತರಿದ್ದು ಶುಭಕೋರಿದರು. ಉಭಯ ಸಂಘಟನೆಗಳ ಸದಸ್ಯರು ಉಪಸ್ಥಿತರಿದ್ದು ಕಾರ್ಯಕ್ರಮ ಚಂದಗಾಣಿಸಿದರು. ವೇದಿಕೆಯ ನೋಂದಣಿಯನ್ನು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಶಂಕರನಾರಾಯಣ: ಇಲ್ಲಿನ ಮದರ್ ತೆರೇಸಾ ಮೆಮೋರಿಯಲ್ ಸ್ಕೂಲ್‌ನಲ್ಲಿ ಅಂತರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಯಿತು. ಶಾಲೆಯ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ  ಎಲ್ಲಾ ವಿದ್ಯಾರ್ಥಿಗಳು ಸಂಸ್ಥೆಯಿಂದ ನೀಡಲಾಗಿರುವ ಯೋಗದ ಸಮವಸ್ತ್ರದಲ್ಲಿ ಶಿಸ್ತು ಬದ್ಧರಾಗಿ ಭಾಗವಹಿಸಿದ್ದರು. ಸಂಸ್ಥೆಯ ಉಪ ಮುಖ್ಯೋಪಾಧ್ಯಾಯರು, ಹಿರಿಯ ಶಿಕ್ಷಕರು ಹಾಗೂ ರಾಜ್ಯಮಟ್ಟದ ಯೋಗ ಪರಿಣಿತಿರಾದ ಸಂತೋಷ್ ಕುಮಾರ್ ಹಾಗೂ ಮದರ್ ತೆರೇಸಾ ಶಾಲೆಯ ವಿದ್ಯಾರ್ಥಿಗಳಿಗೆ ಶಾಲೆಯ ದೈನಂದಿನ ತರಗತಿಗಳಲ್ಲಿ ಯೋಗ ಅಭ್ಯಾಸವನ್ನು ನೀಡುತ್ತಿರುವ ಯೋಗ ಶಿಕ್ಷಕಿ ಜಯಲಕ್ಷಿ ಅವರು, ವಿದ್ಯಾರ್ಥಿಗಳಿಗೆ ವಿವಿಧ ಆಸನಗಳನ್ನು ಮಾಡಿಸುವ ಮೂಲಕ ಅವರಿಗೆ ಯೋಗದ ಮಹತ್ವವನ್ನು ಅದರ ಪರಿಣಾಮವನ್ನು ತಿಳಿಸಿಕೊಟ್ಟು, ಯೋಗವು ಸ್ವಯಂ ಅನ್ವೇಷಣೆ ಮತ್ತು ಸ್ವಯಂ ಸುಧಾರಣೆಯ ಒಂದು ಮಾರ್ಗ ಎಂಬುದರ ಅರಿವು ಮೂಡಿಸಿದರು. ವಿದ್ಯಾರ್ಥಿಗಳಿಗೆ ಶಾಲೆಯಲ್ಲಿ ತಮ್ಮ ದೈನಂದಿನ ತರಗತಿಗಳಲ್ಲಿ ಮಾಡುವ ಯೋಗಭ್ಯಾಸದಿಂದ ಆಗುವ ಉಪಯುಕ್ತತೆಯ ಬಗ್ಗೆ ತಿಳಿಸಿಕೊಟ್ಟರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಆಡಳಿತ ಮಂಡಳಿಯವರು, ಪ್ರಾಂಶುಪಾಲರು, ಮುಖ್ಯೋಪಾಧ್ಯಾಯರು ಹಾಗೂ ಎಲ್ಲಾ ಶಿಕ್ಷಕರು ಭಾಗವಹಿಸುವ ಮೂಲಕ ಕಾರ್ಯಕ್ರಮವನ್ನು ಸಂಪನ್ನಗೊಳಿಸಿದರು.

Read More