ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಕ್ರೀಡೆಗಳಲ್ಲಿ ಪಾಲ್ಗೊಳ್ಳುವುದರಿಂದ ದೈಹಿಕ ಹಾಗೂ ಮಾನಸಿಕ ಶಕ್ತಿ ವೃದ್ಧಿಯಾಗುತ್ತದೆ. ನಾಯಕತ್ವ ಗುಣಗಳನ್ನು ಬೆಳೆಸುವಲ್ಲಿ ಕ್ರೀಡೆಗಳು ಸಹಕಾರಿಯಾಗುತ್ತದೆ. ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸಿ ಕ್ರೀಡಾ ಸ್ಫೂರ್ತಿಯಿಂದ ಕ್ರೀಡೆಯಲ್ಲಿ ಪಾಲ್ಗೊಳ್ಳಬೇಕು ಎಂದು ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಜಯಂತಿ ಖಾರ್ವಿ ಹೇಳಿದರು. ಅವರು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿ ಉಡುಪಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕುಂದಾಪುರ ಹಾಗೂ ಎಸ್.ವಿ. ಆಂಗ್ಲ ಮಾಧ್ಯಮ ಶಾಲೆ ಗಂಗೊಳ್ಳಿ ಇವರ ಜಂಟಿ ಆಶ್ರಯದಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ಜರಗಿದ ಉಡುಪಿ ಜಿಲ್ಲಾ ಮಟ್ಟದ 14 ಮತ್ತು 17ರ ವಯೋಮಿತಿಯ ಬಾಲಕ ಬಾಲಕಿಯರ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟವನ್ನು ಶನಿವಾರ ಉದ್ಘಾಟಿಸಿ ಮಾತನಾಡಿದರು. ಜಿ.ಎಸ್.ವಿ.ಎಸ್. ಅಸೋಸಿಯೇಶನ್ ಅಧ್ಯಕ್ಷ ಡಾ. ಕಾಶೀನಾಥ ಪೈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶಾಲೆಯ ಸಂಚಾಲಕ ಎನ್. ಸದಾಶಿವ ನಾಯಕ್ ಮತ್ತು ರೋಟರಿ ಕ್ಲಬ್ ಗಂಗೊಳ್ಳಿ ಅಧ್ಯಕ್ಷ ಕೃಷ್ಣ ಪೂಜಾರಿ ಶುಭ ಹಾರೈಸಿದರು. ಕುಂದಾಪುರ ವಲಯ ದೈಹಿಕ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉಡುಪಿ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೈಂದೂರು ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಆಲೂರು ಇವರ ಜಂಟಿ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ 14ರ ಅಯೋಮಾನದ ಬಾಲಕಿಯರ ಥ್ರೋಬಾಲ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ಬಾಲಕಿಯರ ತಂಡವು ಪ್ರಥಮ ಸ್ಥಾನಗಳಿಸಿ ಚಿಕ್ಕಮಗಳೂರಿನಲ್ಲಿ ನಡೆಯುವ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಅವರಿಗೆ, ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜಿನ ವಾರ್ಷಿಕೋತ್ಸವನ್ನು ಇತ್ತೀಚಿಗೆ ಆಚರಿಸಲಾಯಿತು.ಕೋಟೇಶ್ವರ ಸರಕಾರಿ ಪಿಯು ಕಾಲೇಜಿನಪ್ರಾಂಶುಪಾಲರಾದ ಪ್ರಕಾಶ ಶೆಟ್ಟಿ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿ, ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ವಿದ್ಯಾಭ್ಯಾಸದ ಜೊತೆಗೆ ಪಠ್ಯೇತರ ಚಟುವಟಿಕೆಗಳ ಮಹತ್ವವನ್ನು ಒತ್ತಿ ಹೇಳಿದರು. ವಿದ್ಯಾರ್ಥಿಗಳು ಕೇವಲ ಓದಿನಲ್ಲಿ ಮಾತ್ರ ಸೀಮಿತವಾಗದೇ, ಸಾಂಸ್ಕೃತಿಕ ಕಾರ್ಯಕ್ರಮಗಳು, ಕ್ರೀಡೆಗಳು ಮತ್ತು ಇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಐಎಂಜೆ ವಿದ್ಯಾ ಸಂಸ್ಥೆಗಳ ಶೈಕ್ಷಣಿಕ ನಿರ್ದೇಶಕರಾದ ಡಾ. ಎಸ್. ಎನ್. ಭಟ್ ಅವರು ಕಾಲೇಜಿನ ಸಾಧನೆ ಮತ್ತು ಪ್ರಗತಿಯನ್ನು ಹೊಗಳಿದರಲ್ಲದೇ ಕಾರ್ಯಕ್ರಮಕ್ಕೆ, ವಿಧ್ಯಾರ್ಥಿಗಳಿಗೆ ಶುಭಹಾರೈಸಿದರು. ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಪ್ರಾರಂಭಿಸಲಾಯಿತು. ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಜೆನ್ನಿಫರ್ ಫ್ರೀಡಾ ಮೆನೇಜಸ್, ಉಪ ಪ್ರಾಂಶುಪಾಲರಾದ ರೂಪಶ್ರೀ ಕೆ.ಎಸ್ ಮತ್ತು. ಎಸ್ ಎನ್ ಎ ಸಂಯೋಜಕ ಚಂದ್ರಶೇಖರ್ ಉಪಸ್ಥಿತರಿದ್ದರು. ಸಭಾ ಕಾರ್ಯಕ್ರಮದಲ್ಲಿ ವಿಶಿಷ್ಟ ದರ್ಜೆ ಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು ಮತ್ತು ವಿಶಿಷ್ಟ ಸಾಧಕರುಗೌರವಿಸಲ್ಪಟ್ಟರು. ಶೈಕ್ಷಣಿಕ, ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕೌಟುಂಬಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದ ಕಾನೂನು ಕ್ರಮಗಳನ್ನು ಕುರಿತು ತಳಮಟ್ಟದಲ್ಲಿಯೇ ಅರಿವು ಮೂಡಿಸುವ ಮೂಲಕ ಮಹಿಳೆಯರ ಮತ್ತು ಮಕ್ಕಳ ಮೇಲಾಗುವ ದೌರ್ಜನ್ಯ ಪ್ರಕರಣಗಳನ್ನು ಗಣನೀಯವಾಗಿ ಕಡಿಮೆ ಮಾಡಲು ಅಗತ್ಯ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅಧಿಕಾರಿಗಳಿಗೆ ಸೂಚಿಸಿದರು. ಅವರು ಗುರುವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ಮಟ್ಟದ ವಿವಿಧ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯ ಸಖಿ ಒನ್ ಸ್ಟಾಪ್ ಹಾಗೂ ಸಾಂತ್ವನ ಕೇಂದ್ರಗಳಲ್ಲಿ ಹಲವು ವರ್ಷಗಳಿಂದ ಇತ್ಯರ್ಥವಾಗದೆ ಬಾಕಿ ಉಳಿದಿರುವ ದೌರ್ಜನ್ಯ ಪ್ರಕರಣಗಳನ್ನು ವೈಯಕ್ತಿಕ ಗಮನಹರಿಸಿ ಶೀಘ್ರವಾಗಿ ವಿಲೇವಾರಿ ಮಾಡುವುದರೊಂದಿಗೆ ಪ್ರಕರಣಗಳಿಗೆ ತಾರ್ಕಿಕ ಅಂತ್ಯ ಒದಗಿಸಬೇಕು ಎಂದರು. ಜಿಲ್ಲೆಯಲ್ಲಿ ಸಖಿ ಒನ್ ಸ್ಟಾಪ್ ಕೇಂದ್ರದಲ್ಲಿ ಅಕ್ಟೋಬರ್ ಮಾಹೆವರೆಗೆ 180 ಪ್ರಕರಣಗಳು ದಾಖಲಾಗಿದ್ದು, 121 ಪ್ರಕರಣಗಳು ಇತ್ಯರ್ಥವಾಗಿ,. 20 ಪ್ರಕರಣಗಳು ನ್ಯಾಯಾಲಯದಲ್ಲಿ, 8 ಪ್ರಕರಣಗಳು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಲ್ಲಿ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಬೀದಿ ನಾಯಿಗಳಿಂದ ಸಾರ್ವಜನಿಕರಿಗೆ ಅಪಾಯ ಉಂಟಾಗದಂತೆ ಅಗತ್ಯವಿರುವ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲು ಮಾನ್ಯ ಸರ್ವೋಚ್ಛ ನ್ಯಾಯಾಲಯವು ನಿರ್ದೇಶನ ನೀಡಿದ್ದು, ಅವುಗಳ ಪಾಲನೆ ಮಾಡಿ, ವರದಿ ನೀಡಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚನೆ ನೀಡಿದರು. ಅವರು ನಗರದ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬೀದಿ ನಾಯಿಗಳ ಹಾವಳಿ ಮತ್ತು ನಿರ್ವಹಣೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸರ್ವೋಚ್ಛ ನ್ಯಾಯಾಲಯದ ಆದೇಶದಂತೆ ಬೀದಿ ನಾಯಿಗಳ ಹಾವಳಿ ನಿಯಂತ್ರಿಸಲು ನಾಯಿಗಳ ಸಂತಾನಶಕ್ತಿ ಹರಣ ಶಸ್ತ್ರಚಿಕಿತ್ಸೆ, ರೇಬಿಸ್ ಲಸಿಕೆ ನೀಡುವ ಕಾರ್ಯಕ್ರಮಗಳನ್ನು ರೂಪಿಸಬೇಕು. ಶಸ್ರ್ತ ಚಿಕಿತ್ಸೆಯ ನಂತರ ನಾಯಿಗಳನ್ನು ಅದೇ ಸ್ಥಳಕ್ಕೆ ವಾಪಾಸು ಬಿಡಬೇಕು. ರೇಬೀಸ್ ಕಾಯಿಲೆ, ಸಂಶಯಾಸ್ಪದ ರೋಗ ಪೀಡಿತ ಆಕ್ರಮಣಕಾರಿ ನಡತೆ ಇರುವ ನಾಯಿಗಳನ್ನು ಆಶ್ರಯ ತಾಣಗಳಿಗೆ ಬಿಡಬೇಕು. ಸಹಾಯವಾಣಿ ಸ್ಥಾಪನೆ ಹಾಗೂ ಪ್ರದರ್ಶನವನ್ನು ಮಾಡಬೇಕು. ಆಶ್ರಯ ತಾಣಗಳಲ್ಲಿ ಸ್ವಚ್ಚತೆ, ಆಹಾರ, ನೀರು, ನೆರಳು,ಪಶು ವೈದ್ಯಕೀಯ ಚಿಕಿತ್ಸೆಗಳನ್ನು ಒದಗಿಸಬೇಕು ಎಂದ ಅವರು, ಪ್ರಾಣಿಗಳ ಹಾಗೂ ನಾಗರಿಕರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಹರಿಯಾಣದಲ್ಲಿ ನವೆಂಬರ್ 26 ರಿಂದ 30ರವರೆಗೆ ನಡೆಯಲಿರುವ ಪದವಿ ಪೂರ್ವ ಕಾಲೇಜುಗಳ ರಾಷ್ಟ್ರ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟಕ್ಕೆ ಆಳ್ವಾಸ್ ಪದವಿ ಪೂರ್ವ ಕಾಲೇಜಿನ 12 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಬಾಲಕರ ವಿಭಾಗದಲ್ಲಿ:ಸಮರ್ಥ್ – 1500ಮೀ, ಆಕಾಶ್ ಹುಕ್ಕೇರಿ – 400ಮೀ ಹರ್ಡಲ್ಸ್, ಮನೀಶ್ – ತ್ರಿವಿಧ ಜಿಗಿತ, ರೂಪೇಶ್ ಲಮನಿ – ಪೋಲೊ ವಾಲ್ಟ್ ಬಾಲಕಿಯರ ವಿಭಾಗದಲ್ಲಿ:ನಾಗಿಣಿ – 800ಮೀ, 1500ಮೀ, ಗುಡ್ಡಗಾಡು ಓಟ, 4*400ಮೀ ರಿಲೇ ಚರಿಷ್ಮಾ – 3000ಮೀ, 1500ಮೀ, ಗುಡ್ಡಗಾಡು ಓಟ, 4*400ಮೀ ರಿಲೇ, ಗೋಪಿಕಾ ಜಿ – 100ಮೀ, 4*100ಮೀ ರಿಲೇ, ಮಾನ್ವಿ ವಿ ಶೆಟ್ಟಿ – 4*100ಮೀ ರಿಲೇ, ಭಾನವಿ – 4*100ಮೀ ರಿಲೇ, ವೈಷ್ಣವಿ – 4*100ಮೀ ರಿಲೇ, ನಿರ್ಮಲಾ – 400ಮೀ ಹರ್ಡಲ್ಸ್, 4*400ಮೀ ರಿಲೇ, ಜಾನಕಿ ಜಿ ಸಿ – 400ಮೀ ಹರ್ಡಲ್ಸ್, 4*400ಮೀ ರಿಲೇ ಆಯ್ಕೆಯಾದ ಕ್ರೀಡಾಪಟುಗಳನ್ನು ಸಂಸ್ಥೆಯ ಅಧ್ಯಕ್ಷ ಡಾ. ಎಂ.ಮೋಹನ ಆಳ್ವ ಅಭಿನಂದಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜನಸಾಮಾನ್ಯರಿಗೆ ಉತ್ತಮ ಆರೋಗ್ಯ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ಅನೇಕ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಜಾರಿಗೆ ತರಲಾಗಿದೆ. ಇದನ್ನು ಪೂರ್ಣ ಪ್ರಮಾಣದಲ್ಲಿ ಅನುಷ್ಠಾನಗೊಳಿಸುವುದರೊಂದಿಗೆ ಜನರು ಉತ್ತಮ ಆರೋಗ್ಯ ವಹಿಸುವಂತೆ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಆರೋಗ್ಯ ಇಲಾಖೆಯ ವಿವಿಧ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಾರ್ವಜನಿಕರು ಯಾವುದೇ ರೋಗ ಬಂದು ಚಿಕಿತ್ಸೆ ಪಡೆಯುವ ಬದಲು ರೋಗಗಳು ಹರಡದಂತೆ ಜನಸಾಮಾನ್ಯರಲ್ಲಿ ಆರೋಗ್ಯ ಶಿಕ್ಷಣದ ಬಗ್ಗೆ ತಿಳಿಸಿ ಅಗತ್ಯ ಮುನ್ನೆಚ್ಚರಿಕಾ ಕ್ರಮ ತೆಗೆದುಕೊಳ್ಳುವ ಬಗ್ಗೆ ಪ್ರಚಾರ ಪಡಿಸಬೇಕು. ಒಂದೊಮ್ಮೆ ರೋಗದ ಲಕ್ಷಣಗಳು ಕಂಡು ಬಂದ ಕೂಡಲೇ ಸಮೀಪದ ಆರೋಗ್ಯ ಕೇಂದ್ರ ಅಥವಾ ಆಸ್ಪತ್ರೆಗಳಿಗೆ ಭೇಟಿ ನೀಡಿ ಅವುಗಳ ಬಗ್ಗೆ ಚಿಕಿತ್ಸೆ ಪಡೆಯುವಂತೆ ನೋಡಿಕೊಳ್ಳುವುದು ಆರೋಗ್ಯ ಇಲಾಖೆಯ ಅಧಿಕಾರಿಗಳು, ನೌಕರರು ಹಾಗೂ ಆಶಾ ಕಾರ್ಯಕರ್ತರುಗಳು ಕ್ರಮವಹಿಸಬೇಕು ಎಂದರು. ಹೆಣ್ಣು ಮಕ್ಕಳು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ಕ್ಷೇತ್ರವು ಬಹುತೇಕ ಅರಣ್ಯ ಪ್ರದೇಶಗಳನ್ನು ಹೊಂದಿದ್ದು ಸಾಮಾನ್ಯ ಅರಣ್ಯ ಪ್ರದೇಶ ಸೇರಿದಂತೆ ಮೀಸಲು ಅರಣ್ಯ, ಸಾಮಾಜಿಕ ಅರಣ್ಯ ಹಾಗೂ ಕೆಸಿಡಿಸಿ ವ್ಯಾಪ್ತಿ ದೊಡ್ಡದಿರುವ ಕಾರಣ ಗ್ರಾಮೀಣ ಪ್ರದೇಶಗಳಲ್ಲಿ ಅಭಿವೃದ್ಧಿ ಯೋಜನೆಗಳು ಜಾರಿಯಾದ ಸಂದರ್ಭದಲ್ಲಿ ಅರಣ್ಯ ಇಲಾಖೆಯಿಂದ ಅಗತ್ಯ ನಿರಾಕ್ಷೇಪಣೆ ಪಡೆಯಲು ಅವಕಾಶವಿದ್ದರೂ, ಅರಣ್ಯ ಕಾನೂನಿನ ಅರ್ಥೈಸುವಿಕೆ ಹಾಗೂ ಪರಿವೆಷಿ ತಂತ್ರಾಂಶಗಳ ಬಳಕೆ ಬಗ್ಗೆ ಅನುಷ್ಠಾನ ಇಲಾಖೆಗಳಿಗೆ ಮಾಹಿತಿ ಕೊರತೆಯ ಕಾರಣದಿಂದ ಯೋಜನೆಗಳು ನೆನೆಗುದಿಗೆ ಬಿದ್ದು ರದ್ದುಗೊಳ್ಳುವ ಸಂದರ್ಭವಿರುವುದರಿಂದ ಅದನ್ನು ತಡೆಗಟ್ಟಲು ಮುಂದಿನ ದಿನಗಳಲ್ಲಿ ಅರಣ್ಯ ಅದಾಲತ್ ಮಾದರಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಶೆಟ್ಟಿ ಗಂಟಿಹೊಳೆ ಹೇಳಿದರು. ಅವರು ತಾಲೂಕು ಆಡಳಿತ ಕಚೇರಿ ಪ್ರಜಾ ಸೌಧದಲ್ಲಿ ಕುಂದಾಪುರ ಉಪ ವಿಭಾಗಾಧಿಕಾರಿಯವರ ಸಮಕ್ಷಮ ಬೈಂದೂರು ಕ್ಷೇತ್ರದ ವಿವಿಧ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಅರಣ್ಯ, ಕಂದಾಯ ಹಾಗೂ ಇತರೆ ಇಲಾಖೆಗಳ ಜೊತೆ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಕೊಲ್ಲೂರು ಗ್ರಾಮದ ಸ. ನಂ 121…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಮಕ್ಕಳು ಸಿಕ್ಕ ಅವಕಾಶಗಳನ್ನು ಬಳಸಿಕೊಂಡು ಬೆಳೆಯಬೇಕು. ಅಂತಹ ಸಾಧಕ ಮಕ್ಕಳನ್ನು ಅತಿಥಿಗಳಾಗಿ ಮಾಡಿ. ಮಕ್ಕಳ ಹಬ್ಬ ಮಾಡಿದಾಗ ಇತರೆ ವಿದ್ಯಾರ್ಥಿಗಳಿಗೂ ಸ್ಫೂರ್ತಿಯಾಗುತ್ತದೆ ಎಂದು ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಮಾಜಿ ಸಂಸದರಾದ ಕೆ. ಜಯಪ್ರಕಾಶ್ ಹೆಗ್ಡೆ ನುಡಿದರು. ಅವರು ಹೆಸಕುತ್ತೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಲಾಗಿದ್ದ ಮಕ್ಕಳ ಹಬ್ಬದ ಸಡಗರ ಸಿಂಗಾರದಲ್ಲಿ ಭಾಗವಹಿಸಿ ಮಾತನಾಡಿದರು. ಕಾರ್ಯಕ್ರಮವನ್ನು ಕಾಂತಾರ ಚಾಪ್ಟರ್ 1 ಸಿನಿಮಾದ ಬಾಲನಟಿ ಸಮೀಕ್ಷ ಸುರೇಶ ಹಕ್ಲಾಡಿ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ವಿದ್ಯಾರ್ಥಿ ನಾಯಕಿ ಆರಾಧನಾ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಶಾಲಾ ಉಪ ನಾಯಕ ಅದ್ವಿತ್ ವಿ. ಶೆಟ್ಟಿ, ಶಾಲಾ ವಿಪಕ್ಷ ನಾಯಕಿ ರನ್ಯಾ, ಶಾಲಾ ಸಾಂಸ್ಕೃತಿಕ ಸಚಿವರಾದ ಕನಿಷ್ಕ, ಆರಾಧ್ಯ ಎಂ.ಪಿ. ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಸಮೀಕ್ಷ ಸುರೇಶ್ ಹಕ್ಲಾಡಿ ಅವರನ್ನು ಕೆ. ಜಯಪ್ರಕಾಶ್ ಹೆಗಡೆಯವರು ಸನ್ಮಾನಿಸಿದರು. ಕುಂದಾಪುರ ತಾಲೂಕು ಅಕ್ಷರ ದಾಸೋಹದ ಸಹಾಯಕ ನಿರ್ದೇಶಕರಾದ ಚಂದ್ರ ನಾಯ್ಕ್ ಶುಭ ಹಾರೈಸಿದರು. ಹಾಗೆಯೇ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಡಿಸೆಂಬರ್ 21 ರಂದು ನಡೆಯುವ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ 0-5 ಒಳಗಿನ ಜಿಲ್ಲೆಯ ಎಲ್ಲಾ ಮಕ್ಕಳಿಗೂ ಪೋಷಕರು ತಪ್ಪದೇ ಪಲ್ಸ್ ಪೋಲಿಯೋ ಲಸಿಕೆ ಹಾಕಿಸುವಂತೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಕರೆ ನೀಡಿದರು. ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದ ಜಿಲ್ಲಾ ಲಸಿಕಾ ಕಾರ್ಯಪಡೆ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಾಷ್ಟ್ರೀಯ ಪಲ್ಸ್ ಪೊಲೀಯೋ ಕಾರ್ಯಕ್ರಮದಡಿಯಲ್ಲಿ ಡಿಸೆಂಬರ್ 21 ರ ಭಾನುವಾರದಂದು 0-5 ವರ್ಷದೊಳಗಿನ ಮಕ್ಕಳಿಗೆ ಜಿಲ್ಲೆಯ ಸುಮಾರು 660 ಲಸಿಕಾ ಕೇಂದ್ರಗಳಲ್ಲಿ ಪೊಲೀಯೋ ಹನಿಗಳನ್ನು ಹಾಕಲಾಗುವುದು ಎಂದ ಅವರು, ಯಾವುದೇ ಮಕ್ಕಳು ಪಲ್ಸ್ ಪೊಲೀಯೋ ಲಸಿಕೆಯಿಂದ ತಪ್ಪಿ ಹೋಗದಂತೆ ನೋಡಿಕೊಳ್ಳಬೇಕು ಎಂದರು. ಜಿಲ್ಲೆಯ ಗ್ರಾಮಾಂತರ ಪ್ರದೇಶಗಳಲ್ಲಿ 53,595 ಹಾಗೂ ನಗರ ಪ್ರದೇಶಗಳಲ್ಲಿ 13,545 ಸೇರಿದಂತೆ ಒಟ್ಟು 67,140 ಐದು ವರ್ಷದೊಳಗಿನ ಮಕ್ಕಳನ್ನು ಈಗಾಗಲೇ ಗುರುತಿಸಲಾಗಿದೆ. ಇವರುಗಳಿಗೆ ಲಸಿಕೆಗಳನ್ನು ನೀಡಲು ಗ್ರಾಮೀಣ ಹಾಗೂ…
