Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ತಾಲೂಕಿನ ಉಪ್ಪುಂದ ಗ್ರಾಮದ ಶ್ರೀ ದುರ್ಗಾ ಪರಮೇಶ್ವರೀ ದೇವಸ್ಥಾನದ ಮುಖಮಂಟಪದ ಎದುರು ಮಲಗಿದ್ದ ದನವನ್ನು ಬುಧವಾರದಂದು ಮುಂಜಾನೆ ಕಳ್ಳರು ಕದ್ದೊಯ್ದಿದ್ದಾರೆ. ಈ ದೃಶ್ಯ ಸಿಸಿ ಕೆಮರಾದಲ್ಲಿ ದಾಖಲಾಗಿದೆ. ಬೆಳಗಿನ ಜಾವ ಕಾರಿನಲ್ಲಿ ಬಂದ ಮೂವರು ದುರುಳರು ಮಾಂಸ ಮಾಡುವ ಉದ್ದೇಶದಿಂದ ಹೊಂಚುಹಾಕಿ, ಮಲಗಿದ್ದ ದನವನ್ನು ಹಿಡಿದು ಕಾರಿನಲ್ಲಿ ‌ ಹಿಂಸಾತ್ಮಕವಾಗಿ ತುರುಕಿಕೊಂಡು ಹೋಗಿರುವುದು ಕಂಡುಬಂದಿದೆ. ಈ ಬಗ್ಗೆ ಬೈಂದೂರು ಪೊಲೀಸ್ ‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತ್ರಾಸಿ – ಮರವಂತೆ ಬೀಚ್‌ನಲ್ಲಿ ಪ್ರವಾಸಿಗರ ಸುರಕ್ಷತೆ ಮತ್ತು ಭದ್ರತೆ ಕುರಿತಂತೆ ಕೈಗೊಳ್ಳಬಹುದಾದ ಕ್ರಮಗಳ ಕುರಿತು ಗಂಗೊಳ್ಳಿ ಕರಾವಳಿ ಪೊಲೀಸ್ ಠಾಣೆ ಮತ್ತು ಉಡುಪಿ ಜಿಲ್ಲೆ ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳು ತ್ರಾಸಿ-ಮರವಂತೆ ಬೀಚ್‌ನಲ್ಲಿ ಮಂಗಳವಾರ ಚರ್ಚೆ ನಡೆಸಿದರು. ಗಂಗೊಳ್ಳಿ ಕರಾವಳಿ ಪೊಲೀಸ್ ಠಾಣೆಯ ಇನ್ಸಪೆಕ್ಟರ್ ವಸಂತ ರಾಮ್ ಆಚಾರ್ ಮಾರ್ಗದರ್ಶನದಲ್ಲಿ ಠಾಣೆಯ ಪಿಎಸೈ ಮುಕ್ತ ಬಾಯಿ, ಎಎಸ್ಸೈ ಸಂತೋಷ್‌ ಕುಂದರ್ ಮತ್ತು ರಾಘವೇಂದ್ರ ದೇವಾಡಿಗ ಅವರು ಪ್ರವಾಸಿಗರ ಸುರಕ್ಷತೆ ಮತ್ತು ಭದ್ರತೆ ಕುರಿತಂತೆ ಕೈಗೊಳ್ಳಬಹುದಾದ ಕ್ರಮಗಳ ಕುರಿತು ಉಡುಪಿ ಜಿಲ್ಲೆಯ ಪ್ರವಾಸೋದ್ಯಮ ಇಲಾಖೆ ಅಧಿಕಾರಿ ನಿದೀಶ್ ಜೊತೆ ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ ಪೊಲೀಸ್ ಸಿಬ್ಬಂದಿ, ಗೃಹ ರಕ್ಷಕ ದಳ, ಪ್ರವಾಸಿ ಮಿತ್ರ ಮತ್ತು ಲೈಪ್ ಗಾರ್ಡ್‌ಗಳನ್ನು ನಿಯೋಜಿಸುವ ಕುರಿತು ಚರ್ಚೆ ನಡೆಸಲಾಯಿತು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಕಳೆದ ಮೇ ತಿಂಗಳನಲ್ಲಿ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ನಡೆಸಿದ ಅಂತಿಮ ಬಿಇ ಪರೀಕ್ಷೆಯಲ್ಲಿ ಮೂಡುಬಿದಿರೆಯ ಆಳ್ವಾಸ್ ತಾಂತ್ರಿಕ ಮಹಾವಿದ್ಯಾಲಯದ ಕೃಷಿ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳು ಹಲವು ರ‍್ಯಾಂಕ್‌ಗಳನ್ನು ಪಡೆದು ಸಾಧನೆ ಮೆರೆದಿದ್ದಾರೆ. ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಕೃಷಿ ಇಂಜಿನಿಯರಿಂಗ್ ವಿಭಾಗದ ಪ್ರಥಮ ಬ್ಯಾಚ್‌ನ ವಿದ್ಯಾರ್ಥಿಗಳಾದ  ಸಂತೋಷ್‌ ಎಂ.  ದ್ವಿತೀಯ ರ‍್ಯಾಂಕ್, ತೇಜಸ್ ತೃತೀಯ ರ‍್ಯಾಂಕ್‌, ಮೋನಿಷಾ 8ನೇ ರ‍್ಯಾಂಕ್‌ ಹಾಗೂ ಅದೇ ವಿಭಾಗದ ಕಿರಣ್ ವಿ. 9 ನೇ ರ‍್ಯಾಂಕ್‌ಗಳಿಸಿ ಸಾಧನೆ ಮೆರೆದಿದ್ದಾರೆ.  ಸಾಧನೆ ಮೆರೆದ ವಿದ್ಯಾರ್ಥಿಗಳನ್ನು ಸಂಸ್ಥೆಯ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ, ಟ್ರಸ್ಟಿ ವಿವೇಕ್ ಆಳ್ವ ಹಾಗೂ ಪ್ರಾಚಾರ್ಯರು ಹಾಗೂ ಶಿಕ್ಷಕ ವೃಂದ ಶ್ಲಾಘಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಇಲ್ಲಿನ ಕೋಟದ ಮಣೂರು ಪಡುಕರೆ ಸರಕಾರಿ ಸಂಯುಕ್ತ ಪ್ರೌಢ ಶಾಲೆ ಪ್ರಾಥಮಿಕ ವಿಭಾಗ ಮತ್ತು ಗೀತಾನಂದ ಫೌಂಡೇಶನ್ ಮಣೂರು ಪಡುಕೆರೆ ಸಹಯೋಗದಲ್ಲಿ ಸಂಭ್ರಮದ ಸಾಗುವಳಿ ಎನ್ನುವ ಕಾರ್ಯಕ್ರಮ ಇತ್ತೀಚಿಗೆ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಗೀತಾನಂದ ಫೌಂಡೇಶನ್ ಪ್ರವರ್ತಕರಾದ ಆನಂದ ಸಿ. ಕುಂದರ್ ಅವರು ಮಕ್ಕಳನ್ನು ಉದ್ದೇಶಿಸಿ ಮಾತನಾಡಿ “ಕೃಷಿ ನಮ್ಮ ಸಂಸ್ಕೃತಿಯ ಒಂದು ಅವಿಭಾಜ್ಯ ಅಂಗ” ಅದರ ಮಧುರಾನುಭವ ಪ್ರತಿಯೊಬ್ಬನು ಅನುಭವಿಸಬೇಕು. ಹಾಗಾಗಿ ಇಂತಹ ಕಾರ್ಯಕ್ರಮಗಳು ಮಕ್ಕಳಿಗೆ ಬಹಳ ವಿಚಾರಗಳನ್ನು ತಿಳಿಸುತ್ತದೆ ಎಂದರು. ಕಾರ್ಯಕ್ರಮದಲ್ಲಿ ಗೀತಾನಂದ ಸಂಸ್ಥೆಯ ಮುಖ್ಯಸ್ಥರಾದ ದಿವ್ಯಲಕ್ಷ್ಮಿ ಪ್ರಶಾಂತ್ ಕುಂದರ್, ಶಾಲಾ ಮುಖ್ಯ ಶಿಕ್ಷಕರಾದ ಮಂಜುನಾಥ ಹೊಳ್ಳ, ಶಾಲಾ ಶಿಕ್ಷಕರು, ಜನತಾ ಸಂಸ್ಥೆಯ ಶ್ರೀನಿವಾಸ ಕುಂದರ್, ರವಿಕಿರಣ, ಪಾಂಡು ಪೂಜಾರಿ, ದೀಕ್ಷಿತಾ, ಅರುಣ್ ಕುಮಾರ್ ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಿಐಎಸ್‌ಸಿಇ ನಡೆಸುತ್ತಿರುವ ಗೇಮ್ಸ್ ಮತ್ತು ಸ್ಪೋರ್ಟ್ಸ್ 2025-26ರ ಸ್ಪರ್ಧೆಗಳ ಅಂಗವಾಗಿ ಹಟ್ಟಿಅಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ಕಬಡ್ಡಿ ಸ್ಪರ್ಧೆಗಳನ್ನು ಜರುಗಿತು. ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿಗಳು ಮತ್ತು ಶಾಲಾ ಪ್ರಾಂಶುಪಾಲರಾದ ಶರಣ ಕುಮಾರ ಅವರು ಸ್ಪರ್ಧೆಗಳನ್ನು ಉದ್ಘಾಟಿಸಿ ಮಾತನಾಡಿ, ಕ್ರೀಡೆಗಳಲ್ಲಿ ಕಬಡ್ಡಿ ಆಟ ಯೋಗಕ್ಕೆ ಸಂಬಂಧಿಸಿದ ಆಟ. ಇಲ್ಲಿ ಉಸಿರಾಟದ ಮೇಲೆ ಹಿಡಿತವಿರಬೇಕು. ತಂಡದ ಪ್ರತಿಯೊಬ್ಬರ ಪ್ರಾಮಾಣಿಕ ಪ್ರಯತ್ನಬೇಕು. ಏಕಾಗ್ರತೆಯನ್ನೂ ಬೆಳೆಸುವ ಆಟ. ಸ್ಪರ್ಧೆ ಎಂದರೆ ಸೋಲು ಗೆಲುವು ಇದ್ದೇ ಇರುವುದು. ಸ್ಪರ್ಧೆಗಳಲ್ಲಿ ಪ್ರಾಮಾಣಿಕವಾಗಿ ಆಡುವುದೇ ಮುಖ್ಯ. ಎಂದು ವಿದ್ಯಾರ್ಥಿಗಳನ್ನು ಹುರಿದುಂಬಿಸಿದರು. 14 ವರ್ಷದೊಳಗಿನ ವಯೋಮಿತಿಯ ಹುಡುಗರ ವಲಯ ಮಟ್ಟದ ಕಬಡ್ಡಿ ಸ್ಪರ್ಧೆಯಲ್ಲಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆ, ಹಟ್ಟಿಅಂಗಡಿ ಪ್ರಥಮ ಸ್ಥಾನವನ್ನು,  ಮಾರುತಿ ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್, ಸುಳ್ಯ ದ್ವಿತೀಯ ಸ್ಥಾನವನ್ನು, ಶಾರದಾ ವಸತಿ ಶಾಲೆ, ಕುಂಜಿಬೆಟ್ಟು, ಉಡುಪಿ ತೃತೀಯ ಸ್ಥಾನವನ್ನು ಪಡೆದುಕೊಂಡಿತು. 14 ವರ್ಷದೊಳಗಿನ ವಯೋಮಿತಿಯ ಹುಡುಗಿಯರ ವಲಯ ಮಟ್ಟದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಉಡುಪಿ ಜಿಲ್ಲಾ ವಾಣಿಜ್ಯಶಾಸ್ತ್ರ ಉಪನ್ಯಾಸಕರ ಸಂಘದ ವತಿಯಿಂದ ಉಡುಪಿಯ ಪೂರ್ಣಪ್ರಜ್ಞ ಪದವಿಪೂರ್ವ ಕಾಲೇಜಿನಲ್ಲಿ ವಾಣಿಜ್ಯಶಾಸ್ತ್ರ ಉಪನ್ಯಾಸಕರಿಗಾಗಿ ವಿಷಯಾಧಾರಿತ ಕಾರ್ಯಗಾರವು ನಡೆಯಿತು.  ಉಡುಪಿ ಜಿಲ್ಲಾ ಪದವಿಪೂರ್ವ ವಿಭಾಗದ ಡೆಪ್ಯುಟಿ ಡೈರೆಕ್ಟರ್ ಮಾರುತಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ವಿಶೇಷ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ರೊಟೇರಿಯನ್ ಸತೀಶ್ ಶೆಟ್ಟಿ ಹದಿಹರೆಯದ ಸವಾಲುಗಳು ಮತ್ತು ಎದುರಿಸಬೇಕಾದ ವಿಧಾನಗಳ ಬಗ್ಗೆ ವಿಚಾರಗಳನ್ನು ಹಂಚಿಕೊಂಡರು. ಉಡುಪಿಯ ಪೂರ್ಣಪ್ರಜ್ಞ ಕಾಲೇಜಿನ ಪ್ರಾಂಶುಪಾಲರಾದ ಸಂತೋಷ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಆಡಳಿತ ಮಂಡಳಿಯ ಕಾರ್ಯದರ್ಶಿ ಪಿ. ಎಸ್. ಐತಾಳ್ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಉಪನ್ಯಾಸಕರ ಸಂಘದಿಂದ ವಿದ್ಯಾರ್ಥಿಗಳ ಉಪಯೋಗಕ್ಕಾಗಿ ಹೊರತರಲಾದ ದ್ವಿತೀಯ ಪಿಯುಸಿ ಲೆಕ್ಕಶಾಸ್ತ್ರ ಮತ್ತು ವ್ಯವಹಾರ ಅಧ್ಯಯನದ ಮೂರು ಮಾರ್ಗದರ್ಶಿ ಪುಸ್ತಕಗಳನ್ನು ಬಿಡುಗಡೆಗೊಳಿಸಲಾಯಿತು. ಈ ಪುಸ್ತಕಗಳನ್ನು ಹೊರ ತರುವಲ್ಲಿ ಅಪಾರ ಶ್ರಮವಹಿಸಿದ ಹಿರಿಯ ಉಪನ್ಯಾಸಕಿ ಹೇಮಲತಾ ಇವರನ್ನು ಅಭಿನಂದಿಸಿ ಸನ್ಮಾನಿಸಲಾಯಿತು. ಇದೇ ಸಂದರ್ಭದಲ್ಲಿ ಕಳೆದ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಉಪನ್ಯಾಸಕರಾದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಹೆಮ್ಮಾಡಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಹೆಮ್ಮಾಡಿ ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಗಣೇಶ ಮೊಗವೀರ ಅವರು ಶಾಲೆಗೆ ಬಸ್ ವ್ಯವಸ್ಥೆಯನ್ನು ಮಾಡುವುದರ ಮೂಲಕ ಸಾರ್ಥಕತೆ ಮೆರೆದಿದ್ದಾರೆ. ಅವರು ಈ ಶಾಲೆಯ ಹಳೆವಿದ್ಯಾರ್ಥಿಯಾಗಿದ್ದಾರೆ. ಈ ಸಂದರ್ಭದಲ್ಲಿ ಶಾಲಾ ಎಸ್.ಡಿ.ಎಮ್.ಸಿ.ಅಧ್ಯಕ್ಷರು,ಪದಾಧಿಕಾರಿಗಳು, ಸರ್ವಸದಸ್ಯರು,ಶಾಲಾ ಮುಖ್ಯ ಶಿಕ್ಷಕಿ ಹಾಗೂ ಬೋಧಕ/ಬೋಧಕೇತರ ವೃಂದದವರು, ವಿದ್ಯಾರ್ಥಿಗಳು ಹಾಗೂ ವಿದ್ಯಾರ್ಥಿ ಪೋಷಕರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಯಕ್ಷಗಾನ, ನಾಟಕವಲ್ಲದೆ ಹಲವಾರು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತನ್ನನ್ನು ತೊಡಗಿಸಿಕೊಂಡಿರುವ ಬೆಂಗಳೂರಿನ ಕಲಾಕದಂಬ ಆರ್ಟ್ ಸೆಂಟರ್ ಸಂಸ್ಥೆಯು ಯಕ್ಷಗಾನದ ಕಂಚಿನ ಕಂಠದ ಭಾಗವತರೆಂದೇ ಪ್ರಸಿದ್ಧರಾದ ಕರಾವಳಿಯ ಗಾನಕೋಗಿಲೆ ಖ್ಯಾತಿಯ ಭಾಗವತ ಕಾಳಿಂಗ ನಾವಡರ ನೆನಪಿನಲ್ಲಿ ಪ್ರತಿ ವರ್ಷ ಯಕ್ಷಗಾನ ಕ್ಷೇತ್ರದಲ್ಲಿನ ಪ್ರತಿಭಾನ್ವಿತರೋರ್ವರಿಗೆ ಕಾಳಿಂಗ ನಾವಡ ಪ್ರಶಸ್ತಿಯನ್ನು ನೀಡುತಿದ್ದಾರೆ. ಈ ಹಿನ್ನಲ್ಲೆಯಲ್ಲಿ 16ನೇ ವರ್ಷದ 2025ರ ಸಾಲಿನ ಕಾಳಿಂಗ ನಾವಡ ಪ್ರಶಸ್ತಿಯನ್ನು ಸತತ 42 ವರ್ಷಗಳಿಂದ ಯಕ್ಷಗಾನದ ಭಾಗವತರಾಗಿ ತಮ್ಮ ಸೇವೆ ಸಲ್ಲಿಸುತ್ತಿರುವ ಹಾಲಾಡಿ ರಾಘವೇಂದ್ರ ಮಯ್ಯರಿಗೆ ಇದೇ ಬರುವ ಅಕ್ಟೋಬರ್ ತಿಂಗಳ 12 ರಂದು ಸಂಜೆ ಬೆಂಗಳೂರಿನ ಬನಶಂಕರಿ 3ನೇ ವಿಭಾಗದಲ್ಲಿನ ಚೆನ್ನಮ್ಮನ ಕೆರೆ ಅಚ್ಚುಕಟ್ಟುಲ್ಲಿರುವ ಪರಂಪರ ಆಡಿಟೋರಿಯಮ್‍ನಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪ್ರದಾನ ಮಾಡಲಾಗುತ್ತದೆ. ಅಲ್ಲದೆ ಇಪ್ಪತ್ತೈದು ಸಾವಿರ ನಗದು, ಬೆಳ್ಳಿ ಫಲಕ, ಪ್ರಶಸ್ತಿ ಪತ್ರ, ನೆನಪಿನ ಕಾಣಿಕೆಯನ್ನು ಪ್ರಶಸ್ತಿ ನೀಡಲಾಗುತ್ತದೆ ಎಂದು ಸಂಘಟಕರು ತಿಳಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಕಾಳಾವರ ಗ್ರಾಮದ ನಿವಾಸಿ ಸ್ವಾತಿ (30) ಅವರು ಇಲಿ ಪಾಷಣ ಸೇವಿಸಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. 9 ವರ್ಷದ ಹಿಂದೆ ಬಸ್ರೂರಿನ ಸತೀಶ್ ಅವರೊಂದಿಗೆ ಮದುವೆಯಾಗಿದ್ದು, ದಂಪತಿಗೆ 8 ವರ್ಷದ ಮಗನಿದ್ದಾನೆ. ಜೂ.27ರಂದು ಬೆಳಗ್ಗೆ ಮನೆಯಲ್ಲಿರುವಾಗ ವಿಷ ಪದಾರ್ಥ ಸೇವಿಸಿ ಅವರು ಅಸ್ವಸ್ಥಗೊಂಡಿದ್ದು, ಚಿಕಿತ್ಸೆಗಾಗಿ ಕೋಟೇಶ್ವರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ಮೃತರ ತಾಯಿ ನಾಗರತ್ನ ನೀಡಿದ ದೂರಿನಂತೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಗಂಗೊಳ್ಳಿ ರೋಟರಿ ಕ್ಲಬ್ ವತಿಯಿಂದ ವೈದ್ಯರ ದಿನಾಚರಣೆ ಕಾರ್ಯಕ್ರಮ ಗಂಗೊಳ್ಳಿಯ ಎಸ್.ವಿ. ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಮಂಗಳವಾರ ನಡೆಯಿತು. ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷ ಕೃಷ್ಣ ಪೂಜಾರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಇದೇ ಸಂದರ್ಭ ನಾಡ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಚಿಕ್ಮರಿ ಅವರನ್ನು ಸನ್ಮಾನಿಸಲಾಯಿತು. ಡಿಸ್ಟ್ರಿಕ್ಟ್ ಲೀಡರ್ ಕೆ. ರಾಮನಾಥ್ ನಾಯಕ್, ಜೋನಲ್ ಲೀಡರ್ ಪ್ರದೀಪ್ ಡಿ. ಕೆ., ಉಮೇಶ್ ಮೇಸ್ತ, ನಿಕಟಪೂರ್ವ ಅಧ್ಯಕ್ಷೆ ಚಂದ್ರಕಲಾ ತಾಂಡೇಲ್, ಸದಸ್ಯರಾದ ಉದಯಶಂಕರ್ ರಾವ್, ವಾಸುದೇವ್ ಶೇರುಗಾರ್, ದಯಾನಂದ ಗಾಣಿಗ, ಗೋಪಾಲ್ ಬಿಲ್ಲವ, ಟಿ.ದಿನಕರ ಶೆಣೈ, ನಾರಾಯಣ ನಾಯ್ಕ್, ಗಿರೀಶ್ ಖಾರ್ವಿ, ಎಂ. ನಾಗೇಂದ್ರ ಪೈ, ಜಗದೀಶ್ ಪೂಜಾರಿ, ರತ್ನ ದೇವಾಡಿಗ, ಸುಮಾ ಪೂಜಾರಿ ಉಪಸ್ಥಿತರಿದ್ದರು. ಕಾರ್ಯಕ್ರಮದ ಕೃಷ್ಣ ಪೂಜಾರಿ ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕಾರ್ಯದರ್ಶಿ ರಾಮನಾಥ ಚಿತ್ತಾಲ್ ವಂದಿಸಿದರು.

Read More