ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕೇರಳ ರಾಜ್ಯ ಕನ್ನಡ ಭಾಷಾ ಅಲ್ಪ ಸಂಖ್ಯಾತರ ಸಾಂಸ್ಕೃತಿಕ ಮತ್ತು ಸಾಹಿತ್ಯಿಕ ಸಂಘಟನೆಯಾದ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ರಿ.,ಕನ್ನಡ ಗ್ರಾಮ, ಕಾಸರಗೋಡು ಇದರ ನೇತೃತ್ವದಲ್ಲಿ ಕಳೆದ 36 ವರ್ಷಗಳಿಂದ ಕೇರಳ ರಾಜ್ಯದ ಕನ್ನಡ ಭಾಷೆ,ಸಾಹಿತ್ಯ, ಸಂಸ್ಕೃತಿ,ಇತಿಹಾಸ ಪರಂಪರೆಯನ್ನು ಅಂತರ ರಾಜ್ಯದ್ಯಂತ ಕನ್ನಡ ಜನತೆಗೆ ತಲುಪಿಸುವ ಉದ್ದೇಶದಿಂದ ಕೇರಳ, ಕರ್ನಾಟಕ ಹಾಗೂ ಅಖಿಲ ಭಾರತ ಮತ್ತು ಆನಿವಾಸಿ ಭಾರತೀಯ ಕನ್ನಡಿಗರು, ಕಲಾವಿದರು, ಸಾಹಿತಿಗಳನ್ನು ಆಮಂತ್ರಿಸಿ ರಾಜ್ಯ, ರಾಷ್ಟ್ರೀಯ, ಅಂತರ ರಾಷ್ಟ್ರೀಯ ಮಟ್ಟದಲ್ಲಿ ಸಾಧಕರನ್ನು ಗುರುತಿಸಿ ಪ್ರೋತ್ಸಾಹಿಸುವ ಉದ್ದೇಶದಿಂದ ಸಾಂಸ್ಕೃತಿಕ ವಿನಿಮಯಕ್ಕಾಗಿ ಕಾಸರಗೋಡಿನ ಮೀಪುಗುರಿ- ಪಾರೆಕಟ್ಟೆಯ ಕಾಸರಗೋಡು ಕನ್ನಡ ಗ್ರಾಮದಲ್ಲಿ 2026 ನವಂಬರ್ 7ಮತ್ತು 8ರಂದು ಐತಿಹಾಸಿಕ ಕೇರಳ ರಾಜ್ಯ 8ನೇ ಕನ್ನಡ ಸಮ್ಮೇಳನ- 2026 ಮತ್ತು ಕೇರಳ- ಕರ್ನಾಟಕ ಉತ್ಸವ ಕೇರಳ – ಕರ್ನಾಟಕ ಕನ್ನಡ ರಾಜ್ಯೋತ್ಸವವನ್ನು ಏರ್ಪಡಿಸಲಾಗಿದೆ. ಕೇರಳ ರಾಜ್ಯ ಕನ್ನಡ ಸಮ್ಮೇಳನದಲ್ಲಿ ಉದ್ಘಾಟನೆ ಹಾಗೂ ವಿವಿಧ ಕಲಾ ಪುಸ್ತಕ, ವಸ್ತು ಪ್ರದರ್ಶನಗಳ ಉದ್ಘಾಟನೆ, ಹೊಸ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ರಾಜಧಾನಿಯ ಹಿರಿಯ ಸಂಘಟನೆಯಾದ ವಿ. ಕೆ. ಎಂ. ಕಲಾವಿದರು ರಿ., ಬೆಂಗಳೂರು ಇದರ ನೇತೃತ್ವದಲ್ಲಿ ಕರ್ನಾಟಕ ಸರಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ಇದರ ಸಹಕಾರದಲ್ಲಿ ನಡೆದ ಡಾ. ಬಿ. ಆರ್. ಅಂಬೇಡ್ಕರ್ ಹಾಗೂ ಬಾಬು ಜಗಜೀವನ ರಾಂ ಸ್ಮಾರಕ ನಾಟಕೋತ್ಸವ ಹಾಗೂ ಸಾಂಸ್ಕೃತಿಕ ಕಲಾಮೇಳ – ರಂಗೋತ್ಸವ ಮತ್ತು ನಿರಂತರ 45ನೇ ವರ್ಷದ ಕಾರ್ಯಕ್ರಮವು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ 2026 ಜೂನ್ 8 ರಿಂದ 10ರ ತನಕ ನಡೆಯಿತು. ಇದರ ಸಮಾರೋಪ ಸಮಾರಂಭದಲ್ಲಿ ಗಡಿನಾಡು ಕಾಸರಗೋಡಿನ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ರಿ., ಕನ್ನಡ ಗ್ರಾಮ, ಕಾಸರಗೋಡು ಇದರ 35ನೇ ಸಂಸ್ಥಾಪನಾ ವರ್ಷಾಚರಣೆಯನ್ನು ಯಶಸ್ವಿಯಾಗಿ ಪೂರೈಸಿರುವುದಕ್ಕಾಗಿ, ಕಾಸರಗೋಡು ಕನ್ನಡ ಗ್ರಾಮದ ಸಂಸ್ಥಾಪಕ ಶಿವರಾಮ ಕಾಸರಗೋಡು ಅವರಿಗೆ ಕರ್ನಾಟಕ ಗಡಿನಾಡು ಸಂಘಟನಾಗಾರರಾಗಿ 35 ವರ್ಷದ ಸೇವೆಗಾಗಿ ಪ್ರತಿಷ್ಠಿತ ಕರ್ನಾಟಕ ಗಡಿನಾಡು ಸಂಘಟನಾ ಪ್ರಶಸ್ತಿಯನ್ನು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ನಿಕಟಪೂರ್ವ ಅಧ್ಯಕ್ಷ ಡಾ.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಶಿಕ್ಷಣ ಕ್ಷೇತ್ರದಲ್ಲಿ ನಿರಂತರ ಸಾಧನೆಯ ಮೂಲಕ ಜಿಲ್ಲೆಯ ಕೀರ್ತಿಯನ್ನು ರಾಜ್ಯಮಟ್ಟದಲ್ಲಿ ಎತ್ತಿಹಿಡಿದಿರುವ ಯಡ್ತರೆ ನಾರಾಯಣ ಬಿಲ್ಲವ ಹಾಗೂ ಶಾರದ ದಂಪತಿಗಳ ಪುತ್ರ ಸುಶಾನ್ ಅವರು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 4ನೇ ರ್ಯಾಂಕ್ ಗಳಿಸುವ ಮೂಲಕ ಮತ್ತೊಮ್ಮೆ ಅಪೂರ್ವ ಸಾಧನೆ ಮೆರೆದಿದ್ದಾರೆ. ಅವರ ಈ ಸಾಧನೆಗೆ ಅಭಿನಂದನೆಗಳ ಮಹಾಪೂರವೇ ಹರಿದುಬಂದಿದ್ದು, ವಿದ್ಯಾರ್ಥಿಯ ಸಾಧನೆಯನ್ನು ಗೌರವಿಸುವ ನಿಟ್ಟಿನಲ್ಲಿ ಉಪ್ಪುಂದದ ಕಲ್ಯಾಣಿ ಪರಮೇಶ್ವರ ಭಟ್ ಟ್ರಸ್ಟ್ ರಿಜಿಸ್ಟರ್ಡ್ ಬೆಂಗಳೂರು ವತಿಯಿಂದ ಅವರ ಸ್ವಗೃಹದಲ್ಲಿ ವಿಶೇಷ ಅಭಿನಂದನಾ ಹಾಗೂ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಯಿತು. ಮಂಗಳೂರಿನ ಪ್ರತಿಷ್ಠಿತ ಎಕ್ಸ್‌ಪರ್ಟ್ ಪದವಿ ಪೂರ್ವ ಕಾಲೇಜಿನಲ್ಲಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿರುವ ಸುಶಾನ್ ಅವರು ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳಿಗೆ 596 ಅಂಕಗಳನ್ನು ಗಳಿಸಿ ರಾಜ್ಯ ಮಟ್ಟದಲ್ಲಿ 4ನೇ ಸ್ಥಾನ ಪಡೆದುಕೊಂಡಿದ್ದಾರೆ. ಅತ್ಯುತ್ತಮ ಅಂಕಗಳೊಂದಿಗೆ ರಾಜ್ಯದ ಶ್ರೇಷ್ಠ ವಿದ್ಯಾರ್ಥಿಗಳ ಸಾಲಿನಲ್ಲಿ ಸ್ಥಾನ ಪಡೆದಿರುವ ಅವರು, ತಮ್ಮ ಕಠಿಣ ಪರಿಶ್ರಮ, ಸಮಯಪಾಲನೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕೋಡಿ ಕನ್ಯಾಣದಲ್ಲಿ ಇತ್ತೀಚೆಗೆ ಪಚ್ಚಿಲೆ ಕ್ಷೇತ್ರೋತ್ಸವ ಕೋಡಿ ಕನ್ಯಾಣದ ಸೇತುವೆ ಸಮೀಪ ಜರುಗಿತು. ಕ್ಷೇತ್ರೋತ್ಸವವನ್ನು ಉಡುಪಿ ಕಿನಾರ ಮೀನುಗಾರರ ಉತ್ಪಾದಕ ಕಂಪನಿ ನಿಯಮಿತ, ಅಮೃತೇಶ್ವರಿ ರೈತ ಉತ್ಪಾದಕ ಕಂಪನಿ ನಿಯಮಿತ, ಗೋವಾದ ಕರಾವಳಿ ಕೃಷಿ ಸಂಶೋಧನಾ ಸಂಸ್ಥೆ ಜಲಾನಯನ ಅಭಿವೃದ್ಧಿ ಇಲಾಖೆ, ಕೃಷಿ ಇಲಾಖೆ-ಉಡುಪಿ, ಮೀನುಗಾರಿಕೆ ಇಲಾಖೆ-ಉಡುಪಿ, ಭಾ.ಕೃ.ಅ.ಪ. ಕೃಷಿ ವಿಜ್ಞಾನ ಕೇಂದ್ರ-ಬ್ರಹ್ಮಾವರ, ಅರಬ್ಬಿ ಸಮುದ್ರ ಮೀನುಗಾರಿಕೆ ನಿರ್ವಹಣೆ ಸಮನ್ವಯ ಸಮಿತಿ, ಕೆನರಾ ಬ್ಯಾಂಕ್, ಯುಕೋ ಬ್ಯಾಂಕ್, ಸ್ಕೋಡ್‌ವೆಸ್ ಸಂಸ್ಥೆ ಮತ್ತು ಆಯುಷ್ಮಾನ್‌ಭವ ಸಂಸ್ಥೆಗಳು ಜಂಟಿಯಾಗಿ ಆಯೋಜಿಸಿತು. ಬ್ರಹ್ಮಾವರ ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಹಾಗೂ ಹಿರಿಯ ವಿಜ್ಞಾನಿ ಡಾ. ಧನಂಜಯ ಅವರು ಪಚ್ಚಿಲೆಯ ಚಿಪ್ಪನ್ನು ಬಿಡಿಸುವ ಮೂಲಕ ಈ ಕ್ಷೇತ್ರೋತ್ಸವಕ್ಕೆ ಅಧಿಕೃತ ಚಾಲನೆ ನೀಡಿದರು. ಆದಾಯ ಹೆಚ್ಚಳಕ್ಕೆ ಹೊಸ ತಳಿಗಳ ಕೃಷಿ ಅಗತ್ಯ:ಕಾರ್ಯಕ್ರಮದಲ್ಲಿ ಮಾತನಾಡಿದ ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿ ಡಾ. ಧನಂಜಯ ಮೀನುಗಾರರು ಸಾಂಪ್ರದಾಯಿಕ ಪದ್ಧತಿಯ ಜೊತೆಗೆ ಹೊಸ ತಳಿಗಳ ಮೀನು ಕೃಷಿಯತ್ತ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಗಂಗೊಳ್ಳಿಯ ಪೇಟೆ ಶ್ರೀ ವಿಠ್ಠಲ ರಕುಮಾಯಿ ತಥಾ ಮುಖ್ಯಪ್ರಾಣ ದೇವಸ್ಥಾನದಲ್ಲಿ ಪುರುಷೋತ್ತಮ ಮಾಸದ ಅಂಗವಾಗಿ ಶ್ರೀದೇವರ ಪ್ರೀತ್ಯರ್ಥವಾಗಿ ಹಾಗೂ ಸಾನಿಧ್ಯ ಅಭಿವೃದ್ಧಿಗಾಗಿ ಶ್ರೀ ವಿಷ ಸಹಸ್ರನಾಮ ಹವನ, ತತ್ವ ಮಂತ್ರ ಹವನ, ಮಾತೃಕಾ ಮಂತ್ರ ಹವನ, ಶ್ರೀ ವಿಠ್ಠಲ ಮೂಲ ಮಂತ್ರ ಹವನ, ಶ್ರೀ ವೆಂಕಟೇಶ ಮೂಲ ಮಂತ್ರ ಹವನ, ಹನುಮಂತ ಮೂಲ ಮಂತ್ರ ಹವನ, ಗರುಡ ಮೂಲ ಮಂತ್ರ ಹವನ ಬುಧವಾರ ನಡೆಯಿತು. ಬೆಳಿಗ್ಗೆ ದೇವತಾ ಪ್ರಾರ್ಥನೆಯೊಂದಿಗೆ ಹವನದ ಧಾರ್ಮಿಕ ವಿಧಿವಿಧಾನಗಳು ಆರಂಭಗೊಂಡಿತು. ದೇವಳದ ಪ್ರಧಾನ ಅರ್ಚಕ ಜಿ.ಮೋಹನದಾಸ ಭಟ್, ಜಿ. ಪ್ರದೀಪ್ ಭಟ್ ಮತ್ತು ತಾಂತ್ರಿಕ ಜಿ. ರಾಘವೇಂದ್ರ ಆಚಾರ್ಯ ನೇತೃತ್ವದಲ್ಲಿ ಪುರೋಹಿತರಿಂದ ಹವನದ ಧಾರ್ಮಿಕ ಕಾರ್ಯಕ್ರಮಗಳು ಶಾಸ್ತ್ರೋಕ್ತಕವಾಗಿ ಸಂಪನ್ನಗೊಂಡಿತು. ಮಧ್ಯಾಹ್ನ ಪೂರ್ಣಾಹುತಿ, ಶ್ರೀದೇವರಿಗೆ ಮಹಾಪೂಜೆ, ಬ್ರಾಹ್ಮಣ ಪೂಜೆ ಹಾಗೂ ಮಹಾಸಮಾರಾಧನೆ ನಡೆಯಿತು. ದೇವಳದ ಆಡಳಿತ ಮೊಕ್ತೇಸರ ಜಿ.ನರಸಿಂಹ ನಾಯಕ್, ಆಡಳಿತ ಮಂಡಳಿ ಸದಸ್ಯರು, ಅರ್ಚಕರು, ಸೇವಾದಾರರು, ಊರಿನ ಹತ್ತು ಸಮಸ್ತರು, ಸಮಾಜ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮೊಳಹಳ್ಳಿ ದಿನೇಶ್ ಹೆಗ್ಡೆ ಜಯರತ್ನ ಟ್ರಸ್ಟ್ ರಿ, ಮೊಳಹಳ್ಳಿ ಇವರ ಆಶ್ರಯದಲ್ಲಿ ರಾಜ್ಯಮಟ್ಟದಲ್ಲಿ ಶೈಕ್ಷಣಿಕ ಸಾಧನೆಗೈದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ರಾಜ್ಯ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಕ್ರೀಡಾ ಸಾಧನೆಗೈದ ಕ್ರೀಡಾಪಟುಗಳಿಗೆ ಗೌರವ ಸನ್ಮಾನ, ಮೊಳಹಳ್ಳಿ ಗ್ರಾಮದ ವಿಶಿಷ್ಟ ಶೈಕ್ಷಣಿಕ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ ಹಾಗೂ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣಾ ಕಾರ್ಯಕ್ರಮವು ಬಿದ್ಕಲ್ ಕಟ್ಟೆಯ ಕರ್ನಾಟಕ ಪಬ್ಲಿಕ್ ಸ್ಕೂಲ್ (ಪ್ರೌಢಶಾಲಾ ವಿಭಾಗ)ನಲ್ಲಿ ನಡೆಯಿತು. ಕಾರ್ಯಕ್ರಮ ಉದ್ಘಾಟಿದ ನಿವೃತ್ತ ಪ್ರಾಂಶುಪಾಲರಾದ ಎಂ. ಬಾಲಕೃಷ್ಣ ಶೆಟ್ಟಿ ಮಾತನಾಡಿ, ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟ್ ಪುಸ್ತಕ ವಿತರಣೆ ಹಾಗೂ ವಿದ್ಯಾರ್ಥಿವೇತನ ನೀಡುವ ಮೂಲಕ ಟ್ರಸ್ಟ್ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುತ್ತಿರುವುದು ಶ್ಲಾಘನೀಯ ಕಾರ್ಯವಾಗಿದೆ. ಸಾಧನೆಗೈದ ವಿದ್ಯಾರ್ಥಿಗಳು ಭವಿಷ್ಯದಲ್ಲಿ ಸಮಾಜಕ್ಕೆ ತಮ್ಮದೇ ಆದ ಕೊಡುಗೆ ನೀಡಬೇಕೆಂಬ ಸಂದೇಶವನ್ನು ಟ್ರಸ್ಟ್ ನೀಡುತ್ತಿದೆ ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಟ್ರಸ್ಟ್‌ನ ಸಂಸ್ಥಾಪಕರಾದ ಮೊಳಹಳ್ಳಿ ದಿನೇಶ್ ಹೆಗ್ಡೆ ವಹಿಸಿದ್ದರು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸುರಭಿ ರಿ. ಬೈಂದೂರು ಮತ್ತು ಚಿತ್ತಾರ ಹಳ್ಳಿಹೊಳೆ ಇವರ ಸಂಯುಕ್ತ ಆಶಯದಲ್ಲಿ ಬೈಂದೂರು ಜಾತ್ರೆಯ ಪ್ರಯುಕ್ತ ಇತ್ತೀಚಿಗೆ ನಡೆದ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಗಂಗೊಳ್ಳಿಯ ಸಂಜಿತ್ ಎಂ. ದೇವಾಡಿಗ ಪ್ರಥಮ ಸ್ಥಾನವನ್ನು ಪಡೆದಿರುತ್ತಾನೆ. ಈತ ಗಂಗೊಳ್ಳಿಯ ಚಿತ್ರ ಕಲಾವಿದ ಮಾಧವ ದೇವಾಡಿಗ ಹಾಗೂ ಉಪನ್ಯಾಸಕಿ ಸಾವಿತ್ರಿ ಎಸ್. ದಂಪತಿಯ ಪುತ್ರ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಕೆದೂರು ಸರಕಾರಿ ಪ್ರೌಢಶಾಲೆಯಲ್ಲಿ ಆರೋಗ್ಯ ಮಾಹಿತಿ ಕಾರ್ಯಕ್ರಮವು ಮಂಗಳವಾರ ನಡೆಯಿತು. ಪ್ರಾಥಮಿಕ ಅರೋಗ್ಯ ಕೇಂದ್ರ ಕೆದೂರು ಇಲ್ಲಿನ ವೈದ್ಯಾಧಿಕಾರಿ ಡಾ. ರಾಜೇಶ್ವರಿ ಅವರು ವಿದ್ಯಾರ್ಥಿಗಳಿಗೆ ಮಳೆಗಾಲದಲ್ಲಿ ಬರುವ ಆರೋಗ್ಯ ಸಮಸ್ಯೆಗಳ ಕುರಿತು ವಿವರಿಸಿ, ನಮ್ಮನ್ನು ನಾವು ಹೇಗೆ ರಕ್ಷಿಸಿಕೊಳ್ಳಬೇಕು ಎಂಬುದನ್ನು ತಿಳಿಸಿದರು. ವಿದ್ಯಾರ್ಥಿ ವಿದ್ಯಾರ್ಥಿನಿಯರು ಹೇಗೆ ವೈಯಕ್ತಿಕ ಸ್ವಚ್ಛತೆಯನ್ನು ಕಾಪಾಡಿಕೊಳ್ಳಬೇಕು ಎಂದು ಮಾಹಿತಿ ನೀಡಿದರು. ಆರೋಗ್ಯವೇ ಭಾಗ್ಯ ಎಂಬುದನ್ನು ಎಲ್ಲರೂ ಅರಿತು ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು. ಈ ಸಂದರ್ಭದಲ್ಲಿ ದಾನಿಗಳಾದ ಆನಂದ್ ಸಿ. ಕುಂದರ್ ಗೀತಾನಂದ ಫೌಂಡೇಶನ್ ಮಣೂರು, ಪಡುಕೆರೆ ಅವರು ನೀಡಿದ ಉಚಿತ ನೋಟ್ ಬುಕ್ ಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಮಹಿಳಾ ಆರೋಗ್ಯ ಸಹಾಯಕಿ ಶಾಂತಾ ಹಾಗೂ ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಶಾಲೆಯ ಮುಖ್ಯೋಪಾಧ್ಯಾಯರಾದ ಉದಯ ಕುಮಾರ್ ಶೆಟ್ಟಿ ಅವರು ಪ್ರಾಸ್ತಾವಿಕ ಮಾತುಗಳನ್ನಾಡಿ ಅತಿಥಿಗಳನ್ನು ಸ್ವಾಗತಿಸಿದರು. ಶಿಕ್ಷಕ ರಮೇಶ್ ಕುಲಾಲ್ ಎನ್. ಕಾರ್ಯಕ್ರಮ ನಿರೂಪಿಸಿ, ಶಿಕ್ಷಕಿ ದೀಪಾವತಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಪೌರಾಣಿಕ ಪ್ರಜ್ಞೆ – ವೈಚಾರಿಕ ಧೋರಣೆ – ವ್ಯವಸ್ಥಿತ ನಿರೂಪಣೆ – ಪರಿಸರ ಜಾಗೃತಿಗಳ ಸಮಷ್ಟಿ ಚಿಂತನೆಯ ಫಲವಾಗಿ ಮೂಡಿ ಬಂದ ಅಪೂರ್ವ ಕೃತಿ ’ಆದರ್ಶ ಮಾನವʼ. ಕೃಷ್ಣನನ್ನು ಈ ರೀತಿ ಕಂಡವರು ಕೌನ್ಜೂರು ಚಂದ್ರಶೇಖರ ಅಡಿಗರು ಎಂದೆನ್ನುತ್ತಾ ಉಡುಪಿ ಪೂರ್ಣಪ್ರಜ್ಞ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ. ಎ.ಪಿ. ಭಟ್ಟರು ಕೌನ್ಜೂರು ಚಂದ್ರಶೇಖರ ಅಡಿಗರ ಕೃತಿ ಲೋಕಾರ್ಪಣೆಗೈದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ಇತ್ತೀಚಿಗೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕೋಟದ ಮಿತ್ರ ಮಂಡಳಿ ಕೃತಿ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ’ಕಥೆ ಹೇಳುವುದಕ್ಕಿಂತ ಲೇಖಕರದ್ದು ಧಾರ್ಮಿಕ ದತ್ತ ಚಿತ್ತ’ದ ಬಗೆಗೆ ಸುಮನ ಆರ್. ಹೇರಳೆ, ಜಾಣ್ಮೆ’ಯ ಕುರಿತು ಡಾ. ಸರಿತಾ ಸಾಲಿಗ್ರಾಮ, ’ಕೃಷ್ಣನ ಆದರ್ಶ ಮಾನವತ್ವ’ದ ಬಗೆಗೆ ಮಹಾಲಕ್ಷ್ಮಿ ಸೋಮಯಾಜಿ ಅವರು ಮಾತನಾಡಿ, ಕೃತಿಯನ್ನು ಪರಿಚಯಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ನೀಲಾವರ ಸುರೇಂದ್ರ ಅಡಿಗ ವಹಿಸಿ ಸ್ವಾಗತಿಸಿ, ಕ.ಸಾ.ಪ. ಸಂಸ್ಥಾಪಕ ನಾಲ್ವಡಿ ಕೃಷ್ಣರಾಜ ಒಡೆಯರ ಅದ್ಭುತ ಕಾರ್ಯಕ್ಷಮತೆಯನ್ನು ಕೊಂಡಾಡಿದರು.…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್ ಪೇಮೆಂಟ್ ಐಡೆಂಟಿಟಿ ಸೊಲ್ಯೂಷನ್ಸ್ ಲಿಮಿಟೆಡ್ ನಲ್ಲಿ ಜೂನ್ 12ರಂದು ಬೆಳಗ್ಗೆ 10.30ಕ್ಕೆ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ನಡೆಯಲಿದೆ. ಡಿಪ್ಲೋಮಾ, ಐ.ಟಿ.ಐ. ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 8105618291, 9945856670 ಹಾಗೂ 9901472710 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಕಚೇರಿ ಪ್ರಕಟಣೆ ತಿಳಿಸಿದೆ
