Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಜಿಲ್ಲೆಯ ವಿವಿಧ ಪೊಲೀಸ್‌ ಠಾಣೆಗಳಲ್ಲಿ ವಶಪಡಿಸಿಕೊಂಡ ಸುಮಾರು 9 ಕೆಜಿ 937 ಗ್ರಾಂ 209 ಮಿಲಿಗ್ರಾಂ ತೂಕದ ಅಂದಾಜು ಮೌಲ್ಯ ರೂಪಾಯಿ 7,12,963 ಬೆಲೆಯ ಗಾಂಜಾ, 345 ಗ್ರಾಂ 596 ಮಿಲಿಗ್ರಾಂ ಎಂ.ಡಿ.ಎಂ.ಎ. ಅಂದಾಜು ಮೌಲ್ಯ ರೂಪಾಯಿ 8,08,464 ಹಾಗೂ ಮೌಲ್ಯರಹಿತ 61 ಗ್ರಾಂ 430 ಮಿಲಿಗ್ರಾಂ ಬಿಳಿ ಪೌಡರ್‌ನ್ನು ಪಡುಬಿದ್ರಿ ಠಾಣಾ ಸರಹದ್ದಿನ ಮೆ. ಆಯುಷ್‌ ಎನ್‌ವಿರೋಟೆಕ್‌ ಪ್ರೈ. ಲಿ., ಪಡುಬಿದ್ರಿ ಎಂಬಲ್ಲಿ ನಾಶಪಡಿಸಲಾಯಿತು. ನಾಶಪಡಿಸಿದ ಮಾದಕ ದ್ರವ್ಯದ ಒಟ್ಟು ಅಂದಾಜು ಮೌಲ್ಯ ರೂಪಾಯಿ 15,21,427 ಆಗಿರುತ್ತದೆ ಎಂದು ಉಡುಪಿ ಜಿಲ್ಲೆಯ ಪೊಲೀಸ್‌ ವರಿಷ್ಠಾಧಿಕಾರಿ ಹಾಗೂ ಜಿಲ್ಲಾ ಡ್ರಗ್‌ ಡಿಸ್‌ಪೋಸಲ್‌ ಕಮಿಟಿಯ ಅಧ್ಯಕ್ಷರಾದ ಹರಿರಾಮ್‌ ಶಂಕರ್‌ ತಿಳಿಸಿದ್ದಾರೆ. ಉಡುಪಿ ನಗರ ಠಾಣೆಯ 03 ಪ್ರಕರಣ, ಸೆನ್‌ ಠಾಣೆಯ 2 ಪ್ರಕರಣ ಹಾಗೂ ಮಲ್ಪೆ, ಪಡುಬಿದ್ರಿ, ಶಿರ್ವಾ, ಕಾರ್ಕಳ ನಗರ ಹಾಗೂ ಮಣಿಪಾಲ ಠಾಣೆಯ ತಲಾ 01 ಪ್ರಕರಣ ಸೇರಿ ಒಟ್ಟು 10 ಪ್ರಕರಣಗಳಲ್ಲಿ ವಶಪಡಿಸಿಕೊಂಡ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಗಂಗೊಳ್ಳಿಯಲ್ಲಿ ನಡೆದ ದೋಣಿ ದುರಂತದಲ್ಲಿ ಮೃತರಾದ ದಿ. ಸುರೇಶ್ ಖಾರ್ವಿ ಅವರ ಮಗಳಾದ ಶ್ರೀಯಾ ಜನತಾ ಪದವಿಪೂರ್ವ ಕಾಲೇಜಿನಲ್ಲಿ  ಪ್ರಥಮ ಪಿ‌.ಯು.ಸಿ.ವಿಜ್ಞಾನ ವಿಭಾಗದಲ್ಲಿ ವ್ಯಾಸಾಂಗ ಮಾಡುತ್ತಿದ್ದು, ಈ ವಿದ್ಯಾರ್ಥಿನಿಯ ತಂದೆ ಮೃತರಾದ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರು ವಿದ್ಯಾರ್ಥಿನಿಯ ಮನೆಗೆ ಭೇಟಿ ನೀಡಿ ಎರಡು ವರ್ಷದ ಸಂಪೂರ್ಣ ಕಾಲೇಜಿನ‌ ಶುಲ್ಕವನ್ನು( ಕಾಲೇಜು ಶುಲ್ಕ, ಸಮವಸ್ತ್ರ, ಮಧ್ಯಾಹ್ನ ಊಟ, ವಾಹನ ಶುಲ್ಕ) ಭರಿಸುವುದಾಗಿ ಆಶ್ವಾಸನೆ ಕೊಟ್ಟಿದ್ದರು. ಅಂತೆಯೇ ಈ ದಿನ ವಿದ್ಯಾರ್ಥಿನಿಗೆ ಕಾಲೇಜಿನ‌ ಆಡಳಿತ ಮಂಡಳಿಯ ಕಛೇರಿಯಲ್ಲಿ ‌ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ಪ್ರಾಂಶುಪಾಲರಾದ ಗಣೇಶ ಮೊಗವೀರ ಅವರು ಚೆಕ್ ಹಸ್ತಾಂತರಿಸುವ ಮೂಲಕ ನುಡಿದಂತೆ ನಡೆದು, ಎರಡು ವರ್ಷಗಳ ಪದವಿಪೂರ್ವ ಶಿಕ್ಷಣದ ಸಂಪೂರ್ಣ ಜವಬ್ದಾರಿಯನ್ನು ವಹಿಸಿಕೊಂಡು ಮಾನವೀಯತೆ ಮೆರೆದಿದ್ದಾರೆ. ಈ ಸಂದರ್ಭದಲ್ಲಿ ಕಾಲೇಜಿನ ಉಪ ಪ್ರಾಂಶುಪಾಲರು, ಬೋಧಕ, ಬೋಧಕೇತರ ವೃಂದದವರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು:ಗ್ರಾಮ ಪಂಚಾಯತ್ ಉಪ್ಪುಂದ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕುಂದಾಪುರ ಹಾಗೂ ಉಪ್ಪುಂದ ಗ್ರಾಮ ಪಂಚಾಯತ್ ವ್ಯಾಪ್ತಿಯ 9 ಅಂಗನವಾಡಿ ಕೇಂದ್ರಗಳ ಸಹಯೋಗದೊಂದಿಗೆ ಪೋಷಣ್ ಅಭಿಯಾನ ಸೀಮಂತ ಕಾರ್ಯಕ್ರಮ ಮತ್ತು ಅನ್ನಪ್ರಾಶನ ಕಾರ್ಯಕ್ರಮವನ್ನು ಇತ್ತೀಚಿಗೆ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮೋಹನ್ ಚಂದ್ರ ಅವರು ವಹಿಸಿದ್ದರು. ಕಾರ್ಯಕ್ರಮದ ಉದ್ಘಾಟನೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷರು, ಸೀಮಂತ ಕಾರ್ಯಕ್ರಮಕ್ಕೆ ಬಂದಿರುವ ಗರ್ಭಿಣಿಯಾದ ಪೂರ್ಣಿಮಾ, ಅನ್ನ ಪ್ರಾಶನ ಕಾರ್ಯಕ್ರಮಕ್ಕೆ ಬಂದಿರುವ ಮಗು ನವಮಿ ಹಾಗೂ ಮಗುವಿನ ತಾಯಿ ಹಾಗೂ ವೇದಿಕೆ ಮೇಲಿರುವ ಎಲ್ಲಾ ಗಣ್ಯರು ಸೇರಿ ನೆರವೇರಿಸಿದರು. ನಂತರ 4 ಮಕ್ಕಳಾದ ಶಬರೀಶ್ ಎಂ., ನವಮಿ, ಆದಿತ್ಯ ಎನ್. ನಾಯಕ್, ಚತುರ್ವಿ ಮಕ್ಕಳಿಗೆ ಅನ್ನ ಪ್ರಾಶನ ಕಾರ್ಯಕ್ರಮವನ್ನು ವೇದಿಕೆಯಲ್ಲಿರುವ ಎಲ್ಲಾ ಗಣ್ಯರು ಮತ್ತು ಅಂಗನವಾಡಿ ಕಾರ್ಯಕರ್ತೆಯರು ಸೇರಿ ನೆರವೇರಿಸಲಾಯಿತು. ಅನ್ನ ಪ್ರಾಶನ ಮಾಡಲ್ಪಟ್ಟ ಮಕ್ಕಳಿಗೆ ಬೌಲ್ ಮತ್ತು ಸ್ಪೂನ್ ಅನ್ನು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮೋಹನ್ ಚಂದ್ರ ಅವರು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಪ್ರತಿಭೆ ಇರುವವರನ್ನು ಸ್ಮರಿಸಿದರೆ ಯುವ ಜನಾಂಗಕ್ಕೆ ಪ್ರೇರಣೆಯಾಗಲಿದೆ. ದಾನಿಗಳ ಸಹಕಾರ, ಪ್ರೇಕಕ ಅಭಿಮಾನಿಗಳಿಂದ ಯಕ್ಷಗಾನ ಕಲೆ ಬೆಳೆಯಬೇಕು ಎಂದು ಕುಂದಾಪುರದ ಶಾಸಕ ಕಿರಣ್ ಕುಮಾರ್ ಕೊಡ್ಗಿ ಹೇಳಿದರು. ಅವರು ಗುಂಡ್ಮಿಯ ಸದಾನಂದ ರಂಗ ಮಂಟಪದಲ್ಲಿ ಹಂಗಾರಕಟ್ಟೆ ಐರೋಡಿಯ ಯಕ್ಷಗಾನ ಕಲಾಕೇಂದ್ರದ ವತಿಯಿಂದ ನಡೆಯುತ್ತಿರುವ ನಾಲ್ಕನೇ ವರ್ಷದ ಯಕ್ಷಗಾನ ಸಪ್ತೋತ್ಸವದ ನಮ್ಮ ಕಾಳಿಂಗ ನಾವಡ ಸಂಸ್ಮರಣಾ ಕಾರ್ಯಕ್ರಮದಲ್ಲಿ ಮಾತನಾಡಿ, ಯಕ್ಷಗಾನ ಕಲಾ ಕೇಂದ್ರ ಅನೇಕ ಕಲಾವಿದರನ್ನು ಯಕ್ಷಗಾನಕ್ಕೆ ಕೊಡುಗೆಯಾಗಿ ನೀಡಿದೆ. ಕಾಳಿಂಗ ನಾವುಡರು ನಮ್ಮನ್ನು ಅಗಲಿ 30 ವರ್ಷ ಸಂದರೂ ಅವರು ಇಂದಿಗೂ ಅಮರರಾಗಿದ್ದಾರೆ ಎಂದರು. ಕಾಳಿಂಗ ನಾವಡ ಸಂಸ್ಮರಣೆಯನ್ನು ಭಾಗವತ ಹಾಲಾಡಿ ರಾಘವೇಂದ್ರ ಮಯ್ಯ ಗೈದರು. ಪತ್ರಕರ್ತ ಚಿತ್ತೂರು ಪ್ರಭಾಕರ ಆಚಾರ್ ಅಭಿನಂದನಾ ನುಡಿಗಳನ್ನಾಡಿದರು. ಸಭೆಯ ಅಧ್ಯಕ್ಷತೆಯನ್ನು ನಮ್ಮ ಕಾಳಿಂಗ ನಾವಡ ಪ್ರಶಸ್ತಿ ಸಮಿತಿ ಅಧ್ಯಕ್ಷ ಕಾರ್ಕಡ ರಾಜು ಪೂಜಾರಿ ವಹಿಸಿದ್ದರು. ಇದೇ ವೇಳೆ ನಮ್ಮ ಕಾಳಿಂಗ ನಾವಡ ಪ್ರಶಸ್ತಿಯನ್ನು ಯಕ್ಷಗಾನ ಕ್ಷೇತ್ರದ ಸಾಧಕ ಬಿದ್ಕಲ್‌ಕಟ್ಟೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆ ತಾಂತ್ರಿಕ ವಿದ್ಯಾಲಯದಲ್ಲಿ ಎಂ.ಬಿ.ಎ ವಿಭಾಗದ ವಿದ್ಯಾರ್ಥಿಗಳಿಗೆ ಒಂದು ದಿನದ ಇಂಡಸ್ಟ್ರಿಯಲ್ ವಿಸಿಟ್ ಹಮ್ಮಿಕೊಳ್ಳಲಾಯಿತು. ಪಡುಬಿದ್ರೆಯಲ್ಲಿರುವ ಪಿಪಿ ವುವನ್ ಮತ್ತು ಎಫ್ಐಬಿಸಿ ಬ್ಯಾಗ್ಸ್ ತಯಾರಿಕಾ ಕೈಗಾರಿಕೆಯಾದ ಬ್ರೈಟ್ ಫ್ಲೆಕ್ಸಿ ಇಂಟರ್ನ್ಯಾಷನಲ್ ಪ್ರೈವೇಟ್ ಲಿಮಿಟೆಡ್ ಇಲ್ಲಿಗೆ ದ್ವಿತೀಯ ವರ್ಷದ ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋಗಲಾಯಿತು. ಕೈಗಾರಿಕೆಯಲ್ಲಿ ಬ್ಯಾಗ್ ಗಳನ್ನು ಹೇಗೆ ತಯಾರಿಸುತ್ತಾರೆ ಎಂಬುದನ್ನು ನೇರವಾಗಿ ತೋರಿಸುವುದರ ಮೂಲಕ ಚೆನ್ನಾಗಿ ವಿದ್ಯಾರ್ಥಿಗಳಿಗೆ ವಿವರಿಸಲಾಯಿತು. ವಿದ್ಯಾರ್ಥಿಗಳು ಕೇವಲ ಪಠ್ಯಪುಸ್ತಕದ ಜ್ಞಾನವಲ್ಲದೆ ಪ್ರಾಯೋಗಿಕವಾಗಿ ಕಾರ್ಯನಿರ್ವಹಿಸುವ  ಬಗೆಯನ್ನು ಅರಿತರು. ಈ ಕೈಗಾರಿಕಾ ಭೇಟಿಯ ಉಸ್ತುವಾರಿಯನ್ನು ಎಂ.ಬಿ.ಎ ವಿಭಾಗದ ಮುಖ್ಯಸ್ಥೆ ಡಾ. ಸುಚಿತ್ರ ಪೂಜಾರಿ ಮತ್ತು ಇತರೆ ಉಪನ್ಯಾಸಕರು ವಹಿಸಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಪಿಎಂ ವಿಶ್ವಕರ್ಮ ಯೋಜನೆಯಡಿಯಲ್ಲಿ ಜನರಿಗೆ ನೀಡುವ ಕೌಶಲ್ಯ ತರಬೇತಿಗಳಲ್ಲಿ ಗೊಂಬೆಗಳನ್ನು ತಯಾರಿಸುವ ತರಬೇತಿಯ ಉದ್ಘಾಟನಾ ಕಾರ್ಯಕ್ರಮವು ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು. ಸಂಸ್ಥೆಯ ನಿರ್ದೇಶಕರಾದ ಡಾ. ಬೊಮ್ಮಯ್ಯ ಎಂ. ಉದ್ಘಾಟಿಸಿ ಫಲಾನುಭವಿಗಳಿಗೆ  ಅತ್ಯುತ್ತಮವಾದ ತರಬೇತಿ ನೀಡುವ ಜಿಲ್ಲಾ ಮಟ್ಟದ ತರಬೇತಿ ನೀಡುವವರು ನಮ್ಮೊಂದಿಗಿದ್ದು, ತರಬೇತಿ ಸಂಪೂರ್ಣ ಸದುಪಯೋಗಪಡಿಸಿಕೊಳ್ಳುವಂತೆ ಹೇಳಿದರು. ಹಾಗೂ ರುಡ್ಸೆಟ್ ಸಂಸ್ಥೆಯಲ್ಲಿ ಕೃಷಿ, ಸೇವೆ, ಉತ್ಪನ್ನ ಹಾಗೂ ವಿದ್ಯಾಮಶೀಲತಾಭಿವೃದ್ಡಿ ತರಬೇತಿ ನೀಡುತ್ತಿದ್ದು ಗ್ರಾಮೀಣ ಪ್ರದೇಶದ ಜನರಿಗೆ ಸ್ವ ಉದ್ಯೋಗದಲ್ಲಿ ಆಸಕ್ತರಿರುವವರಿಗೆ ತರಬೇತಿಯನ್ನು ಪಡೆದುಕೊಂಡು ಸ್ವಉದ್ಯೋಗ ನಡೆಸಲು ಅವಕಾಶವಿದೆ. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಿಎಂ ವಿಶ್ವಕರ್ಮ ಜಿಲ್ಲಾ ಯೋಜನಾಧಿಕಾರಿ ಸಂಧ್ಯಾರಾಣಿ ಯು ಕೇಂದ್ರ ಸರ್ಕಾರದ ಯೋಜನೆಯನ್ನ ಸಮರ್ಪಕವಾಗಿ ಬಳಸಿಕೊಳ್ಳುವಂತೆ ಮಾಹಿತಿ ನೀಡಿದರು. ಹಾಗೂ ಸರಕಾರದ ಯೋಜನೆಗಳು ಜನಸಾಮಾನ್ಯರಿಗಾಗಿ ರಚಿಸಲಾಗಿದೆ. ಫಲಾನುಭವಿಗಳು ತರಬೇತಿಯನ್ನು ಸದುಪಯೋಗ ಪಡೆದುಕೊಳ್ಳಬೇಕಾಗಿ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ  ಉಪನ್ಯಾಸಕಿ ಚೈತ್ರ ಕೆ. ಕಾರ್ಯಕ್ರಮವನ್ನು ನಿರೂಪಿಸಿ, ಸ್ವಾಗತಿಸಿದರು ಹಾಗು ಉಪನ್ಯಾಸಕರಾದ ಸಂತೋಷ್ ಶೆಟ್ಟಿ ವಂದಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಫೇಸ್‌ ಬುಕ್ ಮೂಲಕ ಸಂದೇಶ ಕಳುಹಿಸಿ, ಮೊಬೈಲ್, ಬ್ಯಾಗ್ ಹಾಗೂ 50 ಸಾವಿರ ಡಾಲರ್ (56 ಲಕ್ಷ ರೂ.) ನೀಡುವುದಾಗಿ ಸಂದೇಶ ಹಾಕಿ, ತನ್ನಿಂದ ಹಂತ ಹಂತವಾಗಿ ಒಟ್ಟಾರೆ 11,92,500 ರೂ. ಪಡೆದು ಯಾರೋ ಸೈಬರ್ ವಂಚಕರು ವಂಚಿಸಿರುವುದಾಗಿ ಕೋಟೇಶ್ವರ ಗ್ರಾಮದ ಹೊಸ ಬಡಾಕೇರಿ ಹೂವಿನಕೆರೆ ನಿವಾಸಿ ರಮೇಶ ಅವರ ಪತ್ನಿ ಅಭಿನಯ (40) ದೂರು ನೀಡಿದ್ದಾರೆ. ನಾನು ಗೃಹಿಣಿಯಾಗಿದ್ದು, ಕಳೆದ ಮೇ ಮೊದಲ ವಾರದಲ್ಲಿ ನನಗೆ ಡೆನಿಯಲ್ ಮೈಕಲ್ ಎಂಬುವರಿಂದ ಫೇಸ್ ಬುಕ್ ಖಾತೆಗೆ ಗುಡ್ ಮಾರ್ನಿಂಗ್ ಅನ್ನುವ ಸಂದೇಶ ಬಂದಿದ್ದು, ಆ ಬಳಿಕ ಒಂದು ಮೊಬೈಲ್, ಬ್ಯಾಗ್, 50 ಸಾವಿರ ಡಾಲರ್ ಗಿಫ್ಟ್ ರೂಪದಲ್ಲಿ ಮನೆಗೆ ಕಳುಹಿಸುವುದಾಗಿ ಸಂದೇಶ ಬಂದಿದೆ. ಆ ಹಣ, ಗಿಫ್ಟ್ ಎಲ್ಲ ಮುಂಬಯಿಯಲ್ಲಿದ್ದು, ಅದು ನಿಮ್ಮ ಮನೆಗೆ ಬರಬೇಕಾದರೆ 50 ಸಾವಿರ ರೂ. ಕಳುಹಿಸಿ ಎಂದಿದ್ದಕ್ಕೆ ನಾನು ಮೇ 16ರಂದು 5 ಸಾವಿರ ರೂ., ಮತ್ತೆ 25 ಸಾವಿರ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಇಲ್ಲಿನ ಪ.ಪಂ. ವ್ಯಾಪ್ತಿಯಿಂದ ಗ್ರಾಮೀಣ ಪ್ರದೇಶಗಳನ್ನು ಕೈಬಿಡಬೇಕು ಎಂದು ಆಗ್ರಹಿಸಿ ಬೈಂದೂರು ರೈತ ಸಂಘದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಅವರ ನೇತೃತ್ವದಲ್ಲಿ ಕಳೆದ 17 ದಿನಗಳಿಂದ ಇಲ್ಲಿನ ಆಡಳಿತಸೌಧದ ಎದುರು ನಡೆಯುತ್ತಿರುವ ಅನಿರ್ದಿಷ್ಟಾವಧಿ ಧರಣಿ ನಿರತ ಸ್ಥಳಕ್ಕೆ ರಾಜ್ಯದ ಮೀನುಗಾರಿಕಾ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಎಸ್. ಮಂಕಾಳ ವೈದ್ಯ ಭೇಟಿ ಮಾಡಿ ಚರ್ಚಿಸಿದರು. ಅವರು ನಂತರ ಮಾತನಾಡಿ, ಈ ಭಾಗದ ರೈತರ ಹೋರಾಟ ನ್ಯಾಯ ಸಮ್ಮತವಾಗಿದೆ. ಜಿಲ್ಲಾಧಿಕಾರಿಗಳು ಕಳಿಸಿರುವ ವರದಿಯನ್ನು ಆಧರಿಸಿ ಸಂಬಂಧಪಟ್ಟ ಸಚಿವರ ಜೊತೆ ಮಾತನಾಡಿ ರಾಜ್ಯದ ಮುಖ್ಯಮಂತ್ರಿಗಳ ಗಮನಕ್ಕೆ ತರುತ್ತೇನೆ. ರಾಜ್ಯದ ಮುಖ್ಯಮಂತ್ರಿಗಳು ರೈತರ ಪರ ಇರುವುದರಿಂದ ಖಂಡಿತ ನ್ಯಾಯ ದೊರಕುತ್ತದೆ ಎಂದರು. ಹೀಗಾಗಿ ಧರಣಿಯನ್ನು ಕೈಬಿಡುವಂತೆ ಮನವಿ ಮಾಡಿದರು.ಇದಕ್ಕೆ ಪ್ರತಿಕ್ರಯಿಸಿದ ರೈತರು ನಮ್ಮ ಧರಣಿ ನ್ಯಾಯಪರ ಆಗ್ರಹ ಬಿಟ್ಟರೆ ಇತರ ಯಾವುದೇ ಉದ್ದೇಶಗಳಿಲ್ಲ.ಹೀಗಾಗಿ ಸಚಿವಾಲಯ, ಸರಕಾರ ಹಾಗೂ ಜಿಲ್ಲಾಡಳಿತದಿಂದ ಲಿಖಿತ ಉತ್ತರ ದೊರಕಿದರೆ ಧರಣಿ ಕೈಬಿಡಲು ಸಿದ್ದರಿದ್ದೇವೆ ಎಂದರು.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನ ಎನ್.ಎಸ್.ಎಸ್ ಘಟಕದ ವಿದ್ಯಾರ್ಥಿಗಳು ಹಾಗೂ ಸ್ವಯಂಸೇವಕರು ಪರಿಸರ ಸಂರಕ್ಷಣೆ ಮತ್ತು ಸಾರ್ವಜನಿಕ ಸ್ಥಳಗಳ ಸ್ವಚ್ಛತೆಯ ಸಂದೇಶವನ್ನು ಸಾರುವ ಉದ್ದೇಶದಿಂದ ಕಾರ್ಕಳದ ಆಸುಪಾಸಿನಲ್ಲಿರುವ ಅನೇಕ ಪ್ರೇಕ್ಷಣೀಯ ಸ್ಥಳಗಳಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ನಡೆಸಿದರು. ಪ್ಲಾಸ್ಟಿಕ್ ಕಸದ ಸಂಗ್ರಹ, ಕಸ ವಿಂಗಡಣೆ ಹಾಗೂ ಪರಿಸರ ಶುದ್ಧೀಕರಣದ ಜೊತೆಗೆ ಸ್ಥಳೀಯ ಜನರಿಗೆ ಸ್ವಚ್ಛತೆಯ ಮಹತ್ವವನ್ನು ಬೋಧಿಸುವ ಜಾಗೃತಿ ಅಭಿಯಾನವೂ ನಡೆಯಿತು. ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿದ ಸ್ವಚ್ಛ ಕಾರ್ಕಳ ನಗರದ ಸ್ವಚ್ಛತಾ ರಾಯಭಾರಿಯಾಗಿರುವ ಫೆಲಿಕ್ಸ್ ಜೋಸೆಫ್ ವಾಜ್ ಅವರು ಶುಭ ಹಾರೈಸಿದರು. ಕಾರ್ಕಳ ಪುರಸಭಾ ಅಧ್ಯಕ್ಷರಾದ ಯೋಗೀಶ್ ದೇವಾಡಿಗ ಅವರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ, ‘ ಸ್ವಚ್ಛತೆ ಎನ್ನುವುದು ಕೇವಲ ದೈಹಿಕ ಶುದ್ಧತೆಗೆ ಸೀಮಿತವಲ್ಲ. ನಮ್ಮ ಮನಸ್ಸಿನ, ಸಮಾಜದ ಮತ್ತು ಸಂಸ್ಕೃತಿಯ ಶುದ್ಧತೆಯ ಪ್ರತೀಕವೂ ಹೌದು. ಯುವಕರು ಇಂತಹ ಚಟುವಟಿಕೆಗಳ ಮೂಲಕ ಸಾಮಾಜಿಕ ಬದಲಾವಣೆಗೆ ಪ್ರೇರಣೆಯಾಗುತ್ತಾರೆʼ ಎಂದು ಹೇಳಿದರು. ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಹ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಶಂಕರನಾರಾಯಣ: ಇಲ್ಲಿನ ಮದರ್ ತೆರೆಸ ಮೆಮೋರಿಯಲ್ ಸ್ಕೂಲ್‌ನ ಪ್ರಾಥಮಿಕ ವಿಭಾಗದ (3, 4 ಮತ್ತು 5ನೇ ತರಗತಿ) ವಿದ್ಯಾರ್ಥಿಗಳಿಗೆ ಅವರಲ್ಲಿ ಅಡಗಿರುವ ಸುಪ್ತ ಕಲಾ ಪ್ರತಿಭೆಯನ್ನು ಹೊರಹಾಕುವ ಉದ್ದೇಶದಿಂದ “Teresians Got Talent – Shine Beyond Limits” ಎಂಬ ವೈಶಿಷ್ಟ್ಯಪೂರ್ಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಆಡಳಿತ ನಿರ್ದೇಶಕರು ಹಾಗೂ ತೀರ್ಪುಗಾರರು ನಡೆಸಿದರು. ಕಾರ್ಯಕ್ರಮಕ್ಕೆ ತೀರ್ಪುಗಾರರಾಗಿ ಯಕ್ಷ ಸಿರಿ ಶಂಕರನಾರಾಯಣದ ಕಿಶೋರ್ ಕುಮಾರ್ ಅರೂರ್, ಸಾಂಸ್ಕೃತಿಕ ಮತ್ತು ಭಾಷಾ ನಿರ್ದೇಶಕಿ ಅಲಿಟಾ ಡೇಸಾ ಹಾಗೂ ನತ್ಯ ಗುರುಗಳಾದ ಜಗದೀಶ್ ಬನ್ನಂಜೆ ಉಪಸ್ಥಿತರಿದ್ದರು. ತೀರ್ಪುಗಾರರಾದ ಕಿಶೋರ್ ಕುಮಾರ್ ಅವರು ಮಾತನಾಡಿ, “ಇಂತಹ ಅವಕಾಶಗಳು ಮಕ್ಕಳಲ್ಲಿ ಆತ್ಮವಿಶ್ವಾಸ ಬೆಳೆಸುತ್ತವೆ ಮತ್ತು ಭವಿಷ್ಯದಲ್ಲಿ ದೊಡ್ಡ ಸಾಧನೆ ಮಾಡಲು ಪಥವನ್ನು ಸುಲಭಗೊಳಿಸುತ್ತವೆ. ಇಂತಹ ಸೃಜನಾತ್ಮಕ ವೇದಿಕೆಯನ್ನು ಸೃಷ್ಟಿಸಿರುವುದು ಸಂಸ್ಥೆಯ ಹೆಗ್ಗಳಿಕೆ” ಎಂದರು. ಮಕ್ಕಳು ತಮ್ಮ ಸೃಜನಶೀಲತೆಯೊಂದಿಗೆ ನೃತ್ಯ, ಸಂಗೀತ, ನಾಟಕ, ವಾದ್ಯಗಾನ ಇತ್ಯಾದಿ ವಿಭಿನ್ನ ಕಲಾರೂಪಗಳನ್ನು ವೇದಿಕೆಯಲ್ಲಿ ಪ್ರದರ್ಶಿಸಿದರು. ಪ್ರತಿಯೊಂದು ಪ್ರದರ್ಶನವೂ ಮಕ್ಕಳಲ್ಲಿರುವ ಅಸಾಧಾರಣ…

Read More