ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಿದ್ಯಾರ್ಥಿ ದೆಸೆಯಲ್ಲಿಯೇ ಶಿಸ್ತನ್ನು ಮೈಗೂಡಿಸಿಕೊಳ್ಳಬೇಕು. ವಿದ್ಯಾರ್ಥಿಗಳು ಸನ್ನಡತೆಯನ್ನು ಬೆಳೆಸಿಕೊಂಡಾಗ ಭವಿಷ್ಯದ ಜೀವನದಲ್ಲಿ ಯಶಸ್ಸು ಸಾಧ್ಯ. ಮೌಲ್ಯ ಆಧಾರಿತ ಶಿಕ್ಷಣ ವರ್ತಮಾನದ ತುರ್ತು ಎಂದು ಕುಂದಾಪುರದ ಸರಕಾರಿ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ಕಾಳಾವರ ಉದಯ್ ಕುಮಾರ್ ಶೆಟ್ಟಿ ಹೇಳಿದರು. ಅವರು ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಕಾಲೇಜಿನ ಐಕ್ಯೂಎಸಿ ಘಟಕ ಹಮ್ಮಿಕೊಂಡ ‘ಪ್ರೇರಣಾ’ ಶಿಬಿರದಲ್ಲಿ ‘ನಡತೆ ಮತ್ತು ಶಿಸ್ತು’ ಎಂಬ ವಿಷಯದ ಕುರಿತು ಉಪನ್ಯಾಸ ನೀಡಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಉಪ-ಪ್ರಾಂಶುಪಾಲರಾದ ಚೇತನ್ ಶೆಟ್ಟಿ ಕೋವಾಡಿ, ಐಕ್ಯೂಎಸಿ ಸಂಯೋಜಕಿ ಹಾಗೂ ಇಂಗ್ಲೀಷ್ ವಿಭಾಗದ ಮುಖ್ಯಸ್ಥೆ ದೀಪಿಕಾ ಜಿ., ಆಡಳಿತ ನಿಕಾಯಕರು ಹಾಗೂ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ರಕ್ಷಿತ್ ರಾವ್ ಗುಜ್ಜಾಡಿ, ಕಾರ್ಯಕ್ರಮದ ಸಂಯೋಜಕ, ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕ ಸುಧೀರ್ ಕುಮಾರ್, ಬೋಧಕ-ಬೋಧಕೇತರ ವರ್ಗದವರು ಉಪಸ್ಥಿತರಿದ್ದರು. ಕಾರ್ಯಕ್ರಮ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ತಾಲೂಕಿನ ಗಂಗನಾಡು ನಿವಾಸಿ ಕೃಷ್ಣ ಮರಾಠ (75) ಎಂಬವರು ಕ್ಯಾರತೋಡ ಹೊಳೆ ದಾಟುವಾಗ ಕಾಲು ಜಾರಿ ಬಿದ್ದು ಆಕಸ್ಮಿಕವಾಗಿ ಮೃತಪಟ್ಟಿದ್ದಾರೆ. ಅವರು ಜು.25ರಂದು ಪುತ್ರಿ ಜಯಂತಿ ಮನೆಗೆ ಹೋಗಿದ್ದು, ಸಂಜೆ ವಾಪಾಸು ಬರುವುದಾಗಿ ಹೇಳಿದವರು ನಾಪತ್ತೆಯಾಗಿದ್ದರು. ಜು.28ರಂದು ಮೃತಪಟ್ಟ ಸ್ಥಿತಿಯಲ್ಲಿ ಅವರು ಪತ್ತೆಯಾಗಿದ್ದಾರೆ. ಹೊಳೆ ದಾಟುವ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು, ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ಪುತ್ರ ಭಾಸ್ಕರ ಮರಾಠ ನೀಡಿದ ದೂರಿನಂತೆ ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕಳೆದ 21 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಅಮಾಸೆಬೈಲು ಪೊಲೀಸರು ಪತ್ತೆ ಹಚ್ಚಿದ್ದಾರೆ. 2004ರಲ್ಲಿ ಶಂಕರನಾರಾಯಣ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣವೊಂದರ ಆರೋಪಿ ಕಾಸರಗೋಡು ಜಿಲ್ಲೆಯ ಪುತ್ತೂರು ಮೊಗ್ರಾಲು ನಿವಾಸಿ ಫಾರೂಕ್ ಬಂಧಿತ. ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾ ಲಯದ ವಿಚಾರಣೆಗೆ ಹಾಜರಾಗದೆ ಇದ್ದ ಈತನ ವಿರುದ್ಧ ಎಲ್ಪಿಸಿ ವಾರಂಟ್ ಹೊರಡಿಸಲಾಗಿತ್ತು. ಅದರಂತೆ ಎಸ್ಪಿ ಹರಿರಾಮ್ ಶಂಕರ್, ಅಡಿಶನಲ್ ಎಸ್ಪಿ ಸುಧಾಕರ ಎಸ್. ನಾಯ್ಕ ಮಾರ್ಗದರ್ಶನದಲ್ಲಿ ಕುಂದಾಪುರ ಉಪ ವಿಭಾ ಗದ ಪೊಲೀಸ್ ಉಪಾಧೀಕ್ಷಕ ಎಚ್.ಡಿ. ಕುಲಕರ್ಣಿ, ಪೊಲೀಸ್ ವೃತ್ತ ನಿರೀಕ್ಷಕ ಜಯರಾಮ ಗೌಡ ನಿರ್ದೇಶನದಲ್ಲಿ ಅಮಾಸೆ ಬೈಲು ಪಿಎಸ್ಐ ಅಶೋಕ್ ಕುಮಾರ್, ಪೊಲೀಸ್ ಉಪ ನಿರೀಕ್ಷಕ ಚಂದ್ರ ಎ.ಕೆ. ಅವರ ತಂಡ ಹಲವು ಆಯಾಮಗಳ ಮೂಲಕ ಮಾಹಿತಿ ಕಲೆ ಹಾಕಿ ಜು.28ರಂದು ರಾಮನಗರ ಜಿಲ್ಲೆಯ ಮಾಗಡಿಯಲ್ಲಿ ಬಂಧಿಸಲಾಗಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಮಂಗಳವಾರ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಎಚ್ಸಿ ರಾಘವೇಂದ್ರ, ಪರಮೇಶಪ್ಪ, ಪಿಸಿಗಳಾದ ಸುಧಾಕರ್,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪ್ರತಿಭೆ ನಿಮ್ಮದು ವೇದಿಕೆ ನಮ್ಮದು ಕಾರ್ಯಕ್ರಮದಡಿ ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ ಸತತ 109ನೇ ತಿಂಗಳ ಕಾರ್ಯಕ್ರಮದಲ್ಲಿ ಮನ್ವಿತಾ ಎಸ್., ಶ್ರೀಮತಿ ಶೇಖರ್ ಹಾಗೂ ಉಪ್ಪಿನಕುದ್ರು ಸರಕಾರಿ ಪ್ರೌಢ ಶಾಲೆಯಲ್ಲಿ 2024-25ರ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದ ಸಮೀಕ್ಷಾ ಅವರನ್ನು ಅಕಾಡೆಮಿಯ ವತಿಯಿಂದ ಸನ್ಮಾನಿಸಲಾಯಿತು. ಸಭಾ ಕಾರ್ಯಕ್ರಮದಲ್ಲಿ ನಿವೃತ್ತ ಪ್ರಾಂಶುಪಾಲ ಎಮ್. ರತ್ನಾಕರ ಪೈ, ವಸಂತಿ ಪಂಡಿತ್, ಸೂರ್ಯಕಾಂತ್, ಶ್ರೀಮತಿ ಶೇಖರ್ ಹಾಗೂ ಅಕಾಡೆಮಿ ಅಧ್ಯಕ್ಷ ಭಾಸ್ಕರ್ ಕೊಗ್ಗ ಕಾಮತ್ ಉಪಸ್ಥಿತರಿದ್ದರು. ಬಾಲ ಪ್ರತಿಭೆ ಮನ್ವಿತಾ ಎಸ್. ಅವರು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು. ನಂತರ ಏಕನಾಥೇಶ್ವರಿ ಭಜನಾ ಮಂಡಳಿ ಕುಂದೇಶ್ವರ, ಕುಂದಾಪುರ ಇದರ ಸದಸ್ಯರು ಭಜನ್ ಸಂಧ್ಯಾ ಕಾರ್ಯಕ್ರಮ ನಡೆಸಿಕೊಟ್ಟರು. ನಿವೃತ್ತ ಶಿಕ್ಷಕ ನಾಗೇಶ್ ಶ್ಯಾನುಭಾಗ್ ಅವರು ಕಾರ್ಯಕ್ರಮ ನಿರ್ವಹಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶಿವಮೊಗ್ಗ ಲೋಕಸಭಾ ಸದಸ್ಯರಾದ ಬಿ.ವೈ.ರಾಘವೇಂದ್ರ ಅವರು ಕೇಂದ್ರ ಭೂ ಸಾರಿಗೆ ಸಚಿವರಾದ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ ಈ ಕೆಳಕಂಡ ವಿಷಯಗಳ ಕುರಿತು ಮನವಿ ಮಾಡಿದರು. 1) ಬಹುಕಾಲದ ಬೇಡಿಕೆಯಾದ ಗಂಗೊಳ್ಳಿ-ಕುಂದಾಪುರ ಸೇತುವೆ ಪ್ರಸ್ತಾವನೆಗೆ ಅನುಮೋದನೆ ನೀಡಿ ಮಂಜೂರು ಮಾಡಲು ಕೋರಿದರು. ಗಂಗೊಳ್ಳಿಯಿಂದ ಕುಂದಾಪುರ ಕೂಗಳತೆಯ ದೂರದಲ್ಲಿದ್ದರೂ ಸೇತುವೆಯ ಸಂಪರ್ಕವಿಲ್ಲದೆ ಸುಮಾರು 18 ಕಿ. ಮೀ ಸುತ್ತಿ ಬಳಸಿ ಕುಂದಾಪುರ ತಲುಪಬೇಕಾಗಿದೆ. ಇದರಿಂದ ಇಲ್ಲಿನ ಗ್ರಾಮಸ್ಥರಿಗೆ ತುರ್ತು ಆರೋಗ್ಯ ಸಮಸ್ಯೆಯ ಸಂಧರ್ಭದಲ್ಲಿ ಸಾಕಷ್ಟು ಸಮಸ್ಯೆಯಾಗುತ್ತಿದೆ. ಸೇತುವೆಯ ನಿರ್ಮಾಣದಿಂದ ವಾಣಿಜ್ಯ ವಹಿವಾಟಿಗೂ ಅನುಕೂಲಕರವಾಗಿ ಆರ್ಥಿಕತೆಗೆ ಬಲ ತುಂಬಲಿದೆ ಎಂದು ಮನವರಿಕೆ ಮಾಡಿದರು. 2) ರಾಷ್ಟ್ರೀಯ ಹೆದ್ದಾರಿ-66 ರ ಅರಾಟೆ ಸೇತುವೆಯು ಶಿಥಿಲಗೊಂಡಿದ್ದು ಕಳೆದ ಹಲವಾರು ತಿಂಗಳಿನಿಂದ ಎಲ್ಲಾ ನಾಲ್ಕು ಪಥದಲ್ಲಿ ಸಂಚರಿಸಬೇಕಾದ ವಾಹನಗಳು ದ್ವಿಪಥದಲ್ಲಿ ಸಂಚಾರ ಮಾಡುತ್ತಿವೆ. ಇದರಿಂದ ಸಾಕಷ್ಟು ಅಪಘಾತಗಳು ಸಂಭವಿಸುತ್ತಿವೆ. ಆದ್ದರಿಂದ ಆದಷ್ಟು ಶೀಘ್ರದಲ್ಲಿ ಹಳೆಯ ಅರಾಟೆ ಸೇತುವೆಯನ್ನು ಪುನರ್ ನಿರ್ಮಾಣ ಮಾಡಲು ಇಲಾಖಾ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: 2025-26ನೇ ಸಾಲಿನಲ್ಲಿ ಕಾಲೇಜಿಗೆ ಸೇರ್ಪಡೆಗೊಂಡ ಬಿ.ಬಿ.ಎ. ವಿದ್ಯಾರ್ಥಿಗಳಿಗೆ ಪೂರ್ವ ಪರಿಚಯ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತ್ತು. ವ್ಯವಹಾರ ಆಡಳಿತ ವಿಭಾಗದ ಮುಖ್ಯಸ್ಥರಾದ ನಂದಾ ರೈ ಬಿ.ಬಿ.ಎ ಕೋರ್ಸ್ಗಳ ವಿಶೇಷತೆಗಳು ಹಾಗೂ ಭವಿಷ್ಯದಲ್ಲಿ ವಿದ್ಯಾರ್ಥಿಗಳಿಗೆ ಇದರಿಂದ ಲಭ್ಯವಾಗುವ ಪ್ರಯೋಜನಗಳ ಕುರಿತು ತಿಳಿಸಿದರು. ವಿಭಾಗದ ಪ್ರಾಧ್ಯಾಪಕರುಗಳಾದ ಅವಿತಾ ಕೊರೆಯಾ, ಹರೀಶ್ ಬಿ, ರಜತ್ ಬಂಗೇರ ಹಾಗೂ ವಿಶಾಲಾಕ್ಷಿ ಉಪಸ್ಥಿತರಿದ್ದರು. ಸಹಾಯಕ ಪ್ರಾಧ್ಯಾಪಕರಾದ ಪ್ರವೀಣ್ ಮೊಗವೀರ ಗಂಗೊಳ್ಳಿ ಕಾರ್ಯಕ್ರಮ ನಿರೂಪಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ವಿದ್ಯಾರಣ್ಯ ಕ್ಯಾಂಪಸ್ ನಲ್ಲಿ ವಿದ್ಯಾರಣ್ಯ ಇಂಗ್ಲಿಷ್ ಮೀಡಿಯಂ ಸ್ಕೂಲ್ ಯಡಾಡಿ ಮತ್ಯಾಡಿ, ಸುಜ್ಞಾನ ಎಜುಕೇಶನ್ ಟ್ರಸ್ಟ್ನಲ್ಲಿ ನಾಗರಪಂಚಮಿ ಹಬ್ಬದ ಸಂಭ್ರಮ ನಡೆಯಿತು. ಶ್ರಾವಣ ಮಾಸದಲ್ಲಿ ಬರುವ ಮೊದಲ ಹಬ್ಬವೇ ನಾಗರಪಂಚಮಿ. ಇದು ಪರಿಸರದೊಂದಿಗೆ ಜೀವದ ಸಂಬಂಧ ಮತ್ತು ಸಾಂಸ್ಕೃತಿಕ ಸಾಮರಸ್ಯವನ್ನು ಎತ್ತಿ ಹಿಡಿಯುವ ಸಂಭ್ರಮದ ಹಬ್ಬವಾಗಿದೆ. ಆಧುನಿಕ ಜೀವನದತ್ತ ಮುಖ ಮಾಡಿರುವ ಯುವಜನತೆಗೆ ಈಗ ಹಬ್ಬ ಹರಿದಿನಗಳ ಆಚರಣೆ, ಅದರ ಪ್ರಾಮುಖ್ಯದ ಬಗ್ಗೆ ಸರಿಯಾದ ಅರಿವಿಲ್ಲ! ಮಕ್ಕಳು ತಮ್ಮ ದಿನದ ಬಹುಪಾಲು ಸಮಯ ಕಳೆಯುವ ಶಾಲೆಯಲ್ಲಿ ನಮ್ಮ ಹಬ್ಬ ಹರಿದಿನಗಳ ಆಚರಣೆ, ಸಂಸ್ಕೃತಿಯ ಬಗ್ಗೆ ತಿಳಿಸಿಕೊಡುವುದು ಈಗ ಅಗತ್ಯ ಹಾಗೂ ಅನಿವಾರ್ಯವಾಗಿದೆ. ಈ ನಿಟ್ಟಿನಲ್ಲಿ ವಿದ್ಯಾರಣ್ಯ ಸ್ಕೂಲ್ ಶ್ರಾವಣ ಮಾಸದ ಮೊದಲ ಹಬ್ಬವಾದ ನಾಗರಪಂಚಮಿಯನ್ನು ಅದ್ಧೂರಿಯಾಗಿ ಆಚರಿಸಿ ಮಕ್ಕಳಿಗೆ ನಾಗರಪಂಚಮಿಯ ಮಹತ್ವದ ಅರಿವು ಮೂಡಿಸಿದರು. ಶಾಲೆಯ ವಿದ್ಯಾರ್ಥಿಗಳು ನಾಗರ ಪಂಚಮಿ ಹಬ್ಬದಲ್ಲಿ ಪಾಲ್ಗೊಂಡು ಸಂಭ್ರಮ ಪಟ್ಟರು. ಸಂಸ್ಥೆಯ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿ, ಖಜಾಂಚಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಇಲ್ಲಿನ ಸಾಲಿಗ್ರಾಮದ ಪ್ರಾಣಿಪ್ರೇಮಿ ಸುಧೀಂದ್ರ ಐತಾಳ್ ಅವರು ನಾಗರ ಪಂಚಮಿಯ ವಿಶೇಷವಾಗಿ ಜೀವಂತ ನಾಗರಹಾವಿಗೆ ಪೂಜೆ ಸಲ್ಲಿಸಿದರು ಹಾಲು ಮತ್ತು ಸೀಯಾಳ ಅಭಿಷೇಕ ನೆರವೆರಿಸಿ ಮಂಗಳಾರತಿ ಸಲ್ಲಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ಪ್ರಥಮ ವರ್ಷದ ಪದವಿ ತರಗತಿ ವಿದ್ಯಾರ್ಥಿಗಳಿಗೆ ಅಬಿವಿನ್ಯಾಸ ಕಾರ್ಯಕ್ರಮ ಕಾಲೇಜಿನ ವೀರ ರಾಜೇಂದ್ರ ಹೆಗ್ಡೆ ಸಭಾಂಗಣದಲ್ಲಿ ಸೋಮವಾರ ಜರುಗಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ವಿಶ್ವಸ್ಥ ಮಂಡಳಿಯ ಸದಸ್ಯರಾದ ಅನುಪಮ ಎಸ್. ಶೆಟ್ಟಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿ, ವಿದ್ಯಾರ್ಥಿಗಳು ವಿದ್ಯಾರ್ಥಿ ದೆಸೆಯಲ್ಲಿಯೇ ಏಕಾಗ್ರತೆ, ಆಸಕ್ತಿ, ಜೀವನದ ಸಂಸ್ಕಾರ ಮುಂತಾದವುಗಳಿಂದ ಯಶಸ್ಸು ಸಾಧಿಸಲು ಸಾಧ್ಯ ಜೊತೆಗೆ ಲಭ್ಯವಿರುವ ಉತ್ತಮ ಅವಕಾಶಗಳನ್ನು ಸದ್ಬಳಕೆ ಮಾಡಿಕೊಂಡು ತಮ್ಮ ಗುರಿಯನ್ನು ತಲುಪಬೇಕು. ಪೋಷಕರ ಕನಸನ್ನು ನನಸಾಗಿಸುವುದೇ ವಿದ್ಯಾರ್ಥಿಗಳ ಗುರಿಯಾಗಿರಬೇಕು. ಯಶಸ್ಸಿಗೆ ಸರಿಯಾದ ಯೋಜನೆಯೊಂದಿಗೆ ಪ್ರಾಮಾಣಿಕ ಪ್ರಯತ್ನವು ಅವಶ್ಯ. ಈ ನಿಟ್ಟಿನಲ್ಲಿ ಕಾಲೇಜಿನಲ್ಲಿ ಉತ್ತಮ ಕಲಿಕಾ ವಾತಾವರಣವನ್ನು ನಿರ್ಮಿಸಲಾಗಿದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಚಂದ್ರಾವತಿ ಶೆಟ್ಟಿ ವಹಿಸಿದ್ದರು. ಕಾರ್ಯಕ್ರಮದಲ್ಲಿ ಐಕ್ಯೂಎಸಿ ಸಂಯೋಜಕರಾದ ಸಂದೀಪ ಕೆ. ಮತ್ತು ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿಯಾದ ಸೂರಜ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಕನ್ನಡ ವಿಭಾಗದ ಉಪನ್ಯಾಸಕಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಯಡಾಡಿ-ಮತ್ಯಾಡಿಯಲ್ಲಿರುವ ಸುಜ್ಞಾನ ಪದವಿ ಪೂರ್ವ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗಾಗಿ ಸೋಮವಾರದಂದು ಸಿಎ ಹಾಗೂ ಸಿಎಸ್ ಫೌಂಡೇಶನ್ ಕೋರ್ಸ್ನ ಓರಿಯೆಂಟೇಶನ್ ಕಾರ್ಯಕ್ರಮವು ಜರುಗಿತು. ಕೆ.ವಿ.ಸಿ ಸಂಸ್ಥೆಯ ಸಿ.ಎ. ದೀಪಿಕಾ ವಸನಿ ಅವರು ದೀಪ ಬೆಳಗಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಜೀವನದಲ್ಲಿ ಕಷ್ಟವೆಂದುಕೊಂಡರೆ ಎಲ್ಲವೂ ಕಷ್ಟವಾಗುತ್ತದೆ. ಹಾಗಾಗಿ ನಿರಂತರ ಅಭ್ಯಾಸದಿಂದ ಸಾಧನೆ ಸಾಧ್ಯವಾಗುತ್ತದೆ. ಬದುಕಿನಲ್ಲಿ ಪರಿಶ್ರಮ ಅತೀ ಅಗತ್ಯ. ವಿದ್ಯಾರ್ಥಿ ಜೀವನವನ್ನು ಖುಷಿಯಿಂದ ಕಳೆಯುವುದರ ಜೊತೆಗೆ ಪರಿಶ್ರಮದ ಕಡೆ ಗಮನಹರಿಸಿ. ಇದರಿಂದ ನಿಮ್ಮ ಜೀವನ ಚೆನ್ನಾಗಿರುತ್ತದೆ ಎಂದು ಹೇಳಿದರು. ಹಾಗೇ ಸಿಎ, ಸಿಎಸ್ ಕೋರ್ಸ್ ಬಗ್ಗೆ ವಿದ್ಯಾರ್ಥಿಗಳಿಗೆ ಮೌಲ್ಯಯುತವಾದ ಮಾಹಿತಿ ನೀಡಿದರು. ಸಂಸ್ಥೆಯ ಅಧ್ಯಕ್ಷರಾದ ಡಾ.ರಮೇಶ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, “ಸಿಎ ಮತ್ತು ಸಿಎಸ್ ಹುದ್ದೆಗಳಿಗೆ ಇರುವ ಬೇಡಿಕೆಯ ಕುರಿತು ವಿದ್ಯಾರ್ಥಿಗಳಿಗೆ ತಿಳಿಸಿದರು. ಸರಿಯಾದ ರೀತಿಯಲ್ಲಿ ಪರಿಶ್ರಮ ವಹಿಸಿದರೆ ಜೀವನದಲ್ಲಿ ಸಾಧನೆ ಮಾಡಬಹುದು. ಸವಾಲುಗಳನ್ನು ಎದುರಿಸಬಹುದು. ವಿದ್ಯಾರ್ಥಿಗಳಲ್ಲಿ ಆ ಶಕ್ತಿ ಇದೆ” ಎಂದು…
