ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಇಲ್ಲಿನ ಮದರ್ ತೆರೇಸಾ ಪದವಿ ಪೂರ್ವ ಕಾಲೇಜು ಈ ವರ್ಷದ ಪದವಿ ಪೂರ್ವ ಪರೀಕ್ಷೆಯಲ್ಲಿ ಗಮನಾರ್ಹ ಸಾಧನೆ ಮಾಡಿದ್ದು, ಶೈಕ್ಷಣಿಕ ಕ್ಷೇತ್ರದಲ್ಲಿ ಮತ್ತೊಂದು ಮೈಲುಗಲ್ಲು ಸಾಧಿಸಿದೆ. ಒಟ್ಟು 175 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಇವರಲ್ಲಿ 92 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಹಾಗೂ 83 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಸಂಜನಾ 595 ಅಂಕಗಳನ್ನು ಪಡೆದು 99.16% ಫಲಿತಾಂಶದೊಂದಿಗೆ ಕಾಲೇಜಿಗೆ ಪ್ರಥಮ ಸ್ಥಾನವನ್ನು ತಂದುಕೊಟ್ಟಿದ್ದಾಳೆ. ವಾಣಿಜ್ಯ ವಿಭಾಗದಲ್ಲಿ ಅಮೂಲ್ಯ ಕೂಡ 595 ಅಂಕಗಳನ್ನು ಗಳಿಸಿ 99.16% ಫಲಿತಾಂಶದೊಂದಿಗೆ ಪ್ರಥಮ ಸ್ಥಾನ ಪಡೆಡಿದ್ದಾರೆ. ಇವರ ಸಾಧನೆ ಕಾಲೇಜಿನ ಕೀರ್ತಿಯನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ದಿದೆ. ವಿದ್ಯಾರ್ಥಿಗಳ ಈ ಉಜ್ವಲ ಸಾಧನೆಗೆ ಉಪನ್ಯಾಸಕರ ಪರಿಶ್ರಮ, ಸಮರ್ಪಿತ ಬೋಧನೆ ಹಾಗೂ ಸಮಗ್ರ ಮಾರ್ಗದರ್ಶನವೇ ಪ್ರಮುಖ ಕಾರಣವಾಗಿದ್ದು, ಸಂಸ್ಥೆಯ ಶೈಕ್ಷಣಿಕ ಶ್ರೇಷ್ಠತೆಯನ್ನು ಪ್ರತಿಬಿಂಬಿಸುತ್ತದೆ ಎಂದು ಆಡಳಿತ ಮಂಡಳಿ ತಿಳಿಸಿದೆ. ಈ ಸಾಧನೆಗೆ ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪ ಪ್ರಾಂಶುಪಾಲರು ಹಾಗೂ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ‘ಕಂಪ್ಯೂಟೇಶನಲ್ ಇಂಟೆಲಿಜೆನ್ಸ್, ಎಲೆಕ್ಟ್ರಾನಿಕ್ಸ್ ಮತ್ತು ಸ್ಮಾರ್ಟ್ ಟೆಕ್ನಾಲಜೀಸ್’ (ICCIEST-2026) ಎಂಬ ಬೃಹತ್ ಅಂತರರಾಷ್ಟ್ರೀಯ ಸಮ್ಮೇಳನವನ್ನು ಅತ್ಯಂತ ವೈಭವದಿಂದ ಉದ್ಘಾಟಿಸಲಾಯಿತು. ದೀಪ ಬೆಳಗಿಸುವ ಮೂಲಕ ಚಾಲನೆಗೊಂಡ ಈ ಕಾರ್ಯಕ್ರಮದಲ್ಲಿ ಭಾರತದ ತಾಂತ್ರಿಕ ಮತ್ತು ರಕ್ಷಣಾ ವಲಯದ ಪ್ರಮುಖರು ಭಾಗವಹಿಸಿದ್ದರು. ಸೈಬರ್ ಸೆಕ್ಯೂರಿಟಿ ಅಸೋಸಿಯೇಷನ್ ಆಫ್ ಇಂಡಿಯಾ (ನವದೆಹಲಿ) ಮಹಾನಿರ್ದೇಶಕರು ಮತ್ತು ಎಂ.ಐ.ಟಿ.ಕೆ ಮುಖ್ಯ ಸಲಹೆಗಾರರಾದ ವಿಜಯಂತ್ ಗೌರ್ ಮಾತನಾಡಿ, “ನೀವು ಭವಿಷ್ಯದ ಡಿಜಿಟಲ್ ಕಾವಲುಗಾರರು” ಎಂದು ವಿದ್ಯಾರ್ಥಿಗಳನ್ನು ಹುರಿದುಂಬಿಸಿದರು. ಡಿಜಿಟಲೀಕರಣ ಹೆಚ್ಚುತ್ತಿರುವ ಈ ಕಾಲದಲ್ಲಿ ಸೈಬರ್ ಭದ್ರತೆ ಕೇವಲ ವೃತ್ತಿಯಲ್ಲ, ಅದು ರಾಷ್ಟ್ರಕ್ಕೆ ಮಾಡುವ ಸೇವೆ ಎಂದು ಅವರು ಪ್ರತಿಪಾದಿಸಿದರು. ಲೆಫ್ಟಿನೆಂಟ್ ಕರ್ನಲ್ ಸಂತೋಷ್ ಖಾಡ್ಸರೆ ಅವರು ರೈತ ಕುಟುಂಬದಿಂದ ಬಂದು ಭಾರತೀಯ ಸೇನೆ ಮತ್ತು ತಾಂತ್ರಿಕ ಕ್ಷೇತ್ರದಲ್ಲಿ ತಾವು ಸಾಧಿಸಿದ ಹಾದಿಯನ್ನು ಹಂಚಿಕೊಂಡರು, ಇದು ಗ್ರಾಮೀಣ ಭಾಗದ ವಿದ್ಯಾರ್ಥಿಗಳಲ್ಲಿ ಸ್ಫೂರ್ತಿ ತುಂಬಿತು. ಉಡುಪಿ ಸೈಬರ್ ಕ್ರೈಮ್ ಇನ್ಸ್ಪೆಕ್ಟರ್ ನೀಲೇಶ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಸಂಘ ಸಂಸ್ಥೆಗಳು ಸಮಾಜದ ಆಗುಹೋಗುಗಳಿಗೆ ಸದಾ ಸ್ಪಂದಿಸಬೇಕು. ಪರಿಸರದ ಎಲ್ಲಾ ಚಟುವಟಿಕೆಗಳಲ್ಲಿ ಕೈಜೋಡಿಸಿ ಗ್ರಾಮದ ಅಭಿವೃದ್ಧಿಗೆ ಸಹಾಯ ಮಾಡಬೇಕು. ಸಮಾಜದಲ್ಲಿ ಅತ್ಯುತ್ತಮ ಸೇವೆ ಮಾಡುವ ಮೂಲಕ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಳ್ಳುವಂತಾಗಬೇಕು ಎಂದು ಬೈಂದೂರು ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಹೇಳಿದರು. ಅವರು ಗಂಗೊಳ್ಳಿ ಲೈಟ್‌ಹೌಸ್ ಶ್ರೀ ಜಟ್ಟಿಗೇಶ್ವರ ದೇವಸ್ಥಾನದ ವಠಾರದಲ್ಲಿ ಸೋಮವಾರ ಜರಗಿದ ಗಂಗೊಳ್ಳಿ ಶ್ರೀ ಜಟ್ಟಿಗೇಶ್ವರ ಯೂತ್ ಕ್ಲಬ್‌ನ 35ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ರಾಜ್ಯ ಪ್ರಶಸ್ತಿ ಪುರಸ್ಕೃತ ಅಂಗನವಾಡಿ ಕಾರ್ಯಕರ್ತೆ ಫಿಲೋಮಿನಾ ಫೆರ್ನಾಂಡಿಸ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕುಂದಾಪುರದ ವಿದ್ಯುತ್ ಗುತ್ತಿಗೆದಾರ ಕೆ.ಆರ್. ನಾಯ್ಕ್, ಶ್ರೀ ನಾರಾಯಣಗುರು ಜನ ಸೇವಾ ಸಂಘ ಗಂಗೊಳ್ಳಿ ಅಧ್ಯಕ್ಷ ಗೋಪಾಲ ಪೂಜಾರಿ, ಪಂಚಗಂಗಾವಳಿ ಬಳಗ ಗಂಗೊಳ್ಳಿ ಇದರ ಅಧ್ಯಕ್ಷ ರೋಶನ್ ಖಾರ್ವಿ, ಗುತ್ತಿಗೆದಾರ ಜಯಂತ್ ಶೇರುಗಾರ್, ಗಂಗೊಳ್ಳಿ ಗ್ರಾಪಂ ಸದಸ್ಯ ಮಹೇಶ್ (ಅಯ್ಯಪ್ಪ), ಉಪನ್ಯಾಸಕ ನರೇಂದ್ರ ಎಸ್.ಗಂಗೊಳ್ಳಿ, ಯೂತ್ ಕ್ಲಬ್ ಅಧ್ಯಕ್ಷ ಕೆ.ಚಂದ್ರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ವಿಧಾನಸಭಾ ಕ್ಷೇತ್ರದ ಚಪ್ಪರಿಕೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೌಶಲ್ಯ ಕೇಂದ್ರ ಉದ್ಘಾಟನೆ ಹಾಗೂ ಶಾಲೆಯನ್ನು ಜ್ಞಾನನಿಧಿ ಎಜುಕೇಷನಲ್ ಟ್ರಸ್ಟ್ ವತಿಯಿಂದ ದತ್ತು ಸ್ವೀಕರಿಸುವ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು. ಸಮೃದ್ಧ ಬೈಂದೂರು ಪರಿಕಲ್ಪನೆಯ 300 ಟ್ರೀಸ್ ಯೋಜನೆಯಡಿ, ಸ್ವಯಂ ಸ್ಫೂರ್ತಿ ಫೌಂಡೇಶನ್ ಸಹಕಾರದೊಂದಿಗೆ ಟೊರೆಂಟೋ ಟೆಕ್ನಾಲಾಜಿಸ್ ಪ್ರೈವೇಟ್ ಲಿಮಿಟೆಡ್ ಅವರ ಸಿಎಸ್‌ಆರ್ ನಿಧಿಯಿಂದ ಈ ಕೌಶಲ್ಯ ಕೇಂದ್ರ ಸ್ಥಾಪಿಸಲಾಗಿದೆ. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಶಾಸಕ ಗುರುರಾಜ್ ಗಂಟಿಹೊಳೆ ಹಾಗೂ ಸ್ವಯಂ ಸ್ಪೂರ್ತಿ ಫೌಂಡೇಶನ್ ಅಧ್ಯಕ್ಷ ನಾಗರಾಜ್ ಶೆಟ್ಟಿ ಜಡ್ಕಲ್ ಕೌಶಲ್ಯಾಭಿವೃದ್ಧಿಯ ಮಹತ್ವವನ್ನು ಒತ್ತಿಹೇಳಿದರು. ಈ ಸಂದರ್ಭದಲ್ಲಿ ಜ್ಞಾನನಿಧಿ ಟ್ರಸ್ಟ್ ಶಾಲೆಯನ್ನು ದತ್ತು ಸ್ವೀಕರಿಸಿ, ವಿದ್ಯಾರ್ಥಿಗಳ ಸಮಗ್ರ ಅಭಿವೃದ್ಧಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸುವುದಾಗಿ ತಿಳಿಸಿದೆ. ಕಾರ್ಯಕ್ರಮದಲ್ಲಿ ಎಸ್‌ಡಿಎಮ್‌ಸಿ ಅಧ್ಯಕ್ಷರು ಮತ್ತು ಸದಸ್ಯರು, ಶಿಕ್ಷಕರು, ವಿದ್ಯಾರ್ಥಿ ಪೋಷಕರು ಮತ್ತು ವಿದ್ಯಾರ್ಥಿಗಳು ಹಾಗೂ ಸ್ಥಳೀಯರು ಭಾಗವಹಿಸಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಭಾರತೀಯ ಸೇನೆ / ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ) ಗಳ ಅರ್ಹ ಅಭ್ಯರ್ಥಿಗಳಿಗೆ ಆಯ್ಕೆಯ ಪೂರ್ವ ಸಿದ್ಧತೆ ಬಗ್ಗೆ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಯನ್ನು ಉಚಿತವಾಗಿ ನೀಡಲಾಗುತ್ತಿದ್ದು, 2006 ರ ಏಪ್ರಿಲ್ 27 ರಿಂದ 2009 ರ ಏಪ್ರಿಲ್ 27ರ ಅವಧಿಯಲ್ಲಿ ಜನಿಸಿರುವ ಅರ್ಹ ಅಭ್ಯರ್ಥಿಗಳಿಂದ (ಬಾಲಕರು ಮಾತ್ರ) ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಏಪ್ರಿಲ್ 27 ಕೊನೆಯ ದಿನವಾಗಿದ್ದು, ತರಬೇತಿಯು ಬ್ರಹ್ಮಾವರ ತಾಲೂಕು ಬಾರ್ಕೂರು ಹನೆಹಳ್ಳಿ ನ್ಯಾಷನಲ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ. ಅರ್ಹ ಅಭ್ಯರ್ಥಿಗಳನ್ನು ನಗರದ ಅಜ್ಜರಕಾಡು ಮಹಾತ್ಮಗಾಂಧಿ ಮೈದಾನದಲ್ಲಿ ಮೇ. 2ರಂದು ನಡೆಯಲಿರುವ ರ‍್ಯಾಲಿಯಲ್ಲಿ ಆಯ್ಕೆ ಮಾಡಲಾಗುವುದು. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಕೊಠಡಿ ಸಂಖ್ಯೆ: 304, ಬಿ ಬ್ಲಾಕ್, ಎರಡನೇ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ದೈಹಿಕ ಆರೋಗ್ಯಕ್ಕೆ ಮಾನಸಿಕ ಸ್ವಾಸ್ತ್ಯ ಅಗತ್ಯ. ಒಳ್ಳೆಯ ಆರೋಗ್ಯಕ್ಕೆ ಸಂತೋಲನ ಆಹಾರ, ಪೌಷ್ಟಿಕ ಆಹಾರ, ಸಕ್ಕರೆಯ ಮಿತವಾದ ಬಳಕೆ ಅತ್ಯಂತ ಅವಶ್ಯಕ. ವಿದ್ಯಾರ್ಥಿ ದೆಸೆಯಲ್ಲಿಯೇ ಆರೋಗ್ಯದ ಕುರಿತು ಕಾಳಜಿ ವಹಿಸಬೇಕಾಗಿರುವುದು ವರ್ತಮಾನದ ತುರ್ತು ಎಂದು ಸಮುದಾಯ ಆರೋಗ್ಯ ಕೇಂದ್ರ, ಕೋಟ ಇಲ್ಲಿನ ಆರೋಗ್ಯ ವೈದ್ಯಾಧಿಕಾರಿ ಹಾಗೂ ಶಿಶು ತಜ್ಞರಾದ ಡಾ. ಮಾಧವ ಪೈ ಕೆ. ತಿಳಿಸಿದರು. ಅವರು ಇಲ್ಲಿನ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ 1 ಮತ್ತು 2ರ ಆಶ್ರಯದಲ್ಲಿ ನಡೆದ ವಿಶ್ವ ಆರೋಗ್ಯ ದಿನಾಚರಣೆಯನ್ನು ಉದ್ದೇಶಿಸಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆಯನ್ನು ವಹಿಸಿದ್ದರು. ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿಗಳಾದ ರಾಜೇಶ್ ಶೆಟ್ಟಿ ವಕ್ವಾಡಿ ಹಾಗೂ ಪೂಜಾ ಕುಂದರ್ ಉಪಸ್ಥಿತರಿದ್ದರು. ಸುಶ್ಮಿತಾ ಶೆಟ್ಟಿ ಅತಿಥಿಗಳನ್ನು ಪರಿಚಯಿಸಿ, ಪಲ್ಲವಿ ಪ್ರಾರ್ಥಿಸಿ, ನಿಶಾ ಶೆಟ್ಟಿ ಸ್ವಾಗತಿಸಿ, ಎನ್.ಎಸ್.ಎಸ್. ಸ್ವಯಂಸೇವಕರರಾದ ಶ್ರೇಯಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದ, ದೀಪಿಕಾ ಶೆಟ್ಟಿ ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಮೃದ್ಧ ಬೈಂದೂರು 300 ಟ್ರೀಸ್ ಯೋಜನೆಯಲ್ಲಿ ಸ್ವಯಂ ಸ್ಪೂರ್ತಿ ಫೌಂಡೇಶನ್ ಬೆಂಗಳೂರು ಇವರ ಸಹಕಾರದೊಂದಿಗೆ ಬೈಂದೂರು ಕ್ಷೇತ್ರದ ವಿವಿಧ ಸರಕಾರಿ ಶಾಲೆಗಳಲ್ಲಿ ಕೌಶಲ್ಯ ಕೇಂದ್ರವನ್ನು ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ಉದ್ಘಾಟಿಸಿದರು. ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಚಪ್ಪರಿಕೆ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ರಾಗಿಹಕ್ಲು, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕನ್ಯಾನ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹೆಮ್ಮಾಡಿ ಇಲ್ಲಿ ಕಂಪ್ಯೂಟರ್ ಲ್ಯಾಬ್, ಮಿನಿ ಲೈಬ್ರರಿ ಹಾಗೂ ಕ್ರೀಡಾ ಸಾಮಗ್ರಿಗಳನ್ನು ಒಳಗೊಂಡ ಕೌಶಲ್ಯ ಕೇಂದ್ರವನ್ನು ವಿವಿಧ ಕಂಪನಿಗಳ ಸಿಎಸ್ಆರ್ ಸಹಕಾರದಿಂದ ಸ್ವಯಂ ಸ್ಫೂರ್ತಿ ಫೌಂಡೇಶನ್ ಸಂಸ್ಥೆಯು ನಿರ್ಮಿಸಿದೆ. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶಾಸಕರು ಸರಕಾರಿ ಶಾಲೆಯ ಉಳಿವಿಗಾಗಿ ಆರಂಭಿಸಿದ 300 ಟ್ರೀಸ್ ಯೋಜನೆಯಿಂದ ಇಂದು ಸುಮಾರು 150ಕ್ಕೂ ಹೆಚ್ಚು ಶಾಲೆಗಳು ಯಾವುದಾದರೂ ಒಂದು ಸೌಲಭ್ಯವನ್ನು ಪಡೆದುಕೊಂಡು ಉತ್ತಮ ಗುಣಮಟ್ಟದ ಶಿಕ್ಷಣ ನೀಡಲು ಸಹಕಾರಿಯಾಗಿದೆ. ಈ ಯೋಜನೆಗೆ ಶ್ರಮಿಸುತ್ತಿರುವ ಎಲ್ಲಾ ವಿದ್ಯಾಭಿಮಾನಿಗಳಿಗೂ ಧನ್ಯವಾದವನ್ನು ಸಮರ್ಪಿಸಿದರು. ಕಾಂತಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸರಿ ಸುಮಾರು 800 ವರ್ಷಗಳ ಇತಿಹಾಸ ಹೊಂದಿರುವ ಹಾಗೂ ಎರಡನೇ ಮಾರಣಕಟ್ಟೆ ಎಂದು ಪ್ರಸಿದ್ಧಿ ಪಡೆದಿರುವ ಕಾರಣಿಕ ಸ್ಥಳ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಬಿಜೂರು ಗ್ರಾಮದ ಮೂರ್ಗೋಳಿಹಕ್ಲು ಶ್ರೀ ನಂದಿಕೇಶ್ವರ ಹಾಗೂ ಸಪರಿವಾರ ದೈವಗಳ ದೈವಸ್ಥಾನ. ಈ ಸನ್ನಿಧಿಯಲ್ಲಿ ಜಾತಿ, ಮತ ಭೇದವಿಲ್ಲದೇ ಭಕ್ತರೇ ಸ್ವತಃ ತಾವೇ ಮುಟ್ಟಿ ಪೂಜೆಯನ್ನು ಮಾಡುವ ಪದ್ಧತಿ ಇರುವುದು ಇನ್ನೊಂದು ವಿಶೇಷವಾಗಿದೆ. ನಿತ್ಯ ಜೀವನದ ಕಷ್ಟಗಳಿಗೆ ಮುಕ್ತಿ ದೊರಕಿಸಿ, ಬಾಳ ದಾರಿಗೆ ಶಕ್ತಿ ನೀಡಿ ಬೆಳಕು ತೋರುತ್ತಿರುವ ವಿಶೇಷ ಸ್ಥಳವಾಗಿ ಗುರುತಿಸಿಕೊಂಡಿದೆ. ಇಲ್ಲಿ ಎ.12ರಿಂದ18ರ ವರೆಗೆ ಶ್ರೀ ನಂದಿಕೇಶ್ವರ ಪರಿವಾರ ದೈವಗಳ ಮತ್ತು ನಾಗ ದೇವರ ಪುನರ್ ಪ್ರತಿಷ್ಠೆ, ಬ್ರಹ್ಮಕಲಶೋತ್ಸವ ಹಾಗೂ ಸುವರ್ಣಮಹೋತ್ಸವ ಹಾಗೂ ಶ್ರೀ ರಾಮ ನಾಮ ಕೋಟಿ ಜಪ ಯಜ್ಞ ಹಾಗೂ ಪೂರ್ಣಾಹುತಿ ಕಾರ್ಯಕ್ರಮಗಳು ನಡೆಯಲಿದೆ. ಎ.12ರಂದು ಸಂಜೆ ಗಂಟೆ 6ರಿಂದ ರಾಕ್ಷೋಘ್ನ ಹೋಮ, 1008 ಅಷ್ಟೋತ್ತರ ಸಹಸ್ರ ಬ್ರಹ್ಮಕಲಶ, ಕಲಶ ಸ್ಥಾಪನಾ ಪೂಜೆ ನಡೆಯಲಿದೆ.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಪಂಚವರ್ಣ ಯುವಕ ಮಂಡಲ ಕೋಟ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ಸಾರಥ್ಯದಲ್ಲಿ ನಿರಂತರವಾಗಿ ನಡೆಯುತ್ತಿರುವ ಪ್ರತಿ ವಾರದ ಪರಿಸರಸ್ನೇಹಿ ಆಂದೋಲನಕ್ಕೆ 300ನೇ ವಾರದ ಸಂಭ್ರಮ. ಈ ಹಿನ್ನಲ್ಲೆಯಲ್ಲಿ ಜಿಲ್ಲಾಡಳಿತ, ಸ್ಥಳೀಯಾಡಳಿತ ಹಾಗೂ ವಿವಿಧ ಸಂಘಸಂಸ್ಥೆ,ಸ್ಥಳೀಯ ಶಿಕ್ಷಣ ಸಂಸ್ಥೆಗಳ ನೆರವಿನೊಂದಿಗೆ ಸಮಾಜಸೇವಕ ಆನಂದ್ ಸಿ. ಕುಂದರ್ ರವರ 78ನೇ ಹುಟ್ಟುಹಬ್ಬದ ಅಂಗವಾಗಿ ಮೇ.3ರಂದು ಕೋಡಿ ಗ್ರಾಮಪಂಚಾಯತ್ ನಿಂದ ಕೋಟ ಗ್ರಾಮಪಂಚಾಯತ್ ವರೆಗಿನ ಸುಮಾರು 5ವರೆ ಕೀ.ಮೀ ಬೀಚ್ ಕ್ಲಿನಿಂಗ್ ಬೃಹತ್ ದಾಖಲೆಯ ಅಭಿಯಾನಕ್ಕೆ ಮುನ್ನುಡಿ ಬರೆಯಲಿದೆ. ಇದರ ಅಂಗವಾಗಿ ಸೋಮವಾರ ಕೋಟ ಸಹಕಾರಿ ವ್ಯವಸಾಯಕ ಸಂಘದ ಬಿ.ಸಿ ಹೊಳ್ಳ ಸಭಾಂಗಣದಲ್ಲಿ ಆನಂದ್ ಸಿ ಕುಂದರ್ ಅಧ್ಯಕ್ಷತೆಯಲ್ಲಿ ರೂಪುರೇಷೆಗಳನ್ನು ಸಿದ್ಧಪಡಿಸುವ ಪೂರ್ವಭಾವಿ ಸಭೆ ಏರ್ಪಡಿಸಲಾಯಿತು. ಸಭೆಯಲ್ಲಿ ಕಾರ್ಯಕ್ರಮ ಸಂಯೋಜಕ ರವೀಂದ್ರ ಕೋಟ ಬೀಚ್ ಕ್ಲಿನಿಂಗ್ ಅಭಿಯಾನದ ತಯಾರಿಗಳ ಕುರಿತು ಸಭೆಗೆ ಮಾಹಿತಿ ತಿಳಿಸಿದರು. ಇದೇ ವೇಳೆ ವಿವಿಧ ಗಣ್ಯರು ಹಾಗೂ ಸಂಘಸಂಸ್ಥೆಗಳ ಸಲಹೆ ಸೂಚನೆಗಳನ್ನು ಪಡೆಯಲಾಯಿತು. ಗೀತಾನಂದ ಫೌಂಡೇಶನ್ ಪ್ರವರ್ತಕ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಜಾತಿ, ಭೌಗೋಳಿಕ, ವರ್ಣ, ಭಾಷೆ, ಲಿಂಗ ಮುಂತಾದ ಅಸಮಾನತೆಗಳು ಭಾರತದ ಸೌಹಾರ್ದತೆಯನ್ನು ಛಿದ್ರಗೊಳಿಸಿವೆ. ಇಂತಹ ಹಲವು ಅಸಮಾನತೆಗಳನ್ನು ಸೃಷ್ಠಿ ಮಾಡಿಕೊಂಡಿರುವ ನಮ್ಮ ಸಮಾಜದಲ್ಲಿ ಸೌಹಾರ್ದತೆಯ ಸ್ಥಾಪನೆ ಎನ್ನುವುದು ಒಂದು ಸವಾಲೇ ಸರಿ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪುರುಷೋತ್ತಮ ಬಿಳಿಮಲೆ ಹೇಳಿದರು. ಅವರು ಮಂಗಳವಾರ ತಾಲೂಕು ಸದ್ಭಾವನಾ ವೇದಿಕೆ ಹಾಗೂ ಕನ್ಯಾನದ ನಮ್ಮ ಭೂಮಿ ಸಂಸ್ಥೆಯ ಆಶ್ರಯದಲ್ಲಿ ಹಟ್ಟಿಯಂಗಡಿ ಸಮೀಪದ ಕನ್ಯಾನದ ನಮ್ಮ ಭೂಮಿ ಸಂಸ್ಥೆಯಲ್ಲಿ ʼಸಂವಿಧಾನದ ಆಶಯಗಳಿಗೆ ಸೌಹಾರ್ದವೇ ಮೆಟ್ಟಿಲುʼ ಎಂಬ ವಿಚಾರ ಸಂಕಿರಣ – ಸಂವಾದವನ್ನು ಉದ್ಘಾಟಿಸಿ ಮಾತನಾಡಿದರು. ಹಲವಾರು ವರ್ಷಗಳಿಂದ ಕಟ್ಟಿದ ಇದರ ಗೋಡೆಯನ್ನು ಒಮ್ಮೆಲೆ ಹೊಡೆದು ಹಾಕುವುದು ಅಷ್ಟೊಂದು ಸುಲಭವಲ್ಲ. ಆದರೆ ನಾವೆಲ್ಲ ಮನಸ್ಸು ಮಾಡಿದರೆ ಕ್ಷಣಾರ್ಧದಲ್ಲಿ ಕೆಡವಬಹುದು. ಸೌಹಾರ್ದತೆಯನ್ನು ಸಾಧಿಸುವ ಹೆಜ್ಜೆಯನ್ನು ಇಡಬಹುದು ಎಂದರು. ಇದಕ್ಕೆ ಪೂರಕವಾಗಿ ನಮ್ಮೊಂದಿಗೆ ನಮ್ಮ ಸಂವಿಧಾನವಿದೆ. ಎಲ್ಲಾ ರೀತಿಯ ಅಸಮಾನತೆಗಳನ್ನು ತೊಡೆದು ಹಾಕುವ, ಸಮಾನತೆಯನ್ನು ಎತ್ತಿ ಹಿಡಿಯುವ ಎಲ್ಲವನ್ನೂ ಸಂವಿಧಾನ ಒಳಗೊಂಡಿದೆ.…
