ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವ್ಯವಹಾರ ಆಡಳಿತ ವಿಭಾಗದ ಆಶ್ರಯದಲ್ಲಿ ಪ್ರಥಮ ವರ್ಷದ ಬಿಬಿಎ ವಿದ್ಯಾರ್ಥಿಗಳಿಗೆ ಲಾಜಿಸ್ಟಿಕ್ ಹಾಗೂ ಸಪ್ಲೆöÊ ಚೈನ್ ಮ್ಯಾನೇಜ್ಮೆಂಟ್ ಹಾಗೂ ಇ-ಕಾಮರ್ಸ್ ವಿಷಯಕ್ಕೆ ಸಂಬಂಧಿಸಿದ ವಿಶೇಷ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ. ಉಮೇಶ್ ಶೆಟ್ಟಿ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಫ್ರೀ ಲೆನ್ಸ್ ತರಬೇತುದಾರರು ಹಾಗೂ ಬಿಸಿನೆಸ್ ಕೋಚ್ ಆಗಿರುವ ಗೌತಮ್ ಎಚ್. ಶೆಟ್ಟಿಗಾರ್ ವಿದ್ಯಾರ್ಥಿಗಳಿಗೆ ತರಬೇತಿಯನ್ನು ನೀಡಿದರು. ಉಪ-ಪ್ರಾಂಶುಪಾಲರಾದ ಡಾ. ಚೇತನ್ ಶೆಟ್ಟಿ ಕೋವಾಡಿ, ವ್ಯವಹಾರ ಆಡಳಿತ ವಿಭಾಗದ ಮುಖ್ಯಸ್ಥರಾದ ನಂದಾ ರೈ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ನಾಗರತ್ನ ಪ್ರಾರ್ಥಿಸಿ, ಚೇತನ್ ಸಂಪನ್ಮೂಲ ವ್ಯಕ್ತಿಯನ್ನು ಪರಿಚಯಿಸಿ, ಸೌರವ್ ಸ್ವಾಗತಿಸಿ, ನಿಶ್ಮಿತಾ ಕಾರ್ಯಕ್ರಮ ನಿರೂಪಿಸಿ, ಮಣಿಕಂಠ ವಂದಿಸಿದರು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕೋಟ ಅಮೃತೇಶ್ವರೀ ಮೇಳದಲ್ಲಿ ಹಲವು ಸಂವತ್ಸರಗಳ ಸಾರ್ಥಕ ಕಲಾಯಾನದ ಮೂಲಕ ಹಿರಿಯ ಕಲಾವಿದರಾಗಿ ರೂಪುಗೊಂಡ ಪ್ರತಿಭಾವಂತ ಸೌಮ್ಯ ಸ್ವಭಾವದ ನಿಷ್ಠಾವಂತ ಯಕ್ಷ ಕಲಾವಿದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕೋಟ ಸುರೇಶ ಬಂಗೇರ ಅವರಿಗೆ ಕೋಟ ಗಿಳಿಯಾರು ಹಿರಿಯ ನಾಗರಿಕರ ವೇದಿಕೆ ವತಿಯಿಂದ ಸನ್ಮಾನಿಸಿ, ಗೌರವಿಸಲಾಯಿತು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಇಲ್ಲಿನ ಮಹಾಸತಿ ಪ್ರಾಥಮಿಕ ಮೀನುಗಾರರ ಮಹಿಳಾ ವಿವಿದ್ಧೋದ್ದೇಶ ಸಹಕಾರಿ ಸಂಘಕ್ಕೆ ರಾಜ್ಯ ಮಟ್ಟದ ಉತ್ತಮ ಮಹಿಳಾ ಮೀನುಗಾರರ ಸಹಕಾರಿ ಸಂಘ ಪ್ರಶಸ್ತಿ ದೊರೆತಿದೆ. ಬೆಂಗಳೂರಿನಲ್ಲಿ ನಡೆದ ವಿಶ್ವ ಮೀನುಗಾರಿಕೆ ದಿನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಗಂಗೊಳ್ಳಿಯ ಮಹಾಸತಿ ಪ್ರಾಥಮಿಕ ಮೀನುಗಾರರ ಮಹಿಳಾ ವಿವಿದ್ಧೋದ್ದೇಶ ಸಹಕಾರಿ ಸಂಘಕ್ಕೆ ರಾಜ್ಯ ಮಟ್ಟದ ಉತ್ತಮ ಮಹಿಳಾ ಮೀನುಗಾರರ ಸಹಕಾರಿ ಸಂಘ ಪ್ರಶಸ್ತಿಯನ್ನು ಸಂಘದ ಅಧ್ಯಕ್ಷೆ ನೀಲಾವತಿ ಎಸ್. ಖಾರ್ವಿ ಅವರಿಗೆ ಪ್ರದಾನಿಸಿ ಗೌರವಿಸಿದರು. ಮೀನುಗಾರಿಕೆ ಸಚಿವ ಮಂಕಾಳ್ ವೈದ್ಯ, ಸಚಿವರು, ಮೀನುಗಾರಿಕೆ ಇಲಾಖೆ ನಿರ್ದೇಶಕ ದಿನೇಶ ಕಳ್ಳೇರ್, ಇಲಾಖೆ ಅಧಿಕಾರಿಗಳು, ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಣಪತಿ ಖಾರ್ವಿ, ನಿರ್ದೇಶಕರು, ಸಿಬ್ಬಂದಿಗಳು ಮೊದಲಾದವರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ಕ್ರಿಯಾತ್ಮಕ ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ನಾಡಿನ ಭಾಷಾ ಸಂವರ್ಧನೆ, ಕಲೆ, ಸಾಹಿತ್ಯ, ಸಂಗೀತ, ಜಾನಪದ, ನೃತ್ಯ ಕಲಾಪ್ರಕಾರಗಳನ್ನು ಉಳಿಸಿ ಬೆಳೆಸುವ ಸಲುವಾಗಿ ಕಾರ್ಯವಹಿಸುತ್ತಿರುವ ನೋಂದಾಯಿತ ಸಂಘ ಸಂಸ್ಥೆಗಳಿಗೆ ಪ್ರೋತ್ಸಾಹ ನೀಡಲು ಹಾಗೂ ಅಸಂಘಟಿತ ಕಲಾವಿದರಿಗೆ ವಾದ್ಯ ಪರಿಕರ / ವೇಷಭೂಷಣ ಖರೀದಿಸಲು ಮತ್ತು ಚಿತ್ರಕಲೆ / ಶಿಲ್ಪ ಕಲಾಕೃತಿಗಳ ಪ್ರದರ್ಶನಕ್ಕೆ ಧನಸಹಾಯ ನೀಡಲು ಪ್ರಸಕ್ತ ಸಾಲಿನ ಸಾಮಾನ್ಯ, ವಿಶೇಷ ಘಟಕ ಹಾಗೂ ಪರಿಶಿಷ್ಟ ಪಂಗಡ ಉಪಯೋಜನೆಯಡಿ ಸೇವಾ ಸಿಂಧು ವೆಬ್‌ಸೈಟ್ Sevasindhu.karnataka.gov.in ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಡಿ. 30 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0820-2986168, 7026506627 ಅಥವಾ 9591475884 ಅನ್ನು ಕಚೇರಿ ಅವಧಿಯಲ್ಲಿ ಅಥವಾ ವೆಬ್‌ಸೈಟ್ www.kannadasiri.karnataka.gov.in ಅನ್ನು ಸಂರಕ್ಷಿಸಬಹುದಾಗಿದೆ. ನಿಗದಿತ ದಿನಾಂಕದ ನಂತರ ಸಲ್ಲಿಸುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಹಾಗೂ ಅರ್ಜಿಗಳನ್ನು ನೇರವಾಗಿ ಇಲಾಖೆಯಲ್ಲಿ ಸ್ವೀಕರಿಸುವುದಿಲ್ಲ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಛೇರಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡಬಿದಿರೆ: ಡಾ. ಜಿ. ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ, ಅಜ್ಜರಕಾಡು, ಉಡುಪಿ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಸಹಭಾಗಿತ್ವದಲ್ಲಿ ನಡೆದ ಮಂಗಳೂರು ಅಂತರ್ ಕಾಲೇಜು ಮಟ್ಟದ ಪುರುಷರ ಮತ್ತು ಮಹಿಳೆಯರ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಆಳ್ವಾಸ್ ಕಾಲೇಜು ತಂಡವು 23ನೇ ಬಾರಿ ಸಮಗ್ರ ಪ್ರಶಸ್ತಿ ಗೆದ್ದುಕೊಂಡಿದೆ. ಆಳ್ವಾಸ್ ತಂಡವು ಪುರುಷರ ವಿಭಾಗದಲ್ಲಿ 265, ಮಹಿಳೆಯರ ವಿಭಾಗದಲ್ಲಿ 207 ಅಂಕ ಒಟ್ಟು 472 ಅಂಕ ಗಳಿಸಿತು. 42 ಚಿನ್ನ 25 ಬೆಳ್ಳಿ 04 ಕಂಚು ಒಟ್ಟು 71 ಪದಕ ಗಳಿಸಿ ಸಮಗ್ರ ತಂಡ ಪ್ರಶಸ್ತಿ ಪಡೆಯಿತು. ಆಳ್ವಾಸ್‌ನ ಕ್ರೀಡಾಪಟುಗಳು 06 ನೂತನ ಕೂಟ ದಾಖಲೆಗಳನ್ನು ನಿರ್ಮಿಸಿದರು. ಅನಿಕೇತ್ ಗುಂಡು ಎಸೆತ, ನಾಗೇಂದ್ರ ಅಣ್ಣಪ್ಪ ನಾಯ್ಕ್ ಚಕ್ರ ಎಸೆತ, ಕೃಷಿಕ್ ಎಂ. 110 ಹರ್ಡಲ್ಸ್, ನಿಧಿ ಯಾದವ್ ಹ್ಯಾಮರ್ ತ್ರೋ, 4*400 ರಿಲೆ ಪುರುಷರ ತಂಡವು ನೂತನ ದಾಖಲೆಗಳನ್ನು ಮಾಡಿರುತ್ತಾರೆ. ಆಳ್ವಾಸ್‌ನ ದೀಕ್ಷಿತ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸೋಂದಾಶ್ರೀ ಸ್ವರ್ಣವಲ್ಲೀ ಮಠದವರು ನಡೆಸುವ ಶ್ರಿ ಭಗವದ್ಗೀತಾ ಅಭಿಯಾನದ ಅಂಗವಾಗಿ ಕುಂದಾಪುರದ ಶ್ರೀ ಸೀತಾರಾಮ ಕಲ್ಯಾಣ ಮಂಟಪದಲ್ಲಿ ಜಿಲ್ಲಾಮಟ್ಟದ ಭಗವದ್ಗೀತೆಯ ಶ್ಲೋಕ ಕಂಠಪಾಠ ಸ್ಪರ್ಧೆ, ಭಾಷಣ ಸ್ಪರ್ಧೆಗಳನ್ನು ಆಯೋಜಿಸಿದ್ದರು. ಈ ಸ್ಪರ್ಧೆಗಳಲ್ಲಿ ಹಟ್ಟಿಅಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಿಂದ ಭಾಷಣ ಸ್ಪರ್ಧೆಯಲ್ಲಿ ಪ್ರೌಢಶಾಲಾ ವಿಭಾಗದಲ್ಲಿ ಪ್ರಾಂಜಲಿ ಭಟ್ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ. ಶಿವಮೊಗ್ಗದಲ್ಲಿ ನಡೆಯುವ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ. ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿಗಳು ಮತ್ತು ಶಾಲಾ ಪ್ರಾಂಶುಪಾಲರೂ ಆದ ಶರಣ ಕುಮಾರ, ಶಾಲಾ ಆಡಳಿತಾಧಿಕಾರಿ ವೀಣಾರಶ್ಮಿ ಎಮ್., ಶಾಲಾ ಶಿಕ್ಷಕ ಮತ್ತು ಶಿಕ್ಷಕೇತರ ವೃಂದದವರು ಈಕೆಯ ಸಾಧನೆಗೆ ಅಭಿನಂದಿಸಿ, ಹುರಿದುಂಬಿಸಿರುತ್ತಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕೋಟೇಶ್ವರ ಇಲ್ಲಿ ’ರಾಷ್ಟ್ರೀಯ ದತ್ತು ಮಾಸಾಚರಣೆ’ಪ್ರಯುಕ್ತ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಇವುಗಳ ಆಶ್ರಯದಲ್ಲಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕಗಳ ಸಂಯೋಜನೆಯಲ್ಲಿ ’ಕಾನೂನು ಬದ್ಧ ದತ್ತು’ ಕುರಿತು ಜಾಗೃತಿ ಮತ್ತು ಕಿರು ನಾಟಕ ಪ್ರದರ್ಶನ ನಡೆಯಿತು. ಕಾರ್ಯಕ್ರಮವನ್ನು ಉಡುಪಿ ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಸುಜಾತ ವಾಸುದೇವ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ರಾಮರಾಯ ಆಚಾರ್ಯ ವಹಿಸಿದ್ಧರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ನಾಗರತ್ನ ನಾಯಕ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಉಡುಪಿ ಅವರು ಕಾನೂನು ಬದ್ಧ ದತ್ತು ಪ್ರಕ್ರಿಯೆ ಬಗ್ಗೆ ಮಾಹಿತಿ ನೀಡಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಶಾರದಾ ವೈ, ಜಿಲ್ಲಾ ಮಹಿಳಾ ಸಬಲೀಕರಣ ಘಟಕ, ಮಹಿಳಾ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ಬುಧವಾರದಂದು ಐಕ್ಯೂಎಸಿ ಮತ್ತು ರಾಜ್ಯಶಾಸ್ತ್ರ ವಿಭಾಗ ಆಶ್ರಯದಲ್ಲಿ ಸಂವಿಧಾನ ದಿನಾಚರಣೆ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ಜರುಗಿತು. ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಭಂಡಾರ್‌ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜು ಇಲ್ಲಿನ ಪ್ರಾಂಶುಪಾಲರಾದ ಡಾ. ಶುಭಕರಾಚಾರಿ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿ, ಭಾರತ ಸಂವಿಧಾನವು ಜಗತ್ತಿನಲ್ಲಿಯೇ ಅತ್ಯಂತ ವಿಶಿಷ್ಟ ಸ್ಥಾನ ಪಡೆದಿದ್ದು, ಹಲವು ದಾಖಲೆಗಳಿಗೆ ಪಾತ್ರವಾಗಿದೆ. ಭಾರತದಂತಹ ನೂರಾರು ಜಾತಿ, ಹತ್ತಾರು ಧರ್ಮ, ವೈವಿಧ್ಯಮಯವಾದ ಸಂಸ್ಕೃತಿ ಆಚರಣೆಗಳಿಂದ ಕೂಡಿರುವ ದೇಶಕ್ಕೆ ಸಂವಿಧಾನ ರೂಪಿಸುವುದು ಸವಾಲಿನ ಕೆಲಸವಾಗಿದ್ದರೂ ಭಾರತ ಇಂದು ಜಾಗತಿಕ ಮಟ್ಟದಲ್ಲಿ ಗಮನಾರ್ಹ ಸ್ಥಾನ ಪಡೆದಿದೆ. ಅದಕ್ಕೆ ಕಾರಣ ನಮ್ಮ ಸಶಕ್ತವಾದ ಸಂವಿಧಾನ ದೇಶದಲ್ಲಿ ಸರ್ಕಾರ ಆಡಳಿತ ವ್ಯವಸ್ಥೆ ಯಾವ ರೀತಿ ಇರಬೇಕು ಅದಕ್ಕಾಗಿ ಯಾವ ರೀತಿಯಾಗಿ ಕಾನೂನು, ನಿಯಮಗಳು ಇರಬೇಕು ಎಂಬುದನ್ನು ಸಂವಿಧಾನದಲ್ಲಿ ಸ್ಪಷ್ಟವಾಗಿ ನಮೂದಿಸಲಾಗಿದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಚಂದ್ರಾವತಿ ಶೆಟ್ಟಿ ನಿರ್ವಹಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿ ಉಡುಪಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕುಂದಾಪುರ ಹಾಗೂ ಎಸ್.ವಿ. ಆಂಗ್ಲ ಮಾಧ್ಯಮ ಶಾಲೆ ಗಂಗೊಳ್ಳಿ ಇವರ ಜಂಟಿ ಆಶ್ರಯದಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ಜರಗಿದ ಉಡುಪಿ ಜಿಲ್ಲಾ ಮಟ್ಟದ 14 ಮತ್ತು 17ರ ವಯೋಮಿತಿಯ ಬಾಲಕ ಬಾಲಕಿಯರ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದ ಸಮಾರೋಪ ಸಮಾರಂಭ ನಡೆಯಿತು. ಜಿ.ಎಸ್.ವಿ.ಎಸ್. ಅಸೋಸಿಯೇಶನ್ ಅಧ್ಯಕ್ಷ ಡಾ. ಕಾಶೀನಾಥ ಪೈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕುಂದಾಪುರ ವಲಯ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಸತ್ಯನಾರಾಯಣ, ಬೈಂದೂರು ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ವಿಜಯ ಕುಮಾರ್ ಶೆಟ್ಟಿ, ಜಿ.ಎಸ್.ವಿ.ಎಸ್. ಅಸೋಸಿಯೇಶನ್ ಖಜಾಂಚಿ ಎನ್. ಅಶ್ವಿನ್ ನಾಯಕ್, ಶಿಕ್ಷಕ-ರಕ್ಷಕ ಸಮಿತಿ ಕಾರ್ಯದರ್ಶಿ ಜಿ.ವಿಠಲ ಶೆಣೈ, ಎಸ್.ವಿ. ಆಂಗ್ಲ ಮಾಧ್ಯಮ ಶಾಲೆ ಮುಖ್ಯೋಪಾಧ್ಯಾಯ ರಾಘವೇಂದ್ರ ಶೇರುಗಾರ್, ಪ್ರಾಥಮಿಕ ಶಾಲಾ ವಿಭಾಗದ ಮುಖ್ಯ ಶಿಕ್ಷಕಿ ಶಾಂತಿ ಡಿಕೋಸ್ಟ, ಎಸ್.ವಿ. ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ದೀಕ್ಷಿತ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಹಾವೇರಿ ಇವರ ಆಶ್ರಯದಲ್ಲಿ ನಡೆದ ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಆಳ್ವಾಸ್ ಪದವಿಪೂರ್ವ ಕಾಲೇಜಿನ ಬಾಲಕ ಮತ್ತು ಬಾಲಕಿಯರು ತಂಡ ಪ್ರಶಸ್ತಿಯನ್ನು ಪಡೆದುಕೊಂಡು ಒಟ್ಟು 09 ಪದಕಗಳೊಂದಿಗೆ ಆಳ್ವಾಸ್ ಪದವಿಪೂರ್ವ ಕಾಲೇಜು ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿತು. ಸ್ಪರ್ಧೆಯ ಫಲಿತಾಂಶ:ಆರ್ಟಿಸ್ಟಿಕ್ ಪೇರ್: ಬಾಲಕರ ವಿಭಾಗದಲ್ಲಿ ಚಂದ್ರಶೇಖರ ಮತ್ತು ಪೃಥ್ವಿಚಾರ್ – ಪ್ರಥಮ ಸ್ಥಾನಆರ್ಟಿಸ್ಟಿಕ್ ಪೇರ್: ಬಾಲಕಿಯರ ವಿಭಾಗದಲ್ಲಿ ಸಂಜನಾ ಮತ್ತು ಕವನ – ದ್ವಿತೀಯ ಸ್ಥಾನರಿದಮಿಕ್ ಪೇರ್: ಬಾಲಕರ ವಿಭಾಗದಲ್ಲಿ ಪೃಥ್ವಿಚಾರ್ ಮತ್ತು ಕುಮಾರ್ – ಪ್ರಥಮ ಸ್ಥಾನರಿದಮಿಕ್ ಪೇರ್: ಬಾಲಕಿಯರ ವಿಭಾಗದಲ್ಲಿ ಕವನ ಮತ್ತು ಅನನ್ಯ – ಪ್ರಥಮ ಸ್ಥಾನಆರ್ಟಿಸ್ಟಿಕ್ ಸಿಂಗಲ್ : ಬಾಲಕರ ವಿಭಾಗದಲ್ಲಿ ಕುಮಾರ್ – ಪ್ರಥಮ ಸ್ಥಾನವನ್ನು ಗಳಿಸಿರುತ್ತಾರೆ ಆಳ್ವಾಸ್‌ನ ಐವರು ಕ್ರೀಡಾಪಟುಗಳು ರಾಷ್ಟ್ರ ಮಟ್ಟದ ಯೋಗಾಸನ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ. ವಿಜೇತರಾದ ಕ್ರೀಡಾಪಟುಗಳನ್ನು ಸಂಸ್ಥೆಯ ಅಧ್ಯಕ್ಷ ಡಾ. ಎಂ.ಮೋಹನ ಆಳ್ವರು…
