ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ನಗರದ ಹೋಟೆಲ್ ಶರೋನ್‌ನಲ್ಲಿ ಫೆಬ್ರವರಿ 06, 07, 08ರಂದು ಬೆಳಿಗ್ಗೆ 10:00 ಗಂಟೆಯಿಂದ ರಾತ್ರಿ 08:00ರ ವರೆಗೆ ಪಿಎಸ್‌ಆರ್ ಸೀರೆಗಳ ಎಕ್ಸಿಬಿಷನ್ ಕಮ್ ಸೇಲ್ ನಡೆಯಲಿದೆ. ಕೇವಲ 400 ರೂಪಾಯಿಯಿಂದ ಶುರುವಾಗುವ ಪಿಎಸ್ಆರ್ ಸೀರೆಗಳ ಎಕ್ಸಿಬಿಷನ್ ಕಮ್ ಸೇಲ್ ಇದೀಗ ನಮ್ಮ ಕುಂದಾಪುರದಲ್ಲಿ ನಡೆಯಲಿದೆ. ಕುಂದಾಪುರದ ಮಹಿಳೆಯರೇ ನಿಮಗೆ ಇಷ್ಟವಾಗುವಂತಹ ಸೀರೆಗಳನ್ನು ಸೇಲ್‌ನಲ್ಲಿ ಖರೀದಿಸಬಹುದು. ಈ ಅವಕಾಶ ಕೇವಲ ಮೂರು ದಿನಗಳು ಮಾತ್ರ. ಕೊಯಮುತ್ತೂರಿನ ಪಿಎಸ್ಆರ್ ಫ್ಯಾಕ್ಟ್ರಿಯಾ ಸೀರೆಗಳು ಇಲ್ಲಿ ಲಭ್ಯವಿದೆ. ತಪ್ಪದೇ ಭೇಟಿ ನೀಡಿ.ಮಾಹಿತಿಗಾಗಿ: 9150016573
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರ ಸರಕಾರಿ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಕೌಶಲ್ಯ ಅರ್ಹತಾ ಚೌಕಟ್ಟು ಯೋಜನೆಯಡಿ ಆಟೋಮೊಬೈಲ್ ವಿಭಾಗದಲ್ಲಿ ಅಭ್ಯಸಿಸುತ್ತಿರುವ ಒಂಬತ್ತನೇ ತರಗತಿ ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತೆ ಮತ್ತು ಚಿಹ್ನೆಗಳ ಬಗ್ಗೆ ವಿಶೇಷ ಅತಿಥಿ ಉಪನ್ಯಾಸ ಏರ್ಪಡಿಸಲಾಗಿತ್ತು. ಈ ಸಂದರ್ಭ ಕುಂದಾಪುರ ಸಂಚಾರ ಠಾಣೆಯ ಉಪನಿರೀಕ್ಷಕರಾದ ಅನೂಪ್ ನಾಯಕ್ ಹಾಗೂ ಸುಧಾ ಪ್ರಭು ಮತ್ತು ಎಎಸ್‌ಐ ನರೇಶ್ ಕೋಟ್ಯಾನ್ ಸಂಚಾರಿ ನಿಯಮಗಳ ಬಗ್ಗೆ ಉಪಯುಕ್ತ ಮಾಹಿತಿ ಹಂಚಿಕೊಂಡರು. ಸಂಸ್ಥೆಯ ಉಪ ಪ್ರಾಂಶುಪಾಲರಾದ ಕೆ. ಕಿರಣ್ ಹೆಗ್ಡೆ, ಆಟೋಮೊಬೈಲ್ ತರಬೇತುದಾರ ಅರುಣ್ ಶೆಟ್ಟಿ ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ಸಿ.ಎನ್.ಜಿ ಗ್ರಾಹಕರಿಗೆ ಸಿ.ಎನ್.ಜಿ ಗ್ಯಾಸ್ ವಿತರಣಾ ಕೇಂದ್ರಗಳಲ್ಲಿ ವಾಹನಗಳು ಗಂಟೆಗಟ್ಟಲೆ ಕಾಯುವ ಪರಿಸ್ಥಿತಿ ಉಂಟಾಗಿದೆ. ಈ ಸಮಸ್ಯೆಯನ್ನು ಕೂಡಲೇ ಪರಿಹರಿಸಿ ಸುಗಮವಾಗಿ ಗ್ಯಾಸ್ ಲಭ್ಯವಾಗುವಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ ಸೂಚನೆ ನೀಡಿದರು. ಅವರು ಶುಕ್ರವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಿ.ಎನ್.ಜಿ ಗ್ಯಾಸ್ ಸರಬರಾಜಿನಲ್ಲಿ ಉಂಟಾಗುವ ಸಮಸ್ಯೆಯನ್ನು ಚರ್ಚಿಸುವ ಸಲುವಾಗಿ ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಸಿ.ಎನ್. ಜಿ ಗ್ಯಾಸ್ ಬಳಸಿ ವಾಹನ ಚಾಲನೆ ಮಾಡುತ್ತಿರುವ ಆಟೋ ಚಾಲಕರು ಸೇರಿದಂತೆ ಮತ್ತಿತರರ ವಾಹನಗಳಿಗೆ ಗ್ಯಾಸ್ ತುಂಬಿಸಲು ಬಂಕ್ ಗಳ ಮುಂದೆ ಎರಡು-ಮೂರು ಗಂಟೆಗಿಂತ ಹೆಚ್ಚು ಕಾಲ ಕಾಯುವ ಪರಿಸ್ಥಿತಿ ಉಂಟಾಗಿ ಸಾರ್ವಜನಿಕರಿಗೆ ಸಮಸ್ಯೆ ಉಂಟಾಗುತ್ತಿದೆ. ಇದನ್ನು ಕೂಡಲೇ ಗೈಲ್ ಗ್ಯಾಸ್ ಕಂಪನಿ ಹಾಗೂ ಅದಾನಿ ಕಂಪನಿಯವರ ಸಮನ್ವಯದೊಂದಿಗೆ ಕಾರ್ಯ ನಿರ್ವಹಿಸಿ ಗ್ಯಾಸ್ ವಿತರಣೆಯಲ್ಲಿ ತೊಂದರೆ ಉಂಟಾಗದಂತೆ ನೋಡಿಕೊಳ್ಳಬೇಕು ಎಂದು ಸೂಚನೆ ನೀಡಿದರು. ಜಿಲ್ಲೆಯಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಹಿರೇಮಹಾಲಿಂಗೇಶ್ವರ ದೇಗುಲ ತನ್ನದೆ ಆದ ಐತಿಹಾಸಿ ಪುರಾಣ ಪ್ರಸಿದ್ಧ ದೇಗುಲವಾಗಿದ್ದು ಇಲ್ಲಿನ ಮಿತ್ರವೃಂದ ಸಂಸ್ಥೆ ಸಾಂಸ್ಕೃತಿಕವಾಗಿ ಜನಮನದಲ್ಲಿ ಪಸರಿಸಿಕೊಂಡಿದೆ ಎಂದು ಕೋಟ ಅಮೃತೇಶ್ವರಿ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಆನಂದ ಸಿ. ಕುಂದರ್ ಹೇಳಿದರು. ಅವರು ಗುರುವಾರ ಗೀತಾನಂದ ವೇದಿಕೆಯಲ್ಲಿ ಮಹತೋಭಾರ ಶ್ರೀ ಹಿರೇಮಹಾಲಿಂಗೇಶ್ವರ ದೇವಸ್ಥಾನ ಕೋಟ ಇದರ ವಾರ್ಷಿಕ ರಥೋತ್ಸವದ ಅಂಗವಾಗಿ ಶ್ರೀ ಹಿರೇಮಹಾಲಿಂಗೇಶ್ವರ ಮಿತ್ರವೃಂದ ಕೋಟ ಇವರ ಸುವರ್ಣ ಮಹೋತ್ಸವದ ಹಿನ್ನಲ್ಲೆಯಲ್ಲಿ ಹಮ್ಮಿಕೊಂಡ ಏಳು ದಿನಗಳ ಸಾಂಸ್ಕೃತಿಕ ಪರ್ವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ದೇವಸ್ಥಾನದ ಉತ್ಸವದಲ್ಲಿ ಮಿತ್ರವೃಂದ ಸಂಸ್ಥೆ ತನ್ನ ಐವತ್ತು ಸಂವತ್ಸವ ಪೂರೈಸಿ ಯಶಸ್ಸಿನತ್ತ ಸಾಗುತ್ತಿದೆ, ದೇವಸ್ಥಾನದ ಅಭಿವೃದ್ಧಿಗೆ ಮಿತ್ರವೃಂದದ ಕೊಡುಗೆ ಅಪಾರವಾಗಿದೆ. ಪ್ರಸ್ತುತ ವ್ಯವಸ್ಥಾಪನಾ ಸಮಿತಿಯೊಂದಿಗೆ ಕೈಜೋಡಿಸಿ ಇನ್ನಷ್ಟು ಉತ್ತಮ ಕಾರ್ಯಗಳನ್ನು ಕೈಗೊಳ್ಳಲು ಸಹಕಾರಿಯಾಗಲಿ ಎಂದರು. ಈ ಸಂದರ್ಭದಲ್ಲಿ 50ನೇ ಸುವರ್ಣ ಸಂಭ್ರಮದ ಅಂಗವಾಗಿ ಮಿತ್ರವೃಂದದ ಬೆಳವಣಿಗೆಗೆ ಸಹಕಾರ ನೀಡಿದ ಸ್ಥಳೀಯ ಉದ್ಯಮಿ ಕುಶಲ ಪೂಜಾರಿ ಬೆಂಗಳೂರು, ಗಿರಿಜಾ ದೇವಾಡಿಗ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರಾಜ್ಯದಲ್ಲಿ ಅಂಗನವಾಡಿ ಶಿಕ್ಷಕರಾಗಿ ಹಾಗೂ ಸಹಾಯಕರಾಗಿ ಹಲವು ವರ್ಷಗಳ ಕಾಲ ಕರ್ತವ್ಯ ನಿರ್ವಹಿಸಿ ಈಗಾಗಲೇ ನಿವೃತ್ತರಾದವರು ತಮ್ಮ ಸೇವಾವಧಿಯಲ್ಲಿ ಅತೀ ಕಡಿಮೆ ಗೌರವ ಧನದಲ್ಲಿ ಸೇವೆ ಸಲ್ಲಿಸಿ, ಯಾವುದೇ ಇತರೆ ಸೌಲಭ್ಯಗಳಿಲ್ಲದೇ ಈಗಾಗಲೇ ನಿವೃತ್ತಿ ಗೊಂಡಿರುವುದರಿಂದ ಅಂತವರಿಗೆ ಸೂಕ್ತ ಗ್ರಾಚುವಿಟಿ ಸೌಲಭ್ಯ ಒದಗಿಸಿ ಎಂದು ಬೆಂಗಳೂರಿನಲ್ಲಿ ನಡೆಯುತ್ತಿರುವ ರಾಜ್ಯ ವಿಧಾನ ಮಂಡಲದ ವಿಶೇಷ ಅಧಿವೇಶನದಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಶೆಟ್ಟಿ ಗಂಟಿಹೊಳೆ ಅವರು ಸದನದಲ್ಲಿ ಒತ್ತಾಯಿಸಿದ್ದಾರೆ. ಚುಕ್ಕೆ ರಹಿತ ಪ್ರಶ್ನೆಗೆ ಉತ್ತರಿಸಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ದಿನಾಂಕ 04-02-2023ರ ಸರ್ಕಾರದ ಆದೇಶದಂತೆ 2023- 24ನೇ ಸಾಲಿನಿಂದ ನಿವೃತ್ತಿಯಾದ 2,358 ಅಂಗನವಾಡಿ ಕಾರ್ಯಕರ್ತೆಯರಿಗೆ ಹಾಗೂ 2097 ಅಂಗನವಾಡಿ ಸಹಾಯಕರಿಗೆ ಗ್ರಾಚುವಿಟಿ ಮೊತ್ತ ಮಂಜೂರು ಮಾಡಲಾಗಿದೆ. 2011ನೇ ಸಾಲಿನಿಂದ 2022 -23ನೇ ಸಾಲಿನವರೆಗೂ ನಿವೃತ್ತರಾದ ಎಲ್ಲಾ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರಿಗೆ ಗ್ರಾಚುವಿಟಿ ಮೊತ್ತ ಪಾವತಿಸಲು ಆರ್ಥಿಕ ಇಲಾಖೆ ಅಭಿಪ್ರಾಯದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಭಾರತ ಸರ್ಕಾರದ ಯುವಜನ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯದ ಅಧೀನದಲ್ಲಿರುವ ಮೈ ಭಾರತ್ ಉಡುಪಿ, ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ ((NDRF)) ಮತ್ತು ರಾಜ್ಯ ವಿಪತ್ತು ಪ್ರತಿಕ್ರಿಯೆ ಪಡೆ ((SDRF)) ಸಹಯೋಗದೊಂದಿಗೆ ಯುವ ಆಪದ್ ಮಿತ್ರ ಯೋಜನೆಯಡಿ 7 ದಿನಗಳ ವಸತಿ ವಿಪತ್ತು ನಿರ್ವಹಣಾ ತರಬೇತಿ ಕಾರ್ಯಕ್ರಮವನ್ನು ಫೆಬ್ರವರಿ 08 ರಿಂದ 14 ರವರೆಗೆ ಉಡುಪಿಯ ಪ್ರಗತಿ ನಗರದ ಡಾ.ವಿ.ಎಸ್. ಆಚಾರ್ಯ ಸ್ಕೌಟ್ ಮತ್ತು ಗೈಡ್ ಜಿಲ್ಲಾ ತರಬೇತಿ ಕೇಂದ್ರದಲ್ಲಿ ಆಯೋಜಿಸಲಾಗುತ್ತಿದ್ದು, ಜಿಲ್ಲೆಯ 18 ರಿಂದ 40 ವರ್ಷದೊಳಗಿನ ಯುವ ಸ್ವಯಂಸೇವಕರಿಂದ ಅರ್ಜಿ ಆಹ್ವಾನಿಸಲಾಗಿದೆ. ತರಬೇತಿ ಪಡೆದ ಅಭ್ಯರ್ಥಿಗಳಿಗೆ ಯುವ ಆಪದ್ ಮಿತ್ರ ಯೋಜನೆಯಲ್ಲಿ 10,000 ರೂ. ಮೌಲ್ಯದ ಎಮರ್ಜೆನ್ಸಿ ಕಿಟ್, ಮುಂದಿನ 3 ವರ್ಷಗಳವರೆಗೆ ಜೀವ ಮತ್ತು ಆರೋಗ್ಯ ವಿಮೆಯಿಂದ ರಕ್ಷಣೆ ಪಡೆಯಲು ವಿಮಾ ಪಾಲಿಸಿ ಮತ್ತು ಸರ್ಕಾರಿ ಪ್ರಮಾಣಪತ್ರವನ್ನು ನೀಡಲಾಗುವುದು. ಅರ್ಜಿದಾರರು ಫೆಬ್ರವರಿ 02 ಒಳಗಾಗಿ ಕ್ಯೂ ಆರ್ ಕೋಡ್ ಅನ್ನು ಸ್ಕ್ಯಾನ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಅಂಚೆ ಇಲಾಖೆಯು ಯು.ಪಿ.ಯು ಇಂಟರ್‌ನ್ಯಾಷನಲ್ ಲೆಟರ್ ರೈಟಿಂಗ್ ಕಾಂಪಿಟೇಷನ್ ಪ್ರಯುಕ್ತ 9 ರಿಂದ 15 ವರ್ಷದ ಒಳಗಿನ ವಿದ್ಯಾರ್ಥಿಗಳಿಗೆ “Write a letter to a friend about why human connection matters in a digital world” ಎಂಬ ವಿಷಯದ ಕುರಿತು ಪತ್ರ ಲೇಖನ ಸ್ಪರ್ಧೆಯನ್ನು ಹಮ್ಮಿಕೊಂಡಿದ್ದು, ಸ್ಪರ್ಧಾಳುಗಳು ಪತ್ರ ಲೇಖನವನ್ನು ಹಿಂದಿ, ಇಂಗ್ಲೀಷ್ ಅಥವಾ ಪ್ರಾದೇಶಿಕ ಭಾಷೆಯಲ್ಲಿ 800 ಶಬ್ದಗಳು ಮೀರದಂತೆ ಕೈ ಬರಹದಲ್ಲಿ ನಿಗಧಿಪಡಿಸಿದ ಕೇಂದ್ರದಲ್ಲಿ ಬರೆಯಬಹುದಾಗಿದೆ. ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ತಮ್ಮ ಶಾಲೆಯ ಮುಖಾಂತರ ಫೆಬ್ರವರಿ 14 ರ ಒಳಗಾಗಿ ಅಂಚೆ ಅಧೀಕ್ಷಕರು, ಉಡುಪಿ ಅಂಚೆ ವಿಭಾಗ, ಉಡುಪಿ ಇಲ್ಲಿಗೆ ಸಲ್ಲಿಸಬಹುದಾಗಿದೆ. ಅತ್ಯುತ್ತಮ ಮೂರು ಪತ್ರಲೇಖನಗಳಿಗೆ ಬಹುಮಾನಗಳನ್ನು ದೇಶೀಯ ಮಟ್ಟದಲ್ಲಿ ಕ್ರಮವಾಗಿ 50,000, 25,000, 10,000 ಮತ್ತು ಕರ್ನಾಟಕ ವೃತ್ತ ಮಟ್ಟದಲ್ಲಿ 25,000, 10,000 ಮತ್ತು 5,000 ರೂ. ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಅಂಚೆ ಅಧೀಕ್ಷಕರು, ಉಡುಪಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶಾಲೆಗಳು ಪಠ್ಯದ ಶಿಕ್ಷಣದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ತೊಡಗಿಸುವಂತೆ ಮಾಡಬೇಕು. ಆಗ ಶಿಕ್ಷಣ ಪರಿಪೂರ್ಣವಾಗುತ್ತದೆ. ಆ ನಿಟ್ಟಿನಲ್ಲಿ ಎಲ್ಲರೂ ಶ್ರಮವಹಿಸಬೇಕು ಎಂದು ಹವ್ಯಾಸಿ ಯಕ್ಷಗಾನ ಕಲಾವಿದರು, ಲಂಡನ್‌ನಲ್ಲಿ ವೈಮಾನಿಕ ವಿಜ್ಞಾನಿಯಾಗಿ ಕೆಲಸ ಮಾಡುತ್ತಿರುವ ಯೋಗೀಂದ್ರ ಮರವಂತೆ ಹೇಳಿದರು. ಅವರು ಇಲ್ಲಿನ ಪಡುಕೋಣೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಯಕ್ಷಗಾನ ತರಬೇತಿಯನ್ನು ಯಕ್ಷಗಾನ ಚಂಡೆಯನ್ನು ಭಾರಿಸುವುದರ ಮೂಲಕ ಯಕ್ಷಗಾನ ತರಬೇತಿಗೆ ಚಾಲನೆ ನೀಡಿದರು. ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ದಿನೇಶ್ ಪೂಜಾರಿ ಅವರು ರಾಷ್ಟ್ರ ಧ್ವಜಾರೋಹಣಗೈದು, ಅಧ್ಯಕ್ಷತೆ ವಹಿಸಿ ಮಕ್ಕಳಿಗೆ ಶುಭ ಹಾರೈಸಿದರು. ಪಡುಕೋಣೆ ಕೋಟೆಗುಡ್ಡೆ ಎಜುಕೇಶನ್ ಡೆವಲಪ್‌ಮೆಂಟ್ ಟ್ರಸ್ಟ್ ಅಧ್ಯಕ್ಷರಾದ ಸುಬ್ರಹ್ಮಣ್ಯ ಪಡುಕೋಣೆ ಉಪಸ್ಥಿತರಿದ್ದು, ಯಕ್ಷಗಾನದ ತರಗತಿಯನ್ನು ಟ್ರಸ್ಟ್ ಆಯೋಜಿಸಿರುವುದರ ಔಚಿತ್ಯದ ಕುರಿತು ಮಾತನ್ನಾಡಿ ಶುಭ ಹಾರೈಸಿದರು. ಯಕ್ಷ ಗುರುಗಳಾದ ಯೋಗೀಂದ್ರ ಆಚಾರ್ಯ ಗುಜ್ಜಾಡಿ ಅವರು ಯಕ್ಷಗಾನ ಕಲಿಕೆಯ ಮಹತ್ವವನ್ನು ವಿವರಿಸಿದರು. ಸಮಾರಂಭದಲ್ಲಿ ಟ್ರಸ್ಟ್ ಉಪಾಧ್ಯಕ್ಷರಾದ ರಾಮ ಪೂಜಾರಿ ಮುಲ್ಲಿಮನೆ, ಕಾರ್ಯದರ್ಶಿ ರಾಜೀವ ಪಡುಕೋಣೆ, ಕೋಶಾಧಿಕಾರಿ ಅರವಿಂದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಟೀಮ್ ಗಾನ ನಿನಾದ ಆರ್ಕೆಸ್ಟ್ರಾ ಪಾಂಡೇಶ್ವರ ಸಾಸ್ತಾನ ಇದರ ದಶಮಾನೋತ್ಸವ ಸಂಭ್ರಮದ ಅಂಗವಾಗಿ ರಾಜ್ಯಮಟ್ಟದ ಕರೋಕೆ ಗಾಯನ ಸ್ಪರ್ಧೆ ಕಾರ್ಯಕ್ರಮ ಫೆ.21ರಂದು ಸಾಸ್ತಾನದ ಪಾಂಡೇಶ್ವರ ಶಾಲಾ ವಠಾರದಲ್ಲಿ ಆಯೋಜಿಸಿದ್ದಾರೆ. ಈ ಹಿನ್ನಲ್ಲೆಯಲ್ಲಿ ಇದರ ಪೋಸ್ಟರ್ ಅನಾವರಣವನ್ನು ಕೋಟದ ಅಮೃತೇಶ್ವರಿ ದೇಗುಲದ ಸಭಾಂಗಣದಲ್ಲಿ ಮಣೂರು ಗೀತಾನಂದ ಪೌಂಡೇಶನ್‌ನ ಪ್ರವರ್ತಕ ಆನಂದ್ ಸಿ. ಕುಂದರ್ ಬಿಡುಗಡೆಗೊಳಿಸಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಮುಖ್ಯಸ್ಥ ಶ್ರೀಶ ಆಚಾರ್ಯ ಪಾಂಡೇಶ್ವರ, ಗಾಯಕ ಜನಾರ್ಧನ್ ಕುಂಭಾಶಿ, ಭವ್ಯ, ಕನಸು, ಅಮೃತೇಶ್ವರಿ ದೇಗುಲದ ಟ್ರಸ್ಟಿ ಚಂದ್ರ ಆಚಾರ್ಯ ಕೋಟ, ಸುಭಾಷ್ ಶೆಟ್ಟಿ, ಸ್ಥಳೀಯರು ಉಪಸ್ಥಿತರಿದ್ದರು ಹಾಗೂ ಫೆ.21 ರಂದು ಕಾರ್ಯಕ್ರಮದ ಜಿಲ್ಲೆ ಹಾಗೂ ರಾಜ್ಯಾದಂತ್ಯ ಗಾಯಕರ ಸಮ್ಮುಖದಲ್ಲಿ ಅದ್ದೂರಿಯಾಗಿ ಕಾರ್ಯಕ್ರಮ ನಡೆಯಲಿದೆ ಎಂದು ಸಂಸ್ಥೆ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಆಲೂರು ಗ್ರಾಮದ ಕಳಿಯಲ್ಲಿನ ಚಿತ್ರಕೂಟ ಆಯುರ್ವೇದ ಚಿಕಿತ್ಸಾಲಯಕ್ಕೆ ಎನ್‌ಎಬಿಎಚ್ ಆಯುಷ್ ಮಾನದಂಡಗಳ ಪ್ರಕಾರ ಮೌಲ್ಯಮಾಪನ ಮಾಡಲ್ಪಟ್ಟಿರುವ ಚಿಕಿತ್ಸಾಲಯ ಎಂಬ ರಾಷ್ಟ್ರೀಯ ಮನ್ನಣೆ ಸಿಕ್ಕಿದೆ. ದಿಲ್ಲಿಯ ರಾಷ್ಟ್ರೀಯ ಆಸ್ಪತ್ರೆಗಳು ಹಾಗೂ ಆರೋಗ್ಯ ಸೇವೆಗಳ ಮಾನ್ಯತಾ ಮಂಡಳಿ (ನ್ಯಾಶನಲ್ ಆಕ್ರೆಡರೇಷನ್ ಬೋರ್ಡ್ ಫಾರ್ ಹಾಸ್ಪಿಟಲ್ಸ್ ಹಾಗೂ ಹೆಲ್ತ್ ಕೇರ್ ಪ್ರೊವೈಡರ್ಸ್- ಎನ್‌ಎಬಿಎಚ್)ಯ ತಜ್ಞರ ತಂಡ ಆಲೂರಿನ ಚಿತ್ರಕೂಟ ಚಿಕಿತ್ಸಾಲಯಕ್ಕೆ ಆಗಮಿಸಿ, ಪರಿಶೀಲನೆ ನಡೆಸಿದೆ. ಅದರಂತೆ ಇಲ್ಲಿ ಉತ್ತಮ ಗುಣಮಟ್ಟದ ಹಾಗೂ ಸುರಕ್ಷತಾ ರೀತಿಯ ಆರೋಗ್ಯ ಸೇವೆ ಕಲ್ಪಿಸುತ್ತಿರುವುದನ್ನು ಪರಿಗಣಿಸಿ ಗುಣಮಟ್ಟದ ಆಸ್ಪತ್ರೆ ಎಂದು ಮಂಡಳಿಯು ಈ ವಿಶೇಷ ಮಾನ್ಯತೆ ನೀಡಿದೆ. 2010ರಲ್ಲಿ ಒಂದು ಬೆಡ್‌ನಿಂದ ಆರಂಭಗೊಂಡ ಚಿಕಿತ್ಸಾಲಯದಲ್ಲಿ ಡಾ. ರಾಜೇಶ್ ಬಾಯರಿ & ಡಾ. ಅನುಲೇಖ ಬಾಯರಿ ದಂಪತಿಯ ವಿಶೇಷ ಕಾಳಜಿಯ ಚಿಕಿತ್ಸೆಯಿಂದಾಗಿ ಇಂದು ಈ ಚಿಕಿತ್ಸಾಲಯ ರಾಜ್ಯ, ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದ ರೋಗಿಗಳನ್ನು ಸೆಳೆಯುತ್ತಿದೆ. ಜಗತ್ತಿನ ಸುಮಾರು 25ಕ್ಕೂ ಅಧಿಕ ದೇಶಗಳ ರೋಗಿಗಳು ಇಲ್ಲಿ…
