ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ವಿದ್ಯಾರ್ಥಿವೇತನ, ಪ್ರತಿಭಾ ಪುರಸ್ಕಾರ ವಿದ್ಯಾರ್ಥಿಯ ಮುಂದಿನ ಶಿಕ್ಷಣ ಸಾಧನೆಗೆ ಉತ್ತೇಜನ ನೀಡುತ್ತದೆ. ವಿದ್ಯಾರ್ಥಿವೇತನ ಪಡೆದುಕೊಳ್ಳುವಾಗ ಆಗುವ ಖುಷಿಯೇ ವಿಶಿಷ್ಟವಾದುದು. ಮುಂದೆ ಈ ವಿದ್ಯಾರ್ಥಿಗಳು ಸಾಧನೆಯ ಪಥಕ್ಕೇರಿದ ಬಳಿಕ ಪ್ರೋತ್ಸಾಹಿಸಿದ ಸಂಸ್ಥೆಗಳನ್ನು ಮರೆಯಬಾರದು, ಸಮಾಜಕ್ಕೆ ಸ್ಪಂದಿಸುವ ಸಮಾಜಮುಖಿತ್ವ ಮೈಗೂಡಿಸಿಕೊಳ್ಳಬೇಕು ಎಂದು ಕುಂದಾಪುರ ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ ಹೇಳಿದರು. ಅವರು ಗಾಣಿಗ ಪ್ರತಿಷ್ಠಾನ ರಿ., ಬೈಂದೂರು ವತಿಯಿಂದ ಬೈಂದೂರು ವತ್ತಿನಕಟ್ಟೆಯ ಮಹಾಸತಿ ಅಮ್ಮನವರ ದೇವಸ್ಥಾನದ ವಠಾರದಲ್ಲಿ ನಡೆದ ಎಸ್.ಎಸ್.ಎಲ್.ಸಿ., ಪಿಯುಸಿ ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಉಚಿತ ನೋಟ್ ಪುಸ್ತಕ, ಕಲಿಕೋಪಕರಣ, ಕೊಡೆ ವಿತರಣೆ, ಸಮಾಜದ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಗಾಣಿಗ ಪ್ರತಿಷ್ಠಾನ ರಿ., ಬೈಂದೂರು ಇದರ ಅಧ್ಯಕ್ಷರಾದ ಕೆ. ರಮೇಶ ಗಾಣಿಗ ಕೊಲ್ಲೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಶಿಕ್ಷಣದಲ್ಲಿ ಯಾರೂ ಕೂಡಾ ವಂಚಿತರಾಗಬಾರದು. ಮಕ್ಕಳಿಗೆ ಉನ್ನತ ಶಿಕ್ಷಣ ನೀಡಿ, ಸಮಾಜದ ಸತ್ಪ್ರಜೆಗಳಾಗಿ ರೂಪಿಸಿ. ಮಕ್ಕಳಿಗೆ ಸಮಾಜಮುಖಿ ಚಿಂತನೆ,…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಒಂದೇ ತರಗತಿಯ ಇಬ್ಬರು ಹೆಣ್ಣುಮಕ್ಕಳು ಜಪಾನ್ನ ಅಂತರಾಷ್ಟ್ರೀಯ ವೇದಿಕೆಗೆ ಆಯ್ಕೆಯಾಗಿರುವುದು ಲಿಂಗ ಸಮಾನತೆಯನ್ನು ಸಾಕಾರಗೊಳಿಸುವಲ್ಲಿ ದೇಶದ ನಾರಿ ಶಕ್ತಿಗೆ ದೊರಕಿರುವ ಅತ್ಯದ್ಭುತ ಪ್ರೇರಣೆಯಾಗಿದ್ದು, ಸರಕಾರಿ ಶಾಲೆಗಳ ಗುಣಮಟ್ಟದ ಶಿಕ್ಷಣದ ಸಾಧನೆಗೆ ಹಿಡಿದ ಕೈಗನ್ನಡಿಯಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಅಂದು ನಗರದ ಮಣಿಪಾಲದ ರಜತಾದ್ರಿಯ ತಮ್ಮ ಕಚೇರಿಯಲ್ಲಿ, ಕೇಂದ್ರ ಸರ್ಕಾರದ ವಿಜ್ಞಾನ ತಂತ್ರಜ್ಞಾನ ಸಚಿವಾಲಯವು ನಡೆಸುವ ಇನ್ಸ್ಪೈರ್ ಅವಾರ್ಡ್ ಸ್ಪರ್ಧೆಯ ರಾಷ್ಟ್ರಮಟ್ಟದ ವಿಭಾಗದಲ್ಲಿ ವಿಜೇತರಾಗಿ, ಜೂನ್ 15 ರಿಂದ 21 ರ ವರೆಗೆ ಜಪಾನ್ನಲ್ಲಿ ನಡೆಯುವ ಅಂತರಾಷ್ಟ್ರೀಯ ವಿಜ್ಞಾನ ಸಮ್ಮೇಳನಕ್ಕೆ ಆಯ್ಕೆಯಾದ ಜಿಲ್ಲೆಯ ಕಾರ್ಕಳ ತಾಲೂಕಿನ ಸರಕಾರಿ ಪದವಿ ಪೂರ್ವ ಕಾಲೇಜು ಕುಕ್ಕುಜೆಯ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿನಿಯರಾದ ಅಮೂಲ್ಯ ಹಾಗೂ ನಿಕಿತಾ ಅವರುಗಳಿಗೆ ಅಭಿನಂದನೆ ಸಲ್ಲಿಸಿ, ಮಾತನಾಡಿದರು. ಶಾಲೆಯ ರಾಷ್ಟ್ರಪ್ರಶಸ್ತಿ ಪುರಸ್ಕೃತ ಸಮಾಜ ಶಿಕ್ಷಕ ಸುರೇಶ್ ಮರಕಾಲ ಮಾರ್ಗದರ್ಶನದಲ್ಲಿ ಪ್ರಸ್ತುತಪಡಿಸಿದ ಫ್ಲಡ್ ಡಿಟೆಕ್ಟರ್ ಪೋಲ್ ಹಾಗೂ ರೋಪೋ ಮೀಟರ್ ಎಂಬ ಅನ್ವೇಷಣೆಗಳು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೆಂಗಳೂರು: ಪತ್ರಿಕೋದ್ಯಮಕ್ಕೆ ಹಾಗೂ ಮಾಧ್ಯಮ ಜಗತ್ತಿಗೆ ಸಂಬಂಧಿಸಿದ 40 ಕ್ಕೂ ಹೆಚ್ಚು ಪುಸ್ತಕಗಳು ಕರ್ನಾಟಕ ಮಾಧ್ಯಮ ಅಕಾಡೆಮಿಯಲ್ಲಿ ರಿಯಾಯಿತಿ ದರದಲ್ಲಿ ಮಾರಾಟಕ್ಕೆ ಲಭ್ಯವಿದ್ದು, ಆಸಕ್ತರು, ವಿಶೇಷವಾಗಿ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳುವಂತೆ ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷೆ ಆಯೇಶಾ ಖಾನಂ ಅವರು ತಿಳಿಸಿದ್ದಾರೆ. ಕರ್ನಾಟಕ ಮಾಧ್ಯಮ ಅಕಾಡೆಮಿಯು ಕೆಲವು ದಶಕಗಳಿಂದ ಹಲವಾರು ಪುಸ್ತಕಗಳನ್ನು ಪ್ರಕಟಿಸಿದ್ದು, ಮಾರಾಟಕ್ಕೆ ಲಭ್ಯವಿವೆ. ಹಿರಿಯ ಪತ್ರಕರ್ತರು, ಪರಿಣತರು ಬರೆದಿರುವ ಈ ಪುಸ್ತಕಗಳು ಯುವ ಪತ್ರಕರ್ತರು ಹಾಗೂ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಅತ್ಯಂತ ಉಪಯುಕ್ತವಾಗಿವೆ. ಈ ಪುಸ್ತಕಗಳ ಮೇಲೆ ಶೇ. 20 ರ ವರೆಗೆ ರಿಯಾಯಿತಿಯೂ ನೀಡಲಾಗುತ್ತಿದೆ. ಆಸಕ್ತರು ಪುಸ್ತಕಗಳ ಕುರಿತ ಮಾಹಿತಿಯನ್ನು X, instagram ಮತ್ತು ಫೇಸ್ಬುಕ್ ಗಳಲ್ಲಿನ ಅಕಾಡೆಮಿಯ ಖಾತೆ @karmediaacademy/ Karnataka Media Academy ಗಳಲ್ಲಿ ಪಡೆಯಬಹುದಾಗಿದೆ. ಆಸಕ್ತರು, ಪತ್ರಿಕೋದ್ಯಮ ಬೋಧಿಸುವ ಕಾಲೇಜು ಹಾಗೂ ವಿಶ್ವವಿದ್ಯಾಲಯಗಳ ಗ್ರಂಥಾಲಯಗಳಿಗೆ ಸಗಟು ಖರೀದಿ ಮಾಡಲು ಬಯಸುವವರು ಅಕಾಡೆಮಿಯ ಕಚೇರಿಯನ್ನು ದೂರವಾಣಿ ಸಂಖ್ಯೆ 080…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ನಿಗಮದ ವಿವಿಧ ಯೋಜನೆಗಳಾದ ಡಿ.ದೇವರಾಜ ಅರಸು ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಾಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ) ಹಾಗೂ ಹೊಲಿಗೆ ಯಂತ್ರ ವಿತರಣೆ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಇಚ್ಛಿಸ ಬಯಸುವ ಹಿಂದುಳಿದ ವರ್ಗಗಳ ಅರ್ಹ ಫಲಾನುಭವಿಗಳಿಂದ ಸೇವಾಸಿಂಧು ಪೋರ್ಟಲ್ http://sevasindhu.karnataka.gov.in ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಹಾಗೂ ಸ್ವಾತಂತ್ರ್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆಯ ಸೌಲಭ್ಯ ಪಡೆಯಲು ವೆಬ್ಸೈಟ್ https://www.kaushalkar.com/ ನಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್ 30 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್ಸೈಟ್ www.dbcdc.karnataka.gov.in…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ನೀರಾವರಿ ನೀತಿಗಳನ್ನು ರೂಪಿಸಲು ಕೇಂದ್ರ ಜಲ ಸಂಪನ್ಮೂಲ ಸಚಿವಾಲಯದ ವತಿಯಿಂದ 7 ನೇ ಸಣ್ಣ ನೀರಾವರಿ ಗಣತಿ ನೀರಿನ ಮೂಲಗಳ ಸಮೀಕ್ಷೆಯನ್ನು ಮೇ ಯಿಂದ ಅಕ್ಟೋಬರ್ ಅಂತ್ಯದ ವರೆಗೆ ನಡೆಯಲಿದ್ದು, ಸಾರ್ವಜನಿಕರು ಈ ಗಣತಿಗೆ ಸಹಕರಿಸುವುದರೊಂದಿಗೆ ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ತಿಳಿಸಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿ ಏಳನೇ ಸಣ್ಣ ನೀರಾವರಿ ಗಣತಿ ಮತ್ತು ನೀರಿನಾಸರೆಗಳ ಗಣತಿ ಕಾರ್ಯಗಳ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯ ಎಲ್ಲಾ ವಿಧದ ಸಣ್ಣ ನೀರಾವರಿ ಯೋಜನೆಗಳ, ನೀರಿನ ಆಸರೆಗಳ ಸಮಗ್ರ ಹಾಗೂ ನಂಬಲಾರ್ಹ ಮೂಲಕಗಳ ಅಂಕಿ-ಅಂಶಗಳ ಸಂಗ್ರಹಣೆ, ಭವಿಷ್ಯದಲ್ಲಿ ಅವುಗಳ ಸದ್ಬಳಕೆ, ನಿರ್ವಹಣೆ ಹಾಗೂ ಆದಾಯ ಸಂಗ್ರಹಣೆ, ಹೊಸ ಯೋಜನೆಗಳಿಗೆ ರೂಪ ಕೊಡುವುದು ಸೇರಿದಂತೆ ಪರಿಣಾಮಕಾರಿ ಯೋಜನೆಗಳು ಮತ್ತು ನೀತಿಗಳ ನಿರೂಪಣೆ ಕೈಗೊಳ್ಳಲು ಸಣ್ಣ ನೀರಾವರಿ ಗಣತಿ ಮತ್ತು ನೀರಿನಾಸರೆಗಳ ಗಣತಿಗಳು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ನಶಿಸಿ ಹೋಗುತ್ತಿರುವ ಸಾಂಪ್ರದಾಯಿಕ ಕುಲ ಕಸುಬುಗಳಿಗೆ ಕೇಂದ್ರ ಸರಕಾರ ಮರುಜೀವದ ಕಾಯಕಲ್ಪ ನೀಡುವ ಮಹತ್ವಾಕಾಂಕ್ಷೆಯ ಯೋಜನೆಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿದೆ ಎಂದು ಉಡುಪಿ ಮತ್ತು ಚಿಕ್ಕಮಗಳೂರು ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಜಿಲ್ಲಾಡಳಿತ ಉಡುಪಿ ಜಿಲ್ಲೆ, ಜಿಲ್ಲಾ ನಗರಾಭಿವೃದ್ಧಿ ಕೋಶ ಉಡುಪಿ ಜಿಲ್ಲೆ, ಸಾಲಿಗ್ರಾಮ ಪಟ್ಟಣ ಪಂಚಾಯತ್ನಲ್ಲಿ ಫಲಾನುಭವಿಗಳಿಗೆ ಕೇಂದ್ರ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಪಿ. ಎಂ. ವಿಶ್ವಕರ್ಮ ಯೋಜನೆಯ ಸೌಲಭ್ಯ ಕಿಟ್ ವಿತರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕೇಂದ್ರ ಸರಕಾರ ಈ ಯೋಜನೆಗಾಗಿ 12ಸಾವಿರ ಕೋಟಿ ರೂ.ಗಳನ್ನು ಕಾಯ್ದಿರಿಸಿ ಜನಸಾಮಾನ್ಯರ ಕಣ್ತೆರೆಸುವ ಕಾರ್ಯವನ್ನು ಮಾಡಿದೆ. ಇದು ಗ್ರಾಮಮಟ್ಟದ ಶಕ್ತಿಯೋಜನೆಯಾಗಿ ಹೊರಹೊಮ್ಮಿದೆ. ಕೇಂದ್ರ ಸರಕಾರದ ಪ್ರತಿಯೊಂದು ಯೋಜನೆಗಳನ್ನು ಪಕ್ಷಭೇದ ಮರೆತು ತಲುಪಿಸಬೇಕಾಗಿದೆ. ಈ ನಿಟ್ಟಿನಲ್ಲಿ ಸಾಲಿಗ್ರಾಮ ಪಟ್ಟಣಪಂಚಾಯತ್ ಕಾರ್ಯ ಶ್ಲಾಘನೀಯವಾದದ್ದು ಎಂದರು. ಕುಂದಾಪುರ ವಿಧಾನಸಭಾ ಶಾಸಕ ಕಿರಣ್ ಕುಮಾರ್ ಕೊಡ್ಗಿ ಪಿ.ಎಂ ಯೋಜನೆಯ ಕಿಟ್ ವಿತರಿಸಿ ವಿಕಸಿತ ಭಾರತಕ್ಕೆ ಪಿ.ಎಂ ಯೋಜನೆ ಸಹಕಾರಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಜೂ.11: ಜಿಲ್ಲೆಯಲ್ಲಿ ನಾಲ್ಕೈದು ದಿನ ರೆಡ್ ಅಲರ್ಟ್ ಇರುವುದರಿಂದ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಜೂನ್.12ರಂದು ಜಿಲ್ಲಾಧಿಕಾರಿಗಳು ರಜೆ ಘೋಷಿಸಿದ್ದಾರೆ. ಉಳಿದಂತೆ ಪಿಯುಸಿ, ಡಿಪ್ಲೋಮಾ, ಇಂಜಿನಿಯರಿಂಗ್ ಹಾಗೂ ಪದವಿ ಕಾಲೇಜುಗಳಿಗೆ ಎಂದಿನಂತೆ ತರಗತಿಗಳು ಇರಲಿದ್ದು, ಹಾಜರಾತಿ ಕಡ್ಡಾಯವಿರುವುದಿಲ್ಲ. ಬುಧವಾರ ಮಧ್ಯಾಹ್ನದಿಂದ ಕರಾವಳಿ ಭಾಗದಲ್ಲಿ ನಿರಂತರ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆ ಶುಕ್ರವಾರ ಶನಿವಾರ, ಭಾನುವಾರ ಸೋಮವಾರ, ಮಂಗಳವಾರ ರೆಡ್ ಅಲರ್ಟ್ ಹಾಗೂ ಗುರುವಾರ, ಶನಿವಾರ ರೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ರಕ್ತದಾನ ಮಾಡುವುದು ಪುಣ್ಯದ ಕೆಲಸ. ನಾವು ನೀಡುವ ಒಂದು ಯೂನಿಟ್ ರಕ್ತ ಮೂರು ಜೀವಗಳನ್ನು ಉಳಿಸಬಲ್ಲದು. ರಕ್ತ ದೇವರು ನಮಗೆ ನೀಡಿದ ಬೆಲೆ ಕಟ್ಟಲಾಗದ ಸಂಪತ್ತು. ರಕ್ತದ ಬೆಲೆ ಎಷ್ಟು ಎಂಬುದನ್ನು ರಕ್ತದ ಅವಶ್ಯಕತೆ ಇರುವ ಜನರಿಗೆ ತಿಳಿದಿದೆ. ಹೀಗಾಗಿ ಯುವಕರು ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಬೇಕು. ಜನರಲ್ಲಿ ರಕ್ತದಾನದ ಬಗ್ಗೆ ಇರುವ ಸಂಶಯಗಳನ್ನು ದೂರ ಮಾಡಬೇಕು ಎಂದು ಗಂಗೊಳ್ಳಿ ಟೌನ್ ಸೌಹಾರ್ದ ಸಹಕಾರಿ ನಿಯಮಿತ ಇದರ ಅಧ್ಯಕ್ಷ ಜಿ. ವೆಂಕಟೇಶ ಶೆಣೈ ಹೇಳಿದರು. ಅವರು ಯಕ್ಷಾಭಿಮಾನಿ ರಕ್ತದಾನಿಗಳ ಬಳಗ, ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ಉಡುಪಿ, ಗಂಗೊಳ್ಳಿ ಟೌನ್ ಸೌಹಾರ್ದ ಸಹಕಾರಿ ನಿಯಮಿತ ಗಂಗೊಳ್ಳಿ ಇವರ ಜಂಟಿ ಆಶ್ರಯದಲ್ಲಿ ರಕ್ತನಿಧಿ ಕೇಂದ್ರ ಕೆಎಂಸಿ ಮಣಿಪಾಲ ಇವರ ಸಹಭಾಗಿತ್ವದೊಂದಿಗೆ 16ನೇ ವರ್ಷದ ಧರ್ಮಸ್ಥಳ ಪಾದಯಾತ್ರೆಯ ಪ್ರಯುಕ್ತ ಗಂಗೊಳ್ಳಿಯ ಶ್ರೀ ವೀರ ವಿಠಲ ಸಭಾಗೃಹದಲ್ಲಿ ಮಂಗಳವಾರ ಜರಗಿದ ಬೃಹತ್ ಸ್ವಯಂಪ್ರೇರಿತ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ಉಡುಪಿಯ ಅಭಯಹಸ್ತ ಚಾರಿಟೇಬಲ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ನಗರದ ಗಾಂಧಿ ಮೈದಾನದಲ್ಲಿ ಡಾ. ಬಿ. ಬಿ . ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಆಶ್ರಯದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ದೈಹಿಕ ಶಿಕ್ಷಣ ವಿಭಾಗದ ಸಹಯೋಗದೊಂದಿಗೆ ವಿ. ವಿ ವ್ಯಾಪ್ತಿಯ ಸಿಬ್ಬಂದಿ ಪಂದ್ಯಕೂಟದ ಭಾಗವಾಗಿ ಪುರುಷ ಸಿಬ್ಬಂದಿಗಳ ಕ್ರಿಕೆಟ್ ಮತ್ತು ವಾಲಿಬಾಲ್ ಪಂದ್ಯಾಟ ನಡೆಯಿತು. ಪಂದ್ಯಾಕೂಟದಲ್ಲಿ ಕ್ರಿಕೆಟ್ ಮತ್ತು ವಾಲಿಬಾಲ್ನಲ್ಲಿ ಕ್ರಮವಾಗಿ ವಿ.ವಿ. ಕ್ಯಾಂಪಸ್ ಪ್ರಥಮ, ಆತಿಥೇಯ ಬಿ.ಬಿ. ಹೆಗ್ಡೆ ಕಾಲೇಜು ರನ್ನರ್ ಅಪ್ ಪ್ರಶಸ್ತಿ ಪಡೆದುಕೊಂಡಿತು. ವಿ.ವಿ ಕ್ಯಾಂಪಸ್ನ ಶರತ್ ಕ್ರಿಕೆಟ್ನಲ್ಲಿ ಸರಣಿ ಶ್ರೇಷ್ಠ, ವಾಲಿಬಾಲ್ ನಲ್ಲಿ ಸಂದೀಪ್ ಬೆಸ್ಟ್ ಆಲ್ ರೌಂಡರ್ ಹಾಗೂ ಬಿ. ಬಿ. ಹೆಗ್ಡೆ ಕಾಲೇಜಿನ ಸತೀಶ್ ಶೆಟ್ಟಿ ಕ್ರಿಕೆಟ್ ನಲ್ಲಿ ಪಂದ್ಯ ಶ್ರೇಷ್ಠ, ಪ್ರತ್ಯಕ್ಷ ಬೆಸ್ಟ್ ಬೌಲರ್, ವಾಲಿಬಾಲ್ನಲ್ಲಿ ಶರತ್ ಕೊಠಾರಿ ಬೆಸ್ಟ್ ಅಟೇಕರ್ ವೈಯಕ್ತಿಕ ಪ್ರಶಸ್ತಿ ಪಡೆದುಕೊಂಡರು. ಸಂಸ್ಥೆಯ ಪ್ರಾಂಶುಪಾಲರಾದ ಕೆ. ಉಮೇಶ್ ಶೆಟ್ಟಿ, ದೈಹಿಕ ಶಿಕ್ಷಣ ನಿರ್ದೇಶಕ ರಂಜಿತ್ ಟಿ.ಎನ್ ಪಂದ್ಯಾಕೂಟ ಸಂಯೋಜಿಸಿದರು. ಸಮಾರೋಪ ಸಮಾರಂಭದಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ತೋಟಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಉಡುಪಿ ತಾಲೂಕಿನಲ್ಲಿ ಅನುಷ್ಠಾನಗೊಳ್ಳಲಿರುವ ವಿವಿಧ ಯೋಜನೆಗಳಡಿ ಸಹಾಯಧನ ಸೌಲಭ್ಯ ಲಭ್ಯವಿದ್ದು, ಆಸಕ್ತ ರೈತರುಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪ್ರಸಕ್ತ ಸಾಲಿನ ವಿವಿಧ ಯೋಜನೆಗಳಡಿ ರೈತರಿಗೆ ಕಾಳುಮೆಣಸು, ಗೇರು, ಜಾಯಿಕಾಯಿ, ಅನಾನಸ್ಸು, ಅಂಗಾಂಶಬಾಳೆ ಹಾಗೂ ಕಂದು ಬಾಳೆ, ಅಪ್ರಧಾನ ಹಣ್ಣುಗಳಾದ ರಾಂಬೂಟಾನ್, ಮ್ಯಾಂಗೋಸ್ಟೀನ್ ಮತ್ತು ಡ್ರಾಯಗನ್ ಫ್ರೂಟ್ ಹೊಸ ತೋಟಗಳ ಸ್ಥಾಪನೆಗೆ ಶೇ. 40 ರ ಸಹಾಯಧನ, ಸಣ್ಣ ಸಸ್ಯಾಗಾರಗಳ/ ನರ್ಸರಿಗಳಳ ಸ್ಥಾಪನೆಗೆ ಶೇ.50 ರ ದರದಲ್ಲಿ (ಗರಿಷ್ಠ ರೂ. 10 ಲಕ್ಷಗಳು) ಸಹಾಯಧನ, ಸಸ್ಯಾಗಾರಗಳ ಉನ್ನತೀಕರಣಕ್ಕಾಗಿ ಶೇ. 50 ರ ಸಹಾಯಧನದಲ್ಲಿ ಪ್ರತಿ ಹೆಕ್ಟೇರ್ಗೆ 2 ಲಕ್ಷ ರೂ. ಗಳಂತೆ 2.00 ಹೆಕ್ಟೇರ್ಗೆ 4 ಲಕ್ಷ ರೂ.ಗಳ ಸಹಾಯಧನ, ಅಂಗಾಂಶ ಕೃಷಿ ಘಟಕ ಸ್ಥಾಪನೆಗೆ ಶೇ. 40 ರಂತೆ ಸಹಾಯಧನ, ನೀರು ಸಂಗ್ರಹಣಾ ಘಟಕ (20*20*3 ಮೀ.ಅಳತೆ) ನಿರ್ಮಾಣಕ್ಕೆ ಗರಿಷ್ಟ 0.75 ಲಕ್ಷ ರೂ. ಸಹಾಯಧನ, ವಿವಿಧ ತೋಟಗಾರಿಕೆ ಬೆಳೆಗಳಿಗೆ…
