ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಸವಿತಾ ಸಮಾಜದ ಸಾಮಾಜಿಕ ಕಾರ್ಯಗಳು ಜನಸಾಮಾನ್ಯರನ್ನು ಅತಿ ಹತ್ತಿರದಲ್ಲಿ ತಲುಪುತ್ತಿದೆ. ಇದೀಗ ಸಮಾಜ ಅನಾಥಾಶ್ರಮಗಳ ನೆರವಿಗೆ ಧಾವಿಸಿರುವುದು ಶ್ರೇಷ್ಠತೆಯನ್ನು ಪಡೆದುಕೊಂಡಿದೆ ಎಂದು ಉಡುಪಿ ಜಿಲ್ಲಾ ಸವಿತಾ ಸಮಾಜ ರಾಜ್ಯ ಪ್ರತಿನಿಧಿ ಗೋವಿಂದ ಭಂಡಾರಿ ಬನ್ನಂಜೆ ಹೇಳಿದರು. ಅವರು ಮಂಗಳವಾರ ಕೋಟ ವಲಯ ಸವಿತಾ ಸಮಾಜ ಕೋಟ ಇವರ ಸಾರಥ್ಯದಲ್ಲಿ ಹೊಸಬದುಕು ಆಶ್ರಮ ತೋಡ್ಕಟ್ಟು-ಸಾಲಿಗ್ರಾಮ ಇಲ್ಲಿನ ಆಶ್ರಮ ನಿವಾಸಿಗಳ ಸವಿತಾ ಸೇವಾ ಸಿಂಚನ -2025 ಸಂಘಟನೆಯ ಜೊತೆಗೆ ಬಾಂಧವ್ಯದ ಸಿಂಚನ ಎನ್ನುವ ಶೀರ್ಷಿಕೆಯಡಿ ನಡೆದ ಕ್ಷೌರ ಸೇವೆ ಕಾರ್ಯಕ್ರಮದಲ್ಲಿ ಮಾತನಾಡಿದರು. ತಮ್ಮ ವೃತ್ತಿ ಕಾಯಕದ ಮೂಲಕ ಸಮಾಜ ಸೇವೆಯನ್ನು ಮೈಗೂಡಿಸಿಕೊಂಡ ಕೋಟ ವಲಯ ಸವಿತ ಸಮಾಜದ ಕಾರ್ಯ ಅತ್ಯಂತ ಪ್ರಶಂಸನೀಯವಾದದ್ದು. ಇಂಥಹ ಒಗ್ಗಟ್ಟು ನಮ್ಮ ಸಮಾಜದ ಉನ್ನತ್ತಿಗೆ ಪ್ರೇರಕವಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು. ಕಾರ್ಯಕ್ರಮವನ್ನು ಉಡುಪಿ ಜಿಲ್ಲಾ ಸವಿತಾ ಸಮಾಜ ಅಧ್ಯಕ್ಷ ರಾಜು ಸಿ. ಭಂಡಾರಿ ಕಿನ್ನಿಮೂಲ್ಕಿ ಆಶ್ರಮದ ನಿವಾಸಿಗಳಿಗೆ ಕ್ಷೌರಿಕ ಕಾರ್ಯದ ಮೂಲಕ ಉದ್ಘಾಟಿಸಿ ಶುಭ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಸಿ.ಎ. ಇಂಟರ್ ಮೀಡಿಯಟ್ ಪರೀಕ್ಷೆಯಲ್ಲಿ ಆಳ್ವಾಸ್‌ನ 20 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಈ ಪರೀಕ್ಷೆಯಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಶೇಕಡಾ 13.22 ಫಲಿತಾಂಶ ಬಂದಿದ್ದರೆ, ಆಳ್ವಾಸ್ ಪದವಿ ಕಾಲೇಜು ಗ್ರೂಪ್ -01 ಮತ್ತು ಗ್ರೂಪ್-02 ಸೇರಿದಂತೆ ಒಟ್ಟು 20 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡಾ 50 ಫಲಿತಾಂಶ ದಾಖಲಿಸಿದ್ದಾರೆ. ಕಾಲೇಜಿನ ಬಿ.ಕಾಂ. ವಿದ್ಯಾರ್ಥಿಗಳಾದ ರ‍್ಯನ್ ಕಾರ್ಯಪ್ಪ (401), ಸ್ಮಿತಾ (397), ಆಕಾಶ್ ಚಂದ್ರಕಾAತ್ ಹೆಗ್ಡೆ (365) ಸುಮಂತ್ (345), ದರ್ಶನ್ ಪೂಜಾರಿ (340), ಶಿವಪ್ರಸಾದ್ (316), ಕನ್ಯಾ ಪ್ರಭು (313), ಶಾನ್ ಪಿಂಟೋ(311), ಮೋನಿಷಾ ಕುಂದರ್(310) ಅನ್ವೇಶ್ ಕುಂದರ್ (308), ಅಶ್ವಥ್ (305), ತರುಣ್ ಕೆ. (306), ಶ್ರೇಯಸ್ ಶೆಟ್ಟಿಗಾರ್ (306), ಪುನೀತ್ ಎಸ್. (305), ವೈಷ್ಣವಿ(300), ದೀಕ್ಷಾ(300) ಮತ್ತು ಪ್ರತೀಕ್ಷಾ(300) ಆಕಾಶ್ ಜೆ ಭಟ್ (300) ಆಶೆಲ್‌ಡಿ’ಸೋಜಾ (300), ಮತ್ತು ಜ್ಯೋತಿ(300) ಅಂಕ ಪಡೆದು ಉತ್ತೀರ್ಣರಾಗಿದ್ದಾರೆ. ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ಸಂಸ್ಥೆಯ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅಭಿನಂದಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹಟ್ಟಿಯಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ಎಲ್‌ಕೆಜಿ ವಿಭಾಗದಲ್ಲಿ ‘ಬೆಂಕಿ ಬಳಸದೆ ಅಡುಗೆ’ಚಟುವಟಿಕೆಯನ್ನು ನಡೆಸಲಾಯಿತು. ಎಲ್ಲಾ ಪುಟಾಣಿಗಳು ಈ ಚಟುವಟಿಕೆಯಲ್ಲಿ ಸಂತಸದಿಂದ ಭಾಗವಹಿಸುವುದರ ಜೊತೆಗೆ ಸುಲಭವಾಗಿ ಬೆಂಕಿ ಬಳಸದೆ ಅಡುಗೆ ತಯಾರಿಸುವುದರ ಕುರಿತು ಜ್ಞಾನವನ್ನು ಪಡೆದುಕೊಂಡರು. ಈ ಸಂದರ್ಭದಲ್ಲಿ ಪ್ರಾಥಮಿಕ ಶಾಲಾ ವಿಭಾಗದ ಮುಖ್ಯೋಪಾಧ್ಯಾಯಿನಿ ಸುಜಾತಾ ಸದಾರಾಮ ಹಾಗೂ ಕೆಜಿ ವಿಭಾಗದ ಶಿಕ್ಷಕಿಯರು ಉಪಸ್ಥಿತಿಯಲ್ಲಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಉಡುಪಿ, ಬ್ರಹ್ಮಾವರ ಮತ್ತು ಕಾಪು ತಾಲೂಕಿನ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅರ್ಹ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ಹಾಗೂ ಅನೈರ್ಮಲ್ಯ ವೃತ್ತಿಯಲ್ಲಿ ತೊಡಗಿರುವ ಪೋಷಕರ ಮಕ್ಕಳಿಗೆ ವಿದ್ಯಾರ್ಥಿವೇತನ ಮಂಜೂರಾತಿಗಾಗಿ ಸಂಬಂಧಪಟ್ಟ ಶಾಲಾ ಮುಖ್ಯೋಪಾಧ್ಯಾಯರುಗಳು ವಿದ್ಯಾರ್ಥಿಗಳ ದಾಖಲೆಗಳೊಂದಿಗೆ ನೇರವಾಗಿ ಇಲಾಖೆಯ ವೆಬ್‌ಸೈಟ್ http://ssp.postmatric.karnataka.gov.in ಅಥವಾ www.sw.kar.nic.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಿದ ಪ್ರತಿ ವಿದ್ಯಾರ್ಥಿಯ ಬ್ಯಾಂಕ್ ಖಾತೆಗೆ ವಿದ್ಯಾರ್ಥಿಯ ಆಧಾರ್ ಸಂಖ್ಯೆ ಎನ್.ಪಿ.ಸಿ.ಐ ಸೀಡಿಂಗ್ ಮಾಡುವುದು ಕಡ್ಡಾಯವಾಗಿರುತ್ತದೆ. ಪರಿಶಿಷ್ಟ ಪಂಗಡದ 9 ಮತ್ತು 10 ನೇ ತರಗತಿಯ ವಿದ್ಯಾರ್ಥಿಗಳು ಎನ್.ಎಸ್.ಪಿ ಓ.ಟಿ.ಆರ್ ರಿಜಿಸ್ಟ್ರೇಷನ್ ಮಾಡುವುದು ಕಡ್ಡಾಯವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂಖ್ಯೆ: 0820-2528884, ಮೊ.ನಂ: 9480843209 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಉಡುಪಿ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಿದ್ಯಾರ್ಥಿ ನಿಲಯಗಳಲ್ಲಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಅತ್ಯುನ್ನತ ಸೌಕರ್ಯ ಒದಗಿಸಲಾಗುತ್ತಿದೆ ಹಾಗೂ ಉತ್ತಮ ಕಲಿಕಾ ವಾತಾವರಣ ನಿರ್ಮಿಸಲಾಗಿದೆ. ಇದರ ಹೊರತಾಗಿಯೂ ಕೆಲವು ವಿದ್ಯಾರ್ಥಿಗಳು ಅಶಿಸ್ತಿನಿಂದ ವರ್ತಿಸಿರುವ ಘಟನೆಗಳು ನಡೆದಿವೆ. ಇದರಿಂದ ಇತರ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ ಹಾಗೂ ಕಲಿಕಾ ವಾತಾವರಣದ ಮೇಲೆ ಪ್ರತಿಕೂಲ ಪರಿಣಾಮ ಉಂಟಾಗುತ್ತದೆ. ಹಾಗಾಗಿ ಇಂತಹ ಯಾವುದೇ ರೀತಿಯ ಅಶಿಸ್ತಿನ ನಡವಳಿಕೆಗೆ ವಾರ್ಡನ್ ಗಳು ಅವಕಾಶ ನೀಡಬಾರದು. ಅಶಿಸ್ತಿನ ವರ್ತನೆಯ ಘಟನೆಗಳು ಘಟಿಸಿದಾಗ ಅಥವಾ ಅಂತಹ ಸನ್ನಿವೇಶ ಘಟಿಸುವ ಸೂಚನೆ ಸಿಕ್ಕಿದ್ದಲ್ಲಿ ಕೂಡಲೇ ಸಮಿತಿಯ ಗಮನಕ್ಕೆ ತರಬೇಕು ಎಂದು ಅಧಿಕಾರಿಗಳಿಗೆ ಶಾಸಕ ಗುರುರಾಜ್ ಗಂಟಿಹೊಳೆ ಸೂಚನೆ ನೀಡಿದರು. ಅವರು ಬೈಂದೂರು ಹಾಗೂ ಕುಂದಾಪುರ ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ 2025-26 ನೇ ಸಾಲಿನಲ್ಲಿ ಹೊಸ ವಿದ್ಯಾರ್ಥಿಗಳ ಸೇರ್ಪಡೆ ಹಾಗೂ ಹಾಸ್ಟೆಲ್ ನಿರ್ವಹಣೆ ಮತ್ತು ಕುಂದು ಕೊರತೆಗಳ ಸಭೆಯಲ್ಲಿ ಭಾಗವಹಿಸಿ ಮಾತನಾಡಿದದರು. ಕಳೆದ ಎರಡು ವರ್ಷಗಳಿಂದ ಪೋಸ್ಟ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಿಜಯ ಕರ್ನಾಟಕ ಚಿತ್ರಕಲಾ ಸ್ಪರ್ಧೆಯಲ್ಲಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ ಪ್ರಾರ್ಥನಾ ಜಿ. 10 A, ಋತ್ವಿಕ್ ವಿ. ಪೂಜಾರಿ 10B ಹಾಗೂ ಶ್ರಾವಣಿ ಎಮ್. ನಾಯಕ್ (9A) ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಅವರಿಗೆ, ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಭಾರತೀಯ ಲೆಕ್ಕ ಪರಿಶೋಧಕರ ಸಂಸ್ಥೆಯು 2025ರ ಮೇ ತಿಂಗಳಲ್ಲಿ ಏರ್ಪಡಿಸಿದ ಸಿ.ಎ. ಅಂತಿಮ ಪರೀಕ್ಷೆಯಲ್ಲಿ, ಮಂಗಳೂರಿನ ’ಕಾಮತ್ ಎಂಡ್ ರಾವ್ ಚಾರ್ಟರ್ಡ್ ಅಕೌಂಟೆಂಟ್ಸ್’ ಸಂಸ್ಥೆಯಲ್ಲಿ ಆರ್ಟಿಕಲ್‌ಶಿಫ್ ನಡೆಸಿದ ಅರವಿಂದ ಶೆಣೈ ತೇರ್ಗಡೆ ಹೊಂದಿರುತ್ತಾರೆ. ಅವರು ಕೆನರಾ ಬ್ಯಾಂಕ್ ಉದ್ಯೋಗಿ ಅಶೋಕ ಶೆಣೈ ಮತ್ತು ದಿ| ಅನಿತಾ ಶೆಣೈ ದಂಪತಿಯ ಪುತ್ರರಾಗಿದ್ದು, ಈಗ ಮಂಗಳೂರಲ್ಲಿ ನೆಲೆಸಿರುತ್ತಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರೋಟರಿ ಕ್ಲಬ್ ಒಂದು ಅಂತಾರಾಷ್ಟ್ರೀಯ ಸೇವಾ ಸಂಸ್ಥೆಯಾಗಿದ್ದು, ವಿಶ್ವದಾದ್ಯಂತ ಸೇವೆ ಸಲ್ಲಿಸುತ್ತಿವೆ ಮತ್ತು ಸಮಾಜಕ್ಕೆ ಅಮೂಲ್ಯವಾದ ಕೊಡುಗೆಗಳನ್ನು ನೀಡುತ್ತಿವೆ. ಸಮಾಜದಲ್ಲಿ ಸಕಾರಾತ್ಮಕ ಬದಲಾವಣೆಗಳನ್ನು ತರುವುದು ಹಾಗೂ ಸ್ಥಳೀಯ ಅಗತ್ಯಗಳನ್ನು ಪೂರೈಸಲು ಸಹಾಯ ಮಾಡುವುದು ಮತ್ತು ಜೀವನವನ್ನು ಸುಧಾರಿಸುವುದು ರೋಟರಿ ಸಂಸ್ಥೆಯ ಮುಖ್ಯ ಉದ್ದೇಶವಾಗಿದೆ ಎಂದು ರೋಟರಿ ಜಿಲ್ಲೆ 3182 ವಲಯ-9ರ ಮಾಜಿ ಅಸಿಸ್ಟೆಂಟ್ ಗವರ್ನರ್ ನವೀನ್ ಅಮೀನ್ ಶಂಕರಪುರ ಹೇಳಿದರು. ಅವರು ಬಸ್ರೂರು ಆನಗಳ್ಳಿಯ ಆದಿತ್ಯ ಶೋರ್ ರೆಸಾರ್ಟ್‌ನಲ್ಲಿ ರೋಟರಿ ಕ್ಲಬ್ ಗಂಗೊಳ್ಳಿಯ 2025-26ನೇ ಸಾಲಿನ ಪದಾಧಿಕಾರಿಗಳ ಪದ ಪ್ರದಾನ ಕಾರ್ಯಕ್ರಮ ನೆರವೇರಿಸಿ ಮಾತನಾಡಿದರು. ರೋಟರಿ ಜಿಲ್ಲೆ 3182 ವಲಯ-1ರ ಅಸಿಸ್ಟೆಂಟ್ ಗವರ್ನರ್ ಐ. ನಾರಾಯಣ ಶುಭ ಹಾರೈಸಿದರು. ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷೆ ಚಂದ್ರಕಲಾ ತಾಂಡೇಲ ಅವರು ನೂತನ ಅಧ್ಯಕ್ಷ ಕೃಷ್ಣ ಪೂಜಾರಿ ಅವರಿಗೆ ಹಾಗೂ ಕಾರ್ಯದರ್ಶಿ ಮಾಲಾಶ್ರೀ ಖಾರ್ವಿ ಅವರು ನೂತನ ಕಾರ್ಯದರ್ಶಿ ರಾಮನಾಥ ಚಿತ್ತಾಲ್ ಅವರಿಗೆ ಅಧಿಕಾರ ಹಸ್ತಾಂತರಿಸಿದರು. ನೂತನ ಅಧ್ಯಕ್ಷ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ನಡೆಸುವ ಸಿಎ ಫೌಂಡೇಶನ್ ಹಾಗೂ ಇಂಟರ್ಮೀಡಿಯೇಟ್ ಪರೀಕ್ಷೆಯಲ್ಲಿ ಡಾ. ಬಿ.ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಉತ್ಕೃಷ್ಟ್ಟ ಸಾಧನೆಗೈದಿದ್ದಾರೆ. ಪ್ರೇಕ್ಷಿತ ಶೆಟ್ಟಿ, ಪನ್ನಗ, ಯಶಸ್ ಅವರು ಸಿಎ ಇಂಟರ್ಮೀಡಿಯೇಟ್ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ್ದರೆ, ಶಾಂತಿ, ಸಹನಾ ಹಾಗೂ ಸುವಿಧ ಆಚಾರ್ಯ ಅವರು ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. ಡಾ| ಬಿ.ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಹಾಗೂ ವೀ-ರೀಚ್ ಸಂಸ್ಥೆಯ ಪಠ್ಯ ಪ್ರವಚನ, ಮಧ್ಯಂತರ ಮಾದರಿ ಪರೀಕ್ಷೆ ಹಾಗೂ ನುರಿತ ತರಬೇತುದಾರರಿಂದ ತರಬೇತಿ, ಸಲಹೆ ಮತ್ತು ಮಾರ್ಗದರ್ಶನ ಪಡೆದು ವಿದ್ಯಾರ್ಥಿಗಳು ಈ ಸಾಧನೆಗೈದಿದ್ದಾರೆ. ಸಾಧಕ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ-ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಭಾರತೀಯ ಲೆಕ್ಕಪರಿಶೋಧಕರ ಸಂಸ್ಥೆಯು 2025 ಮೇ ತಿಂಗಳಲ್ಲಿ ನಡೆಸಿದ ಸಿ.ಎ. ಅಂತಿಮ ಪರೀಕ್ಷೆಯಲ್ಲಿ ಕುಂದಾಪುರದ ಕುಂದೇಶ್ವರ ರಸ್ತೆಯಲ್ಲಿರುವ ಸಿ.ಎ ಎನ್. ಶಾಂತಾರಾಮ ನಾಯಕ್ & ಕೋ, ಲೆಕ್ಕ ಪರಿಶೋಧಕರ ಸಂಸ್ಥೆ ಇದರ ವಿದ್ಯಾರ್ಥಿನಿ ಅಮೃತಾ ಅವರು ಉತ್ತೀರ್ಣರಾಗಿರುತ್ತಾರೆ. ಅವರು ಕೋಟೇಶ್ವರದ ಹಳೆಅಳಿವೆ ಕುಂಬ್ರಿ ನಿವಾಸಿ ಬೇಬಿ ಮತ್ತು ಚಂದ್ರ ದೇವಾಡಿಗರ ಪುತ್ರಿ.
