Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಮುಂದಿನ ಪೀಳಿಗೆಗೆ ನಾವು ಪರಿಶುದ್ಧ ಪ್ರಕೃತಿಯನ್ನು ಬಿಟ್ಟುಹೋಗಬೇಕು. ಅಂತಹ ಮಹಾನ್‌ ಕಾರ್ಯವನ್ನು ಮುನಿಯಾಲು ಸಂಜೀವಿನಿ ಗೊಧಾಮದ ಮೂಲಕ ರಾಮಕೃಷ್ಣ ಆಚಾರ್ಯರು ಮಾಡುತ್ತಿದ್ದಾರೆ ಎಂದು ಮಹಾರಾಷ್ಟ್ರ ಕೊಲ್ಲಾಪುರ ಸಿದ್ದಗಿರಿ ಮಠದ  ಪೂಜ್ಯಶ್ರೀ ಅದೃಶ್ಯ ಕಾಡಸಿದ್ದೇಶ್ವರ ಮಹಾಸ್ವಾಮೀಜಿ ನುಡಿದರು. ಅವರು ಮುನಿಯಾಲು ಸಂಜೀವಿನಿ ಗೋಧಾಮದಲ್ಲಿ ಪಾರಂಪರಿಕ ಸಂಪ್ರದಾಯದಂತೆ ದೊಂದಿ ಬೆಳಕಿನಲ್ಲಿ ನಡೆಯುವ ಭಕ್ತಿಭಾವಪೂರ್ಣ ಏಕಪವಿತ್ರ ಶ್ರೀಮನ್ನಾಗಮಂಡಲದಲ್ಲಿ ಶುಕ್ರವಾರ ಸಂಜೆ ಶ್ರೀನಿವಾಸ ಸಭಾಮಂಟಪದಲ್ಲಿ ರೈತಪೀಠ ಪ್ರಶಸ್ತಿಯನ್ನು ಪ್ರದಾನ ಸಡಗರದಲ್ಲಿ ಆಶೀರ್ವಚನ ನೀಡಿದರು. ಕೃಷಿಯಿಂದಲೇ ದೇಶದ ಭವ್ಯ ಬೆಳವಣಿಗೆ ಸಾಧ್ಯವಿದೆ. ಅದು ಮುಂದಿನ ಅನಿವಾರ್ಯ ಕೂಡ ಆಗಲಿದೆ, ಅಂತಹ ಮಹಾನ್‌ ಕಾರ್ಯಗಳು ನಮ್ಮಿಂದಲೇ ಆರಂಭವಾಗಬೇಕು, ಪ್ರಕೃತಿ ನಾಶ ಮಾಡಿದರೆ, ಮನುಷ್ಯ ನಾಶವಾದಂತೆ. ಪ್ರಕೃತಿ ಚೆನ್ನಾಗಿದ್ದರೆ ನಾವೆಲ್ಲರೂ ಚೆನ್ನಾಗಿದ್ದೇವೆ ಎಂದರ್ಥ. ಪ್ರಕೃತಿಯನ್ನು ನಾಶ ಮಾಡಿ ಬೆಳವಣಿಗೆ ಎನ್ನುವುದು ಹುಚ್ಚುತನ. ನಮ್ಮ ಕ್ಷಣಿಕ ಸಂತೋಷಕ್ಕೆ ಮುಂದಿನ ಪೀಳಿಗೆಗೆ ನಾವೇನು ಕೊಡುಗೆ ನೀಡುತ್ತೇವೆ. ಮಣ್ಣು, ನೀರು, ಗಾಳಿ, ಬೆಂಕಿ, ಆಕಾಶ ಈ ಶುದ್ಧವಾಗಿರಬೇಕು. ಗೋಧಾಮದಲ್ಲಿ ಕೃಷಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕುಂದಾಪುರ ತಾಲೂಕು ಘಟಕದ 2025-28ನೇ ಸಾಲಿನ ನೂತನ ಅಧ್ಯಕ್ಷರಾಗಿ ಯು ಚಾನೆಲ್ ನ ನಾಗರಾಜ ರಾಯಪ್ಪನಮಠ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ವಿಜಯ ಕರ್ನಾಟಕದ ಗಣೇಶ್ ಬೀಜಾಡಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಚುನಾವಣಾಧಿಕಾರಿಯಾಗಿರುವ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಸಮಿತಿ ಸದಸ್ಯರಾದ ಅಸ್ಟ್ರೋ ಮೋಹನ್ ಅವರ ಅಧ್ಯಕ್ಷತೆಯಲ್ಲಿ ಶನಿವಾರ ಕುಂದಾಪುರದ ಕೋಯ ಕುಟ್ಟಿ ಹಾಲ್ ನಲ್ಲಿ ನಡೆದ ಚುನಾವಣೆಯಲ್ಲಿ ಈ ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರುಗಳಾಗಿ ಉದಯವಾಣಿಯ ಸತೀಶ್ ಆಚಾರ್ ಮತ್ತು ಕುಂದ ಪ್ರಭದ ಸಂತೋಷ್ ಕುಂದೇಶ್ವರ, ಕೋಶಾಧಿಕಾರಿಯಾಗಿ ಕನ್ನಡ ಪ್ರಭಾದ ಶ್ರೀಕಾಂತ್ ಹೆಮ್ಮಾಡಿ, ಕಾರ್ಯದರ್ಶಿಗಳಾಗಿ ವಿಜಯವಾಣಿಯ ಮಂಜುನಾಥ ಶೆಣೈ ಜನ್ನಾಡಿ ಹಾಗೂ ದಾಯ್ಜಿ ವಲ್ಡ್೯ ನ ರಾಘವೇಂದ್ರ ಬಿ. ಮತ್ತು ಕಾರ್ಯಕಾರಿಣಿ ಸಮಿತಿ ಸದಸ್ಯರುಗಳಾಗಿ ಪ್ರಶಾಂತ್ ಪಾದೆ, ನಾಗರಾಜ ವಂಡ್ಸೆ, ಶ್ರೀಕರ್ ಎಸ್., ಸತೀಶ್ ಎಂ.ಬಿ., ವಿನಯ ಪಾಯಸ್, ಎಂ. ನಿತ್ಯಾನಂದ, ಸಂತೋಷ್ ಶೆಟ್ಟಿ, ಜಗದೀಶ್ ಅವಿರೋಧವಾಗಿ ಆಯ್ಕೆಯಾದರು. ಚುನಾವಣಾ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಬದುಕಿನಲ್ಲಿ ಎರಿಳಿತಗಳು ಸಹಜ. ಸಾಂಸ್ಕೃತಿಕ ಕ್ಷೇತ್ರದ ಪಯಣಗಳು ಜೀವನಾನುಭವ ನೀಡುತ್ತದೆ. ಮಾತ್ರವಲ್ಲದೆ ನನ್ನಂಥ ಸಾವಿರಾರು ಜನರಿಗೆ ಬದುಕು ನೀಡಿದೆ. ನೂರಾರು ಶ್ರೇಷ್ಟ ಪ್ರಶಸ್ತಿಗಳನ್ನು ಪಡೆದಿದ್ದರು ಸಹ ಜನರ ನಡುವೆ ಗುರುತಿಸಿ ದೊರೆಯುವ ಗೌರವ ಅತೀ ಶ್ರೇಷ್ಟವಾಗಿರುತ್ತದೆ. ಬಿಂದುಶ್ರೀ ಪ್ರಶಸ್ತಿ ಸಾರ್ಥಕತೆಯ ಸಂತೃಪ್ತಿಯಾಗಿದೆ. ಜೀವನದ ಕೊನೆ ಉಸಿರಿರುವ ತನಕ ಕಲಾ ಸೇವೆಯ ಮೂಲಕ ಸಮಾಜದ ಋಣ ತೀರಿಸುವ ಜವಬ್ದಾರಿ ಇದೆ ಎಂದು ರಂಗಭೂಮಿ ಕಲಾವಿದೆ ಹಾಗೂ ಹಿರಿಯ ಚಲನಚಿತ್ರ ನಟಿ ಉಮಾಶ್ರೀ ಹೇಳಿದರು. ಅವರು ಸುರಭಿ ರಿ. ಬೈಂದೂರು ಸಾಂಸ್ಕೃತಿಕ, ಸಾಹಿತ್ಯ ಸೇವಾ ಪ್ರತಿಷ್ಠಾನ ಇದರ 26ನೇ ವರ್ಷದ ಅಂಗವಾಗಿ ದಿ. ಹೊಸಾಡು ಸುಬ್ರಾಯ ಶೇರುಗಾರ್ ಸಂಸ್ಮರಣಿಯ ಸಾಂಸ್ಕೃತಿಕೋತ್ಸವದ ಪ್ರಯುಕ್ತ ಬೈಂದೂರು ಶಾರದಾ ವೇದಿಕೆಯಲ್ಲಿ ಎರಡನೇ ದಿನದ ಸುರಭಿ ಜೈಸಿರಿ 2026ನೇ ಸಾಲಿನ ಬಿಂದುಶ್ರೀ ಪ್ರಶಸ್ತಿ ಪ್ರದಾನ ಸ್ವೀಕರಿಸಿ ಮಾತನಾಡಿದರು. ಬೈಂದೂರು ಶಾಸಕ ಗುರುರಾಜ ಗಂಟೆಯೊಳ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಉದ್ಯಮಿ ಕೃಷ್ಣಮೂರ್ತಿ ಮಂಜರು ಮಾರಣಕಟ್ಟೆ,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಮಾನವ ಸಂಪನ್ಮೂಲ ಅಭಿವೃದ್ಧಿ ಕೇಂದ್ರ ಬೆಂಗಳೂರು ಇವರು ಅಯೋಜಿಸಿದ ಅಖಿಲ ಭಾರತ ಸಾಮಾನ್ಯ ಜ್ಞಾನ ಪರೀಕ್ಷೆಯಲ್ಲಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಾದ ಅಪೂರ್ವ ವೈಷ್ಣವಿ (3ನೇ ಸ್ಥಾನ) ಹಾಗೂ ಸುಕೃತಿ ಪಡಿಯಾರ್ (7ನೇ ಸ್ಥಾನ) ವನ್ನು ಪಡೆದಿರುತ್ತಾರೆ. ಅವರಿಗೆ ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಯುತ್ ರೆಡ್ ಕ್ರಾಸ್ ಘಟಕದ ವತಿಯಿಂದ “ಸಂಕಲ್ಪದಿಂದ ವಿಜಯದೆಡೆಗೆ- ಭಾರತೀಯ ತಂತ್ರಜ್ಞಾನದ ಉತ್ಕರ್ಷ” ಎಂಬ ವಿಷಯದ ಕುರಿತಾಗಿ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ರಕ್ಷಣಾ ಸಚಿವಾಲಯದ ಡಿಆರ್‌ಡಿಓ ಸಂಸ್ಥೆಯ ಜಯಪ್ರಕಾಶ್ ರಾವ್ ಅವರು ಭಾಗವಹಿಸಿ ವಿದ್ಯಾರ್ಥಿಗಳಿಗೆ ಪ್ರೇರಣಾದಾಯಕ ಸಂದೇಶ ನೀಡಿದರು. ಅವರು ಭಾರತದಲ್ಲಿ ರಕ್ಷಣಾ ವಲಯದ ವೇಗವಾದ ಅಭಿವೃದ್ಧಿ, ಆಧುನಿಕ ತಂತ್ರಜ್ಞಾನಗಳ ಬಳಕೆ ಹಾಗೂ “ಆಪರೇಷನ್ ಸಿಂಧೂರ್” ಕುರಿತು ವಿವರಿಸಿದರು. ದೇಶ ಸೇವೆಗೆ ಯುವಕರು ರಕ್ಷಣಾ ಪಡೆಗಳಿಗೆ ಸೇರುವಂತೆ ಕರೆ ನೀಡಿದರು. ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಅವರು ಭಾರತದ ಯುವಕರನ್ನು ಹೇಗೆ ಪ್ರೋತ್ಸಾಹಿಸಿದರು ಎಂಬುದನ್ನು ಉದಾಹರಿಸಿ, ವಿದ್ಯಾರ್ಥಿಗಳು ಕನಸು ಕಾಣಬೇಕು ಮತ್ತು ಅದನ್ನು ಸಾಧಿಸಲು ಪರಿಶ್ರಮಿಸಬೇಕು ಎಂದು ತಿಳಿಸಿದರು. ವೇದಿಕೆಯಲ್ಲಿ ಪ್ರಾಂಶುಪಾಲರಾದ ಡಾ. ಪ್ರತಿಭಾ ಎಂ. ಪಟೇಲ್, ಬಿಸಿಎ ವಿಭಾಗದ ಮುಖ್ಯಸ್ಥೆ ಶ್ರೀಮತಿ ಸ್ವರ್ಣ ರಾಣಿ, ಉಪನ್ಯಾಸಕ ಸಂಯೋಜಕಿ ಶ್ರೀಮತಿ ಭಾರತಿ ಗಾಣಿಗ, ವಿದ್ಯಾರ್ಥಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಕರ್ನಾಟಕ ಮಾಧ್ಯಮ ಅಕಾಡೆಮಿಯು ಮೈಸೂರು ವಿಭಾಗ ಮಟ್ಟದ ಪತ್ರಕರ್ತರಿಗೆ ಸಂವಿಧಾನ ಮತ್ತು ಪತ್ರಿಕೋದ್ಯಮ, ಫ್ಯಾಕ್ಟ್ ಚೆಕ್ ಹಾಗೂ ಬದಲಾಗುತ್ತಿರುವ ಪತ್ರಿಕೋದ್ಯಮದಲ್ಲಿ ಭಾಷೆ ಬಳಕೆ ಕುರಿತಂತೆ ಫೆಬ್ರವರಿ 27ರಂದು, ಕೊಡಗಿನಲ್ಲಿ ಒಂದು ದಿನದ ತರಬೇತಿ ಕಾರ್ಯಕ್ರಮ ಆಯೋಜಿಸಿದೆ. ಸದ್ಬಳಕೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಈ ತರಬೇತಿ ಸಹಕಾರಿಯಾಗಲಿದೆ. ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಇಚ್ಚಿಸುವ ಮೈಸೂರು ವಿಭಾಗದ (ಮೈಸೂರು, ಮಂಡ್ಯ, ಹಾಸನ, ಚಾಮರಾಜನಗರ, ಕೊಡಗು, ಚಿಕ್ಕಮಗಳೂರು, ದಕ್ಷಿಣ ಕನ್ನಡ ಹಾಗೂ ಉಡುಪಿ) ಜಿಲ್ಲೆಯ ಪತ್ರಕರ್ತರು ಗೂಗಲ್ ಫಾರ್ಮ್ https://forms.gle/ZJ4X7NjBodXmzeUu5  ನ್ನು ಭರ್ತಿ ಮಾಡಿ ಅರ್ಜಿ ಸಲ್ಲಿಸುವ ಅವಧಿಯನ್ನು ಫೆಬ್ರವರಿ 22ರ ವರೆಗೆ ವಿಸ್ತರಿಸಲಾಗಿದೆ. ತರಬೇತಿಯ ಆಯ್ಕೆ ಕುರಿತಂತೆ ಅಕಾಡೆಮಿಯ ತೀರ್ಮಾನವೇ ಅಂತಿಮ ಎಂದು ಅಕಾಡೆಮಿಯ ಕಛೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಸಾಸ್ತಾನ ಪ್ರಾಥಮಿಕ ಆರೋಗ್ಯ ಕೇಂದ್ರ ಇವರ ಆಶ್ರಯದಲ್ಲಿ ಉಚಿತ ನೇತ್ರ ತಪಾಸಣೆ ಹಾಗೂ ವಾಕ್ ಮತ್ತು ಶ್ರವಣ ತಪಾಸಣಾ ಶಿಬಿರವು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜರಗಿತು. ಕಾರ್ಯಕ್ರಮವನ್ನು ಉಡುಪಿ ಮತ್ತು ಚಿಕ್ಕಮಗಳೂರು ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸಿದರು. ರೋಟರಿ ಕ್ಲಬ್ ಹಂಗಾರಕಟ್ಟೆ ಸಾಸ್ತಾನ ಅಧ್ಯಕ್ಷೆ ಜ್ಯೋತಿ ಉದಯ ಕುಮಾರ್, ಸಾಮಾಜಿಕ ಕಾರ್ಯಕರ್ತ ಐರೋಡಿ ವಿಠ್ಠಲ್ ಪೂಜಾರಿ, ಪಾಂಡೇಶ್ವರ ಗ್ರಾಮಪಂಚಾಯತ್ ಮಾಜಿ ಅಧ್ಯಕ್ಷೆ ಲಿಲಾವತಿ ಗಂಗಾಧರ ಮತ್ತಿತರರು ಉಪಸ್ಥಿತರಿದ್ದರು. ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ. ರಾಘವೇಂದ್ರ ರಾವ್ ಸ್ವಾಗತಿಸಿ, ಪ್ರಾಸ್ತಾವಿಕ ನುಡಿಗಳನ್ನಾಡಿದರು. ಆರೋಗ್ಯ ಕೇಂದ್ರದ ರಜನಿ ಕಾರ್ಯಕ್ರಮ ನಿರೂಪಿಸಿ, ಫಾರ್ಮಸಿ ಅಧಿಕಾರಿ ಸೀಮಾ ಮ್ಯಾಥ್ಯೂ ವಂದಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕೃಷಿಲೋಕ ಮುನಿಯಾಲಿನ ಗೋಧಾಮವನ್ನು ಕಂಡು ಯುವಕರು ಕೃಷಿಯಲ್ಲಿ ತೊಡಗಿ ಸುಂದರ ಬದುಕು ಕಟ್ಟಿಕೊಳ್ಳಬೇಕು ಎಂದು ಪ್ರಕೃತಿಯಿಂದ ಪ್ರಕೃತಿಗೆ ಎಂಬ ವಿನೂತನ ಪರಿಕಲ್ಪನೆಯಲ್ಲಿ‌ ಮುನಿಯಾಲು ಸಂಜೀವಿನಿ ಗೋಧಾಮದಲ್ಲಿ ಫೆಬ್ರವರಿ 21ರ ತನಕ ನಡೆಯುವ ಪಾರಂಪರಿಕ ಸಂಪ್ರದಾಯದಂತೆ ದೊಂದಿ ಬೆಳಕಿನಲ್ಲಿ ನಡೆಯುವ ಭಕ್ತಿಭಾವಪೂರ್ಣ ಏಕಪವಿತ್ರ ಶ್ರೀಮನ್ನಾಗಮಂಡಲಕ್ಕೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳ ಮೂಲಕ ಗುರುವಾರ ಭಕ್ತಿ ವೈಭವದ ಚಾಲನೆ ನೀಡಲಾಯಿತು.  ಮುನಿಯಾಲು ಸಂಜೀವಿನಿ ಗೋಧಾಮದ ಸಂಸ್ಥಾಪಕ ಡಾ. ಜಿ ರಾಮಕೃಷ್ಣ ಆಚಾರ್ ಮತ್ತು ಕುಟುಂಬಸ್ಥರು ವಿದ್ವಾನ್‌ ಕೊರಂಗ್ರಪಾಡಿ ಕುಮಾರಗುರು ತಂತ್ರಿಗಳ ಸಹಿತ ಋತ್ವಿಜರನ್ನು ಸ್ವಾಗತಿಸಿದರು. 6 ಕಾಯಿ ಗಣಯಾಗ, ಉಗ್ರಾಣ ಮುಹೂರ್ತ, ಅನ್ನಾರಾಧನ ಮುಹೂರ್ತ ಸಹಿತ ವಿವಿಧ ಧಾರ್ಮಿಕ ವಿಧಿವಿಧಾನಗಳು ವಿದ್ವಾನ್‌ ಕೊರಂಗ್ರಪಾಡಿ ಕುಮಾರಗುರು ತಂತ್ರಿಗಳ ನೇತ್ರತ್ವದಲ್ಲಿ ವಾಸುದೇವ ಭಟ್‌ ಅವರ ಸಹಯೋಗದಲ್ಲಿ ನಡೆಯಿತು. ಮುನಿಯಾಲು ಸಂಜೀವಿನಿ ಗೋಧಾಮದ ಸಂಸ್ಥಾಪಕ ಡಾ. ಜಿ. ರಾಮಕೃಷ್ಣ ಆಚಾರ್, ಸವಿತಾ ಆರ್‌. ಆಚಾರ್‌, ಅನುಷಾ ಆಚಾರ್‌, ಪ್ರಜ್ವಲ್‌, ಆಚಾರ್‌, ಪೂಜಾ ಆಚಾರ್‌, ತೇಜಸ್‌…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕಠಿಣ ಪರಿಶ್ರಮ ಹಾಗೂ ಪ್ರಯತ್ನ ಬದುಕಿನಲ್ಲಿ ಯಶಸ್ಸು ನೀಡುತ್ತದೆ. ಕಲೆ ಸಂಸ್ಕೃತಿಯನ್ನು ಜೀವಂತವಾಗಿರಿಸಿಕೊಳ್ಳುವುದು ಬಹುಮುಖ್ಯ. ಸುರಭಿ ತನ್ನ ಚಟುವಟಿಕೆಗಳ ಮೂಲಕ ರಾಜ್ಯಮಟ್ಟದಲ್ಲಿ ಗುರುತಿಸಿಕೊಂಡಿದ್ದು ಬೈಂದೂರಿಗೆ ಇನ್ನಷ್ಟು ಹಿರಿಮೆ ತಂದಿದೆ ಎಂದು ಉಪ್ಪುಂದ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಡಾ. ಗೋವಿಂದ ಬಾಬು ಪೂಜಾರಿ ಹೇಳಿದರು. ಅವರು ಶನಿವಾರ ಸುರಭಿ ರಿ. ಬೈಂದೂರು ಇದರ ವಾರ್ಷಿಕ ಉತ್ಸವ ಸುರಭಿ ಜೈಸಿರಿ ಹಾಗೂ ಬಿಂದುಶ್ರೀ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುರಭಿ ಅಧ್ಯಕ್ಷ ಆನಂದ ಮದ್ದೋಡಿ ವಹಿಸಿದ್ದರು. ಅತಿಥಿಗಳಾಗಿ ಮಂಗಳೂರು ವಾಣಿಜ್ಯ ತೆರಿಗೆ ಇಲಾಖೆಯ ಸಹಾಯಕ ಆಯುಕ್ತ ಸತೀಶ್ ಬಟವಾಡಿ, ಉದ್ಯಮಿಗಳಾದ ಶರತ್ ಕುಮಾರ್ ಶೆಟ್ಟಿ, ಬೈಂದೂರು ಶ್ರೀ ಸೇನೇಶ್ವರ ದೇವಳ ವ್ಯವಸ್ಥಾಪನಾ ಸಮಿತಿ ಸದಸ್ಯ ದೊಟ್ಟಯ್ಯ ಪೂಜಾರಿ, ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳ ವ್ಯವಸ್ಥಾಪನಾ ಸಮಿತಿ ಸದಸ್ಯೆ ಧನಾಕ್ಷಿ ವಿಶ್ವನಾಥ ಪೂಜಾರಿ, ಕಸಾಪ ಬೈಂದೂರು ಅಧ್ಯಕ್ಷ ಅರುಣ್ ಕುಮಾರ್, ರೋಟರಿ ಬೈಂದೂರು ನಿಕಟಪೂರ್ವ ಅಧ್ಯಕ್ಷ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಎನ್.ಎಸ್.ಎಸ್. ವಾರ್ಷಿಕ ವಿಶೇಷ ಶಿಬಿರವು ಯಡಾಡಿ – ಮತ್ಯಾಡಿಯ ಶ್ರೀ ವಿನಾಯಕ ಸಭಾಭವನದಲ್ಲಿ ನಡೆಯಿತು. ಈ ವಿಶೇಷ ಶಿಬಿರದ ಶ್ರಮದಾನವನ್ನು ಉದ್ಘಾಟಿಸಿ, ನಿವೃತ್ತ ಮುಖ್ಯ ಶಿಕ್ಷಕರಾದ ಸುಬ್ಬಣ್ಣ ಶೆಟ್ಟಿ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ದಿನೇಶ್ ಯಡಾಡಿ, ರಾಘವ್ ಶೆಟ್ಟಿ, ವಿಮಾ ಪ್ರತಿನಿದಿ ಹಳ್ನಿರು, ರಘುರಾಮ ಶೆಟ್ಟಿ ಯಡಾಡಿ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಯಡಾಡಿ-ಮತ್ಯಾಡಿಯ ಎಸ್.ಡಿ.ಎಂ.ಸಿ. ಸದಸ್ಯರುಗಳಾದ ಸಂತೋಷ್ ಬೂದಾಡಿ, ಗೋಪಾಲ್, ಅರುಣ್, ಭಾಸ್ಕರ್ ಶೆಟ್ಟಿ ಮತ್ಯಾಡಿ, ರಾಘವೇಂದ್ರ ಪ್ರಭು ಗುಡ್ಡೆಯಂಗಡಿ ಉಪಸ್ಥಿತರಿದ್ದರು. ಶಿಭಿರಾಧಿಕಾರಿಗಳಾದ ರಾಜೇಶ್ ಶೆಟ್ಟಿ ವಕ್ವಾಡಿ ಮತ್ತು ಪೂಜಾ ಕುಂದರ್ ಉಪಸ್ಥಿತರಿದ್ದರು. ಎನ್.ಎಸ್.ಎಸ್. ಸ್ವಯಂಸೇವಕರಾದ ಪ್ರಥಮ ಬಿ.ಸಿ.ಎ. ಪ್ರಸನ್ನ ಸ್ವಾಗತಿಸಿ, ದ್ವಿತೀಯ ಬಿ.ಕಾಂ. ಸುಶ್ಮಿತಾ ಶೆಟ್ಟಿ ವಂದಿಸಿ, ದ್ವಿತೀಯ ಬಿ.ಸಿ.ಎ. ಸ್ವಾತಿ ಕಾರ್ಯಕ್ರಮವನ್ನು ನಿರೂಪಿಸಿದರು.

Read More