ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಸಮಾಜದಲ್ಲಿ ಉತ್ತಮ ಸ್ಥಾನ ಪಡೆಯುವಂತೆ ಹಾಗೂ ಭವಿಷ್ಯದ ಕನಸನ್ನು ನನಸು ಮಾಡುವ ಶಕ್ತಿ ಶಿಕ್ಷಣಕ್ಕೆ ಇದ್ದು, ಪ್ರತಿಯೊಬ್ಬರಿಗೂ ಉತ್ತಮ ಶಿಕ್ಷಣ ನೀಡುವ ಕಾರ್ಯ ಶಿಕ್ಷಕರ ಮೇಲಿದ್ದು, ಇದನ್ನು ಜವಾಬ್ದಾರಿಯುತವಾಗಿ ಮಾಡಬೇಕು ಎಂದು ಶಾಸಕ ಯಶ್‌ಪಾಲ್ ಎ ಸುವರ್ಣ ಕರೆ ನೀಡಿದರು. ಅವರು ಅಂದು ನಗರದ ಸೈಂಟ್ ಸಿಸಿಲಿ ಪ್ರೌಢಶಾಲೆಯಲ್ಲಿ, ಮಾರ್ಚ್ 2022-23 ಮತ್ತು 2023-24 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇಕಡಾ ನೂರರಷ್ಟು ಫಲಿತಾಂಶ ಪಡೆದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಿಗೆ ನಡೆದ ಅಭಿನಂದನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಶೈಕ್ಷಣಿಕ ವ್ಯವಸ್ಥೆಯಲ್ಲಿ ಉಡುಪಿ ಜಿಲ್ಲೆಯು ಶಿಕ್ಷಣದ ಕಾಶಿ ಎಂದೇ ಹೆಸರುವಾಸಿಯಾಗಿದೆ. ಶಿಕ್ಷಣ ಹಾಗೂ ಆರೋಗ್ಯದಲ್ಲಿ ರಾಜಿ ಮಾಡಿಕೊಳ್ಳಬಾರದು. ಜಿಲ್ಲೆಯ ಶಿಕ್ಷಕರುಗಳು ತಮ್ಮ ವೃತ್ತಿಯನ್ನು ಉತ್ತಮವಾಗಿ ನಿರ್ವಹಿಸುವುದರೊಂದಿಗೆ ಮಕ್ಕಳ ಸಾಧನೆಗೆ ಬೆನ್ನೆಲುಬಾಗಿ ನಿಂತಿದ್ದಾರೆ. ಜೊತೆಗೆ ವಿದ್ಯಾರ್ಥಿಗಳ ಪರಿಶ್ರಮದಿಂದಾಗಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಜಿಲ್ಲೆಗೆ ಉತ್ತಮ ಫಲಿತಾಂಶ ದೊರೆತಿದೆ ಎಂದರು. ವಿದ್ಯಾರ್ಥಿಗಳು ಇಂಜಿನಿಯರ್, ಡಾಕ್ಟರ್ ವೃತ್ತಿಗಳ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಮನುಷ್ಯನು ಹೊಂದಿರುವ ಜ್ಞಾನವನ್ನು ಇನ್ನೊಬ್ಬರೊಂದಿಗೆ ಹಂಚಿಕೊಂಡಾಗ ಆತನಲ್ಲಿನ ಜ್ಞಾನ ವೃದ್ಧಿಸುವ ಹಾಗೆಯೇ ನೆತ್ತರನ್ನು ಕೂಡ ದಾನ ಮಡಿದರೆ ಕ್ಷಣ ಮಾತ್ರದಲ್ಲಿ ದಾನ ನೀಡಿದವನ ದೇಹದಲ್ಲಿ ಮೂರು ಪಟ್ಟು ಹೆಚ್ಚು ಉತ್ಪತ್ತಿಯಾಗುತ್ತದೆ. ಜ್ಞಾನ ದೇಗುಲವಾದರೆ ರಕ್ತ ಜೀವರಕ್ಷಕ ಸಂಜೀವಿನಿ. ಈ ನೆಲೆಯಲ್ಲಿ ಇವೆರಡನ್ನೂ ಕೂಡ ಇನ್ನೊಬ್ಬರಿಗೆ ದಾನ ಮಾಡಬಹುದು ಎಂದು ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದ ವಡೇರ ಸ್ವಾಮೀಜಿ ಹೇಳಿದರು. ಅವರು ಉಪ್ಪುಂದ ಶ್ರೀ ಲಕ್ಷ್ಮೀವೆಂಕಟರಮಣ ದೇವಸ್ಥಾನದಲ್ಲಿ ದಿ. ನರಸಿಂಹ ರಾಮ ಪ್ರಭು ಜನ್ಮಶತಮಾನೋತ್ಸವ ಪ್ರಯುಕ್ತ ಕಾರ್ಯನಿಯಾ ಅಂಧತ್ವ ಮುಕ್ತ ಭಾರತ ಅಭಿಯಾನ (ಕಾಂ) ಯೋಜನೆಯಡಿ ನಯನಾ ನೇತ್ರಾಲಯ ಮಂಗಳೂರು ಮತ್ತು ಭಾರತೀಯ ರೆಡ್‌ಕ್ರಾಸ್ ಸೊಸೈಟಿ ಕುಂದಾಪುರ ಇವರ ಸಹಯೋಗದಲ್ಲಿ ನಡೆದ ನೇತ್ರದಾನ ಹಾಗೂ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿದರು. ರಕ್ತದಾನ ಮಾನವ ಕುಲಕ್ಕೆ ಸಹಾಯ ಮಾಡುವ ಅತ್ಯುತ್ತಮ ಮಾರ್ಗಗಳಲ್ಲಿ ಒಂದಾಗಿದ್ದು, ಪ್ರತಿಯೊಬ್ಬರೂ ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಲು ಮುಂದಾಗಬೇಕು. ರಕ್ತದಾನವು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಭಾರತದ ಪವಿತ್ರವಾದ ಸಂವಿಧಾನದ ಅಡಿಯಲ್ಲಿ ಸಾರ್ವತ್ರಿಕ ಚುನಾವಣೆಯಲ್ಲಿ ಸ್ಪರ್ಧೆ ಮಾಡಿ, ಗೆದ್ದು ಶಾಸಕರಾಗಿ ಸಂವಿಧಾನದಲ್ಲಿ ಹೇಳಿರುವ ಕರ್ತವ್ಯಗಳನ್ನು ಪಾಲಿಸುವುದಾಗಿ ಸಂವಿಧಾನದ ಹೆಸರಿನಲ್ಲಿಯೇ ಪ್ರಮಾಣವಚನ ಸ್ವೀಕರಿಸಿರುವ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಅವರು, ಸಂವಿಧಾನದಲ್ಲಿ ಉಲ್ಲೇಖವಾಗಿರುವ ಅತ್ಯಂತ ಪವಿತ್ರ ಹಾಗೂ ಅತ್ಯಂತ ಗೌರವಾನ್ವಿತ ಹುದ್ದೆಯಾದ ವಿಧಾನಸಭೆಯ ಸಭಾಧ್ಯಕ್ಷದ ತೀರ್ಮಾನಗಳನ್ನೆ ಸಾರ್ವಜನಿಕವಾಗಿ ಪ್ರಶ್ನಿಸುವ ಮೂಲಕ ಅಸಂವಿಧಾನಿಕ ನಡವಳಿಕೆಯನ್ನು ತೋರುತ್ತಿರುವುದು ಖಂಡನೀಯ ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ. ವಿಕಾಸ್ ಹೆಗ್ಡೆ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ವಿಧಾನಸಭಾ ಅಧಿವೇಶನದ ಸಮಯದಲ್ಲಿ ಸಾಮಾಜಿಕ ಜವಾಬ್ದಾರಿಯನ್ನು ಅತ್ಯಂತ ಎಚ್ಚರಿಕೆಯಿಂದ ನಿರ್ವಹಿಸಬೇಕಾದ ಒಬ್ಬ ಜನಪ್ರತಿನಿಧಿಯಾಗಿದ್ದ ಅವರು, ಸಭಾಧ್ಯಕ್ಷರ ಪೀಠವನ್ನು ಏರಿ, ಅಧ್ಯಕ್ಷರ ಹಾಗೂ ಪೀಠದ ಮೇಲೆಯೇ ಕಾಗದ ಪತ್ರಗಳನ್ನು ಹರಿದು, ಸಭೆಗೆ ಅಗೌರವ ತೋರಿದ ನೆಲೆಯಲ್ಲಿ ವಿಧಾನಸಭೆಯಿಂದ ಅಮಾನತುಗೊಂಡಿದ್ದ ಅವರು, ಇದೀಗ ಅಮಾನತು ಆದೇಶ ರದ್ದಾದ ಬಳಿಕವೂ ತಮ್ಮ ಹಿಂದಿನ ನಡವಳಿಕೆಯನ್ನೆ ಮುಂದುವರೆಸಿರುವುದು ದುರದೃಷ್ಟಕರ. ಅಧಿವೇಶನದಲ್ಲಿ ಅಮಾನತುಗೊಂಡ ಶಾಸಕರ ಅಮಾನತು ಆದೇಶವನ್ನು ಮರುಪರಿಶೀಲಿಸುವಂತೆ ದುಂಬಾಲು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಬೆಳಗಾವಿ ಹಾಗೂ ಮೈಸೂರು ಕಂದಾಯ ವಿಭಾಗಗಳಲ್ಲಿ ಅಲ್ಪಸಂಖ್ಯಾತರ ಸಮುದಾಯದ ಯುವ ಜನರಿಗೆ ವಸತಿಯುತ ಪೊಲೀಸ್ ಸಬ್ ಇನ್ಸ್ಪೆಕ್ಟರ್ (ಪಿ.ಎಸ್.ಐ) ನೇಮಕಾತಿ ಪರೀಕ್ಷಾ ಪೂರ್ವ ತರಬೇತಿಗೆ ಆಯ್ಕೆ ಮಾಡುವ ಸಂಬಂಧ ಅರ್ಹ ಅಭ್ಯರ್ಥಿಗಳಿಂದ ಸೇವಾಸಿಂಧು ಪೋರ್ಟಲ್ http://sevasindhu.karnataka.gov.in/sevasindhu/DepartmentServices ಅಥವಾ http://dom.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಜೂನ್ 5 ರ ವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಹಾಯವಾಣಿ ಸಂಖ್ಯೆ: 8277799990 ಅಥವಾ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಜಾದ್ ಭವನ, ಅಲೆವೂರು ರಸ್ತೆ, ಮಣಿಪಾಲ ದೂ.ಸಂಖ್ಯೆ: 0820-2573596 ಅಥವಾ ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ದೂ.ಸಂಖ್ಯೆ : 0820-2574596, ಕಾರ್ಕಳ ದೂ.ಸಂಖ್ಯೆ: 08258-231101 ಹಾಗೂ ಕುಂದಾಪುರ ದೂ.ಸಂಖ್ಯೆ: 08254-230370 ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಇಲಾಖೆಯ ಕಚೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪ್ರತಿಭೆ ನಿಮ್ಮದು ವೇದಿಕೆ ನಮ್ಮದು 2025ರ ಕಾರ್ಯಕ್ರಮದಡಿ ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ ಸತತ 107ನೇ ತಿಂಗಳ ಕಾರ್ಯಕ್ರಮ ಇತ್ತೀಚಿಗೆ ವಸಂತಿ ಆರ್. ಪಂಡಿತ್ ಮತ್ತು ದೇವಕಿ ಸುರೇಶ್ ಪ್ರಭು ಅವರ ಪ್ರಾರ್ಥನೆಯೊಂದಿಗೆ ಆರಂಭವಾಯಿತು. ವೇದಿಕೆಯಲ್ಲಿ ಅಧ್ಯಕ್ಷರಾಗಿ ಗೊಂಬೆಯಾಟ ಪ್ರೋತ್ಸಾಹಕರಾದ ರಾಧಾಕೃಷ್ಣ ಪ್ರಭು, ಮುಖ್ಯ ಅತಿಥಿಗಳಾಗಿ ಉಡುಪಿ ಯಕ್ಷಗಾನ ಕೇಂದ್ರದ ಗುರು ಹಾಗೂ ಉಪ್ಪಿನಕುದ್ರು ಗೊಂಬೆಯಾಟ ಮಂಡಳಿಯ ಭಾಗವತರಾದ ಉಮೇಶ್ ಸುವರ್ಣ, ರಮೇಶ್ ಕಾಮತ್, ವಿ. ಶ್ರೀನಿವಾಸ ಪೈ, ಆಡಿಟರ್ ವಾಸುದೇವ ಶ್ಯಾನುಭಾಗ್ ಹಾಗೂ ಅಕಾಡೆಮಿ ಅಧ್ಯಕ್ಷ ಭಾಸ್ಕರ್ ಕೊಗ್ಗ ಕಾಮತ್ ಅವರು ಉಪಸ್ಥಿತರಿದ್ದರು. 2024-25ರ ಸಾಲಿನ ಎಸ್ಎಸ್ಎಲ್‌ಸಿ ಪರೀಕ್ಷೆಯಲ್ಲಿ ಕರ್ನಾಟಕ ರಾಜ್ಯಕ್ಕೆ ಮೂರನೇ ರ‍್ಯಾಂಕ್ ಪಡೆದ ವಿದ್ಯಾರ್ಥಿನಿ ಹಾಗೂ ಕಲಾವಿದೆ ಆಕಾಂಕ್ಷಾ ಎಸ್. ಪೈ ಅವರನ್ನು ಅಕಾಡೆಮಿ ವತಿಯಿಂದ ಸನ್ಮಾನಿಸಲಾಯಿತು. ಕೊನೆಯಲ್ಲಿ ಆಕಾಂಕ್ಷಾ ಎಸ್, ಪೈ ಹಾಗೂ ಅವನಿ ಶ್ಯಾನುಭಾಗ್ ಅವರು ನಡೆಸಿಕೊಟ್ಟ ಸುಗಮ ಸಂಗೀತ ಎಲ್ಲರ ಮನ ರಂಜಿಸಿತು. ರಾಜೇಂದ್ರ ಪೈ, ಉಪ್ಪಿನಕುದ್ರು ಅವರು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಗೆಳೆಯರ ಬಳಗ ಯುವಕ ಸಂಘ ದಾನಗುಂದು, ಹಂದಟ್ಟು ಕಳೆದ 24 ವರ್ಷಗಳಿಂದ ಆಚರಿಸಿಕೊಂಡು ಬರುತ್ತಿರುವ ಸಾರ್ವಜನಿಕ ಶ್ರೀ ಗಣೇಶ ಉತ್ಸವ ಹಂದಟ್ಟು ಚೌತಿಗೆ ಈ ಬಾರಿ 25ರ ಬೆಳ್ಳಿ ಹಬ್ಬದ ಸಂಭ್ರಮ. ಆ ಪ್ರಯುಕ್ತ ಗೆಳೆಯರ ಬಳಗ ಯುವಕ ಸಂಘ ದಾನಗುಂದು, ಹಂದಟ್ಟು ಸಭಾಭಾವನದಲ್ಲಿ ಬೆಳ್ಳಿಹಬ್ಬದ ಪೋಸ್ಟರ್ ಬಿಡುಗಡೆ ಕಾರ್ಯಕ್ರಮ ನೆರವೇರಿತು. ಬೆಳ್ಳಿ ಹಬ್ಬದ ಪ್ರಯುಕ್ತ ಆಗಸ್ಟ್ 27 ರಿಂದ 31ರ ತನಕ ವಿವಿಧ ಧಾರ್ಮಿಕ, ಸಾಂಸ್ಕೃತಿಕ, ಕ್ರೀಡಾ ಕಾರ್ಯಕ್ರಮಗಳ ಜೊತೆ ಜೊತೆಗೆ ಸಾರ್ವಜನಿಕ ಉಪಯೋಗಕ್ಕೆ ನಿರ್ಮಾಣಗೊಳ್ಳುತ್ತಿರುವ ಗೆಳೆಯರ ಬಳಗ ಯುವಕ ಸಂಘ ದಾನಗುಂದು, ಹಂದಟ್ಟು ದಿ. ಹಂದಟ್ಟು ಬಲರಾಮ ಹಂದೆ ಸಭಾಭವನ ಲೋಕಾರ್ಪಣೆ, ಲೋಕ ಕಲ್ಯಾಣಾರ್ಥ ಸಹಸ್ರ ನಾರಿಕೇಳ ಗಣಯಾಗ ಹಾಗೂ ಮಹಾ ಅನ್ನಸಂತರ್ಪಣೆ ನೆರವೇರಲಿದೆ. ಗೆಳೆಯರ ಬಳಗ ಯುವಕ ಸಂಘದ ಅಧ್ಯಕ್ಷ ಪ್ರಕಾಶ್ ಹಂದಟ್ಟು ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ಸತೀಶ್ ಕುಂದರ್ ಬಾರಿಕೆರೆ ಬೆಳ್ಳಿಹಬ್ಬದ ಪೋಸ್ಟರ್ ಬಿಡುಗಡೆಗೊಳಿಸಿದರು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಪ್ರಸಕ್ತ ಸಾಲಿನಲ್ಲಿ ಉಡುಪಿ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಡಾ.ಬಿ.ಆರ್ ಅಂಬೇಡ್ಕರ್ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ಬಾಲಕರ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಾತಿಗಾಗಿ ಹೊಸದಾಗಿ ಪ್ರವೇಶ ಬಯಸುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1, ಪ್ರವರ್ಗ-2ಎ, 2ಬಿ, 3ಎ, 3ಬಿ ಮತ್ತು ಇತರೆ ಜನಾಂಗಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಹೆಚ್.ಎಂ.ಐ.ಎಸ್ ತಂತ್ರಾಂಶದ ಮೂಲಕ ವೆಬ್‌ಸೈಟ್ www.sw.kar.nic.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿನಿಲಯದ ವಿವರ: ಉಡುಪಿ ತಾಲೂಕಿನ ಕುಂಜಿಬೆಟ್ಟು, ಕಾಪು ತಾಲೂಕಿನ ಪಡುಬಿದ್ರಿ, ಬ್ರಹ್ಮಾವರ ತಾಲೂಕಿನ ಯಡ್ತಾಡಿ ಹಾಗೂ ಕೂರಾಡಿ ಡಾ.ಬಿ.ಆರ್ ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ, ಉಡುಪಿ ತಾಲೂಕು ಬನ್ನಂಜೆ, ಕಾಪು ಮತ್ತು ಬ್ರಹ್ಮಾವರ ತಾಲೂಕಿನ ಯಡ್ತಾಡಿ ಹಾಗೂ ಕೂರಾಡಿ ಡಾ.ಬಿ.ಆರ್ ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿನಿಲಯ, ಉಡುಪಿ ತಾಲೂಕು 76 ಬಡಗಬೆಟ್ಟು ಹಾಗೂ ಉಡುಪಿ ಟೌನ್ ಡಾ.ಬಿ.ಆರ್ ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿನಿಲಯ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕಾಗಿ ನಡೆಸಿದ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಜನತಾ ಪದವಿಪೂರ್ವ ಕಾಲೇಜಿನ ಪರೀಕ್ಷೆ ಬರೆದ 85 ವಿದ್ಯಾರ್ಥಿಗಳಲ್ಲಿ, 25 ವಿದ್ಯಾರ್ಥಿಗಳು ಹತ್ತು ಸಾವಿರದ ಒಳಗೆ ರ‍್ಯಾಂಕ್‌ಗಳನ್ನು ಪಡೆದು ಸಾಧನೆ ಮೆರೆದಿರುತ್ತಾರೆ. ವಿದ್ಯಾರ್ಥಿ ಆಕಾಶ್ ಹೆಬ್ಬಾರ್ ವೆಟರ್ನರಿ ಸೈನ್ಸ್- 999, ನ್ಯಾಚುರೋಪತಿ & ಸೈನ್ಸ್- 932, ನರ್ಸಿಂಗ್- 1009ಬಿ ಫಾರ್ಮ್-1382, ಬಿ.ಎಸ್ಸಿ ಅಗ್ರಿ- 1382 ರ‍್ಯಾಂಕ್ ಗಳನ್ನು ಪಡೆದು ಅದ್ವಿತೀಯ ಸಾಧನೆ ಮಾಡಿರುತ್ತಾನೆ. ವಿದ್ಯಾರ್ಥಿಗಳಾd ಕ್ರಮವಾಗಿ ನಿಶ್ಚಿತ್ ಇಂಜಿನಿಯರಿಂಗ್ -1638 ನೇ ರ‍್ಯಾಂಕ್, ಶೋಭಿತ್-ಬಿ.ಎಸ್ಸಿ ಅಗ್ರಿ 2006 ನೇ ರ‍್ಯಾಂಕ್, ಗಿರೀಶ್ ಪೈ ಇಂಜಿನಿಯರಿಂಗ್-2159 ನೇ ರ‍್ಯಾಂಕ್ ಚಿರಂತನ್ ಇಂಜಿನಿಯರಿಂಗ್-2219 ನೇ ರ‍್ಯಾಂಕ್, ಶಶಾಂಕ್ ಇಂಜಿನಿಯರಿಂಗ್-2219 ನೇ ರ‍್ಯಾಂಕ್ ಪಡೆಯುವುದರ ಮೂಲಕ ಅದ್ವಿತೀಯ ಸಾಧನೆ ಮಾಡಿ ರಾಜ್ಯದ ಪ್ರತಿಷ್ಠಿತ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಪ್ರವೇಶಾತಿಯನ್ನು ಪಡೆಯಲು ಅರ್ಹರಾಗಿರುತ್ತಾರೆ. ಗುಣಮಟ್ಟದ ಶಿಕ್ಷಣಕ್ಕೆ ಹೆಸರಾದ ಜನತಾ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಪ್ರಚಾರಕ್ಕಾಗಲೀ ವ್ಯವಹಾರದ ದೃಷ್ಠಿಯಿಂದಾಗಲೀ ಅಥವಾ ಇತರರು ಗುರುತಿಸಿ ಗೌರವಿಸಬೇಕೆಂಬ ಉದ್ದೇಶವಿಟ್ಟು ಮತ್ತು ಅಪಾತ್ರರಿಗೆ ಮಾಡಿದ ದಾನ ಶ್ರೇಷ್ಠವೆನಿಸದು. ಇದು ಕೇವಲ ಕಾಟಾಚಾರಕ್ಕಾಗಿ ಮಾತ್ರ ಸೀಮಿತವಾಗಿದ್ದು, ಏನೂ ಲಾಭವಾಗದು ಎಂದು ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶ ಶ್ರೀ ವಿದ್ಯಾಧೀಶ ಶ್ರೀಪಾದ ವಡೇರ ಸ್ವಾಮೀಜಿ ಹೇಳಿದರು. ಅವರು ಉಪ್ಪುಂದ ಶ್ರೀ ಲಕ್ಷ್ಮೀವೆಂಕಟರಮಣ ದೇವಸ್ಥಾನದಲ್ಲಿ ಶನಿವಾರ ಸಂಜೆ ನಡೆದ ಧಾರ್ಮಿಕ ಸಮಾರಂಭದಲ್ಲಿ ನೂತನ ಶ್ರೀ ವಿದ್ಯಾಧಿರಾಜ ಸಭಾಗೃಹ ಹಾಗೂ ಇತರೇ ಕಟ್ಟಡ ನಿರ್ಮಾಣಕ್ಕೆ ಆರ್ಥಿ ಸಹಕಾರ ನೀಡಿದ ದಾನಿಗಳನ್ನು ಅಭಿನಂದಿಸಿ ಮಾತನಾಡಿದರು. ಹಿಂದು ಪರಂಪರೆಯಲ್ಲಿ ದಾನ, ಧರ್ಮಗಳ ಮೂಲಕ ಸತ್ಕರ್ಮಗಳನ್ನು ಮಾಡಬೇಕು ಎಂಬ ನಿಯಮವಿದೆ. ಅದು ಶಾರೀರಿಕವಾಗಿ, ಮಾನಸಿಕವಾಗಿ ಮತ್ತು ಆರ್ಥಿಕವಾಗಿಯೂ ಕೂಡ ಮಾಡಬಹುದಾಗಿದೆ. ಇಂದಿನ ಕಾಲಘಟ್ಟದಲ್ಲಿ ಈ ರೀತಿ ಗುಪ್ತವಾಗಿ ದಾನ ಮಾಡುವವರ ಸಂಖ್ಯೆ ಬಹಳ ವಿರಳ. ದೇವರಿಗೆ ಯಾವುದೇ ಅಪೇಕ್ಷೆ ಇಲ್ಲದಿದ್ದರೂ ಭಕ್ತರು ನಿಸ್ವಾರ್ಥ ಹಾಗೂ ಪ್ರತಿಫಲಾಪೇಕ್ಷೆ ಇಲ್ಲದೇ ಮಾಡುವ ಸತ್ಕಾರ್ಯಗಳಿಗೆ ದೇವರ ಕೃಪೆಯಿರುತ್ತದೆ.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ದೇಶವನ್ನೆ ಸ್ವಚ್ಛವಾಗಿಡಲು ಪ್ರಧಾನಮಂತ್ರಿಗಳು ಸ್ವಚ್ಛ ಭಾರತ ಪರಿಕಲ್ಪನೆಯನ್ನು ತಂದರು ಆದರೆ ಜನಸಾಮಾನ್ಯರು ಸ್ವಚ್ಛತೆಯ ಬಗ್ಗೆ ಇನ್ನಷ್ಟು ಜಾಗೃತರಾಗಿ ಪ್ರಧಾನಮಂತ್ರಿಗಳ ಕನಸು ಸಾಕಾರಗೊಳಿಸೋಣ ಎಂದು ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ಸತೀಶ್ ಕುಂದರ್ ಬಾರಿಕೆರೆ ನುಡಿದರು. ಅವರು ಭಾನುವಾರ ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ಇದರ ನೇತೃತ್ವದಲ್ಲಿ ಹಂದಟ್ಟು ಮಹಿಳಾ ಬಳಗ ಕೋಟ, ಮಣೂರು ಫ್ರೆಂಡ್ಸ್, ಜೆಸಿಐ ಕೋಟ ಸಿನಿಯರ್ ಲಿಜನ್ ಸಹಯೋಗದೊಂದಿಗೆ ಕೋಟತಟ್ಟು ಗ್ರಾಮಪಂಚಾಯತ್, ಬಾರಿಕೆರೆ ಯುವಕ ಮಂಡಲದ ಸಂಯೋಜನೆಯೊಂದಿಗೆ 256ನೇ ಪರಿಸರಸ್ನೇಹಿ ಅಭಿಯಾನದ ಪ್ರಯುಕ್ತ ಕೋಟತಟ್ಟು ಕೊರಗ ಕಾಲೋನಿ ಸ್ವಚ್ಛತಾ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದರು. ಪರಿಸರದ ಬಗ್ಗೆ ಪಂಚವರ್ಣ ಸಂಘಟನೆ ಸಾಕಷ್ಟು ಶ್ರಮಿಸುತ್ತಿದೆ ಅದೇ ಮನೋಭಾವನೆ ಪ್ರತಿಯೊಂದು ಮನೆ ಮನದಲ್ಲಿ ಮೊಳಗಬೇಕು, ಪಂಚಾಯತ್ ವ್ಯಾಪ್ತಿಯಲ್ಲಿ ತ್ಯಾಜ್ಯ ಎಸೆಯುವ ಬ್ಲ್ಯಾಕ್ ಸ್ಪಾಟ್ ಪ್ರದೇಶಗಳಲ್ಲಿ ಸಿಸಿ ಕ್ಯಾಮರ ಕಣ್ಗಾವಲು ಇರಿಸಲಾಗುವುದು ಎಂದರು. ಕೋಟತಟ್ಟು ಗ್ರಾಮಪಂಚಾಯತ್ ಸದಸ್ಯರಾದ ಪ್ರಮೋದ್ ಹಂದೆ,…
