ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ನಕಲಿ ವೆಬ್ಸೈಟ್ ಮೂಲಕ ಆನ್ಲೈನ್ನಲ್ಲಿ ಕೊಠಡಿ ಕಾಯ್ದಿರಿಸುವುದಾಗಿ ಹೇಳಿ ಕೇರಳದ ಮೂಲದ ಭಕ್ತರಿಗೆ ಮೋಸ ಮಾಡಿದ ಬಗ್ಗೆ ಕೊಲ್ಲೂರು ಠಾಣೆಯಲ್ಲಿ ದೂರು ದಾಖಲಾಗಿದೆ. ಕೇರಳದ ಭಕ್ತರೋರ್ವರು ನಕಲಿ ವೆಬ್ಸೈಟ್ ನಂಬಿ ಆನ್ಲೈನ್ನಲ್ಲಿ ಮುಂಗಡ ಕೊಠಡಿ ಕಾಯ್ದುಕೊಳ್ಳಲು 1500 ರೂ. ನೀಡಿದ್ದರು. ಅದರಂತೆ ಸೆ.7 ರಂದು ಕೊಲ್ಲೂರಿಗೆ ಆಗಮಿಸಿದ್ದ ಅವರು ಆ ವಸತಿ ಗೃಹದ ಸಿಬ್ಬಂದಿಯನ್ನು ವಿಚಾರಿಸಿ ರಶೀದಿ ತೋರಿಸಿದಾಗ ಅದು ನಕಲಿ ವೆಬ್ಸೈಟ್ ಅನ್ನುವುದು ಬೆಳಕಿಗೆ ಬಂತು. ಮೋಸ ಹೋದ ಭಕ್ತರು ದೇಗುಲದ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ ಅವರನ್ನು ಸಂಪರ್ಕಿಸಿ ಕೊಲ್ಲೂರು ಠಾಣೆಗೆ ದೂರು ನೀಡಿದ್ದಾರೆ. ಈ ಹಿಂದೆ ಇದೇ ರೀತಿ ನಕಲಿ ವೆಬ್ಸೈಟ್ ಮೂಲಕ ಭಕ್ತರಿಗೆ ಮೋಸ ಮಾಡಿದ ಪ್ರಕರಣದಲ್ಲಿ ರಾಜಸ್ಥಾನ ಮೂಲದ ವ್ಯಕ್ತಿಯನ್ನು ಬಂಧಿಸಲಾಗಿತ್ತು. ಕೊಲ್ಲೂರಿಗೆ ಆಗಮಿಸುವ ಭಕ್ತರು ಕೊಠಡಿಗಳನ್ನು ಮುಂಗಡವಾಗಿ ಕಾಯ್ದಿರಿಸುವ ಸಲುವಾಗಿ ದೇಗುಲದಿಂದ ಮಾಡಿರುವ ವ್ಯವಸ್ಥೆಯನ್ನು ಅನುಸರಿಸಬೇಕೆಂದು ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಬಾಬು ಶೆಟ್ಟಿ ವಿನಂತಿಸಿದ್ದಾರೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಶ್ರೀರಾಮ ಗೆಳೆಯರ ಬಳಗ ಕೋಡಿ ಕನ್ಯಾಣ ಇವರ ವತಿಯಿಂದ ರುದ್ರಭೂಮಿ ಸ್ವಚ್ಛತಾ ಕಾರ್ಯಕ್ರಮ ಭಾನುವಾರ ಹಮ್ಮಿಕೊಂಡಿದ್ದರು. ಕೋಡಿ ಹಿಂದೂ ರುದ್ರಭೂಮಿ ಸ್ವಚ್ಛಗೊಳಿಸುವ ಮೂಲಕ ಕೃಷ್ಣ ಮಾಸ್ಟರ್ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕೋಡಿ ಪಂಚಾಯತ್ ಮಾಜಿ ಅಧ್ಯಕ್ಷ ಪ್ರಭಾಕರ್ ಮೆಂಡನ್, ಮಾಜಿ ಸದಸ್ಯರಾದ ಅಂಥೋನಿ ನಾಯಕ್, ಅಣ್ಣಪ್ಪ ಕುಂದರ್, ಸ್ಥಳೀಯರಾದ ವಾಮನ್ ಡಿ. ಸಾಲಿಯನ್, ಕೃಷ್ಣ ಪೂಜಾರಿ, ರಾಘವೇಂದ್ರ ಸುವರ್ಣ, ರಾಘವೇಂದ್ರ ಕರ್ಕೇರ, ಜಯಂತ್ ಅಮೀನ್, ವಿಜಯ್ ನಾಯಿರಿ, ಸಂತೋಷ್ ಖಾರ್ವಿ, ಅಶೋಕ್ ತಿಂಗಳಾಯ, ಸುರೇಶ್ ಖಾರ್ವಿ,ಗೀತಾ ಖಾರ್ವಿ, ಯಮುನ ಕುಂದರ್, ಸುದಿನ ಕೋಡಿ, ಸುರೇಶ್ ಖಾರ್ವಿ, ಸುರೇಶ್ ಖಾರ್ವಿ ಕೋಡಿ ತಲೆ ಇದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಯಕ್ಷಗಾನ, ನಾಟಕವಲ್ಲದೆ ಹಲವಾರು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತನ್ನನ್ನು ತೊಡಗಿಸಿಕೊಂಡಿರುವ ಬೆಂಗಳೂರಿನ ಕಲಾಕದಂಬ ಆರ್ಟ್ ಸೆಂಟರ್ ಸಂಸ್ಥೆಯು ಕರಾವಳಿಯ ಬಡಗಿನ ಯಕ್ಷಗಾನದ ಕಂಚಿನ ಕಂಠದ ಭಾಗವತರೆಂದೇ ಪ್ರಸಿದ್ಧರಾದ ಕಾಳಿಂಗ ನಾವಡ ನೆನಪಿನಲ್ಲಿ ಪ್ರತಿ ವರ್ಷ ಯಕ್ಷಗಾನ ಕ್ಷೇತ್ರದಲ್ಲಿನ ಪ್ರತಿಭಾನ್ವಿತರೋರ್ವರಿಗೆ ಕಾಳಿಂಗ ನಾವಡ ಪ್ರಶಸ್ತಿಯನ್ನು ನೀಡುತಿದ್ದು, ಇಪ್ಪತ್ತೈದು ಸಾವಿರ ನಗದು, ಬೆಳ್ಳಿ ತಟ್ಟೆ, ಪ್ರಶಸ್ತಿ ಪತ್ರ, ನೆನಪಿನ ಕಾಣಿಕೆ ಸಹಿತ ಪ್ರಶಸ್ತಿಯು ಒಳಗೊಂಡಿರುತ್ತದೆ. ಈ ಬಾರಿ 17ನೇ ವರ್ಷದ 2026ರ ಸಾಲಿನ ಕಲಾಕದಂಬ ಕಾಳಿಂಗ ನಾವಡ ಪ್ರಶಸ್ತಿಯನ್ನು ಹಲವಾರು ವರ್ಷಗಳಿಂದ ಯಕ್ಷಗಾನದ ಮದ್ದಲೆಗಾರರಾಗಿ ಸೇವೆ ಸಲ್ಲಿಸುತ್ತಿರುವ ಹಾಗೂ ಡಾ. ಶಿವರಾಮ ಕಾರಂತರ ಯಕ್ಷಗಾನ ಬ್ಯಾಲೆಯಲ್ಲಿ ಸತತ 19 ವರ್ಷಗಳ ಕಾಲ ಮದ್ದಲೆಗಾರರಾಗಿ ದೇಶ ವಿದೇಶಗಳಲ್ಲೂ ತಮ್ಮ ಪ್ರತಿಭೆಯನ್ನು ಮೆರೆದ ದೇವದಾಸ ರಾವ್ ಕೂಡಿದಿ ಅವರಿಗೆ ಇದೇ ಬರುವ ಅಕ್ಟೋಬರ್ ತಿಂಗಳ 11ನೇ ತಾರೀಖಿನ ಭಾನುವಾರ ಸಂಜೆ ಬೆಂಗಳೂರಿನ ಬಸವನಗುಡಿಯ ನರಸಿಂಹರಾಜ ಕಾಲೋನಿಯಲ್ಲಿರುವ ಡಾ. ಸಿ. ಅಶ್ವಥ್ ಕಲಾಭವನದಲ್ಲಿ ಹಮ್ಮಿಕೊಂಡಿರುವ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ದಕ್ಷಿಣ ಕನ್ನಡ ಹಾಲು ಉತ್ಪಾದಕರ ಒಕ್ಕೂಟ, ಮಂಗಳೂರು ವತಿಯಿಂದ 2025–26ನೇ ಸಾಲಿನ ತಾಲೂಕಿನ ಉತ್ತಮ ಗುಣಮಟ್ಟದ ಹಾಲು ಉತ್ಪಾದಕರ ಸಹಕಾರಿ ಸಂಘ ಪ್ರಶಸ್ತಿಯನ್ನು ಕೊಮೆ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ನೀಡಿ ಗೌರವಿಸಲಾಯಿತು. ಪ್ರಶಸ್ತಿಯನ್ನು ಸಂಘದ ಅಧ್ಯಕ್ಷರಾದ ರಾಜು ಪೂಜಾರಿ ಹಾಗೂ ಕಾರ್ಯನಿರ್ವಹಣಾಧಿಕಾರಿ ರಾಘವೇಂದ್ರ ಅವರು ಸ್ವೀಕರಿಸಿದರು. ಗ್ರಾಮೀಣ ಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಕೊಮೆ ಹಾಲು ಉತ್ಪಾದಕರ ಸಹಕಾರಿ ಸಂಘವು ಹೈನುಗಾರರ ಅಭಿವೃದ್ಧಿ ಹಾಗೂ ಗುಣಮಟ್ಟದ ಹಾಲು ಉತ್ಪಾದನೆಗೆ ಹೆಚ್ಚಿನ ಆದ್ಯತೆ ನೀಡುತ್ತಾ ಬಂದಿದೆ. ಸಂಘದಲ್ಲಿ ಸಾಂದ್ರ ಶೀತಲೀಕರಣ ಘಟಕ (BMC) ಹೊಂದಿದ್ದು ಸಂಘವು ಇದುವರೆಗೆ ಮೂರು ಬಾರಿ ಉತ್ತಮ BMC ಪ್ರಶಸ್ತಿ, ನಾಲ್ಕು ಬಾರಿ ಉತ್ತಮ ಗುಣಮಟ್ಟದ ಸಂಘ ಪ್ರಶಸ್ತಿ ಹಾಗೂ ಎರಡು ಬಾರಿ ತಾಲೂಕಿನ ಅತ್ಯುತ್ತಮ ಸಂಘ ಪ್ರಶಸ್ತಿ ಪಡೆದುಕೊಂಡಿರುವುದು ಸಂಘದ ಗುಣಮಟ್ಟದ ಕಾರ್ಯನಿರ್ವಹಣೆಗೆ ಸಾಕ್ಷಿಯಾಗಿದೆ. ಸಂಘದ ಅಧ್ಯಕ್ಷರು, ಕಾರ್ಯನಿರ್ವಹಣಾಧಿಕಾರಿ ಹಾಗೂ ಆಡಳಿತ ಮಂಡಳಿಯ ಸದಸ್ಯರು, ಸಿಬ್ಬಂದಿ ಮತ್ತು ಹೈನುಗಾರರ ಸಹಕಾರದಿಂದ ಈ ಸಾಧನೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ವಿದ್ಯಾರ್ಥಿ ಪರಿಷತ್ತು ಉದ್ಘಾಟನಾ ಸಮಾರಂಭ ಕಾಲೇಜು ಸಭಾಂಗಣದಲ್ಲಿ ಜರುಗಿತು. ಕಾರ್ಯಕ್ರಮಕ್ಕೆ ಉದ್ಘಾಟಕರಾಗಿ ಆಗಮಿಸಿದ ಎನ್. ಕೆ.ಕೆ.ಸಿ ಪ್ರೈ. ಲಿಮಿಟೆಡ್ ಜಪ್ತಿ ಇಲ್ಲಿನ ವ್ಯವಸ್ಥಾಪಕ ನಿರ್ದೇಶಕರಾದ ಜಯಪ್ರಕಾಶ್ ಎ. ಶೆಟ್ಟಿ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿ, ವಿದ್ಯಾರ್ಥಿ ಜೀವನ ಅಮೂಲ್ಯವಾದುದು ಇಲ್ಲಿ ಸಿಗುವ ಅವಕಾಶವನ್ನು ಸರಿಯಾಗಿ ಸದ್ಬಳಕೆ ಮಾಡಿಕೊಂಡಾಗ ಮಾತ್ರ ಭವಿಷ್ಯದಲ್ಲಿ ಉತ್ತಮ ಬದುಕನ್ನು ರೂಪಿಸಿಕೊಳ್ಳಲು ಸಾಧ್ಯವಾಗುತ್ತದೆ. ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ದಿಗೆ ಇಂತಹ ವೇದಿಕೆ ಸಹಾಯಕವಾಗುವುದರ ಜೊತೆಗೆ ಭವಿಷ್ಯದ ಜವಬ್ದಾರಿಯುತ ನಾಗರಿಕರನ್ನು ರೂಪಿಸಲು ಸಾಧ್ಯವಾಗುತ್ತದೆ. ವಿದ್ಯಾರ್ಥಿಗಳಲ್ಲಿ ಶಿಸ್ತು, ಜವಬ್ದಾರಿ ಮತ್ತು ಸಹಕಾರ ಮನೋಭಾವ ಬೆಳೆಸಿಕೊಂಡಾಗ ಮಾತ್ರ ಉತ್ತಮ ನಾಯಕರಾಗಲು ಸಾಧ್ಯವಾಗುತ್ತದೆ ಎಂದರು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಮೆಟ್ರಿಕ್ ನಂತರದ ವಸತಿ ನಿಲಯದ ವಾರ್ಡನ್ ಭಾಸ್ಕರ ಪೂಜಾರಿ ಮಾತನಾಡಿ, ಇಂದಿನ ವಿದ್ಯಾರ್ಥಿಗಳೇ ನಾಳೆಯ ನಾಯಕರಾಗುವುದರಿಂದ ಇಂತಹ ಸಂಘಟನೆ ವಿದ್ಯಾರ್ಥಿಗಳ ಪ್ರತಿಭೆ, ಸಾಮರ್ಥ್ಯ ಮತ್ತು ಜವಬ್ದಾರಿಯನ್ನು ಬೆಳೆಸುವಲ್ಲಿ ಮಹತ್ವದ ಪಾತ್ರವಹಿಸುತ್ತದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಬಿಜೂರು ರೈಲ್ವೆ ನಿಲ್ದಾಣವು ಲೂಪ್ ಲೈನ್ ಸೇರಿದಂತೆ ಎಲ್ಲಾ ಬಗೆಯಲ್ಲಿಯೂ ಸುಸಜ್ಜಿತವಾದ ನಿಲ್ದಾಣವಾಗಿದೆ. ಕಳೆದ 30 ವರ್ಷಗಳಿಂದ ರೈಲ್ವೆ ಯಾತ್ರಿಕರ ಸಂಘ ಹೋರಾಟ ನಡೆಸುತ್ತಿದ್ದರೂ, ಎಕ್ಸ್ಪ್ರೆಸ್ ರೈಲುಗಳ ನಿಲುಗಡೆ ಮಾಡದೇ ಸುಸಜ್ಜಿತ ರೈಲ್ವೆ ನಿಲ್ದಾಣವನ್ನು ಕ್ರಾಸಿಂಗ್ ಸ್ಟೇಷನ್ ಆಗಿ ಉಳಿಸಿಕೊಂಡು ಯಾತ್ರಿಕರಿಗೆ ಹಾಗೂ ಸ್ಥಳೀಯ ನಾಗರಿಕರಿಗೆ ಅನ್ಯಾಯವೆಸಲಾಗಿದೆ. ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳಿಗೆ ನಿರಂತರ ಮನವಿ ಮಾಡಿದ ಹೊರತಾಗಿಯೂ ಯಾವುದೇ ಸ್ಪಂದನೆ ದೊರೆಯದ ಕಾರಣ ಸಂಘಟಿತ ಹೋರಾಟಕ್ಕೆ ಮುಂದಡಿ ಇಡುತ್ತೇವೆ ಎಂದು ಬಿಜೂರು ರೈಲ್ವೇ ಯಾತ್ರಿಕರ ಹೋರಾಟ ಸಮಿತಿ ಅಧ್ಯಕ್ಷ ಸುನಿಲ್ ಪೂಜಾರಿ ಕೆರ್ಗಾಲು ಹೇಳಿದರು. ಅವರು ಇಲ್ಲಿನ ನಂದನವನ ಹೋಟೆಲ್ನಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, ಬಿಜೂರು ರೈಲ್ವೆ ನಿಲ್ದಾಣ ಅಭಿವೃದ್ಧಿಯ ಬಗ್ಗೆ ಸಂಸದರು ಹಾಗೂ ಹಾಗೂ ಸಂಬಂಧಿಸಿದವರಿಗೆ ಸಾಕಷ್ಟು ಭಾರಿ ಮನವಿ ಸಲ್ಲಿಸಿದ್ದರೂ ಯಾವುದೇ ಸ್ಪಂದನೆ ದೊರೆತಿಲ್ಲ. ನಿಲ್ದಾಣಕ್ಕೆ ಭೇಟಿ ನೀಡಲು ಸಾಕಷ್ಟು ಭಾರಿ ಕೇಳಿಕೊಂಡರೂ ಭೇಟಿ ನೀಡಿಲ್ಲ. ಇತ್ತೀಚಿನ ಬೆಳವಣಿಗೆಯನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶಿಕ್ಷಣ ಸಂಸ್ಥೆಗಳಲ್ಲಿ ಗುಣಮಟ್ಟದ ಮತ್ತು ಉದ್ಯೋಗ ಆಧಾರಿತ ಶಿಕ್ಷಣ ಇಂದಿನ ವಿದ್ಯಾರ್ಥಿಗಳ ಅಗತ್ಯತೆಯಾಗಿದೆ. ಅದಕ್ಕೆ ಪೂರಕವಾಗಿ ಭಂಡಾರ್ಕಾರ್ಸ್ ಕಾಲೇಜು ಕೌಶಲ್ಯಾಭಿವೃದ್ಧಿ ಶಿಕ್ಷಣ ನೀಡುವತ್ತ ಮಹತ್ವದ ಹೆಜ್ಜೆಯನ್ನಿಟ್ಟಿದೆ ಎಂದು ಮಣಿಪಾಲ ಅಕಾಡೆಮಿ ಆಫ್ ಜನರಲ್ ಎಜುಕೇಶನ್ ಇದರ ಕಾರ್ಯದರ್ಶಿಗಳಾದ ಡಾ. ನಾರಾಯಣ ಸಭಾಹಿತ್ ಹೇಳಿದರು. ಅವರು ಬುಧವಾರ ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ಗಳನ್ನು ಜಾರಿಗೊಳಿಸುವ ಉದ್ದೇಶದಿಂದ ಮಣಿಪಾಲದ ಎಮ್.ಎಸ್.ಡಿ.ಸಿ. ಮತ್ತು ಭಂಡಾರ್ಕಾರ್ಸ್ ಆರ್ಟ್ಸ್ ಮತ್ತು ಸೈನ್ಸ್ ಕಾಲೇಜು ,ಕುಂದಾಪುರ ನಡುವಿನ “ತಿಳುವಳಿಕಾ ಒಪ್ಪಂದ (MOU)” ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಮುಂದಿನ ದಿನಗಳಲ್ಲಿ ಸಿಬ್ಬಂದಿ ಅಭಿವೃದ್ಧಿ ಕಾರ್ಯಕ್ರಮ, ಉದ್ಯೋಗ ಆಧಾರಿತ ಕೋರ್ಸ್ ಗಳು, ಕೌಶಲ್ಯ ಹೆಚ್ಚಿಸುವ ತರಬೇತಿ ಕಾರ್ಯಕ್ರಮಗಳನ್ನು ಮತ್ತು ಪದವಿ ಪೂರ್ವ ಕಾಲೇಜಿನಲ್ಲಿಯೂ ಉದ್ಯೋಗಾಧಾರಿತ ತರಬೇತಿ ನೀಡುವ ಯೋಜನೆ ಆರಂಭಿಸುವ ಚಿಂತನೆ ಇದೆ ಎಂದು ಹೇಳಿದರು. ಮಣಿಪಾಲದ ಎಮ್.ಎಸ್.ಡಿ.ಸಿ. ಚೇರ್ಮನ್ ಬ್ರಿಗೇಡಿಯರ್ ಡಾ.ಸುರ್ಜಿತ್ ಸಿಂಗ್ ಪಾಬ್ಲಾ ಮಾತನಾಡಿ, ಈ ಒಪ್ಪಂದದ ಮೂಲಕ ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶಗಳಿಗೆ ಪೂರಕವಾದ ವಿವಿಧ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗೋಕರ್ಣ: ಗಂಗೆಯನ್ನು ಸೇವಿಸಿದರೆ ನರಕದ ವೈತರಣಿ ನದಿಯಿಂದ ತಪ್ಪಿಸಿಕೊಳ್ಳಬಹುದು ಎಂಬ ಮಾತಿದ್ದು, ನಾವಿಂದು ನಾಗರೀಕತೆಯ ಹೆಸರಿನಲ್ಲಿ ಗಂಗಾ ನದಿಯನ್ನೇ ವೈತರಣಿ ನದಿಯಾಗಿ ಪರಿವರ್ತಿಸಿದ್ದೇವೆ. ಗಂಗೆಯನ್ನು ಅಶುದ್ಧಗೊಳಿಸಿರುವುದು ಔರಂಗಜೇಬನ ಹೇಯ ಕೃತ್ಯಗಳಿಗಿಂತಲೂ ಹೀನ ಕೃತ್ಯ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಅವರು ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ ‘ಅನ್ನಬ್ರಹ್ಮ ಚಾತುರ್ಮಾಸ್ಯ’ದ ಧರ್ಮಸಭೆಯಲ್ಲಿ ‘ಅನ್ನಂ ಬ್ರಹ್ಮ’ ಮಾಲಿಕೆಯಲ್ಲಿ ನದಿ ನೀರಿನ ಕುರಿತಾಗಿ ಪ್ರವಚನ ಅನುಗ್ರಹಿಸಿದ ಶ್ರೀಗಳು, ಹರಿದ್ವಾರದ ನಂತರ ಗಂಗಾ ನದಿಯ ಸ್ವರೂಪವೇ ಬದಲಾಗಿದ್ದು, ಮನುಷ್ಯನ ಮಲಮೂತ್ರಗಳ ಕಾಲುವೆಗಳನ್ನು ನದಿಗೆ ಸೇರಿಸಿ ಗಂಗೆಯನ್ನು ಅಶುದ್ಧ ಗೊಳಿಸಲಾಗಿದೆ. ಇದು ದೇಶಕ್ಕೆ, ಸೃಷ್ಟಿಗೆ ಹಾಗೂ ಮುಂದಿನ ಪೀಳಿಗೆಗೆ ಮಾಡಿದ ಅಪಚಾರ. ಚರಿತ್ರೆಯಲ್ಲಿ ಮುಂದಿನ ಪೀಳಿಗೆ ಈ ತಪ್ಪನ್ನು ಕ್ಷಮಿಸುವುದಿಲ್ಲ. ಇದು ಗಂಗೆಯ ಮೂಲಕ ಸೃಷ್ಟಿಯ ಚಕ್ರಕ್ಕಾಗುತ್ತಿರುವ ಅನ್ಯಾಯ ಎಂದು ಖೇದ ವ್ಯಕ್ತಪಡಿಸಿದರು. ಗಂಗೆಯ ನೀರು ದೇಹವನ್ನು ಒಮ್ಮೆ ಪ್ರವೇಶಿಸಿದರೆ ಅದು ಒಂದು ವರ್ಷಗಳ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ರಾಷ್ಟ್ರೀಯ ಹೆದ್ದಾರಿಯ ಇಕ್ಕೆಲಗಳಲ್ಲಿ 75 ಮೀ ವ್ಯಾಪ್ತಿಯಲ್ಲಿ ವಾಣಿಜ್ಯ ಕಟ್ಟಡಕ್ಕೆ ಪರವಾನಿಗೆ ನೀಡುವ ವಿಚಾರದಲ್ಲಿ ಆಗಿರುವ ಗೊಂದಲದ ಕುರಿತು ಉಪ್ಪುಂದ ಕೆಆರ್ ಎಸ್ ಎಸ್ ಸಭಾಂಗಣದಲ್ಲಿ ಸಂತ್ರಸ್ತರ ಸಭೆ ನಡೆಯಿತು. ಇತ್ತೀಚೆಗೆ ಸುಪ್ರೀಂ ಕೋರ್ಟ್ ನೀಡಿರುವ ಆದೇಶವನ್ನು ರಾಜ್ಯ ಸರಕಾರ ಜಾರಿಗೆ ತರಬಾರದು ಹಾಗೂ ಕರಾವಳಿ ಜಿಲ್ಲೆಗಳಿಗೆ ವಿಶೇಷ ವಿನಾಯತಿ ನೀಡಬೇಕೆಂದು ಒಕ್ಕೊರಲ ಬೇಡಿಕೆ ಮಂಡಿಸಲಾಯಿತು. ಒಂದು ವೇಳೆ ಈ ಆದೇಶ ಜಾರಿಗೆ ಬಂದಲ್ಲಿ ಕರಾವಳಿ ಜಿಲ್ಲೆಗಳ ರಾಷ್ಟ್ರೀಯ ಹೆದ್ದಾರಿಯ ಅಕ್ಕಪಕ್ಕದಲ್ಲಿ ವ್ಯಾಪಾರ ವ್ಯವಹಾರ, ಪ್ರಸೋದ್ಯಮಗಳಿಗೆ ಭಾರಿ ಹೊಡೆತ ಬೀಳಲಿದ್ದು ಈಗಾಗಲೇ ಭೂಸ್ವಾಧೀನ ಆಗಿರುವ ಜಮೀನಿಗೆ ಹೊಂದಿಕೊಂಡಿರುವ ರಾಷ್ಟ್ರೀಯ ಹೆದ್ದಾರಿಯ ಮಧ್ಯದಿಂದ 75ಮೀ ಅಂತರದೊಳಗೆ ಇರುವ ಜಮೀನುಗಳು, ವಾಣಿಜ್ಯ ಮಳಿಗೆಗಳು, ಇತರೇ ಅಂಗಡಿ ಮುಂಗಟ್ಟುಗಳು ಬೆಲೆ ಕಳೆದುಕೊಂಡು ಸಂಬಂಧಪಟ್ಟ ಮಾಲೀಕರು ಸಂತ್ರಸ್ತರಾಗಲಿದ್ದಾರೆ. ಹಾಗಾಗಿ ಈ ಕುರಿತು ರಾಜ್ಯ ಸರಕಾರಕ್ಕೆ ಮನವರಿಕೆ ಮಾಡಿಕೊಟ್ಟು, ಸುಪ್ರೀಂ ಕೋರ್ಟಗೆ ಮೇಲ್ಮನವಿ ಸಲ್ಲಿಸುವಂತೆ ಒತ್ತಾಯಿಸಬೇಕು ಎನ್ನುವ ಅಭಿಪ್ರಾಯ ವ್ಯಕ್ತವಾಯಿತು.. ಇದೇ ಸಮಯದಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಾನಪದ ಕಲಾವಿದರು, ವಿದ್ವಾಂಸರು, ವಾದ್ಯಗಾರರು, ಬುಡಕಟ್ಟು ಜನರನ್ನೊಳಗೊಂಡAತೆ “ಜಾನಪದ ಸಂಗಮ” ಹೆಸರಿನ ಕಾರ್ಯಕ್ರಮವನ್ನು ಗಿರಿಜನ ಉಪಯೋಜನೆಯಡಿ ಹೊಸ ಯೋಜನೆಯಾಗಿ ಸರ್ಕಾರವು ಘೋಷಿಸಿದ್ದು, ಈ ಯೋಜನೆಯಡಿ ರಾಜ್ಯದ 4 ವಿಭಾಗಗಳಲ್ಲಿ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಜಾನಪದ ಕಲಾಪ್ರಕಾರದ ತರಬೇತಿ ನೀಡಲು ಅಕಾಡೆಮಿಯ ವೆಬ್ಸೈಟ್ https://janapada.karnataka.gov.in/ ನಲ್ಲಿ ಆಸಕ್ತಿಯುಳ್ಳ 16 ರಿಂದ 40 ವರ್ಷದೊಳಗಿನ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭರ್ತಿ ಮಾಡಿದ ಅರ್ಜಿಯನ್ನು ಸೆಪ್ಟಂಬರ್ 16 ರ ಒಳಗಾಗಿ ರಿಜಿಸ್ಟ್ರಾರ್, ಕರ್ನಾಟಕ ಜಾನಪದ ಅಕಾಡೆಮಿ, 2ನೇ ಮಹಡಿ, ಕನ್ನಡ ಭವನ, ಜೆ ಸಿ ರಸ್ತೆ, ಬೆಂಗಳೂರು – 560002 ಇವರಿಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ವಿವರಗಳಿಗಾಗಿ ಅಕಾಡೆಮಿ ಇ –ಮೇಲ್ registrar.janapada@gmail.com ಹಾಗೂ ದೂರವಾಣಿ ಸಂಖ್ಯೆ 080-22215509 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಅಕಾಡೆಮಿಯ ರಿಜಿಸ್ಟಾçರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
