Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಕರ್ನಾಟಕ ರಾಜ್ಯದ ಟಾಪ್ 10 ಪೊಲೀಸ್ ಠಾಣೆಗಳ ಪಟ್ಟಿಯಲ್ಲಿ 7ನೇ ಸ್ಥಾನ ಹಾಗೂ ಉಡುಪಿ ಜಿಲ್ಲೆಯಲ್ಲಿ ಪ್ರಥಮ ಸ್ಥಾನ ಪಡೆದ ಗಂಗೊಳ್ಳಿ ಪೊಲೀಸ್ ಠಾಣೆಯ ಎಸ್ಸೈ ಪವನ್ ನಾಯಕ್ ಹಾಗೂ ಸಿಬ್ಬಂದಿ ವರ್ಗದವರನ್ನು ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟ ಕುಂದಾಪುರ ತಾಲೂಕು ಘಟಕದ ವತಿಯಿಂದ ಅಭಿನಂದಿಸಲಾಯಿತು. ಕರ್ತವ್ಯ ನಿಷ್ಠೆ, ದಕ್ಷತೆ ಹಾಗೂ ಜನಸ್ನೇಹಿ ಪೊಲೀಸ್ ಸೇವೆಗೆ ಮೆಚ್ಚುಗೆ ವ್ಯಕ್ತಪಡಿಸಿದ ಒಕ್ಕೂಟದ ಪದಾಧಿಕಾರಿಗಳು, ಮುಂದಿನ ದಿನಗಳಲ್ಲಿಯೂ ಇನ್ನಷ್ಟು ಸಾಧನೆಗಳನ್ನು ಮಾಡುವಂತಾಗಲಿ ಎಂದು ಶುಭ ಹಾರೈಸಿದರು. ಈ ಸಂದರ್ಭದಲ್ಲಿ ತಾಲೂಕು ಅಧ್ಯಕ್ಷ ಎಸ್. ದಸ್ತಗೀರ್ ಕಂಡ್ಲೂರು, ಕಾರ್ಯದರ್ಶಿ ರಿಯಾಝ್ ಕೋಡಿ, ಜಿಲ್ಲಾ ಹಿರಿಯ ಉಪಾಧ್ಯಕ್ಷ ಮುಹಮ್ಮದ್ ರಫೀಕ್ ಗಂಗೊಳ್ಳಿ, ಜಿಲ್ಲಾ ಉಪಾಧ್ಯಕ್ಷ ಶಾಬಾನ್ ಹಂಗಳೂರು, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಮೌಲಾನ ಝಮೀರ್ ಅಹ್ಮದ್ ರಶಾದಿ, ಜಿಲ್ಲಾ ಸಮಿತಿ ಸದಸ್ಯರಾದ ಅಬು ಮುಹಮ್ಮದ್ ಕುಂದಾಪುರ, ರೆಹಾನ್ ತ್ರಾಸಿ, ಮುನಾಫ್ ಕಂಡ್ಲೂರು ಮೊದಲಾದವರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿನ ಆರ್ಥಿಕವಾಗಿ ಹಿಂದುಳಿದಿರುವ ಅಲ್ಪಸಂಖ್ಯಾತ ಸಮುದಾಯದವರ ಸರಳ ವಿವಾಹಕ್ಕೆ ಪ್ರೋತ್ಸಾಹ ನೀಡಲು ಸ್ವಯಂ ಸೇವಾ ಸಂಸ್ಥೆಗಳ ಮೂಲಕ ನಡೆಯುವ ಸಮೂಹ ವೆಚ್ಚಗಳಿಗಾಗಿ ಪ್ರತಿ ಜೋಡಿಗೆ 50 ಸಾವಿರ ರೂಗಳ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಚೇರಿಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 8277799990 ಅಥವಾ ಆಯಾ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಉಡುಪಿ: 0820-2574596, ಕುಂದಾಪುರ: 08254-23070, ಕಾರ್ಕಳ: 08258-231101 ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಪುರಸಭಾ ವ್ಯಾಪ್ತಿಯಲ್ಲಿ ಕೈಗೊಂಡಿರುವ ಯುಜಿಡಿ  ಕಾಮಗಾರಿಯ ಅಪೂರ್ಣತೆಯಿಂದಾಗಿ ಸಾರ್ವಜನಿಕರಿಗೆ ಅನವಶ್ಯಕ ತೊಂದರೆ ಉಂಟಾಗುತ್ತಿದೆ. ಯಾವುದೇ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುವಾಗ ಸರಕಾರದ ಅನುದಾನಗಳು ದುರುಪಯೋಗವಾಗದಂತೆ ನೋಡಿಕೊಳ್ಳಬೇಕು ಎಂದು ಪೌರಾಡಳಿತ ಸಚಿವರಾದ ಹೆಚ್.ಸಿ. ಬಾಲಕೃಷ್ಣ ಹೇಳಿದರು. ಅವರು ಮಂಗಳವಾರ ಕುಂದಾಪುರ ಪುರಸಭೆಯ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಗರಾಭಿವೃದ್ಧಿ ಇಲಾಖೆ, ಪೌರಾಡಳಿತ ನಿರ್ದೇಶನಾಲಯ ಬೆಂಗಳೂರು, ಜಿಲ್ಲಾಡಳಿತ, ನಗರಾಭಿವೃದ್ಧಿ ಕೋಶ ಉಡುಪಿ ಜಿಲ್ಲೆ ಹಾಗೂ ಪುರಸಭೆ ಕುಂದಾಪುರ ಇವರ ಸಹಭಾಗೀತ್ವದಲ್ಲಿ ಪೌರಾಡಳಿತ ಇಲಾಖೆ ಕುಂದಾಪುರ ಪುರಸಭೆಯ ಯುಜಿಡಿ ಕಾಮಗಾರಿಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕುಂದಾಪುರ ಪುರಸಭಾ ವ್ಯಾಪ್ತಿಯಲ್ಲಿ ಸುಮಾರು 56.54 ಕೋಟಿ ರು ವೆಚ್ಚದಲ್ಲಿ ಯುಜಿಡಿ ಕಾಮಗಾರಿ ಕೈಗೊಳ್ಳಲು ಸರಕಾರದಿಂದ ಅನುಮೋದನೆ ದೊರಕಿದ್ದು, ಸುಮಾರು 11 ವರ್ಷಗಳು ಕಳೆದರೂ ಅನುದಾನದ ಕೊರತೆ, ಭೂಸ್ವಾಧೀನ ಸೇರಿದಂತೆ ಮತ್ತಿತರ ಕಾರಣಗಳಿಂದ ಕಾಮಗಾರಿ ಪೂರ್ಣಗೊಂಡಿಲ್ಲ. ಸಹಾಯಕ ಕಮಿಷನರ್ ಅವರು ಸಂಬಂಧಪಟ್ಟ ಅಧಿಕಾರಿಗಳು, ಅಭಿಯಂತರುಗಳೊಂದಿಗೆ ಸ್ಥಳ ಭೇಟಿ ಮಾಡಿ, ಕಾಮಗಾರಿ ವಿಳಂಬಕ್ಕೆ ಕಾರಣರಾದವರ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕರಾವಳಿ ಕರ್ನಾಟಕ ಭಾಗದಲ್ಲಿ ಸಾಮಾಜಿಕ ಸೇವೆ ಮತ್ತು ಸಮುದಾಯದ ಅಭಿವೃದ್ಧಿಯನ್ನು ಉತ್ತೇಜಿಸುವ ಉದ್ಧೇಶದಿಂದ ‘ಯೂತ್ ಫಾರ್ ಕೋಸ್ಟ್ (Youth for Coast – Waves of Change) ಸಂಸ್ಥೆಗೆ ಕಟ್ಟಬೇಲ್ತೂರು ಶಿವಶಕ್ತಿ ಭಜನಾ ಮಂದಿರದಲ್ಲಿ ಅಧಿಕೃತವಾಗಿ ಚಾಲನೆ ನೀಡಲಾಯಿತು.  ಈ ಉದ್ಘಾಟನಾ ಸಮಾರಂಭದಲ್ಲಿ ಸ್ಥಳೀಯ ಮುಖಂಡರು, ಯುವಕರು, ಸಮುದಾಯದ ಪ್ರಮುಖರು ಹಾಗೂ ಬೆಂಬಲಿಗರು ಭಾಗವಹಿಸಿ, ಕರಾವಳಿ ಪ್ರದೇಶದ ಸಾಮಾಜಿಕ, ಪರಿಸರ ಮತ್ತು ಅಭಿವೃದ್ಧಿ ಸವಾಲುಗಳನ್ನು ಎದುರಿಸಲು ಯುವಶಕ್ತಿಯನ್ನು ಸಂಘಟಿಸುವ ಸಂಕಲ್ಪ ಮಾಡಿದರು.  “ವೇವ್ಸ್ ಆಫ್ ಚೇಂಜ್” (ಬದಲಾವಣೆಯ ಅಲೆಗಳು) ಎಂಬ ಧ್ಯೇಯವಾಕ್ಯದೊಂದಿಗೆ ಕಾರ್ಯನಿರ್ವಹಿಸಲಿರುವ ‘ಯೂತ್ ಫಾರ್ ಕೋಸ್ಟ್’ ಸಂಸ್ಥೆಯು, ಕರಾವಳಿ ಭಾಗದಲ್ಲಿ ನಿರಂತರ ಸಾಮಾಜಿಕ ಸೇವೆ, ಪರಿಸರ ಸಂರಕ್ಷಣೆ ಮತ್ತು ಯುವ ನಾಯಕತ್ವವನ್ನು ಬೆಳೆಸುವ ನಿಟ್ಟಿನಲ್ಲಿ ಕೆಲಸ ಮಾಡಲಿದೆ. ​ಕಾರ್ಯಕ್ರಮದ ವೇಳೆ ಸಂಸ್ಥೆಯ ಪೋಸ್ಟರ್ ಹಾಗೂ ಬ್ಯಾನರ್ ಅನಾವರಣಗೊಳಿಸಲಾಯಿತು. ಜೊತೆಗೆ ಕಾರ್ಯಕ್ರಮದಲ್ಲಿ “ಕಾರ್ ಡಸ್ಟ್ ಬಿನ್” ವಿತರಿಸಿ, ಕಾರಿನಲ್ಲಿ ಓಡಾಡುವಾಗ ಉತ್ಪತ್ತಿಯಾಗುವ ಟಿಕೆಟ್, ಚಾಕಲೇಟ್ ಕವರ್, ಐಸ್…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಕನ್ನಡ ಸಾಹಿತ್ಯದ ಎಲ್ಲಾ ಬಗೆಯ ಸಾಹಿತ್ಯದಲ್ಲಿ ಕೃತಿ ರಚಿಸಿರುವ ಕಾರಂತರ ಪ್ರವಾಸ ಕಥನಗಳು ವಿಶಿಷ್ಟ ಅಭಿವ್ಯಕ್ತಿ. ಅವರು ಪ್ರವಾಸದ ಕಥನಗಳು ನಾಡಿನ ವಾಸ್ತವ ಅನುಭವವನ್ನು ನಾವು ಅನುಭವಿಸುವಂತೆ ಚಿತ್ರಿಸುತ್ತಾರೆ. ಓದುಗರ ಸಾಂಸ್ಕೃತಿಕ ಮತ್ತು ಕಲಾನ್ಮಕ ಜ್ಞಾನವನ್ನು ಅವು ಹೆಚ್ಚಿಸುತ್ತದೆ ಎಂದು ಪತ್ರಕರ್ತ ಉಪನ್ಯಾಸಕ ಡಾ.ಗಣೇಶ್ ಪ್ರಸಾದ್ ನಾಯಕ್ ಹೇಳಿದರು. ಅವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಡಾ. ಶಿವರಾಮ ಕಾರಂತ ಟ್ರಸ್ಟ್ ವತಿಯಿಂದ ಪೂರ್ಣ ಪ್ರಜ್ಞ ಸಂಧ್ಯಾ ಕಾಲೇಜು ಇಲ್ಲಿ ಡಾ. ಶಿವರಾಮ ಕಾರಂತರ ಜನ್ಮದಿನೋತ್ಸವದ ಅಂಗವಾಗಿ ನಡೆದ ಅರಿವಿನ ಬೆಳಕು ಉಪನ್ಯಾಸ ಮಾಲೆ-18 ಕಾರ್ಯಕ್ರಮದಲ್ಲಿ ಡಾ. ಶಿವರಾಮ ಕಾರಂತರ ಪ್ರವಾಸ ಕಥನಗಳ ಸ್ವಾರಸ್ಯಗಳು ಎಂಬ ವಿಷಯದಲ್ಲಿ ಉಪನ್ಯಾಸ ನೀಡಿದರು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲ ಡಾ. ಚಂದ್ರಕಾಂತ ಭಟ್ ಕಾರಂತರ ಕೃತಿಗಳು ವಿದ್ಯಾರ್ಥಿಗಳ ಬೌದ್ದಿಕ ವಿಕಾಸಕ್ಕೆ ಸಹಕಾರಿ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಟ್ರಸ್ಟಿನ ಅಧ್ಯಕ್ಷ ಡಾ.ಗಣನಾಥ ಎಕ್ಕಾರು ಕಾರಂತರ ಕೃತಿಗಳು ಯುವ ಜನರಲ್ಲಿ ಬಹುಶಿಸ್ತೀಯ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: 2026ರಲ್ಲಿ ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆದ 5ನೇ ರಾಷ್ಟ್ರೀಯ ಮಾಸ್ಟರ್ ಗೇಮ್ಸ್‌ನ 400 ಮೀಟರ್ ಹರ್ಡಲ್ಸ್ (ಅಡೆತಡೆ ಓಟ) ಸ್ಪರ್ಧೆಯಲ್ಲಿ ತಾಲೂಕಿನ ಗೋಲಿಬೇರು ಗ್ರಾಮದವರಾದ ಗೋಕುಲ್ ಪೂಜಾರಿ ಅವರು ಬೆಳ್ಳಿ ಪದಕವನ್ನು ಗೆದ್ದಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಸಮಾಜದ ಏಳುಬೀಳಿನ ಕಥನವನ್ನು ಹೇಳಿ ಆರೋಗ್ಯಪೂರ್ಣ ಸಮಾಜ ಕಟ್ಟುವ ಸೃಜನಶೀಲತೆಯೇ ಸಾಹಿತ್ಯ. ಬದುಕಿನ ಕಥೆಯನ್ನು ಹೇಳಿ ಮಾನವೀಯ ಮೌಲ್ಯಗಳ ಪುನರುತ್ಥಾನದೊಂದಿಗೆ ಸುಸಂಸ್ಕೃತ ಸಮಾಜ ರಚನೆಯ ಹಂಬಲ ಸಾಹಿತಿಯದ್ದಾಗಿದೆ. ಕಾರಂತರು ಈ ನಿಟ್ಟಿನಲ್ಲಿ ಸಾಹಿತ್ಯ ಕೃಷಿ ಮಾಡಿದ್ದು ಆ ಕಾಲದ ವಿಶಿಷ್ಟತೆಯಾಗಿದೆ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಿರಿಯಡ್ಕದ ಕನ್ನಡ ಉಪನ್ಯಾಸಕಿ ಶಾಲಿನಿ ಯು.ಬಿ. ಹೇಳಿದರು. ಅವರು ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಕುಂದಾಪುರ, ಕೋಟೇಶ್ವರ ಇಲ್ಲಿ ಕಾರಂತ ಟ್ರಸ್ಟ್ ಉಡುಪಿ, ಕಾಲೇಜಿನ ಕನ್ನಡ ಸಂಘ ಹಾಗೂ ಐಕ್ಯೂಎಸಿಯ ಸಹಯೋಗದಲ್ಲಿ ಅರಿವಿನ ಬೆಳಕು ಉಪನ್ಯಾಸ ಮಾಲೆ – 17ರ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು. ಕಾರಂತ ಟ್ರಸ್ಟ್ ಅಧ್ಯಕ್ಷ ಡಾ. ಗಣನಾಥ ಶೆಟ್ಟಿ ಎಕ್ಕಾರು ಟ್ರಸ್ಟ್‌ನ ಉದ್ದೇಶ ಮತ್ತು ನಿಲುವುಗಳನ್ನು ಹೇಳಿ ಓದಿನಿಂದ ಭೌದ್ಧಿಕ ವಿಕಸನ ಸಾಧ್ಯವಾಗಿ ಆತ್ಮವಿಶ್ವಾಸ ಇಮ್ಮಡಿಯಾಗುತ್ತದೆ ಎಂದರು. ಕಾಲೇಜಿನ ವಿದ್ಯಾರ್ಥಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ, ವ್ಯಕ್ತಿತ್ವ ವಿಕಸನ ,ಹಾಜರಾತಿ ಹಾಗೂ ಉಜ್ವಲ ಭವಿಷ್ಯದ ನಿರ್ಮಾಣಕ್ಕೆ ಪೋಷಕರು ಮತ್ತು ಶಿಕ್ಷಕರ ನಡುವಿನ ಸಮನ್ವಯ ಅತ್ಯಗತ್ಯ ಎಂಬ ಆಶಯದೊಂದಿಗೆ ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ ಮಂಗಳವಾರ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳ ಪೋಷಕ – ಶಿಕ್ಷಕರ ಸಭೆ ನಡೆಯಿತು. ಸಭೆಯಲ್ಲಿ ಮಾತನಾಡಿದ ಪ್ರಾಂಶುಪಾಲರಾದ ವಿದ್ವಾನ್ ಗಣಪತಿ ಭಟ್ ಅವರು, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಾಣಿಜ್ಯ ಶಿಕ್ಷಣವು ಅನೇಕ ಉನ್ನತ ಶಿಕ್ಷಣ ಹಾಗೂ ವೃತ್ತಿಪರ ಅವಕಾಶಗಳಿಗೆ ದಾರಿಯಾಗಿದ್ದು, ವಿದ್ಯಾರ್ಥಿಗಳು ಪದವಿಪೂರ್ವ ಶಿಕ್ಷಣದ ಹಂತದಿಂದಲೇ ಸ್ಪಷ್ಟ ಗುರಿಯನ್ನು ರೂಪಿಸಿಕೊಂಡು ಮುನ್ನಡೆಯಬೇಕು ಎಂದು ಹೇಳಿದರು  ಇದು  ವಿದ್ಯಾರ್ಥಿಗಳ ಯಶಸ್ಸಿನಲ್ಲಿ ಶಿಕ್ಷಕರ ಮಾರ್ಗದರ್ಶನ, ಪೋಷಕರ ಪ್ರೋತ್ಸಾಹ ಮತ್ತು ವಿದ್ಯಾರ್ಥಿಗಳ ನಿರಂತರ ಪರಿಶ್ರಮ ಪ್ರಮುಖ ಪಾತ್ರ ವಹಿಸುತ್ತವೆ ಎಂದರು. ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಯನ್ನು ಮತ್ತಷ್ಟು ಉತ್ತಮಪಡಿಸುವುದು, ಅವರಲ್ಲಿರುವ ಪ್ರತಿಭೆ ಹಾಗೂ ಸಾಮರ್ಥ್ಯವನ್ನು ಗುರುತಿಸುವುದು ಮತ್ತು ಭವಿಷ್ಯದ ಶೈಕ್ಷಣಿಕ ಗುರಿಗಳನ್ನು ರೂಪಿಸುವಲ್ಲಿ ಕಾಲೇಜು ಮಹತ್ವದ ಪಾತ್ರವನ್ನು ವಹಿಸುತ್ತಿದೆ ಎಂದರು. ಕ್ರಿಯೇಟಿವ್ ನ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಒಬ್ಬ ವಿದ್ಯಾರ್ಥಿ ದೈಹಿಕ ಮಾನಸಿಕ ಕಲಾತ್ಮಕ ಸದೃಢತೆ ಸಾಧಿಸುವಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಅಂತಹ ಶಿಬಿರಗಳು ಸಹಕಾರಿಯಾಗುವುದು. ಎಂದು ಪ್ರದೀಪ್ ಕುಮಾರ್ ಶೆಟ್ಟಿ ಕ್ಷೇತ್ರ ಸಮನ್ವಯ ಅಧಿಕಾರಿ ಬಿ.ಆರ್.ಸಿ. ಬೈಂದೂರು ಅಭಿಪ್ರಾಯಪಟ್ಟರು. ಅವರು ಶಿರೂರು ಪಿ.ಎಂ. ಶ್ರೀ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ನಡೆದ ಜಿ.ಎಸ್. ವಿ.ಎಸ್ ಅಸೋಸಿಯೇಷನ್ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ ಭಾಷಣದಲ್ಲಿ ಮಾತನಾಡಿದರು. ಮುಖ್ಯ ಅತಿಥಿ ಮಂಗೇಶ್ ವಿ. ಶಾನುಭಾಗ್ ಮಾತನಾಡಿ, ವಿದ್ಯಾರ್ಥಿಗಳು ಕೌಶಲ್ಯವನ್ನು ಬೆಳೆಸಿಕೊಂಡಾಗ ಬದುಕಲ್ಲಿ ಸಾಧನೆಯನ್ನು ಮಾಡಲು ಸಾಧ್ಯ ಎಂಬುದಾಗಿ ತಿಳಿಸಿದರು. ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂ.ಸಿ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಸಂಜಯ್ ನಾಯ್ಕ್., ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ  ಬೈಂದೂರು ತಾಲೂಕು,  ರಾಜೇಶ್ ಕುಮಾರ್ ಶಿಕ್ಷಣ ಸಂಯೋಜಕರು ಬೈಂದೂರು, ಪಿಎಂಶ್ರೀ ಕೆಪಿಎಸ್ ನ ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ಕೃಷ್ಣ ಪೂಜಾರಿ, ಜಿ.ಎಸ್.ವಿ.ಎಸ್. ಅಸೋಸಿಯೇಷನ್ ಕಾರ್ಯದರ್ಶಿ ಸದಾಶಿವ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಧಾರ್ಮಿಕವಾಗಿ ಕಳಿಬೈಲು ಕ್ಷೇತ್ರ ಭಕ್ತಸಮುದಾಯದ ಸಂಕಷ್ಟ ನಿವಾರಕ ಕ್ಷೇತ್ರವಾಗಿ ಗುರುತಿಸಿಕೊಂಡಿದೆ ಎಂದು ರಾಜ್ಯ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಉಪಾಧ್ಯಕ್ಷ ಐರೋಡಿ ವಿಠ್ಠಲ್ ಪೂಜಾರಿ ಹೇಳಿದರು. ಭಾನುವಾರ ಇಲ್ಲಿನ ಸಾಸ್ತಾನದ ಪಾಂಡೇಶ್ವರ ಶ್ರೀ ಕ್ಷೇತ್ರ ಕಳಿಬೈಲು ತುಳಿಸಿ ಅಮ್ಮ ಪರಿವಾರ, ಕೊರಗಜ್ಜ ಸಾನಿಧ್ಯ ಕ್ಷೇತ್ರದಲ್ಲಿ ಶರನ್ನವರಾತ್ರಿ ಉತ್ಸವದ ಅಂಗವಾಗಿ ಹಸಿರು ಕಳಿಬೈಲು ಪುರಸ್ಕಾರ ಸಮಾರಂಭದಲ್ಲಿ ಮಾತನಾಡಿ ಹಲವಾರು ಪವಾಡಗಳಿಗೆ ಸಾಕ್ಷಿಯಾದ ಈ ಕ್ಷೇತ್ರದಲ್ಲಿ ಸಾಮಾಜಿಕ ಪರಿವರ್ತನಾ ಕಾರ್ಯಕ್ರಮಗಳು ಸಮಾಜಮುಖಿ ಚಿಂತನೆಗಳು ಪಸರಿಸುತ್ತಿರುವುದು ಶ್ಲಾಘನೀಯ ಎಂದರು. ಈ ಸಂದರ್ಭದಲ್ಲಿ ಸ್ಥಳೀಯ ಇರ್ವರು ಸಾಧಕರಾದ ಸುನೀಲ್ ಪಾಂಡೇಶ್ವರ, ಶ್ರೀಶ ಆಚಾರ್ ಇವರುಗಳಿಗೆ ಹಸಿರು ಕಳಿಬೈಲು ಪುರಸ್ಕಾರ ನೀಡಿ ಗೌರವಿಸಲಾಯಿತು. ದೇಗುಲದ ಪಾತ್ರಿ ನವೀನ್ ಕುಂಜಿಬೆಟ್ಟು ಹಸಿರು ಪುರಸ್ಕಾರ ನೀಡಿ ಗೌರವಿಸಿದರು. ಸಭಾಧ್ಯಕ್ಷತೆಯನ್ನು ದೇಗುಲದ ಅಧ್ಯಕ್ಷ ಎಂ.ಸಿ ಚಂದ್ರಶೇಖರ್ ಪೂಜಾರಿ ವಹಿಸಿದ್ದರು. ಕಾರ್ಯಕ್ರಮದ ಉದ್ಘಾಟಕರಾಗಿ ಜಿಲ್ಲಾ ದೈವಾರಾಧಕರ ಒಕ್ಕೂಟದ ಅಧ್ಯಕ್ಷ ವಿನೋದ ಶೆಟ್ಟಿ ಭಾಗವಹಿಸಿ ಶುಭಹಾರೈಸಿದರು. ಮುಖ್ಯ ಅಭ್ಯಾಗತರಾಗಿ ಪತ್ರಕರ್ತ…

Read More