Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಕಾವೂರು ಪೊಲೀಸ್ ಠಾಣೆಯಲ್ಲಿ ಕಳೆದ ಎರಡು ವರ್ಷಗಳಿಂದ ಪೊಲೀಸ್ ಇನ್ಸ್‌ಪೆಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದ ರಾಘವೇಂದ್ರ ಎಂ. ಅವರು ವರ್ಗಾವಣೆಗೊಂಡು ಮಂಗಳೂರಿನ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಮೂಲತಃ ಬೈಂದೂರು ಬಾಡದವರಾದ ರಾಘವೇಂದ್ರ ಎಂ. ಅವರು ಕಾವೂರು ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸುವ ಅವಧಿಯಲ್ಲಿ ವಿವಿಧ ಪ್ರಕರಣಗಳ ತನಿಖೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಗಮನಾರ್ಹ ಸೇವೆ ಸಲ್ಲಿಸಿದ್ದರು. ಇಲಾಖೆಯ ವರ್ಗಾವಣೆ ಆದೇಶದಂತೆ ಅವರು ಪಾಂಡೇಶ್ವರ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದು, ಸೋಮವಾರ ನೂತನ ಕರ್ತವ್ಯಕ್ಕೆ ವರದಿ ಮಾಡಿಕೊಂಡಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಶ್ರೀ ಸಾಯಿ ಈಶ್ವರ್ ಗುರೂಜಿ ಅವರಿಂದ ಆತ್ಮ ಮತ್ತು ಪರಮಾತ್ಮ ಕುರಿತು ವಿಶೇಷ ಆಧ್ಯಾತ್ಮಿಕ ಜಾಗೃತಿಯ ಒಳ ಚಿಂತನ ಶಿಬಿರವು ಕುಂದಾಪುರದ ಶ್ರೀ ಸೀತಾರಾಮಚಂದ್ರ ಸಭಾಭವನದಲ್ಲಿ ಜೂನ್‌ 7ರಂದು ಭಾನುವಾರ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಮಾನವ ಜೀವನದ ನಿಜವಾದ ಅರ್ಥ, “ನಾನು ಯಾರು?” ಎಂಬ ಮೂಲಭೂತ ಪ್ರಶ್ನೆಗೆ ಉತ್ತರ, ಆತ್ಮಸಾಕ್ಷಾತ್ಕಾರ, ಪರಮಾತ್ಮನೊಂದಿಗೆ ಆತ್ಮದ ಸಂಬಂಧ, ಮನಶಾಂತಿ, ಧ್ಯಾನದ ಮಹತ್ವ ಹಾಗೂ ಆತ್ಮಜ್ಞಾನದ ಮಾರ್ಗದ ಕುರಿತು ಶ್ರೀ ಸಾಯಿ ಈಶ್ವರ್ ಗುರೂಜಿ ಅವರು ಆಳವಾದ ಉಪನ್ಯಾಸ ನೀಡಲಿದ್ದಾರೆ. ಇಂದಿನ ಒತ್ತಡಭರಿತ ಜೀವನದಲ್ಲಿ ಶಾಂತಿ, ಸತ್ಯ ಮತ್ತು ಧರ್ಮದ ಮಾರ್ಗದಲ್ಲಿ ನಡೆಯಲು ಅಗತ್ಯವಾದ ಆಧ್ಯಾತ್ಮಿಕ ಮಾರ್ಗದರ್ಶನವನ್ನು ಈ ಕಾರ್ಯಕ್ರಮದ ಮೂಲಕ ಪಡೆಯಬಹುದು. ಆಧ್ಯಾತ್ಮಿಕ ಜ್ಞಾನವನ್ನು ಅರಸುವವರು, ಯುವಜನತೆ ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶಿಬಿರದ ಸದುಪಯೋಗ ಪಡೆದುಕೊಳ್ಳುವಂತೆ ವಿನಂತಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:7619115623, 7026293111

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ರಾಜಧಾನಿಯ ಹಿರಿಯ ಸಂಘಟನೆಯಾದ ವಿ. ಕೆ. ಎಂ. ಕಲಾವಿದರು ರಿ., ಬೆಂಗಳೂರು ಇದರ ನೇತೃತ್ವದಲ್ಲಿ ಕರ್ನಾಟಕ ಸರಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ಇದರ ಸಹಕಾರದಲ್ಲಿ ನಡೆಯುವ ಡಾ. ಬಿ.ಆರ್.ಅಂಬೇಡ್ಕರ್ ಹಾಗೂ ಬಾಬು ಜಗಜೀವನ ರಾಂ ಸ್ಮಾರಕ ನಾಟಕೋತ್ಸವ ಹಾಗೂ ಸಾಂಸ್ಕೃತಿಕ ಕಲಾಮೇಳ – ರಂಗೋತ್ಸವ ಮತ್ತು ನಿರಂತರ 45ನೇ ವರ್ಷದ ಕಾರ್ಯಕ್ರಮವು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ 2026 ಜೂನ್ 8 ರಿಂದ 10 ರ ತನಕ ನಡೆಯಲಿದೆ. ಇದರ ಸಮಾರೋಪ ಸಮಾರಂಭವು ಜೂನ್ 10 ಬುಧವಾರದಂದು ಸಂಜೆ ಗಂಟೆ 5.00 ಕ್ಕೆ ನಡೆಯಲಿದ್ದು ಗಡಿನಾಡು ಕಾಸರಗೋಡಿನ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ರಿ., ಕನ್ನಡ ಗ್ರಾಮ, ಕಾಸರಗೋಡು ಇದರ 35ನೇ ಸಂಸ್ಥಾಪನಾ ವರ್ಷಾಚರಣೆಯನ್ನು ಯಶಸ್ವಿಯಾಗಿ ಪೂರೈಸಿರುವುದಕ್ಕಾಗಿ, ಕಾಸರಗೋಡು ಕನ್ನಡ ಗ್ರಾಮದ ಸಂಸ್ಥಾಪಕ ಶಿವರಾಮ ಕಾಸರಗೋಡು ಅವರಿಗೆ ಕರ್ನಾಟಕ ಗಡಿನಾಡು ಸಂಘಟನಾಗಾರರಾಗಿ 35 ವರ್ಷದ ಸೇವೆಗಾಗಿ ಪ್ರತಿಷ್ಠಿತ ಕರ್ನಾಟಕ ಗಡಿನಾಡು ಸಂಘಟನಾ ಪ್ರಶಸ್ತಿಯನ್ನು ನೀಡಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಗಣಕ ವಿಜ್ಞಾನ ವಿಭಾಗವು ಎಂಎಸ್‌ಡಿಸಿ, ಮಣಿಪಾಲ ಸಹಯೋಗದಲ್ಲಿ ಆಯೋಜಿಸಿದ್ದ “ಪ್ರಾಜೆಕ್ಟ್ ಎಕ್ಸ್ಪೋ – ಸೃಜನಶೀಲತೆ ಮತ್ತು ತಂತ್ರಜ್ಞಾನದ ಸಂಗಮ” ಕಾರ್ಯಕ್ರಮವು ಜೂನ್ 2ರಂದು ಕಾಲೇಜಿನ ಮೂಕಾಂಬಿಕಾ ಸಭಾಂಗಣದಲ್ಲಿ ನಡೆಯಿತು. ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ. ಉಮೇಶ್ ಶೆಟ್ಟಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಡಾ. ಯು. ಸಿ. ನಿರಂಜನ್, ಡಾ. ಮುರಳಿಕೃಷ್ಣ ಎಸ್. ಎನ್., ಶಶಿಧರ್ ಶೆಟ್ಟಿ, ಡಾ. ಅಂಜಯ್ಯ ದೇವಿನೇನಿ ಹಾಗೂ ರಾಜಲಕ್ಷ್ಮಿ ಆನಂದನ್ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ಅತಿಥಿಗಳು ತಂತ್ರಜ್ಞಾನದ ವೇಗವಾಗಿ ಬೆಳೆಯುತ್ತಿರುವ ಜಗತ್ತಿನಲ್ಲಿ ವಿದ್ಯಾರ್ಥಿಗಳು ಸೃಜನಶೀಲತೆ, ನವೀನತೆ ಹಾಗೂ ಪರಿಣಾಮಕಾರಿ ಸಂವಹನ ಕೌಶಲ್ಯಗಳನ್ನು ಬೆಳೆಸಿಕೊಳ್ಳುವ ಅಗತ್ಯತೆಯನ್ನು ತಿಳಿಸಿದರು. ನಿರಂತರವಾಗಿ ತಮ್ಮ ಜ್ಞಾನವನ್ನು ನವೀಕರಿಸಿಕೊಂಡು ತಂತ್ರಜ್ಞಾನ ಕ್ಷೇತ್ರದ ಹೊಸ ಬೆಳವಣಿಗೆಗಳಿಗೆ ಹೊಂದಿಕೊಳ್ಳುವ ಮೂಲಕ ಯಶಸ್ಸು ಸಾಧಿಸಬಹುದು ಎಂದರು. ವಿದ್ಯಾರ್ಥಿಗಳು ನವೀನ ಯೋಜನೆಗಳ ಮೂಲಕ ಸಮಾಜಕ್ಕೆ ಉಪಯುಕ್ತವಾದ ಪರಿಹಾರಗಳನ್ನು ನೀಡುವಂತೆ ಕರೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಚಲಿಸುತ್ತಿದ್ದ ಬೈಕಿಗೆ ಹಿಂದಿನಿಂದ ಡಿಕ್ಕಿ ಹೊಡೆದು ನಿಲ್ಲಿಸದೇ ಪರಾರಿಯಾದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಇಲ್ಲಿನ ಉದ್ಲಾಡಿ ತೆಂಕಬೆಟ್ಟು ಬಸ್ ಸ್ಟ್ಯಾಂಡ್ ಬಳಿ ಮಂಗಳವಾರ ಸಂಭವಿಸಿದೆ. ಜೂನ್.2ರಂದು ಬೆಳಗ್ಗೆ ಸುಮಾರು 8:15ರ ವೇಳೆಗೆ ಸಾಹೇಬ್ರಕಟ್ಟೆಯಿಂದ ಕೋಟ ಮೂರುಕೈ ರಸ್ತೆಯ ಬಸ್ ಸ್ಟ್ಯಾಂಡ್ ಬಳಿ ನಂದನ್ ಎಂಬುವವರು ತಮ್ಮ ಬೈಕ್ ನಲ್ಲಿ ಬನ್ನಾಡಿ ಕಡೆಗೆ ಹೋಗುತ್ತಿದ್ದರು. ಈ ಸಂದರ್ಭದಲ್ಲಿ ಕೋಟ ಮೂರುಕೈ-ಸಾಹೇಬ್ರಕಟ್ಟೆ ರಸ್ತೆಯಲ್ಲಿ ಹಿಂದಿನಿಂದ ಅತಿವೇಗ ಹಾಗೂ ಅಜಾಗರೂಕತೆಯಿಂದ ಬಂದ ಅಪರಿಚಿತ ವಾಹನವೊಂದು ನಂದನ್ ಅವರ ಬೈಕ್ಗೆ ಜೋರಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ನಂದನ್ ಅವರು ಮೋಟಾರ್ ಸೈಕಲ್ ಸಮೇತ ರಸ್ತೆಗೆ ಬಿದ್ದಿದ್ದು, ಹೊಟ್ಟೆಯ ಭಾಗಕ್ಕೆ ಗಂಭೀರ ಸ್ವರೂಪದ ಗಾಯಗಳಾಗಿ ಮಾತನಾಡಲಾಗದ ಸ್ಥಿತಿಯಲ್ಲಿದ್ದರು. ಅಪಘಾತವೆಸಗಿದ ವಾಹನದ ಚಾಲಕ ವಾಹನವನ್ನು ನಿಲ್ಲಿಸದೇ ಸ್ಥಳದಿಂದ ಪರಾರಿಯಾಗಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ನಂದನ್ ಅವರನ್ನು ತಕ್ಷಣವೇ ಮಣಿಪಾಲದ ಕೆ.ಎಂ.ಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ತೀವ್ರ ರಕ್ತಸ್ರಾವವಾಗಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಯತಿಕುಮಾರಸ್ವಾಮಿ ಗೌಡ ಅವರು ಕರ್ನಾಟಕ ಶುಶ್ರೂಷಕ ಶಿಕ್ಷಕರ ಸಂಘ, ಬೆಂಗಳೂರು, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಸಂಯುಕ್ತ ಆಶ್ರಯದಲ್ಲಿ ಬೆಂಗಳೂರಿನಲ್ಲಿ ಹಮ್ಮಿಕೊಂಡ ಅಂತರಾಷ್ಟ್ರೀಯ ಶುಶ್ರೂಷಕರ ದಿನಾಚರಣೆಯಲ್ಲಿ ಪ್ರದಾನ ಮಾಡಲಾದ ‘ಅತ್ಯುತ್ತಮ ನರ್ಸ್ ಎಜುಕೇಟರ್ ಪ್ರಶಸ್ತಿ’ ಗೆ ಭಾಜನರಾಗಿದ್ದಾರೆ. ಭವಿಷ್ಯದ ಆರೋಗ್ಯ ವೃತ್ತಿಪರರನ್ನು ರೂಪಿಸುವಲ್ಲಿ ಅತ್ಯುನ್ನತ ಮಟ್ಟದ ಬೋಧನೆ, ಮಾರ್ಗದರ್ಶನ ಹಾಗೂ ನರ್ಸಿಂಗ್ ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿರುವ ವಿಶಿಷ್ಟ ಕೊಡುಗೆಯನ್ನು ಪರಿಗಣಿಸಿ ಡಾ. ಯತಿಕುಮಾರಸ್ವಾಮಿ ಗೌಡ ಅವರನ್ನು ಈ ಗೌರವಕ್ಕೆ ಆಯ್ಕೆ ಮಾಡಲಾಗಿದೆ.ಸಮಾರಂಭದಲ್ಲಿ ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷ ಯು.ಟಿ. ಖಾದರ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್, ರಾಜೀವ್‌ಗಾಂಧಿ ಆರೋಗ್ಯ ವಿಜ್ಞಾನ ವಿವಿಯ ಕುಲಪತಿ ಡಾ. ಭಗವಾನ್ ಬಿ.ಸಿ. ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಸಾಲಿಗ್ರಾಮ ಪಟ್ಟಣಪಂಚಾಯತ್ ನಲ್ಲಿ ಸತತ 35 ವರ್ಷಗಳ ಸುಧೀರ್ಘ ಅವಧಿಯಲ್ಲಿ ಸೇವೆ ಸಲ್ಲಿಸಿದ ಪ್ರಭಾರ ಕಂದಾಯ ನಿರೀಕ್ಷಕ ಕಾರ್ಕಡ ಚಂದ್ರಶೇಖರ ಸೋಮಯಾಜಿ ಇವರ ಸೇವಾ ಬಿಳ್ಕೋಡುಗೆ ಕಾರ್ಯಕ್ರಮ ಮಂಗಳವಾರ ಸಾಲಿಗ್ರಾಮ ಪಟ್ಟಣ ಪಂಚಾಯತ್ ಸಭಾಂಗಣದಲ್ಲಿ ಜರಗಿತು. ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಮಾಜಿ ಮುಖ್ಯಾಧಿಕಾರಿ ಗೋಪಾಲಕೃಷ್ಣ ಶೆಟ್ಟಿ ಜೀವನದ ಸಾರ್ಥಕ್ಯ ಕಂಡ ಕ್ಷೇತ್ರ ಅದು ಅವರು ಕಾರ್ಯನಿರ್ವಹಿಸಿದ ಕ್ಷೇತ್ರ ಸೋಮಯಾಜಿ ಅವರು ನಿಷ್ಕಲ್ಮಶ ಕಾರ್ಯವೈಕರಿಗೆ ಸಾರ್ವಜನಿಕರು ಪ್ರಶಂಸೆಯ ಗರಿ ನೀಡಿದ್ದಾರೆ. ಪಟ್ಟಣಪಂಚಾಯತ್‌ನಲ್ಲಿ ಹಿರಿತನದ ಅನುಭವಿ ಕಾರ್ಯನಿರ್ವಹಣೆ ಎಲ್ಲರಿಗೂ ಮಾದರಿಯಾಗಿದೆ, ವೃತ್ತಿ ಕಾಯಕದ ಜತೆ ಸಾಮಾಜಿಕ ಕಾರ್ಯ ಅತ್ಯಂತ ಶ್ರೇಷ್ಠತೆಯನ್ನು ಪಡೆದುಕೊಂಡಿದೆ ಎಂದರು. ಇದೇ ವೇಳೆ ಪಟ್ಟಣಪಂಚಾಯತ್ ವತಿಯಿಂದ ಸೇವಾನಿವೃತ್ತಿಯ ಚಂದ್ರಶೇಖರ ಸೋಮಯಾಜಿ ದಂಪತಿಗಳಿಗೆ ಗೌರವಾಭಿನಂದನೆಯನ್ನು ಸಲ್ಲಿಸಲಾಯಿತು. ಸಭೆಯ ಅಧ್ಯಕ್ಷತೆಯನ್ನು ಪಟ್ಟಣಪಂಚಾಯತ್ ಮುಖ್ಯಾಧಿಕಾರಿ ಅಜೇಯ್ ಭಂಡಾರ್ಕರ್ ವಹಿಸಿ ಸೋಮಯಾಜಿಯವರಿಗೆ ವಿಶೇಷ ಕೃತಜ್ಞತೆ ಸಲ್ಲಿಸಿ ಬಿಳ್ಕೋಡುಗೆ ನೀಡಿದರು. ಮುಖ್ಯ ಅತಿಥಿಗಳಾಗಿ ಪಟ್ಟಣಪಂಚಾಯತ್ ಮಾಜಿ ಅಧ್ಯಕ್ಷೆ ಸುಕನ್ಯಾ ಜೆ. ಶೆಟ್ಟಿ, ಜಿಲ್ಲಾ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ರಥಬೀದಿಯ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ಮತ್ತು ಮೆಗಾ ಶಿಕ್ಷಕ, ಪೋಷಕ ಸಭೆ ಎಸ್‌ಡಿಎಂಸಿ ಅಧ್ಯಕ್ಷೆ ಶೋಭಾ ಖಾರ್ವಿ ಉಪಸ್ಥಿತಿಯಲ್ಲಿ ಸೋಮವಾರ ನಡೆಯಿತು. ಶಾಲಾ ವಿದ್ಯಾರ್ಥಿಗಳಿಗೆ ಮತ್ತು ಹೊಸತಾಗಿ ಸೇರ್ಪಡೆಗೊಂಡ ವಿದ್ಯಾರ್ಥಿಗಳಿಗೆ ಹೂ ಮತ್ತು ಬಲೂನ್‌ನ್ನು ನೀಡಿ ಸ್ವಾಗತಿಸಲಾಯಿತು. ಸರಕಾರದಿಂದ ನೀಡಲ್ಪಟ್ಟ ಉಚಿತ ಪಠ್ಯಪುಸ್ತಕವನ್ನು ಈ ಸಂದರ್ಭದಲ್ಲಿ ವಿತರಿಸಲಾಯಿತು. ಅಂಗನವಾಡಿ ಕಾರ್ಯಕರ್ತೆ ಫಿಲೋಮಿನಾ, ಎಸ್‌ಡಿಎಂಸಿ ಉಪಾಧ್ಯಕ್ಷೆ ಶ್ವೇತ ವಿಶ್ವನಾಥ್ ಖಾರ್ವಿ, ಶಿಕ್ಷಕರು ಹಾಗೂ ಪೋಷಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಶಾಲಾ ಮುಖ್ಯ ಶಿಕ್ಷಕಿ ಚಂದ್ರಕಲಾ ಸ್ವಾಗತಿಸಿ, ಸಹಶಿಕ್ಷಕಿ ಪ್ರೇಮಲತಾ ಕಾರ್ಯಕ್ರಮವನ್ನು ನಿರೂಪಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬ್ರಹ್ಮಾವರ: ಇಂದು ಸ್ವ ಉದ್ಯೋಗದ ಮೂಲಕ ಸ್ವಾವಲಂಬಿ ಬದುಕನ್ನು ರೂಪಿಸಲು ರುಡ್‌ಸೆಟ್ ಸಂಸ್ಥೆಯ ಕಾರ್ಯ ಶ್ಲಾಘನೀಯವಾಗಿದೆ. ಹಾಗಾಗಿ ಬದುಕಿನಲ್ಲಿ ನಿಷ್ಠೆ ಇದ್ದಲ್ಲಿ ಯಶಸ್ವಿ ಉದ್ಯಮ ಸಾಧ್ಯ ಎಂದು ಉಡುಪಿ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಅಭಿಪ್ರಾಯಪಟ್ಟರು. ಅವರು ಜಿಲ್ಲಾ ಪಂಚಾಯತ್, ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆ, ಉಡುಪಿ, ಜಿಲ್ಲಾ ಕಾರಾಗೃಹ, ಹಿರಿಯಡ್ಕ ಮತ್ತು ರುಡ್‌ಸೆಟ್ ಸಂಸ್ಥೆ, ಬ್ರಹ್ಮಾವರ ಇವರ ಸಂಯುಕ್ತ ಆಶ್ರಯದಲ್ಲಿ 06 ದಿನಗಳ ಕಾಲ ನಡೆಯುವ ಉಡುಪಿ ಜಿಲ್ಲೆಯ ಕಾರಾಗೃಹ ಜೈಲುವಾಸಿಗಳಿಗೆ ಉದ್ಯಮಶೀಲತಾ ಅಭಿವೃದ್ಧಿ ತರಬೇತಿಯ ಸಮಾರೋಪ ಸಮಾರಂಭ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿ, ಜೈಲುವಾಸಿಗಳನ್ನು ಉದ್ದೇಶಿಸಿ ಮಾತನಾಡಿದರು. ಅವರು ಉದ್ಯಮದಲ್ಲಿ ಉನ್ನತ ಮಟ್ಟದ ಸಾಧಿಸಲು ಉದ್ಯಮದ ಕುರಿತು ನಿಷ್ಠೆ ಬೆಳೆಸಿಕೊಳ್ಳಬೇಕು ಅಂದಾಗ ಮಾತ್ರ ಅದರಲಿ ಬೆಳವಣಿಗೆ ಹೊಂದಬಹುದು. ಉದ್ಯಮದಲ್ಲಿ ತೊಡಗುವಾಗ ಅದಕ್ಕೆ ತಕ್ಕುದಾದ ರಿಸ್ಕ್ಅನ್ನು ಎದುರಿಸಬೇಕಾಗುತ್ತದೆ. ಆದ್ದರಿಂದ ಇನ್ನಷ್ಟು ಆತ್ಮವಿಶ್ವಾಸ ಹೆಚ್ಚಾಗುತ್ತದೆ ಜೊತೆಗೆ ಹಂತ ಹಂತವಾಗಿ ಉದ್ಯಮ ಬೆಳೆಯುತ್ತದೆ ಎಂದು ಹೇಳಿ ಶುಭ ಹಾರೈಸಿದರು. ಕೆನರಾ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಮಹಿಳೆಯ ಗರ್ಭಕೋಶದಿಂದ ಮಹತ್ವದ ಶಸ್ತ್ರಚಿಕಿತ್ಸೆ ನಡೆಸಿದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ತಜ್ಞ ವೈದ್ಯರ ತಂಡವು 8 ಕೆ.ಜಿ ಗ್ರಾತದ Fibroid Uterusಗರ್ಭಕೋಶದ ಗಡ್ಡೆಯನ್ನು ತೆಗೆದಿದ್ದಾರೆ. ರೋಗಿಯು ಇದೀಗ ಚೇತರಿಸಿಕೊಳ್ಳುತ್ತಿದ್ದು ಚಿಕಿತ್ಸೆ ಮುಂದುವರಿಸಲಾಗಿದೆ. ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಸ್ತ್ರೀ ರೋಗ ತಜ್ಞರಾದ ಡಾ.ಶಶಾಂಕ್ ಕಿಣಿ, ಡಾ. ಜಾಸ್ಮಿನ್, ಡಾ.ಕವಿತಾ, ಡಾ.ಅಮೃತಾಂಶ್ ಇವರ ತಂಡ ಮತ್ತು ಅರವಳಿಕೆ ತಜ್ಞರಾದ ಡಾ. ಸೂರ್ಯನಾರಾಯಣ, ಡಾ.ರಾಜ್ ಗೋಪಾಲ್ ಭಂಡಾರಿ ಹಾಗೂ ಇವರ ಸಹಾಯದಲ್ಲಿ ಶುಶ್ರೂಷಕಧಿಕಾರಿ ರಕ್ಷಿತಾ, ಓ.ಟಿ ಸಹಾಯಕಿ ಸಂಗೀತ ಇವರ ನೇತೃತ್ವದಲ್ಲಿ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. 44 ವರ್ಷದ ಈ ಮಹಿಳೆ ಕಳೆದ 1 ವರ್ಷದಿಂದ ಹೊಟ್ಟೆಯಲ್ಲಿ ನೋವು ಕಾಣಿಸಿಕೊಂಡು ಖಾಸಗಿ ವೈದ್ಯರನ್ನು ಸಂಪರ್ಕಿಸಿ ಚಿಕಿತ್ಸೆ ಪಡೆಯುತ್ತಿದ್ದರು ಗುಣಮುಖರಾಗದ ಕಾರಣ ಈ ಮಹಿಳೆಯು ಸರ್ಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಬಂದಿದ್ದು ಆಗ ತಜ್ಞ ವೈದ್ಯರು ಆ ಮಹಿಳೆಯನ್ನು ತಪಾಸಣೆ ಮಾಡಿದಾಗ ರೋಗಿಯ ಹೊಟ್ಟೆಯು (ಒಂದು ಮಕ್ಕಳ…

Read More