Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಇಲ್ಲಿನ ಕೋಟದ ಸೇವಾಸಂಗಮ ಶಿಶುಮಂದಿರ ಇದರ ಪ್ರಾರಂಭೋತ್ಸವ ಸೋಮವಾರ ಹಿಂದೂ ಸಂಪ್ರದಾಯದಂತೆ ಪುಟಾಣಿಗಳನ್ನು ಸ್ವಾಗತಿಸಲಾಯಿತು. ಶಿಶುಮಂದಿರಕ್ಕೆ ಪುಟಾಣಿಗಳನ್ನುಆಗಮಿಸುತ್ತಿದ್ದಂತೆ ಮಾತಾಜಿ ಸಹನಾ ಹಾಗೂ ಶಿಶುಮಂದಿರದ ಸ್ಥಾನೀಯ ಸಮಿತಿ ಪದಾಧಿಕಾರಿಗಳು ದೀಪ ಬೆಳಗಿಸಿ ಆರತಿ ಬೆಳಗಿದರು. ಪೋಷಕರು ಪುಟಾಣಿಗಳಿಗೆ ಪುಷ್ಭ ಸಿಂಚನಗೈದರು. ನಂತರ ಭಾರತಮಾತೆಗೆ ದೀಪ ಬೆಳಗಿಸಿ ಪುಟಾಣಿಗಳು ನಮಿಸಿಕೊಂಡರು. ಈ ಸಂದರ್ಭದಲ್ಲಿ ಮಾತನಾಡಿದ ಶಿಶುಮಂದಿರದ ಅಧ್ಯಕ್ಷ ಶ್ರೀಕಾಂತ್ ಶೆಣೈ ಭಾರತೀಯ ಪರಂಪರೆಯ ಶಿಕ್ಷಣ ವ್ಯವಸ್ಥೆ ಸೇವಾಸಂಗಮ ಶಿಶುಮಂದಿರದಲ್ಲಿ ಸಂಪ್ರದಾಯಬದ್ಧವಾಗಿ ನೀಡಲಾಗುತ್ತಿದೆ.ಮಕ್ಕಳ ಪ್ರಾರಂಭಿಕ ದಿನಗಳ ಶಿಕ್ಷಣ ಸಂಸ್ಕಾರ ನೀಡುವಲ್ಲಿ ಆದ್ಯತೆ ನೀಡಬೇಕು ಈ ನಿಟ್ಟಿನಲ್ಲಿ ಪೋಷಕರಿಗೆ ಕಿವಿಮಾತು ಹೇಳಿದರು. ಈ ಸಂದರ್ಭದಲ್ಲಿ ಸಮಿತಿಯ ಹಿರಿಯ ಸದಸ್ಯೆ ವಸುಧಾ ಪ್ರಭು, ಪ್ರಮೀಳಾ, ಅಮೃತ್ ಜೋಗಿ, ರವೀಂದ್ರ ಕೋಟ, ರೇಣುಕಾ ಮಯ್ಯ,ಮಾತಾಜಿ ಸಹನಾ, ಸಹಾಯಕಿ ಜ್ಯೋತಿ ಮತ್ತಿತರರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಸಮಿತಿ ಕಾರ್ಯದರ್ಶಿ ಕಲಾವತಿ ಅಶೋಕ್ ನಿರೂಪಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಕಳೆದ 39 ವರ್ಷಗಳಿಂದ ಸೇವಾ ಸಂಗಮ ನಿವೇದಿತಾ ಶಿಶು ಮಂದಿರ ಪುಟಾಣಿಗಳಲ್ಲಿ ಭಾರತೀಯ ಸಂಸ್ಕೃತಿ, ಸಂಸ್ಕಾರ, ಆಚಾರ, ವಿಚಾರಗಳನ್ನು ಬೆಳೆಸುವ ಉದ್ದೇಶದಿಂದ ಮಕ್ಕಳ ಬೆಳವಣಿಗೆಗೆ ಪೂರಕವಾದ ಶಿಕ್ಷಣವನ್ನು ನೀಡುತ್ತಿದೆ. ಮಕ್ಕಳ ಶಿಕ್ಷಣಕ್ಕೆ ಯಾವುದೇ ರೀತಿಯ ಚ್ಯುತಿ ಬಾರದಂತೆ ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಶಿಶು ಮಂದಿರ ಶ್ರಮಿಸಲಿದೆ ಎಂದು ಗಂಗೊಳ್ಳಿಯ ಸೇವಾ ಸಂಗಮ ನಿವೇದಿತಾ ಶಿಶು ಮಂದಿರದ ಸಂಚಾಲಕ ಡಾ. ಕಾಶೀನಾಥ ಪೈ ಹೇಳಿದರು. ಅವರು ಗಂಗೊಳ್ಳಿಯ ಸೇವಾ ಸಂಗಮ ನಿವೇದಿತಾ ಶಿಶು ಮಂದಿರದ ನಗರ ಜಯವಂತ ನಾಯಕ್ ಸಭಾಭವನದಲ್ಲಿ ಸೋಮವಾರ ಜರಗಿದ 2026-27ನೇ ಸಾಲಿನ ಶಿಶು ಮಂದಿರ ಪ್ರಾರಂಭೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಶಿಶು ಮಂದಿರದ ಅಧ್ಯಕ್ಷ ಬಿ. ರಾಘವೇಂದ್ರ ಪೈ ಅಧ್ಯಕ್ಷತೆ ವಹಿಸಿದ್ದರು. ಶಿಶು ಮಂದಿರದಕ್ಕೆ ಆಗಮಿಸಿದ ಪುಟಾಣಿಗಳ ಕಾಲುಗಳನ್ನು ತೊಳೆದು, ಕುಂಕುಮದ ತಿಲಕವನ್ನಿಟ್ಟು, ಆರತಿ ಬೆಳಗಿ ಸಂಪ್ರದಾಯಬದ್ಧವಾಗಿ ಅದ್ದೂರಿಯಾಗಿ ಸ್ವಾಗತಿಸಿಕೊಳ್ಳಲಾಯಿತು. ಶಿಶು ಮಂದಿರದ ಸದಸ್ಯರಾದ ಶ್ರೀನಿವಾಸ ಎಂ., ಉಷಾ ಪಿ.ಮಡಿವಾಳ, ಭಾಸ್ಕರ ಎಚ್.ಜಿ.,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ದೇಶದ ಪ್ರತಿಷ್ಠಿತ ತಾಂತ್ರಿಕ ವಿಶ್ವವಿದ್ಯಾನಿಲಯಗಳಿಗೆ ಸೇರ ಬಯಸುವ ವಿದ್ಯಾರ್ಥಿಗಳಿಗೆ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿಯವರು ನಡೆಸುವ  ಅತಿ ಕ್ಲಿಷ್ಟಕರವೆನಿಸಿದ ಪರೀಕ್ಷೆಗಳಲ್ಲೊಂದಾದ ಜೆಇಇ ಅಡ್ವಾನ್ಸ್ – 2026ನೇ ಸಾಲಿನ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು ಕಾರ್ಕಳದ ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ ನಾಗದೇವ್ ಎಂ.ಜಿ. ರಾಷ್ಟ್ರಮಟ್ಟದಲ್ಲಿ 196 ನೇ ರ‍್ಯಾಂಕ್‌ ಪಡೆದುಕೊಂಡಿದ್ದಾರೆ.  ಫಲಿತಾಂಶದ ವಿವರ:ನಾಗದೇವ್ ಎಂ.ಜಿ. 196, ಖುಷಿ ರಾಜ ವಿ. 648, ದಿಶಾಂತ್ ಎಂ.1207, ರಶ್ಮಿ ಆರ್. ಎಚ್. 1754, ಧನುಷ್ ಎಚ್. ಎ. 2193, ನಯನ ಡಿ. ಗೊಂಡ 2638, ಸೃಜನಾ ಎಸ್. 3618, ಶಶಾಂಕ್ ಡಿ. ಎಸ್. 3800, ಹೃತಿಕ್ ಮಹೇಶ್ 3803, ತೇಜಸ್ ಆರ್. ಬಿ. 5124, ಸುಜನ್ ಕೆ. ಎಚ್. 5377, ವಿಶ್ವಾಸ್ ಕೆ. ಎನ್. 5549, ಧ್ರುವ ವಿ. ಬಿ. 6057, ನಮಿತ್ ಕೆ. ಹೆಗ್ಡೆ 8164, ಪ್ರಥಮ್ ಟಿ. 10982,  ಧ್ರುಶ್ 11103, ನೀನಾದ್ ರಾಜೇಶ್ ನಾಯ್ಕ್ 12563, ಸಂವಿತ್ ಎ. ಗೋಕರ್ಣ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ಕಾಮರ್ಸ್, ಮ್ಯಾನೇಜ್‌ಮೆಂಟ್ ಮತ್ತು ಐಟಿ ಅಸೋಸಿಯೇಷನ್ ವತಿಯಿಂದ ವಿದ್ಯಾರ್ಥಿಗಳಿಗೆ ಕೈಗಾರಿಕಾ ಭೇಟಿಯನ್ನು ಆಯೋಜಿಸಲಾಯಿತು. ಈ ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳನ್ನು ಕುಂದಾಪುರದ ಕೋಸ್ಟಲ್ ಇಂಡಸ್ಟ್ರೀಸ್‌ ಪ್ರೈವೇಟ್ ಲಿಮಿಟೆಡ್ (ಕೋಸ್ಟಲ್ ಕ್ಯಾಶ್ಯೂಸ್) ಸಂಸ್ಥೆಗೆ ಭೇಟಿ ನೀಡಲಾಯಿತು. ಈ ಸಂದರ್ಭದಲ್ಲಿ ಸಂಸ್ಥೆಯ ವ್ಯವಸ್ಥಾಪಕರಾದ ವಿನೋದ್ ಅವರು ಗೋಡಂಬಿ ಬೀಜಗಳ ಸಂಸ್ಕರಣೆಯ ಸಂಪೂರ್ಣ ಪ್ರಕ್ರಿಯೆಯ ಕುರಿತು ವಿದ್ಯಾರ್ಥಿಗಳಿಗೆ ವಿವರವಾದ ಮಾಹಿತಿ ನೀಡಿದರು. ಗೋಡಂಬಿ ಬೀಜಗಳನ್ನು ಎಲ್ಲಿಂದ ಸಂಗ್ರಹಿಸಲಾಗುತ್ತದೆ, ಅವುಗಳನ್ನು ವಿವಿಧ ಹಂತಗಳ ಸಂಸ್ಕರಣೆಗೆ ಹೇಗೆ ಒಳಪಡಿಸಲಾಗುತ್ತದೆ, ಗುಣಮಟ್ಟದ ಆಧಾರದ ಮೇಲೆ ಹೇಗೆ ವಿಂಗಡಿಸಲಾಗುತ್ತದೆ ಹಾಗೂ ಅಂತಿಮವಾಗಿ ಉತ್ತಮ ಗುಣಮಟ್ಟದ ಉತ್ಪನ್ನವಾಗಿ ಹೇಗೆ ತಯಾರಿಸಲಾಗುತ್ತದೆ ಎಂಬುದನ್ನು ವಿವರಿಸಿದರು. ಈ ಕೈಗಾರಿಕಾ ಭೇಟಿಯಲ್ಲಿ ಕಾಲೇಜಿನ ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಪ್ರೀತಿ ಹೆಗ್ಡೆ, ಸತೀಶ್ ಶೆಟ್ಟಿ, ರಜತ್ ಬಂಗೇರ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಬದುಕಿನಲ್ಲಿ ಭರವಸೆ ಕಳಕೊಳ್ಳದೇ ಕನಸುಗಳ ಬೆನ್ನತ್ತಿ ಪ್ರಯತ್ನದ ಬೆವರು ಸುರಿಸಿದರೆ ಪರಿಪೂರ್ಣತೆಯನ್ನು ಸಾಧಿಸಬಹುದು. ಬಡತನ, ಸೋಲು, ನೋವು, ನಿರಾಸೆಗಳ ನಡುವೆಯೂ ಛಲ ಮತ್ತು ದಿಟ್ಟತನದಿಂದ ಸವಾಲುಗಳನ್ನು ಎದುರಿಸಿದಲ್ಲಿ ಸಮೃದ್ಧಿಯ ಬದುಕು ನಮ್ಮದಾಗುತ್ತದೆಂದು ಅರಣ್ಯ ಗುತ್ತಿಗೆದಾರ, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ಜೆ.ಪಿ. ಶೆಟ್ಟಿ ಕಟ್ಕೆರೆ ಹೇಳಿದರು. ಅವರು ಕಾಳಾವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಕುಂದಾಪುರ ಇಲ್ಲಿ ಸೇವಾ ನಿವೃತ್ತಿ ಹೊಂದಿದ ಪ್ರಾಂಶುಪಾಲ ರಾಮರಾಯ ಆಚಾರ್ಯ ಹಾಗೂ ವಾಣಿಜ್ಯಶಾಸ್ತ್ರ ವಿಭಾಗ ಮುಖ್ಯಸ್ಥ ಡಾ. ಶೇಖರ ಬಿ. ಅವರನ್ನು ಸನ್ಮಾನಿಸಿ ಮಾತನಾಡಿದರು. ಸೇವಾ ನಿವೃತ್ತಿ ಹೊಂದಿದ ಪ್ರಾಧ್ಯಾಪಕರು ಹಲವು ಇಲ್ಲಗಳ ನಡುವೆ ತಾವು ಸಾಧನೆ ಗೈದ ಬದುಕಿನ ಹಿನ್ನೋಟವನ್ನು ಸ್ಮರಿಸಿ ಜೀವನದ ಯಶೋಗಾಥೆಯನ್ನು ಅರುಹಿ ಸ್ವಾಭಿಮಾನ ಹಾಗೂ ಸ್ವಾವಲಂಬನೆಯ ಬದುಕನ್ನು ಕಟ್ಟಿಕೊಳ್ಳಿರೆಂದು ವಿದ್ಯಾರ್ಥಿಗಳಿಗೆ ಹಿತನುಡಿದರು. ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ಧ ಕಾಲೇಜಿನ ನಿಯೋಜಿತ ಪ್ರಾಂಶುಪಾಲ ನಾಗರಾಜ ವೈದ್ಯ ಎಂ.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಹೋಬಳಿ ಘಟಕ ಕೋಟ ಇವರ ಆಶ್ರಯದಲ್ಲಿ ಕೋಟ ಸಿಎ ಬ್ಯಾಂಕ್ ಬಿ.ಸಿ ಹೊಳ್ಳ ಸಭಾಂಗಣದಲ್ಲಿ ನಡೆದ ‘ಅಕ್ಷರದಕ್ಕರೆ-2026’ಕಾರ್ಯಕ್ರಮದಲ್ಲಿಸಮುದಾಯ ಸಾಧಕ ಪುರಸ್ಕಾರವನ್ನು ಉಪನ್ಯಾಸಕ ಮಂಜುನಾಥ್, ಬಿಎಸ್ ಎನ್ ಎಲ್ ಪ್ರಮುಖ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮಣೂರಿನ ಪ್ರಭಾಕರ್ ಇವರುಗಳಿಗೆ ನೀಡಿ ಗೌರವಿಸಲಾಯಿತು. ಕೋಟ ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ ಸಿ. ಕುಂದರ್, ಉದ್ಯಮಿ ಮೊಳಹಳ್ಳಿ ದಿನೇಶ್ ಹೆಗ್ಡೆ,ದಸಂಸ ಅಂಬೇಡ್ಕರ್ ವಾದ ರಾಜ್ಯ ಸಂಘಟನಾ ಸಂಚಾಲಕ ಸುಂದರ್ ಮಾಸ್ತರ್,ಕೋಟ ಸಿಎ ಬ್ಯಾಂಕ್ ಅಧ್ಯಕ್ಷ ಡಾ. ಕೃಷ್ಣ ಕಾಂಚನ್,ದಸಂಸ ಮೈಸೂರು ವಿಭಾಗೀಯ ಸಂಘಟನಾ  ಸಂಚಾಲಕ ಶ್ಯಾಮರಾಜ್ ಬಿರ್ತಿ, ಜಿಲ್ಲಾ ಪ್ರಧಾನ ಸಂಚಾಲಕ ಟಿ.ಮಂಜುನಾಥ್ ಗಿಳಿಯಾರು ಸೇರಿದಂತೆ ಅನೇಕರು ಉಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ. ಬೈಂದೂರು: ಪ್ರಧಾನಮಂತ್ರಿ ಮತ್ಸಸಂಪದ ಯೋಜನೆಯಡಿ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಉಪ್ಪುಂದ ಗ್ರಾಮದಲ್ಲಿ ಸುಮಾರು ಎರಡು ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ‘ವಿವಿದ್ದೋದ್ದೇಶ ಮೀನುಗಾರಿಕಾ ಕೇಂದ್ರ’ಕ್ಕೆ ಉಪ್ಪುಂದ ಅರಮಕೋಡಿ ಶ್ರೀಈಶ್ವರ ದೇವಸ್ಥಾನದ ಪರಿಸರದಲ್ಲಿ ಶಿವಮೊಗ್ಗ ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ದೇಶದ ಪ್ರಗತಿಗೆ ಆಧಾರವಾಗಿರುವ ಮೀನುಗಾರರು ಪರಿಶ್ರಮದ ಜತೆಗೆ ಶ್ರದ್ಧೆಯಿಂದ ಕೆಲಸ ಮಾಡುತ್ತಿರುವುದು ಶ್ಲಾಘನೀಯ. ಪ್ರಧಾನಿ ನರೇಂದ್ರ ಮೋದಿ ಅವರ ಆಶಯದಂತೆ ಉಪ್ಪುಂದದಲ್ಲಿ ವಿವಿಧೋದ್ದೇಶ ಮೀನುಗಾರಿಕಾ ಕೇಂದ್ರ ನಿರ್ಮಾಣಕ್ಕೆ ಅವಕಾಶ ನೀಡಲಾಗಿದೆ ಎಂದರು. ಈ ಭಾಗದ ಮೂಲ ಸೌಕರ್ಯ ಹಾಗೂ ಧಾರ್ಮಿಕ ಪ್ರವಾಸೋದ್ಯಮ ಕ್ಷೇತ್ರ ಮತ್ತಷ್ಟು ಬಲಗೊಳ್ಳಲಿದೆ. ಕೇಂದ್ರ ಸರಕಾರದ ಯೋಜನೆಗಳನ್ನು ತಳಮಟ್ಟದ ಜನರಿಗೂ ತಲುಪಿಸಿ, ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಸದಾ ಬದ್ಧರಾಗಿದ್ದೇವೆ ಎಂದು ಹೇಳಿದರು. ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅಧ್ಯಕ್ಷತೆ ವಹಿಸಿದ್ದರು. ಇದೇ ಸಂದರ್ಭ ದೇವಸ್ಥಾನದ ಹಾಗೂ ಮೀನುಗಾರರ ವತಿಯಿಂದ ಸಂಸದರನ್ನು ಶಾಸಕರನ್ನು ಹಾಗೂ ಗುತ್ತಿಗೆದಾರರನ್ನು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ರಕ್ತದಾನ ಮಾಡುವುದು ಪುಣ್ಯದ ಕಾರ್ಯ. ಇಂದಿನ ಈ ರಜಾದಿನಗಳಲ್ಲಿ ರಕ್ತದಾನ ಮಾಡುವವರ ಸಂಖ್ಯೆ ಕಡಿಮೆಯಿದೆ. ಕುಂದಾಪುರ ರೆಡ್‌ಕ್ರಾಸ್ ರಕ್ತನಿಧಿ ಕೇಂದ್ರದಲ್ಲಿ ಪ್ರತಿನಿತ್ಯ 20-25 ಯೂನಿಟ್ ರಕ್ತದ ಬೇಡಿಕೆ ಇದೆ. ರಕ್ತದ ಬೇಡಿಕೆ ಹೆಚ್ಚಿದೆ ಜೊತೆಗೆ ರಕ್ತನಿಧಿ ಕೇಂದ್ರಗಳಲ್ಲಿ ರಕ್ತದ ಕೊರತೆ ಕೂಡ ಇದೆ. ಒಂದು ಯೂನಿಟ್ ರಕ್ತ ದಾನ ಮಾಡುವುದರಿಂದ ಮೂರು ಜೀವ ಉಳಿಸಲು ಸಾಧ್ಯವಾಗುತ್ತದೆ. ಆದ್ದರಿಂದ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡುವ ಮೂಲಕ ಪುಣ್ಯದ ಕೆಲಸದಲ್ಲಿ ಕೈಜೋಡಿಸಬೇಕು ಎಂದು ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿ ಕುಂದಾಪುರ ಘಟಕದ ಕಾರ್ಯದರ್ಶಿ ಸತ್ಯನಾರಾಯಣ ಪುರಾಣಿಕ್ ಹೇಳಿದರು. ಅವರು ಯಕ್ಷಾಭಿಮಾನಿ ರಕ್ತದಾನಿಗಳ ಬಳಗ ಗಂಗೊಳ್ಳಿ ಇದರ 17ನೇ ವರ್ಷದ ಶ್ರೀ ಕ್ಷೇತ್ರ ಧರ್ಮಸ್ಥಳ ಪಾದಯಾತ್ರೆ ಪ್ರಯುಕ್ತ ಗಂಗೊಳ್ಳಿ ಟೌನ್ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಗಂಗೊಳ್ಳಿ, ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ಉಡುಪಿ, ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿ ರಕ್ತನಿಧಿ ಕೇಂದ್ರ ಕುಂದಾಪುರ ಇವರ ಸಹಯೋಗದೊಂದಿಗೆ ಗಂಗೊಳ್ಳಿಯ ಶ್ರೀ ವೀರ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಶಿಕ್ಷಣವೇ ಸಮಾಜದ ಅಭಿವೃದ್ಧಿಗೆ ಮೂಲ ಆಧಾರವಾಗಿದ್ದು, ಯಾವುದೇ ಕಾರಣಕ್ಕೂ ಮಕ್ಕಳನ್ನು ಶಿಕ್ಷಣದಿಂದ ವಂಚಿತರನ್ನಾಗಿ ಮಾಡಬಾರದು ಎಂದು ಕೋಟ ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ ಸಿ. ಕುಂದರ್ ಹೇಳಿದರು. ಅವರು ಭಾನುವಾರ ಕೋಟ ಸಿಎ ಬ್ಯಾಂಕ್ ಬಿ.ಸಿ ಹೊಳ್ಳ ಸಭಾಂಗಣದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಹೋಬಳಿ ಘಟಕ ಕೋಟ ಇವರ ಆಶ್ರಯದಲ್ಲಿ ನಡೆದ ‘ಅಕ್ಷರದಕ್ಕರೆ-2026’ಕಾರ್ಯಕ್ರಮದಲ್ಲಿ ಉಚಿತ ನೋಟ್‌ಬುಕ್ ವಿತರಣೆ ಹಾಗೂ ಪ್ರತಿಭಾ ಪುರಸ್ಕಾರ ನೆರವೇರಿಸಿ ಅವರು ಮಾತನಾಡಿದರು. 27 ವರ್ಷಗಳಿಂದ ನಿರಂತರವಾಗಿ ಸಮಾಜಮುಖಿ ಕಾರ್ಯಗಳನ್ನು ನಡೆಸಿಕೊಂಡು ಬರುತ್ತಿರುವ ಸಂಸ್ಥೆಯ ಸೇವೆಯನ್ನು ಅವರು ಶ್ಲಾಘಿಸಿದರು. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 625 ಕ್ಕೆ 625 ಅಂಕ ಗಳಿಸಿದ ಸಾಧಕ ವಿದ್ಯಾರ್ಥಿ ಪ್ರೀತಮ್ ಪೂಜಾರಿ ಅವರ ಸಾಧನೆ ಇತರ ವಿದ್ಯಾರ್ಥಿಗಳಿಗೆ ಸ್ಪೂರ್ತಿದಾಯಕವಾಗಿದೆ ಎಂದರು. ಮಕ್ಕಳ ಭವಿಷ್ಯಕ್ಕೆ ಶಿಕ್ಷಣವೇ ಶಾಶ್ವತ ಸಂಪತ್ತಾಗಿದ್ದು, ಅದನ್ನು ಯಾರೂ ಕಸಿದುಕೊಳ್ಳಲು ಸಾಧ್ಯವಿಲ್ಲ. ಜಾತಿ-ಮತ ಭೇದ ಮರೆತು ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರಕುವಂತೆ ಸಮಾಜ ಒಗ್ಗಟ್ಟಿನಿಂದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಶನಿವಾರ ಆಳ್ವಾಸ್ ನುಡಿಸಿರಿ ವೇದಿಕೆಯಲ್ಲಿ ಆಯೋಜಿಸಲಾದ ಪದವಿ ಪ್ರದಾನ ಸಮಾರಂಭದಲ್ಲಿ ಆಳ್ವಾಸ್‌ನ ವಿವಿಧ ಶಿಕ್ಷಣ ಸಂಸ್ಥೆಗಳ 2,627 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಕಾರ್ಯಕ್ರಮ ನಡೆಯಿತು.   ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಹಾವೇರಿಯ ಕರ್ನಾಟಕ ಜಾನಪದ ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಡಾ. ಚಿನ್ನಪ್ಪ ಗೌಡ ಪದವೀಧರರನ್ನು ಉದ್ದೇಶಿಸಿ ಮಾತನಾಡಿ, ಶಿಕ್ಷಣದ ನಿಜವಾದ ಉದ್ದೇಶವು ಕೇವಲ ಪದವಿ ಪಡೆಯುವುದಲ್ಲ, ಉತ್ತಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳುವುದಾಗಿದೆ. ಪದವಿ ಪ್ರಮಾಣಪತ್ರವು ಕೇವಲ ಒಂದು ಕಾಗದದ ತುಣುಕಾಗಿದ್ದು, ಅದಕ್ಕೆ ನಿಜವಾದ ಮೌಲ್ಯ ದೊರೆಯುವುದು ವ್ಯಕ್ತಿಯ ಜ್ಞಾನ, ಸಾಮರ್ಥ್ಯ, ಪ್ರಾಮಾಣಿಕತೆ ಹಾಗೂ ಜೀವನ ಮೌಲ್ಯಗಳಿಂದ ಮಾತ್ರ ಎಂದು ಅವರು ಅಭಿಪ್ರಾಯಪಟ್ಟರು. ಶಿಕ್ಷಣವು ಕೇವಲ ಶೈಕ್ಷಣಿಕ ಸಾಧನೆಗಳಿಗೆ ಸೀಮಿತವಲ್ಲ. ವಿದ್ಯಾರ್ಥಿಗಳು ಕಲಿಕೆಯ ಅವಧಿಯಲ್ಲಿ ರೂಪಿಸಿಕೊಂಡ ವ್ಯಕ್ತಿತ್ವ, ಜೀವನ ಮೌಲ್ಯಗಳು ಹಾಗೂ ಸಾಮಾಜಿಕ ಬದ್ಧತೆಯೇ ಅವರ ನಿಜವಾದ ಗುರುತು. ಆಳ್ವಾಸ್ ಶಿಕ್ಷಣ ಸಂಸ್ಥೆಗಳು ಶಿಕ್ಷಣ ಕ್ಷೇತ್ರದಲ್ಲಿ ವಿಶಿಷ್ಟ ಛಾಪನ್ನು ಮೂಡಿಸಿವೆ. ಆಳ್ವಾಸ್…

Read More