Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಪ್ರತಿಯೊಬ್ಬರ ಜೀವನದಲ್ಲೂ ಆರ್ಥಿಕ ಶಿಸ್ತು ಅತ್ಯಂತ ಮುಖ್ಯ. ಬ್ಯಾಂಕಿನಿಂದ ಪಡೆಯುವ ಸಾಲವು ಕುಟುಂಬಕ್ಕೆ ಆಸರೆಯಾಗಬೇಕೇ ಹೊರತು ಹೊರೆಯಾಗಬಾರದು. ಆ ನಿಟ್ಟಿನಲ್ಲಿ ಗ್ರಾಹಕರು ಜವಾಬ್ದಾರಿಯಿಂದ ವ್ಯವಹರಿಸಬೇಕು ಹಾಗೂ ಸರ್ಕಾರದ ಸಾಮಾಜಿಕ ಭದ್ರತಾ ಯೋಜನೆಗಳನ್ನು ಸದುಪಯೋಗಪಡಿಸಿ ಕೊಳ್ಳಬೇಕು ಎಂದು ಎಸ್‌ಸಿಡಿಸಿ ಬ್ಯಾಂಕಿನ ಎಜಿಎಂ ಮೋಹನ್ ದಾಸ್ ಹೆಬ್ಬಾರ್ ಹೇಳಿದರು. ಅವರು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಯಮಿತ ಗಂಗೊಳ್ಳಿ ಶಾಖೆಯಲ್ಲಿ ನಬಾರ್ಡ್ ಸಹಯೋಗದೊಂದಿಗೆ ಗ್ರಾಹಕರಿಗಾಗಿ ಜರಗಿದ ’ಆರ್ಥಿಕ ಅರಿವು ಜಾಗೃತಿ ಕಾರ್ಯಕ್ರಮ’ದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಂಪನ್ಮೂಲ ವ್ಯಕ್ತಿಯಾಗಿದ್ದ ಕುಂದಾಪುರ ತಾಲೂಕು ಕಚೇರಿಯ ಆರ್ಥಿಕ ಸಾಕ್ಷರತಾ ಕಾರ್ಯಾಲಯದ ಆಶಾಲತಾ ಅವರು, ಅಪಘಾತ ವಿಮಾ ಸೌಲಭ್ಯಗಳು, ವಿವಿಧ ಸರ್ಕಾರಿ ಯೋಜನೆಗಳು ಹಾಗೂ ಡಿಜಿಟಲ್ ಬ್ಯಾಂಕಿಂಗ್‌ನಲ್ಲಿ ಎದುರಾಗಬಹುದಾದ ಸೈಬರ್ ವಂಚನೆಗಳ ಕುರಿತು ಜಾಗೃತಿ ಮೂಡಿಸಿದರು. ಮುಖ್ಯ ಅತಿಥಿಯಾಗಿದ್ದ ಶಾಖಾ ನಿರೀಕ್ಷಕ ರಾಘವೇಂದ್ರ ಉಡುಪ ಮತ್ತು ತ್ರಾಸಿ ಶಾಖಾ ವ್ಯವಸ್ಥಾಪಕ ವೆಂಕಟೇಶ್ ಬಿಲ್ಲವ ಅವರು ಮಾಹಿತಿ ನೀಡಿ ಮಾತನಾಡಿದರು. ಗಂಗೊಳ್ಳಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಹಟ್ಟಿಯಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ಗಣೇಶ ಚತುರ್ಥಿಯನ್ನು ಭಕ್ತಿ ಹಾಗೂ ಸಡಗರದಿಂದ ಆಚರಿಸಲಾಯಿತು. ಶಾಲೆಯ ಹಟ್ಟಿಯಂಗಡಿ ಶಾಂತಾರಾಮ ವೇದಿಕೆಯಲ್ಲಿ ಶ್ರೀ ಗಣೇಶನ ಮೂರ್ತಿಯನ್ನು ಪ್ರತಿಷ್ಠಾಪಿಸಿ, ವಿಶೇಷ ಪೂಜೆ ಹಾಗೂ ಧಾರ್ಮಿಕ ವಿಧಿ-ವಿಧಾನಗಳನ್ನು ನೆರವೇರಿಸಲಾಯಿತು. ವಿದ್ಯಾರ್ಥಿಗಳು ಗಣೇಶನ ಮಹಿಮೆಯನ್ನು ಸಾರುವ ಭಕ್ತಿಗೀತೆಗಳನ್ನು ಹಾಡಿದರು. ಈ ಸಂದರ್ಭದಲ್ಲಿ ಸಂಸ್ಕೃತ ಶಿಕ್ಷಕ ರಾಮಕೃಷ್ಣ ಉಡುಪ ಅವರು ಗಣೇಶ ಚತುರ್ಥಿಯ ಮಹತ್ವವನ್ನು ತಿಳಿಸಿ, ವಿದ್ಯಾರ್ಥಿಗಳ ವಿದ್ಯಾಭ್ಯಾಸ ಹಾಗೂ ಜೀವನದ ಯಶಸ್ಸಿಗಾಗಿ ಶ್ರೀ ಗಣೇಶನಲ್ಲಿ ಪ್ರಾರ್ಥಿಸುವಂತೆ ಕರೆ ನೀಡಿದರು. ನಂತರ ವಿದ್ಯಾರ್ಥಿಗಳಿಗಾಗಿ ಮೊಸರು ಕುಡಿಕೆ, ಮೆಹಂದಿ, ರಂಗೋಲಿ ಹಾಗೂ ವಿವಿಧ ಮೋಜಿನ ಆಟೋಟ ಸ್ಪರ್ಧೆಗಳನ್ನು ಆಯೋಜಿಸಲಾಗಿದ್ದು, ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡರು. ವಿಜೇತರಿಗೆ ಆಕರ್ಷಕ ಬಹುಮಾನಗಳನ್ನು ವಿತರಿಸಲಾಯಿತು. ಅಪರಾಹ್ನ ಶ್ರೀ ಗಣೇಶನ ಮೂರ್ತಿಯನ್ನು ಮೆರವಣಿಗೆಯಲ್ಲಿ ಕೊಂಡೊಯ್ದು ಶಾಲಾ ಬಾವಿಯಲ್ಲಿ ಭಕ್ತಿಪೂರ್ವಕವಾಗಿ ವಿಸರ್ಜಿಸಲಾಯಿತು. ಕಾರ್ಯಕ್ರಮದಲ್ಲಿ ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿಗಳು ಹಾಗೂ ಶಾಲಾ ಪ್ರಾಂಶುಪಾಲರಾದ ಶರಣ ಕುಮಾರ, ಆಡಳಿತಾಧಿಕಾರಿ ವೀಣಾ ರಶ್ಮಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕತಾರ್: ವಿದೇಶದಲ್ಲಿ ನೆಲೆಸಿರುವ ಕನ್ನಡಿಗರ ಮಕ್ಕಳಿಗೆ ಕನ್ನಡ ಭಾಷೆ, ನಾಡು-ನುಡಿ ಹಾಗೂ ಸಂಸ್ಕೃತಿಯ ಪರಿಚಯವನ್ನು ಮುಂದಿನ ಪೀಳಿಗೆಗೆ ತಲುಪಿಸುವ ಉದ್ದೇಶದಿಂದ ಕರ್ನಾಟಕ ಸಂಘ ಕತಾರ್ ನಡೆಸಿಕೊಂಡು ಬರುತ್ತಿರುವ ‘ಕನ್ನಡ ಪಾಠಶಾಲೆ’ಯನ್ನು ಹೊಸ ಆಶಯ ಹಾಗೂ ನೂತನ ಕಾಯಕಲ್ಪದೊಂದಿಗೆ ಪುನರಾರಂಭಿಸಲಾಗಿದೆ. ಶಿಕ್ಷಕರು ಮತ್ತು ಪೋಷಕರಿಗೆ ವಿಶೇಷ ತರಬೇತಿ ಕಾರ್ಯಾಗಾರ:ಕನ್ನಡ ಪಾಠಶಾಲೆಯ ಶಿಕ್ಷಕರು ಹಾಗೂ ಪೋಷಕರಿಗಾಗಿ ವಿಶೇಷ ತರಬೇತಿ ಕಾರ್ಯಾಗಾರವನ್ನು ಕರ್ನಾಟಕ ಸರ್ಕಾರದ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಪುರುಷೋತ್ತಮ ಬಿಳಿಮಲೆ ಅವರು ನಡೆಸಿಕೊಟ್ಟರು. ಮಕ್ಕಳ ವಯಸ್ಸು ಮತ್ತು ಕಲಿಕೆಯ ಮಟ್ಟಕ್ಕೆ ಅನುಗುಣವಾಗಿ ಕನ್ನಡವನ್ನು ಪರಿಣಾಮಕಾರಿಯಾಗಿ ಬೋಧಿಸುವ ವಿಧಾನಗಳು, ಪಠ್ಯಕ್ರಮವನ್ನು ವ್ಯವಸ್ಥಿತವಾಗಿ ಅಳವಡಿಸಿಕೊಳ್ಳುವ ಕ್ರಮಗಳು ಹಾಗೂ ಮಕ್ಕಳಲ್ಲಿ ಕನ್ನಡ ಕಲಿಕೆಯ ಆಸಕ್ತಿ ಹೆಚ್ಚಿಸುವ ಬೋಧನಾ ತಂತ್ರಗಳ ಕುರಿತು ಅವರು ಮಾರ್ಗದರ್ಶನ ನೀಡಿದರು.ಶಿಕ್ಷಕರ ದಿನಾಚರಣೆಯಲ್ಲಿ ಕನ್ನಡ ಪಾಠಶಾಲೆಯ ಪುನರಾರಂಭ:ಕರ್ನಾಟಕ ಸಂಘ ಕತಾರ್ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆಯ ಸಂದರ್ಭದಲ್ಲಿ, ಡಾ. ಪುರುಷೋತ್ತಮ ಬಿಳಿಮಲೆ ಅವರ ಸಮ್ಮುಖದಲ್ಲಿ ಕನ್ನಡ ಪಾಠಶಾಲೆಯ ಪುನರಾರಂಭವನ್ನು ಅಧಿಕೃತವಾಗಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೊಲ್ಲೂರು: ಇಲ್ಲಿನ ಶ್ರೀಮೂಕಾಂಬಿಕಾ ದೇವಸ್ಥಾನಕ್ಕೆ ಕರ್ನಾಟಕ ಸರ್ಕಾರದ ಮುಜರಾಯಿ, ಮೀನುಗಾರಿಕೆ ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಕೆ.ಎಸ್. ಬಸವಂತಪ್ಪ ಅವರು ಬುಧವಾರ ಬೆಳಗ್ಗೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು. ಪೂಜೆಯ ಬಳಿಕ ದೇವಾಲಯದ ಆಡಳಿತ ಮಂಡಳಿ ವತಿಯಿಂದ ಸಚಿವರನ್ನು ದೇವಿಯ ಪ್ರಸಾದ ಹಾಗೂ ಸ್ಮರಣಿಕೆ ನೀಡಿ ಗೌರವಿಸಲಾಯಿತು. ಈ ವೇಳೆ ಬೈಂದೂರು ಕ್ಷೇತ್ರದ ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ, ದೇವಳದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಕೆ. ಬಾಬು ಶೆಟ್ಟಿ , ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ , ದೇವಳದ ವ್ಯವಸ್ಥಾಪನ ಸಮಿತಿಯ ಸದಸ್ಯರಾದ ಸುರೇಂದ್ರ ಶೆಟ್ಟಿ , ರಘುರಾಮ ದೇವಾಡಿಗ , ಧನಾಕ್ಷಿ ಪೂಜಾರಿ ಹಾಗೂ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಗಫೂರ್, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಸ್. ರಾಜು ಪೂಜಾರಿ ಹಾಗೂ ಪಕ್ಷದ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಗಣೇಶೋತ್ಸವ ಕಾರ್ಯಕ್ರಮಗಳು ಗ್ರಾಮದ ಒಗ್ಗಟ್ಟು ಕೇಂದ್ರಿಕರಿಸುವ ಉತ್ಸವವಾಗಿ ಸಂಸ್ಕ್ರತಿ ಸಾರುವ ಉತ್ಸವವಾಗಿದೆ ಎಂದು ಪಾಂಡೇಶ್ವರ ಕಳಿಬೈಲು ಶ್ರೀ ಸ್ವಾಮೀ ಕೊರಗಜ್ಜ ದೈವಸ್ಥಾನದ ಧರ್ಮದರ್ಶಿ ಅಭಿಜಿತ್ ಪಾಂಡೇಶ್ವರ ಹೇಳಿದರು. ಅವರು ಸೋಮವಾರ ಇಲ್ಲಿನ ಪಾಂಡೇಶ್ವರ ಮೂಡಹಡು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ 14ನೇ ವರ್ಷದ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅಭ್ಯಾಗತರಾಗಿ ಮಾತನಾಡಿ, ಸ್ವಾತಂತ್ರ್ಯಕ್ಕಾಗಿ ಆಗಿನ ಕಾಲದಲ್ಲಿ ತಿಲಕರು ಮೊಳಗಿಸಿ ಈ ಉತ್ಸವ ಧಾರ್ಮಿಕ ಭಾವನೆ ಮೂಡಿಸುವ ಜತೆಗೆ ಸಾಂಸ್ಕೃತಿಕವಾಗಿ ರೂಪುಗೊಳಿಸವ ಕೇಂದ್ರವಾಗಿದೆ ಎಂದರು. ಇದೇ ವೇಳೆ ಗ್ರಾಮದ ಹಿರಿಯ ಕೃಷಿಕ ಕೃಷ್ಣ ಮರಕಾಲ,ಕ್ರೀಡಾ ಸಾಧಕ ಸುಭಾಷ್ ಪೂಜಾರಿ ಇವರುಗಳನ್ನು ಸನ್ಮಾನಿಸಲಾಯಿತು. ಗ್ರಾಮದಲ್ಲಿನ ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಗಣೇಶೋತ್ಸವ ವತಿಯಿಂದ ಹಮ್ಮಿಕೊಂಡ ಕ್ರೀಡಾಕಾರ್ಯಕ್ರಮದ ವಿಜೇತರಾದವರಿಗೆ ಬಹುಮಾನ ವಿತರಣೆ ಜರಗಿತು. ಸಭಾಧ್ಯಕ್ಷತೆಯನ್ನು ಪಾಂಡೇಶ್ವರ ರಕ್ತೇಶ್ವರಿ ದೇಗುಲದ ಆಡಳಿತ ಧರ್ಮದರ್ಶಿ ಕೆ.ವಿ ರಮೇಶ್ ರಾವ್ ವಹಿಸಿದ್ದರು. ಮುಖ್ಯ ಅಭ್ಯಾಗತರಾಗಿ ಉದ್ಯಮಿ ರಘು ಪೂಜಾರಿ, ಎನ್ ಭಾಸ್ಕರ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಕುಂಭಾಶಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದಲ್ಲಿ ಪ್ರದಕ್ಷಿಣೆ ಬರುತ್ತಿದ್ದ ಮಹಿಳೆಯೊಬ್ಬರ ಕುತ್ತಿಗೆಯಲ್ಲಿದ್ದ 22 ಗ್ರಾಂ ತೂಕದ ಚಿನ್ನದ ಸರವನ್ನು ಅಪರಿಚಿತರು ಕಳವು ಮಾಡಿದ ಘಟನೆ ಸಂಭವಿಸಿದೆ. ಬೈಂದೂರು ತಾಲೂಕಿನ ನಾಡ ಗ್ರಾಮದ ನಿವಾಸಿ ಮುತ್ತು (75) ಚಿನ್ನದ ಸರ ಕಳೆದುಕೊಂಡ ವೃದ್ಧ ಮಹಿಳೆ. ಅವರು ಚೌತಿ ಹಬ್ಬದ ಪ್ರಯುಕ್ತ ಆನೆಗುಡ್ಡೆ ಗಣಪತಿ ದೇವಸ್ಥಾನಕ್ಕೆ ಹೋಗಿದ್ದು, ದೇವಸ್ಥಾನದ ಒಳಗೆ ದೇವರ ದರ್ಶನ ಪಡೆದು ತೀರ್ಥ ಪ್ರಸಾದ ಪಡೆದುಕೊಂಡು ಪ್ರದಕ್ಷಿಣೆ ಬರುತ್ತಿದ್ದ ವೇಳೆ ಚಿನ್ನದ ಸರವನ್ನು ಎಳೆದುಕೊಂಡು ಪರಾರಿಯಾಗಿದ್ದಾರೆ. ಕಳವಾದ ಚಿನ್ನದ ಸರದ ಒಟ್ಟು ಮೌಲ್ಯ ಸುಮಾರು 2,50,000 ರೂ. ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಯುವ ಜನತೆ ಮತ್ತು ನಾಗರಿಕರಲ್ಲಿ ಸಂವಿಧಾನದ ಹಕ್ಕು, ಕರ್ತವ್ಯಗಳು ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳ ಬಗ್ಗೆ ಅರಿವು ಮೂಡಿಸಲು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಆಚರಿಸುತ್ತಿದ್ದೇವೆ. ಸಂವಿಧಾನದ ಮೌಲ್ಯಗಳ ಬಗ್ಗೆ ಪ್ರತಿಯೊಬ್ಬರಲ್ಲೂ ಅರಿವು ಇದ್ದಾಗ ಮಾತ್ರ  ಶಿಸ್ತು ಬದ್ಧ ಜೀವನ ನಡೆಸಲು ಸಾಧ್ಯ ಎಂದು ಜಿಲ್ಲಾ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕಿರಣ್ ಸಿದ್ದಪ್ಪ ಗಂಗಣ್ಣನವರ್ ಹೇಳಿದರು. ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಿಕ್ಷಣ ಇಲಾಖೆ, ಕಾನೂನು ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಉಡುಪಿ ಇವರ ಸಹಭಾಗಿತ್ವದಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಯುವ ಸಂಸತ್ತು – ಕಾರ್ಯಕ್ರಮವನ್ನು ಉದ್ಘಾಟಿಸಿ, ಡಾ. ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು. ಸಂವಿಧಾನವು ದೇಶದ ಪ್ರತೀ ಪ್ರಜೆಗೂ ಸ್ವತಂತ್ರವಾಗಿ ಜೀವಿಸಲು ಅವಕಾಶ ಮಾಡಿಕೊಟ್ಟಿದೆ. ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿಹಿಡಿಯಲು, ಮಾನವ ಹಕ್ಕುಗಳನ್ನು ಉತ್ತೇಜಿಸಲು ಮತ್ತು ಸಾರ್ವಜನಿಕರ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಸೇವೆ ಮಾಡುವ ಕಾಯಕ ಭಗವಂತನಿಚ್ಛೆ. ನಾನು ಇಲ್ಲಿ ಮಧ್ಯವರ್ತಿ ಅಷ್ಟೆ ಎಂದು ಸಾಮೂಹಿಕ ಶ್ರೀ ಗಣೇಶ ಆರಾಧನೋತ್ಸವ ಸಮಿತಿ ಹದ್ದಿನಬೆಟ್ಟು ಅಧ್ಯಕ್ಷ ಅವಿನಾಶ್ ಶೆಟ್ಟಿ ಗುಂಡ್ಮಿ ಅಭಿಪ್ರಾಯಪಟ್ಟರು. ಅವರು ಸೋಮವಾರ ಇಲ್ಲಿನ ಹದ್ದಿನಬೆಟ್ಟು ಸಾಮೂಹಿಕ ಶ್ರೀ ಗಣೇಶ ಆರಾಧನೋತ್ಸವ ಸಮಿತಿ ವತಿಯಿಂದ 29ನೇ ವರ್ಷದ ಶ್ರೀ ಗಣೇಶ ಆರಾಧನೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿ, ತನ್ನ ಫೌಂಡೇಶನ್ ಶಿಕ್ಷಣ ಮತ್ತು ಆರೋಗ್ಯಕ್ಕೆ ಹೆಚ್ಚು ಆದ್ಯತೆ ನೀಡುವುದರ ಜತೆಗೆ ಸಾಮಾಜಿಕ ಕಾರ್ಯದೊಂದಿಗೆ ಗಣೇಶೋತ್ಸವ ಕಾರ್ಯಕ್ರಮ ಹದ್ದಿನಬೆಟ್ಟಿನಲ್ಲಿ ಸರ್ವಧರ್ಮ ಸಮನ್ವಯ ಕೇಂದ್ರವಾಗಿ ರೂಪುಗೊಂಡು ಸಾಮರಸ್ಯ ಜೀವನಕ್ಕೆ ಮುನ್ನುಡಿ ಬರೆಯುತ್ತಿರುವುದು ಉತ್ಸವದ ಮೆರಗನ್ನು ಹೆಚ್ಚಿಸಿದೆ ಎಂದರು. ಇದೇ ವೇಳೆ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಅಕ್ಷರ ಸಂತ ಹರೇಕಳ ಹಾಜಬ್ಬರಿಗೆ 50ಸಾವಿರ ನಗದು ಪುರಸ್ಕಾರದೊಂದಿಗೆ ಶ್ರೀ ಗಣೇಶ ಆರಾಧನೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಹಾಜಬ್ಬ ಮಾತನಾಡಿ, ನಮ್ಮೂರಿನ ಮಕ್ಕಳು ವಿದ್ಯಾಭ್ಯಾಸದಿಂದ ವಂಚಿತರಾಗಬಾರದು ಎಂಬ ಇಚ್ಛೆಯಿಂದ ಕಿತ್ತಳೆ ಮಾರಿ ಶಾಲೆ ಕಟ್ಟದ್ದೇನೆ ಆಗಿನ ಶಾಸಕ ಯು.ಟಿ ಫರೀದ್ ಸೇರಿದಂತೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ರಾಜ್ಯದ 37 ಕಾಲೇಜುಗಳಿಂದ ಆಗಮಿಸಿದ್ದ 1,350 ಸ್ಪರ್ಧಾರ್ಥಿಗಳು  ಭಾಗವಹಿಸಿದ್ದ ಅಂತರ್ ಕಾಲೇಜು ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಸ್ಪರ್ಧೆ ಎಸ್‌ಡಿಎಂ  ಆರೋಹಮ್-2026ರಲ್ಲಿ ಆಳ್ವಾಸ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಸಮಗ್ರ ಚಾಂಪಿಯನ್‌ಶಿಪ್‌ನೊಂದಿಗೆ ನಗದು ಬಹುಮಾನವನ್ನು ಗೆದ್ದು ಸಾಧನೆ ಮೆರೆದಿದ್ದಾರೆ. ಆಳ್ವಾಸ್ ಪದವಿಪೂರ್ವ ಕಾಲೇಜಿನ ವಾಣಿಜ್ಯ ಹಾಗೂ ಕಲಾ ವಿಭಾಗದ ವಿದ್ಯಾರ್ಥಿಗಳು ಸ್ಪರ್ಧೆಯ ವಿವಿಧ ವಿಭಾಗಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ನಾಲ್ಕು ಪ್ರಥಮ ಹಾಗೂ ಎರಡು ದ್ವಿತೀಯ ಸ್ಥಾನಗಳನ್ನು ತಮ್ಮದಾಗಿಸಿಕೊಂಡರು. ದೇಶಭಕ್ತಿ ಗೀತೆ ಸ್ಪರ್ಧೆಯಲ್ಲಿ ನಿಹಾಲ್, ಶೌರ್ಯ, ವರ್ಷಾ, ನಮಿಷ್, ಶ್ರೀನಿವಾಸ್, ಸಾತ್ವಿಕ್ ಹಾಗೂ ತೇಜಶ್ರೀ ಅವರ ತಂಡ ಪ್ರಥಮ ಸ್ಥಾನ ಪಡೆದುಕೊಂಡಿತು. ಕಾರ್ಪೊರೇಟ್ ವಾಕ್ ಸ್ಪರ್ಧೆಯಲ್ಲಿ ಆದ್ಯಾ ಜೈನ್, ನಿತಿನ್ ಕಶ್ಯಪ್, ನಿಧಿ ಕೆ.ಕೆ. ಹಾಗೂ ನಿಯೋಲಾ ಲೋಬೊ ಅವರ ತಂಡ ಪ್ರಥಮ ಸ್ಥಾನ ಗಳಿಸಿತು. ಈವೆಂಟ್ ಮ್ಯಾನೇಜ್‌ಮೆಂಟ್ ವಿಭಾಗದಲ್ಲಿ ಅರುಷ್ ಹಾಗೂ ಆದಿತ್ಯ ಅವರ ತಂಡ ಪ್ರಥಮ ಸ್ಥಾನ ಪಡೆದುಕೊಂಡರೆ, ಪಕೋಡಾ ಟೇಲ್ಸ್ ಸ್ಪರ್ಧೆಯಲ್ಲಿ ಲಿಖಿತಾ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆಯ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ (ಐಎಂಜೆಐಎಸ್‌ಸಿ) ಎನ್‌ಎಸ್‌ಎಸ್ ಮತ್ತು ಸಮುದಾಯ ಸೇವಾ ಘಟಕಗಳ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ ಜರುಗಿತು. ಮಂಗಳೂರು ವಿಶ್ವವಿದ್ಯಾಲಯದ ಸಮಾಜಶಾಸ್ತ್ರ ಪ್ರಾಧ್ಯಾಪಕ ಹಾಗೂ ಎನ್‌ಎಸ್‌ಎಸ್ ಕಾರ್ಯಕ್ರಮ ಸಂಯೋಜಕರಾದ ಡಾ. ಶೇಷಪ್ಪ ಅಮಿನ್ ಕೆ. ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಜವಾಬ್ದಾರಿ, ನಾಯಕತ್ವ ಗುಣ ಮತ್ತು ಸೇವಾ ಮನೋಭಾವವನ್ನು ಬೆಳೆಸುವಲ್ಲಿ ಎನ್‌ಎಸ್‌ಎಸ್ ಮತ್ತು ಸಮುದಾಯ ಸೇವೆಯ ಪಾತ್ರವನ್ನು ವಿವರಿಸಿದರು. ಸಮಾಜದ ಕಲ್ಯಾಣಕ್ಕಾಗಿ ಅರ್ಥಪೂರ್ಣ ಕೊಡುಗೆ ನೀಡುವಂತೆ ಅವರು ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿದರು.ಕಾರ್ಯಕ್ರಮದಲ್ಲಿ ಏಳು ದಿನಗಳ ಎನ್‌ಎಸ್‌ಎಸ್ ಶಿಬಿರದ ಭಾಗವಾಗಿ ಯೋಜಿಸಲಾದ ಚಟುವಟಿಕೆಗಳನ್ನು ಪ್ರಸ್ತುತಪಡಿಸಲಾಯಿತು. ಸ್ವಚ್ಛತಾ ಆಂದೋಲನ, ಗಿಡ ನೆಡುವಿಕೆ ಮತ್ತು ಪರಿಸರ ಸಂರಕ್ಷಣೆ, ಆರೋಗ್ಯ ಮತ್ತು ನೈರ್ಮಲ್ಯ ಜಾಗೃತಿ, ರಕ್ತದಾನ ಮತ್ತು ಆರೋಗ್ಯ ಶಿಬಿರಗಳು, ರಸ್ತೆ ಸುರಕ್ಷತಾ ಅಭಿಯಾನ, ಶಿಕ್ಷಣ ಮತ್ತು ಸಾಮಾಜಿಕ ಸಮಸ್ಯೆಗಳ ಕುರಿತು ಜಾಗೃತಿ ಕಾರ್ಯಕ್ರಮಗಳು, ಗ್ರಾಮ ಭೇಟಿ ಮತ್ತು ಸ್ಥಳೀಯ ಸಮುದಾಯದೊಂದಿಗೆ ಸಂವಾದ…

Read More