Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ರೋಟರಿ ಕ್ಲಬ್ ಕುಂದಾಪುರದ ಆತಿಥ್ಯದಲ್ಲಿ, ರೋಟರಿ ಇಂಟರ್‌ನ್ಯಾಷನಲ್ ಡಿಸ್ಟ್ರಿಕ್ಟ್ 3182ರ ಝೋನ್ 1 ವತಿಯಿಂದ “Rotary Youth Leadership Award 2026-27 – YUVA JANA MANA” ಎಂಬ ವಿಶೇಷ ವಲಯಮಟ್ಟದ ರೈಲಾ ಕಾರ್ಯಕ್ರಮವು ಗಿಳಿಯಾರು ಕುಶಾಲ ಹೆಗ್ಡೆ ರೋಟರಿ ಭವನದಲ್ಲಿ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮವನ್ನು ARPIC ಝೋನ್ 7 PDG ಅಭಿನಂದನ್ ಎ. ಶೆಟ್ಟಿ ಅವರು ಗಿಡಕ್ಕೆ ನೀರೆರೆಯುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿ, ಯುವಜನರಲ್ಲಿ ನಾಯಕತ್ವ ಗುಣ, ಸಕಾರಾತ್ಮಕ ಚಿಂತನೆ, ಆತ್ಮವಿಶ್ವಾಸ ಹಾಗೂ ಜೀವನ ಮೌಲ್ಯಗಳನ್ನು ಬೆಳೆಸುವಲ್ಲಿ ರೈಲಾದಂತಹ ಕಾರ್ಯಕ್ರಮಗಳ ಮಹತ್ವವನ್ನು ವಿವರಿಸಿದರು. ಈ ಸಂದರ್ಭದಲ್ಲಿ ರ‍್ಯಾಲಿ RI ಡಿಸ್ಟ್ರಿಕ್ಟ್ 3182 ಚೇರ್ಮನ್ ಕೆ. ಎಸ್. ಜೈವಿಠಲ್, ಸಹಾಯಕ ಗವರ್ನರ್ ಝೋನ್ 1 ಶ್ರೀನಾಥ್ ಜೆ. ರಾವ್, ವಲಯ ತರಬೇತುದಾರ ಝೋನ್ 1 ಕೊಡ್ಲಾಡಿ ಸುಭಾಶ್ಚಂದ್ರ ಶೆಟ್ಟಿ, ವಲಯ ಲೆಫ್ಟಿನೆಂಟ್ ಸತ್ಯನಾರಾಯಣ ಪುರಾಣಿಕ್, ಪ್ರಶಾಂತ್ ಹವಾಲ್ದಾರ್ ಹಾಗೂ ಚಂದ್ರಕಲಾ ತಾಂಡೆಲ್ ಉಪಸ್ಥಿತರಿದ್ದರು. ಕಾರ್ಯಕ್ರಮದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ಪ್ರಗತಿಪರ ಸೌಹಾರ್ದ ಸಹಕಾರಿ ಸಂಘ  ನಿ. ಇದರ ಸರ್ವ ಸದಸ್ಯರ ಐದನೇ ವರ್ಷದ ವಾರ್ಷಿಕ ಮಹಾಸಭೆ ಮತ್ತು ಸಂಸ್ಥೆಗೆ ಸಹಕರಿಸಿದ ಮಹನೀಯರಿಗೆ ಅಭಿನಂದನಾ ಕಾರ್ಯಕ್ರಮವು ಇಲ್ಲಿನ ವೈಶಾಲಿ ಕಾಂಪ್ಲೆಕ್ಸ್ ಮಿನಿ ಹಾಲ್‌ನಲ್ಲಿ ಭಾನುವಾರ ನಡೆಯಿತು .  ಈ ಸಂದರ್ಭದಲ್ಲಿ ಚಿಲ್ಡ್ರನ್ ಫ್ಯಾಶನ್ ಮಾಲೀಕರಾದ ಆನಂದ್ ರಾವ್ ಕೆ., ವೈಶಾಲಿ ಕಾಂಪ್ಲೆಕ್ಸ್ ಮಾಲೀಕರಾದ ಹಂಸರಾಜ ಶೆಟ್ಟಿ, ಶ್ರೀದೇವಿ ಮೆಡಿಕಲ್ಸ್ ನ  ಗಣೇಶ್ ಬೆಟ್ಟಿನ್, ಕೊತ್ವಾಲ್ ಟ್ರೇಡರ್ ನ  ಅರವಿಂದ ಕೊತ್ವಾಲ್, ಬಿಲ್ಲವ ಮಹಿಳಾ ಘಟಕದ ಮಾಜಿ ಅಧ್ಯಕ್ಷ ಸುಶೀಲಾ ಶಂಕರ್ ಪೂಜಾರಿ ಕೋಡಿ, ಬಿಲ್ಲವ ಮಹಿಳಾ ಘಟಕದ ಅಧ್ಯಕ್ಷ ಯಕ್ಷಗಾನ ಪ್ರಸಂಗ ಕರ್ತೆ ಶಾಂತ ವಾಸುದೇವ ಪೂಜಾರಿ ಅವರನ್ನು ಸಂಸ್ಥೆಯ ಪರವಾಗಿ ಅಭಿನಂದಿಸಿ ಗೌರವಿಸಲಾಯಿತು. ಸಂಸ್ಥೆಯ ನಿರ್ದೇಶಕರಾದ ಕೆ. ರಮೇಶ್ ಪ್ರಭು, ರಾಘವೇಂದ್ರ ಲೋಕೇಶ್ ಪೂಜಾರಿ, ಗುರುರಾಜ್ ಕಾವೇರಿ, ಮಂಜುನಾಥ್ ನರಸಿಬೆಟ್ಟು ಕೋಡಿ, ಗಂಗಾಧರ್ ಪೂಜಾರಿ, ಸುರೇಶ್ ಪೂಜಾರಿ ಕಲಾಗಾರ, ಭಾರತಿ ಉಮೇಶ್ ಪೂಜಾರಿ, ಕಿರಣ್ ನೆರಂಬಳ್ಳಿ ಉಪಸ್ಥಿತರಿದ್ದರು. ಸಂಸ್ಥೆಯ ಅಧ್ಯಕ್ಷರಾದ ರಾಮಚಂದ್ರ…

Read More

ಕುಂದಾಪ್ರ ಡಾಟ್‌ ಕಾಂ ಸುದಿದ.ಕುಂದಾಪುರ: ಜೆಸಿಐ ಮಡಂತ್ಯಾರಿನ ಆತಿಥ್ಯದಲ್ಲಿ ನಡೆದ ಅಭಿವೃದ್ಧಿ ಮತ್ತು ಬೆಳವಣಿಗೆ ಹಾಗೂ ವ್ಯವಹಾರ ಸಮ್ಮೇಳನ “ಮೃದಿನಿ 2026” ಕಾರ್ಯಕ್ರಮದಲ್ಲಿ ಜೆಸಿಐ ಹಾಲಾಡಿ ವಾರಾಹಿಯ ಹೆಮ್ಮೆಯ ಸದಸ್ಯರಾದ ಜೆಸಿ ಗುರುಪ್ರಸಾದ್ ಶೆಟ್ಟಿ ಅವರು ಪ್ರತಿಷ್ಠಿತ “ಸಾಧನಾ ಶ್ರೀ ಪ್ರಶಸ್ತಿ” ಸ್ವೀಕರಿಸಿ ಜೆಸಿಐ ಹಾಲಾಡಿ ವಾರಾಹಿ ಘಟಕಕ್ಕೆ ಕೀರ್ತಿ ತಂದಿದ್ದಾರೆ. ಕಾರ್ಯಕ್ರಮದಲ್ಲಿ ವಲಯಾಧ್ಯಕ್ಷರಾದ ಜೆಎಫ್ಎಸ್ ಸಂತೋಷ್ ಶೆಟ್ಟಿ ಜೆಸಿಐ ಇಂಡಿಯಾ ಅವರು ಪ್ರಶಸ್ತಿ ಪುರಸ್ಕೃತ ಜೆಸಿ ಗುರುಪ್ರಸಾದ್ ಶೆಟ್ಟಿ ಅವರನ್ನು ಗೌರವಿಸಿ ಅಭಿನಂದಿಸಿದರು. ಜೆಸಿ ಗುರುಪ್ರಸಾದ್ ಶೆಟ್ಟಿ ಅವರು ಸಮಾಜ ಸೇವೆ, ನಾಯಕತ್ವ ಹಾಗೂ ಜೆಸಿಐ ಚಟುವಟಿಕೆಗಳಲ್ಲಿ ನೀಡಿರುವ ವಿಶೇಷ ಕೊಡುಗೆಯನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಅವರ ಈ ಸಾಧನೆಗೆ ಜೆಸಿಐ ಹಾಲಾಡಿ ವಾರಾಹಿ ಘಟಕದ ಸದಸ್ಯರು ಹರ್ಷ ವ್ಯಕ್ತಪಡಿಸಿ ಅಭಿನಂದನೆಗಳನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ  ಹಾಲಾಡಿ ವಾರಾಹಿ ಘಟಕದ ಅಧ್ಯಕ್ಷರಾದ ಜೆಸಿ ಪ್ರದೀಪ್ ಹಾಲಾಡಿ, ಜೆಸಿಐ ಶಂಕರನಾರಾಯಣ ಘಟಕದ ಅಧ್ಯಕ್ಷರಾದ ಯೋಗೇಶ್ ಕಾಂಚನ್, ಶಂಕರನಾರಾಯಣ ಘಟಕದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ ( ಪದವಿ ಪೂರ್ವ ) ವಿದ್ಯೋದಯ ಪದವಿ ಪೂರ್ವ ಕಾಲೇಜು ಉಡುಪಿ ಇವರ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾಮಟ್ಟದ ಬಾಲಕ- ಬಾಲಕಿಯರ ಚೆಸ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಶ್ರಾವ್ಯ ಎ.ಪಿ. ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿನಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ – ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ರಾಜ್ಯದ ಪ್ರತಿಷ್ಠಿತ ಕೋಟ ಸಹಕಾರಿ ವ್ಯವಸಾಯಕ ಸಂಘಕ್ಕೆ ಅದರ ಉತ್ಕ್ರಷ್ಟ ಸಾಧನೆಗಾಗಿ ಮತ್ತೊಮ್ಮೆ ರಾಜ್ಯ ಅಪೆಕ್ಸ್ ಬ್ಯಾಂಕ್ ಪ್ರಶಸ್ತಿ ಒಲಿದು ಬಂದಿದ್ದು ಕಳೆದ ಆರ್ಥಿಕ ವರ್ಷದ ಪ್ರಗತಿ, ಸಾಲ ನೀಡಿಕೆ, ವಸೂಲಾತಿ ಮತ್ತು ಇತರ ಆರ್ಥಿಕ ಚಟುವಟಿಕೆಗಳನ್ನು ಗಮನಿಸಿ ಈ ಪ್ರಶಸ್ತಿ ನೀಡಲಾಗಿದೆ. ಶನಿವಾರ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಮಹಾಸಭೆಯಲ್ಲಿ ಸಂಘದ ಅಧ್ಯಕ್ಷ ಡಾ. ಕೃಷ್ಣ ಕಾಂಚನ್ ಮತ್ತು ಮುಖ್ಯ ಕಾರ್ಯ ನಿರ್ವಹಣಾ ಅಧಿಕಾರಿ ಶರತ್ ಕುಮಾರ್ ಶೆಟ್ಟಿ ಪ್ರಶಸ್ತಿ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ರವೀಂದ್ರ ಕಾಮತ್ ಮತ್ತು ಸಂಘದ ಮಾಜಿ ಅಧ್ಯಕ್ಷ ತಿಮ್ಮ ಪೂಜಾರಿ ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ಗ್ರಾಮೀಣ ಭಾಗದ ಮಕ್ಕಳ ಶಿಕ್ಷಣಕ್ಕೆ ವಿಶೇಷ ಆದ್ಯತೆ ನೀಡುತ್ತಾ, ಹಳ್ಳಿಯ ಶಾಲೆಗಳಲ್ಲಿ ಶಿಕ್ಷಕರ ಕೊರತೆಯನ್ನು ನೀಗಿಸುವ ಮಹತ್ವದ ಉದ್ದೇಶದಿಂದ ಜ್ಞಾನ ದೀಪ ಶಿಕ್ಷಕರ ನೇಮಕ ಮಾಡಿಕೊಳ್ಳುತ್ತಿದ್ದಾರೆ. ಶಿಕ್ಷಕರ ಕೊರತೆ ಇರುವ ಶಾಲೆಗಳಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಪ್ರತಿವರ್ಷ ಶಿಕ್ಷಕರನ್ನ ನೀಡುತ್ತಿರುವುದು ಅನೇಕ ಶಾಲೆಗಳಿಗೆ ತುಂಬಾ ಸಹಾಯಕವಾಗಿದೆ ಎಂದು ಬೈಂದೂರು ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಹೇಳಿದರು. ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಬೈಂದೂರು ವತಿಯಿಂದ ಬೈಂದೂರು ತಾಲೂಕಿಗೆ ಆಯ್ಕೆಗೊಂಡ ಶಾಲೆಗಳ ಜ್ಞಾನ ದೀಪ ಶಿಕ್ಷಕರ ಮಂಜೂರಾತಿ ಪತ್ರ ವಿತರಣಾ ಕಾರ್ಯಕ್ರಮವನ್ನು ಶನಿವಾರ ಉದ್ಘಾಟಿಸಿ ಮಾತನಾಡಿದರು. ಬೈಂದೂರು ಕ್ಷೇತ್ರ ಯೋಜನಾಧಿಕಾರಿ ನಾಗೇಶ್ ನಾಯ್ಕ್ ಮಾತನಾಡಿದರು. ಕರಾವಳಿ ಪ್ರಾದೇಶಿಕ ವಿಭಾಗದ ಪ್ರಾದೇಶಿಕ ನಿರ್ದೇಶಕ ಆನಂದ್ ಸುವರ್ಣ, ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯ ಸುಧಾಕರ್ ಆಚಾರ್ಯ, ಪ್ರಗತಿ ಬಂದು ಸ್ವಸಾಯ ಸಂಘಗಳ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ವಿದ್ಯಾರ್ಥಿನಿಯರು ಉತ್ತಮ ಶಿಕ್ಷಣದ ಜೊತೆಗೆ ತಮ್ಮ ದೈಹಿಕ ಮತ್ತು ಮಾನಸಿಕ ಆರೋಗ್ಯದ ಕಡೆಗೆ ವಿಶೇಷ ಕಾಳಜಿ ವಹಿಸುವುದು ಅತ್ಯಗತ್ಯ. ಮುಖ್ಯವಾಗಿ ಹಾಸ್ಟೆಲ್‌ನಲ್ಲಿ ವಾಸಿಸುವ ವಿದ್ಯಾರ್ಥಿನಿಯರು ವೈಯಕ್ತಿಕ ಸ್ವಚ್ಛತೆಗೆ ಮೊದಲ ಆದ್ಯತೆ ನೀಡಬೇಕು ಎಂದು ಕರ್ನಾಟಕ ಸರ್ಕಾರದ ಎನ್.ಆರ್.ಸಿ ವೈದ್ಯಕೀಯ ಅಧಿಕಾರಿ ಡಾ. ಧನ್ಯಾ ಎನ್. ಹೆಗ್ಡೆ ತಿಳಿಸಿದರು. ಅವರು ಇಲ್ಲಿನ ಸುಜ್ಞಾನ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗಾಗಿ ಆಯೋಜಿಸಲಾಗಿದ್ದ ಆರೋಗ್ಯ, ವೈಯಕ್ತಿಕ ಸ್ವಚ್ಛತೆ ಹಾಗೂ ಋತುಚಕ್ರದ ವೈಜ್ಞಾನಿಕ ನಿರ್ವಹಣಾ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು. “ದೇಹವನ್ನು ದೇಗುಲದಂತೆ ಪವಿತ್ರವಾಗಿಟ್ಟುಕೊಳ್ಳಬೇಕು. ಉತ್ತಮ ದೈಹಿಕ ಮತ್ತು ಮಾನಸಿಕ ಆರೋಗ್ಯವೇ ನಿಜವಾದ ಆಸ್ತಿ. ಸಮಯಕ್ಕೆ ಸರಿಯಾದ ನಿದ್ರೆ, ಪೌಷ್ಟಿಕ ಆಹಾರ ಹಾಗೂ ನಿಯಮಿತ ನೀರು ಸೇವನೆ ನಿಮ್ಮ ಮಾನಸಿಕ ಮತ್ತು ದೈಹಿಕ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ. ಮುಖ್ಯವಾಗಿ ಹಾಸ್ಟೆಲ್‌ನಲ್ಲಿ ನೆಲೆಸಿರುವ ವಿದ್ಯಾರ್ಥಿನಿಯರು ವೈಯಕ್ತಿಕ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಋತುಚಕ್ರದ ಸಮಯದಲ್ಲಿ ನಿಯಮಿತವಾಗಿ ಸ್ಯಾನಿಟರಿ ಪ್ಯಾಡ್‌ಗಳನ್ನು ಬದಲಾಯಿಸುವುದು ಮತ್ತು ಒಳ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಹಾಗೂ ಶಾರದಾ ಪದವಿಪೂರ್ವ ಕಾಲೇಜು ಉಡುಪಿ ಇವರ ಜಂಟಿ ಆಶ್ರಯದಲ್ಲಿ ಆಯೋಜಿಸಲಾಗಿದ್ದ 2026-2027ನೇ ಸಾಲಿನ ಉಡುಪಿ ಜಿಲ್ಲಾ ಮಟ್ಟದ ಹುಡುಗಿಯರ ಟೇಬಲ್ ಟೆನ್ನಿಸ್ ಸ್ಪರ್ಧೆಯಲ್ಲಿ ಸುಜ್ಞಾನ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ಅತ್ಯುತ್ತಮ ಸಾಧನೆಗೈದಿದ್ದಾರೆ. ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಮಯೋಲಾ ಕಾರ್ವಲ್ಲೋ ಶ್ರೇಷ್ಠ ಸಾಧನೆಯ ಮೂಲಕ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ. ಅವರು ಮೌರಿಸ್ ಕಾರ್ವಲ್ಲೋ ಹಾಗೂ ಮಾಯಾ ಎಂ. ಕಾರ್ವಲ್ಲೋ ದಂಪತಿಯ ಪುತ್ರಿ. ಹಾಗೇ, ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿಯರಾದ ಶ್ರಾವ್ಯ ಶೆಟ್ಟಿ ಮತ್ತು ಅನುಷ್ಕಾ  ಎನ್. ಕಾಲೇಜಿನ ಟೇಬಲ್ ಟೆನ್ನಿಸ್ ತಂಡದಲ್ಲಿ ಪ್ರತಿನಿಧಿಸಿ ದ್ವಿತೀಯ ಪ್ರಶಸ್ತಿ ಪಡೆದು ಸಂಸ್ಥೆಗೆ ಹೆಮ್ಮೆ ತಂದಿರುತ್ತಾರೆ. ಟೇಬಲ್ ಟೆನ್ನಿಸ್ ಪಂದ್ಯಾಟದಲ್ಲಿ ಜಿಲ್ಲಾ ಮಟ್ಟದಲ್ಲಿ ಸಾಧನೆಗೈದು ಕಾಲೇಜಿಗೆ ಕೀರ್ತಿ ತಂದ ವಿದ್ಯಾರ್ಥಿನಿಯರನ್ನು ಸುಜ್ಞಾನ ಎಜುಕೇಶನಲ್‌ ಟ್ರಸ್ಟ್‌ನ ಅಧ್ಯಕ್ಷರಾದ ಡಾ. ರಮೇಶ್‌ ಶೆಟ್ಟಿ, ಕಾರ್ಯದರ್ಶಿ ಪ್ರತಾಪ್‌ ಚಂದ್ರ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಸಂಗೀತದಲ್ಲಿ ಶ್ರುತಿ ತಪ್ಪಿದರೆ ಸುಮಧುರವಾದ ಗಾಯನವೂ ಅಪಸ್ವರವಾಗುತ್ತದೆ. ಅದೇ ರೀತಿ ವಿದ್ಯಾರ್ಥಿ ಜೀವನಕ್ಕೂ ಸರಿಯಾದ ಶ್ರುತಿ, ಲಯ ಮತ್ತು ದಿಕ್ಕು ಅಗತ್ಯ. ಜ್ಞಾನ, ಶಿಸ್ತು, ಮೌಲ್ಯ ಮತ್ತು ಗುರಿಯೊಂದಿಗೆ ವಿದ್ಯಾರ್ಥಿಗಳ ಬದುಕನ್ನು ಶ್ರುತಿಬದ್ಧಗೊಳಿಸುವುದೇ ನಿಜವಾದ ಶಿಕ್ಷಣ. ಈ ಮಹತ್ತರ ಕಾರ್ಯದಲ್ಲಿ ಶಿಕ್ಷಣ ಸಂಸ್ಥೆಯೊಂದಿಗೆ ಪಾಲಕರ ಪಾತ್ರವೂ ಅತ್ಯಂತ ಅಗತ್ಯ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಹೇಳಿದರು. ಅವರು ಶನಿವಾರ ಆಳ್ವಾಸ್‌ನ ಕೃಷಿಸಿರಿ ವೇದಿಕೆಯಲ್ಲಿ ನಡೆದ ಆಳ್ವಾಸ್ ಪದವಿಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳ ಪಾಲಕ–ಶಿಕ್ಷಕ ಸಮಾವೇಷದಲ್ಲಿ ಮಾತನಾಡಿದರು. ಪದವಿಪೂರ್ವ ಶಿಕ್ಷಣದ ಹಂತವು ವಿದ್ಯಾರ್ಥಿ ಜೀವನದಲ್ಲಿ ಅತ್ಯಂತ ನಿರ್ಣಾಯಕ ಘಟ್ಟ. ಈ ಅವಧಿಯಲ್ಲಿ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಶಿಕ್ಷಣ ಹಾಗೂ ವೃತ್ತಿಜೀವನಕ್ಕೆ ಭದ್ರವಾದ ಅಡಿಪಾಯ ಹಾಕಿಕೊಳ್ಳಬೇಕು. ಇದಕ್ಕಾಗಿ ವಿದ್ಯಾರ್ಥಿಗಳು ಮಾತ್ರವಲ್ಲದೆ, ಪಾಲಕರು ಕೂಡ ಶಿಕ್ಷಣ ವ್ಯವಸ್ಥೆಯನ್ನು ಸರಿಯಾಗಿ ಅರ್ಥಮಾಡಿಕೊಂಡು ತಮ್ಮ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸಬೇಕು ಎಂದರು. ವಿದ್ಯಾರ್ಥಿ–ಶಿಕ್ಷಕ–ಪಾಲಕ ಎಂಬ ಮೂರು ಶಕ್ತಿಗಳು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕಾಲೇಜಿನಲ್ಲಿ ವಿದ್ಯಾರ್ಥಿಗಳು ಸಮಯ ಮತ್ತು ಶಿಸ್ತನ್ನು ಪಾಲನೆ ಮಾಡಬೇಕು. ಕಾಲೇಜಿನಲ್ಲಿ ನಡೆದ ದೈನಂದಿನ ಪಾಠ ಪ್ರವಚನಗಳ ಬಗ್ಗೆ ಪೋಷಕರು ಮಕ್ಕಳಿಂದ ಮಾಹಿತಿ ಪಡೆದುಕೊಳ್ಳುತ್ತಿರಬೇಕು. ಕಡಿಮೆ ಅಂಕ ಪಡೆದ ಮಕ್ಕಳನ್ನು ಕಡೆಗಣಿಸದೆ ಹೆಚ್ಚು ಅಂಕಗಳಿಸುವ ನಿಟ್ಟಿನಲ್ಲಿ ಪ್ರೋತ್ಸಾಹ ನೀಡಬೇಕು. ಕ್ರೀಡೆ ಹಾಗೂ ಪಾಠೇತರ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ತೊಡಗಿಸಿಕೊಳ್ಳಲು ಉತ್ತೇಜನ ನೀಡಬೇಕು. ಜಂಕ್ ಫುಡ್ ಮತ್ತು ಮೊಬೈಲ್ ಬಳಕೆಯನ್ನು ಆದಷ್ಟು ಕಡಿಮೆ ಮಾಡಬೇಕು ಎಂದು ಗಂಗೊಳ್ಳಿಯ ಎಸ್.ವಿ. ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂ.ಸಿ. ಹೇಳಿದರು. ಅವರು ಎಸ್.ವಿ. ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ಶನಿವಾರ ಜರಗಿದ ಕಾಲೇಜಿನ ಪದವಿ ಪೂರ್ವ ವಿಭಾಗದ ವಿದ್ಯಾರ್ಥಿಗಳ ಪೋಷಕರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಾಲೇಜಿನ ಸಂಸ್ಕೃತ ಉಪನ್ಯಾಸಕ ವೆಂಕಟೇಶಮೂರ್ತಿ ಕಾಲೇಜಿನ ಶಿಸ್ತು ಮತ್ತು ನಿಯಮಗಳ ಹಾಗೂ ಪರೀಕ್ಷಾ ಪದ್ಧತಿಗಳ ಬಗ್ಗೆ ಮಾಹಿತಿ ನೀಡಿದರು. ಉಪನ್ಯಾಸಕಿ ಪ್ರಫುಲ್ಲಾ, ವಿದ್ಯಾರ್ಥಿಗಳ ಪೋಷಕರು, ಉಪನ್ಯಾಸಕರು ಉಪಸ್ಥಿತರಿದ್ದರು. ಅರ್ಥಶಾಸ್ತ್ರ ಉಪನ್ಯಾಸಕಿ ಸುಗುಣ ಆರ್.ಕೆ. ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು.

Read More